[31/08, 4:35 PM] Deepak Karade. CM. Media. office: *ಪ್ರೋ. ಹೆಚ್. ಎಸ್. ಶೇಷಾದ್ರಿ ಅವರ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ*
ಬೆಂಗಳೂರು, ಆಗಸ್ಟ್ 31: ಹಿರಿಯ ವಕೀಲರು, ತುಮಕೂರಿನ ವಿದ್ಯೋದಯ ಕಾನೂನು ಶಿಕ್ಷಣ ಸಂಸ್ಥೆಯ ಟ್ರಸ್ಟಿಗಳಾದ ಶ್ರೀ ಪ್ರೋ. ಹೆಚ್. ಎಸ್. ಶೇಷಾದ್ರಿ ಅವರ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ತುಮಕೂರಿನಲ್ಲಿ ಶಿಕ್ಷಣ ಹಾಗೂ ವಲಯದಲ್ಲಿ ಶೇಷಾದ್ರಿ ಅವರು ತಮ್ಮದೇ ಕೊಡುಗೆ ನೀಡಿದ್ದಾರೆ. ವಿದ್ಯೋದಯ ಕಾನೂನು ವಿದ್ಯಾಲಯ ಹಾಗೂ ಕೆಂಪೇಗೌಡ ಪಟ್ಟಣ ಸಹಕಾರ ಬ್ಯಾಂಕಿನ ಸಂಸ್ಥಾಪಕರಾಗಿ ಅಪೂರ್ವ ಸೇವೆ ಸಲ್ಲಿಸಿದ್ದಾರೆ ಲಯನ್ ಶೇಷಾದ್ರಿ ಎಂದೇ ಹೆಸರುವಾಸಿಯಾಗಿದ್ದರು.
ಭಗವಂತನು ಅವರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ದಯಪಾಲಿಸಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
[31/08, 6:30 PM] Deepak Karade. CM. Media. office: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಅತಿವೃಷ್ಟಿ, ಪ್ರವಾಹ ಕುರಿತಂತೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದರು. ಸಚಿವರಾದ ವಿ.ಸೋಮಣ್ಣ, ಡಾ. ಸಿ.ಎನ್. ಅಶ್ವತ್ಥನಾರಾಯಣ, ಎಸ್.ಟಿ. ಸೋಮಶೇಖರ್, ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಬಿಡಿಎ ಆಯುಕ್ತ ಜಿ. ಕುಮಾರ ನಾಯಕ್, ಬೆಂಗಳೂರು ಜಲಮಂಡಳಿ ಅಧ್ಯಕ್ಷ ಎನ್. ಜಯರಾಂ, ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Post a Comment