ಸೆ.17 ಪ್ರಧಾನಿ ಮೋದಿ ಹುಟ್ಟು ಹಬ್ಬ .....,, ಅ.2ರವರೆಗೆ ಸೇವಾ ಪಾಕ್ಷಿಕ ಆಚರಣೆಗೆ ಬಿಜೆಪಿ ಸಿದ್ದತೆ

 ಸೆ.17 ಪ್ರಧಾನಿ ಮೋದಿ ಹುಟ್ಟು ಹಬ್ಬ


ಅ.2ರವರೆಗೆ ಸೇವಾ ಪಾಕ್ಷಿಕ ಆಚರಣೆಗೆ ಬಿಜೆಪಿ  ಸಿದ್ದತೆ


ಕಲಬುರಗಿ....


 ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟು ಹಬ್ಬ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಸೆ.17ರಿಂದ ಅಕ್ಟೋಬರ್‌ 2ರವರೆಗೆ ಬಿಜೆಪಿ ವತಿಯಿಂದ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕಲಬುರಗಿ ಸಂಸದ ಡಾ.ಉಮೇಶ್ ಜಾಧವ್ ತಿಳಿಸಿದರು.


ಅವರು ಗುರುವಾರ ನಗರದ  ಪತ್ರಿಕಾ ಭವನದಲ್ಲಿಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, ಸೆ.17ರಂದು ಬಿಜೆಪಿ ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರಗಳನ್ನು ಏರ್ಪಡಿಸಲಾಗುತ್ತಿದೆ. ಜೊತೆಗೆ, ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣಾ ಶಿಬಿರಗಳನ್ನು  ಏರ್ಪಡಿಸಲಾಗುತ್ತಿದೆ ಎಂದರು.


ಆಜಾದಿ ಕಾ ಅಮೃತ ಮಹೋತ್ಸವ್ ಹಿನ್ನೆಲೆಯಲ್ಲಿ ಕಲಬುರಗಿ ಜಿಲ್ಲೆಯಾದ್ಯಂತ 75 ಕೆರೆಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಈ ಕಾರ್ಯಕ್ಕೆ ಪೂರಕವಾಗಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಛತಾ ಕಾರ್ಯ ಕೈಗೊಂಡು, ಸಸಿಗಳನ್ನು ನೆಡಲಿದ್ದಾರೆ ಎಂದು ಸಂಸದ ಡಾ.ಜಾಧವ್ ಮಾಹಿತಿ ನೀಡಿದರು.


2025ರ ಹೊತ್ತಿಗೆ ಭಾರತವನ್ನು ಕ್ಷಯ ಮುಕ್ತ ದೇಶವಾಗಿ ಸದೃಢಗೊಳಿಸುವ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು ಸೇವಾ ಪಾಕ್ಷಿಕದ ಅವಧಿಯಲ್ಲಿ ಐವರು ಕ್ಷಯ ರೋಗಿಗಳಿಗೆ ಮಾರ್ಗದರ್ಶನ ಹಾಗೂ ಚಿಕಿತ್ಸಾ ವ್ಯವಸ್ಥೆ ಕಲ್ಪಿಸಲಿದ್ದಾರೆ ಎಂದು ವಿವರಿಸಿದರು.


ಇದರ ಜೊತೆಗೆ, ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಪ್ರಧಾನಿ ಮೋದಿಯವರ ಜೀವನದ ಪರಿಚಯ ಮಾಡಿಕೊಡುವ ಪ್ರದರ್ಶನ ಹಮ್ಮಿಕೊಳ್ಳಲಾಗುವುದು. ಪ್ರಧಾನಿ ಮೋದಿ ಆಡಳಿತಾವಧಿಯಲ್ಲಿ ಕೈಗೊಂಡ ಜನಕಲ್ಯಾಣ ಯೋಜನೆಗಳ ಕುರಿತಾದ ಪುಸ್ತಕ ಪ್ರದರ್ಶನ ನಡೆಯಲಿದೆ. ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳುವುದು, ಎಲ್ಲ ಮಂಡಲಗಳಲ್ಲಿ ಎರಡುದ ದಿನಗಳ ಕಾಲ ಸ್ವಚ್ಛತಾ ಅಭಿಯಾನ, ಮಳೆ ನೀರಿನ ಸಂಗ್ರಹದ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು,

 ಸೆ.25ರಂದು ಪಂಡಿತ ದೀನ್ ದಯಾಳ್ ಉಪಾಧ್ಯಾಯ ಅವರ ಜಯಂತಿ ಆಚರಿಸಲಾಗುವುದು. ಅಕ್ಟೋಬರ್ 2ರಂದು ಗಾಂಧಿ ಜಯಂತಿ ಆಚರಣೆ ಪ್ರಯುಕ್ತ ಸ್ವದೇಶಿ, ಆತ್ಮನಿರ್ಭರತೆ, ಸರಳತೆ ಮತ್ತು ಶುಚಿತ್ವದ ಕುರಿತು ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದರು.


ಬಿಜೆಪಿ ಗ್ರಾಮೀಣ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ್ ರದ್ದೇವಾಡಗಿ, ಬಿಜೆಪಿ ಮಾಧ್ಯಮ ಸಂಚಾಲಕ ಚಂದ್ರಶೇಖರ ರೆಡ್ಡಿ ಉಪಸ್ಥಿತರಿದ್ದರು.

ಸೆ. 17ರಿಂದ ಅ. 2ರವರೆಗೆ ಸೇವಾ ಪಾಕ್ಷಿಕ ಕಲ್ಯಾಣ ಕಾರ‌್ಯಕ್ರಮ

ಮಂಡ್ಯ : ಸೆ. 17ರಿಂದ ಅ. 2ರವರೆಗೆ ಸೇವಾ ಪಾಕ್ಷಿಕ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ವಕ್ತಾರ ಸಿ.ಟಿ. ಮಂಜುನಾಥ್ ತಿಳಿಸಿದರು. 

ಸುದ್ಧಿಗೋಷ್ಠಿಘಿಯನ್ನುದ್ದೇಶಿಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರಮೋದಿಯವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಬಡವರ ಸೇವೆ, ಉತ್ತಮ ಆಡಳಿತ ಮತ್ತು ಕಲ್ಯಾಣಕ್ಕಾಗಿ ಬದ್ಧವಾಗಿದೆ. ದೇಶದ ಜನರಿಗಾಗಿ ಪ್ರಧಾನಮಂತ್ರಿಗಳ ಎಲ್ಲ ಯೋಜನೆಗಳು ಮತ್ತು ಕಾರ‌್ಯಕ್ರಮಗಳ ಮೊದಲ ಆಧ್ಯತೆ ಬಡಜನರ ಕಲ್ಯಾಣಕ್ಕಾಗಿ ಎಂಬುದು ಮನದಟ್ಟಾಗಿದೆ ಎಂದು ಹೇಳಿದರು. 

ಸೆ. 17ರಂದು ಪ್ರಧಾನಿ ನರೇಂದ್ರಮೋದಿಯವರ ಹುಟ್ಟುಹಬ್ಬವನ್ನು ಸೇವಾ ಪಾಕ್ಷಿಕ ಅಡಿಯಲ್ಲಿ 15 ದಿನಗಳ ಕಾಲ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರ ಸೂಚನೆಯಂತೆ ಅನೇಕ ಸೇವಾ ಚಟುವಟಿಕೆಗಳನ್ನು  ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. 

17ರಂದು ಯುವ ಮೋರ್ಚಾ ವತಿಯಿಂದ ದೇಶಾದ್ಯಂತ ರಕ್ತದಾನ ಶಿಬಿರ ಏರ್ಪಡಿಸಲಾಗುವುದು. ದಿವ್ಯಾಂಗರಿಗೆ ಕೃತಕ ಅಂಗಾಂಗ ಜೋಡಣಾ ಶಿಬಿರ, ಆಜಾದಿಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಪ್ರತಿ ಜಿಲ್ಲೆಗೆ 75 ಕೆರೆಗಳ ನಿರ್ಮಾಣಕ್ಕೆ ಸರ್ಕಾರ ನಿರ್ದೇಶನ ನೀಡಿದೆ. ಬಿಜೆಪಿ ಕಾರ‌್ಯಕರ್ತರು ನದಿ, ಕೆರೆ, ಬಾವಿಗಳ ಸ್ವಚ್ಚತಾ ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದುಘಿ, ಸಸಿಗಳನ್ನು ನೆಡಲಿದ್ದಾರೆ ಎಂದರು. 

2025ಕ್ಕೆ ಭಾರತವು ಕ್ಷಯ ರೋಗದಿಂದ ಮುಕ್ತ ಆಗಬೇಕೆಂಬುದು ನರೇಂದ್ರಮೋದಿಯವರ ಸಂಕಲ್ಪವಾಗಿದೆ. ಅದಕ್ಕಾಗಿ ಪ್ರತೀ ಕಾರ‌್ಯಕರ್ತರು, ಜನಪ್ರತಿನಿಧಿಗಳು, ಪದಾಧಿಕಾರಿಗಳು, 5 ಜನ ರೋಗಿಗಳಿಗೆ ಮಾರ್ಗದರ್ಶನ, ಚಿಕಿತ್ಸಾ ವ್ಯವಸ್ಥೆಘಿ, ಪೂರಕ ಬೆಂಬಲ ಕೊಡಲಿದ್ದಾರೆ ಎಂದು ಹೇಳಿದರು.

ಪ್ರಧಾನಮಂತ್ರಿಗಳ ಜೀವನ ಮತ್ತು ಗುರಿಯ ಕುರಿತಾಗಿ ಒಂದು ಪ್ರದರ್ಶಿನಿಯನ್ನು ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಆಯೋಜಿಸಲಾಗುವುದು. ಜನಕಲ್ಯಾಣ ಯೋಜನೆಗಳ ಕುರಿತಾದ ಪುಸ್ತಕ ಪ್ರದರ್ಶನ ವಿಶೇಷವಾಗಿ ಮೋದಿಃ20 ಡ್ರೀಮ್‌ಮೀಟ್ ಡಿಲವರಿ ಪುಸ್ತಕಕ್ಕೆ ಅತಿ ಹೆಚ್ಚು ಪ್ರಚಾರ ಕಲ್ಪಿಸಿಕೊಡಬೇಕು ಎಂದರು. 

ಬಿಜೆಪಿ ನಗರಾಧ್ಯಕ್ಷ ವಿವೇಕ್, ಬಿಜೆಪಿ ಮುಖಂಡರಾದ ಶಿವಕುಮಾರ್, ನಾಗಾನಂದ್ ಗೋಷ್ಠಿಯಲ್ಲಿದ್ದರು.

Post a Comment

Previous Post Next Post