ಚಾಮರಾಜಪೇಟೆಯ ಆಟದ ಮೈದಾನದಲ್ಲಿ ಗಣೇಶೋತ್ಸವ ಆಚರಿಸಲು ಕೋರಿದ್ದ ಅರ್ಜಿಯ ಅನುಮತಿ ಬಗ್ಗೆ ಇಂದು ಹೈಕೋರ್ಟ್ ವಿಭಾಗೀಯ ಪೀಠ ನೀಡಿದ ತೀರ್ಪು ಸ್ವಾಗತಾರ್ಹ
ಹಿಂದೂಗಳ ಧಾರ್ಮಿಕ ಆಚರಣೆ ಸ್ವಾತಂತ್ರ್ಯ ಯಾರೊಬ್ಬರ ಬಳಿ ಕೇಳಿ ಪಡೆಯುವ ಭಿಕ್ಷೆ ಅಲ್ಲ ಅದು ಜನ್ಮ ಸಿದ್ದ ಹಕ್ಕು ಅನ್ನೋದನ್ನು ಇಂದಿನ ತೀರ್ಪು ಎತ್ತಿ ಹಿಡಿದಿದೆ
ಕಂದಾಯ ಇಲಾಖೆಗೆ ಸೇರಿದ್ದ ಆಟದ ಮೈದಾನದಲ್ಲಿ ಗಣೇಶೋತ್ಸವ ನಡೆಸಲು ಸಮಿತಿಗಳಿಗೆ ಅನುಮತಿ ನೀಡಲು ನಾನು ಈಗಾಗಲೇ ಘನ ಸರಕಾರಕ್ಕೆ ಪತ್ರ ಬರೆದಿದ್ದು ಅದು ಧಾರ್ಮಿಕ ಸ್ವಾತಂತ್ರ್ಯದ ಹಕ್ಕು ಕೂಡಾ ಆಗಿತ್ತು . ಇಂದಿನ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪು ಆ ನಿಟ್ಟಿನಲ್ಲೇ ಇದೆ .
ಆಟದ ಮೈದಾನದಲ್ಲಿ ಯಥಾಸ್ಥಿತಿ ಕಾಪಾಡುವಂತೆ ನಿನ್ನೆ ಹೈಕೋರ್ಟ್ ನ ಏಕ ಸದಸ್ಯ ಪೀಠ ನೀಡಿದ್ದ ತೀರ್ಪಿನಿಂದ ನಿರಾಶರಾಗಿದ್ದ ನಮಗೆ ಇಂದಿನ ತೀರ್ಪು ಮತ್ತೊಮ್ಮೆ ನ್ಯಾಯಾಲಯದ ಮೇಲಿನ ನಂಬಿಕೆ ಹೆಚ್ಚುವಂತೆ ಮಾಡಿದೆ ಮತ್ತು ಸಂತಸ ತಂದಿದೆ .
ಗಣೇಶೋತ್ಸವ ಆಚರಣೆಯ ಹಿಂದಿನ ಉದ್ದೇಶ ಸಮಾಜದ ಏಕತೆ . ಇದನ್ನು ಅರ್ಥ ಮಾಡಿಕೊಳ್ಳದ ಶಕ್ತಿಗಳಿಗೆ ದೇಶ ಭಕ್ತಿಯ ಸದಾಚಾರ ,ಸದ್ಬುದ್ಧಿ ಕೊಡಲೆಂದು ವಿಘ್ನ ವಿನಾಶಕನಲ್ಲಿ ಪ್ರಾರ್ಥಿಸೋಣ .
C T Ravi MLA
National General Secretary
BJP
Post a Comment