cm, ಇಂದು ವಿಶೇಷ

[16/09, 10:53 AM] Deepak Karade. CM. Media. office: ಬೆಂಗಳೂರು, ಸೆಪ್ಟಂಬರ್ 16: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ *ವಿಧಾನಸೌಧದ ಬೃಹತ್* *ಮೆಟ್ಟಿಲುಗಳ ಬಳಿ ** ಆಯೋಜಿಸಿರುವ *ವಿಧಾನಸೌಧ,* *ವಿಕಾಸಸೌಧ** ಮತ್ತು *ಬಹುಮಹಡಿ ಕಟ್ಟಡಗಳಲ್ಲಿ* *ಕಾರ್ಯನಿರ್ವಹಿಸುತ್ತಿರುವ* ಸಫಾಯಿ ಕರ್ಮಚಾರಿಗಳಿಗೆ *ವಿದ್ಯುತ್ ಚಾಲಿತ ದ್ವಿಚಕ್ರ* *ವಾಹನಗಳನ್ನು ವಿತರಿಸಿ* *ಕಾರ್ಯಕ್ರಮವನ್ನುದ್ದೇಶಿಸಿ* ಮಾತನಾಡಿದರು
[16/09, 11:23 AM] Deepak Karade. CM. Media. office: ಬೆಂಗಳೂರು, ಸೆಪ್ಟಂಬರ್ 16: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಮುಂಭಾಗದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿಧಾನಸೌಧ, ವಿಕಾಸಸೌಧ ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರವಾಹನಗಳನ್ನು ವಿತರಿಸಿದರು. 
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ವಿಧಾನ ಪರಿಷತ್ ಉಪ ಸಭಾಪತಿ ಎಂ.ಕೆ. ಪ್ರಾಣೇಶ್, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಶಿವಣ್ಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ಶಾಸಕ ಸಿ. ಟಿ. ರವಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
[16/09, 12:18 PM] Deepak Karade. CM. Media. office: ಮುಖ್ಯಮಂತ್ರಿಗಳಿಂದ ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳ ವಿತರಣೆ

*ಮಹಾನಗರ ಪಾಲಿಕೆಗಳ 600 ಜನರಿಗೆ  ಯೋಜನೆ  ವಿಸ್ತರಣೆ*
ಬೆಂಗಳೂರು, ಸೆಪ್ಟೆಂಬರ್ 16: ದ್ವಿಚಕ್ರ ವಾಹನಗಳ  ಯೋಜನೆ ಹತ್ತು ಮಹಾನಗರ ಪಾಲಿಕೆಗಳಿಗೆ ವಿಸ್ತರಣೆ ಆಗಿದೆ. ಒಟ್ಟು 600 ಜನರಿಗೆ ಒದಗಿಸಲಾಗುತ್ತಿದ್ದು,  ಮೊದಲ ಹಂತದಲ್ಲಿ 400 ಜನರಿಗೆ  ನೀಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. 

 ಅವರು ಇಂದು ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಅಭಿವೃದ್ಧಿ ನಿಗಮದ ವತಿಯಿಂದ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಬಳಿ    ವಿಧಾನಸೌಧ,ವಿಕಾಸಸೌಧ  ಮತ್ತು ಬಹುಮಹಡಿ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿರುವ  ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನಗಳನ್ನು ವಿತರಿಸಿ  ಮಾತನಾಡಿದರು. 

ಸಫಾಯಿ ಕರ್ಮಚಾರಿಗಳಿಗೂ ಎಲ್ಲ ವ್ಯವಸ್ಥೆಗಳನ್ನು ಕಲ್ಪಿಸಿ ಅವರ ಬದುಕಿಗೆ ಶಕ್ತಿಯನ್ನು ತುಂಬುವ, ಸೌಲಭ್ಯಗಳನ್ನು ಒದಗಿಸುವ ಮೂಲಕ ಅವರ ಬದುಕನ್ನು ನಿರಾಳ ಮಾಡುವ ಅವಶ್ಯಕತೆ ಇದೆ. ಅವರು ಮಾಡುತ್ತಿರುವ ಕೆಲಸ ಅತ್ಯಂತ ಪ್ರಮುಖ ಕೆಲಸ. ನಾವು ಸೃಷ್ಟಿ ಮಾಡುವ ಕಸವನ್ನು ಪ್ರತಿನಿತ್ಯ ನಿರಂತರವಾಗಿ ದಣಿವಿಲ್ಲದೆ  ಮಾಡುತ್ತಿದ್ದಾರೆ. ಆ ಕಾಯಕವನ್ನು ಗುರುತಿಸಿ ಪುರಸ್ಕರಿಸುವ ಕಾರ್ಯಕ್ರಮ ಇದಾಗಿದೆ ಎಂದರು. 

ಈ ಉತ್ತಮ ಕೆಲಸ ಮಾಡಿದ ನಿಗಮದ ಅಧ್ಯಕ್ಷ ರು ಹಾಗೂ ಸದಸ್ಯರುಗಳಿಗೆ ಪದಾಧಿಕಾರಿಗಳಿಗೆ ಅಭಿನಂದನೆಗಳನ್ನು ತಿಳಿಸಿದರು.

 ವಿದೇಶದಲ್ಲಿ ಕರ್ಮಚಾರಿಗಳು ಕಾರುಗಳಲ್ಲಿ ಓಡಾಡುವುದನ್ನು ಕೇಳಿದ್ದೆವು. ಈಗ ಇದು ನಮ್ಮ ದೇಶದಲ್ಲಿಯೂ ಆಗುತ್ತಿದೆ. ಈಗ ಸ್ಕೂಟರ್ ನಲ್ಲಿ ಓಡಾಡುವಂತಾಗಿದ್ದು,  ಬರುವ ದಿನಗಳಲ್ಲಿ ಅವರಿಗೆ ಕಾರುಗಳನ್ನು ಒದಾಗಿಸುವಂತಾಗುವ ವಿಶ್ವಾಸವಿದೆ ಎಂದರು. 

 ಅವರ ಎಲ್ಲಾ ವಿಚಾರಗಳಿಗೆ ಸರ್ಕಾರ ಸ್ಪಂದಿಸುತ್ತಿದೆ. ವಾಹನಗಳಿಗೆ ಇದಕ್ಕೆ ಬಾಕ್ಸ್ ಜೋಡಿಸಲು ಸೂಚಿಸಿದ್ದು, ಬಾಬು ಜಗಜೀವನ್ ರಾಮ್ ಹೆಸರಿನಲ್ಲಿ ಪ್ರತಿ ಕ್ಷೇತ್ರಕ್ಕೆ  ಬಾಕ್ಸ್ ಉಳ್ಳ 100 ಸ್ಕೂಟರ್ ಗಳನ್ನು ಸ್ವಯಂ ಉದ್ಯೋಗ ಕೈಗೊಳ್ಳಲು ಅನುಕೂಲ ವಾಗುವಂತೆ ಒದಗಿಸಲು ತೀರ್ಮಾನಿಸಿ ಆದೇಶಿಸಲಾಗಿದೆ.  ಸುಮಾರು 25 ಸಾವಿರ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಅನುಕೂಲವಾಗುತ್ತದೆ. ಸರ್ಕಾರ ಹಂತ ಹಂತವಾಗಿ ಎಲ್ಲಾ ಸೌಲಭ್ಯಗಳನ್ನು ಒದಗಿಸಲು ಕಾರ್ಯಕ್ರಮ ರೂಪಿಸಲಾಗುತ್ತಿದೆ. ಯುವಕರಿಗೆ, ಎಸ್.ಸಿ/ ಎಸ್.ಟಿ ಜನಾಂಗದವರಿಗೆ ಮಹಿಳೆಯರಿಗೆ ಒದಗಿಸಲಾಗುತ್ತಿದೆ.  ಇದೊಂದು ಬಡವರ, ದುಡಿಯುವ ವರ್ಗದ ಪರ್ವಾದ ಸರ್ಕಾರ. ಸಾಮಾಜಿಕ ನ್ಯಾಯ ಅನ್ನುವುದು ಕೇವಲ ಮಾತಿನಲ್ಲಿ ಅಲ್ಲದೆ ಕೃತಿಯಲ್ಲಿ ಮಾಡಿ ತೋರಿಸುತ್ತಿರುವ ಸರ್ಕಾರ ಎಂದು ಮುಖ್ಯಮಂತ್ರಿಗಳು ಹೇಳಿದರು. 

ಸಚಿವ ಗೋವಿಂದ ಕಾರಜೋಳ, ಜೊತ ಶ್ರೀನಿವಾಸ ಪೂಜಾರಿ, ಸಫಾಯಿ ಕರ್ಮಚಾರಿ ಆಯೋಗದ   ಅಧ್ಯಕ್ಷ ಶಿವಣ್ಣ, ಸಫಾಯಿ ಕರ್ಮಚಾರಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವೆಂಕಟೇಶ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ವಿಧಾನ ಪರಿಷತ್ ಸದಸ್ಯರು ಉಪಸ್ಥಿತರಿದ್ದರು.
[16/09, 9:04 PM] Deepak Karade. CM. Media. office: ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಪಾಲ್ಗೊಂಡರು. 

ಉನ್ನತ ಶಿಕ್ಷಣ ಸಚಿವ ಡಾ: ಸಿ.ಎನ್.ಅಶ್ವತ್ಥ್ ನಾರಾಯಣ್, ಉನ್ನತ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಶ್ಮಿ. ವಿ ಹಾಗೂ ವಿವಿಧ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.
[16/09, 9:30 PM] Deepak Karade. CM. Media. office: *ಬೆಂಗಳೂರು* , ಸೆಪ್ಟಂಬರ್ 17:  *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* ಉನ್ನತ ಶಿಕ್ಷಣ ಇಲಾಖೆ ಹಾಗೂ *ರಾಜ್ಯದ ಪ್ರತಿಷ್ಠಿತ* *ಕಂಪನಿಗಳ ಸಿ.ಇ.ಒ. ಗಳು /* *ಮುಖ್ಯಸ್ಥರುಗಳೊಂದಿಗೆ* *ವಿಧಾನಸೌಧ ಸಮ್ಮೇಳನ* ಸಭಾಂಗಣದಲ್ಲಿ ಆಯೋಜಿಸಿರುವ *ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ* *ಸಮಾವೇಶ* *ಕಾರ್ಯಕ್ರಮದಲ್ಲಿ ಪಾಲ್ಗೊಂಡು* *ಮಾತನಾಡಿದರು.*
[16/09, 10:30 PM] Deepak Karade. CM. Media. office: *ಕಾರ್ಪೊರೇಟ್ ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ಸೆಪ್ಟೆಂಬರ್ 16: ಕಾರ್ಪೊರೇಟ್ ಗಳು ಸಂಸ್ಥೆಗಳು ಬದಲಾವಣೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕರೆ ನೀಡಿದರು.

ಅವರು ಇಂದು ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ  ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದರು. 

 ಕೇವಲ ಮೂಲಸೌಕರ್ಯಗಳನ್ನು ಮಾತ್ರವಲ್ಲ ಸಂಸ್ಕೃತಿಯಲ್ಲಿ ಬದಲಾವಣೆ ತರಬೇಕು. ಬಡವರಿಗೆ ಅಗತ್ಯವಿರುವ ಸೌಲಭ್ಯಗಳು ದೊರಕಿದಾಗ ಸಂಸ್ಕೃತಿಯೂ ಬದಲಾಗುತ್ತದೆ.  ಕಂಪನಿ ಹಾಗೂ  ಸಂಸ್ಥೆಗಳು ದತ್ತು ಪಡೆಯುವ ಕಾಲೇಜುಗಳಲ್ಲಿ ಕೇವಲ ಹಣ ಮಾತ್ರವಲ್ಲದೆ ಸಮಯವನ್ನೂ ನೀಡಬೇಕು. ಕಾಲೇಜುಗಳು ನಮ್ಮದೇ ಎಂಬ ಭಾವನೆ ಇರಬೇಕು. ಆಗ ವ್ಯತ್ಯಾಸ ಕಾಣಲು ಸಾಧ್ಯ. ವಿದ್ಯಾರ್ಥಿಗಳ ಬದುಕಿನಲ್ಲಿ ಬದಲಾವಣೆ ತಂದರೆ, ನಿಮ್ಮ ಬದುಕಿನಲ್ಲಿಯೂ ಬದಲಾವಣೆ ತರಲು ಸಾಧ್ಯ ಎಂದರು. 

*ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯ ರಾಜ್ಯವಾಗಬೇಕು*
 
ಕರ್ನಾಟಕ ಶಿಕ್ಷಣ ಕ್ಷೇತ್ರದಲ್ಲಿ ಮುಂಚೂಣಿಯ ರಾಜ್ಯವಾಗಬೇಕು.  ಸರ್ಕಾರಿ ಐಟಿಐಗಳನ್ನು ಟಾಟಾ ಸಂಸ್ಥೆ ಯ ಸಹಯೋಗದಲ್ಲಿ  4800 ಕೋಟಿ ರೂ.ಗಳ ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗಿದೆ. 30 - 40  ಕೋಟಿ ರೂ.ಗಳನ್ನು ಐಟಿಐ ಗಳನ್ನು ಆಧುನೀಕರಣಗೊಳಿಸಲು ವೆಚ್ಚ ಮಾಡಲಾಗಿದೆ. ರಾಜ್ಯದ 7 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಐಐಟಿ ಮಾದರಿಯಲ್ಲಿ ಮೇಲ್ದರ್ಜೆ ಗೇರಿಸಲಾಗುತ್ತಿದೆ. ಮುಂದಿನ 2-3 ವರ್ಷಗಳಲ್ಲಿ ಯುವಿಸಿಇ ಐಐಟಿ ಮಾದರಿಯಲ್ಲಿ ಅಭಿವೃದ್ಧಿಯಾಗಲಿದೆ.  ಬೆಂಗಳೂರಿನ ಅಂಬೇಡ್ಕರ್ ಸ್ಕೂಲ್ ಆಫ್ ಇಕನಾಮಿಕ್ಸ್ ನ್ನು ಲಂಡನ್ ಸ್ಕೂಲ್ ಆಫ್ ಇಕನಾಮಿಕ್ಸ್ ನೊಂದಿಗೆ ಸಹಯೋಗ ಹೊಂದಲು ಸಂಪರ್ಕಿಸಲಾಗುತ್ತಿದೆ.  
ನಿಮ್ಮ ಅನುಭವ, ಸಂಪರ್ಕಗಳನ್ನು ಹಂಚಿಕೊಳ್ಳಬೇಕು.ಅತ್ಯುತ್ತಮ ಜ್ಞಾನ ಕರ್ನಾಟಕದಲ್ಲಿ ಲಭ್ಯವಾಗಬೇಕು ಎನ್ನುವುದು  ನಮ್ಮ ಆಶಯ ಎಂದರು. 

*ಸಮಾಜದಿಂದ ಪಡೆದಿದ್ದನ್ನು  ಸಮಾಜಕ್ಕೆ ಹಿಂದಿರುಗಿಸಬೇಕು*
 ಸಮಾಜ ನಡೆಯುತ್ತಿರುವುದು ದಾನ ನೀಡುವುದರಿಂದ. ಇಡೀ ವಿಶ್ವ ಹಾಗೂ ಸಮಾಜದಿಂದ ನಾವು ಪಡೆದಿರುತ್ತೇವೆ. ಅಂತಿಮವಾಗಿ ಗಳಿಸಿದ್ದನ್ನು ಇಲ್ಲಿಯೇ ಹಿಂದಿರುಗಿಸಬೇಕು. ದಾನ ನೀಡುವುದು ಬದುಕಿನ ಪ್ರಮುಖ ಭಾಗ. ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯಡಿ ಅಥವಾ ಇನ್ಯಾವುದೇ ರೀತಿಯಲ್ಲಿ ನೀಡಿದರೂ ಅದನ್ನು ಹೂಡಿಕೆ ಎಂದು ಪರಿಗಣಿಸಲಾಗುತ್ತದೆಯೋ ಅಥವಾ ಖರ್ಚು ಎಂದು ಭಾವಿಸಬೇಕೇ ಎಂಬ ಪ್ರಶ್ನೆ ಸರ್ಕಾರದ ಮಟ್ಟದಲ್ಲಿಯೂ ಕೇಳಿ ಬರುತ್ತದೆ. 

 ಸಮಾಜಕ್ಕೆ ನೀಡುವುದು ಯಾವಾಗಲೂ ಹಣದ ರೂಪದಲ್ಲಿಯೇ ಇರಬೇಕೆಂದಿಲ್ಲ. ಬದುಕಿನ ಬ್ಯಾಲೆನ್ಸ್  ಶೀಟ್ ನಿರ್ವಹಿಸುವುದು ಮುಖ್ಯ. ಸಮಾಜದಿಂದ ಪಡೆದಿದ್ದನ್ನು ಸಮಾಜಕ್ಕೆ ಹಿಂದಿರುಗಿಸಬೇಕು ಎಂದರು. 

 ಉನ್ನತ ಶಿಕ್ಷಣ ಇಲಾಖೆ ಅತ್ಯುತ್ತಮ ಕೆಲಸ ಮಾಡುತ್ತಿದ್ದು,ಡಾ: ಸಿ.ಎನ್. ಅಶ್ವತ್ಥ್ ನಾರಾಯಣ್ ಅವರಂಥ   ಕ್ರಿಯಾಶೀಲ ಸಚಿವರೂ ಇದ್ದು, ನೈಜ ಬದಲಾವಣೆ ತರಲು ಶ್ರಮಿಸುತ್ತಿದ್ದಾರೆ. ನೂತನ ಶಿಕ್ಷಣ ನೀತಿಯನ್ನು ಜಾರಿಗೆ ತಂದು ಅನುಷ್ಠಾನಕ್ಕೂ ಮುಂದಾಗಿದ್ದಾರೆ. ನೂತನ ಶಿಕ್ಷಣ ನೀತಿಯ ಮೂಲಕ ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಬದಲಾವಣೆಯನ್ನು ಶಿಕ್ಷಣ. ಕ್ಷೇತ್ರದಲ್ಲಿ ತರಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Post a Comment

Previous Post Next Post