ಮಳೆ ಅವಂತರಕ್ಕೇ ಸಿಟ್ಟಿನಿಂದ ಬಯ್ಯೋ ಅನಿವಾಸಿಗಳೆ ಮೊದಲು ಊರು ಬಿಟ್ಟು ಹೊರಡಿ... ಬೆಂಗಳೂರಿಗರ ಆಕ್ರೋಶ..

 ಮರೆತಿರಬೇಕು..ಒಮ್ಮೆ ಜ್ಞಾಪಿಸುತ್ತೇನೆ.


ಊರು ಬಿಟ್ಟಾಗಿಂದ ತಿಂದ ಒಂದೊಂದು ಕಾಳು ಅನ್ನದ ದುಡಿಮೆಗೆ ದಾರಿಯಾಗಿದ್ದು ಈ ಊರು


ಊರಲ್ಲಿ ಕೆಲಸಕ್ಕೆ ಬಾರದವರು ಎನಿಸಿಕೊಳ್ಳುತ್ತಿದ್ದವರಿಗೆ ಕೆಲಸ ಕೊಟ್ಟಿದ್ದು ಈ ಊರು


ಅಪ್ಪ- ಅಮ್ಮನ ದುಡ್ಡಲ್ಲಿ ಟಿಕೇಟ್ ಕೊಂಡು ಬಸ್ಸು , ರೈಲು ಹತ್ತಿ ಬಂದವರಿಗೆ ಸ್ವಂತ ಕಾರಲ್ಲಿ ಊರಿಗೆ ಹೋಗಿ ಬರುವಂತೆ ಮಾಡಿದ್ದು ಈ ಊರು


ಹುಟ್ಟಿದ ಊರಲ್ಲಿ ಮನೆ ಕಟ್ಟಿಸಲು ದುಡ್ಡು ಕೊಟ್ಟಿದ್ದು ಈ ಊರು


ಅಕ್ಕ ತಂಗಿಯರ ಮದುವೆ ಖರ್ಚಿಗೆ

ಹಣ ಹುಟ್ಟಿಸಿದ್ದು ಈ ಊರು


ಅಪ್ಪ ಅಮ್ಮನ ಚಿಕಿತ್ಸೆಯ ಬಿಲ್ ಭರಿಸೋ ತಾಕತ್ತು ಕೊಟ್ಟಿದ್ದು ಈ ಊರು


ಆ ಜಾತಿ ಈ ಧರ್ಮ ಆ ರಾಜ್ಯ ಈ ಭಾಷೆ ಅಂತಾ ಭೇದ ಮಾಡದೇ ಎಲ್ಲರನ್ನು ಒಂದೇ ಕಟ್ಟಡಗಳಲ್ಲಿ ಒಂದಾಗಿ ಬಾಳುವಂತೆ ಮಾಡಿದ್ದು ಈ ಊರು


ಬೇರೆ ನಗರಗಳು ಧಗೇಲಿ ಬೇಯುತ್ತಿರುವಾಗ ಏಸಿ ವೆದರ್ ಅಲ್ಲಿ ನಮ್ಮನ್ನು ತಣ್ಣಗಿಟ್ಟಿದ್ದು 

ಈ ಊರು


ಎಲ್ಲೆಲ್ಲಿಂದಲೋ ಉದ್ಯೋಗ ಅರಸಿ ಹೊಟ್ಟೆ ಪಾಡಿಗಾಗಿ ಬಂದಿಳಿದವರು ನಾಲ್ಕಾರು ಫ್ಲಾಟ್ ಕೊಂಡು , ವೀಕೆಂಡ್ ಮೋಜು ಮಸ್ತಿ ಮಾಡಿಕೊಂಡು ಇಲ್ಲಿನ ಭಾಷೆ ,ಸಂಸ್ಕ್ರತಿ ಗೌರವಿಸದಿದ್ದರು ಹೋಗಲೀ ಬಿಡು ಅಂತಾ

ಬಿಂದಾಸಾಗಿರಲು ಅನುವು ಮಾಡಿಕೊಟ್ಟಿದ್ದು ಈ ಊರು


ಕೋಟ್ಯಾಂತರ ಜನರಿಗೆ ಬದುಕು ಕಟ್ಟಿ ಕೊಟ್ಟ ವಿಶಾಲ ಹೃದಯಿ , ಅವಕಾಶಗಳ ಆಗರ ನಮ್ಮ ಬೆಂಗಳೂರು


ನಾಲ್ಕು ದಿನದ ಮಳೆಗೆ ರಸ್ತೆ ,ಮನೆಗಳಿಗೆ ನೀರು ನುಗ್ಗಿ ಅವಾಂತರಗಳಾದರೆ ಒಂದು ಹಂತಕ್ಕೆ ಆಡಳಿತದ ಅಸಮರ್ಪಕ ನಿರ್ವಹಣೆಯನ್ನು ಟೀಕಿಸಬಹುದಾದರೂ,  ಇಂತಾ ಜಡಿಮಳೆಯ ಪ್ರಕೃತಿ ವಿಕೋಪಕ್ಕೆ ಅಮೇರಿಕ , ಯೂರೋಪ್ ಅಂತಾ ದೇಶಗಳ ಸುಸಜ್ಜಿತ  ನಗರಗಳು ಸಿಕ್ಕು ಒದ್ದಾಡಿರುವುದನ್ನು ಗಮನಿಸಬೇಕು. 


ಏನೇ ಆದರೂ ನಾಲ್ಕು ದಿನದ ಸಂಕಷ್ಟಕ್ಕೆ ವರುಷಗಳಿಂದ ಪೊರೆದ ಮಾತೃ ಹೃದಯಿ ಬೆಂಗಳೂರಿಗೆ ಬೈದರೇ, ಗೇಲಿ ಮಾಡಿದರೆ ಉದ್ಧಾರ ಆಗ್ತಿರ್ರೇನ್ರೋ 


ನಮ್ಮ ಬೆಂಗಳೂರು❤️ ನಮ್ಮ ಹೆಮ್ಮೆ❤️

ಇಷ್ಟ ಆಗ್ದೇ ಇರೋರು ದಯಮಾಡಿ

ಗಂಟು ಮೂಟೆ ಕಟ್ಟಿ ಹೊರಡಿ . 

ಮತ್ತೆ ಈ ಕಡೆ ಮುಖ ಹಾಕ್ಬೇಡಿ.

ಉಳಿದವರು ನೆಮ್ಮದಿಯಿಂದ ಇರ್ತೀವಿ.

Post a Comment

Previous Post Next Post