[17/09, 9:14 AM] Deepak Karade. CM. Media. office: ಕಲ್ಯಾಣ ಕರ್ನಾಟಕ ಉತ್ಸವದ ಅಂಗವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರ್ಗಿಯಲ್ಲಿ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಮೂರ್ತಿಗೆ ಮಾಲಾರ್ಪಣೆ ಮಾಡಿದರು. ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಮುರುಗೇಶ್ ನಿರಾಣಿ, ಮುನಿರತ್ನ, ಕೆಕೆಆರ್ ಡಿ ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಹಾಗೂ ಆ ಭಾಗದ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
[17/09, 10:11 AM] Deepak Karade. CM. Media. office: *ಕಲಬುರಗಿ,* ಸೆಪ್ಟಂಬರ್ 17: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಕಲಬುರಗಿ ಜಿಲ್ಲಾಡಳಿತ ಹಾಗೂ *ಕಲ್ಯಾಣ ಕರ್ನಾಟಕ* *ಅಮೃತ ಮಹೋತ್ಸವ ದಿನಾಚರಣೆ* ಸಮಿತಿ ಕಲಬುರಗಿ ಇವರ ವತಿಯಿಂದ *ಪೊಲೀಸ್* *ಪೆರೇಡ್ ಮೈದಾನದಲ್ಲಿ ಕಲ್ಯಾಣ* *ಕರ್ನಾಟಕದ ಅಮೃತ* ಮಹೋತ್ಸವ *ದಿನಾಚರಣೆ -2022ರ ಅಂಗವಾಗಿ* ಆಯೋಜಿಸಿರುವ ಧ್ವಜಾರೋಹಣ ಕಾರ್ಯವನ್ನು ನೆರವೇರಿಸಿ ನಂತರ ವಿವಿಧ *ಸಾಂಸ್ಕøತಿಕ ಕಾರ್ಯಕ್ರಮದಲ್ಲಿ* ಪಾಲ್ಗೊಂಡು ಮಾತನಾಡಿದರು.
ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಮುರುಗೇಶ್ ನಿರಾಣಿ, ಆರಗ ಜ್ಞಾನೇಂದ್ರ, ಮುನಿರತ್ನ, ಕೆಕೆಆರ್ ಡಿ ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಹಾಗೂ ಆ ಭಾಗದ ಶಾಸಕರು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
[17/09, 12:21 PM] Deepak Karade. CM. Media. office: *ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮ*
*ಕಲ್ಯಾಣ ಕರ್ನಾಟಕದಲ್ಲಿ 2100 ಶಾಲಾ ಕೊಠಡಿ, 2500 ಅಂಗನವಾಡಿ ಕೇಂದ್ರ ಪ್ರಾರಂಭ: ಸಿಎಂ ಬಸವರಾಜ ಬೊಮ್ಮಾಯಿ*
ಕಲಬುರಗಿ, ಸೆಪ್ಟೆಂಬರ್ 17-
ಕಲ್ಯಾಣ ಕರ್ನಾಟಕ ಭಾಗದಲ್ಲಿ ಪ್ರಸಕ್ತ ವರ್ಷದಲ್ಲಿ 2100 ಶಾಲಾ ಕೊಠಡಿಗಳ ನಿರ್ಮಾಣ ಹಾಗೂ 2500 ಅಂಗನವಾಡಿ ಕೇಂದ್ರಗಳನ್ನು ತೆರೆಯಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ತಿಳಿಸಿದರು.
ಅವರು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಕಲಬುರಗಿಯ ಪೊಲೀಸ್ ಮೈದಾನದಲ್ಲಿಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ನಾವು ಕಂಡ ಕನಸನ್ನು ನಾವೇ ನನಸು ಮಾಡುವ ಸಂಕಲ್ಪ ಮಾಡಿದ್ದೇವೆ ಎಂದು ತಿಳಿಸಿದರು.
ಕಲ್ಯಾಣ ಕರ್ನಾಟಕ ಭಾಗದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯ ನಿರ್ಮಿಸಲು ಆದೇಶಿಸಲಾಗಿದೆ. ಆರೋಗ್ಯ ಸೇವೆ ಉತ್ತಮಪಡಿಸಲು 68 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರ ಸ್ಥಾಪಿಸಲಾಗುತ್ತಿದ್ದು, 14 ಪಿಎಚ್ಸಿತಗಳನ್ನು ಸಿಎಚ್ಸಿ6ಗಳಾಗಿ ಉನ್ನತೀಕರಿಸಲಾಗುತ್ತಿದೆ ಎಂದು ವಿವರಿಸಿದರು.
*ಅತಿ ಹೆಚ್ಚು ಅನುದಾನ*
ಕಲ್ಯಾಣ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ರೂಪಿಸಬೇಕಾದ ಕಾರ್ಯಕ್ರಮಗಳು ಹಾಗೂ ದೀರ್ಘಕಾಲದ ಯೋಜನೆಗಳ ಕುರಿತು ಚಿಂತನೆ ಮಾಡಿದ್ದೇನೆ. ಸಂವಿಧಾನದ 371ನೇ ವಿಧಿಗೆ ತಿದ್ದುಪಡಿಯಾದ ನಂತರ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಗೆ ಒದಗಿಸಿದ ಅನುದಾನವನ್ನು ಗಮನಿಸಿದರೆ, ನಮ್ಮ ಸರ್ಕಾರ ಇತಿಹಾಸದಲ್ಲಿ ಮೊದಲ ಬಾರಿ ಸಂಪೂರ್ಣ ಅನುದಾನ ಬಿಡುಗಡೆ ಮಾಡಿದೆ. ಅಂದು ಭರವಸೆ ನೀಡಿದಂತೆ ಬಜೆಟ್ನಲ್ಲಿ 3000 ಕೋಟಿ ರೂ. ಮಿಸಲಿಟ್ಟು ನಾಲ್ಕೇ ತಿಂಗಳಲ್ಲಿ ಕ್ರಿಯಾ ಯೋಜನೆಗೆ ಅನುಮೋದನೆ ನೀಡಿ ಯೋಜನೆಗಳಿಗೆ ಚಾಲನೆ ನೀಡಲಾಗಿದೆ. ಇದೊಂದು ಕ್ರಿಯಾಶೀಲ ಸರ್ಕಾರ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಲ್ಯಾಣ ಕರ್ನಾಟಕ ಆಗಿದೆ. ಕಲ್ಯಾಣ ರಾಜ್ಯ ಆಗಬೇಕು. ಆ ನಿಟ್ಟಿನಲ್ಲಿ ನಾವು ಕಾರ್ಯ ನಿರ್ವಹಿಸುತ್ತಿದ್ದೆವೆ ಎಂದು ಅವರು ನುಡಿದರು.
*ಸ್ತ್ರೀ ಸಾಮರ್ಥ್ಯ, ಯುವಶಕ್ತಿಗೆ ಮನ್ನಣೆ:*
ಗ್ರಾಮೀಣ ಮಹಿಳೆಯರಿಗೆ ಉದ್ಯೋಗಾವಕಾಶ ಹೆಚ್ಚಿಸಲು ಸ್ತ್ರೀ ಸಾಮರ್ಥ್ಯ ಯೋಜನೆ ಜಾರಿಗೆ ತರಲಾಗಿದೆ. ಅಂತೆಯೇ ಯುವಕರಿಗಾಗಿ ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆಯನ್ನು ಜಾರಿಗೆ ತರಲಾಗಿದೆ. ಪ್ರತಿ ಗ್ರಾಮದಲ್ಲಿ ಮಹಿಳೆಯರ ಮತ್ತು ಯುವಕರ ಸ್ವಸಹಾಯ ಸಂಘಗಳನ್ನು ಸ್ಥಾಪಿಸಿ, ಕಿರುಉದ್ದಿಮೆ ಪ್ರಾರಂಭಿಸಲು ಸಾಲಸೌಲಭ್ಯ, ಬೀಜಧನ ಒದಗಿಸಿ, ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸುವ ಯೋಜನೆ ಇದಾಗಿದೆ. ಕಲ್ಯಾಣ ಕರ್ನಾಟಕದಲ್ಲಿ ಇದರಿಂದ ಸುಮಾರು 1 ಲಕ್ಷ ಯುವಕರಿಗೆ ಉದ್ಯೋಗ ದೊರೆಯಲಿದೆ.
ಕುಶಲ ಕರ್ಮಿಗಳ ಸಮುದಾಯದ ಯುವಕರಿಗೆ ಪ್ರತಿಯೊಬ್ಬರಿಗೆ 50 ಸಾವಿರ ರೂ. ಸಾಲ/ಸಬ್ಸಿಡಿ ನೀಡುವ ಯೋಜನೆ ಜಾರಿಗೊಳಿಸಲಾಗುತ್ತಿದೆ.
ಗುಳೆ ಹೋಗುವುದು ಅಂದರೆ ಮನಸ್ಸು ಕಲಕುತ್ತದೆ ಎಂದ ಮುಖ್ಯಮಂತ್ರಿಗಳು ಕಲ್ಯಾಣ ಕರ್ನಾಟಕ ಭಾಗದ ಜನರು ಗುಳೆ ಹೋಗುವುದನ್ನು ತಡೆಯಲು ಸಮಗ್ರ ಯೋಜನೆ ರೂಪಿಸುತ್ತೇವೆ ಎಂದು ತಿಳಿಸಿದರು. ಕೃಷಿ ಕೂಲಿಕಾರ್ಮಿಕರ ಮಕ್ಕಳ ಶಿಕ್ಷಣಕ್ಕಾಗಿ ವಿದ್ಯಾನಿಧಿ ಯೋಜನೆಯನ್ನು ವಿಸ್ತರಿಸಲಾಗುತ್ತಿದೆ ಎಂದು ತಿಳಿಸಿದರು.
*ಗ್ರೀನ್ ಕಾರಿಡಾರ್*
ಬೀದರ್, ಬಳ್ಳಾರಿ,ರಾಯಚೂರು, ಕೊಪ್ಪಳ ಜಿಲ್ಲೆಗಳಲ್ಲಿ ನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬಸವರಾಜ್ ಪಾಟೀಲ್ ಸೇಡಂ ಅವರ ನೇತೃತ್ವದಲ್ಲಿ ಸಾಂಸ್ಕೃತಿಕ ಸಂಘ ಮಾಡಿದ್ದೇವೆ. ಸುಮಾರು 2 ಲಕ್ಷ ಎಕರೆಗಿಂತ ಹೆಚ್ಚಿರುವ ಬಂಜರು ಭೂಮಿಯನ್ನು ಕೃಷಿ ಯೋಗ್ಯ ಮಾಡಲು ಕ್ರಮ ಕೈಗೊಳ್ಳಲಾಗುವುದು. ಈ ಹಿನ್ನೆಲೆಯಲ್ಲಿ ಈ ಭಾಗದ ಹಸಿರು ಪ್ರದೇಶ ಹೆಚ್ಚಿಸಲು ಕೊಪ್ಪಳದಿಂದ ಕಲಬುರ್ಗಿ, ಬಳ್ಳಾರಿಯಿಂದ ರಾಯಚೂರುವರೆಗೆ ಗ್ರೀನ್ ಕಾರಿಡಾರ್ ಮಾಡಲು ತೀರ್ಮಾನಿಸಿದ್ದೇವೆ. ಇದರೊಂದಿಗೆ ಕೃಷಿ ಅರಣ್ಯಕ್ಕೆ ಉತ್ತೇಜನ ನೀಡಲು ಅರಣ್ಯ ಇಲಾಖೆಗೆ 10. ಕೋಟಿ ನೀಡಲಾಗಿದೆ ಎಂದು ತಿಳಿಸಿದರು.
ಈ ಪ್ರದೇಶ ಅಷ್ಟು ಸುಲಭವಾಗಿ ದೊರೆತಿಲ್ಲ. ಈ ಭಾಗದ ವಿಮೋಚನೆಗೆ ನಾವು ಒಂದು ವರ್ಷ ಕಾಯಬೇಕಾಯಿತು.ಸರ್ದಾರ್ ವಲ್ಲಭಭಾಯಿ ಪಟೇಲರ ದಿಟ್ಟ ನಿಲುವು ಮತ್ತು ನೇತೃತ್ವದಿಂದ ನಿರ್ಧಾರದಿಂದ ಈ ಭಾಗ ಸಮಗ್ರ ಕರ್ನಾಟಕ ಸೇರುವಂತಾಯಿತು ಎಂದು ಕಲ್ಯಾಣ ಕರ್ನಾಟಕ ವಿಮೋಚನೆಗೆ ಶ್ರಮಿಸಿದ ಗಣ್ಯರು ಹಾಗೂ ಈ ಭಾಗಕ್ಕೆ ವಿಶೇಷ ಸ್ಥಾನಮಾನ ಒದಗಿಸಲು ಹೋರಾಡಿದ ಮಹನೀಯರನ್ನು ಮುಖ್ಯಮಂತ್ರಿಗಳು ಸ್ಮರಿಸಿದರು.
ಈ ಭಾಗದಲ್ಲಿ ಮಾನವ ಸಂಪನ್ಮೂಲ, ನೈಸರ್ಗಿಕ ಸಂಪನ್ಮೂಲಕ್ಕೆ ಕೊರತೆ ಇಲ್ಲ. ಕೊರತೆ ಇರುವುದು ಅವಕಾಶದ್ದು. ಅದನ್ನು ಒದಗಿಸುವ ಸಂಕಲ್ಪ ನಮ್ಮ ಸರ್ಕಾರ ಮಾಡಿದೆ. ಗಾಂಧೀಜಿ, ಅಟಲ್ ಬಿಹಾರಿ ವಾಜಪೇಯಿ ಅವರು ಗ್ರಾಮ ಸ್ವರಾಜ್ಯದ ಕನಸು ಕಂಡಿದ್ದರು. ಸ್ವರಾಜ್ಯ ಬಂದಾಗಿದೆ. ಸುರಾಜ್ಯ ನಿರ್ಮಾಣ ಮಾಡಬೇಕಾಗಿದೆ ಎಂದ ಮುಖ್ಯಮಂತ್ರಿಗಳು ವರ್ಷಾಂತ್ಯದಲ್ಲಿ ಪ್ರಗತಿಯ ವರದಿಯೊಂದಿಗೆ ಜನರ ಮುಂದೆ ಬರುವುದಾಗಿ ತಿಳಿಸಿದರು.
*ವರ್ಷಪೂರ್ತಿ ಆಚರಣೆ*
ಕಲ್ಯಾಣ ಕರ್ನಾಟಕ ವಿಮೋಚನೆಯ ಅಮೃತ ವರ್ಷವನ್ನು ವರ್ಷಪೂರ್ತಿ ಆಚರಿಸುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ಜನಜಾಗೃತಿಗಾಗಿ ಎಲ್ಲ ಜಿಲ್ಲೆಗಳಲ್ಲಿ ರಥಯಾತ್ರೆ ಕೈಗೊಳ್ಳಲಾಗುವುದು ಎಂದರು.
ಇಂದು ಪ್ರಧಾನಿ ಮೋದಿ ಹುಟ್ಟು ಹಬ್ಬ, ಅವರಿಗೆ ಸಮಸ್ತ ಕರ್ನಾಟಕ ವಿಶೇಷವಾಗಿ ಕಲ್ಯಾಣ ಕರ್ನಾಟಕ ಜನತೆಯ ಪರವಾಗಿ ಶುಭಾಶಯ ಕೋರಿದ ಮುಖ್ಯಮಂತ್ರಿಗಳು, ಪ್ರಧಾನಿ ಮೋದಿ ಅವರು ಈ ಭಾಗದ ಅಭಿವೃದ್ದಿಗೆ ನಮ್ಮ ಸರ್ಕಾರ ಬದ್ದವಾಗಿದೆ ಅಂತ ಭರವಸೆ ನೀಡಿ ಎಂದು ಸಂದೇಶ ನೀಡಿದ್ದಾರೆ ಎಂದು ತಿಳಿಸಿದರು.
[17/09, 12:21 PM] Deepak Karade. CM. Media. office: *ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ಪ್ರೆ ಸ್ ಹೆದ್ದಾರಿ ನಿರ್ಮಾಣ*
*ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಕಲಬುರಗಿ, ಸೆಪ್ಟೆಂಬರ್ 17-
ಬೀದರ್ ದಿಂದ ಬಳ್ಳಾರಿವರೆಗೆ 4 ವೇ ಎಕ್ಸ್ಪ್ರೆ ಸ್ ಹೈವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ಸಾರಿಗೆ ಸಂಪರ್ಕ ಉತ್ತಮ ಗೊಳಿಸಲು ಈ ಹೆದ್ದಾರಿ ಪ್ರಮುಖ ಪಾತ್ರ ವಹಿಸಲಿದೆ ಎಂದು ಅವರು ಅಭಿಪ್ರಾಯಪಟ್ಟರು.
ಈ ಭಾಗದಲ್ಲಿ ರಾಯಚೂರು, ಬಳ್ಳಾರಿ ವಿಮಾನ ನಿಲ್ದಾಣ ಮಾಡಲು ಕ್ರಮ ಕೈಗೊಳ್ಳಲಾಗಿದೆ..
ಕೇಂದ್ರದ ನೆರವಿನೊಂದಿಗೆ ಯಾದಗಿರಿ, ರಾಯಚೂರು, ಗುಲಬರ್ಗ ರಿಂಗ್ ರೋಡ್ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
*ಕೈಗಾರಿಕಾ ಅಭಿವೃದ್ಧಿ*:
ಈ ಭಾಗದಲ್ಲಿ ಕೈಗಾರಿಕೆ ಸ್ಥಾಪಿಸಲು ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದೇವೆ.
ಕೇಂದ್ರ ಸರ್ಕಾರ ಕಲಬುರ್ಗಿಯಲ್ಲಿ ಟೆಕ್ಸ್ಟೈಲ್ ಪಾರ್ಕ್ ನಿರ್ಮಾಣ ಮಾಡಲು ತೀರ್ಮಾನ ಮಾಡಿದೆ. ರಾಜ್ಯ ಸರ್ಕಾರ ರಾಯಚೂರು ಹಾಗೂ ಬಿಜಾಪುರ ರಲ್ಲಿ ಟೆಕ್ಸ್ಟೈಲ್ ಪಾರ್ಕ್ ಮಾಡಲು ನಿರ್ಧರಿಸಿದೆ. ಇದರಿಂದ ಕನಿಷ್ಠ 25 ಸಾವಿರ ಜನರಿಗೆ ಉದ್ಯೋಗ ದೊರೆಯಲಿದೆ. ಶೀಘ್ರವೇ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಅವರು ತಿಳಿಸಿದರು.
ಇದಲ್ಲದೆ ಬಳ್ಳಾರಿಯಲ್ಲಿ ಜೀನ್ಸ್ ಪಾರ್ಕ್, ಯಾದಗಿರಿಯಲ್ಲಿ ಫಾರ್ಮಾಸೂಟಿಕಲ್ ಕ್ಲಸ್ಟರ್ ನಿರ್ಮಿಸಲಾಗುವುದು. ಕೊಪ್ಪಳದಲ್ಲಿ ಈಗಾಗಲೇ ಆಟಿಕೆಗಳ ಕ್ಲಸ್ಟರ್ ನಿರ್ಮಾಣವಾಗುತ್ತಿದೆ. ಬೀದರ್ ನಲ್ಲಿ ಕೇಂದ್ರದ ನೆರವಿನೊಂದಿಗೆ 90 ಕೋಟಿ ರೂ. ವೆಚ್ಚದಲ್ಲಿ ಪೆಟ್ರೋಲಿಯಂ ಉತ್ಪನ್ನಗಳ ಕುರಿತ ಸಿಪೆಟ್ ಸಂಸ್ಥೆ ಪ್ರಾರಂಭಿಸಲಾಗುವುದು. ಹೀಗೆ ಪ್ರತಿ ಜಿಲ್ಲೆಯ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸುತ್ತಿದೆ ಎಂದು ತಿಳಿಸಿದರು
*ಪಕ್ಷಭೇದ ಮರೆತು ಶ್ರಮಿಸಿ: ಸಿಎಂ ಕಿವಿಮಾತು*
ಈ ಭಾಗದ ಅಭಿವೃದ್ದಿಯಾಗಬೇಕೆಂದರೆ ರಾಜಕಾರಣಿಗಳು ಪಕ್ಷಬೇದ ಮರೆತು ಕೆಲಸ ಮಾಡಬೇಕು.ಅಧಿಕಾರಿಗಳು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ರಾಜಕಾರಣ ಮಾಡಿದರೆ ಈ ಭಾಗಕ್ಕೆ ದೊಡ್ಡ ದ್ರೋಹ ಮಾಡಿದಂತಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.
*ಕಲಬುರಗಿ ಅಭಿವೃದ್ಧಿ*:
ಕಲಬುರ್ಗಿ ಅಭಿವೃದ್ಧಿಗೆ 100 ಕೋಟಿ ನೀಡಿದ್ದೇನೆ. ಕಲಬುರ್ಗಿ ಕರ್ನಾಟಕದ ಭವಿಷ್ಯದ ನಗರ, ಇಲ್ಲಿ ಎಲ್ಲ ರೀತಿಯ ವೈ ಫೈ ಕನೆಕ್ಟ್, ಕೇಬಲ್ ಕನೆಕ್ಟ್ ಮತ್ತಿತರ ಅತ್ಯಾಧುನಿಕ ಸೌಲಭ್ಯ ಒದಗಿಸುವ ಮೂಲಕ ಅಂತಾರಾಷ್ಟ್ರೀಯ ನಗರ ಮಾಡಲು ತೀರ್ಮಾನಿಸಿದ್ದೇವೆ ಎಂದರು.
ಸಮಸ್ತ ಕರ್ನಾಟಕ ಅಭಿವೃದ್ದಿಯಾಗುತ್ತಿರುವ ಈ ಸಮಯದಲ್ಲಿ ಐತಿಹಾಸಿಕವಾಗಿ ಹಿಂದುಳಿದಿರುವ ಕಲ್ಯಾಣ ಕರ್ನಾಟಕವೂ ಅಷ್ಟೇ ವೇಗವಾಗಿ ಬೆಳೆಯಬೇಕು. ಕಲ್ಯಾಣ ಕರ್ನಾಟಕದ ಮೂಲಕ ನವ ಕರ್ನಾಟಕ ಹಾಗೂ ನವ ಭಾರತದ ಅಭಿವೃದ್ದಿಯಾಗಬೇಕು ಎಂದು ಮುಖ್ಯಮಂತ್ರಿಗಳು ಆಶಿಸಿದರು.
[17/09, 12:22 PM] Deepak Karade. CM. Media. office: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ಪೊಲೀಸ್ ಆಯುಕ್ತಾಲಯ ಉದ್ಘಾಟಿಸಿದರು. ಕೇಂದ್ರ ಸಚಿವ ಭಗವಂತ ಖೂಬಾ, ಗೃಹ ಸಚಿವ ಆರಗ ಜ್ಞಾನೇಂದ್ರ, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕೆಕೆಆರ್ ಡಿ ಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಲೋಕಸಭಾ ಸದಸ್ಯ ಡಾ. ಉಮೇಶ್ ಜಾಧವ್ ಹಾಗೂ ಈ ಭಾಗದ ಶಾಸಕರು ಮತ್ತಿತರ ಗಣ್ಯರು ಉಪಸ್ಥಿತರಿದ್ದರು.
[17/09, 1:44 PM] Deepak Karade. CM. Media. office: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿಯ ನೂತನ ವಿದ್ಯಾಲಯದ ಮೈದಾನದಲ್ಲಿ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ, ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಶಂಕುಸ್ಥಾಪನೆ, ಉದ್ಘಾಟನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ತೊಗರಿ ಮಂಡಳಿಯ ‘ಭೀಮಾ ಪಲ್ಸ್’ ಬ್ರ್ಯಾಂಡ್ನಡಿ ತೊಗರಿ ಮಾರಾಟಕ್ಕೆ ಚಾಲನೆ ನೀಡಿದರು. ಇದಲ್ಲದೆ ವಿವಿಧ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳಡಿ ಫಲಾನುಭವಿಗಳಿಗೆ ವಿವಿಧ ಸವಲತ್ತುಗಳನ್ನು ವಿತರಿಸಿದರು.
ಸಮಾರಂಭದಲ್ಲಿ ಕೇಂದ್ರ ಸಚಿವ ಭಗವಂತ ಖೂಬಾ, ರಾಜ್ಯದ ಸಚಿವರಾದ ಆರಗ ಜ್ಞಾನೇಂದ್ರ, ಮುರುಗೇಶ್ಿ ನಿರಾಣಿ, ಮುನಿರತ್ನ, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ, ಕಲ್ಯಾಣ ಕರ್ನಾಟಕ ಕೃಷಿ, ಸಾಂಸ್ಕೃತಿಕ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ, ಸಂಸದ ಡಾ. ಉಮೇಶ್ ಜಾಧವ್ ಹಾಗೂ ಈ ಭಾಗದ ಶಾಸಕರು, ಜನಪ್ರತಿನಿಧಿಗಳು ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[17/09, 2:17 PM] Deepak Karade. CM. Media. office: *ಕಲಬುರಗಿ,* ಸೆಪ್ಟಂಬರ್ 17: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಕಲಬುರಗಿ ಜಿಲ್ಲಾಡಳಿತ ಹಾಗೂ *ಕಲ್ಯಾಣ ಕರ್ನಾಟಕ* *ಅಮೃತ ಮಹೋತ್ಸವ ದಿನಾಚರಣೆ* ಸಮಿತಿಯ ವತಿಯಿಂದ *ಎನ್.ವಿ.ಮೈದಾನದಲ್ಲಿ* *ಕಲ್ಯಾಣ ಕರ್ನಾಟಕದ ಅಮೃತ* *ಮಹೋತ್ಸವ ದಿನಾಚರಣೆ -2022ರ* ಅಂಗವಾಗಿ ಆಯೋಜಿಸಿರುವ *ಕಲ್ಯಾಣ* *ಕರ್ನಾಟಕ ಅಮೃತ ಮಹೋತ್ಸವ* ಉದ್ಘಾಟಿಸಿ, *ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ* ಚಾಲನೆ ನೀಡಿ *ಕೇಂದ್ರ ಹಾಗೂ ರಾಜ್ಯ ಸರ್ಕಾರದ* ಪ್ರಮುಖ *ಯೋಜನೆಗಳ ಫಲಾನುಭವಿಗಳಿಗೆ* *ಸೌಲಭ್ಯ* *ವಿತರಣೆ ಮಾಡಿ ಹಾಗೂ* *ಸಾರ್ವಜನಿಕ ಸಮಾರಂಭದಲ್ಲಿ* *ಕಾರ್ಯಕ್ರಮವನ್ನುದ್ದೇಶಿಸಿ* ಮಾತನಾಡಿದರು.
[17/09, 3:16 PM] Deepak Karade. CM. Media. office: *ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ವರ್ಷದಿಂದ 5 ಸಾವಿರ ಕೋಟಿ ರೂ.ಗಳ ಅನುದಾನ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಕಲಬುರಗಿ, ಸೆಪ್ಟೆಂಬರ್ 17 - ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಮುಂದಿನ ವರ್ಷದಿಂದ 5000 ಕೋಟಿ ರೂ.ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಲಬುರ್ಗಿ ಎನ್ ವಿ ಮೈದಾನ ಸಾರ್ವಜನಿಕ ಸಮಾವೇಶದಲ್ಲಿ
ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಕಾರ್ಯಕ್ರಮ ಹಾಗೂ ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಅವರು ಇಂದು ಮಾತನಾಡುತ್ತಿದ್ದರು.
ಈ ಭಾಗದ ಐತಿಹಾಸಿಕ ಘಟನೆಗಳಿಗೆ ಸಾಕ್ಷಿಯಾಗಿದೆ. ಕಲ್ಯಾಣ ಕರ್ನಾಟಕವನ್ನು ಮುಖ್ಯ ವಾಹಿನಿಗೆ ಸೇರಿಸುವ ಜವಾಬ್ದಾರಿ ನಮ್ಮ ಮೇಲಿದೆ. ಇದರ ಅಭಿವೃದ್ಧಿಗೆ ನಾವು ಸಂಕಲ್ಪ ಮಾಡಿದ್ದೇವೆ. ಹಲವಾರು ಜನರು ಭರವಸೆ ಕೊಟ್ಟು ಹೋಗಿದ್ದಾರೆ. ಆದರೆ ನಾವು ನಿರಂತರವಾಗಿ ಕೆಲಸ ಮಾಡುವ ಮೂಲಕ ಈ ಭಾಗದ ಸಂಪೂರ್ಣ ಅಭಿವೃದ್ದಿ ಮಾಡಲಾಗುವುದು ಎಂದರು.
ಜನಸಮಸ್ಯೆಗಳೊಂದಿಗೆ ಜೀವನ ಮಾಡುತ್ತಾರೆ. ಸಮಸ್ಯೆಯ ಬಗ್ಗೆ ಚರ್ಚೆ ಮಾಡುವುದಕ್ಕೂ, ಅದರೊಂದಿಗೆ ವಾಸ ಮಾಡುವುದಕ್ಕೂ ವ್ಯತ್ಯಾಸವಿದೆ. ಸಮಸ್ಯೆಗಳ ಪರಿಹಾರ ಜನರ ನಡುವೆಯೇ ಇದೆ. ಜನರ ಮಧ್ಯ್ರ್ ಓಡಾಡಿ, ಸಮಸ್ಯೆ ಗೆ ಪರಿಹಾರ ಕಂಡುಕೊಂಡು ಅದರ ಅನುಷ್ಠಾನ ಮಾಡಬೇಕು. ಅದೇ ನಿಜವಾದ ಜನಪರ ಸರ್ಕಾರ ಎಂದರು.
*ಬದಲಾವಣೆಯ ಕಾಲ*
ಇದೀಗ ಬದಲಾವಣೆಯ ಕಾಲ ಬಂದಿದೆ. ಜನಜಾಗೃತರಾಗಿದ್ದಾರೆ. ಈ ಭಾಗದಲ್ಲಿ ಎಲ್ಲಾ ವರ್ಗದ ಜನ ವಾಸಿಸುತ್ತಾರೆ. ಪರಿಶಿಷ್ಟ ಜಾತಿ ಹಾಗೂ ಹಿಂದುಳಿದ ವರ್ಗ ದೊಡ್ಡ ಸಂಖ್ಯೆಯಲ್ಲಿ ಇದ್ದಾರೆ. ಅವರೆಲ್ಲರಿಗೂ ಮನೆ, ಗ್ರಾಮಗಳಿಗೆ ರಸ್ತೆ ಸಂಪರ್ಕ, ಶಾಲೆಗಳು, ಆಸ್ಪತ್ರೆ ಗಳನ್ನು ಒಡಗಿಸಿದಾಗ ಆರೋಗ್ಯ ಕರ, ವಿಶ್ವಾಸಯುತ ಜೀವನ ನಡೆಸಲು ಸಾಧ್ಯ. ನಮ್ಮ ಸರ್ಕಾರ ಈ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಸಂಕಲ್ಪ ಮಾಡಿದೆ. ಕಳೆದ ಸೆಪ್ಟೆಂಬರ್ 17 ರಂದು 3000 ಕೋಟಿ ರೂ.ಗಳನ್ನು ನೀಡುವುದಾಗಿ ಭರವಸೆ ನೀಡಿದಂತೆ ಈ ಬಾರಿಯ ಬಜೆಟ್ ನಲ್ಲಿ ಅನುದಾನ ಒದಗಿಸಲಾಗಿದೆ. ಅನುಮೋದನೆ ನೀಡಿ ಕಾಮಗಾರಿಗಳಿಗೆ ಚಾಲನೆ ನೀಡಲು ಇಲ್ಲಿಗೆ ಬಂದಿರುವುದಾಗಿ ತಿಳಿಸಿದರು. ಇದು ಜನಪರ ಸರ್ಕಾರ ಎಂದು ತಿಳಿಸಿದರು.
*ಪ್ರತಿ ಮನೆಯಲ್ಲಿಯೂ ಕಲ್ಯಾಣವಾಗಬೇಕು*
ಕಲ್ಯಾಣ ಕರ್ನಾಟಕದ ಉದ್ದಗಲಕ್ಕೂ 2100 ಶಾಲಾ ಕೊಠಡಿಗಳಿಗೆ ಚಾಲನೆ ನೀಡುತ್ತಿದ್ದೇವೆ. ಕರ್ನಾಟಕ ಉದಾಯವಾದ ಮೇಲೆ ಇಷ್ಟು ಶಾಲಾ ಕೊಠಡಿಗಳು ನಿರ್ಮಾಣ ವಾಗಿರಲಿಲ್ಲ. ರಾಜ್ಯದಲ್ಲಿ ಒಟ್ಟು 8000 ಕೊಠಡಿ ಕಟ್ಟಲಾಗುತ್ತಿದೆ. ಮುಂದಿನ ಆಗಸ್ಟ್ 15 ರೊಳಗೆ ಶೇ 100 ರಷ್ಟು ಪ್ರಾಥಮಿಕ ಮತ್ತು ಪ್ರೌಢ ಶಾಲೆ ಗಳಲ್ಲಿ ಶೌಚಾಲಯಗಳನ್ನು ನಿರ್ಮಿಸಲು ಆದೇಶಿಸಲಾಗಿದೆ. 2500 ಅಂಗನವಾಡಿಗಳಿಗೆ ಮಂಜೂರಾತಿ ನೀಡಿ, ಚಾಲನೆ ನೀಡಲಾಗಿದೆ. ಪೌಷ್ಟಿಕ ಆಹಾರ ಹಾಗೂ ಶಿಕ್ಷಣದ ಸಶಕ್ತೀಕರಣವನ್ನು ಮಾಡಲಾಗುತ್ತಿದೆ.
ಸರ್ಕಾರಿ ಕಲ್ಯಾಣ ಕರ್ನಾಟಕದ ಅಭಿವೃದ್ದಿ ಮಾಡುವ ಮೂಲಕ ಈ ಭಾಗದ ಪ್ರತಿ ಮನೆಯಲ್ಲಿಯೂ ಕಲ್ಯಾಣವಾಗಬೇಕು. ರಾಜ್ಯದ ಬೇರೆ ಭಾಗಗಳು ಅಭಿವೃದ್ದಿ ಆಗುತ್ತಿರುವಂತೆಯೇ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಾಡಲಾಗುವುದು. ನವ ಕರ್ನಾಟಕದ ಮೂಲಕ ನವ ಭಾರತ ನಿರ್ಮಾಣ ಮಾಡುವುದು ನಮ್ಮ ಘೋಷವಾಕ್ಯ ಹಾಗೂ ಗುರಿ.
ಈ ಭಾಗದ ಅಭಿವೃದ್ದಿಯೊಂದಿಗೆ ಜನರನ್ನು ಪಾಲುದಾರರನ್ನಾಗಿ ಮಾಡಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಕಲ್ಯಾಣ ಕರ್ನಾಟಕದಲ್ಲಿ ವಿಶೇಷ ಅನುದಾನ ನೀಡಿ 1000 ಗ್ರಾಮಗಳ ಸ್ತ್ರೀ ಶಕ್ತಿ ಸಂಘಕ್ಕೆ 1.50 ಲಕ್ಷ ಅನುದಾನ ನೀಡಿ ಸ್ವಯಂ ಉದ್ಯೋಗ ನೀಡಲು ಸ್ತ್ರೀ ಸಾಮರ್ಥ್ಯ ಯೋಜನೆಯನ್ನು ಪ್ರಥಮ ಬಾರಿಗೆ ಮಹಿಳೆಯರಿಗಾಗಿ ಜಾರಿಗೊಳಿಸಲಾಗುತ್ತಿದೆ. ಸ್ವಾಮಿ ವಿವೇಕಾನಂದ ಯುವ ಸಂಘಗಳ ಮೂಲಕ ಪ್ರತಿ ಗ್ರಾಮದಲ್ಲಿ ಯುವಕರ ಸಂಘಟನೆ ಮಾಡಲಾಗುವುದು.
ನೀರಾವರಿ ಯೋಜನೆಯಡಿ ನಾರಾಯಣಪುರ ಬಲದಂಡೆ ಯೋಜನೆ ಅಡಿಯಲ್ಲಿ ಹಿಂದೆ ಜಲ ಸಂಪನ್ಮೂಲ ಸಚಿವನಾಗಿದ್ದಾಗ 3000 ಕೋಟಿ ಒಡಗಿಸಿದ್ದನ್ನು ಸ್ಮರಿಸಿದ ಮುಖ್ಯಮಂತ್ರಿಗಳು, ಈಗ ಅದನ್ನು ಅನುಷ್ಠಾನಗೊಳಿಸುವ ಕೆಲಸ ಮಾಡುತ್ತಿದ್ದೇವೆ ಎಂದರು.
5000 ಶಿಕ್ಷಕರ ನೇಮಕಾತಿ ಯನ್ನು ಮುಂದಿನ ಮಾರ್ಚ್ ಒಳಗೆ ಮಾಡಲಾಗುವುದು. 11000 ಶಿಕ್ಷಕರ ನೇಮಕ ಮಾಡುವ ಬದ್ಧತೆ ನಮ್ಮದು. ವ್ಯವಸ್ಥೆಯಲ್ಲಿ ನಂಬಿಕೆ ಪುನರ್ ಸ್ಥಾಪನೆಗೆ ಬದ್ಧತೆಯಿಂದ ಕೆಲಸ ಮಾಡಲಾಗುವುದು.
ಬೀದರ್ ಜಿಲ್ಲೆಗೆ ನೀರು ಕೊಡುವ ಕಾಗಿಣಾ ಯೋಜನೆ, ಕಲ್ಯಾಣ ಕರ್ನಾಟಕದಲ್ಲಿ ಏತ ನೀರಾವರಿ ಯೋಜನೆಗಳನ್ನು ಜಾರಿಗೊಳಿಸಲಾಗುವುದು.
ಕ್ರಾಂತಿಪುರುಷ ಬಸವಣ್ಣನವರ ಹೋರಾಟದ ನಾಡು ಇದು. ನಮ್ಮ ನಾಯಕರಾದ ಯಡಿಯೂರಪ್ಪ ಅವರು ಅನುಭವ ಮಂಟಪ ಸ್ಥಾಪನೆಗೆ ಚಾಲನೆ ನೀಡಿದ್ದಾರೆ. ಜಗತ್ತಿನ ಮೊದಲ ಪಾರ್ಲಿಮೆಂಟು ಅನುಭವ ಮಂಟಪವನ್ನು ಸ್ಥಾಪಿಸಿ ಜಗತ್ತಿಗೆ ಶರಣರು ಸಾರಿದ ಸಂದೇಶವನ್ನು ಸಾರುವ ಕೆಲಸವನ್ನು ಮಾಡಲಾಗುವುದು ಎಂದರು.
*ರಾಯಚೂರಿಗೆ ಒಂದು ಉನ್ನತ ಮಟ್ಟದ ಮೈದ್ಯಕೀಯ ಸಂಸ್ಥೆ*:
ಕಲಬುರ್ಗಿಯಲ್ಲಿ ಟೆಕ್ಸ್ಟೈಲ್ ಪಾರ್ಕ್ ರಾಯಚೂರಿನ ಜನರು ಏಮ್ಸ್ ಬಗ್ಗೆ ಕನಸು ಕಂಡಿದ್ದಾರೆ. ರಾಯಚೂರಿಗೆ ಒಂದು ಉನ್ನತ ಮಟ್ಟದ ಮೈದ್ಯಕೀಯ ಸಂಸ್ಥೆ ಸ್ಥಾಪಿಸಲಾಗುವುದು. ಕಲಬುರ್ಗಿಯಲ್ಲಿ ಸ್ಥಾಪಿಸುವ ಜಯದೇವ ಆಸ್ಪತ್ರೆಯನ್ನು ಪ್ರಧಾನಿಯವರಿಂದ ಉದ್ಘಾಟನೆ ಮಾಡಿಸಲಾಗುವುದು ಎಂದು ತಿಳಿಸಿದರು.
*ಗುಳೇ ಹೋಗುವುದನ್ನು ತಪ್ಪಿಸಲಾಗುವುದು*
ಈ ಭಾಗದಲ್ಲಿ ಗುಳೆ ಹೋಗುವುದು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ನಾನು ಗುಳೆ ಹೋಗುವುದನ್ನು ತಡೆಯಲಾಗುವುದು. ಸ್ಥಳೀಯವಾಗಿ ಉದ್ಯೋಗ ದೊರಕಿಸಲು ಕೈಗಾರಿಕೆಗಳನ್ನು ಸ್ಥಾಪಿಸಲಾಗುವ ಕೆಲಸ ಮಾಡಲಾಗುವುದು ಎಂದರು. ಕೂಲಿ ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ವಿಸ್ತರಿಸಿದ್ದೇವೆ. ಜನರ ಕೈಗೆ ಉದ್ಯೋಗ ದೊರೆತಲ್ಲಿ ಗುಳೇ ಹೋಗುವುದನ್ನು ತಡೆಯಬಹುದು ಎಂದರು.
[17/09, 3:37 PM] Deepak Karade. CM. Media. office: *ಕಲಬುರಗಿ,* ಸೆಪ್ಟಂಬರ್ 17: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಸೂಪರ್ ಮಾರ್ಕೆಟ್‍ನ ವಾಣಿಜ್ಯ ಕಟ್ಟಡದ 2ನೇ ಮಹಡಿಯಲ್ಲಿ ಆಯೋಜಿಸಿರುವ *ಹೈದ್ರಾಬಾದ್ *ಕರ್ನಾಟಕ* ವಾಣಿಜ್ಯ ಮತ್ತು* *ಕೈಗಾರಿಕಾ ಸಂಸ್ಥೆಗಳನ್ನು “ಕಲ್ಯಾಣ* *ಕರ್ನಾಟಕ ವಾಣಿಜ್ಯ* ಮತ್ತು *ಕೈಗಾರಿಕಾ* *ಸಂಸ್ಥೆ”* ಎಂದು *ಮರುನಾಮಕರಣದ* *ಕಾರ್ಯಕ್ರಮದಲ್ಲಿ ಪಾಲ್ಗೊಂಡು* ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದರು.
Post a Comment