ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕ: ಸಿ.ಟಿ.ರವಿ

[04/09, 4:38 PM] Bjp Media: 4-9-2022

ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕ: ಸಿ.ಟಿ.ರವಿ
ಬೆಂಗಳೂರು: ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಸೆ. 25ರಂದು ನಮ್ಮ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ದೀನದಯಾಳ್ ಉಪಾಧ್ಯಾಯರ ಜನ್ಮದಿನ. ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವನ್ನು ಆಚರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು.
ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದೇ 17ರಂದು ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ರಕ್ತದಾನಿಗಳ ವಿವರವನ್ನು ಪ್ರತಿ ಆಸ್ಪತ್ರೆಯಲ್ಲಿ ತಯಾರಿಸಿ ರಕ್ತದಾನಿಗಳ ವಿವರ ಸಿಗುವಂತೆ ಮಾಡಲಾಗುವುದು. ಆರೋಗ್ಯ ಶಿಬಿರವನ್ನೂ ಆಯೋಜಿಸಲಾಗುವುದು. ಅಲ್ಲದೆ ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ ಶಿಬಿರ ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರಕಾರ ನಿರ್ದೇಶನ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅಮೃತ ಸರೋವರ ನಿರ್ಮಾಣ ಆಗಿದೆ. ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಸಸಿಗಳನ್ನೂ ನೆಡಲಿದ್ದಾರೆ. 2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತಿ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆ, ಪೂರಕ ಬೆಂಬಲ ಕೊಡಲಿದ್ದಾರೆ ಎಂದರು.
ಇದಲ್ಲದೆ ಜನಸಂವಾದ, ಜನೋತ್ಸವ ಕಾರ್ಯಕ್ರಮಗಳನ್ನೂ ಆಯೋಜಿಸಲು ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ನಡೆಸಿ ಮರೆಮಾಚಿದ ಹಗರಣಗಳನ್ನೂ ಬಯಲಿಗೆ ಎಳೆಯಬೇಕು. ಆ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಇಂದು ಸುದೀರ್ಘವಾಗಿ ಚರ್ಚೆ ನಡೆಸಿದ್ದಾಗಿ ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಫಲಾನುಭವಿಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶೇ 65ರಿಂದ 80 ಪ್ರತಿಶತ ಜನರು ಇದ್ದಾರೆ. ಈ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸುವ ಕುರಿತು ಪ್ರಮುಖ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಿ, ಕಾರ್ಯಯೋಜನೆ ತಯಾರಿಸಲಾಗಿದೆ ಎಂದರು.
ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಹೆಸರನ್ನು ಯಾರೂ ಹಾಳು ಮಾಡಲು ಸಾಧ್ಯವಿಲ್ಲ. ಮೂಲಸೌಕರ್ಯ ಮೂರು ದಿನಗಳಲ್ಲಿ ಮಾಡುವುದೇ? ಅಥವಾ 3 ವರ್ಷದಲ್ಲಿ ಮಾಡುವುದೇ? ರಾಜಕಾಲುವೆಯನ್ನು ಒತ್ತುವರಿ ಮಾಡಿ ನಿರ್ಮಾಣ ನಡೆಸಿದ್ದು ಬಿಜೆಪಿ ಸರಕಾರ ಬಂದ ಮೇಲೋ ಅಥವಾ ಹತ್ತಿಪ್ಪತ್ತು ವರ್ಷದ ಹಿಂದಿನಿಂದಲೂ ರಾಜಕಾಲುವೆ ಒತ್ತುವರಿ ಪ್ರವೃತ್ತಿ ನಡೆದುಕೊಂಡು ಬಂದಿದೆಯೇ? ಕೆರೆಗಳನ್ನು ಮುಳುಗಿಸಿದ್ದು ಯಾರು? ಕೆರೆಗಳನ್ನು ಅಕ್ರಮ ಬಡಾವಣೆಯಾಗಿ ನಿರ್ಮಿಸಿದವರು ಯಾರು? ಅವರೆಲ್ಲರೂ ಉತ್ತರಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಕುಮಾರಸ್ವಾಮಿಯವರು ಜಲಧಾರೆ ಕಾರ್ಯಕ್ರಮದಿಂದ ರಾಜ್ಯದ ತುಂಬ ಮಳೆ ಆಗಿದೆ ಎಂದಿದ್ದಾರೆ. ಅವರಿಂದಲೇ ಮಳೆ ಆಗಿದ್ದರೆ ಅತಿವೃಷ್ಟಿಗೂ ಅವರೇ ಕಾರಣ ಇರಬೇಕಲ್ಲವೇ ಎಂದು ಕೇಳಿದರು. ರಾಮನಗರಕ್ಕೆ ಜಾಸ್ತಿ ಪ್ರೀತಿ ಇದ್ದ ಕಾರಣ ಅತಿ ಹೆಚ್ಚು ಮಳೆ ಬಂದಿರಬೇಕು ಎಂದು ನುಡಿದರು. ಅವರ ಹೇಳಿಕೆ ಸತ್ಯ ಎಂದು ಭಾವಿಸುವುದಿಲ್ಲ; ಇವರು ಜಲಧಾರೆ ಮಾಡಿದ್ದು ಕರ್ನಾಟಕದಲ್ಲಿ. ಆದರೆ, ದೇಶದ ತುಂಬೆಲ್ಲ ಮಳೆಯಾಗಿದೆ ಎಂದು ತಿಳಿಸಿದರು.
03-09-2022
ಜನೋತ್ಸವ ಮುಂದಿನ ಚುನಾವಣೆಯ ದಿಕ್ಸೂಚಿ- ನಳಿನ್‍ಕುಮಾರ್ ಕಟೀಲ್ 
ಬೆಂಗಳೂರು: ದೊಡ್ಡಬಳ್ಳಾಪುರದಲ್ಲಿ ಸೆ.8ರಂದು ಜನೋತ್ಸವ ನಡೆಯಲಿದೆ. ಅದು ಮುಂದಿನ ಚುನಾವಣೆಯ ದಿಕ್ಸೂಚಿ ಎನಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ತಿಳಿಸಿದರು.
ದೊಡ್ಡಬಳ್ಳಾಪುರದಲ್ಲಿ ನಡೆಯುವ ಬೃಹತ್ ರ್ಯಾಲಿ ಅಂಗವಾಗಿ ಇಂದು ನಡೆದ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಬಿಜೆಪಿ ಸರಕಾರ ಮೂರು ವರ್ಷಗಳ ಅಧಿಕಾರಾವಧಿ ಪೂರೈಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಒಂದು ವರ್ಷ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ನಡೆಯುವ ಸಮಾವೇಶದಲ್ಲಿ ಸಂದೇಶ ನೀಡಲು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬರಲಿದ್ದಾರೆ ಎಂದು ಪ್ರಕಟಿಸಿದರು.
ಕೋಲಾರ, ಚಿಕ್ಕಬಳ್ಳಾಪುರ ಹಾಗೂ ದೊಡ್ಡಬಳ್ಳಾಪುರದ ಎಲ್ಲ ಕಾರ್ಯಕರ್ತರಿಗೆ ಇದೊಂದು ಸಂತಸದ ವಿಚಾರ; ಪ್ರೇರಣೆಯ ವಿಚಾರ ಎಂದು ನುಡಿದರು.
ಮಾಜಿ ಮುಖ್ಯಮಂತ್ರಿ ಸಿದ್ದರಾಮಣ್ಣ ‘ಜನ ಸೇರಿಸಿ’ ಹುಟ್ಟುಹಬ್ಬ ಆಚರಿಸಿಕೊಂಡಿದ್ದರು. ಅದೊಂದು ಸವಾಲಿನ ನಡುವೆ ಜನೋತ್ಸವ ನಡೆಯಲಿದೆ. ಅದು ಸಿದ್ದರಾಮಣ್ಣನ ಉತ್ಸವವಾದರೆ ಇದು ಜನರ ಪ್ರೇರಣೆಯಿಂದ ನಡೆಯುವ ಉತ್ಸವ ಎಂದು ವಿಶ್ಲೇಷಿಸಿದರು. ಇಲ್ಲಿನ ಜನೋತ್ಸವದಿಂದ ಪ್ರಾರಂಭಿಸಿ 7 ಕಾರ್ಯಕ್ರಮ ನಡೆಸಲು ತೀರ್ಮಾನ ಮಾಡಲಾಗಿದೆ. ಸೆ.2ರಂದು ಪ್ರಧಾನಿಯವರ ಕಾರ್ಯಕ್ರಮವಿತ್ತು. ಅದು ಅಭೂತಪೂರ್ವವಾಗಿ ಯಶಸ್ವಿಯಾಗಿ ನಡೆದಿದೆ ಎಂದು ವಿವರಿಸಿದರು.
130 ಎಕರೆ ಜಾಗದಲ್ಲಿ ಪ್ರಧಾನಿಯವರ ಕಾರ್ಯಕ್ರಮ ನಡೆಯಿತು. ಕಡಿಮೆ ಅವಧಿ ಮತ್ತು ತಯಾರಿಯ ನಡುವೆ ‘ನ ಭೂತೋ ನ ಭವಿಷ್ಯತಿ’ ಎಂಬಂತೆ ಕಾರ್ಯಕ್ರಮ ನಡೆದಿದೆ. ಬೆಳಿಗ್ಗೆ 9 ಗಂಟೆಗೇ ಕುರ್ಚಿಗಳು ಭರ್ತಿ ಆಗಿದ್ದವು. ಮೋದಿಯವರ ಭಾಷಣ ಮುಗಿಯುವವರೆಗೆ ಕಾರ್ಯಕರ್ತರು, ಜನರು ಎದ್ದಿರಲಿಲ್ಲ. 20 ಗಂಟೆಗಳ ಕಾಲ ಅವರು ಬಿಜೆಪಿಗಾಗಿ ಸಮಯ ಮೀಸಲಿಟ್ಟರು. ಅದು ಜನರನ್ನು ಕರೆತಂದ ಸಭೆ ಅಲ್ಲ. ಕರೆತಂದಿದ್ದರೆ ಅವರು ಬಾರಿಗೋ, ಮದ್ಯದಂಗಡಿಗೋ, ಊಟ ಹುಡುಕಿಕೊಂಡೋ ಹೊರಗಡೆ ಇರುತ್ತಿದ್ದರು. ಅದು ಜನಪ್ರೇರಣೆಯ ಕಾರ್ಯಕ್ರಮವಾಗಿತ್ತು ಎಂದು ನುಡಿದರು.
ಕರ್ನಾಟಕವನ್ನು ಉಳಿಸಲು ಬಿಜೆಪಿಯಿಂದ ಮಾತ್ರ ಸಾಧ್ಯ ಎಂಬ ಭಾವನೆ ಜನರಲ್ಲಿದೆ. ರಾಜ್ಯ ಮತ್ತು ದೇಶಕ್ಕೆ ಏಕೈಕ ನಾಯಕರು ನರೇಂದ್ರ ಮೋದಿ ಎಂಬ ಭಾವನೆ ಜನರದು. ರಾಜ್ಯದ ಜನರನ್ನು ಮುಟ್ಟುವ ಕಾರ್ಯವನ್ನು ನಮ್ಮ ಕಾರ್ಯಕರ್ತರು ಮಾಡಬೇಕಿದೆ ಎಂದು ತಿಳಿಸಿದರು. ಮಂಗಳೂರಿನವರನ್ನು ಸೋಲಿಸಲು 4 ಲಕ್ಷ ಜನರನ್ನು ಸೇರಿಸಿ ಇಲ್ಲಿ ದೊಡ್ಡ ರ್ಯಾಲಿ ಆಯೋಜಿಸಿ ಎಂದು ಸವಾಲೆಸೆದರು.
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲಿ 150 ಸ್ಥಾನ ನಮ್ಮದಾಗಲಿದೆ ಎಂದು ಎದೆತಟ್ಟಿ ಹೇಳುವುದಾಗಿ ಚಪ್ಪಾಳೆಗಳ ನಡುವೆ ತಿಳಿಸಿದರು. ಜನೋತ್ಸವಕ್ಕೆ ಜನರು ಬರುವ ವಿಶ್ವಾಸ ನಿಮ್ಮದಿರಲಿ ಎಂದು ಅವರು ನಗುತ್ತಲೇ ಸವಾಲು ಎಸೆದರು. ಕಾರ್ಯಕರ್ತರನ್ನು ಸೇರಿಸಲು ಜೋಶ್ ಇರಬೇಕು. ಇಲ್ಲವಾದರೆ ಅದು ಸಿದ್ದರಾಮಣ್ಣನ ಕಾರ್ಯಕ್ರಮವಾಗುತ್ತದೆ ಎಂದು ತಿಳಿಸಿದರು.
ಸಿದ್ದರಾಮಣ್ಣನ ಕಾರ್ಯಕ್ರಮ ಅವ್ಯವಸ್ಥೆಯ ಭಾಗವಾಗಿತ್ತು ಎಂದು ಟೀಕಿಸಿದ ಅವರು, ಫಲಾನುಭವಿಗಳಿಗೆ ನಮ್ಮ ಸರಕಾರದ ಬಗ್ಗೆ ಪ್ರೀತಿ ಇದೆ. ಅಭಿಮಾನವೂ ಇದೆ. ಅದನ್ನು ಬಳಸಿಕೊಳ್ಳಿ ಎಂದು ಸೂಚಿಸಿದರು. ಸರಕಾರದ ಯೋಜನೆ, ಸಾಧನೆಯನ್ನು ತಿಳಿಸುವ ಕಾರ್ಯಕ್ರಮ ಜನೋತ್ಸವ ಎಂದ ಅವರು, ಇದು ಮುಂದಿನ ಚುನಾವಣೆಯ ದಿಕ್ಸೂಚಿ ಎಂದು ನುಡಿದರು.
ಜುಲೈ 28ರಂದು ಜನೋತ್ಸವ ನಡೆಯಬೇಕಿತ್ತು. ಕೊನೆಯ ಕ್ಷಣದಲ್ಲಿ ಕಾರ್ಯಕ್ರಮ ಮುಂದೂಡಬೇಕಾಯಿತು. ಪೂರ್ಣ ವ್ಯವಸ್ಥೆ, ಪೂರ್ಣ ತಯಾರಿ, ಸಿದ್ಧತಾ ಸಭೆಗಳು ನಡೆದಿದ್ದವು. ಬಿಜೆಪಿ ಆಸ್ತಿ ಎನಿಸಿದ ಕಾರ್ಯಕರ್ತನ ಹತ್ಯೆ ಕಾರಣಕ್ಕಾಗಿ ದುಃಖದ ವಾತಾವರಣ ಇದ್ದುದರಿಂದ ಜನೋತ್ಸವವನ್ನು ಮುಂದೂಡಬೇಕಾಯಿತು ಎಂದರು.
ರಾಜ್ಯದ ಸಚಿವರಾದ ಡಾ. ಸುಧಾಕರ್, ಮುನಿರತ್ನ, ಎಂ.ಟಿ.ಬಿ.ನಾಗರಾಜ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ಸಂಸದರಾದ ಮುನಿಸ್ವಾಮಿ, ಶಾಸಕರು, ಜಿಲ್ಲಾಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ

 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ
[04/09, 4:42 PM] Bjp Media: 4-9-2022
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕ: ಸಿ.ಟಿ.ರವಿ
ಬೆಂಗಳೂರು: ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಸೆ. 25ರಂದು ನಮ್ಮ ಪಕ್ಷದ ಸಂಸ್ಥಾಪಕರಲ್ಲಿ ಒಬ್ಬರಾದ ದೀನದಯಾಳ್ ಉಪಾಧ್ಯಾಯರ ಜನ್ಮದಿನ. ಅಕ್ಟೋಬರ್ 2ರಂದು ಮಹಾತ್ಮ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ಕಾರ್ಯಕರ್ತರು ಸೆ. 17ರಿಂದ ಅಕ್ಟೋಬರ್ 2ರ ವರೆಗೆ ಸೇವಾ ಪಾಕ್ಷಿಕವನ್ನು ಆಚರಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಅವರು ತಿಳಿಸಿದರು.
ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಇದೇ 17ರಂದು ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ರಕ್ತದಾನಿಗಳ ವಿವರವನ್ನು ಪ್ರತಿ ಆಸ್ಪತ್ರೆಯಲ್ಲಿ ತಯಾರಿಸಿ ರಕ್ತದಾನಿಗಳ ವಿವರ ಸಿಗುವಂತೆ ಮಾಡಲಾಗುವುದು. ಆರೋಗ್ಯ ಶಿಬಿರವನ್ನೂ ಆಯೋಜಿಸಲಾಗುವುದು. ಅಲ್ಲದೆ ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣೆ ಶಿಬಿರ ಏರ್ಪಡಿಸಲಾಗುತ್ತದೆ ಎಂದು ತಿಳಿಸಿದರು.
ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರಕಾರ ನಿರ್ದೇಶನ ನೀಡಿದೆ. ಕೆಲವು ಜಿಲ್ಲೆಗಳಲ್ಲಿ ಅಮೃತ ಸರೋವರ ನಿರ್ಮಾಣ ಆಗಿದೆ. ಈ ಸಮಯದಲ್ಲಿ ಬಿಜೆಪಿ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳುವರು. ಸಸಿಗಳನ್ನೂ ನೆಡಲಿದ್ದಾರೆ. 2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರ ಮೋದಿಯವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತಿ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆ, ಪೂರಕ ಬೆಂಬಲ ಕೊಡಲಿದ್ದಾರೆ ಎಂದರು.
ಇದಲ್ಲದೆ ಜನಸಂವಾದ, ಜನೋತ್ಸವ ಕಾರ್ಯಕ್ರಮಗಳನ್ನೂ ಆಯೋಜಿಸಲು ಮುಖ್ಯಮಂತ್ರಿಗಳು ಮತ್ತು ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಕಾಂಗ್ರೆಸ್ ಕಾಲದಲ್ಲಿ ನಡೆಸಿ ಮರೆಮಾಚಿದ ಹಗರಣಗಳನ್ನೂ ಬಯಲಿಗೆ ಎಳೆಯಬೇಕು. ಆ ಹಗರಣಗಳ ಕುರಿತು ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವ ಕುರಿತು ಇಂದು ಸುದೀರ್ಘವಾಗಿ ಚರ್ಚೆ ನಡೆಸಿದ್ದಾಗಿ ತಿಳಿಸಿದರು.
ಕರ್ನಾಟಕ ರಾಜ್ಯದಲ್ಲಿ ಕೇಂದ್ರ ಮತ್ತು ರಾಜ್ಯದ ಯೋಜನೆಗಳ ಫಲಾನುಭವಿಗಳು ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶೇ 65ರಿಂದ 80 ಪ್ರತಿಶತ ಜನರು ಇದ್ದಾರೆ. ಈ ಯೋಜನೆಗಳ ಫಲಾನುಭವಿಗಳನ್ನು ಸಂಪರ್ಕಿಸುವ ಕುರಿತು ಪ್ರಮುಖ ಸಭೆಯಲ್ಲಿ ವಿವರವಾಗಿ ಚರ್ಚೆ ನಡೆಸಿ, ಕಾರ್ಯಯೋಜನೆ ತಯಾರಿಸಲಾಗಿದೆ ಎಂದರು.
ಕೆಂಪೇಗೌಡರು ಕಟ್ಟಿದ ಬೆಂಗಳೂರಿನ ಹೆಸರನ್ನು ಯಾರೂ ಹಾಳು ಮಾಡಲು ಸಾಧ್ಯವಿಲ್ಲ. ಮೂಲಸೌಕರ್ಯ ಮೂರು ದಿನಗಳಲ್ಲಿ ಮಾಡುವುದೇ? ಅಥವಾ 3 ವರ್ಷದಲ್ಲಿ ಮಾಡುವುದೇ? ರಾಜಕಾಲುವೆಯನ್ನು ಒತ್ತುವರಿ ಮಾಡಿ ನಿರ್ಮಾಣ ನಡೆಸಿದ್ದು ಬಿಜೆಪಿ ಸರಕಾರ ಬಂದ ಮೇಲೋ ಅಥವಾ ಹತ್ತಿಪ್ಪತ್ತು ವರ್ಷದ ಹಿಂದಿನಿಂದಲೂ ರಾಜಕಾಲುವೆ ಒತ್ತುವರಿ ಪ್ರವೃತ್ತಿ ನಡೆದುಕೊಂಡು ಬಂದಿದೆಯೇ? ಕೆರೆಗಳನ್ನು ಮುಳುಗಿಸಿದ್ದು ಯಾರು? ಕೆರೆಗಳನ್ನು ಅಕ್ರಮ ಬಡಾವಣೆಯಾಗಿ ನಿರ್ಮಿಸಿದವರು ಯಾರು? ಅವರೆಲ್ಲರೂ ಉತ್ತರಿಸಬೇಕಾಗುತ್ತದೆ ಎಂದು ಪ್ರಶ್ನೆಗೆ ಉತ್ತರ ನೀಡಿದರು.
ಕುಮಾರಸ್ವಾಮಿಯವರು ಜಲಧಾರೆ ಕಾರ್ಯಕ್ರಮದಿಂದ ರಾಜ್ಯದ ತುಂಬ ಮಳೆ ಆಗಿದೆ ಎಂದಿದ್ದಾರೆ. ಅವರಿಂದಲೇ ಮಳೆ ಆಗಿದ್ದರೆ ಅತಿವೃಷ್ಟಿಗೂ ಅವರೇ ಕಾರಣ ಇರಬೇಕಲ್ಲವೇ ಎಂದು ಕೇಳಿದರು. ರಾಮನಗರಕ್ಕೆ ಜಾಸ್ತಿ ಪ್ರೀತಿ ಇದ್ದ ಕಾರಣ ಅತಿ ಹೆಚ್ಚು ಮಳೆ ಬಂದಿರಬೇಕು ಎಂದು ನುಡಿದರು. ಅವರ ಹೇಳಿಕೆ ಸತ್ಯ ಎಂದು ಭಾವಿಸುವುದಿಲ್ಲ; ಇವರು ಜಲಧಾರೆ ಮಾಡಿದ್ದು ಕರ್ನಾಟಕದಲ್ಲಿ. ಆದರೆ, ದೇಶದ ತುಂಬೆಲ್ಲ ಮಳೆಯಾಗಿದೆ ಎಂದು ತಿಳಿಸಿದರು.

 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ

Post a Comment

Previous Post Next Post