ನ್ನೆ ರಾತ್ರಿ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳು ಪೆಟ್ರೋಲ್ ಬಾಂಬ್ ಎಸೆದಿರುವ ಘಟನೆ ನಡೆದಿದೆ.
ಕೊಯಮತ್ತೂರು(ತಮಿಳುನಾಡು): ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದೆಆದರೆ, ಯಾವುದೇ ರೀತಿಯ ಸಾವು-ನೋವು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಎನ್ಐಎ ಅಧಿಕಾರಿಗಳು ತಮಿಳುನಾಡಿನ ವಿವಿಧ ಸ್ಥಳಗಳಲ್ಲಿರುವ ಪಿಎಫ್ಐ ಕಚೇರಿಗಳ ಮೇಲೆ ದಾಳಿ ನಡೆಸಿ, ಅನೇಕ ಕಾರ್ಯಕರ್ತರ ಬಂಧನ ಮಾಡಿರುವ ಬೆನ್ನಲ್ಲೇ ಈ ಘಟನೆ ನಡೆದಿದೆ.
ಬಿಜೆಪಿ ಕಚೇರಿ ಮೇಲೆ ದಾಳಿ ನಡೆಸಿರುವುದು ಸಿಸಿಟಿವಿ ದೃಶ್ಯಾವಳಿಯಲ್ಲಿ ಸೆರೆಯಾಗಿದೆ. ಪಕ್ಷದ ಕಾರ್ಯಕರ್ತರು ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಇದರ ಜೊತೆಗೆ ಹಿಂದೂ ಸಂಘಟನೆಯ ಪದಾಧಿಕಾರಿಯೊಬ್ಬರ ಒಡೆತನದ ಮತ್ತೊಂದು ವಾಣಿಜ್ಯ ಸಂಸ್ಥೆ ಮೇಲೂ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಘಟನೆ ಬೆನ್ನಲ್ಲೇ ಉನ್ನತಾಧಿಕಾರಿಗಳು ಸ್ಥಳಕ್ಕಾಗಮಿಸಿದ್ದು, ಪರಿಶೀಲನೆ ನಡೆಸಿದರು. ಪ್ರಕರಣದಲ್ಲಿ ಭಾಗಿಯಾಗಿರುವ ದುಷ್ಕರ್ಮಿಗಳ ಬಂಧನಕ್ಕೆ ಬಿಜೆಪಿ ಕಾರ್ಯಕರ್ತರು ಪಟ್ಟು ಹಿಡಿದಿದ್ದು, ನಿನ್ನೆ ತಡರಾತ್ರಿ ಪ್ರತಿಭಟನೆ ನಡೆಸಿದರು. ಎರಡು ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.
: ದೇಶಾದ್ಯಂತ 93 ಸ್ಥಳಗಳಲ್ಲಿ ಎನ್ಐಎ ದಾಳಿ.. 106 ಪಿಎಫ್ಐ ಕಾರ್ಯಕರ್ತರ ಬಂಧನ
ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಕಾರ್ಯಕರ್ತ ನಂದಕುಮಾರ್, ನಮ್ಮ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ಎಸೆದಿರುವುದು ಭಯೋತ್ಪಾದಕ ಮನಸ್ಸಿರುವ ವ್ಯಕ್ತಿಗಳ ಕೃತ್ಯ. ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಆಗ್ರಹಿಸಲಾಗಿದೆ ಎಂದರು. ಕರ್ನಾಟಕ, ತಮಿಳುನಾಡು, ಕೇರಳ, ಮಹಾರಾಷ್ಟ್ರ ಸೇರಿದಂತೆ ದೇಶದ 15 ರಾಜ್ಯಗಳ ಮೇಲೆ ದಾಳಿ ನಡೆಸಿದ್ದ ಎನ್ಐಎ ಬರೋಬ್ಬರಿ 93 ಸ್ಥಳಗಳ ಪರಿಶೀಲನೆ ನಡೆಸಿತ್ತು. ಇದರ ಜೊತೆಗೆ ಮಹತ್ವದ ದಾಖಲೆ ಸೇರಿದಂತೆ 106 ಪಿಎಫ್ಐ ಕಾರ್ಯಕರ್ತರ ಬಂಧನ ಮಾಡಿದೆ.
.
Post a Comment