ಪೇ ಸಿಎಂ ಎಂದರೆ ‘ಪೇ ಕಾಂಗ್ರೆಸ್ ಮೇಡಂ’- ನಳಿನ್‍ಕುಮಾರ್ ಕಟೀಲ್
ಬೆಂಗಳೂರು: ಪೇ ಸಿಎಂ ಎಂದರೆ ‘ಪೇ ಕಾಂಗ್ರೆಸ್ ಮೇಡಂ’ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಸಂಸದ ನಳಿನ್‍ಕುಮಾರ್ ಕಟೀಲ್ ಅವರು ತಿಳಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಸಿದ್ದರಾಮಣ್ಣ ಅಧಿಕಾರಾವಧಿಯ ಶೇ 100 ಭ್ರಷ್ಟಾಚಾರವನ್ನು ಅನಾವರಣಗೊಳಿಸುವ “ಸ್ಕ್ಯಾಮ್ ರಾಮಯ್ಯ” ಪುಸ್ತಕವನ್ನು ಬಿಡುಗಡೆ ಮಾಡಿದರು. ಕಾಂಗ್ರೆಸ್ ಮೇಡಂಗೆ ಮಾಡುವ ಪೇಮೆಂಟ್ ಬಗ್ಗೆ ಉಲ್ಲೇಖ ಇದಾಗಿದೆ. ಶಿವಕುಮಾರ್ ಚೀಟಿ ನುಂಗಿದ್ದನ್ನು ನೋಡಿದ್ದೀರಿ. ಅವರು ಚೀಟಿ ಶಿವಕುಮಾರ್ ಆಗಿದ್ದಾರೆ ಎಂದು ತಿಳಿಸಿದರು.
ಪೇ ಸಿಎಂ ಅಭಿಯಾನವು ಕರ್ನಾಟಕಕ್ಕೆ ಮಾಡುತ್ತಿರುವ ಅವಮಾನ ಎಂದು ಟೀಕಿಸಿದರು. ಸಿದ್ದರಾಮಯ್ಯ ಅವರು ಕೋರ್ಟಿನ ಆದೇಶದನ್ವಯ ಬಂಧನಕ್ಕೆ ಒಳಗಾಗಲಿದ್ದಾರೆ ಎಂದು ಪ್ರಶ್ನೆಗೆ ಉತ್ತರ ಕೊಟ್ಟರು. ದೇಶದ ಬಹು ಹಳೆಯದಾದ ಕಾಂಗ್ರೆಸ್ ಪಕ್ಷವು ಸುದೀರ್ಘ ಅವಧಿಯ ರಾಜಕಾರಣದಲ್ಲಿ ಭ್ರಷ್ಟಾಚಾರಕ್ಕೆ ಅತಿ ದೊಡ್ಡ ಕೊಡುಗೆ ಕೊಟ್ಟಿದೆ. ದೇಶದಲ್ಲಿ ಉಗ್ರವಾದ ಭಯೋತ್ಪಾದನೆಗೂ ಕಾಂಗ್ರೆಸ್ ಪಕ್ಷವೇ ಕಾರಣ. 1947ರಿಂದ 2014ವರೆಗೆ ಗರಿಷ್ಠ ವರ್ಷಗಳ ಕಾಲ ದೇಶವನ್ನು ಆಳಿದ ಕಾಂಗ್ರೆಸ್ ಪಕ್ಷವು ಭ್ರಷ್ಟಾಚಾರಕ್ಕೆ ಬೃಹತ್ತಾದÀ ಕೊಡುಗೆ ನೀಡಿದೆ ಎಂದು ತಿಳಿಸಿದರು.
ಕಾಂಗ್ರೆಸ್‍ನ ಅತಿ ಹೆಚ್ಚು ಜನರು ಕಾಂಗ್ರೆಸ್‍ನ ರಾಷ್ಟ್ರೀಯ ನಾಯಕರು, ರಾಜ್ಯದ ನಾಯಕರು ಹಗರಣಗಳಲ್ಲಿ ಸಿಲುಕಿದ್ದಾರೆ. ತನಿಖೆಯ ಫಲಿತಾಂಶಗಳು ಕಾಂಗ್ರೆಸ್ ಪಕ್ಷವನ್ನು ಮುಜುಗರಕ್ಕೆ ಈಡುಮಾಡಿವೆ. ಜನರ ದಾರಿ ತಪ್ಪಿಸಲು ಕಾಂಗ್ರೆಸ್ ಪಕ್ಷ ಪ್ರಯತ್ನಿಸುತ್ತಿದೆ. ಸಿದ್ದರಾಮಣ್ಣನ ಕಾಲಘಟ್ಟದಲ್ಲೂ ಅತಿಹೆಚ್ಚು ಹಗರಣಗಳು ನಡೆದಿದ್ದು, ಲೋಕಾಯುಕ್ತ ಶಕ್ತಿ ಕುಂದಿಸಿ ಹಗರಣಗಳನ್ನು ಮುಚ್ಚಿ ಹಾಕಲು ಆಗಿನ ಸರಕಾರ ಮುಂದಾಗಿತ್ತು ಎಂದು ತಿಳಿಸಿದರು.
ಸಾಲು ಸಾಲಾಗಿ ಹಗರಣಗಳು
ನೆಹರೂರಿಂದ ಆರಂಭಿಸಿ ಮನಮೋಹನ್ ಸಿಂಗ್ ಕಾಲಘಟ್ಟದವರೆಗೆ ಈ ದೇಶದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ, ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಹೊರತುಪಡಿಸಿ ಕಾಂಗ್ರೆಸ್ ಪಕ್ಷದ ಇತರ ಎಲ್ಲ ಪ್ರಧಾನಮಂತ್ರಿಗಳು ಭ್ರಷ್ಟಾಚಾರ ಮತ್ತು ವಿವಿಧ ಹಗರಣಗಳಲ್ಲಿ ಸಿಲುಕಿದವರೇ ಆಗಿದ್ದಾರೆ ಎಂದ ಅವರು, 1948ರ ಜೀಪ್ ಹಗರಣದಿಂದ ಬೊಫೋರ್ಸ್, ಸಿಮೆಂಟ್ ಹಗರಣ, ಕಾಮನ್‍ವೆಲ್ತ್ ಹಗರಣದಿಂದ 2ಜಿ ಹಗರಣದವರೆಗೆ ಆಕಾಶ, ನೀರು, ಮಣ್ಣು ಮತ್ತು ಗಾಳಿಯಲ್ಲಿ ಗರಿಷ್ಠ ಹಗರಣಗಳನ್ನು ಕಾಂಗ್ರೆಸ್ ಪಕ್ಷ ಮಾಡಿದೆ ಎಂದು ಟೀಕಿಸಿದರು. ಯುಪಿಎ ಸರಕಾರದಲ್ಲಿ ನಿರಂತರವಾಗಿ ಹಗರಣಗಳು ನಡೆದಿದ್ದವು ಎಂದು ತಿಳಿಸಿದರು.
ಅನ್ವರ್ ಮಾಣಿಪ್ಪಾಡಿ ವರದಿ 2.5 ಲಕ್ಷ ಕೋಟಿ ಹಗರಣವನ್ನು ಬೆಳಕಿಗೆ ತರಲಿದೆ. ಅರ್ಕಾವತಿ, ಮೊಟ್ಟೆ, ಹಾಸಿಗೆ, ದಿಂಬು ಸೇರಿ ಅನೇಕ ಹಗರಣಗಳು ನಡೆದಿದ್ದವು. ಇವೆಲ್ಲವುಗಳನ್ನು ಮುಚ್ಚಿಡಲು ಕಾಂಗ್ರೆಸ್ ಪ್ರಯತ್ನಿಸಿತು. ಡ್ರಗ್ ದಂಧೆ, ಮರಳು ಮಾಫಿಯಾಗಳು ರಾಜ್ಯದ ಕಾಂಗ್ರೆಸ್ ಸರಕಾರವನ್ನು ನಡೆಸುತ್ತಿದ್ದವು. ಆ ದಂಧೆಗಳನ್ನು ನಮ್ಮ ಸರಕಾರ ನಿಯಂತ್ರಿಸಿದೆ ಎಂದು ವಿವರಿಸಿದರು.
ಕಾಂಗ್ರೆಸ್ ಹಗರಣಗಳ ಸಂಪೂರ್ಣ ತನಿಖೆ ಮತ್ತು ತಪ್ಪಿತಸ್ಥರ ಬಂಧನ ನಡೆಯಲಿದೆ. ತಪ್ಪಿತಸ್ಥರ ಬಂಧನವೂ ನಡೆಯಲಿದೆ. ನಮ್ಮ ಸಾಧನೆ ಮತ್ತು ಅಭಿವೃದ್ಧಿಗಳನ್ನು ನೋಡಿ ಆತಂಕಗೊಂಡ ಕಾಂಗ್ರೆಸ್ ಸುಳ್ಳು ಆರೋಪ ಮಾಡುತ್ತಿದೆ ಎಂದು ಅವರು ಆಕ್ಷೇಪಿಸಿದರು. ದಾಖಲೆಗಳನ್ನು ಸಂಗ್ರಹಿಸಿ ಸ್ಕ್ಯಾಮ್ ರಾಮಯ್ಯ ಪುಸ್ತಕ ಹೊರತಂದಿದ್ದೇವೆ ಎಂದರು.
ಅಧಿಕಾರಿಗಳಾದ ಕೆಂಪಯ್ಯ, ಕೆಂಪಯ್ಯ ಮತ್ತು ಕಾಂಟ್ರಾಕ್ಟರ್ ಕೆಂಪಣ್ಣನ ಮೂಲಕ ಸಿದ್ದರಾಮಣ್ಣ ರಾಜಕೀಯ ಮಾಡುತ್ತಿದ್ದಾರೆ. ಆದರೆ, ನಾವು ಲೋಕಾಯುಕ್ತಕ್ಕೆ ಜೀವ ಕೊಡುವ ಕೆಲಸ ನಾವು ಮಾಡಿದ್ದೇವೆ. ಕಾಂಗ್ರೆಸ್ ಆಡಳಿತ ಅವಧಿಯ ಎಲ್ಲ ಹಗರಣಗಳನ್ನು ತನಿಖೆ ಮಾಡಿಸಲಿದ್ದೇವೆ. ಪ್ರಕರಣ ದಾಖಲಿಸಿ, ಎಷ್ಟೇ ದೊಡ್ಡವರಿದ್ದರೂ ಬಂಧಿಸಲಿದ್ದೇವೆ. ಪಾರದರ್ಶಕ ಆಡಳಿತ ನಡೆಸಲಿದ್ದೇವೆ ಎಂದು ನುಡಿದರು.
ಉಗ್ರವಾದವನ್ನು ಪೋಷಿಸಿದ ಪಕ್ಷ ಕಾಂಗ್ರೆಸ್. ನಾವು ಉಗ್ರರನ್ನು ಮಟ್ಟ ಹಾಕಲು ಎನ್‍ಐಎ ಮೂಲಕ ದಾಳಿಗಳನ್ನು ಸಂಘಟಿಸಿದ್ದೇವೆ. ಇದಕ್ಕಾಗಿ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು ಎಂದರು. ಕಾಶ್ಮೀರ ಉಳಿಸಲು ನಮ್ಮ ಸರಕಾರ ಕ್ರಮ ಕೈಗೊಂಡಿತ್ತು ಎಂದ ಅವರು, ಸಿದ್ದರಾಮಯ್ಯರ ಎಲ್ಲ ಹಗರಣಗಳ ದಾಖಲೆ ಸಂಗ್ರಹಿಸಲಾಗಿದೆ. ಈಗ ತನಿಖೆ ಮುಂದುವರಿಯಲಿದೆ ಎಂದು ಅವರು ಪ್ರಶ್ನೆಗೆ ಉತ್ತರಿಸಿದರು.
ಕಾಂಗ್ರೆಸ್ ಶಾಸಗ್ರಸ್ಥ ಪಕ್ಷ
ಕಾಂಗ್ರೆಸ್ ಪಕ್ಷವು ಭ್ರಷ್ಟರ ಮೂಲ. ಕೇಂದ್ರ. ಭಾರತ್ ಜೋಡೋಗಿಂತ ಮೊದಲು ಕಾಂಗ್ರೆಸ್ ಜೋಡೋ ಮಾಡಬೇಕಿದೆ. ಜಾತಿ ಜಾತಿಗಳನ್ನು ಒಡೆದ, ರಾಜ್ಯಗಳನ್ನು ಮತ್ತು ದೇಶ ಒಡೆದ ಶಾಪ ಕಾಂಗ್ರೆಸ್‍ಗಿದೆ. ಅದೊಂದು ಶಾಸಗ್ರಸ್ಥ ಪಕ್ಷ. ಡಿಕೆಶಿ ಡೀಲ್ ಮಾಸ್ಟರ್ ಎಂದು ಅವರ ಪಕ್ಷದವರೇ ಹೇಳಿದ್ದಾರೆ. ಇಲ್ಲಿಯೂ ಡಿಕೆಶಿ- ಸಿದ್ದರಾಮಣ್ಣ ನಡುವೆ ಜಗಳ ನಡೆಯುತ್ತಿದೆ. ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಡಿಐಜಿ ಮಟ್ಟದ ಅಧಿಕಾರಿಯನ್ನು ನಮ್ಮ ಸರಕಾರ ಬಂಧಿಸಿದೆ ಎಂದು ವಿವರ ನೀಡಿದರು.
ಭ್ರಷ್ಟಾಚಾರ ಕುರಿತು ಕೆಂಪಣ್ಣ ದಾಖಲೆ ಕೊಟ್ಟಿಲ್ಲ. ದಾಖಲೆ ನೀಡಲು ಕಾಲಾವಕಾಶ ಕೊಟ್ಟಿದ್ದೆವು. ಇಂದಿನ ವರೆಗೆ ಕಾಂಗ್ರೆಸ್ ಮತ್ತು ಅವರ ಏಜೆಂಟರು ದಾಖಲೆಗಳನ್ನು ಕೊಟ್ಟಿಲ್ಲ. ಸಾಕ್ಷಿ ಇಲ್ಲದೆ ತನಿಖೆ ಮಾಡಲು ಹೇಗೆ ಸಾಧ್ಯ ಎಂದು ಇನ್ನೊಂದು ಪ್ರಶ್ನೆಗೆ ಉತ್ತರ ಕೊಟ್ಟರು. ಪಕ್ಷದ ಮೂಲಕ ಮಾನನಷ್ಟ ಮೊಕದ್ದಮೆ ದಾಖಲಿಸಲಿದ್ದೇವೆ ಎಂದು ಸ್ಪಷ್ಟಪಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಎನ್. ರವಿಕುಮಾರ್ ಹಾಗೂ ಸಿದ್ದರಾಜು, ರಾಜ್ಯ ಮುಖ್ಯ ವಕ್ತಾರ ಎಂ.ಜಿ. ಮಹೇಶ್ ಮತ್ತು ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಅವರು ಉಪಸ್ಥಿತರಿದ್ದರು.
(ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
ಬಿಜೆಪಿ ಕರ್ನಾಟಕ
Post a Comment