BJP, ಇಂದು ವಿಶೇಷ

[16/09, 2:57 PM] Bjp Media: 16-09-2022
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಕಾಂಗ್ರೆಸ್ ಆಡಳಿತದಲ್ಲಿ ಸಾಲು ಸಾಲು ಅಕ್ರಮ- ಪಿ.ರಾಜೀವ್
ಬೆಂಗಳೂರು: ಕಾಂಗ್ರೆಸ್ ಪಕ್ಷದ ಆಡಳಿತವು ಅಕ್ರಮಗಳ ಗಂಗೋತ್ರಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಲವು ಬಾರಿ ಹೇಳಿದ್ದು, ಅದು ಈಗ ಸಾಬೀತಾಗುತ್ತಿದೆ ಎಂದು ಬಿಜೆಪಿ ರಾಜ್ಯ ವಕ್ತಾರ ಮತ್ತು ಶಾಸಕ ಪಿ.ರಾಜೀವ್ ಅವರು ಆರೋಪಿಸಿದರು.
ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ನೇಮಕಾತಿಯಲ್ಲಿ ಪಾರದರ್ಶಕತೆ ಇದೆ ಎಂದು ಯುವಜನತೆ ಮತ್ತು ವಿದ್ಯಾರ್ಥಿಗಳಲ್ಲಿ ಭರವಸೆ ಮೂಡಿಸಲು ರಾಜ್ಯದ ಬಿಜೆಪಿ ಸರಕಾರ ಮುಂದಾಗಿದೆ. ಆದರೆ, ಕಾಂಗ್ರೆಸ್‍ನ ಅವಧಿಯಲ್ಲಿ ನಡೆದ ನೇಮಕಾತಿಯಲ್ಲಿ ಸಾಲು ಸಾಲಾಗಿ ಅಕ್ರಮಗಳು ನಡೆದಿವೆ. ಅವು ಈಗ ಬೆಳಕಿಗೆ ಬರುತ್ತಿವೆ. ಆ ಇತಿಹಾಸವನ್ನು ಮುರಿಯಲು ಯಾರಿಂದಲೂ ಅಸಾಧ್ಯ ಎಂದು ತಿಳಿಸಿದರು.
2013ರಲ್ಲಿ ಶಿಕ್ಷಕರ ನೇಮಕಾತಿ ಅಧಿಸೂಚನೆ ಹೊರಡಿಸಿದ್ದು, ಪರೀಕ್ಷೆಯನ್ನೇ ಬರೆಯದವರಿಗೆ ನೇಮಕಾತಿ ಆದೇಶ ಕೊಡಲಾಗಿದೆ. ಅಂಥವರು ಕರ್ತವ್ಯಕ್ಕೆ ಹಾಜರಾಗಿದ್ದಾರೆ. ನಮ್ಮ ಶಿಕ್ಷಣ ಸಚಿವ ನಾಗೇಶ್ ಅವರು ಇದರ ಸುಳಿವು ಪಡೆದು ವಿವರವಾದ ವರದಿ ಪಡೆದರು. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶಿಕ್ಷಕರ ಹುದ್ದೆ ನಿರ್ವಹಿಸುತ್ತಿದ್ದ ಸುಮಾರು 30 ಜನರನ್ನು ದಸ್ತಗಿರಿ ಮಾಡಿದ್ದಾರೆ ಎಂದರು. ಈ ಅಕ್ರಮ ನೇಮಕಾತಿಗೆ ಕಾರಣ ಯಾರು? ಹೀಗೆ ಎಷ್ಟು ಜನ ಕಾಂಗ್ರೆಸ್ಸಿಗರನ್ನು ಅವರ ಅವಧಿಯಲ್ಲಿ ನೇಮಕ ಮಾಡಿರಬಹುದು? ಹಾಗಿದ್ದರೆ ರಾಜ್ಯದ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳಿಗೆ ಇವರು ಯಾವ ರೀತಿ ನ್ಯಾಯ ಕೊಟ್ಟಿದ್ದಾರೆ? ಎಂದು ಅವರು ಪ್ರಶ್ನಿಸಿದರು.
ಅಕ್ರಮಗಳ ವಿಚಾರದಲ್ಲಿ ರಾಜಿಯಾಗುವ ಪ್ರಶ್ನೆಯೇ ಇಲ್ಲ ಎಂದು ಬಿಜೆಪಿ ಸಾಬೀತುಪಡಿಸಿದೆ. ಪಿಎಸ್‍ಐ ನೇಮಕಾತಿ ಅಕ್ರಮದ ಕುರಿತಂತೆ ಪಾರದರ್ಶಕ ತನಿಖೆ ನಡೆಸಲಾಗಿದೆ. ದೇಶದಲ್ಲೇ ಮೊದಲ ಬಾರಿಗೆ ಎಡಿಜಿಪಿ ಹುದ್ದೆಯ ಅಧಿಕಾರಿಯನ್ನು ಬಂಧಿಸಿದ ಸರಕಾರ ಬಿಜೆಪಿಯ ಬೊಮ್ಮಾಯಿ ಅವರದು ಎಂದು ತಿಳಿಸಿದರು.
ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಅವಧಿಯಲ್ಲಿ ನಡೆದಿದ್ದ ಅಕ್ರಮ ನೇಮಕಾತಿಗಳನ್ನು ಬಿಜೆಪಿಯು ಜನತೆ ಮುಂದಿಡಲಿದೆ. ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿ ಸರಕಾರವು ಈ ರಾಜ್ಯದ ಯುವಜನತೆ, ವಿದ್ಯಾರ್ಥಿಗಳು ಮತ್ತು ಪ್ರತಿಭಾವಂತರಿಗೆ ಸ್ಪಷ್ಟ ಸಂದೇಶ ನೀಡಲು ಇಷ್ಟಪಡುತ್ತದೆ; ಹಿಂದಿನಂತೆ ಅನ್ಯಾಯ ಮತ್ತು ಅಕ್ರಮಕ್ಕೆ ಅವಕಾಶವಿಲ್ಲ ಎಂದು ನಾವು ತಿಳಿಸಲಿದ್ದೇವೆ. ಹಿಂದಿನ ಅಕ್ರಮಗಳ ತನಿಖೆ ಮಾಡಿ ತಪ್ಪಿತಸ್ಥರನ್ನು ಕಾನೂನಿನ ಕುಣಿಕೆಗೆ ತರಲಿದ್ದೇವೆ ಎಂದು ತಿಳಿಸಿದರು.
ಕಬ್ಬನ್ ಪಾರ್ಕ್ ಠಾಣೆಯಲ್ಲಿ 166/2018ರಡಿ ಪ್ರಕರಣ ದಾಖಲಾಗಿತ್ತು. ಆ ದೂರಿನಲ್ಲಿ ಮಂಜುನಾಥ ಅವರು, 2013ರಿಂದ 2017ರವರೆಗೆ ಡಿವೈಎಸ್ಪಿ, ಪಿಎಸ್‍ಐ, ಎಫ್‍ಡಿಸಿ, ಎಸ್‍ಡಿಸಿ ಮತ್ತಿತರ ಹುದ್ದೆಗಳನ್ನು ಕೊಡಿಸುವುದಾಗಿ ಸುಮಾರು 18 ಕೋಟಿ ಹಣವನ್ನು ಸಾರ್ವಜನಿಕರಿಂದ ವಸೂಲಿ ಮಾಡಿದ್ದು, ಅಕ್ರಮ ನೇಮಕಾತಿಯಲ್ಲಿ ಭಾಗಿಯಾಗಿದ್ದು, ಲಕ್ಷ್ಮೀಕಾಂತ್ ಮತ್ತು ಲೋಕೇಶ್ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಕೋರಿದೆ ಎಂದು ತಿಳಿಸಲಾಗಿತ್ತು. ಆಗಿನ ಸರಕಾರವು ಆಳವಾಗಿ ತನಿಖೆ ಮಾಡಿದ್ದರೆ ಮುಂದಿನ ಹಗರಣವನ್ನು ತಡೆಯಬಹುದಿತ್ತು. ಆದರೆ ಈ ಪ್ರಕರಣವನ್ನು ಕಾಟಾಚಾರದಲ್ಲಿ ಇತ್ಯರ್ಥ ಮಾಡಿದ್ದರು ಎಂದು ಆರೋಪಿಸಿದರು.
ಅವತ್ತು ಇದ್ದ ಸರಕಾರ ಯಾವುದು? ಅಕ್ರಮ ಮಾಡಿದವರನ್ನು ಯಾಕೆ ಬಚ್ಚಿಟ್ಟರು? ಪರೀಕ್ಷೆ ಬರೆಯದೆ ಶಿಕ್ಷಕರಾಗಿ ಹೇಗೆ ನೇಮಕಾತಿ ಹೊಂದಿದರು? ಎಂದು ಪ್ರಶ್ನೆಗಳನ್ನು ಮುಂದಿಟ್ಟರು. ಇಂಥ ಎಲ್ಲ ಅಕ್ರಮಗಳನ್ನು ಮುಚ್ಚಿಟ್ಟುಕೊಳ್ಳಲು ಲೋಕಾಯುಕ್ತ ಬಾಗಿಲು ಮುಚ್ಚಿ, ಎಸಿಬಿ ತೆರೆದು ತಮ್ಮ ಅಕ್ರಮಗಳನ್ನು ಅಧಿಕೃತಗೊಳಿಸಿದ ಮತ್ತು ಅಕ್ರಮಗಳನ್ನು ಸಕ್ರಮ ಮಾಡಿದ ಅಪಕೀರ್ತಿ ಸಿದ್ದರಾಮಯ್ಯರ ನೇತೃತ್ವದ ಸರಕಾರಕ್ಕಿದೆ. ಕಾಂಗ್ರೆಸ್ ಎಂದರೆ ಅಕ್ರಮಗಳ ಗಂಗೋತ್ರಿ ಎಂದು ಟೀಕಿಸಿದರು.
ಹಂತಹಂತವಾಗಿ ಇದರ ಕುರಿತು ಮಾಹಿತಿಯನ್ನು ಜನರಿಗೆ ಬಿಜೆಪಿ ನೀಡಲಿದೆ. ಇಂಥ ಅಕ್ರಮಗಳಿಗೆ ಇನ್ನು ಮುಂದೆ ಬಿಜೆಪಿ ಸರಕಾರ ಅವಕಾಶ ಕೊಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಲಕ್ಷ್ಮೀಕಾಂತ್ ಮತ್ತು ಲೋಕೇಶ್ ಅವರು ಸಿದ್ದರಾಮಯ್ಯರ ಏಜೆಂಟರೆಂದು ಎಫ್‍ಐಆರ್‍ನಲ್ಲಿದೆ ಎಂದು ಅವರು ಪ್ರಶ್ನೆಗೆ ಉತ್ತರ ಕೊಟ್ಟರು.
ವಿರೋಧ ಪಕ್ಷ ಕಾಂಗ್ರೆಸ್ ಟೂಲ್‍ಕಿಟ್ ರಾಜಕೀಯ ಮಾಡುತ್ತಿದೆ. ತನ್ನ ಅಧಿಕಾರಾವಧಿಯ ಅಕ್ರಮಗಳನ್ನು ಮುಚ್ಚಿ ಹಾಕಲು ಅದು ಯತ್ನಿಸುತ್ತಿದೆ. ಬಿಜೆಪಿ ಇದಕ್ಕೆ ಅವಕಾಶ ಕೊಡುವುದಿಲ್ಲ ಎಂದು ಅವರು ಇನ್ನೊಂದು ಪ್ರಶ್ನೆಗೆ ಉತ್ತರಿಸಿದರು.
ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ಮಾತನಾಡಿ, 2012-13ನೇ ಸಾಲಿನಲ್ಲಿ ಪ್ರೌಢಶಾಲಾ ಸಹ ಶಿಕ್ಷಕರು, ದೈಹಿಕ ಶಿಕ್ಷಕರು ಸೇರಿ 3,407 ಹುದ್ದೆಗಳಿಗೆ ಹಾಗೂ 2014-15ರಲ್ಲಿ 1,689 ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿತ್ತು. ಈ ನೇಮಕಾತಿ ಸಂದರ್ಭದಲ್ಲಿ ಎಲ್ಲ ಪ್ರತಿಭಾವಂತರನ್ನು ಆಯ್ಕೆ ಮಾಡದೆ ಹೆಚ್ಚು ಅಂಕ ಪಡೆಯದ ಕೆಲವು ಅಭ್ಯರ್ಥಿಗಳಿಗೂ ಹುದ್ದೆ ಲಭಿಸಿದೆ. ಪರೀಕ್ಷೆ ಬರೆಯದವರಿಗೂ ನೇಮಕಾತಿ ಮಾಡಲಾಗಿದೆ ಎಂದು ಆರೋಪಿಸಿದರು.
5-7-2022ರಂದು ಇದು ಬೆಳಕಿಗೆ ಬಂತು. ಈ ಸಂಬಂಧ ಶಿಕ್ಷಣ ಇಲಾಖೆಯ ಒಬ್ಬರನ್ನು ಬಂಧಿಸಲಾಗಿದೆ. 12 ಜನ ಸಹ ಶಿಕ್ಷಕರನ್ನೂ ಬಂಧಿಸಲಾಗಿದೆ ಎಂದು ವಿವರಿಸಿದರು. 2014-15ರ ಆಯ್ಕೆಗೆ ಸಂಬಂಧಿಸಿ 2017-18, 18-19ರ ನೇಮಕಾತಿ ಸಂದರ್ಭದಲ್ಲಿ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಆಯ್ಕೆಯಾಗಿ ಕರ್ತವ್ಯಕ್ಕೆ ಹಾಜರಾಗದ ಹುದ್ದೆಗಳಿಗೆ ಆಯ್ಕೆ ಪಟ್ಟಿಯಲ್ಲಿ ಇಲ್ಲದವರನ್ನು ಆಯ್ಕೆ ಮಾಡಲಾಗಿದೆ. ಮೆರಿಟ್ ಲಿಸ್ಟ್ ಬಿಟ್ಟು ನಾನ್ ಮೆರಿಟ್ ಇರುವವರು, ಕನಿಷ್ಠ ಅಂಕಗಳನ್ನೂ ಪಡೆಯದವರಿಗೂ ನೇಮಕಾತಿ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.
ಫೋರ್ಜರಿ ದಾಖಲೆ ಸಲ್ಲಿಸುವಿಕೆ, ಅಧಿಕಾರ ದುರ್ಬಳಕೆ, ಅಧಿಸೂಚನೆಯ ನಿಯಮಗಳನ್ನು ಗಾಳಿಗೆ ತೂರಿದ್ದು ಕಂಡುಬಂದಿದೆ. ಅರ್ಜಿ ಸಲ್ಲಿಸಿದ ಅಭ್ಯರ್ಥಿಯ ನೋಂದಣಿ ಸಂಖ್ಯೆಯನ್ನು ಬಳಸಿ ಭಾಗಶಃ ಹೋಲಿಕೆ ಆಗುವ ಮತ್ತು ಪರೀಕ್ಷೆಯನ್ನೇ ಬರೆಯದ ವ್ಯಕ್ತಿಗಳಿಗೆ ನೇಮಕಾತಿ ಪತ್ರ ಆದೇಶ ನೀಡಲಾಗಿದೆ. ಇಂಥ ಅಕ್ರಮಗಳಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು ಎಂದರು.
2012-13ನೇ ಸಾಲಿನಲ್ಲಿ ಒಬ್ಬರು ಮತ್ತು 2014-15ರಲ್ಲಿ 11 ಜನರು ಅಕ್ರಮವಾಗಿ ನೇಮಕವಾದುದು ದೃಢಪಟ್ಟಿದೆ ಎಂದು ತಿಳಿಸಿ, ಎಫ್‍ಐಆರ್ ಪ್ರತಿಗಳನ್ನು ಅವರು ಒದಗಿಸಿದರು. ಕಾಂಗ್ರೆಸ್ ಪಕ್ಷದ ಅಳಿವು ಉಳಿವಿನ ನಾಯಕರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಬಿಜೆಪಿ ಬಗ್ಗೆ ಆರೋಪ ಮಾಡುತ್ತಾರೆ. ತಮ್ಮ ಕಾಲದಲ್ಲಿ ಭ್ರಷ್ಟಾಚಾರ ಆಗಿಲ್ಲ ಎನ್ನುವ ಸಿದ್ದರಾಮಯ್ಯ ಈ ಅಕ್ರಮಕ್ಕೆ ನೈತಿಕ ಜವಾಬ್ದಾರಿಯನ್ನು ಹೊರುತ್ತಾರಾ? ಎಷ್ಟು ಸಾವಿರ ಜನ ಮೆರಿಟ್ ಇರುವವರಿಗೆ ಇದರಿಂದ ಅನ್ಯಾಯವಾಗಿದೆ? ಎಂದು ಕೇಳಿದರು. 
ನಾವೇನೂ ಅವರ ರಾಜೀನಾಮೆ ಕೇಳುವುದಿಲ್ಲ ಎಂದ ಅವರು, ಏನು ಕ್ರಮ ತೆಗೆದುಕೊಳ್ಳುತ್ತೀರಿ? ಏನು ಪ್ರಾಯಶ್ಚಿತ್ತ ಮಾಡುತ್ತೀರಿ ಎಂದು ಪ್ರಶ್ನಿಸಿದರು. ಹಿಂದೆ ಪೊಲೀಸ್ ಇಲಾಖೆ ನೇಮಕಾತಿಯಲ್ಲೂ ಅಕ್ರಮಗಳಾಗಿವೆ. ಮುಂದಿನ ದಿನಗಳಲ್ಲಿ ವಿವರ ನೀಡಲಿದ್ದೇವೆ ಎಂದು ತಿಳಿಸಿದರು.
ಕಾಂಗ್ರೆಸ್ ಮುಖಂಡರು 40 ಶೇಕಡಾ ಭ್ರಷ್ಟಾಚಾರ ಆರೋಪಕ್ಕೆ ದಾಖಲೆ ಬಿಡುಗಡೆಗೊಳಿಸಲಿ ಎಂದು ಅವರು ಆಗ್ರಹಿಸಿದರು. ಕೆಂಪಣ್ಣ ನಿಮ್ಮ ಏಜೆಂಟ್ ಎಂದು ಆಕ್ಷೇಪಿಸಿದರು. ಮುಖಂಡ ಎಂ.ಡಿ.ಲಕ್ಷ್ಮೀನಾರಾಯಣ್ ಅವರು ಉಪಸ್ಥಿತರಿದ್ದರು.



 (ಕರುಣಾಕರ ಖಾಸಲೆ)
  ಮಾಧ್ಯಮ ಸಂಚಾಲಕರು
    ಬಿಜೆಪಿ ಕರ್ನಾಟಕ
[16/09, 5:46 PM] Bjp Media: 16.09.2022

ತಮ್ಮ ಗಮನಕ್ಕೆ, 

ಬಿಜೆಪಿ ಮಾಧ್ಯಮ ಪ್ರಕೋಷ್ಠ ಮತ್ತು ಪ್ರೆಸ್‍ಕ್ಲಬ್ ವತಿಯಿಂದ 17.09.2022ರ ಶನಿವಾರ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30ರ ತನಕ ಎಲ್ಲಾ ಪತ್ರಕರ್ತರಿಗೆ, ವರದಿಗಾರರಿಗೆ ಮತ್ತು ಕ್ಯಾಮರಮ್ಯಾನ್‍ಗಳಿಗೆ “ಉಚಿತ ಆರೋಗ್ಯ ತಪಾಸಣಾ ಶಿಬಿರ”ವನ್ನು ಏರ್ಪಡಿಸಲಾಗಿದ್ದು, ಎಲ್ಲಾ ಪತ್ರಕರ್ತರು, ವರದಿಗಾರರು ಮತ್ತು ಕ್ಯಾಮರಮ್ಯಾನ್ ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕಾಗಿ ವಿನಂತಿಸುತ್ತೇನೆ. 

ಕರುಣಾಕರ ಖಾಸಲೆ 
ರಾಜ್ಯ ಮಾಧ್ಯಮ ಸಂಚಾಲಕರು 
ಬಿಜೆಪಿ ಕರ್ನಾಟಕ
[16/09, 7:16 PM] +91 83103 04771: 16-9-2022
ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ
ಜನಸ್ನೇಹಿ ಕಾರ್ಯಕ್ರಮ ಮೂಲಕ ಮೋದಿಜಿ ಹುಟ್ಟುಹಬ್ಬ: ಈರಣ್ಣ ಕಡಾಡಿ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬವಾದ ಸೆ.17 ರಂದು ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಜನಸ್ನೇಹಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಈರಣ್ಣ ಕಡಾಡಿ ಅವರು ತಿಳಿಸಿದ್ದಾರೆ
ದೇಶಿಯ ಕ್ರೀಡೆಗಳಲ್ಲೊಂದಾದ ಕಬಡ್ಡಿ ಪಂದ್ಯಾವಳಿಗಳನ್ನು ಮತ್ತು ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗುತ್ತದೆ. ಕೆರೆ ಮತ್ತಿತರ ಜಲಮೂಲಗಳ ಸ್ವಚ್ಛತೆಯ ಮುಖಾಂತರ ಸನ್ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಜಿಯವರ ಹುಟ್ಟುಹಬ್ಬವನ್ನು ಆಚರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

 (ಕರುಣಾಕರ ಖಾಸಲೆ)
  ಮಾಧ್ಯಮ ಸಂಚಾಲಕರು
    ಬಿಜೆಪಿ ಕರ್ನಾಟಕ

Post a Comment

Previous Post Next Post