ಬೆಂಗಳೂರು, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ) :

 ಮಾಧ್ಯಮ ಆಹ್ವಾನ

Media Invitation

1. ವಸತಿ ಇಲಾಖೆ ಹಾಗೂ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಯೋಜನೆಯಡಿ ನಿರ್ಮಿಸಲಾಗಿರುವ ವಸತಿ ಸಮುಚ್ಛಯಗಳ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ :


ಉದ್ಘಾಟನೆ :
ಬಸವರಾಜ್ ಎಸ್ ಬೊಮ್ಮಾಯಿ,
ಸನ್ಮಾನ್ಯ ಮುಖ್ಯಮಂತ್ರಿಗಳು, ಕರ್ನಾಟಕ ಸರ್ಕಾರ
 
ವಿಶೇಷ ಆಹ್ವಾನಿತರು
ಶ್ರೀಮತಿ ನಿರ್ಮಲಾ ಸೀತಾರಾಮನ್
ಮಾನ್ಯ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರು, ಭಾರತ ಸರ್ಕಾರ

ಶ್ರೀ ರಾಜೀವ್ ಚಂದ್ರಶೇಖರ್,
ಮಾನ್ಯ ಕೇಂದ್ರ ಕೌಶಲಾಭಿವೃದ್ಧಿ ಮತ್ತು ಉದ್ಯಮಶೀಲತೆ, ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರು, ಭಾರತ ಸರ್ಕಾರ.

ಘನ ಉಪಸ್ಥಿತಿ :
ವಿ.ಸೋಮಣ್ಣ
ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರು, ಕರ್ನಾಟಕ ಸರ್ಕಾರ

ಅಧ್ಯಕ್ಷತೆ :
ಎಸ್.ಆರ್.ವಿಶ್ವನಾಥ್
ಮಾನ್ಯ ಶಾಸಕರು, ಯಲಹಂಕ ವಿಧಾನಸಭಾ ಕ್ಷೇತ್ರ ಹಾಗೂ ಅಧ್ಯಕ್ಷರು, ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ
 
ದಿನಾಂಕ: 07-09-2022, ಬುಧವಾರ   ಸಮಯ: ಬೆಳಿಗ್ಗೆ 10.30 ಗಂಟೆಗೆ
 
ಸ್ಥಳ : ಅಗ್ರಹಾರ ಪಾಳ್ಯ, ಸರ್ವೆ ನಂ.30, ಯಲಹಂಕ ತಾಲ್ಲೂಕು, ಬೆಂಗಳೂರು.

ವಿ. ಸೂ : ಕಾರ್ಯಕ್ರಮಕ್ಕೆ ಪತ್ರಕರ್ತರನ್ನು ಕರೆದೊಯ್ಯಲು ವಾಹನ ವ್ಯವಸ್ಥೆ ಮಾಡಲಾಗಿದ್ದು, ವಾಹನವು ಅಂದು ಬೆಳಿಗ್ಗೆ 8.30 ಕ್ಕೆ ಬೆಂಗಳೂರು ಪ್ರೆಸ್‍ಕ್ಲಬ್‍ನಿಂದ ಹೊರಡಲಿದೆ. ಮಾಧ್ಯಮ ಸಮನ್ವಯಕ್ಕಾಗಿ ನಾರಾಯಣ್ ದೂರವಾಣಿ ಸಂಖ್ಯೆ : 99167 48859, ಸಂಜಯ್ 94485 12873  ನ್ನು ಸಂಪರ್ಕಿಸುವುದು.


ಪತ್ರಿಕಾ ಪ್ರಕಟಣೆ
PRESS RELEASE


ಶೀಘ್ರವೇ ವೇತನ ಆಯೋಗ ರಚನೆಗೆ ಕ್ರಮ - ಮುಖ್ಯಮಂತ್ರಿ ಘೋಷಣೆ

ಬೆಂಗಳೂರು, ಸೆಪ್ಟೆಂಬರ್ 6 (ಕರ್ನಾಟಕ ವಾರ್ತೆ) :

ರಾಜ್ಯ ಸರ್ಕಾರಿ ನೌಕರರಿಗೆ ವೇತನ ಮತ್ತಿತರ ಭತ್ಯೆಗಳನ್ನು ಪರಿಷ್ಕರಿಸಲು ಇದೇ ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಲ್ಲಿ ಇಂದು ಘೋಷಿಸಿದರು.

ಇಂದು ವಿಧಾನ ಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಸಹಯೋಗದಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆಯೋಜಿಸಿದ್ದ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ” ಅಂಗವಾಗಿ ಸರ್ಕಾರಿ ಸೇವೆಯಲ್ಲಿ ಅತ್ಯುನ್ನತ ಸೇವೆಗೈದ ರಾಜ್ಯ ಸರ್ಕಾರಿ ನೌಕರರಿಗೆ ನೀಡಲಾಗುವ ಸರ್ವೋತ್ತಮ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಸನ್ಮಾನ್ಯ ಮುಖ್ಯಮಂತ್ರಿಗಳು, ಸರ್ಕಾರಿ ನೌಕರರು ವಿಶೇಷವಾಗಿ ಪತ್ರಾಂಕಿತ ಎ ಮತ್ತು ಬಿ ಗುಂಪಿನ ನೌಕರರು, ಪುಣ್ಯ ಕೋಟಿ ಯೋಜನೆಯಡಿ 11,000 ರೂಪಾಯಿ ನೀಡಿ, ಗೋವುಗಳನ್ನು ದತ್ತು ಪಡೆದು, ಗೋ ಸಂರಕ್ಷಣೆ ಮಾಡುವಂತೆ ಮನವಿ ಮಾಡಿದರು.

ಸರ್ಕಾರಿ ನೌಕರರು, ಸರ್ಕಾರದ ಪ್ರಮುಖವಾದ ಒಂದು ಭಾಗ ಮತ್ತು ಅಂಗ. ಬೆಳಿಗ್ಗೆಯಿಂದ ಸಂಜೆಯವರೆಗೆ ಮಾಡುವ ಕೆಲಸ ಕರ್ತವ್ಯ ಎನಿಸುತ್ತದೆ. ಬದುಕಿನಲ್ಲಿ ಸೇವೆ ಮಾಡಿ ಸಂತೃಪ್ತಿ ಪಡೆಯುವುದು ಕಾಯಕ. ಸರ್ಕಾರಕ್ಕೆ ತೆರಿಗೆ ಪಾವತಿಸುವ ಪ್ರಜೆಗಳೇ ನಮ್ಮ ಮಾಲೀಕರು. ಆದಕಾರಣ, ಕಾಲಕ್ಕೆ ತಕ್ಕಂತೆ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಪ್ರಜೆಗಳ ನೋವು ನಲಿವುಗಳಿಗೆ ಸ್ಪಂದಿಸಿ ಎಂದು ಸರ್ಕಾರಿ ನೌಕರರಿಗೆ ತಿಳಿಸಿದರು.  

ರಾಜ್ಯ ಸರ್ಕಾರದ ವತಿಯಿಂದ ಪ್ರಪ್ರಥಮ ಬಾರಿಗೆ ಆಯೋಜಿಸಿದ್ದ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ”ಯ ಈ ಸುಸಂದರ್ಭದಲ್ಲಿ ಸರ್ಕಾರಿ ನೌಕರರಿಗೆ ಆರೋಗ್ಯ ಸಂಜೀವಿನಿ ನಗದು ರಹಿತ ವೈದ್ಯಕೀಯ ಸೇವಾ ಯೋಜನೆಗೆ ಚಾಲನೆ ನೀಡಿ, 30 ನೌಕರರಿಗೆ ತಲಾ ಐವತ್ತು ಸಾವಿರ ರೂಪಾಯಿ ನಗದು ಒಳಗೊಂಡ ರಾಜ್ಯ ಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು.

ಇದೇ ಸಂದರ್ಭದಲ್ಲಿ ಕರ್ನಾಟಕ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ ಎಸ್ ಷಡಾಕ್ಷರಿ ಅವರು ಮಾತನಾಡಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ರಾಜ್ಯ ಸರ್ಕಾರಿ ನೌಕರರಿಗೆ ಅನುಕೂಲವಾಗುವ 19 ಆದೇಶಗಳನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ನಾಗರೀಕ ಸೇವಾ ದಿನಾಚರಣೆ ಹೊರತುಪಡಿಸಿದರೆ  ಬೇರಾವುದೇ ರಾಜ್ಯ ಸರ್ಕಾರ ತನ್ನ ನೌಕರರ ದಿನಾಚರಣೆ ಆಚರಿಸುತ್ತಿಲ್ಲ. ಪ್ರಪ್ರಥಮ ಬಾರಿಗೆ “ರಾಜ್ಯ ಸರ್ಕಾರಿ ನೌಕರರ ದಿನಾಚರಣೆ”ಯನ್ನು ನಮ್ಮ ಕರ್ನಾಟಕದಲ್ಲಿ ಆಚರಿಸುತ್ತಿರುವುದು ನನಗೆ ತುಂಬಾ ಸಂತೋಷವನ್ನುಂಟು ಮಾಡಿದೆ. ಇದಕ್ಕೆ ಸರ್ಕಾರಕ್ಕೆ ತುಂಬು ಹೃದಯದ ಧನ್ಯವಾದಗಳನ್ನು ಸಲ್ಲಿಸುತ್ತಾ, ಇನ್ನು ಮುಂದೆ ಸೆಪ್ಟೆಂಬರ್ 06ನ್ನು ರಾಜ್ಯ ಸರ್ಕಾರಿ ನೌಕರರ ದಿನಾಚರಣೆಯನ್ನಾಗಿ ಆಚರಿಸಲಾಗುವುದು ಎಂದು ತಿಳಿಸಿದರು.

ಅಲ್ಲದೆ, ಕೂಡಲೇ ಏಳನೇ ವೇತನ ಆಯೋಗವನ್ನು ಘೋಷಿಸಿ ರಾಜ್ಯ ಸರ್ಕಾರಿ ನೌಕರರಿಗೆ ಮತ್ತು ಅವರ ಕುಟುಂಬದ ಎಲ್ಲಾ ಸದಸ್ಯರಿಗೆ ನೆರವಾಗುವಂತೆ ಹಾಗೂ ಕೊಡುಗೆ ಆಧಾರಿತ ನೂತನ ಪಿಂಚಣಿ ಯೋಜನೆ ರದ್ದು ಪಡಿಸಿ ಹಳೆಯ ಪಿಂಚಣಿ ಯೋಜನೆಯನ್ನು ಅನುμÁ್ಠನಗೊಳಿಸಿ ಹೊಸ ಪೀಳಿಗೆಯ ಎರಡೂವರೆ ಲಕ್ಷ ನೌಕರರ ಬಾಳಲ್ಲಿ ಬೆಳಕು ಮೂಡಿಸುವಂತೆ ಸಿ. ಎಸ್. ಷಡಾಕ್ಷರಿ ಅವರು ಮುಖ್ಯಮಂತ್ರಿಯವರಲ್ಲಿ ಬೇಡಿಕೆ ಇಟ್ಟರು.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ತಮ್ಮ ಪ್ರಾಸ್ತಾವಿಕ ಭಾಷಣದಲ್ಲಿ ಮಾತನಾಡಿ ಸರ್ಕಾರಿ ಸೇವೆಗೆ ಬರಲು ದೇವರ ಆಶೀರ್ವಾದ ಇರಬೇಕು. ಆದಕಾರಣ, ಸರ್ಕಾರಿ ನೌಕರರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಸಲಹೆ ನೀಡಿದರು.

ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸಂಪುಟ ಶಾಖೆಯ ಉಪ ಕಾರ್ಯದರ್ಶಿ ಆರ್ ಚಂದ್ರಶೇಖರ್ ಅವರು ಪ್ರಶಸ್ತಿ ಪುರಸ್ಕøತರ ಪರವಾಗಿ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಯಶಸ್ಸಿಗೆ ಶ್ರಮಿಸಿದ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಆಡಳಿತ ಸುಧಾರಣಾ ವಿಭಾಗದ ಅಧೀನ ಕಾರ್ಯದರ್ಶಿ ಬಿ ಎಸ್ ಲಕ್ಷ್ಮಣ್ ಅವರನ್ನು ಮುಖ್ಯಮಂತ್ರಿ ಗೌರವಿಸಿದರು.

ಈ ಮುನ್ನ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಕಾರ್ಯದರ್ಶಿ ಪಿ ಹೇಮಲತಾ ಅವರು ಸ್ವಾಗತಿಸಿದರು.

ಕಂದಾಯ ಸಚಿವ ಆರ್ ಅಶೋಕ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ್ ಅವರೂ ಸೇರಿದಂತೆ ಹಲವು ಗಣ್ಯರು ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಅಕ್ಟೋಬರ್ ತಿಂಗಳಲ್ಲಿ ಏಳನೇ ವೇತನ ಆಯೋಗವನ್ನು ರಚಿಸುವುದಾಗಿ ಘೋಷಿಸಿದ ಮುಖ್ಯಮಂತ್ರಿಯವರ ಹೇಳಿಕೆಯನ್ನು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ  ಸಿ ಎಸ್ ಷಡಾಕ್ಷರಿ ಅವರು ಹೃದಯಪೂರ್ವಕ ಸ್ವಾಗತಿಸಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.


ವಸತಿ ಸಮುಚ್ಛಯಗಳ ಲೋಕಾರ್ಪಣೆ ಹಾಗೂ ಹಕ್ಕುಪತ್ರ ವಿತರಣೆ

ಬೆಂಗಳೂರು, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ) :

ವಸತಿ ಇಲಾಖೆಯ ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ಆಯೋಜಿಸಿದ ಆರ್ಥಿಕವಾಗಿ ಹಿಂದುಳಿದವರಿಗಾಗಿ ಸೂರು ಕಲ್ಪಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿಗಳ 1 ಲಕ್ಷ ಬಹುಮಹಡಿ ಯೋಜನೆಯ ಅಡಿಯಲ್ಲಿ ನಿರ್ಮಿತವಾಗಿರುವ ವಸತಿ ಸಮುಚ್ಛಯಗಳ ಲೋಕಾರ್ಪಣೆ ಹಾಗೂ ಹಕ್ಕುಪತ್ರ ವಿತರಣೆ ಕಾರ್ಯಕ್ರಮ ಯಲಹಂಕ ತಾಲೂಕಿನ ಅಗ್ರಹಾರಪಾಳ್ಯದಲ್ಲಿ ನಡೆಯಲಿದೆ  

ಮುಖ್ಯಮಂತ್ರಿಗಳಾದ  ಬಸವರಾಜ್ ಎಸ್. ಬೊಮ್ಮಾಯಿ ಅವರು ವಸತಿ ಸಮುಚ್ಛಯಗಳ ಲೋಕಾರ್ಪಣೆ ಮತ್ತು ವಸತಿಗಳ ಹಸ್ತಾಂತರ ಮಾಡಲಿದ್ದಾರೆ. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್, ಕೇಂದ್ರ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ, ಮಾಹಿತಿ ತಂತ್ರಜ್ಞಾನ ರಾಜ್ಯ ಸಚಿವರಾದ ರಾಜೀವ್ ಚಂದ್ರಶೇಖರ್, ಮಾನ್ಯ ವಸತಿ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಸಚಿವರಾದ ವಿ.ಸೋಮಣ್ಣ ಅವರು ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಇನ್ನು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬಿಡಿಎ ಅಧ್ಯಕ್ಷರು ಹಾಗೂ ಯಲಹಂಕ ಶಾಸಕರಾದ ಎಸ್. ಆರ್ ವಿಶ್ವನಾಥ್ ವಹಿಸಲಿದ್ದಾರೆ.

ವನ್ಯ ಪ್ರಾಣಿ ಸಪ್ತಾಹದ ಛಾಯಾಗ್ರಹಣ ಸ್ಪರ್ಧೆ ಮತ್ತು ಛಾಯಾಚಿತ್ರಗಳ ಪ್ರದರ್ಶನ

ಬೆಂಗಳೂರು, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ) :

ಮೈಸೂರು ಮೃಗಾಲಯವು ವನ್ಯಪ್ರಾಣಿ ಸಪ್ತಾಹದ ಅಂಗವಾಗಿ ವನ್ಯಪ್ರಾಣಿ ಛಾಯಾಗ್ರಹಣ ಸ್ಪರ್ಧೆ ಮತ್ತು ಛಾಯಾಚಿತ್ರಗಳ ಪ್ರದರ್ಶನವನ್ನು ಮೃಗಾಲಯದ ಗ್ರಂಥಾಲಯದಲ್ಲಿ ಅಕ್ಟೋಬರ್ 2 ರಿಂದ 8, 2022 ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ರವರೆಗೆ ಹಮ್ಮಿಕೊಳ್ಳಲಾಗಿದೆ.
ಪ್ರದರ್ಶನದಲ್ಲಿ  ವನ್ಯಜೀವಿ ಪ್ರವರ್ಗ, ಮೃಗಾಲಯ ಪ್ರವರ್ಗ ಎಂಬ ಎರಡು ಪ್ರವರ್ಗಗಳಿರುತ್ತವೆ. ಪ್ರತಿ ಪ್ರವರ್ಗಕ್ಕೆ ಮೌಂಟ್ ಮಾಡದಿರುವ 12x18 ಅಳತೆಯ ತಲಾ 2 ಛಾಯಾಚಿತ್ರಗಳನ್ನು ಮಾತ್ರ ಸ್ಪರ್ಧೆಗೆ ಅಂಗೀಕರಿಸಲಾಗುವುದು.  ಸ್ಪರ್ಧೆಯ ಪ್ರತಿ ಪ್ರವರ್ಗಕ್ಕೆ ನಿಗದಿಪಡಿಸಿರುವ ಪ್ರವೇಶ ಸುಲ್ಕ ರೂ.100/- ಮಾತ್ರ ಪ್ರತಿ ಒಂದು ಪ್ರವರ್ಗಕ್ಕೆ 3 ನಗದು ಬಹುಮಾನಗಳು ಮತ್ತು 4 ಪ್ರಮಾಣಪತ್ರಗಳು ಇರಲಿವೆ. ಈ ಹಿಂದೆ ಮೈಸೂರು ಮೃಗಾಳಯದಲ್ಲಿ ಪ್ರದರ್ಶಿಸಲಾದ ಚಾಯಾಚಿತ್ರಗಳನ್ನು ಸ್ಪರ್ಧೆಗೆ ಅಂಗೀಕರಿಸಲಾಗುವುದಿಲ್ಲ.
ಪ್ರವೇಶಗಳನ್ನು ಸ್ವೀಕರಿಸಲು ಅಂತಿಮ ದಿನಾಂಕ ಸೆಪ್ಟೆಂಬರ್ 20, 2022, ಬಹುಮಾನಿತರನ್ನು ಆಯ್ಕೆ ಮಾಡುವ ದಿನಾಂಕ ಸೆಪ್ಟೆಂಬರ್ 27, 2022, ಛಾಯಾಚಿತ್ರ ಪ್ರದರ್ಶನ ನಡೆಯುವ ದಿನಾಂಕ ಅಕ್ಟೋಬರ್ 02 ರಿಂದ 8, 2022.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 080 2440752 / 9686668099 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ರಾಷ್ಟ್ರೀಯ ಲೋಕ್ ಅದಾಲತ್

ಬೆಂಗಳೂರು, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ) :

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ರಾಷ್ಟ್ರೀಯ ಲೋಕ್ ಅದಾಲತ್‍ನ್ನು ನವೆಂಬರ್ 12 ರಂದು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಹಾಗೂ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಈ ಲೋಕ್ ಅದಾಲತ್‍ನಲ್ಲಿ ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ಕೈಗಾರಿಕಾ ಕಾರ್ಮಿಕರ ವೇತನಕ್ಕೆ ಸಂಬಂಧಿಸಿದ ಕ್ಲೇಮುಗಳು, ವೈವಾಹಿಕ / ಕುಟುಂಬ ನ್ಯಾಯಾಲಯದ ಪ್ರಕರಣಗಳು (ವಿಚ್ಛೇದನೆಯನ್ನು ಹೊರತುಪಡಿಸಿ), ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು ಮತ್ತು ರಾಜಿಯಾಗಬಲ್ಲ ಸಿವಿಲ್ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ಲೋಕ್ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಮತ್ತು ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಇಚ್ಚಿಸಿದಲ್ಲಿ ಮುಂಚಿತವಾಗಿ ಸಂಬಂಧಪಟ್ಟ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ತಾಲ್ಲೂಕು ಕಾನೂನು ಸೇವಾ ಸಮಿತಿಗಳನ್ನು ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದಾಗಿದೆ.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಪ್ರಕರಣ ನಡೆಯುತ್ತಿರುವ ನ್ಯಾಯಾಲಯಕ್ಕೆ ಪ್ರಕರಣ ರಾಜೀ ಮಾಡಿಕೊಳ್ಳುವ ಕುರಿತು ತಿಳಿಸುವ ಮೂಲಕ ಅಥವಾ ಅರ್ಜಿ ಸಲ್ಲಿಸುವ ಮೂಲಕ ಪ್ರಕರಣ ಇತ್ಯರ್ಥಡಿಕೊಳ್ಳಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಟೋಲ್ ಫ್ರೀ ಸಂಖ್ಯೆ 1800-425-90900 ಹಾಗೂ ವೆಬ್‍ಸೈಟ್ www.kslsa.kar.nic.in     ಅಥವಾ ಹತ್ತಿರದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿಯವರನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಉದ್ಯೋಗ ಮೇಳ

ಬೆಂಗಳೂರು, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ) :


ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಕೆ.ಆರ್. ಪುರಂ ಹಾಗೂ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಕೆ.ಜಿ. ರಸ್ತೆ ಬೆಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಉದ್ಯೋಗಾಕಾಂಕ್ಷಿ ಅಭ್ಯರ್ಥಿಗಳಿಗೆ ಉದ್ಯೋಗವನ್ನು ಒದಗಿಸುವ ದೃಷ್ಠಿಯಿಂದ ಹಲವು ಖಾಸಗಿ ಸಂಸ್ಥೆಗಳ ಸಹಯೋಗದಲ್ಲಿ ಸೆಪ್ಟೆಂಬರ್ 08, 2022ರಂದು ಬೆಳಿಗ್ಗೆ 9.30 ಗಂಟೆಯಿಂದ ಸಂಜೆ 4.00 ಗಂಟೆಯವರೆಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆ.ಆರ್.ಪುರಂ ಇಲ್ಲಿ ಉದ್ಯೋಗಮೇಳವನ್ನು ಆಯೋಜಿಸಲಾಗಿದೆ.

ಈ ಮೇಳದಲ್ಲಿ ಐ.ಟಿ.ಐ (ಎಲ್ಲಾ ಟ್ರೇಡ್‍ಗಳು), ಡಿಪ್ಲೋಮ, ಸಾಮಾನ್ಯ ಪದವೀಧರರು ಹಾಗೂ ಸ್ನಾತಕೋತ್ತರ ಪದವಿ ತೇರ್ಗಡೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ತಮ್ಮ ವೈಯಕ್ತಿಕ ವಿವರಗಳುಳ್ಳ ಬಯೋಡಟಾದ ಹಲವು ಪ್ರತಿಗಳೊಂದಿಗೆ ಪಾಲ್ಗೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ದೂರವಾಣಿ ಸಂ. 91480 28116, 96329 07035ಮತ್ತು 91415 55520 ನ್ನು ಸಂಪರ್ಕಿಸಬಹುದಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


ಎಸ್ಸಿ-ಎಸ್ಟಿ ಗ್ರಾಹಕರಿಗೆ ಉಚಿತ ವಿದ್ಯುತ್ ಅನುμÁ್ಠನಕ್ಕೆ ಹೊಸ ಆಪ್

ಬೆಂಗಳೂರು, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ) :

ರಾಜ್ಯದ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಕುಟುಂಬಗಳಿಗೆ ಮಾಸಿಕ 75 ಯೂನಿಟ್ ಗೃಹ ಬಳಕೆಯ ʼಅಮೃತ ಜ್ಯೋತಿʼ ಉಚಿತ ವಿದ್ಯುತ್ ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಆಗಸ್ಟ್ 24, 2022 ರಂದು ಹೊರಡಿಸಿದ್ದ ಮಾರ್ಗಸೂಚಿ ಸುತ್ತೋಲೆಯನ್ನು ಇ-ಆಡಳಿತ ಇಲಾಖೆಯು  ಭಾಗಶ: ಪರಿಷ್ಕರಿಸಿದ್ದರಿಂದ ಸುತ್ತೋಲೆಯನ್ನು ಸೆಪ್ಟೆಂಬರ್ 3, 2022 ರಂದು ಹಿಂಪಡೆಯಲಾಗಿದೆಯೇ ಹೊರತು, ಯೋಜನೆಯನ್ನು ರದ್ದು ಪಡಿಸಿಲ್ಲ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಬಿಪಿಎಲ್ ಕುಟುಂಬದ ಎಸ್ಸಿ -ಎಸ್ಟಿ ಗ್ರಾಹಕರಿಗೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ನೀಡುವ ಅಮೃತ ಜ್ಯೋತಿ ವಿದ್ಯುತ್ ಯೋಜನೆಯನ್ನು ರಾಜ್ಯ ಸರಕಾರದ ಮೇ 18, 2022 ರಂದು ರಾಜ್ಯಾದ್ಯಂತ ಜಾರಿಗೆ ತಂದಿತ್ತು.

ಈ ಯೋಜನೆಯ ಪ್ರಯೋಜನವು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಿಪಿಎಲ್ ಕುಟುಂಬಗಳಿಗೆ ಸುಲಭ ಮತ್ತು ಸುಲಲಿತವಾಗಿ ಅನುμÁ್ಠನಗೊಳಿಸಲು ಇ-ಆಡಳಿತ ಇಲಾಖೆಯು ಹೊಸ ಆಪ್ ಒಂದನ್ನು ಅಭಿವೃದ್ದಿಪಡಿಸುತ್ತಿದೆ.

ಈ ಯೋಜನೆಯನ್ನು ರದ್ದುಗೊಳಿಸಲಾಗಿದೆ ಎಂಬ ತಪ್ಪು ಮಾಹಿತಿಯು ಸಾರ್ವಜನಿಕರಲ್ಲಿ ಗೊಂದಲ ಮೂಡಿಸಿದೆ. ಯೋಜನೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಅನುμÁ್ಠನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಬೆಸ್ಕಾಂ ತಿಳಿಸಿದೆ.

ಈ ಯೋಜನೆಯ ಪ್ರಯೋಜನ ಸುಮಾರು 39 ಲಕ್ಷ ಬಿಪಿಎಲ್ ಕುಟುಂಬಗಳ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಗ್ರಾಹಕರಿಗೆ ಸಿಗಲಿದ್ದು, ಈಗಾಗಲೇ 4 ಲಕ್ಷ ಫಲಾನುಭವಿಗಳನ್ನು ಗುರುತಿಸಲಾಗಿದೆ.

ಮೇ ಮತ್ತು ಜೂನ್ ತಿಂಗಳ ವಿದ್ಯುತ್ ಬಿಲ್ ಮೊತ್ತವನ್ನು ವನ್ನು ಸುಮಾರು 15000 ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ಮರುಪಾವತಿಸಲಾಗಿದೆ ಎಂದು ಬೆಸ್ಕಾಂ ತಿಳಿಸಿದೆ.

ಈ ಯೋಜನೆಯನ್ನು ಇ-ಆಡಳಿತ ಇಲಾಖೆಯ ಸಹಯೋಗದೊಂದಿಗೆ ಡಿಬಿಟಿ ವ್ಯವಸ್ಥೆಯಡಿ ಜಾರಿಗೊಳಿಸಲಾಗಿದೆ. ಫಲಾನುಭವಿ ಗ್ರಾಹಕರಿಗೆ ತಾವು ಪಾವತಿಸಿದ ಒಟ್ಟು ವಿದ್ಯುತ್ ಬಿಲ್ಲಿನ ಮೊತ್ತದಲ್ಲಿ 75 ಯೂನಿಟ್‍ಗಳ ವರೆಗಿನ ವಿದ್ಯುತ್ ಶುಲ್ಕದ ಮೊತ್ತವನ್ನು ಅವರ ಬ್ಯಾಂಕ್ ಖಾತೆಗೆ ನೇರ ವರ್ಗಾವಣೆ ಮಾಡಲಾಗುತ್ತಿದೆ.


ಗೆಜೆಟೆಡ್ ಪ್ರೊಬೇಷನರಿ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಬೆಂಗಳೂರು, ಸೆಪ್ಟೆಂಬರ್ 06 (ಕರ್ನಾಟಕ ವಾರ್ತೆ) :

ಕರ್ನಾಟಕ ಲೋಕಸೇವಾ ಆಯೋಗವು 2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 106 ಹುದ್ದೆಗಳ (ಆರ್.ಪಿ.ಸಿ 94 ಮತ್ತು ಹೆಚ್.ಕೆ 12) ತಾತ್ಕಾಲಿಕ ಆಯ್ಕೆಪಟ್ಟಿ ಮತ್ತು ಕಟ್‍ಆಪ್ ಅಂಕಗಳನ್ನು ಅಭ್ಯರ್ಥಿಗಳ ಮಾಹಿತಿಗಾಗಿ ಸೆಪ್ಟೆಂಬರ್ 5 ರಂದು ಆಯೋಗದ ಜಾಲತಾಣ http://kpsc.kar.nic.in/list  ನಲ್ಲಿ  ಪ್ರಕಟಿಸಲಾಗಿದೆ.

ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳನ್ನು ಸಲ್ಲಿಸ ಬಯಸುವ ಅಭ್ಯರ್ಥಿಗಳು ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟವಾದ ಏಳು ದಿನಗಳೊಳಗಾಗಿ ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು ಇವರ ವಿಳಾಸಕ್ಕೆ ಅಂಚೆ ಮುಖಾಂತರ ಅಥವಾ ಇ-ಮೇಲ್ ವಿಳಾಸ   kpsc-ka@nic.in     ಮುಖಾಂತರ ಸಲ್ಲಿಸಬಹುದು. ನಿಗಧಿತ ದಿನಾಂಕದ ನಂತರ ಸಲ್ಲಿಸುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.


THANKS




DIRECTOR,
DEPARTMENT OF INFORMATION AND PUBLIC RELATIONS,
GOVERNMENT OF KARNATAKA,
VARTHA SOUDHA,
No. 17, BHAGAWAN MAHAVEER ROAD, 
BENGALURU - 560 001

TELEPHONE : 080-2202 8032, 080-2202 8034, 080-2202 8037

FAX No 080-2202 8041, 080-2286 3794


--
You received this message because you are subscribed to the Google Groups "varthasoudhabengaluru" group.
To unsubscribe from this group and stop receiving emails from it, send an email to varthasoudhabengaluru+unsubscribe@googlegroups.com.
To view this discussion on the web visit https://groups.google.com/d/msgid/varthasoudhabengaluru/CAM91mbBp1Q-cfqpHi8hjnn8a3V%3Db4w2oqjOrQHz3971DADsRbw%40mail.gmail.com.
2 Attachments
 
 

Samachar Network Of India

Attachments8:10 PM (1 hour ago)
to prkeditorK.R.

ಸೆಪ್ಟೆಂಬರ್ 06, 2022
,
7:45PM
ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಅವರ ಬಾಂಗ್ಲಾದೇಶದ ಸಹವರ್ತಿ ಶೇಖ್ ಹಸೀನಾ ಜಂಟಿಯಾಗಿ ಮೈತ್ರೀ ಪವರ್ ಪ್ರಾಜೆಕ್ಟ್‌ನ ಘಟಕ-I ಅನ್ನು ಅನಾವರಣಗೊಳಿಸಿದರು; ಎರಡು ದೇಶಗಳು 7 ಎಂಒಯುಗಳಿಗೆ ಸಹಿ ಹಾಕಿದವು
ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರು ಇಂದು ನವದೆಹಲಿಯಲ್ಲಿ ದ್ವಿಪಕ್ಷೀಯ ಮಾತುಕತೆ ನಡೆಸಿದರು ಮತ್ತು ಭಾರತ-ಬಾಂಗ್ಲಾದೇಶದ ಸಹಭಾಗಿತ್ವವನ್ನು ಪರಿಶೀಲಿಸಲು ಮತ್ತು ಮತ್ತಷ್ಟು ಬಲಪಡಿಸಲು. ಉಭಯ ನಾಯಕರ ನೇತೃತ್ವದಲ್ಲಿ ಭಾರತ-ಬಾಂಗ್ಲಾ ನಿಯೋಗ ಮಟ್ಟದ ಮಾತುಕತೆ ನಡೆದಿದೆ. ಸಂಪರ್ಕ, ಇಂಧನ, ಜಲಸಂಪನ್ಮೂಲ, ವ್ಯಾಪಾರ ಮತ್ತು ಹೂಡಿಕೆ, ಗಡಿ ನಿರ್ವಹಣೆ ಮತ್ತು ಭದ್ರತೆ, ಅಭಿವೃದ್ಧಿ ಪಾಲುದಾರಿಕೆ ಮತ್ತು ಪ್ರಾದೇಶಿಕ ಮತ್ತು ಬಹುಪಕ್ಷೀಯ ವಿಷಯಗಳಿಗೆ ಸಂಬಂಧಿಸಿದ ವಿಷಯಗಳು ಕಾರ್ಯಸೂಚಿಯಲ್ಲಿವೆ.

ದೆಹಲಿಯಲ್ಲಿ ದ್ವಿಪಕ್ಷೀಯ ಮತ್ತು ನಿಯೋಗ ಮಟ್ಟದ ಮಾತುಕತೆಯ ನಂತರ ಇಬ್ಬರು ನಾಯಕರು ಜಂಟಿಯಾಗಿ ಮೈತ್ರೀ ಸೂಪರ್ ಥರ್ಮಲ್ ಪವರ್ ಪ್ರಾಜೆಕ್ಟ್‌ನ ಘಟಕ-I ಅನ್ನು ಅನಾವರಣಗೊಳಿಸಿದರು. ಈ ಯೋಜನೆಯನ್ನು ಭಾರತದ ರಿಯಾಯಿತಿ ಹಣಕಾಸು ಯೋಜನೆಯಡಿ ನಿರ್ಮಿಸಲಾಗುತ್ತಿದೆ. ಇದು ಬಾಂಗ್ಲಾದೇಶದ ರಾಷ್ಟ್ರೀಯ ಗ್ರಿಡ್‌ಗೆ 1320 MW ಅನ್ನು ಸೇರಿಸುತ್ತದೆ.

ಮಾತುಕತೆಯ ನಂತರ ಜಲಸಂಪನ್ಮೂಲ, ರೈಲ್ವೆ, ವಿಜ್ಞಾನ ಮತ್ತು ತಂತ್ರಜ್ಞಾನ, ಬಾಹ್ಯಾಕಾಶ ತಂತ್ರಜ್ಞಾನ ಸೇರಿದಂತೆ ಏಳು ತಿಳಿವಳಿಕೆ ಒಪ್ಪಂದಗಳನ್ನು ವಿನಿಮಯ ಮಾಡಿಕೊಳ್ಳಲಾಯಿತು. ಇದು ಪ್ರಸಾರ ಭಾರತಿ ಮತ್ತು ಬಾಂಗ್ಲಾದೇಶ ಟೆಲಿವಿಷನ್ ನಡುವೆ ಪ್ರಸಾರ ಕ್ಷೇತ್ರದಲ್ಲಿ ಸಹಕಾರದ ಕುರಿತು ತಿಳುವಳಿಕೆ ಪತ್ರವನ್ನು ಒಳಗೊಂಡಿದೆ.

ಇಂದು ಬೆಳಗ್ಗೆ ರಾಷ್ಟ್ರಪತಿ ಭವನದಲ್ಲಿ ಹಸೀನಾ ಅವರಿಗೆ ವಿಧ್ಯುಕ್ತ ಸ್ವಾಗತ ನೀಡಲಾಯಿತು. ನಾಲ್ಕು ದಿನಗಳ ಭೇಟಿಗಾಗಿ ನಿನ್ನೆ ಭಾರತಕ್ಕೆ ಆಗಮಿಸಿದ್ದರು.

ಕುಶಿಯಾರಾ ನದಿಯಿಂದ ನೀರು ಹಂಚಿಕೆ ಕುರಿತು ಮಹತ್ವದ ಒಪ್ಪಂದಕ್ಕೆ ಇಂದು ಸಹಿ ಹಾಕಲಾಗಿದೆ ಎಂದು ಪ್ರಧಾನಿ ಮೋದಿ ತಮ್ಮ ಪತ್ರಿಕಾ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ. ಇದು ಭಾರತದ ದಕ್ಷಿಣ ಅಸ್ಸಾಂ ಮತ್ತು ಬಾಂಗ್ಲಾದೇಶದ ಸಿಲ್ಹೆಟ್ ಪ್ರದೇಶಕ್ಕೆ ಪ್ರಯೋಜನವನ್ನು ನೀಡುತ್ತದೆ. ಭಾರತ-ಬಾಂಗ್ಲಾದೇಶದ ಗಡಿಯಲ್ಲಿ 54 ನದಿಗಳು ಹಾದು ಹೋಗುತ್ತವೆ ಮತ್ತು ಶತಮಾನಗಳಿಂದ ಎರಡೂ ದೇಶಗಳ ಜನರ ಜೀವನೋಪಾಯಕ್ಕೆ ಸಂಬಂಧಿಸಿವೆ ಎಂದು ಅವರು ತಿಳಿಸಿದರು. ಈ ನದಿಗಳು, ಅವುಗಳ ಕುರಿತಾದ ಜಾನಪದ ಕಥೆಗಳು, ಜಾನಪದ ಗೀತೆಗಳು, ಹಂಚಿದ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿವೆ ಎಂದರು.

ಭಯೋತ್ಪಾದನೆ ಮತ್ತು ಮೂಲಭೂತವಾದದ ವಿರುದ್ಧ ಸಹಕಾರದ ಬಗ್ಗೆಯೂ ಅವರು ಒತ್ತಿ ಹೇಳಿದರು ಎಂದು ಶ್ರೀ ಮೋದಿ ಹೇಳಿದರು. 1971ರ ಚೈತನ್ಯವನ್ನು ಜೀವಂತವಾಗಿರಿಸಲು, ಎರಡೂ ರಾಷ್ಟ್ರಗಳ ಪರಸ್ಪರ ನಂಬಿಕೆಯ ಮೇಲೆ ದಾಳಿ ಮಾಡಲು ಬಯಸುವ ಇಂತಹ ಶಕ್ತಿಗಳನ್ನು ಒಟ್ಟಾಗಿ ಎದುರಿಸುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು.

ಭಾರತ ಮತ್ತು ಬಾಂಗ್ಲಾದೇಶ ಬಾಂಧವ್ಯ ಹೊಸ ಎತ್ತರವನ್ನು ಮುಟ್ಟಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದ್ವಿಪಕ್ಷೀಯ ವ್ಯಾಪಾರವು ವೇಗವಾಗಿ ಬೆಳೆಯುತ್ತಿದೆ ಮತ್ತು ಬಾಂಗ್ಲಾದೇಶ ಇಂದು ಭಾರತದ ಅತಿದೊಡ್ಡ ಅಭಿವೃದ್ಧಿ ಪಾಲುದಾರ ಮತ್ತು ಈ ಪ್ರದೇಶದಲ್ಲಿ ಅತಿದೊಡ್ಡ ವ್ಯಾಪಾರ ಪಾಲುದಾರ ಎಂದು ಅವರು ಹೇಳಿದರು. ಏಷ್ಯಾದಾದ್ಯಂತ, ಬಾಂಗ್ಲಾದೇಶದಿಂದ ರಫ್ತಿಗೆ ಭಾರತವು ಅತಿದೊಡ್ಡ ಮಾರುಕಟ್ಟೆಯಾಗಿದೆ ಎಂದು ಅವರು ಹೇಳಿದರು. ಈ ಪ್ರಗತಿಯನ್ನು ಮತ್ತಷ್ಟು ವೇಗಗೊಳಿಸಲು, ಭಾರತವು ಶೀಘ್ರದಲ್ಲೇ ದ್ವಿಪಕ್ಷೀಯ ಆರ್ಥಿಕ ಸಮಗ್ರ ಪಾಲುದಾರಿಕೆ ಒಪ್ಪಂದದ ಕುರಿತು ಚರ್ಚೆಗಳನ್ನು ಪ್ರಾರಂಭಿಸುತ್ತದೆ.

ಯುವ ಪೀಳಿಗೆಗೆ ಆಸಕ್ತಿಯಿರುವ ಐಟಿ, ಬಾಹ್ಯಾಕಾಶ ಮತ್ತು ಪರಮಾಣು ಶಕ್ತಿಯಂತಹ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸಲು ಭಾರತ ಮತ್ತು ಬಾಂಗ್ಲಾದೇಶ ನಿರ್ಧರಿಸಿದೆ ಎಂದು ಅವರು ಹೇಳಿದರು. ಹವಾಮಾನ ಬದಲಾವಣೆ ಮತ್ತು ಸುಂದರಬನ್‌ಗಳಂತಹ ಸಾಮಾನ್ಯ ಪರಂಪರೆಯನ್ನು ಸಂರಕ್ಷಿಸುವಲ್ಲಿ ಎರಡೂ ರಾಷ್ಟ್ರಗಳು ಸಹಕಾರವನ್ನು ಮುಂದುವರಿಸುತ್ತವೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಬಾಂಗ್ಲಾದೇಶ ಪ್ರಧಾನಿ, ಭಾರತವು ಸ್ನೇಹಿತ ಮತ್ತು ತನ್ನ ರಾಷ್ಟ್ರದ ವಿಮೋಚನಾ ಯುದ್ಧದ ಸಮಯದಲ್ಲಿ ಭಾರತ ನೀಡಿದ ಕೊಡುಗೆಯನ್ನು ಸ್ಮರಿಸಿದರು. ಇಂದಿನ ಚರ್ಚೆ ಫಲಪ್ರದವಾಗಲಿ ಎಂದು ಅವರು ಆಶಿಸಿದರು ಮತ್ತು ಆರ್ಥಿಕವಾಗಿ ಅಭಿವೃದ್ಧಿ ಹೊಂದುವುದು ಮತ್ತು ಜನರ ಮೂಲಭೂತ ಅಗತ್ಯಗಳನ್ನು ಪೂರೈಸುವುದು ಮುಖ್ಯ ಗುರಿಯಾಗಿದೆ ಎಂದು ಹೇಳಿದರು. ಶ್ರೀಮತಿ ಹಸೀನಾ ಅವರು ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಗೌರವ ಸಲ್ಲಿಸಿದರು.
   
ಬಾಂಗ್ಲಾದೇಶದ ಪ್ರಧಾನಿ ಇಂದು ಸಂಜೆ ಉಪಾಧ್ಯಕ್ಷ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿದರು. ವಿದೇಶಾಂಗ ಸಚಿವ ಡಾ.ಎಸ್.ಜೈಶಂಕರ್ ಅವರು ನಿನ್ನೆ ಭೇಟಿ ನೀಡಿದ ಗಣ್ಯರನ್ನು ಭೇಟಿ ಮಾಡಿದರು.

ಬಾಂಗ್ಲಾದೇಶ ಮತ್ತು ಭಾರತವು ನಾಲ್ಕು ಸಾವಿರ ಕಿಲೋಮೀಟರ್ ಉದ್ದದ ಅಂತರಾಷ್ಟ್ರೀಯ ಗಡಿಯನ್ನು ಹಂಚಿಕೊಂಡಿದೆ. ಅಸ್ಸಾಂ, ಮೇಘಾಲಯ, ಮಿಜೋರಾಂ, ತ್ರಿಪುರ ಮತ್ತು ಪಶ್ಚಿಮ ಬಂಗಾಳದ ಐದು ರಾಜ್ಯಗಳು ಬಾಂಗ್ಲಾದೇಶದ ಗಡಿಯಲ್ಲಿವೆ. 2015 ರಲ್ಲಿ ಭೂ ಗಡಿ ಒಪ್ಪಂದಕ್ಕೆ ಐತಿಹಾಸಿಕ ಪ್ರೋಟೋಕಾಲ್‌ನ ಅನುಮೋದನೆಯೊಂದಿಗೆ ಭೂ ಗಡಿಯನ್ನು ಎರಡು ಕಡೆಯ ನಡುವೆ ಸೌಹಾರ್ದಯುತವಾಗಿ ಇತ್ಯರ್ಥಗೊಳಿಸಲಾಗಿದೆ. ಭಾರತಕ್ಕೆ ವಿದೇಶಿ ಪ್ರವಾಸಿಗರ ಆಗಮನದಲ್ಲಿ ಬಾಂಗ್ಲಾದೇಶವು ಹೆಚ್ಚಿನ ಪಾಲನ್ನು ಹೊಂದಿದೆ. 2021-22 ರಲ್ಲಿ, ಬಾಂಗ್ಲಾದೇಶವು ದಕ್ಷಿಣ ಏಷ್ಯಾದಲ್ಲಿ ಭಾರತಕ್ಕೆ ಅತಿದೊಡ್ಡ ವ್ಯಾಪಾರ ಪಾಲುದಾರನಾಗಿ ಹೊರಹೊಮ್ಮಿದೆ ಮತ್ತು ಭಾರತಕ್ಕೆ 4 ನೇ ಅತಿದೊಡ್ಡ ರಫ್ತು ತಾಣವಾಗಿದೆ. ಕಳೆದ ಐದು ವರ್ಷಗಳಲ್ಲಿ, ದ್ವಿಪಕ್ಷೀಯ ವ್ಯಾಪಾರವು 9 ಶತಕೋಟಿಯಿಂದ 18 ಶತಕೋಟಿ ಡಾಲರ್‌ಗಳಿಗೆ ಬೆಳೆದಿದೆ.
ಸೆಪ್ಟೆಂಬರ್ 06, 2022
,
7:31 PM
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ದೇಶಾದ್ಯಂತ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ
ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ದಾಳಿ ನಡೆಸಿದೆ. ದೆಹಲಿ-ಎನ್‌ಸಿಆರ್ ಮತ್ತು ಲಕ್ನೋ, ಚಂಡೀಗಢ, ಮುಂಬೈ, ಹೈದರಾಬಾದ್ ಮತ್ತು ಇತರ ನಗರಗಳಲ್ಲಿ ಹುಡುಕಾಟ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ವಿಚಾರದಲ್ಲಿ ಸಿಬಿಐ ಎಫ್‌ಐಆರ್‌ ಆಧರಿಸಿ ಇಡಿ ಪ್ರಕರಣ ದಾಖಲಾಗಿದೆ.

ಸಿಬಿಐ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಹೆಸರಿಸಲಾದ 15 ಆರೋಪಿಗಳಲ್ಲಿ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಕೂಡ ಸೇರಿದ್ದಾರೆ. ಹೊಸ ಮದ್ಯ ನೀತಿಯಲ್ಲಿ ನಿಯಮಗಳ ಉಲ್ಲಂಘನೆ ಮತ್ತು ಕಾರ್ಯವಿಧಾನದ ಲೋಪಗಳ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.

ಆಮ್ ಆದ್ಮಿ ಪಕ್ಷದ ಸರ್ಕಾರ ನೀತಿಯ ಅನುಷ್ಠಾನದಲ್ಲಿ ಅಕ್ರಮ ನಡೆದಿದೆ ಎಂದು ಬಿಜೆಪಿ ಟೀಕಿಸುತ್ತಿದೆ.
ಸೆಪ್ಟೆಂಬರ್ 06, 2022
,
4:51PM
ಭಾರತದಲ್ಲಿ ಡಿಮ್ಯಾಟ್ ಖಾತೆಗಳ ಸಂಖ್ಯೆ 10 ಕೋಟಿ ಗಡಿ ದಾಟಿದೆ
ಈ ವರ್ಷದ ಆಗಸ್ಟ್‌ನಲ್ಲಿ ಮೊದಲ ಬಾರಿಗೆ ದೇಶದಲ್ಲಿ ಡಿಮ್ಯಾಟ್ ಖಾತೆಗಳ ಸಂಖ್ಯೆ 10 ಕೋಟಿ ದಾಟಿದ ಕಾರಣ ಫೈಲ್ ಪಿಕ್‌ಇಂಡಿಯಾ ಹಣಕಾಸಿನ ಸೇರ್ಪಡೆಯಲ್ಲಿ ಒಂದು ಮೈಲಿಗಲ್ಲು ಕಂಡಿದೆ.



ಠೇವಣಿ ಸಂಸ್ಥೆಗಳು ನಾಟಿ ಬಿಡುಗಡೆ ಮಾಡಿದ ಮಾಹಿತಿಯ ಪ್ರಕಾರ

ಸೆಪ್ಟೆಂಬರ್ 06, 2022
,
4:51PM
ಭಾರತದಲ್ಲಿ ಡಿಮ್ಯಾಟ್ ಖಾತೆಗಳ ಸಂಖ್ಯೆ 10 ಕೋಟಿ ಗಡಿ ದಾಟಿದೆ
ಈ ವರ್ಷದ ಆಗಸ್ಟ್‌ನಲ್ಲಿ ಮೊದಲ ಬಾರಿಗೆ ದೇಶದಲ್ಲಿ ಡಿಮ್ಯಾಟ್ ಖಾತೆಗಳ ಸಂಖ್ಯೆ 10 ಕೋಟಿ ದಾಟಿದ ಕಾರಣ ಫೈಲ್ ಪಿಕ್‌ಇಂಡಿಯಾ ಹಣಕಾಸಿನ ಸೇರ್ಪಡೆಯಲ್ಲಿ ಒಂದು ಮೈಲಿಗಲ್ಲು ಕಂಡಿದೆ.

ಠೇವಣಿ ಸಂಸ್ಥೆಗಳಾದ ನ್ಯಾಷನಲ್ ಸೆಕ್ಯುರಿಟೀಸ್ ಡಿಪಾಸಿಟರಿ ಲಿಮಿಟೆಡ್ (ಎನ್‌ಡಿಎಸ್‌ಎಲ್) ಮತ್ತು ಸೆಂಟ್ರಲ್ ಡಿಪಾಸಿಟರಿ ಸರ್ವೀಸಸ್ (ಸಿಡಿಎಸ್‌ಎಲ್) ಬಿಡುಗಡೆ ಮಾಡಿದ ಅಂಕಿಅಂಶಗಳ ಪ್ರಕಾರ, ಆಗಸ್ಟ್‌ನಲ್ಲಿ 22 ಲಕ್ಷಕ್ಕೂ ಹೆಚ್ಚು ಹೊಸ ಖಾತೆಗಳನ್ನು ತೆರೆಯಲಾಗಿದೆ, ಈ ಸಂಖ್ಯೆಯನ್ನು 10 ಕೋಟಿ ಮತ್ತು ಐದು ಲಕ್ಷಕ್ಕೆ ತೆಗೆದುಕೊಂಡಿದೆ.

ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಜಾಗೃತಿಯೊಂದಿಗೆ, ಮಾರ್ಚ್ 2020 ರಲ್ಲಿ ಕೇವಲ ನಾಲ್ಕು ಕೋಟಿ ಒಂಬತ್ತು ಲಕ್ಷದಿಂದ, ಕೋವಿಡ್ -19 ಏಕಾಏಕಿ ಮೊದಲು, ಕಳೆದ ತಿಂಗಳಲ್ಲಿ ಡಿಮ್ಯಾಟ್ ಖಾತೆಗಳ ಸಂಖ್ಯೆ ದ್ವಿಗುಣಗೊಂಡಿದೆ.

ಖಾತೆ ತೆರೆಯುವಿಕೆಯ ಸುಲಭತೆ, ಮೊಬೈಲ್ ಮತ್ತು ಡೇಟಾ ನುಗ್ಗುವಿಕೆಯಲ್ಲಿನ ಹೆಚ್ಚಳ ಮತ್ತು ಬ್ರೋಕರೇಜ್ ದರಗಳಲ್ಲಿನ ಕುಸಿತದಿಂದಾಗಿ ಮಾರುಕಟ್ಟೆಯಲ್ಲಿನ ತೀವ್ರ ಏರಿಕೆಗೆ ಕಾರಣವಾಗಿದೆ. ಇದು ಹೂಡಿಕೆಯ ಮಾರ್ಗವಾಗಿ ಡಿಮ್ಯಾಟ್ ಖಾತೆಗಳು ಮತ್ತು ಭಾರತೀಯ ಸೆಕ್ಯುರಿಟೀಸ್ ಮಾರುಕಟ್ಟೆಯನ್ನು ಜನರು ಸ್ವೀಕರಿಸುವುದನ್ನು ತೋರಿಸುತ್ತದೆ.
ಸೆಪ್ಟೆಂಬರ್ 06, 2022
,
7:54PM
ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್‌ನ 'ಟ್ರಸ್ಟ್‌ನ ಪಾಲುದಾರಿಕೆ' ವ್ಯಾಪಾರ, ತಂತ್ರಜ್ಞಾನ ಮತ್ತು ಪ್ರತಿಭೆಯ ಮೂರು ಸ್ತಂಭಗಳ ಮೇಲೆ ನಿಂತಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ
ವ್ಯಾಪಾರ, ತಂತ್ರಜ್ಞಾನ ಮತ್ತು ಪ್ರತಿಭೆಯ ಮೂರು ಸ್ತಂಭಗಳ ಮೇಲೆ ನಿಂತಿರುವ ಭಾರತ ಮತ್ತು ಯುನೈಟೆಡ್ ಸ್ಟೇಟ್ಸ್ ನಡುವಿನ ‘ನಂಬಿಕೆಯ ಪಾಲುದಾರಿಕೆ’ ಬಲದಿಂದ ಬಲಕ್ಕೆ ಮುಂದುವರಿಯುತ್ತಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಷ್ ಗೋಯಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರು ಇಂದು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಮಾಧ್ಯಮಗಳಿಗೆ ತಿಳಿಸಿದರು. ಅವರು ಪ್ರಖ್ಯಾತ ವ್ಯಾಪಾರ ವೃತ್ತಿಪರರು, CEO ಗಳು, ಉದ್ಯಮದ ಹಿರಿಯ ನಾಯಕರು, ಸ್ಟಾರ್ಟ್-ಅಪ್ ಪರಿಸರ ವ್ಯವಸ್ಥೆಗಳು ಮತ್ತು ಸಾಹಸೋದ್ಯಮ ಬಂಡವಾಳಗಾರರ ಜೊತೆ ಸಂವಾದ ನಡೆಸಿದರು ಎಂದು ಅವರು ಮಾಹಿತಿ ನೀಡಿದರು. ಭಾರತ-ಯುಎಸ್ ಸ್ಟ್ರಾಟೆಜಿಕ್ ಪಾರ್ಟ್‌ನರ್‌ಶಿಪ್ ಫೋರಂ ಸಮ್ಮೇಳನ ಮತ್ತು ಇಂಡೋ-ಪೆಸಿಫಿಕ್ ಎಕನಾಮಿಕ್ ಫ್ರೇಮ್‌ವರ್ಕ್ ಸಚಿವರ ಸಭೆಯಲ್ಲಿ ಭಾಗವಹಿಸಲು ಶ್ರೀ ಗೋಯಲ್ ಅವರು ಇದೇ ತಿಂಗಳ 5 ರಿಂದ 10 ರವರೆಗೆ ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೊ ಮತ್ತು ಲಾಸ್ ಏಂಜಲೀಸ್‌ಗೆ ಭೇಟಿ ನೀಡುತ್ತಿದ್ದಾರೆ ಎಂದು ವರದಿಯಾಗಿದೆ.
 
ಅವರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಗೆ ಗೌರವ ಸಲ್ಲಿಸುವುದರೊಂದಿಗೆ ತಮ್ಮ ದಿನವನ್ನು ಪ್ರಾರಂಭಿಸಿದರು. ಬಳಿಕ ಗದರ್ ಸ್ಮಾರಕ ಭವನಕ್ಕೆ ಭೇಟಿ ನೀಡಿದರು. ನಂತರದ ದಿನದಲ್ಲಿ, ಸಚಿವರು ಯುನೈಟೆಡ್ ಸ್ಟೇಟ್ಸ್‌ನ 6 ಪ್ರದೇಶಗಳಲ್ಲಿ ಭಾರತದ ಚಾರ್ಟರ್ಡ್ ಅಕೌಂಟೆಂಟ್‌ಗಳ ಸಂಸ್ಥೆಯನ್ನು ಪ್ರಾರಂಭಿಸಿದರು.

ಅವರು ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಗ್ಲೋಬಲ್ ಇಂಡಿಯನ್ ಟೆಕ್ನಾಲಜಿ ಪ್ರೊಫೆಷನಲ್ಸ್ ಅಸೋಸಿಯೇಷನ್ಸ್ ಮತ್ತು ಫೌಂಡೇಶನ್ ಫಾರ್ ಇಂಡಿಯಾ ಮತ್ತು ಇಂಡಿಯನ್ ಡಯಾಸ್ಪೊರಾ ಸ್ಟಡೀಸ್‌ನ ನಾಯಕತ್ವದೊಂದಿಗೆ ಸಂವಾದ ನಡೆಸಿದರು. ಶ್ರೀ ಗೋಯಲ್ ಅವರು 'ಇಂಡಿಯಾ ಸ್ಟೋರಿ' ಅನ್ನು ಅನುಮೋದಿಸಲು ಮತ್ತು ಭಾರತವನ್ನು ಆದ್ಯತೆಯ ಹೂಡಿಕೆಯ ತಾಣವನ್ನಾಗಿ ಮಾಡಲು ಟೆಕ್-ಸಮುದಾಯಕ್ಕೆ ಕರೆ ನೀಡಿದರು. ಗ್ರೋತ್ ಸ್ಟೋರಿ ಆಫ್ ಇಂಡಿಯಾದ ಭಾಗವಾಗಲು ಅವರನ್ನು ಒತ್ತಾಯಿಸಿದ ಅವರು ಭಾರತದಲ್ಲಿ ಹೂಡಿಕೆ ಮಾಡಲು ಮತ್ತು ಕಾರ್ಯಾಚರಣೆಗಳನ್ನು ಸ್ಥಾಪಿಸಲು ಅವರನ್ನು ಆಹ್ವಾನಿಸಿದರು. ಶ್ರೀ.ಗೋಯಲ್ ಅವರು ಯುಎಸ್ ಇಂಡಿಯಾ ಸ್ಟ್ರಾಟೆಜಿಕ್ ಪಾರ್ಟ್ನರ್ಶಿಪ್ ಫೋರಂನೊಂದಿಗೆ ಸಂವಾದ ನಡೆಸಿದರು.

Post a Comment

Previous Post Next Post