ಮಳೆ ತೀವ್ರತೆ ಕಡಿಮೆ ಆದ ಬಳಿಕ 104 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿಯ 2 ತಂಡಗಳ ಪ್ರವಾಸ - ಮೈಸೂರು ನೂತನ ಮೇಯರ್, ಉಪ ಮೇಯರ್‍ಗೆನಳಿನ್‍ಕುಮಾರ್ ಕಟೀಲ್ ಅಭಿನಂದನೆ

[06/09, 2:35 PM] Bjp Media: 6-9-22

ಬುಧವಾರ, ಅರುಣ್ ಸಿಂಗ್ ಬೆಂಗಳೂರು ಪ್ರವಾಸ,  ಗುರುವಾರ ಬೆಳಿಗ್ಗೆ 11.30ಕ್ಕೆ ಅವರು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ ‘ಜನೋತ್ಸವ’ ಸಭೆಯಲ್ಲಿ ಭಾಗವಹಿಸುವರು. 

ಮಳೆ ತೀವ್ರತೆ ಕಡಿಮೆ ಆದ ಬಳಿಕ 104 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿಯ 2 ತಂಡಗಳ ಪ್ರವಾಸ - ಎನ್.ರವಿಕುಮಾರ್

ಅರುಣ್ ಸಿಂಗ್ ಬೆಂಗಳೂರು ಪ್ರವಾಸ ವಿವರ
ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕದ ಉಸ್ತುವಾರಿ ಅರುಣ್ ಸಿಂಗ್ ಅವರು 7-9-2022ರ ಬುಧವಾರ ಸಂಜೆ 4.45 ಗಂಟೆಗೆ ಬೆಂಗಳೂರು ವಿಮಾನನಿಲ್ದಾಣಕ್ಕೆ ಆಗಮಿಸುವರು. ಬಳಿಕ ಅವರು ಕುಮಾರಕೃಪಾ ಅತಿಥಿಗೃಹದಲ್ಲಿ ವಾಸ್ತವ್ಯ ಇರುವರು. ಅಲ್ಲದೆ ಪೂರ್ವನಿಗದಿತ ಕಾರ್ಯಕ್ರಮಗಳಲ್ಲಿ ಭಾಗವಹಿಸುವರು.
8-9-2022ರ ಗುರುವಾರ ಬೆಳಿಗ್ಗೆ 11.30ಕ್ಕೆ ಅವರು ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ ‘ಜನೋತ್ಸವ’ ಸಭೆಯಲ್ಲಿ ಭಾಗವಹಿಸುವರು. 

ಬೆಂಗಳೂರು: ಮಳೆ ತೀವ್ರತೆ ಕಡಿಮೆ ಆದ ಬಳಿಕ 104 ವಿಧಾನಸಭಾ ಕ್ಷೇತ್ರಗಳಿಗೆ ರಾಜ್ಯ ಬಿಜೆಪಿಯ ಎರಡು ತಂಡಗಳ ಪ್ರವಾಸ ಏರ್ಪಡಿಸಲಾಗುತ್ತದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಾಳೆಯಿಂದ ಆರಂಭಗೊಳ್ಳಬೇಕಿದ್ದ ರಾಜ್ಯಾಧ್ಯಕ್ಷರ ತಂಡದ ಪ್ರವಾಸ ಹಾಗೂ ಯಡಿಯೂರಪ್ಪ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಇನ್ನೊಂದು ತಂಡದ ಪ್ರವಾಸವನ್ನು ಸದ್ಯಕ್ಕೆ ಮುಂದೂಡಲಾಗಿದೆ. ಎರಡು ತಂಡಗಳ 104 ಕ್ಷೇತ್ರಗಳ ಪ್ರವಾಸ ಇದಾಗಿದೆ. ಫಲಾನುಭವಿಗಳ ಸಮಾವೇಶ, ಎಸ್‍ಸಿ, ಎಸ್‍ಟಿ, ಒಬಿಸಿ ಕಾರ್ಯಕರ್ತರ ಮನೆಯಲ್ಲಿ ಉಪಹಾರ ಮತ್ತು ಅದೇ ಪರಿಸರದಲ್ಲಿ ಸಭೆ ನಡೆಸಲಾಗುತ್ತದೆ. ಮಠ, ಮಂದಿರಗಳಿಗೆ ಭೇಟಿ ನೀಡಲಿದ್ದೇವೆ ಎಂದು ತಿಳಿಸಿದರು.
ಪ್ರಧಾನಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರೂ ಸಮಾವೇಶ ಮತ್ತು ಕ್ಷೇತ್ರ ಪ್ರವಾಸದಲ್ಲಿ ಭಾಗವಹಿಸುವರು. ಪಕ್ಷದ ಎಲ್ಲ ಜನಪ್ರತಿನಿಧಿಗಳು ಸಮಾವೇಶ ಹಾಗೂ ಕ್ಷೇತ್ರ ಪ್ರವಾಸದಲ್ಲಿ ಭಾಗವಹಿಸಲಿದ್ದಾರೆ ಎಂದು ವಿವರಿಸಿದರು. ಹುಬ್ಬಳ್ಳಿ, ಬಳ್ಳಾರಿ, ಮೈಸೂರು, ಶಿವಮೊಗ್ಗ, ಬೆಂಗಳೂರು ಸೇರಿ ಪಾಲಿಕೆ ಇರುವ ಕಡೆಗಳಲ್ಲಿ ಪ್ರವಾಸ ನಡೆಯಲಿದೆ ಎಂದು ವಿವರ ನೀಡಿದರು.
ರಾಜ್ಯಾಧ್ಯಕ್ಷರ ತಂಡ ಪ್ರವಾಸದ 52 ಕ್ಷೇತ್ರಗಳಲ್ಲಿ ಬೂತ್, ಶಕ್ತಿ ಕೇಂದ್ರಗಳ, ಚುನಾಯಿತ ಪ್ರತಿನಿಧಿಗಳ ಸಭೆ ನಡೆಸಲಾಗುವುದು. ಪಂಚರತ್ನ- 5 ಪ್ರಮುಖ ಕಾರ್ಯಕರ್ತರ ಸಭೆ ನಡೆಸಲಾಗುವುದು. ಒಂದು ತಂಡ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಇರಲಿದೆ. ಯಡಿಯೂರಪ್ಪ ಮತ್ತು ಮುಖ್ಯಮಂತ್ರಿಗಳ ತಂಡ ಇನ್ನೊಂದು ಭಾಗದಲ್ಲಿ ಪ್ರವಾಸ ಮಾಡಲಿದೆ. ಕೋರ್ ಕಮಿಟಿಯ 16 ಸದಸ್ಯರು ಅವಶ್ಯಕತೆಗೆ ಅನುಗುಣವಾಗಿ ಭಾಗವಹಿಸಲು ಯೋಜಿಸಿದೆ. ರಾಜ್ಯ ಪ್ರಭಾರಿ ಅರುಣ್ ಸಿಂಗ್, ಸಹ ಪ್ರಭಾರಿ ಅರುಣಾ ಅವರು ಪಾಲ್ಗೊಳ್ಳಲಿದ್ದಾರೆ ಎಂದರು.
ರೈತ ಸಮಾವೇಶ, ಎಸ್‍ಸಿ ಸಮಾವೇಶ, ಒಬಿಸಿ ಸಮಾವೇಶ, ಯುವ ಸಮಾವೇಶ, ಮಹಿಳಾ ಸಮಾವೇಶ, ಎಸ್‍ಟಿ, ಅಲ್ಪಸಂಖ್ಯಾತ ಬಂಧುಗಳ ಸಮಾವೇಶವನ್ನೂ ಆಯೋಜಿಸಲಾಗುತ್ತದೆ. ಡಿಸೆಂಬರ್ 15ರೊಳಗೆ 104 ಕ್ಷೇತ್ರ ಪ್ರವಾಸ ಮತ್ತು 7 ಸಮಾವೇಶಗಳನ್ನೂ ಯೋಜಿಸಿದೆ. ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಸಮಾವೇಶವನ್ನು ಸಂಘಟಿಸಲಿವೆ ಎಂದರು. ಪ್ರವಾಸ ಮತ್ತು ಸಮಾವೇಶ ಯಶಸ್ವಿಗಾಗಿ ಪ್ರಭಾರಿಗಳನ್ನು ನೇಮಿಸಿದೆ. 150 ಕ್ಷೇತ್ರ ಗೆಲುವಿನ ಗುರಿ ಮುಟ್ಟುವ ಹಿನ್ನೆಲೆಯಲ್ಲಿ ಕಾರ್ಯಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
ಬೆಂಗಳೂರು ಹದಗೆಟ್ಟಿದ್ದರೆ ಕಾಂಗ್ರೆಸ್ ಅದರ ಪಾಪದ ಹೊಣೆ ಹೊರಬೇಕು. ಬೆಂಗಳೂರನ್ನು ವ್ಯವಸ್ಥಿತ ನಗರವಾಗಿ ಪರಿವರ್ತಿಸಲು ಬಿಜೆಪಿ ಬದ್ಧವಿದೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಕಾಂಗ್ರೆಸ್ ಕೇವಲ ವಿರೋಧಕ್ಕಾಗಿಯೇ ವಿರೋಧಿಸಬಾರದು. ಜನರಿಗೆ ಕಾಂಗ್ರೆಸ್ ಲೋಪಗಳ ಅರಿವಿದೆ ಎಂದು ಎನ್.ರವಿಕುಮಾರ್ ಅವರು ಆಕ್ಷೇಪಿಸಿದರು.
ರಾಹುಲ್ ಗಾಂಧಿ ಪ್ರವಾಸ ಬಿಜೆಪಿ ಗೆಲುವಿಗೆ ಹೆಚ್ಚು ಪೂರಕ
ಕಾಂಗ್ರೆಸ್ ಪಕ್ಷದವರಿಗೆ ಟೀಕೆ ಮಾಡುವ ರೋಗ ಇದೆ. ಎಷ್ಟು ಜನ ಕಾಂಗ್ರೆಸ್ಸಿಗರು ನೆರೆ ಪರಿಹಾರಕ್ಕೆ ತೆರಳಿದ್ದಾರೆ? ಅಶೋಕ್ ಅವರು ನಿದ್ರೆ ಮಾಡುತ್ತಿದ್ದರೆ ನೀವೇನು ಮಾಡುತ್ತಿದ್ದಿರಿ ಎಂದು ಪ್ರಶ್ನಿಸಿದರು. ಹಗರಣ ಮಾಡಿ ಡಿ.ಕೆ.ಶಿವಕುಮಾರ್ ದಕ್ಕಿಸಿಕೊಳ್ಳುವ ಯೋಚನೆಯಲ್ಲಿದ್ದಾರೆ. ಕರ್ನಾಟಕದಲ್ಲಿ ಮಾತ್ರ ಕಾಂಗ್ರೆಸ್ಸಿಗರು ಮಾತನಾಡುತ್ತಾರೆ. ಅದಕ್ಕೆ ಉತ್ತರ ಸಿಗಲಿದೆ. ರಾಹುಲ್ ಗಾಂಧಿ ಅವರು ಪ್ರವಾಸಕ್ಕೆ ಬಂದಲ್ಲಿ ಬಿಜೆಪಿ ಗೆಲ್ಲಲಿದೆ. ಅದು ಬಿಜೆಪಿ ಗೆಲುವಿಗೆ ಪೂರಕ ಎಂದು ಪ್ರಶ್ನೆಗಳಿಗೆ ಉತ್ತರ ಕೊಟ್ಟರು.
ರಾಜ್ಯದಲ್ಲಿ ಹಿಂದೆಂದೂ ಅಂದರೆ ಸುಮಾರು 50 ವರ್ಷಗಳಿಂದ ಕಂಡರಿಯದ ಮಳೆ ಬರುತ್ತಿದೆ. ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಎಲ್ಲ ಶಾಸಕರ ಜೊತೆ ಮಾತನಾಡಿದ್ದಾರೆ. ತಗ್ಗು ಪ್ರದೇಶಗಳಲ್ಲಿ ಸೇವಾ ಚಟುವಟಿಕೆ ಆರಂಭಿಸಲು ಮತ್ತು ಅಗತ್ಯ ಇರುವ ಕಡೆ ವಸತಿ ವ್ಯವಸ್ಥೆ ಮಾಡಲು ತಿಳಿಸಿದ್ದಾರೆ. ಸೇವಾ ಚಟುವಟಿಕೆ ಸಂಬಂಧ ನಗರ ಬಿಜೆಪಿ ಕಾರ್ಯಾಲಯದಲ್ಲಿ ಇಂದು ಕರೆಯಲಾಗಿದೆ. ರಾಜ್ಯಾಧ್ಯಕ್ಷರು ನಾಳೆ ನಡೆಯುವ ಮಳೆ ಸಂಬಂಧಿತ ಇನ್ನೊಂದು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.
ಸೇತುವೆಗಳು ಹಾಳಾಗುತ್ತಿದೆ. ಕೆರೆ ಒತ್ತುವರಿ, ರಾಜಕಾಲುವೆ ಒತ್ತುವರಿ ಹಿಂದಿನಿಂದಲೇ ಬಂದ ಸಮಸ್ಯೆ. 50 ವರ್ಷಗಳಿಂದ ಆಗಿರುವ ಒತ್ತುವರಿಗಳು ಇದಕ್ಕೆ ಕಾರಣ. ಸೇವಾ ಚಟುವಟಿಕೆಯಿಂದ ಧಾವಿಸುವ ದೃಷ್ಟಿಯಿಂದ ಕಾರ್ಯಯೋಜನೆ ರೂಪಿಸಲಾಗುವುದು. ಸಂತ್ರಸ್ತರಿಗೆ ಆಹಾರ, ವಸತಿ ವ್ಯವಸ್ಥೆ ಮಾಡಲು ಪಕ್ಷ ಮುಂದಾಗಲಿದೆ. ಜೊತೆಗೆ ಸರಕಾರಕ್ಕೆ ಬೆಂಬಲ ನೀಡಲು ಕರೆ ನೀಡುವುದಾಗಿ ತಿಳಿಸಿದರು. ಬೆಂಗಳೂರಿನಲ್ಲಿ ಒಬ್ಬರು ಪ್ರಧಾನ ಕಾರ್ಯದರ್ಶಿಯವರು ಮಳೆ ಸಂಬಂಧಿತ ಸೇವಾ ಚಟುವಟಿಕೆಗೆ ಪ್ರೇರಣೆ ನೀಡಲಿದ್ದಾರೆ ಎಂದರು.
ಮುಂಬೈ, ದೆಹಲಿ ಸೇರಿದಂತೆ ಅನೇಕ ನಗರಗಳಲ್ಲಿ ಭಾರಿ ಮಳೆಯಿಂದ ಸಮಸ್ಯೆ ಆಗಿತ್ತು. ಸರಕಾರ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಲು ಬದ್ಧತೆಯನ್ನು ಪ್ರದರ್ಶಿಸಲಿದೆ ಎಂದು ತಿಳಿಸಿದರು. ಅಕ್ರಮ ಕಟ್ಟಡಗಳೆಲ್ಲವುಗಳ ವಿರುದ್ಧ ಕ್ರಮ ತೆಗೆದುಕೊಳ್ಳುವುದಾಗಿ ಕಂದಾಯ ಸಚಿವರು ಹೇಳಿದ್ದು, ಅದು ಅನುಷ್ಠಾನಕ್ಕೆ ಬರಲಿದೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು.
ಜನೋತ್ಸವವನ್ನು ಎರಡು ಬಾರಿ ಮುಂದೂಡಿದ್ದೆವು ಎಂದರು. ಪುಂಗಿದಾಸನ ಬರ್ತ್‍ಡೇ ಇದಲ್ಲ ಎಂದು ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಪೂರಕ ಉತ್ತರ ಕೊಟ್ಟರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ, ರಾಜ್ಯ ಎಸ್‍ಸಿ ಮೋರ್ಚಾ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿದ್ದರು.
ಮೊದಲ ತಂಡದ ರಾಜ್ಯ ಅಧ್ಯಕ್ಷರಾದ ಶ್ರೀ ನಳಿನ್ ಕುಮಾರ್ ಕಟೀಲ ಅವರ ಪ್ರವಾಸದ ಸಂಚಾಲಕರಾಗಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮಹೇಶ್ ಟೆಂಗಿನಕಾಯಿ ಅವರು ಮತ್ತು ಶ್ರೀ ಸಿದ್ದರಾಜು ಅವರು ಇರುತ್ತಾರೆ.
ಎರಡನೇ ತಂಡದ ಮಾಜಿ ಸಿಎಂ ಶ್ರೀ ಬಿ.ಎಸ್.ಯಡಿಯೂರಪ್ಪ ಅವರ ಮತ್ತು ಸಿಎಂ ಶ್ರೀ ಬಸವರಾಜ ಬೊಮ್ಮಾಯಿ ಅವರ ಪ್ರವಾಸದ ಸಂಚಾಲಕರಾಗಿ ರಾಜ್ಯ ಉಪಾಧ್ಯಕ್ಷರಾದ ಶ್ರೀ ನಿರ್ಮಲ್ ಕುಮಾರ ಸುರಾಣ ಅವರು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ರವಿಕುಮಾರ್ ಎನ್ ಅವರು ಮತ್ತು ಶ್ರೀ ಅಶ್ವಥ್ ನಾರಾಯಣ ಅವರು ಇರುತ್ತಾರೆ.

(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[06/09, 4:01 PM] Bjp Media: 6-9-2022

ಮೈಸೂರು ನೂತನ ಮೇಯರ್, ಉಪ ಮೇಯರ್‍ಗೆ
ನಳಿನ್‍ಕುಮಾರ್ ಕಟೀಲ್ ಅಭಿನಂದನೆ
ಬೆಂಗಳೂರು: ಮೈಸೂರು ನಗರಪಾಲಿಕೆಯ ನೂತನ ಮೇಯರ್ ಆಗಿ ಆಯ್ಕೆಯಾದ ಶಿವಕುಮಾರ್ ಮತ್ತು ಉಪ ಮೇಯರ್ ಆಗಿ ಆಯ್ಕೆಯಾದ ಡಾ. ಜಿ.ರೂಪ ಯೋಗೀಶ್ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ಅಭಿನಂದಿಸಿದ್ದಾರೆ.
ಶಿವಕುಮಾರ್ ಅವರು 3 ಬಾರಿ ಕಾರ್ಪೊರೇಟರ್ ಆಗಿ ಅನುಭವ ಹೊಂದಿದ್ದಾರೆ. ಹಿಂದುಳಿದ ವರ್ಗದ ಮುಖಂಡರಾಗಿದ್ದು, ಪಕ್ಷದ ಸಂಘಟನೆಯಲ್ಲಿ ತೊಡಗಿಕೊಂಡವರು. ಹಿಂದುಳಿದ ವರ್ಗಕ್ಕೆ ಸೇರಿದ ಡಾ. ಜಿ.ರೂಪ ಯೋಗೀಶ್ ಅವರು ಡಾಕ್ಟರೇಟ್ ಪದವಿ ಪಡೆದವರು. ಇವರ ನೇತೃತ್ವದಲ್ಲಿ ಮೈಸೂರು ನಗರವು ಸಮಗ್ರ ಅಭಿವೃದ್ಧಿ ಹೊಂದುವಂತಾಗಲಿ ಎಂದು ಅವರು ಹಾರೈಸಿದ್ದಾರೆ.
ಈ ಚುನಾವಣೆಗೆ ಪ್ರಭಾರಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ನಿರ್ಮಲ್‍ಕುಮಾರ್ ಸುರಾಣಾ ಮತ್ತು ರಾಜ್ಯದ ಸಚಿವ ಎಸ್.ಟಿ.ಸೋಮಶೇಖರ್ ಅವರು ಭಾಗವಹಿಸಿದ್ದರು.

(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
  ಬಿಜೆಪಿ ಕರ್ನಾಟಕ
[06/09, 4:24 PM] Bjp Media: 6-9-2022
ಬೆಂಗಳೂರು: ಸೆಪ್ಟೆಂಬರ್ 8 ರಂದು ಜನೋತ್ಸವದ ಕಾರ್ಯಕ್ರಮದ ಪ್ರಯುಕ್ತ ಸಚಿವರಾದ ಡಾ.ಕೆ ಸುಧಾಕರ್, ಮುನಿರತ್ನ, ಎಂ.ಟಿ.ಬಿ.ನಾಗರಾಜ್, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಅಶ್ವತ್ಥ್ ನಾರಾಯಣ್, ರಾಜ್ಯ ಕಾರ್ಯದರ್ಶಿಗಳಾದ ಕೇಶವ ಪ್ರಸಾದ್, ವಿವಿಧ ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ 07.09.2022ರ ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದ ಕಾರ್ಯಕ್ರಮ ನಡೆಯುವ ಸ್ಥಳವನ್ನು ವೀಕ್ಷಣೆ ಮಾಡಲಿದ್ದಾರೆ ಹಾಗೂ ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿದೆ.

Post a Comment

Previous Post Next Post