ಕರ್ನಾಟಕ, ಕೇರಳ ಸೇರಿ 10 ರಾಜ್ಯಗಳಲ್ಲಿ NIA, ED Raid: ನೂರಾರು ಪಿಎಫ್ಐ ಕಾರ್ಯಕರ್ತರ ಬಂಧನ

ಕರ್ನಾಟಕ, ಕೇರಳ ಸೇರಿ 10 ರಾಜ್ಯಗಳಲ್ಲಿ NIA, ED Raid: ನೂರಾರು ಪಿಎಫ್ಐ ಕಾರ್ಯಕರ್ತರ ಬಂಧನ

ಕರ್ನಾಟಕ, ಕೇರಳ ಸೇರಿ ದೇಶದ 10 ರಾಜ್ಯಗಳಲ್ಲಿ ಎನ್‌ಐಎ, ಇಡಿ ಅಧಿಕಾರಿಗಳು ರೇಡ್‌ ನಡೆಸುತ್ತಿದ್ದಾರೆ. ಪಿಎಫ್‌ಐ, ಎಸ್‌ಡಿಪಿಐ ನಾಯಕರನ್ನು ಗುರಿಯಾಗಿಸಿ ಈ ದಾಳಿ ನಡೆಯುತ್ತಿದ್ದು, ಈ ವೇಳೆ ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ.

nia raid in karnataka kerala in several places pfi sdpi offices ash
Author
First Published Sep 22, 2022, 7:56 AM IST

ಕರ್ನಾಟಕ, ಕೇರಳದಲ್ಲಿ ಎನ್‌ಐಎ (NIA), ಇಡಿ (ED) ಮಧ್ಯರಾತ್ರಿಯೇ ಶಾಕ್‌ ಕೊಟ್ಟಿದೆ. ಪಿಎಫ್‌ಐ (PFI), ಎಸ್‌ಡಿಪಿಐ (SDPI) ನಾಯಕರನ್ನು ಗುರಿಯಾಗಿಸಿ ಎನ್‌ಐಎ ದಾಳಿ ನಡೆಸಿದೆ. ಬೆಂಗಳೂರು, ಮಂಗಳೂರು ಸೇರಿ ರಾಜ್ಯದಲ್ಲಿ 8 ಕಡೆ ಎನ್‌ಐಎ ದಾಳಿ ನಡೆಸಿದೆ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಇನ್ನು, ಕೇರಳದಲ್ಲಿ ಮಧ್ಯರಾತ್ರಿಯಿಂದಲೇ ಎನ್‌ಐಎ ಅಧಿಕಾರಿಗಳು ಸುಮಾರು 50 ಕಡೆ ರೇಡ್‌ ಮಾಡುತ್ತಿದ್ದಾರೆ. ಕೇರಳದಲ್ಲಿ ಪ್ರಮುಖವಾಗಿ ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿ ಪಿಎಫ್‌ಐ ಮುಖ್ಯಸ್ಥ ಓಎಂಎ ಸಲಾಮ್‌ ನಿವಾಸದ ಮೇಲೆ ಮಧ್ಯರಾತ್ರಿಯೇ ಎನ್‌ಐಎ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದು, ಈ ಹಿನ್ನೆಲೆ ಪಿಎಫ್‌ಐ ಕಾರ್ಯಕರ್ತರು ಎನ್‌ಐಎ ವಿರುದ್ಧ ಪ್ರತಿಭಟನೆ ನಡೆಸುತ್ತಿದೆ. ಅಲ್ಲದೆ, ತಮಿಳುನಾಡು ಸೇರಿ ದೇಶದ 10 ರಾಜ್ಯಗಳಲ್ಲಿ ರೇಡ್‌ ನಡೆಯುತ್ತಿದ್ದು, ಈ ವೇಳೆ 100 ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಲಾಗಿದೆ. 

ಬೆಂಗಳೂರಿನಲ್ಲಿ ಎನ್‌ಐಎ ಅಧಿಕಾರಿಗಳು ಪಿಎಫ್ಐ ಹಾಗೂ ಎಸ್‌ಡಿಪಿಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಬಾಗಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ರಾಗಾ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆದಿದೆ. ಕಣ್ಣೂರು ಮುಖ್ಯರಸ್ತೆಯಲ್ಲಿರುವ ರಾಗಾ ಅಪಾರ್ಟ್‌ಮೆಂಟ್‌ನಲ್ಲಿ ಎನ್‌ಐಎ ಅಧಿಕಾರಿಗಳು ಭಾರಿ ಭದ್ರತೆಯೊಂದಿಗೆ ರೇಡ್‌ ಮಾಡಿದ್ದು, ಎನ್‌ಐಎ ತಂಡ ಪರಿಶೀಲನೆ ನಡೆಸುತ್ತಿದೆ. 

ಇನ್ನು, ಮಂಗಳೂರಿನಲ್ಲೂ ಎನ್‌ಐಎ ಅಧಿಕಾರಿಗಳು ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪಿಎಫ್ಐ, ಎಸ್‌ಡಿಪಿಐ ನಾಯಕರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿದ್ದು, ಮಂಗಳೂರಿನ ನೆಲ್ಲಿಕಾಯಿ ರಸ್ತೆಯ ಪಿಎಫ್‌ಐ ಮತ್ತು ಎಸ್‌ಡಿಪಿಐ ಜಿಲ್ಲಾ ಕಚೇರಿ ಮೇಲೆ ದಾಳಿ ನಡೆಸಿದೆ. ಬಜಪೆ, ಜೋಕಟ್ಟೆ ಸೇರಿ ಹಲವೆಡೆ ಮನೆಗಳ ಮೇಲೆ ರೇಡ್‌ ನಡೆದಿದೆ. ಎನ್‌ಐಎ ದಾಳಿ ನಡೆಸುತ್ತಿದ್ದಂತೆ ಭಾರಿ ಸಂಖ್ಯೆಯಲ್ಲಿ ಜನರು ಸೇರಿದ್ದು, ಗೋ ಬ್ಯಾಕ್ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. 

ಇನ್ನು, ಕುಳಾಯಿ, ಕಾವೂರು, ಜೋಕಟ್ಟೆ, ಬಜಪೆಯ ಪಿಎಫ್‌ಐ ಮತ್ತು ಎಸ್ ಡಿಪಿಐ ನಾಯಕರ ಮನೆಗಳ ಮೇಲೂ ದಾಳಿ ನಡೆಸಿದೆ. ಘಟನಾ ಸ್ಥಳದಲ್ಲಸ್ಥಳದಲ್ ಸಿಆರ್‌ಪಿಎಫ್ ಪೊಲೀಸರು ಭದ್ರತೆ ನೀಡುತ್ತಿದ್ದಾರೆ. ಮಂಗಳೂರಿನ ಕುಳಾಯಿ ಬಳಿಯ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಸಹೋದರನ ಮನೆ ಮೇಲೂ ದಾಳಿ ನಡೆದಿದೆ. ಈ ಮಧ್ಯೆ, ಎನ್‌ಐಎ ದಾಳಿ ಹಿನ್ನೆಲೆ ನೆಲ್ಲಿಕಾಯಿ ರಸ್ತೆಗೆ ‌ಮಂಗಳೂರು ಕಮಿಷನರ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ಇದೇ ರಸ್ತೆಯಲ್ಲಿ ಎಸ್‌ಡಿಪಿಐ ಮತ್ತು ಪಿಎಫ್ಐ ಜಿಲ್ಲಾ ಕಚೇರಿ ಇದೆ. ಭಾರಿ ಸಂಖ್ಯೆಯಲ್ಲಿ ಸೇರಿದ ಪ್ರತಿಭಟನಾಕಾರರ ಜೊತೆ ಪೊಲೀಸರು ಮಾತುಕತೆ ನಡೆಸುತ್ತಿದ್ದಾರೆ.

Post a Comment

Previous Post Next Post