ಸೆಪ್ಟೆಂಬರ್ 16, 2022
,
8:53PM
ಪ್ರಧಾನಿ ಮೋದಿ ಅವರು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು; ಪ್ರಜಾಪ್ರಭುತ್ವ, ರಾಜತಾಂತ್ರಿಕತೆ ಮತ್ತು ಸಂವಾದದ ಪ್ರಾಮುಖ್ಯತೆಯನ್ನು ಒತ್ತಿಹೇಳಿದರು
@ನರೇಂದ್ರ ಮೋದಿ
SCO ಶೃಂಗಸಭೆಯ ಹಿನ್ನಲೆಯಲ್ಲಿ ಉಜ್ಬೇಕಿಸ್ತಾನದ ಸಮರ್ಕಂಡ್ ನಗರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಿದರು. ಉಭಯ ನಾಯಕರು ವಿವಿಧ ವಲಯಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಗಾಢಗೊಳಿಸುವ ಮಾರ್ಗಗಳ ಕುರಿತು ಚರ್ಚಿಸಿದರು.
ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಆಹಾರ, ಇಂಧನ ಮತ್ತು ರಸಗೊಬ್ಬರ ಬಿಕ್ಕಟ್ಟಿನ ಸಮಸ್ಯೆಗಳನ್ನು ಪ್ರಸ್ತಾಪಿಸಿದರು, ಈ ಸವಾಲುಗಳನ್ನು ಎದುರಿಸಲು ಕಾಂಕ್ರೀಟ್ ಪರಿಹಾರಗಳನ್ನು ಕಂಡುಹಿಡಿಯಬೇಕು ಎಂದು ಹೇಳಿದರು. ರಷ್ಯಾ-ಉಕ್ರೇನ್ ಸಂಘರ್ಷದ ಸಂದರ್ಭದಲ್ಲಿ ಭಾರತೀಯ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಸ್ಥಳಾಂತರಿಸಲು ಸಹಾಯ ಮಾಡಿದ್ದಕ್ಕಾಗಿ ಅವರು ರಷ್ಯಾ ಮತ್ತು ಉಕ್ರೇನ್‌ಗೆ ಧನ್ಯವಾದ ಅರ್ಪಿಸಿದರು. ಶ್ರೀ ಮೋದಿಯವರು ಪ್ರಜಾಪ್ರಭುತ್ವ, ರಾಜತಾಂತ್ರಿಕತೆ ಮತ್ತು ಸಂವಾದದ ಮಹತ್ವವನ್ನು ಒತ್ತಿ ಹೇಳಿದರು. ಭಾರತ-ರಷ್ಯಾ ಸಂಬಂಧಗಳ ಕುರಿತು ಪ್ರಧಾನಮಂತ್ರಿ ಅವರು, ಎರಡೂ ದೇಶಗಳು ದಶಕದ ಪಾಲುದಾರರಾಗಿದ್ದಾರೆ. ಎಸ್‌ಸಿಒ ಶೃಂಗಸಭೆಯ ಸಂದರ್ಭದಲ್ಲಿ ಭಾರತದ ಕುರಿತು ನೀಡಿದ ಹೇಳಿಕೆಗಾಗಿ ಅವರು ರಷ್ಯಾದ ಅಧ್ಯಕ್ಷರಿಗೆ ಧನ್ಯವಾದ ಅರ್ಪಿಸಿದರು.
ಈ ಸಂದರ್ಭದಲ್ಲಿ, ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್, ದ್ವಿಪಕ್ಷೀಯ ವ್ಯಾಪಾರ, ರಷ್ಯಾದ ರಸಗೊಬ್ಬರ ಪೂರೈಕೆ, ಕೃಷಿ ಸಹಕಾರದಲ್ಲಿ ಸಹಕಾರ, ತೈಲ, ಅನಿಲ, ಪರಮಾಣು ಶಕ್ತಿ ಯೋಜನೆಗಳು ಮತ್ತು ವೀಸಾ ಮುಕ್ತ ಪ್ರವಾಸಿ ವಿನಿಮಯವನ್ನು ಪ್ರಸ್ತಾಪಿಸಿದರು.
ಎರಡೂ ದೇಶಗಳ ನಡುವೆ ವ್ಯಾಪಾರ ವೃದ್ಧಿಯಾಗುತ್ತಿದೆ ಎಂದರು. ರಷ್ಯಾದ ಗೊಬ್ಬರದ ಪೂರೈಕೆ ಎಂಟು ಪಟ್ಟು ಹೆಚ್ಚಾಗಿದೆ, ಇದು ಹೆಚ್ಚಿನ ಜನಸಂಖ್ಯೆಗೆ ಆಹಾರ ಭದ್ರತೆಯನ್ನು ಒದಗಿಸಲು ಭಾರತಕ್ಕೆ ನಿರ್ಣಾಯಕವಾಗಿದೆ ಎಂದು ಅವರು ಹೇಳಿದರು. ರಷ್ಯಾಕ್ಕೆ ಭೇಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನ ನೀಡಿದರು.
Post a Comment