BJP ಬಾಬೂರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ

[01/08, 8:18 AM] Karunakar. Khasale. Bjp. Media: 1-8-2022
ಪ್ರಕಟಣೆಯ ಕೃಪೆಗಾಗಿ
“ಉದಯವಾಣಿ” ದಿನಪತ್ರಿಕೆಯ ಸಂಸ್ಥಾಪಕ ಮೋಹನದಾಸ್ ಪೈ 
ನಿಧನಕ್ಕೆ ನಳಿನ್‍ಕುಮಾರ್ ಕಟೀಲ್ ಸಂತಾಪ
ಬೆಂಗಳೂರು: “ಉದಯವಾಣಿ” ದಿನಪತ್ರಿಕೆಯ ಸ್ಥಾಪಕರು ಹಾಗೂ ಹಿರಿಯ ಉದ್ಯಮಿ ಟಿ. ಮೋಹನದಾಸ್ ಪೈ ಅವರ ನಿಧನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ತೀವ್ರ ಬೇಸರ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.
ಮೋಹನದಾಸ ಪೈ ಅವರು ನಿಧನ ಹೊಂದಿದ್ದಾರೆ ಎನ್ನುವ ವಿಷಯ ನನಗೆ ಅತ್ಯಂತ ನೋವು ತಂದಿದೆ. ಮಣಿಪಾಲದ ಅನೇಕ ಸಂಸ್ಥೆಗಳನ್ನು ಕಟ್ಟಿ ಬೆಳೆಸಿದ ಹಿರಿಯ ಚೇತನರಾದ ಟಿ.ಮೋಹನದಾಸ್ ಪೈ ಅವರು, ಸದಾ ಕ್ರಿಯಾಶೀಲ ವ್ಯಕ್ತಿತ್ವ ಹೊಂದಿದ್ದರು. ಅವರ ಕುಟುಂಬದವರು, ಬಂಧುಮಿತ್ರರು ಮತ್ತು ಅಭಿಮಾನಿಗಳಿಗೆ ಪೈ ಅವರ ಅಗಲಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಆ ಪರಮಾತ್ಮನು ನೀಡಲಿ ಎಂದು ಕೋರಿದ್ದಾರೆ.


                                          
 ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[01/08, 12:06 PM] Karunakar. Khasale. Bjp. Media: 1-08-2022

ಪ್ರಕಟಣೆಯ ಕೃಪೆಗಾಗಿ
ಬಾಬೂರಾವ್ ಚಿಂಚನಸೂರ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಬಾಬೂರಾವ್ ಚಿಂಚನಸೂರ್ ಅವರು ಇಂದು “ವಿಧಾನಸೌಧದ 1ನೇ ಮಹಡಿಯ ಕೊಠಡಿ ಸಂಖ್ಯೆ 121”ರಲ್ಲಿ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ್, ಸಂಸದ ಉಮೇಶ್ ಜಾಧವ್, ಶಾಸಕ ರಾಜಕುಮಾರ್ ಪಾಟೀಲ್ ಮತ್ತಿತರರು ಇದ್ದರು.


                                           
 ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[01/08, 4:33 PM] Karunakar. Khasale. Bjp. Media: 1-8-2022
ಪ್ರಕಟಣೆಯ ಕೃಪೆಗಾಗಿ
ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ - ಸಿ.ಟಿ.ರವಿ 
ಬೆಂಗಳೂರು: ಬಿಜೆಪಿ, ಯಾವುದೇ ಕಾರ್ಯಕರ್ತರನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಕಾರ್ಯಕರ್ತರೇ ನಮ್ಮ ಪಕ್ಷದ ಆಸ್ತಿ. ನಮ್ಮದು ಕೇಡರ್ ಆಧರಿತ ಸಂಸ್ಥೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ತಿಳಿಸಿದರು.
ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಲವು ಕಾರಣಕ್ಕೆ ಸ್ವಾಭಾವಿಕವಾಗಿ ಅಸಮಾಧಾನ ಇರುತ್ತದೆ. ಕೆಲವರನ್ನು ವ್ಯಕ್ತಿಗತವಾಗಿ, ಇನ್ನೂ ಹಲವರನ್ನು ಗುಂಪಾಗಿ ಕೂತು ಮಾತನಾಡಿಸುವ ಕೆಲಸ ಇರುತ್ತದೆ. ದವಡೆಯೂ ನಮ್ಮದೇ; ನಾಲಿಗೆಯೂ ನಮ್ಮದೇ. ಹಲ್ಲು ನಾಲಿಗೆಗೆ ಕಚ್ಚಿದರೆ ಹಲ್ಲು ಉದುರಿಸಿಕೊಳ್ಳುವ ಕೆಲಸ ಯಾರೂ ಮಾಡುವುದಿಲ್ಲ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.
ರಾಷ್ಟ್ರವಾದಕ್ಕೆ ಪಕ್ಷ ಆದ್ಯತೆ ಕೊಡುತ್ತದೆ. ವಿಕಾಸವಾದವೇ ನಮ್ಮ ಪ್ರಥಮ ಆದ್ಯತೆ. ರಾಷ್ಟ್ರಹಿತ ಮತ್ತು ಅಭಿವೃದ್ಧಿಯನ್ನು ಬಿಟ್ಟುಕೊಟ್ಟು ನಾವು ಯಾವತ್ತೂ ಕಾರ್ಯ ಮಾಡಿಲ್ಲ. ನಡೆಯುವವನು ಎಡವುತ್ತಾನೆ ಎಂಬ ಗಾದೆ ಮಾತಿದೆ. ನಮ್ಮ ಕಾರ್ಯದ ವೇಗದಲ್ಲಿ ನಾವು ಕೆಲವನ್ನು ಗಮನಿಸಲು ಸಾಧ್ಯವಾಗದೆ ಇರಬಹುದು. ಅಥವಾ ಅವರ ಅಭಿಪ್ರಾಯಕ್ಕೆ ತಕ್ಕಂತೆ ನಾವು ಕೆಲಸ ಮಾಡಲು ಸಾಧ್ಯ ಆಗದೆ ಇರಬಹುದು. ನಾವು ಕಾರ್ಯಕರ್ತರ ಜೊತೆ ಮಾತನಾಡಿ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಯಾರನ್ನೂ ದೂರ ಮಾಡುವ ಪ್ರಶ್ನೆ ಇಲ್ಲ ಎಂದರು.
ಪಕ್ಷದ ಸಂಕಷ್ಟದ ಕಾಲದಲ್ಲೂ ವಿಚಾರಕ್ಕಾಗಿಯೇ ಹೋರಾಟ ಮಾಡಿದ ಪ್ರತಿ ಕಾರ್ಯಕರ್ತರೂ ನಮ್ಮ ಪಕ್ಷದ ಆಸ್ತಿ. ಪಂಚಾಯತ್ ಸದಸ್ಯರೂ ಅಲ್ಲದ ಲಕ್ಷಾಂತರ ಕಾರ್ಯಕರ್ತರಿದ್ದಾರೆ. ಅವರೆಲ್ಲರೂ ನಮ್ಮನ್ನು ಅಧಿಕಾರದಲ್ಲಿ ಕೂರಿಸಿದ್ದಾರೆ. ಸಾವಿರಾರು ಜನ ಕಾರ್ಯಕರ್ತರು ಮೆಟ್ಟಿಲಾಗಿ ಒಬ್ಬ ನಾಯಕನನ್ನು ಮೇಲೆ ಏರಿಸಿರುತ್ತಾರೆ. ಹಾಗಾಗಿ, ಆ ಮೆಟ್ಟಿಲನ್ನು ಮರೆಯುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು. ಪ್ರಶ್ನಿಸಿದರೆ ಅಪರಾಧ ಎಂಬ ನಿರಂಕುಶ ಪ್ರವೃತ್ತಿಯ ಪಾರ್ಟಿ ನಮ್ಮದಲ್ಲ ಎಂದು ತಿಳಿಸಿದರು.
ನಮ್ಮದು 18 ಕೋಟಿ ಸದಸ್ಯತ್ವ ಇರುವ ರಾಜಕೀಯ ಪಕ್ಷ. ನಾವು ಯಾರನ್ನೂ ಕಳಕೊಳ್ಳಲು ಇಷ್ಟ ಪಡುವುದಿಲ್ಲ. ನಮ್ಮ ತಪ್ಪಿನಿಂದಾಗಿ ಯಾರೂ ದೂರ ಹೋಗಬಾರದು ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ನೀಡಿದರು. ನಾವು ಸೈದ್ಧಾಂತಿಕ ವಿರೋಧಿಗಳ ವಿರುದ್ಧ ಹೋರಾಟ ಮಾಡಬೇಕಿದೆ ಎಂದು ಕಾರ್ಯಕರ್ತರಿಗೆ ತಿಳಿಸುವುದಾಗಿ ಹೇಳಿದರು.
ಚಕ್ರವರ್ತಿ ಸೂಲಿಬೆಲೆ ಅವರು ಒಬ್ಬ ಅಪ್ಪಟ ರಾಷ್ಟ್ರವಾದಿ. ಅವರು ವ್ಯತಿರಿಕ್ತವಾಗಿ ಮಾತನಾಡಿದ್ದರೆ ಅವರ ಜೊತೆ ವೈಯಕ್ತಿಕವಾಗಿ ಮಾತನಾಡುತ್ತೇವೆ. ಹತ್ತಾರು ಕಾರಣಕ್ಕೆ ಸಿಟ್ಟು ಬಂದಿರಬಹುದು. ಆ ಸಿಟ್ಟನ್ನು ಶಮನ, ಸಮಾಧಾನ ಮಾಡುವುದು ನಮ್ಮ ಕರ್ತವ್ಯ ಎಂದು ತಿಳಿಸಿದರು.
ಅಧಿಕಾರ ಬೇಕೆಂದಾಗ ಅತಿವೃಷ್ಟಿಯಲ್ಲಿ ಬರುವ ಕಸಕಡ್ಡಿಯನ್ನು ಸಹಿಸಿಕೊಳ್ಳಬೇಕು. ಡ್ಯಾಂ ತುಂಬಿದಾಗ ಮಾತ್ರ ವಿದ್ಯುತ್ ಉತ್ಪಾದನೆ ಸಾಧ್ಯವಾಗುತ್ತದೆ. ಆಗ ಪವರ್ ಟರ್ಬೈನ್ ತಿರುಗುತ್ತದೆ. ಅತಿವೃಷ್ಟಿ ಆದಾಗ ವೇಗವಾಗಿ ಅಣೆಕಟ್ಟು ತುಂಬುತ್ತದೆ. ಅದನ್ನು ನೀರಾವರಿ, ವಿದ್ಯುತ್ ಉತ್ಪಾದನೆ ಮಾಡಲು ಬಳಸಬಹುದು. ತೇಲಿಬಂದ ಕಸಕಡ್ಡಿ ಡ್ಯಾಂನಲ್ಲಿ ಫಿಲ್ಟರ್ ಆಗುತ್ತದೆ. ಫಿಲ್ಟರ್ ಮಾಡುವುದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ ಎಂದು ಮತ್ತೊಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಒಬ್ಬ ದನಗಳ್ಳ ಕಬೀರ್ ಸತ್ತಾಗ ನಮ್ಮ ರಾಜ್ಯದ ರಾಜಕೀಯ ಇತಿಹಾಸದಲ್ಲೇ ದನಗಳ್ಳನಿಗೆ ಪರಿಹಾರ ಕೊಟ್ಟು, ಎನ್‍ಕೌಂಟರ್ ಮಾಡಿದ ಪೊಲೀಸರನ್ನೇ ಜೈಲಿಗೆ ಹಾಕಿದ ಕಾಂಗ್ರೆಸ್ ಪಕ್ಷದ ನಿಲುವನ್ನು ಜಾತ್ಯತೀತ ಎಂದು ಹೇಳಲಾಗದು. ಅದು ಸಂವಿಧಾನಬದ್ಧ ಎನ್ನಲಾಗದು. ಅವರಿಗೆ ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು. ಸರಕಾರ ಎಲ್ಲರನ್ನೂ ಸಮಾನ ದೃಷ್ಟಿಯಿಂದ ನೋಡಬೇಕೆಂದು ತಿಳಿಸುವುದಾಗಿ ಅವರು ಸ್ಪಷ್ಟಪಡಿಸಿದರು.
ನಿನ್ನೆ ಸಿದ್ದರಾಮಯ್ಯರವರು ತಮಿಳುನಾಡಿನಲ್ಲಿ ಪ್ರಶಸ್ತಿ ಸ್ವೀಕರಿಸುವ ವೇಳೆ ನೀಡಿದ ಹೇಳಿಕೆ ಭಾರತದ ಸಮಗ್ರತೆಗೆ ವಿರುದ್ಧವಾದುದು. ಡಾ. ಅಂಬೇಡ್ಕರ್ ಅವರ ಹೆಸರಿನಲ್ಲಿ ಪ್ರಶಸ್ತಿ ಸ್ವೀಕರಿಸಿ ಸಂವಿಧಾನಕ್ಕೆ ವಿರುದ್ಧವಾಗಿ ಮಾತನಾಡಿದ್ದಾರೆ. ಒಡಕಿನ ಮಾತನಾಡಿದ್ದಾರೆ. ಭಾಷೆ ಜೋಡಿಸುವ ಸಂಗತಿ. ಅದು ಒಡಕಿನ ಕೆಲಸ ಮಾಡಬಾರದು ಎಂದು ತಿಳಿಸಿದರು. ಕನ್ನಡವನ್ನು ಇನ್ನೊಂದು ಭಾಷೆ ವಿರುದ್ಧ ಎತ್ತಿ ಕಟ್ಟಬಾರದು ಎಂದು ಆಕ್ಷೇಪಿಸಿದರು.
ಆರ್ಯ ಎಂಬುದು ಜನಾಂಗ ಸೂಚಕವಲ್ಲ. ಸಿದ್ದರಾಮಯ್ಯ ಅವರು ಇಟೆಲಿ ಇತಿಹಾಸ ಓದಿದವರೇ? ಅವರು ದೇಶದ ಇತಿಹಾಸ ಓದಲಿ ಎಂದು ಆಗ್ರಹಿಸಿದರು. ತಲೆಬುಡ ಇಲ್ಲದ ಸಿದ್ಧಾಂತವನ್ನು ಒಡೆಯಲು ಬಳಸಿರುವುದು ದುರದೃಷ್ಟಕರ. ಅವರಿಗೆ ಡಾ.ಅಂಬೇಡ್ಕರ್ ಅವರ ಹೆಸರಿನ ಪ್ರಶಸ್ತಿ ಕೊಟ್ಟದ್ದು ದುರದೃಷ್ಟಕರ. ಈ ಥರದ ಮಾನಸಿಕತೆಯು ದೇಶದ ಸಮಗ್ರತೆಗೆ ಅಪಾಯಕಾರಿ ಎಂದರು. 75 ವರ್ಷಾಚರಣೆಗೆ ಸಿದ್ಧತೆಯಲ್ಲಿರುವ ಸಿದ್ದರಾಮಯ್ಯ ಅವರ ಮುತ್ಸದ್ಧಿತನದ ಪ್ರಕಟವಾಗಬೇಕು ಎಂದು ಒತ್ತಾಯಿಸಿದರು.
ಎಸ್.ಆರ್.ಪಾಟೀಲರು ಸಿಎಂ ಹುದ್ದೆಗೇರುವುದು ಸೂಕ್ತ ಎಂದು ಹಿರಿಯ ಕಾಂಗ್ರೆಸ್ಸಿಗ ವೀರಪ್ಪ ಮೊಯಿಲಿ ಅವರು ಹೇಳಿದ್ದಾರೆ. ಖರ್ಗೆ ಅವರಿಗೆ ಸಿಎಂ ಕುರ್ಚಿ ತೋರಿಸಿ ಮೋಸ ಮಾಡಲಾಗುತ್ತಿದೆ. ಕೆಪಿಸಿಸಿ ಅಧ್ಯಕ್ಷರು ಸಿಎಂ ಆಗುತ್ತಾರೆಂಬ ಹಂತದಲ್ಲಿ ಎಲ್ಲ ಪಿತೂರಿ ಮಾಡಿ ಪರಮೇಶ್ವರ್ ಅವರನ್ನು ಸೋಲಿಸಿದರು. ಅವರೆಲ್ಲರನ್ನು ನೀವು ಪಕ್ಕಕ್ಕೆ ಇಡುವಿರಾ? ಕಾಂಗ್ರೆಸ್ ಪಕ್ಷದಲ್ಲಿ ಅರ್ಧ ಡಜನ್‍ಗೂ ಹೆಚ್ಚು ಸಿಎಂ ಆಕಾಂಕ್ಷಿಗಳಿದ್ದಾರೆ ಎಂದು ಸಿ.ಟಿ.ರವಿ ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ರಾಜ್ಯದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರುವುದು ಖಚಿತ. ಶಾಸಕಾಂಗ ಪಕ್ಷದ ಸಭೆ ಹಾಗೂ ಸಂಸದೀಯ ಮಂಡಳಿ ತೀರ್ಮಾನದಂತೆ ನಮ್ಮಲ್ಲಿ ನಾಯಕನ ಆಯ್ಕೆ ನಡೆಯಲಿದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಬೊಮ್ಮಾಯಿ ಅವರ ನಾಯಕತ್ವದಲ್ಲೇ ಚುನಾವಣೆ ಎದುರಿಸುತ್ತೇವೆ ಎಂದರು.



                                           
 ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[01/08, 6:53 PM] Karunakar. Khasale. Bjp. Media: 01-08-2022
ಪ್ರಕಟಣೆಯ ಕೃಪೆಗಾಗಿ
ಬಿಬಿಎಂಪಿಯಲ್ಲಿ ಬಿಜೆಪಿ ಗೆಲುವು ಖಂಡಿತ- ಆರ್.ಅಶೋಕ್
ಬೆಂಗಳೂರು: ಬಿಬಿಎಂಪಿ ಚುನಾವಣೆಯಲ್ಲಿ ಬಿಜೆಪಿ ಗೆಲುವು ಖಂಡಿತ ಎಂದು ರಾಜ್ಯದ ಕಂದಾಯ ಸಚಿವÀ ಆರ್.ಅಶೋಕ್ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಬಿಎಂಪಿ ಗೆಲುವಿನ ಕಾರ್ಯತಂತ್ರ ಕುರಿತು ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಸೂಚನೆಗಳನ್ನು ಕೊಟ್ಟಿದ್ದಾರೆ. ಅವುಗಳನ್ನು ಶಿರಸಾವಹಿಸಿ ಪಾಲಿಸಲಿದ್ದೇವೆ ಎಂದು ಹೇಳಿದರು. ಕಾಂಗ್ರೆಸ್‍ನಲ್ಲಿ ಇರುವಂತೆ ಸಿಎಂ ಹುದ್ದೆ ವಿಚಾರ, ಇತರ ವಿಚಾರಗಳಲ್ಲಿ ನಮ್ಮಲ್ಲಿ ಭಿನ್ನಮತ ಇಲ್ಲ. ನಾವೆಲ್ಲರೂ ಸಾಮೂಹಿಕವಾಗಿ ಪಕ್ಷದ ಗೆಲುವಿಗಾಗಿ ಶ್ರಮಿಸಲಿದ್ದೇವೆ ಎಂದರು.
ಬೆಂಗಳೂರಿನ ನಮ್ಮೆಲ್ಲ ಶಾಸಕರು, ಎಲ್ಲ ಪದಾಧಿಕಾರಿಗಳು ಎರಡು ಗಂಟೆಗಳ ಕಾಲ ಬಿಬಿಎಂಪಿ ಚುನಾವಣೆ ಬಗ್ಗೆ ಚರ್ಚೆ ಮಾಡಿದ್ದೇವೆ. ಈಗಾಗಲೇ ಕೋರ್ಟ್ ನಿರ್ದೇಶನವೂ ಬಂದಿದೆ. ಮೀಸಲಾತಿ ಪ್ರಕಟಿಸಿ, ಮತದಾರರ ಪಟ್ಟಿ ಅಂತಿಮಗೊಳಿಸುವುದು ಇತ್ಯಾದಿ ಪ್ರಕ್ರಿಯೆ ನಡೆಸಲು ತಿಳಿಸಲಾಗಿದೆ. ಈ ಎಲ್ಲ ಪ್ರಕ್ರಿಯೆಗೆ ಪಕ್ಷದ ತಯಾರಿ ಸಂಬಂಧ ಸಭೆ ನಡೆಸಲಾಗಿದೆ ಎಂದು ತಿಳಿಸಿದರು.
ಅರ್ಹ ಮತದಾರರ ಸೇರ್ಪಡೆ ನಡೆಯಲಿದೆ. ಈ ವಾರದಲ್ಲೇ ಬೂತ್ ಮಟ್ಟದ ಕಾರ್ಯಕರ್ತರ ಸಭೆ ನಡೆಸಲಾಗುವುದು. ಅಭ್ಯರ್ಥಿಗಳ ಆಯ್ಕೆ ಸಂಬಂಧ ಪ್ರಕ್ರಿಯೆಗಳು ನಡೆಯಲಿವೆ. ಬಿಜೆಪಿ ಪರವಾಗಿ ವಾತಾವರಣ ಇರುವಂತೆ ಮಾಡಲು ಕೆಲಸ ಮಾಡಲು ನಿರ್ಧರಿಸಲಾಗಿದೆ ಎಂದರು.
ಮುಖ್ಯಮಂತ್ರಿಗಳು ನೀಡಿದ ಸುಮಾರು 8 ಸಾವಿರ ಕೋಟಿ ರೂಪಾಯಿ ಅನುದಾನದ ಕೆಲಸಗಳು ಕೂಡಲೇ ಆರಂಭಗೊಳ್ಳುವಂತೆ ನೋಡಿಕೊಳ್ಳಲಾಗುವುದು. ಪ್ರತಿ ಶಾಸಕರು ಹಾಗೂ ನಮ್ಮ ಶಾಸಕರು ಇಲ್ಲದ ಪ್ರದೇಶದಲ್ಲಿ ಸಂಸದರು- ಎಂಎಲ್‍ಸಿಗಳಿಗೆ ಜವಾಬ್ದಾರಿ ಕೊಡಲಾಗುವುದು ಎಂದು ವಿವರಿಸಿದರು. ಇಂದಿನ ಸಭೆಯಲ್ಲಿ ಪ್ರತಿಯೊಬ್ಬ ಶಾಸಕರು, ಅಧ್ಯಕ್ಷರು ಮಾತನಾಡಿದ್ದು, ಗೆಲುವಿನ ಏಕೈಕ ಗುರಿಯನ್ನು ವ್ಯಕ್ತಪಡಿಸಿದ್ದಾಗಿ ತಿಳಿಸಿದರು.
ಆಪ್, ಎಸ್‍ಡಿಪಿಐ, ಕೆಎಫ್‍ಡಿ, ಕೆಆರ್‍ಎಸ್ ಪಕ್ಷಗಳನ್ನು ಎದುರಿಸುವ ಬಗ್ಗೆ ಹಾಗೂ ಬಿಜೆಪಿ ಗೆದ್ದು ಅಧಿಕಾರ ಪಡೆಯುವ ಕುರಿತಂತೆ ಚರ್ಚೆ ನಡೆದಿದೆ. ಅಧಿಕಾರಿಗಳು ಮೀಸಲಾತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಿದ್ದಾರೆ. ಮುಖ್ಯಮಂತ್ರಿಗಳು ಈ ಕುರಿತು ನಿರ್ಧರಿಸಲಿದ್ದಾರೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.
ಚುನಾವಣೆ ಎಂಬುದು ಒಂದು ಯುದ್ಧದಂತೆ. ಆ ಯುದ್ಧ ಗೆಲ್ಲಲು ಚುನಾವಣೆ ಪ್ರಕಟವಾದ ಕೂಡಲೇ ಪೂರ್ವತಯಾರಿ ಮಾಡಿಕೊಳ್ಳಬೇಕಾಗುತ್ತದೆ. ನಮ್ಮದೇ ಸರಕಾರ- ನಮ್ಮ ಮುಖ್ಯಮಂತ್ರಿ, ನಮ್ಮದೇ ಆದ ಬದ್ಧತೆಯ ಕೇಡರ್ ಇರುವುದು ನಮಗೆ ಪ್ಲಸ್ ಪಾಯಿಂಟ್. ಈ ಥರದ ಕೇಡರ್ ಬೇರೆ ಯಾವ ಪಕ್ಷಕ್ಕೂ ಇಲ್ಲ ಎಂದು ಪ್ರಶ್ನೆಗೆ ಉತ್ತರ ನೀಡಿದರು. ಆಮ್ ಆದ್ಮಿ ಪಕ್ಷ ಉತ್ತರ ಭಾರತದಲ್ಲಿ ಪ್ರಭಾವ ಬೀರಬಹುದು. ದಕ್ಷಿಣ ಭಾರತದಲ್ಲಿ ಒಂದೇ ಒಂದು ಪಾಲಿಕೆ ಸೀಟನ್ನೂ ಗೆಲ್ಲಲಾಗದು ಎಂದು ತಿಳಿಸಿದರು.
ಎಸ್‍ಡಿಪಿಐ, ಪಿಎಫ್‍ಐ ನಿಷೇಧಿಸಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ. ಈ ಕುರಿತು ಸಿಎಂ ಜೊತೆ ಮಾತನಾಡುವುದಾಗಿ ತಿಳಿಸಿದರು. ಇದರ ಕುರಿತು ಕೇಂದ್ರ ಸರಕಾರಕ್ಕೆ ಪತ್ರ ಬರೆಯಬೇಕಿದೆ. ಕೇಂದ್ರ ಸರಕಾರವು ತೀರ್ಮಾನ ಕೈಗೊಳ್ಳಲಿದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯದ ವಸತಿ ಸಚಿವ ವಿ ಸೋಮಣ್ಣ ಮತ್ತು ಮುಖಂಡರು ಉಪಸ್ಥಿತರಿದ್ದರು. 

                                           
 ಕರುಣಾಕರ ಖಾಸಲೆ
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ

Post a Comment

Previous Post Next Post