ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಮೋದಿಜಿ ಹುಟ್ಟುಹಬ್ಬ: ಯಡಿಯೂರಪ್ಪ

17-09-2022

ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ಮೋದಿಜಿ ಹುಟ್ಟುಹಬ್ಬ: ಯಡಿಯೂರಪ್ಪ
ಬೆಂಗಳೂರು: ಭಾರತದ ಸರ್ವಾಂಗೀಣ ಅಭಿವೃದ್ಧಿಯ ಹರಿಕಾರ, ಪ್ರಧಾನಿ ನರೇಂದ್ರ ಮೋದಿಜಿ ಅವರ 72ನೇ ವರ್ಷದ ಹುಟ್ಟುಹಬ್ಬದ ಸಂದರ್ಭದಲ್ಲಿ ಇವತ್ತಿನಿಂದ ಅಕ್ಟೋಬರ್ 2 ಮಹಾತ್ಮ ಗಾಂಧೀಜಿ ಜಯಂತಿವರೆಗೆ ವಿವಿಧ ಜನೋಪಯೋಗಿ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಮತ್ತು ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ತಿಳಿಸಿದರು.
ಬಿಜೆಪಿ ಮಾಧ್ಯಮ ಪ್ರಕೋಷ್ಠ ಮತ್ತು ಪ್ರೆಸ್‍ಕ್ಲಬ್ ವತಿಯಿಂದ ಬೆಂಗಳೂರು ಪ್ರೆಸ್‍ಕ್ಲಬ್ ನಲ್ಲಿ ಇಂದು ಉಚಿತ ಆರೋಗ್ಯ ತಪಾಸಣಾ ಶಿಬಿರ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮಕ್ಕೆ ಆಗಮಿಸಿದ್ದ ಅವರು ಪತ್ರಕರ್ತರ ಜೊತೆ ಮಾತನಾಡಿದರು. ಮೋದಿಜಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ; 100 ವರ್ಷ ಕಾಲ ಬದುಕಿ ದೇಶವನ್ನು ಮತ್ತಷ್ಟು ಅಭಿವೃದ್ಧಿಯತ್ತ ಕೊಂಡೊಯ್ಯಲಿ ಎಂದು ದೇವರನ್ನು ಪ್ರಾರ್ಥಿಸುವುದಾಗಿ ಅವರು ತಿಳಿಸಿದರು.

 (ಕರುಣಾಕರ ಖಾಸಲೆ)
  ಮಾಧ್ಯಮ ಸಂಚಾಲಕರು
    ಬಿಜೆಪಿ ಕರ್ನಾಟಕ

Post a Comment

Previous Post Next Post