ಪ್ರಧಾನಿ ಸಹಿತ ಗಣ್ಯರ ಸಂತಾಪಗಳು

*ಪ್ರಧಾನಿ ತೀವ್ರ . ..    ಸಂತಾಪ



ಸಚಿವ ಉಮೇಶ್ ಕತ್ತಿ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ:*

*ಬೆಂಗಳೂರು:*

ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

'ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು.

ಇದ್ದುದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ. ಅದೇ ಕಾಲಕ್ಕೆ ಎಂಥದೇ ಗಂಭೀರ ಪರಿಸ್ಥಿತಿಯನ್ನು ನವಿರು ಹಾಸ್ಯದ ಮೂಲಕ ತಿಳಿಗೊಳಿಸುವ ಸ್ವಭಾವ ಅವರದಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ.

ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ' ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

.,... 
7-9-2022
ಪ್ರಕಟಣೆಯ ಕೃಪೆಗಾಗಿ
ಸಚಿವ ಉಮೇಶ ಕತ್ತಿ ಅವರ ಅಕಾಲಿಕ ನಿಧನಕ್ಕೆ ಬೆಂಗಳೂರು ದಕ್ಷಿಣ ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷರಾದ ಡಾ. ಎನ್.ಆರ್.ರಮೇಶ್ ರವರು ಸಂತಾಪ ಸೂಚಿಸಿರುತ್ತಾರೆ
ಉತ್ತರ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ಸದಾ ಚಿಂತಿಸುತ್ತಿದ್ದ ಮುಖಂಡ, ಆಹಾರ, ನಾಗರಿಕ ಸರಬರಾಜು ಹಾಗೂ ಅರಣ್ಯ ಸಚಿವ ಉಮೇಶ ಕತ್ತಿ ಅವರ ಅಕಾಲಿಕ ನಿಧನ ತೀವ್ರ ಆಘಾತ ತಂದಿದೆ ಎಂದು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾ ಅಧ್ಯಕ್ಷರಾದ ಡಾ. ಎನ್.ಆರ್.ರಮೇಶ್ ಅವರು ತಿಳಿಸಿದ್ದಾರೆ.
ವಿಧಾನಸಭೆಯ ಅತ್ಯಂತ ಹಿರಿಯ ನಾಯಕರೂ ಆಗಿದ್ದ ಶ್ರೀ. ಉಮೇಶ್ ಕತ್ತಿ ಯವರು 8 ಬಾರಿ ಶಾಸಕರಾಗಿ ಆಯ್ಕೆಯಾದ ಹೆಗ್ಗಳಿಕೆ ಹೊಂದಿದ್ದರು. ತಮ್ಮ 25ನೇ ವಯಸ್ಸಿನಲ್ಲೇ ಅವರು ವಿಧಾನಸಭೆ ಪ್ರವೇಶಿಸಿದ್ದರು.
ಅವರ ಅಗಲಿಕೆಯಿಂದ ಉತ್ತರ ಕರ್ನಾಟಕದ ಅತ್ಯಂತ ಕ್ರಿಯಾಶೀಲ ಹಾಗೂ ಮುತ್ಸದ್ದಿ ನಾಯಕನನ್ನು ಪಕ್ಷವು ಕಳೆದುಕೊಂಡಿದೆ ಎಂದು ಅವರು ತಿಳಿಸಿದ್ದಾರೆ.
ಅವರ ಅಕಾಲಿಕ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಪರಮಾತ್ಮನು ಕುಟುಂಬ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಟಿ.ಎಸ್.ಸುಬ್ರಮಣ್ಯ
ಮಾಧ್ಯಮ ಸಂಚಾಲಕರು
ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲೆ
"

Post a Comment

Previous Post Next Post