2021-22ರಲ್ಲಿ ಅಂದಾಜು ಮೂರು ಸಾವಿರದ 157 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯ ಉತ್ಪಾದನೆಯಾಗಲಿದೆ ಎಂದು ಕೇಂದ್ರ ಕೃಷಿ ಸಚಿವರು ಹೇಳಿದ್ದಾರೆ.

 ಸೆಪ್ಟೆಂಬರ್ 07, 2022

,


8:41PM

2021-22ರಲ್ಲಿ ಅಂದಾಜು ಮೂರು ಸಾವಿರದ 157 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯ ಉತ್ಪಾದನೆಯಾಗಲಿದೆ ಎಂದು ಕೇಂದ್ರ ಕೃಷಿ ಸಚಿವರು ಹೇಳಿದ್ದಾರೆ.

2021-22ರಲ್ಲಿ ದೇಶದಲ್ಲಿ ಮೂರು ಸಾವಿರದ 157 ಲಕ್ಷ ಟನ್‌ಗಳಷ್ಟು ಆಹಾರ ಧಾನ್ಯಗಳ ಉತ್ಪಾದನೆಯನ್ನು ಅಂದಾಜಿಸಲಾಗಿದೆ, ಇದು 2020-21 ಕ್ಕೆ ಹೋಲಿಸಿದರೆ 50 ಲಕ್ಷ ಟನ್‌ಗಳಷ್ಟು ಹೆಚ್ಚಾಗಿದೆ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.


ಈ ಅವಧಿಯಲ್ಲಿ ಒಟ್ಟು ದ್ವಿದಳ ಧಾನ್ಯಗಳ ಉತ್ಪಾದನೆಯು ದಾಖಲೆಯ 277 ಲಕ್ಷ ಟನ್‌ಗಳು ಮತ್ತು ಎಣ್ಣೆಕಾಳುಗಳು ಸುಮಾರು 377 ಲಕ್ಷ ಟನ್‌ಗಳು ಎಂದು ಅಂದಾಜಿಸಲಾಗಿದೆ ಎಂದು ಅವರು ಹೇಳಿದರು. ನವದೆಹಲಿಯಲ್ಲಿ ಇಂದು 2022-23 ರ ರಾಬಿ ಅಭಿಯಾನದ ಕೃಷಿ ಕುರಿತ ರಾಷ್ಟ್ರೀಯ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ ಶ್ರೀ ತೋಮರ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಜಂಟಿಯಾಗಿ ಕೃಷಿ ಕ್ಷೇತ್ರದಲ್ಲಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುತ್ತಿವೆ ಎಂದು ಹೇಳಿದರು.


ದೇಶದಲ್ಲಿ ಉತ್ಪಾದನೆಯಲ್ಲಿ ಸಾಕಷ್ಟು ಕೆಲಸಗಳು ನಡೆದಿದ್ದು, ಇದರಿಂದ ಆಹಾರ ಧಾನ್ಯಗಳು, ಬೇಳೆಕಾಳುಗಳು ಮತ್ತು ಎಣ್ಣೆಕಾಳುಗಳ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ ಎಂದು ಹೇಳಿದರು.


ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರ ಬೆಳೆ ನಷ್ಟಕ್ಕೆ ಪರಿಹಾರವಾಗಿ ಒಂದು ಲಕ್ಷ 22 ಸಾವಿರ ಕೋಟಿ ರೂಪಾಯಿಗಳನ್ನು ನೀಡಲಾಗಿದೆ ಎಂದು ಸಚಿವರು ಹೇಳಿದರು. ಎಲ್ಲ ರೈತರನ್ನು ಈ ಯೋಜನೆಯ ವ್ಯಾಪ್ತಿಗೆ ತರಬೇಕು ಎಂದು ತೋಮರ್ ಹೇಳಿದರು.

Post a Comment

Previous Post Next Post