ಪ್ರವೀಣ್ ನೆಟ್ಟರ್ ಹತ್ಯೆ ತನಿಖೆ ಪ್ರಗತಿಯಲ್ಲಿದೆ* *ತನಿಖೆಗಾಗಿ ಪೊಲೀಸರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ* *ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ**ಅಂಜನಾದ್ರಿ ಬೆಟ್ಟ ಹನುಮನ ಜನ್ಮಸ್ಥಳ: ನಂಬಿಕೆಗಿಂತ ಬೇರೆ ಪುರಾವೆ ಬೇಕಿಲ್ಲ:*

[01/08, 12:21 PM] Gurulingswami. Holimatha. Vv. Cm: *ಪ್ರವೀಣ್ ನೆಟ್ಟರ್ ಹತ್ಯೆ ತನಿಖೆ ಪ್ರಗತಿಯಲ್ಲಿದೆ* 

 *ತನಿಖೆಗಾಗಿ ಪೊಲೀಸರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*  
ಬೆಂಗಳೂರು: 
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

 ಅವರು ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು .

 ಎನ್.ಐ.ಎ ಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. . ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಎನ್.ಐ.ಎ ಗೆ ಹಸ್ತಾಂತರ ಮಾಡಲಾಗುವುದು ಎಂದರು. ಅನೌಪಚಾರಿಕವಾಗಿ ಎನ್.ಐ.ಎ ಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. 

ಮುಂದಿನ ದಿನಗಳಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಫಾಜಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
[01/08, 12:21 PM] Gurulingswami. Holimatha. Vv. Cm: *ಪ್ರವೀಣ್ ನೆಟ್ಟರ್ ಹತ್ಯೆ ತನಿಖೆ ಪ್ರಗತಿಯಲ್ಲಿದೆ* 

 *ತನಿಖೆಗಾಗಿ ಪೊಲೀಸರಿಗೆ ಮುಕ್ತ ಅವಕಾಶ ಕಲ್ಪಿಸಲಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*  
ಬೆಂಗಳೂರು: 
ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ಪೊಲೀಸರಿಗೆ ಮುಕ್ತ ಅಧಿಕಾರ ನೀಡಲಾಗಿದೆ. ತನಿಖೆ ಪ್ರಗತಿಯಲ್ಲಿದೆ. ಆದಷ್ಟು ಬೇಗನೆ ಕೊಲೆಗಡುಕರ ಪತ್ತೆಯಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

 ಅವರು ಇಂದು ಬೆಂಗಳೂರಿನ ತಮ್ಮ ಆರ್ ಟಿ ನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು .

 ಎನ್.ಐ.ಎ ಗೆ ಪ್ರಕರಣ ಹಸ್ತಾಂತರ ಮಾಡುವ ಪ್ರಕ್ರಿಯೆ ನಡೆಯುತ್ತಿದೆ. . ತಾಂತ್ರಿಕ ಹಾಗೂ ಕಾಗದಪತ್ರಗಳ ಕೆಲಸ ಜಾರಿಯಲ್ಲಿದೆ. ಆದಷ್ಟು ಬೇಗನೆ ಪ್ರಕರಣವನ್ನು ಎನ್.ಐ.ಎ ಗೆ ಹಸ್ತಾಂತರ ಮಾಡಲಾಗುವುದು ಎಂದರು. ಅನೌಪಚಾರಿಕವಾಗಿ ಎನ್.ಐ.ಎ ಗೆ ಈಗಾಗಲೇ ತಿಳಿಸಲಾಗಿದೆ. ಕೇರಳ ಮತ್ತು ಮಂಗಳೂರಿನಲ್ಲಿ ಪ್ರಾಥಮಿಕ ಮಾಹಿತಿಯನ್ನು ಪಡೆಯುತ್ತಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು. 

ಮುಂದಿನ ದಿನಗಳಲ್ಲಿ ಹತ್ಯೆಗೀಡಾದ ಮಸೂದ್ ಹಾಗೂ ಫಾಜಿಲ್ ಮನೆಗೆ ಮುಂದಿನ ದಿನಗಳಲ್ಲಿ ಭೇಟಿ ನೀಡುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ತಿಳಿಸಿದರು.
[01/08, 1:40 PM] Gurulingswami. Holimatha. Vv. Cm: ದಾವಣಗೆರೆ, ಆಗಸ್ಟ್ 01: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಚಿತ್ರದುರ್ಗದ ಮುರುಘಾ ಮಠದ ಶ್ರೀಡಾ. ಶಿವಮೂರ್ತಿ ಮುರುಘಾ ಶರಣರು, ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಶ್ರೀಗಳು, ಸಚಿವರಾದ ಬಿ.ಎ. ಬಸವರಾಜ, ಡಾ:ಕೆ.ಸುಧಾಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[01/08, 1:42 PM] Gurulingswami. Holimatha. Vv. Cm: *ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು: ಸಿಎಂ ಬೊಮ್ಮಾಯಿ*

ದಾವಣಗೆರೆ, ಆಗಸ್ಟ್ 01:ನಮ್ಮದು ರಾಷ್ಟ್ರೀಯ ಪಕ್ಷ. ರಾಷ್ಟ್ರೀಯತೆಯೇ ನಮ್ಮ ನಿಲುವು.
ಯಾರಿಗೂ ಬೇಧ-ಭಾವ ಮಾಡುವ ಪ್ರಶ್ನೆಯಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

ಇಂದು ದಾವಣಗೆರೆಯ ಜಿಎಂಐಟಿ ಹಲಿಪ್ಯಾಡ್ ನಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಅಂಥ ವಿಚಾರಗಳು ಹಿಂದಿನ ಸರ್ಕಾರಗಳು ಅವರ ಕಾಲದಲ್ಲಿ ಏನೇನು ಮಾಡಿದ್ದಾರೆ ಅದರ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಅವರು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದರು. 

 ಸಿದ್ದರಾಮೇಶ್ವರ ವಜ್ರ ಮಹೋತ್ಸವಕ್ಕೆ ಗುರುಗಳು ಆಹ್ವಾನ ನೀಡಿದ್ದ ಮೇರೆಗೆ ಇಲ್ಲಿಗೆ ಬಂದಿದ್ದೇನೆ. ನಂತರ ಕೊಪ್ಪಳ್ಳಕ್ಕೆ ಹೋಗಲಿದ್ದೇನೆ ಎಂದರು.

*ಹಿಂದೂ ಕಾರ್ಯಕರ್ತರಲ್ಲಿ ವಿಶ್ವಾಸ ಮೂಡಿದೆ*
ರಾಜ್ಯದಲ್ಲಿ ಹಿಂದೂ ಕಾರ್ಯಕರ್ತರ ಪ್ರತಿಭಟನೆ ಕಡಿಮೆಯಾಗಿದೆ. ನಾವು ಈಗಾಗಲೇ ಕಾರ್ಯಾಚರಣೆ ಮಾಡುತ್ತಿರುವುದರಿಂದ ಎಲ್ಲರಿಗೂ ಕೂಡ ವಿಶ್ವಾಸ ಬಂದಿದೆ. ಖಂಡಿತವಾಗಿಯೂ ನಮ್ಮ ಪೊಲೀಸರು ಯಾರು ಕೊಲೆಗಡುಕರಿದ್ದಾರೆ ಅವರನ್ನು ಪತ್ತೆ ಹಚ್ಚುತ್ತಾರೆ ಎನ್ನುವ ವಿಶ್ವಾಸ ನನಗೆ ಇದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.

*ಭದ್ರತೆ ಸಮಸ್ಯೆ ಇಲ್ಲ*
ಗೃಹ ಸಚಿವರ ಮನೆಗೆ ಭದ್ರತೆ ಸಮಸ್ಯೆಯಿಲ್ಲ. ಪ್ರತಿಭಟನಾಕಾರರು ಬಂದ ಸಂದರ್ಭದಲ್ಲಿ ಭದ್ರತೆಯ ಸಮಯದಲ್ಲಿ ಯಾರು ಇರಬೇಕಿತ್ತೋ ಅವರು ಇರಲಿಲ್ಲ. ಅವರಿಗೆ ತಾಕೀತು ಮಾಡಿ ವ್ಯವಸ್ಥೆಯನ್ನು ಸರಿಪಡಿಸಿದ್ದಾರೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.

*ಮಂಕಿಪಾಕ್ಸ್ ಚಿಕಿತ್ಸೆ ವ್ಯವಸ್ಥೆ ಬಗ್ಗೆ ನಾಳಿನ ಸಭೆಯಲ್ಲಿ ಚರ್ಚೆ*

ಮಂಕಿಪಾಕ್ಸ್ ಸಾಂಕ್ರಾಮಿಕವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ.ಈ ಕುರಿತು ನಾಳೆ ಸಭೆ ನಡೆಯಲಿದೆ. ವಿಶೇಷವಾಗಿ ಪ್ರಯಾಣಿಕರ ತಪಸಾಣೆ ಮತ್ತು ಬೇರೆ ಬೇರೆ ಕ್ರಮಗಳ ಬಗ್ಗೆ ನಾಳೆ ಮಹತ್ವದ ಸಭೆಯನ್ನು ಆರೋಗ್ಯ ಸಚಿವರ ಜತೆಗೆ ಮಾಡುತ್ತೇವೆ. ಮಂಕಿಪಾಕ್ಸ್ ಬಗ್ಗೆ ಕೆಲವು ನಿರ್ದೇಶನ ಮತ್ತು ಔಷಧಿ ವ್ಯವಸ್ಥೆಗಳ ಬಗ್ಗೆ ತೀರ್ಮಾನ ಮಾಡಲಾಗುತ್ತದೆ ಎಂದರು.
[01/08, 1:43 PM] Gurulingswami. Holimatha. Vv. Cm: ದಾವಣಗೆರೆ, ಆಗಸ್ಟ್ 01: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಚಿತ್ರದುರ್ಗದ ಮುರುಘಾ ಮಠದ ಶ್ರೀಡಾ. ಶಿವಮೂರ್ತಿ ಮುರುಘಾ ಶರಣರು, ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಶ್ರೀಗಳು, ಸಚಿವರಾದ ಬಿ.ಎ. ಬಸವರಾಜ, ಡಾ:ಕೆ.ಸುಧಾಕರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[01/08, 1:53 PM] Gurulingswami. Holimatha. Vv. Cm: ದಾವಣಗೆರೆ, ಆಗಸ್ಟ್ 01: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಶಿವಯೋಗಿ ಶ್ರೀ ಸಿದ್ದರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಚಿತ್ರದುರ್ಗದ ಮುರುಘಾ ಮಠದ ಶ್ರೀಡಾ. ಶಿವಮೂರ್ತಿ ಮುರುಘಾ ಶರಣರು, ಹರಿಹರ ವೀರಶೈವ ಪಂಚಮಸಾಲಿ ಪೀಠಾಧಿಪತಿ ವಚನಾನಂದ ಶ್ರೀಗಳು, ಕಾಗಿನೆಲೆ ಗುರುಪೀಠದ ನಿರಂಜನಾನಂದಪುರಿ ಶ್ರೀಗಳು, ಮಾದಾರ ಚನ್ನಯ್ಯ ಸ್ವಾಮೀಜಿ, ಬೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಸಚಿವರಾದ ಬಿ.ಎ. ಬಸವರಾಜ, ಡಾ:ಕೆ.ಸುಧಾಕರ್, ಸಂಸದ ಜಿ ಎಂ ಸಿದ್ದೇಶ್ವರ, ಶಾಸಕ ಅರವಿಂದ ಲಿಂಬಾವಳಿ ಮತ್ತು ಇತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[01/08, 3:15 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟಕ್ಕೆ ತೆರಳಿ 100 ಕೋಟಿ ರೂ. ವೆಚ್ಚದಲ್ಲಿ ಅಂಜನಾದ್ರಿ ಬೆಟ್ಟದ ಸಮಗ್ರ ಅಭಿವೃದ್ಧಿ ಕುರಿತಂತೆ ಅಧಿಕಾರಿ ಹಾಗೂ ಜನಪ್ರತಿನಿಧಿಗಳ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಸಚಿವರಾದ ಹಾಲಪ್ಪ ಆಚಾರ್, ಬೈರತಿ ಬಸವರಾಜ್, ಡಾ. ಕೆ ಸುಧಾಕರ್, ಶಶಿಕಲಾ ಜೊಲ್ಲೆ, ಆನಂದ ಸಿಂಗ್ , ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ದಡೆಸುಗೂರ, ಕೊಪ್ಪಳ ಜಿಲ್ಲಾಧಿಕಾರಿ ಸೇರಿದಂತೆ ಇತರರು ಉಪಸ್ಥಿತರಿದ್ದರು.
[01/08, 4:32 PM] Gurulingswami. Holimatha. Vv. Cm: *ಅಂಜನಾದ್ರಿ ಬೆಟ್ಟ ಹನುಮನ ಜನ್ಮಸ್ಥಳ: ನಂಬಿಕೆಗಿಂತ ಬೇರೆ ಪುರಾವೆ ಬೇಕಿಲ್ಲ:*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕೊಪ್ಪಳ, ಆಗಸ್ಟ್ 01: ಆಂಜನೇಯ ಹುಟ್ಟಿದ್ದು ಅಂಜನಾದ್ರಿ ಬೆಟ್ಟದಲ್ಲಿ ಎನ್ನುವುದಕ್ಕೆ ಐತಿಹಾಸಿಕವಾಗಿ ಸಾವಿರಾರು ವರ್ಷಗಳಿಂದ ಇದು ಕಿಷ್ಕಿಂದೆಯಾಗಿತ್ತು ಎನ್ನುವ ನಂಬಿಕೆಗಿಂತ ಇನ್ನೊಂದು ಪುರಾವೆ ಬೇಕಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ಗಂಗಾವತಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

ಇತ್ತೀಚಿನ ದಿನಗಳಲ್ಲಿ ಆಂಜನೇಯನ ಹುಟ್ಟಿನ ಬಗ್ಗೆ ವಿವಾದಾತ್ಮಕ ಹೇಳಿಕೆಗಳಿವೆ. ಮೂಲತ: ಆಂಜನೇಯ ಹುಟ್ಟಿದ್ದು, ಅಂಜನಾದ್ರಿ ಬೆಟ್ಟದಲ್ಲಿಯೇ ಎನ್ನುವುದರಲ್ಲಿ ಎರಡನೇ ಮಾತಿಲ್ಲ. ಈ ಬಗ್ಗೆ ಚರ್ಚೆ ಅವಶ್ಯಕತೆ ಇಲ್ಲ. ಅಂತರರಾಷ್ಟ್ರೀಯ ಮಟ್ಟದಲ್ಲಿ ಅಂಜನಾದ್ರಿ ಬೆಟ್ಟವನ್ನು ಸ್ಥಳವನ್ನು ಅಭಿವೃದ್ಧಿ ಪಡಿಸಲು ತೀರ್ಮಾನಿಸಿದ್ದೇವೆ. ಈ ಕುರಿತು ಕರ್ನಾಟಕ, ಆಂಧ್ರಪ್ರದೇಶ ಬೇರೆ ಬೇರೆಯಾಗಿ ಘೋಷಣೆ ಮಾಡಬೇಕಿಲ್ಲ. ಇಡೀ ಭಾರತವಾಸಿಗಳು ಈ ವಿಷಯವನ್ನು ನಂಬಿದ್ದಾರೆ ಹಾಗೂ ಎಲ್ಲರಿಗೂ ವಿಶ್ವಾಸವಿದೆ ಎಂದರು.

ಆರಾಧ್ಯ ದೈವ ಆಂಜನೇಯ ಸ್ವಾಮಿಯ ಜನ್ಮಸ್ಥಳದ ಸಮಗ್ರ ಅಭಿವೃದ್ಧಿ ಮಾಡುವುದಾಗಿ ಬಜೆಟ್‍ನಲ್ಲಿ ಮಾಡಿದ್ದ ಘೋಷಣೆ ಮಾಡಲಾಗಿತ್ತು. ಪ್ರತಿ ವರ್ಷ ಬಹಳಷ್ಟು ಯಾತ್ರಿಕರು ಆಗಮಿಸುತ್ತಾರೆ. ಪ್ರವಾಸಿಗರಿಗೆ ಸೂಕ್ತ ವ್ಯವಸ್ಥೆಯಾಗಬೇಕು ಎಂಬ ಉದ್ದೇಶವಿದೆ. ಅಂಜನಾದ್ರಿ ಬೆಟ್ಟದ ಕೆಳಗೆ ಹಾಗೂ ಮೇಲೆಯೂ ಅಭಿವೃದ್ಧಿಯಾಗಬೇಕು ಎನ್ನುವ ಚಿಂತನೆಯಿಂದ 100 ಕೋಟಿ ರೂ.ಗಳ ಅನುದಾನವನ್ನು ಒದಗಿಸಿದೆ. ಆ ಪ್ರಕಾರ ಸರ್ಕಾರಿ ಆದೇಶವನ್ನೂ ಹೊರಡಿಸಲಾಗಿದೆ. ಯಾತ್ರಿಕರಿಗೆ ವಸತಿ, ಮಾರುಕಟ್ಟೆ , ಆಸ್ಪತ್ರೆ ಮುಂತಾದ ಎಲ್ಲ ರೀತಿಯ ಸವಲತ್ತುಗಳು ದೊರಕಬೇಕು ಮಾತ್ತು ರೋಪ್ ವೇ ನಿರ್ಮಿಸಿ ವಯಸ್ಸಾದವರಿಗೆ ಅವಕಾಶವನ್ನು ಕಲ್ಪಿಸುವುದು ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಇದನ್ನು ಬೆಳೆಸಬೇಕು ಎನ್ನುವ ಪರಿಕಲ್ಪನೆಯಿಂದ ಸ್ಥಳ ವೀಕ್ಷಣೆ ಮಾಡಲಾಗುತ್ತಿದೆ ಎಂದರು.

*ಪ್ರವಾಸೋದ್ಯಮ ಸರ್ಕಿಟ್*
  ರೋಪ್ ವೇಗೆ ಟೆಂಡರ್ ಕರೆಯಲು ಸೂಚಿಸಲಾಗಿದೆ. ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ. ಅಂಜನಾದ್ರಿ ಬೆಟ್ಟದ ಸುತ್ತಮುತ್ತಲಿನ ಎಲ್ಲಾ ಪ್ರದೇಶಗಳ ಅಭಿವೃದ್ಧಿಯಾಗಬೇಕು. ಕರ್ನಾಟಕದಲ್ಲಿ ಮೈಸೂರು ಮತ್ತು ಹಂಪಿ ಅಂತರರಾಷ್ಟ್ರೀಯ ಪ್ರವಾಸೋದ್ಯಮ ಸರ್ಕಿಟ್ ರೂಪಿಸಲು ಆದೇಶ ಹೊರಡಿಸಿದೆ. ಪುರಾತತ್ವ ಇಲಾಖೆಗೆ ಒಳಪಡುವ ಸ್ಥಳಗಳನ್ನು ಹೊರತುಪಡಿಸಿ ಹಂಪಿಯ ಸುತ್ತಮುತ್ತಲ ಪ್ರದೇಶಗಳು ಹಾಗೂ ಊರುಗಳ ಸಮಗ್ರ ಅಭಿವೃದ್ಧಿಯನ್ನು ಕೈಗೊಳ್ಳಲು ಸೂಚಿಸಿದೆ. ಐತಿಹಾಸಿಕ ಪ್ರವಾಸೋದ್ಯಮಕ್ಕೆ ಪುಷ್ಟಿ ನೀಡಲು ಬಜೆಟ್‍ನಲ್ಲಿ ಅನುದಾನ ನೀಡಲಾಗಿದೆ. ಈಗ ಕಾರ್ಯಕ್ರಮ ಪ್ರಾರಂಭಲಾಗುವುದು ಎಂದರು.
ಭೂಸ್ವಾಧೀನಕ್ಕಾಗಿ 24 ಕೋಟಿ ರೂ.ಗಳನ್ನು ಮೀಸಲಿರಿಸಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಸಭೆ ನಡೆಸಿದ್ದು ಅತಿಶೀಘ್ರದಲ್ಲಿಯೇ ಭೂಸ್ವಾಧೀನ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದರು.
[01/08, 5:12 PM] Gurulingswami. Holimatha. Vv. Cm: ಭೋವಿ ಕುಲಕಸುಬಿಗೆ ವಿಶೇಷ ಅವಕಾಶ ಹಾಗೂ ರಿಯಾಯ್ತಿ ತರಲು ವ್ಯವಸ್ಥೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ದಾವಣಗೆರೆ, ಆಗಸ್ಟ್ 01 :

 ಪರಿಸರದ ಕಾನೂನಿನಡಿಯಲ್ಲಿ ಸೂಕ್ತ ತಿದ್ದುಪಡಿ ತರುವ ಮೂಲಕ ಭೋವಿ ಸಮುದಾಯದ ಪಾರಂಪರಿಕ ಕುಲಕಸುಬನ್ನು ನಡೆಸಲು ವಿಶೇಷ ಅವಕಾಶ ಹಾಗೂ ರಿಯಾಯ್ತಿಗಳನ್ನು ತರುವ ವ್ಯವಸ್ಥೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.

ಅವರು ಇಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ ರಥ ವಜ್ರ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಭೋವಿ ಸಮಾಜಕ್ಕೆ ತನ್ನ ಕುಲಕಸುಬನ್ನು ಮಾಡಲು ಹಲವು ಕಾನೂನಾತ್ಮಕ ತೊಂದರೆಗಳಿವೆ. ಪರಿಹಾರಗಳು ತಾತ್ಕಾಲಿಕ ಹಾಗೂ ಸ್ಥಾನಿಕವಾಗಿವೆ. ಕಾನೂನಿನ ನೆಪದಲ್ಲಿ ಅಧಿಕಾರಿಗಳ ಕಿರುಕುಳ ನನ್ನ ಗಮನಕ್ಕೆ ಬಂದಿದೆ. ಇದಕ್ಕೆ ಶಾಶ್ವತ ಪರಿಹಾರ ನೀಡಲು ಸರ್ಕಾರ ಚಿಂತನೆ ನಡೆಸಿದೆ. ಕಾನೂನನ್ನು ರಚಿಸುವಾಗ ಯಾವುದೇ ಸಮುದಾಯಗಳಿಗೆ ತೊಂದರೆಯಾಗದಂತೆ ಕಾನೂನನ್ನು ರೂಪಿಸಬೇಕು. ಬರುವ ತಿಂಗಳಲ್ಲಿ ವಿಧಾನಸಭೆ ಅಧಿವೇಶನದಲ್ಲಿ ಈ ಕಾನೂನಿಗೆ ತಿದ್ದುಪಡಿ ತಂದು ಭೋವಿ ಜನಾಂಗದ ಕುಲಕಸುಬಿಗೆ ವಿಶೇಷ ಅವಕಾಶಗಳನ್ನು ರಿಯಾಯ್ತಿಗಳನ್ನು ನೀಡಲಾಗುವುದು ಎಂದರು.

*ಸಮತೋಲನದ ಸಮೃದ್ಧಿಯ ರಾಜ್ಯ ನಿರ್ಮಾಣ :*
ಗುರುಪೀಠವು ಸಮಾಜವನ್ನು ಒಗ್ಗೂಡಿಸಿ ಏಳಿಗೆಯ ಪಥದಲ್ಲಿ ಮುನ್ನಡೆಸುತ್ತಿದೆ. ಎಲ್ಲ ಜನಾಂಗಗಳ ಅಭಿವೃದ್ಧಿಯಾದಾಗ ಮಾತ್ರ ನಾಡು ಅಭಿವೃದ್ಧಿಯಾಗುತ್ತದೆ. ಕೆಳಸ್ತರದ ಹಾಗೂ ಶಿಕ್ಷಣ, ಆರೋಗ್ಯ ಹಾಗೂ ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಹೆಚ್ಚಿನ ಪ್ರಾತಿನಿಧ್ಯ ಕೊಡಬೇಕಾಗಿದೆ. ತಳವರ್ಗದ ಸಮುದಾಯಗಳಿಗೆ ಶ್ರೀಮಂತಿಕೆ ಬರುವಂತೆ ನೋಡಿಕೊಳ್ಳುವ ಮೂಲಕ ಸಮತೋಲನದ ಸಮೃದ್ಧಿಯ ರಾಜ್ಯದ ನಿರ್ಮಾಣ ಸಾಧ್ಯ. ತಳಸಮುದಾಯದ ಅಭಿವೃದ್ಧಿಗಾಗಿ ವಿಶೇಷ ಕಾರ್ಯಕ್ರಮಗಳನ್ನು ಸರ್ಕಾರ ಹಮ್ಮಿಕೊಂಡಿದೆ ಎಂದು ತಿಳಿಸಿದರು.

*ಕುಲಕಸುಬುಗಳಿಂದಲೇ ಸಮಾಜ ನಿರ್ಮಾಣ :*
ಕುಲಕಸುಬುಗಳಿಂದಲೇ ಸಮಾಜ ನಿರ್ಮಾಣ ಹಾಗೂ ದೇಶ ಕಟ್ಟುವ ಕೆಲಸವಾಗುತ್ತಿದೆ. ಬಂಡೆಯನ್ನು ಒಡೆಯದೇ ಮಂದಿರ, ಮನೆ, ಮೂರ್ತಿಗಳು ಯಾವುದನ್ನು ನಿರ್ಮಿಸಲು ಸಾಧ್ಯವಿಲ್ಲ. ಕಲ್ಲನ್ನು ಒಡೆಯದೇ ರಸ್ತೆ, ಡ್ಯಾಂಗಳು ಯಾವುದೇ ಅಭಿವೃದ್ಧಿ ಆಗುವುದಿಲ್ಲ. ಈ ಸಮುದಾಯದ ಜೊತೆಗೆ ನನಗೆ ನಿರಂತರ ಸಂಪರ್ಕವಿದ್ದು, ಅವರ ಕಷ್ಟಕಾರ್ಪಣ್ಯಗಳ ಅರಿವಿದೆ. ಭೋವಿ ಸಮಾಜದ ಯುವಕರು ಶಿಕ್ಷಿತರಾಗಿದ್ದಾರೆ. ಎಲ್ಲ ರಂಗಗಳಲ್ಲಿ ಸಮುದಾಯದವರು ಮುಂದೆ ಬರಬೇಕು. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸೂಕ್ತ ಅವಕಾಶಗಳನ್ನು ನೀಡಿದರೆ ಅದ್ಭುತವಾದ ಸಾಧನೆಗಳನ್ನು ಮಾಡುತ್ತಾರೆ ಎಂದರು.

*ಕ್ರಿಯಾಯೋಜನೆ ರೂಪಿಸಲು ಸೂಚನೆ:*
ಎಸ್ ಸಿ ಎಸ್ ಟಿ ಸಮುದಾಯಗಳಿಗೆ ಅನುಕೂಲ ಕಲ್ಪಿಸಲು ಹೆಚ್ಚಿನ ಅನುದಾನವನ್ನು ನೀಡಲಾಗಿದೆ. ಭೋವಿ ಸಮುದಾಯಕ್ಕೆ 107 ಕೋಟಿ ರೂ. ಅನುದಾನ ಒದಗಿಸಲಾಗಿದ್ದು, ಕ್ರಿಯಾಯೋಜನೆ ರೂಪಿಸಲು ಸೂಚಿಸಲಾಗಿದೆ. ಭೋವಿ ಸಮಾಜದ ಅಧ್ಯಕ್ಷರನ್ನು ಶೀಘ್ರದಲ್ಲಿ ನೇಮಿಸಲಾಗುವುದು. ತಳಹಂತದ ಶ್ರಮಜೀವಿಗಳಿಂದ ಆರ್ಥಿಕತೆ ಬೆಳವಣಿಗೆಯಾಗುತ್ತಿದೆ ಎಂದರು.

*ಸಿದ್ದರಾಮೇಶ್ವರರ ಜಯಂತಿ ನಿತ್ಯೋತ್ಸವ :*
ಸಿದ್ಧರಾಮೇಶ್ವರರು ಆದರ್ಶಪ್ರಾಯವಾಗಿದ್ದಾರೆ. ತಮ್ಮ ಕಾಯಕದ ಅರಿವಿನಿಂದ ಜಗತ್ತಿನ್ಲಲಿ ಜಾಗೃತಿ ಮೂಡಿಸಿದ ಮಹಾಶರಣರು. ದೂರದೃಷ್ಟಿಯಿಂದ ಕೆರೆಕಟ್ಟೆಗಳನ್ನು ನಿರ್ಮಿಸಿ ಸಮುದಾಯವನ್ನು ಉಳಿಸಿರುವ ಮಹಾಚೇತನ. ಶ್ರಮ ಮತ್ತು ಜ್ಞಾನದ ಸಂಗಮವಾಗಿರುವ ಸಿದ್ಧರಾಮೇಶ್ವರರು ಅನುಭವ ಮಂಟಪದಲ್ಲಿಯೂ ತಮ್ಮ ಕಾಯಕವನ್ನು ಮಾಡಿದ್ದಾರೆ. ಅವರ ವಚನಗಳಲ್ಲಿ ಸತ್ಯ ನಿಷ್ಟುರತೆ ಇದೆ. ಸಿದ್ದರಾಮೇಶ್ವರರ ಜಯಂತಿ ನಿತ್ಯೋತ್ಸವ ಆಗುವ ಮೂಲಕ ಸಮುದಾಯ ಶ್ರಮ, ನಿಷ್ಠೆ, ಜ್ಞಾನಕ್ಕೆ ಗೌರವ ನೀಡಿದಂತಾಗುತ್ತದೆ.ಭೋವಿ ಸಮುದಾಯದ ಸಮಸ್ಯೆಗಳನ್ನು ಬಗೆಹರಿಸಿ , ಹೆಚ್ಚಿನ ಅನುದಾನವನ್ನೂ ನೀಡಲಾಗುವುದು ಎಂದರು.
[01/08, 5:12 PM] Gurulingswami. Holimatha. Vv. Cm: *ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸೂಚನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಕೊಪ್ಪಳ, ಆಗಸ್ಟ್ 01 :

 ಅಂಜನಾದ್ರಿ ಬೆಟ್ಟದ ಅಭಿವೃದ್ಧಿ ಕಾರ್ಯಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದರು.

ಅವರು ಇಂದು ಅಂಜನಾದ್ರಿ ಬೆಟ್ಟದ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳ ಸಭೆ ನಡೆಸಿ ಕೆಳಕಂಡ ಸೂಚನೆಗಳನ್ನು ನೀಡಿದರು.

• ಅಂಜನಾದ್ರಿ ಬೆಟ್ಟದ ಕ್ಷೇತ್ರಕ್ಕೆ ಯಾತ್ರಿಕರು ಅವರಿಗೆ ವಸತಿ ಹಾಗೂ ಇತರ ಸೌಲಭ್ಯಗಳನ್ನು ಪೂರೈಸಬೇಕು. 100 ಕೋಟಿ ರೂ. ವೆಚ್ಚದಲ್ಲಿ 600 ಕೊಠಡಿಗಳ ಯಾತ್ರಿನಿವಾಸ, ಆಸ್ಪತ್ರೆ, ಶೌಚಾಲಯಗಳ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳಬೇಕು.

• ಈ ಉದ್ದೇಶಕ್ಕಾಗಿ ವಾಸ್ತುಶಿಲ್ಪಿಗಳನ್ನು ನೇಮಿಸಿಕೊಂಡು 2 ತಿಂಗಳ ಅವಧಿಯಲ್ಲಿ ಕಾಮಗಾರಿಯ ವಿನ್ಯಾಸವನ್ನು ಸಿದ್ಧಪಡಿಸಿ, ಅನುಮೋದನೆಯನ್ನು ಪಡೆದುಕೊಳ್ಳಬೇಕು.

• ಕಟ್ಟಡ ನಿರ್ಮಾಣಕ್ಕೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆಗೆ ಕ್ರಮ ತೆಗೆದುಕೊಂಡು ಈ ಬಗ್ಗೆ ಸ್ಥೂಲವಾದ ವರದಿಯನ್ನು ಸಲ್ಲಿಸಬೇಕು. ಈಗಾಗಲೇ ಭೂಸ್ವಾಧೀನ ಪ್ರಕ್ರಿಯೆಗೆ 24 ಕೋಟಿ ರೂ.ಗಳನ್ನು ಮೀಸಲಿರಿಸಲಾಗಿದೆ. ಅಗತ್ಯವಿದ್ದಲ್ಲಿ ಹೆಚ್ಚಿನ ಅನುದಾನವನ್ನೂ ನೀಡಲಾಗುವುದು.

• ವಾಹನ ನಿಲುಗಡೆ ವ್ಯವಸ್ಥೆಗೆ ಕನಿಷ್ಟ 35 ಎಕರೆ ಪ್ರದೇಶ ಅಗತ್ಯವಿದ್ದು, ಮೊದಲನೇ ಹಂತದಲ್ಲಿ ಕನಿಷ್ಟ 20 ಎಕರೆ ಪಾರ್ಕಿಂಗ್ ವ್ಯವಸ್ಥೆ ಮಾಡಿಕೊಳ್ಳಬೇಕು.

• ಈ ಯೋಜನೆಯಡಿಯಲ್ಲಿ ಕುಡಿಯುವ ನೀರು, ಬೆಳಕಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಸ್ವಚ್ಛತೆಗಾಗಿ ಎಲ್ಲ ಕ್ರಮ ಕೈಗೊಳ್ಳಬೇಕು.

• ಈ ಕ್ಷೇತ್ರದಲ್ಲಿ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಬಹಳಷ್ಟು ಧಾರ್ಮಿಕ ಕ್ಷೇತ್ರಗಳಲ್ಲಿ ಯಾತ್ರಿ ನಿವಾಸಗಳನ್ನು ನಿರ್ಮಿಸಲಾಗಿದ್ದರೂ, ನಿರ್ವಹಣೆ ಇರುವುದಿಲ್ಲ. ಮೊದಲ ದಿನದಿಂದಲೇ ನಿರ್ವಹಣೆ ಹಾಗೂ ಸ್ವಚ್ಛತಾ ಸೇವೆಯನ್ನು ಏಜೆನ್ಸಿಯಿಂದ ಪಡೆಯಬಹುದಾಗಿದೆ.

• ರಾಷ್ಟ್ರೀಯ ಹೆದ್ದಾರಿಯಿಂದ ಹಾಗೂ ಗಂಗಾವತಿಯಿಂದ ಸಂಪರ್ಕ ಕಲ್ಪಿಸಬಹುದಾಗಿದ್ದು, ರಸ್ತೆ ನಿರ್ಮಾಣಕ್ಕೆ ಪ್ರಸ್ತಾವನೆಯನ್ನು ಸಲ್ಲಿಸುವುದು. ಯಾತ್ರಿನಿವಾಸದ ನಿರ್ಮಾಣದ ಜೊತೆಜೊತೆಯಲ್ಲಿಯೇ ರಸ್ತೆ ನಿರ್ಮಾಣ ಕಾಮಗಾರಿಯೂ 7-8 ತಿಂಗಳಲ್ಲಿ ಪೂರ್ಣಗೊಳ್ಳಬೇಕು.

• ಅಂಜನಾದ್ರಿ ಕ್ಷೇತ್ರಕ್ಕೆ ಯಾತ್ರಿಕರ ಭೇಟಿಗೆ ಅನುಕೂಲವಾಗುವಂತೆ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗುವುದು.

• ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಮುಂದಿನ ಎರಡು ತಿಂಗಲ್ಲಿ ಭೂ ಸ್ವಾಧೀನ ಕಾರ್ಯಗಳು ಮುಗಿದು, 2 ತಿಂಗಳೊಳಗೆ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಿ, ನಾಲ್ಕು ತಿಂಗಳೊಳಗೆ ನಿರ್ಮಾಣ ಕಾಮಗಾರಿ ಪ್ರಾರಂಭವಾಗಬೇಕು. ಕಾಮಗಾರಿಗೆ ವೇಳಾಪಟ್ಟಿಯನ್ನು ನಿಗದಿಪಡಿಸಿ ಅದರಂತೆ ಕಾಮಗಾರಿ ಪೂರ್ಣಗೊಳಿಸಬೇಕು ಎಂದು ಸೂಚಿಸಿದರು.
[01/08, 5:55 PM] Gurulingswami. Holimatha. Vv. Cm: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೊಪ್ಪಳದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಚಿವರಾದ ಸಿ.ಸಿ.ಪಾಟೀಲ್, ಡಾ: ಕೆ.ಸುಧಾಕರ್, ಬಿ.ಎ. ಬಸವರಾಜ, ಹಾಲಪ್ಪ ಆಚಾರ್, ಸಂಸದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ ಮತ್ತು ಇತರರು ಉಪಸ್ಥಿತರಿದ್ದರು.
[01/08, 6:27 PM] Gurulingswami. Holimatha. Vv. Cm: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಗವಿಸಿದ್ದೇಶ್ವರ ಮಠದವಶ್ರೀಗಳು ಮುಖ್ಯಮಂತ್ರಿಗಳನ್ನು ಸನ್ಮಾನಿಸಿದರು. ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಧ್ಯಮಗಳಿಗೆ ನೀಡಿದ ಪ್ರತಿಕ್ರಿಯೆಯ ವಿಡಿಯೋ ಬೈಟ್...
[01/08, 7:50 PM] Gurulingswami. Holimatha. Vv. Cm: *ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಮಂಜೂರಾತಿಯ ಆದೇಶದ ಪ್ರತಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ*

ಕೊಪ್ಪಳ, ಆಗಸ್ಟ್ 01: ಕೊಪ್ಪಳದ ಗವಿಸಿದ್ದೇಶ್ವರ ಮಠಕ್ಕೆ 10 ಕೋಟಿ ರೂ. ಮಂಜೂರಾತಿ ಆದೇಶದ ಪ್ರತಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಸ್ತಾಂತರ ಮಾಡಿದರು. 

ಅವರು ಇಂದು ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿದ ನಂತರ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

 ಗವಿಸಿದ್ದೇಶ್ವರ ಮಠದ ಶ್ರೀಗಳು ಅಪಾರವಾದ ಸೇವೆಯನ್ನು ಮಾಡುತ್ತಿದ್ದಾರೆ. ಅವರಿಗೆ ಸಹಾಯ ಆಗಲಿ ಎಂದು ನಾವು ಸರ್ಕಾರದಿಂದ 10 ಕೋಟಿ ರೂ. ಕೊಟ್ಟಿದ್ದೇವೆ ಎಂದು ತಿಳಿಸಿದರು.

ಈ ಭಾಗದಲ್ಲಿ ಪರಮಪೂಜ್ಯರು ಮಾಡುತ್ತಿರುವ ವಿದ್ಯೆ ಮತ್ತು ಅನ್ನ ದಾಸೋಹ ಸೇವೆ ಬಹಳ ವರ್ಷಗಳಿಂದ ನಡೆದಿದೆ. ಬಡ ಜನರಿಗೆ, ವಿದ್ಯಾರ್ಥಿಗಳಿಗೆ ಆಶ್ರಯವಾಗಿದೆ. ಈ ಭಾಗದ ಜನರ ವಿದ್ಯೆಗೆ ನಂದಾದೀಪವಾಗಿದೆ. ಅಂತಹ ಅಮೋಘವಾಗಿರುವ ಕೆಲಸವನ್ನು ಪರಮಪೂಜ್ಯರು ಮಾಡುತ್ತಿರುವಂತಹದ್ದು, ನಮ್ಮ ನಾಡಿನ ಸೌಭಾಗ್ಯವಾಗಿದೆ ಎಂದು ಮುಖ್ಯಮಂತ್ರಿಗಳು ಹೇಳಿದರು.

ಈ ಬಾರಿ ಎರಡು ವರ್ಷ ಕೋವಿಡ್ ಆಗಿರುವುದರಿಂದ ಒಂದೇ ಬಾರಿಗೆ 2,000 ಕ್ಕಿಂತ ಹೆಚ್ಚುವರಿಯಾಗಿ ಮಕ್ಕಳು ಬಂದಿದ್ದಾರೆ. 3,500 ಮಕ್ಕಳು ಈಗಾಗಲೇ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಅವರಿಗೆಲ್ಲರಿಗೂ ಕೂಡ ವಸತಿ ಕಲ್ಪಿಸಬೇಕು. ದಾಸೋಹ ಕೇಂದ್ರಗಳನ್ನು ಮಾಡಬೇಕು ಎಂದು ಪರಮಪೂಜ್ಯರು ತಿಳಿಸಿದ್ದರು.

ಸಾಮಾನ್ಯವಾಗಿ ಭಕ್ತರಿಂದಲೇ ಎಲ್ಲವನ್ನು ಪರಮಪೂಜ್ಯರು ಮಾಡುತ್ತಾರೆ. ಈ ಸನ್ನಿವೇಶದ ಬಗ್ಗೆ ಸಂಸದ ಕರಡಿ ಸಂಗಣ್ಣ, ಸಚಿವ ಹಾಲಪ್ಪ ಆಚಾರ, ಪರಣ್ಣ ಮುನವಳ್ಳಿ, ಬಸವರಾಜ ಅವರು ತಿಳಿಸಿದ್ದರು. ಸಚಿವ ಆನಂದ ಸಿಂಗ್ ಅವರ ಒತ್ತಾಸೆಯ ಮೇರೆಗೆ ಕೂಡಲೇ 10 ಕೋಟಿ ರೂ. ಮಂಜೂರು ಮಾಡಲಾಗಿದೆ. ಆ ಆದೇಶವನ್ನು ಇವತ್ತು ಪರಮಪೂಜ್ಯರಿಗೆ ಇವತ್ತು ಹಸ್ತಾಂತರ ಮಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು. 

*ಸರ್ಕಾರ ಸಹಾಯ ಮಾಡುತ್ತದೆ; ಭಕ್ತರು ಸಹಾಯ ಮಾಡಿ*

ಮಠದಲ್ಲಿ ಹೆಚ್ಚುವರಿ ಮಕ್ಕಳು ವಿದ್ಯಾಭ್ಯಾಕ್ಕಾಗಿ ಬಂದಿದ್ದಾರೆ. ಅವರಿಗೆ ವಸತಿ ಸೌಲಭ್ಯ ಕೊಡುವುದು ಕಷ್ಟ ಆಗಿದ್ದು, ವಸತಿ ಕಲ್ಪಿಸುವ ಕೆಲಸವನ್ನು ಪರಮಪೂಜ್ಯರು ಆರಂಭ ಮಾಡಿದ್ದಾರೆ. ಅದಕ್ಕೆ ಸಹಾಯ ಆಗಲಿ ಅಂಥ ಸರ್ಕಾರದಿಂದ 10 ಕೋಟಿ ರೂ ಕೊಟ್ಟಿದ್ದೇವೆ. ಇನ್ನು ದೊಡ್ಡ ಪ್ರಮಾಣದಲ್ಲಿ 8 ರಿಂದ 10 ಸಾವಿರ ಮಕ್ಕಳಿಗೆ ವಸತಿ ನೀಡಬೇಕು ಎನ್ನುವ ಗುರಿ ಇಟ್ಟುಕೊಂಡಿದ್ದಾರೆ. ಅದಕ್ಕೆ ಭಕ್ತರು ಎಲ್ಲರೂ ಕೂಡ ಸಹಾಯ ಮಾಡಬೇಕು. ಈ ಭಾಗದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶದಲ್ಲಿ ದಿವ್ಯವಾಗಿರುವ ಸೇವೆ ಪರಮಪೂಜ್ಯರು ಮಾಡುತ್ತಿದ್ದಾರೆ. ಅವರ ಆಸೆ, ಕನಸು ನನಸು ಆಗುತ್ತದೆ ಎಂದರು. 

ಈ ಸಂದರ್ಭದಲ್ಲಿ ಸಚಿವರಾದ ಹಾಲಪ್ಪ ಆಚಾರ, ಡಾ. ಕೆ. ಸುಧಾಕರ್, ಬೈರತಿ ಬಸವರಾಜ, ಸಿ.ಸಿ ಪಾಟೀಲ, ಸಂಸತ್ ಸದಸ್ಯರಾದ ಕರಡಿ ಸಂಗಣ್ಣ, ಶಾಸಕರಾದ ಪರಣ್ಣ ಮುನವಳ್ಳಿ, ಬಸವರಾಜ ಸೇರಿದಂತೆ ಇತರರು ಉಪಸ್ಥಿತರಿದ್ದರು.

Post a Comment

Previous Post Next Post