ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಡಿಕೇರಿಗೆ ಭೇಟಿ ನೀಡಿದ್ದ ವೇಳೆ ಸಾವರ್ಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂಬ ಕಾರಣಕ್ಕೆ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಅವರ ಕಾರಿನ ಮೇಲೆ ಮೊಟ್ಟೆ ಎಸೆದಿದ್ದರು. ಇದು ಕಾಂಗ್ರೆಸ್ ಕಾರ್ಯಕರ್ತರನ್ನು ಕೆರಳಿಸಿದೆ.ಅಲ್ಲದೆ ಆಗಸ್ಟ್ 26ರಂದು ಮಡಿಕೇರಿಯ ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಮುತ್ತಿಗೆ ಹಾಕುವುದಾಗಿ ಸಿದ್ದರಾಮಯ್ಯ ಗುಡುಗಿದ್ದು, ಇದಕ್ಕೆ ರಾಜ್ಯದ ವಿವಿಧ ಭಾಗಗಳಿಂದ ಸಾವಿರಾರು ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಆಗಮಿಸುವ ನಿರೀಕ್ಷೆ ಇದೆ.
ಇದರ ಮಧ್ಯೆ ಕಾಂಗ್ರೆಸ್ ಕಾರ್ಯಕರ್ತರು ಶಾಸಕರ ಭವನದಲ್ಲೂ ಪ್ರತಿಭಟನೆ ನಡೆಸಬಹುದೆಂಬ ಕಾರಣಕ್ಕೆ ಅಲ್ಲಿ ಮೊಟ್ಟೆ ಬ್ಯಾನ್ ಮಾಡಲಾಗಿದೆ. ಅಲ್ಲದೆ ಕೆ.ಜಿ. ಬೋಪಯ್ಯ ಹಾಗೂ ಅಪ್ಪಚ್ಚು ರಂಜನ್ ಅವರ ಕೊಠಡಿಗಳಿಗೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ. ಈ ಹಿಂದೆ ಯತ್ನಾಳ್ ಅವರ ಕೊಠಡಿ ಮೇಲೆ ದಾಳಿ ನಡೆದಿದ್ದ ಕಾರಣ ಈ ಕ್ರಮ ಕೈಗೊಳ್ಳಲಾಗಿದೆ.
Post a Comment