*ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ* ಮಂಕಿಪಾಕ್ಸ್ ಹಾಗೂ ಮಳೆ ಹಾನಿ ಕುರಿತು ಸಭೆ ನಾಳೆ ಸಭೆ। ಪ್ರವೀಣ್ ನೆಟ್ಟರ್ ಹತ್ಯೆ ತನಿಖೆ ಪ್ರಗತಿಯಲ್ಲಿದೆ* *ತನಿಖೆಗಾಗಿ ಪೊಲೀಸರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

[01/08, 12:01 PM] Gurulingswami. Holimatha. Vv. Cm: .

*ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ* *ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಆಗಸ್ಟ್ 01: ಸಿದ್ದರಾಮೋತ್ಸವದಿಂದ ನಮಗೆ ಆಪತ್ತಿಲ್ಲ. ನಾವು ಸಿದ್ದರಾಮ ದೇವರ ಆರಾಧಕರು. ದೇವರ ಉತ್ಸವವನ್ನು ನಿತ್ಯ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. 


ಜಿಲ್ಲಾ ಮಟ್ಟದಲ್ಲಿ ಜನೋತ್ಸವ ಆಚರಿಸುವ ಬಗ್ಗೆ ಚರ್ಚೆ ಮಾಡುತ್ತಿದ್ದು, ಎಲ್ಲಿಲ್ಲಿ ಮಾಡಬೇಕೆಂದು ನಿರ್ಧಾರ ಮಾಡಲಾಗುತ್ತಿದೆ. 
ಪ್ರಾದೇಶಿಕ ಹಾಗೂ ಜಿಲ್ಲಾ ಮಟ್ಟದ ಸಮಾವೇಶಗಳನ್ನು ಹಮ್ಮಿಕೊಳ್ಳಲಾಗಿದೆ. ಇದರ ವಿವರಗಳನ್ನು 3-4 ದಿನಗಳಲ್ಲಿ ಪಕ್ಷ ಪ್ರಕಟಿಸಲಿದೆ ಎಂದರು.
[01/08, 12:07 PM] Gurulingswami. Holimatha. Vv. Cm: *ಮಂಕಿಪಾಕ್ಸ್ ಹಾಗೂ ಮಳೆ ಹಾನಿ ಕುರಿತು ಸಭೆ ನಾಳೆ ಸಭೆ:*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಆಗಸ್ಟ್ 1: ಇತ್ತೀಚಿನ ಮಳೆಯಿಂದಾದ ಹಾನಿ ಕುರಿತು ವಿವರಗಳನ್ನು ಪಡೆದುಕೊಳ್ಳಲು ಹಾಗೂ ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಆರೋಗ್ಯ ಸಚಿವರು ಹಾಗೂ ಇಲಾಖೆಯೊಂದಿಗೆ ನಾಳೆ ಎರಡು ಸಭೆಗಳನ್ನು ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು ತಿಳಿಸಿದರು. 

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.

 ಇಂದು ಕೊಪ್ಪಳ ಜಿಲ್ಲೆಗೆ ಪ್ರವಾಸ ಮಾಡಲಿದ್ದು, ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿಗೆ ಕೈಗೊಳ್ಳಬಹುದಾದ ಕ್ರಮಗಳ ಬಗ್ಗೆ ಸ್ಥಳ ವೀಕ್ಷಣೆ ಮಾಡಲಿದ್ದೇನೆ. ಬೆಟ್ಟದ ಅಭಿವೃದ್ಧಿಗೆ ಈಗಾಗಲೇ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗಿದೆ ಎಂದರು.  

ಆದಷ್ಟೂ ಬೇಗ 100 ಕೋಟಿ ರೂ.ಗಳ ವೆಚ್ಚದಲ್ಲಿ ಪ್ರವಾಸಿಗರಿಗೆ ಅನುಕೂಲ ಕಲ್ಪಿಸಲು ಅನುಮತಿ ನೀಡಲಾಗಿದೆ. ಭೂಸ್ವಾಧೀನದ ಕೆಲಸಗಳು ಬಾಕಿ ಇದ್ದು, ಕಾಮಗಾರಿ ಯನ್ನು ಆದಷ್ಟೂ ಬೇಗ ಪ್ರಾರಂಭಿ ಸಲಾಗುವುದು ಎಂದು ಹೇಳಿದರು.
[01/08, 12:21 PM] Gurulingswami. Holimatha. Vv. Cm: *ಪ್ರವೀಣ್ ನೆಟ್ಟರ್ ಹತ್ಯೆ ತನಿಖೆ ಪ್ರಗತಿಯಲ್ಲಿದೆ* 

 *ತನಿಖೆಗಾಗಿ ಪೊಲೀಸರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*  
ಬೆಂಗಳೂರು: 
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

 ಅವರು ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು .

 ಎನ್.ಐ.ಎ ಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. . ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಎನ್.ಐ.ಎ ಗೆ ಹಸ್ತಾಂತರ ಮಾಡಲಾಗುವುದು ಎಂದರು. ಅನೌಪಚಾರಿಕವಾಗಿ ಎನ್.ಐ.ಎ ಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. 

ಮುಂದಿನ ದಿನಗಳಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಫಾಜಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
[01/08, 1:40 PM] Gurulingswami. Holimatha. Vv. Cm: ದಾವಣಗೆರೆ, ಆಗಸ್ಟ್ 01: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಚಿತ್ರದುರ್ಗದ ಮುರುಘಾ ಮಠದ ಶ್ರೀಡಾ. ಶಿವಮೂರ್ತಿ ಮುರುಘಾ ಶರಣರು, ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಶ್ರೀಗಳು, ಸಚಿವರಾದ ಬಿ.ಎ. ಬಸವರಾಜ, ಡಾ:ಕೆ.ಸುಧಾಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[01/08, 1:42 PM] Gurulingswami. Holimatha. Vv. Cm: *ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ*

ದಾವಣಗೆರೆ, ಆಗಸ್ಟ್ 01:ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು.
ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಇಂದು ದಾವಣಗೆರೆಯ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಅಂಥ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. 

 ಸಿದ್ದರಾಮೇಶ್ವರ ವಜ್ರ ಮಹೋತ್ಸವಕ್ಕೆ ಗುರುಗಳು ಆಹ್ವಾನ ನೀಡಿದ್ದ ಮೇರೆಗೆ ಇಲ್ಲಿಗೆ ಬಂದಿದ್ದೇನೆ. ನಂತರ ಕೊಪ್ಪಳ್ಳಕ್ಕೆ ಹೋಗಲಿದ್ದೇನೆ ಎಂದರು.

*ಹಿಂದೂ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿದೆ*
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಕಡಿಮೆಯಾಗಿದೆ. ನಾವು ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವುದರಿಂದ ಎಲ್ಲರಿಗೂ ಕೂಡ ವಿಶ್ವಾಸ ಬಂದಿದೆ. ಖಂಡಿತವಾಗಿಯೂ ನಮ್ಮ ಪೊಲೀಸರು ಯಾರು ಕೊಲೆಗಡುಕರಿದ್ದಾರೆ ಅವರನ್ನು ಪತ್ತೆ ಹಚ್ಚುತ್ತಾರೆ ಎನ್ನುವ ವಿಶ್ವಾಸ ನನಗೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

*ಭದ್ರತೆ ಸಮಸ್ಯೆ ಇಲ್ಲ*
ಗೃಹ ಸಚಿವರ ಮನೆಗೆ ಭದ್ರತೆ ಸಮಸ್ಯೆಯಿಲ್ಲ. ಪ್ರತಿಭಟನಾಕಾರರು ಬಂದ ಸಂದರ್ಭದಲ್ಲಿ ಭದ್ರತೆಯ ಸಮಯದಲ್ಲಿ ಯಾರು ಇರಬೇಕಿತ್ತೋ ಅವರು ಇರಲಿಲ್ಲ. ಅವರಿಗೆ ತಾಕೀತು ಮಾಡಿ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

*ಮಂಕಿಪಾಕ್ಸ್ ಚಿಕಿತ್ಸೆ ವ್ಯವಸ್ಥೆ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ*

ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.ಈ ಕುರಿತು ನಾಳೆ ಸಭೆ ನಡೆಯಲಿದೆ. ವಿಶೇಷವಾಗಿ ಪ್ರಯಾಣಿಕರ ತಪಸಾಣೆ ಮತ್ತು ಬೇರೆ ಬೇರೆ ಕ್ರಮಗಳ ಬಗ್ಗೆ ನಾಳೆ ಮಹತ್ವದ ಸಭೆಯನ್ನು ಆರೋಗ್ಯ ಸಚಿವರ ಜತೆಗೆ ಮಾಡುತ್ತೇವೆ. ಮಂಕಿಪಾಕ್ಸ್ ಬಗ್ಗೆ ಕೆಲವು ನಿರ್ದೇಶನ ಮತ್ತು ಔಷಧಿ ವ್ಯವಸ್ಥೆಗಳ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದರು.
[01/08, 1:43 PM] Gurulingswami. Holimatha. Vv. Cm: ದಾವಣಗೆರೆ, ಆಗಸ್ಟ್ 01: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಚಿತ್ರದುರ್ಗದ ಮುರುಘಾ ಮಠದ ಶ್ರೀಡಾ. ಶಿವಮೂರ್ತಿ ಮುರುಘಾ ಶರಣರು, ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಶ್ರೀಗಳು, ಸಚಿವರಾದ ಬಿ.ಎ. ಬಸವರಾಜ, ಡಾ:ಕೆ.ಸುಧಾಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[01/08, 1:53 PM] Gurulingswami. Holimatha. Vv. Cm: ದಾವಣಗೆರೆ, ಆಗಸ್ಟ್ 01: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಚಿತ್ರದುರ್ಗದ ಮುರುಘಾ ಮಠದ ಶ್ರೀಡಾ. ಶಿವಮೂರ್ತಿ ಮುರುಘಾ ಶರಣರು, ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಶ್ರೀಗಳು, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ, ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಚಿವರಾದ ಬಿ.ಎ. ಬಸವರಾಜ, ಡಾ:ಕೆ.ಸುಧಾಕರ್, ಸಂಸದ ಜಿ ಎಂ ಸಿದ್ದೇಶ್ವರ, ಶಾಸಕ ಅರವಿಂದ ಲಿಂಬಾವಳಿ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Post a Comment

Previous Post Next Post