cm, ಇಂದು, ವಿಶೇಷ

[18/09, 9:48 AM] +91 99001 58601: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಯಜನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹೂಗುಚ್ಚ ನೀಡಿ ಸ್ವಾಗತಿಸಿದರು. ಈ ಸಂದರ್ಭದಲ್ಲಿ ವಸತಿ ಸಚಿವ ವಿ ಸೋಮಣ್ಣ, ಕೇರಳ ಹಾಗೂ ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಅಧಿಕಾರಿಗಳು ಹಾಜರಿದ್ದರು.
[18/09, 12:43 PM] +91 99001 58601: *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್*
*ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಸಾಧ್ಯವಿಲ್ಲ: ಕೇರಳ ಸರ್ಕಾರಕ್ಕೆ ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಸೆಪ್ಟೆಂಬರ್ 18-
ರಾಜ್ಯದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ, ವನ್ಯಜೀವಿಧಾಮಗಳಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ಸ್ಪಷ್ಟಪಡಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಭೇಟಿಯಾದ ನಂತರ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ದಕ್ಷಿಣ ವಲಯ ಪರಿಷತ್ತಿನ ಸಭೆಯಲ್ಲಿ ತೀರ್ಮಾನಿಸಿದಂತೆ ದ್ವಿಪಕ್ಷೀಯ ಮಾತುಕತೆ ನಡೆಸಲು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಆಗಮಿಸಿದ್ದರು. ಕಾಞಂಗಾಡ್- ಕಾಣಿಯೂರು ರೈಲು ಮಾರ್ಗ ಸೇರಿದಂತೆ ವಿವಿಧ ರೈಲ್ವೆ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದಂತೆ ಸಹಮತಿ ನೀಡುವಂತೆ ಕೇರಳ ಸರ್ಕಾರ ಕೋರಿತು. ಪ್ರಸ್ತಾಪಿತ ಕಾಞಂಗಾಡ್ – ಕಾಣಿಯೂರು ರೈಲು ಮಾರ್ಗವು ಕೇರಳದಲ್ಲಿ 40 ಕಿ.ಮೀ. ಹಾಗೂ ಕರ್ನಾಟಕದಲ್ಲಿ 31 ಕಿ.ಮೀ. ಮಾರ್ಗ ಹೊಂದಿದ್ದು, ರಾಜ್ಯಕ್ಕೆ ಇದರಿಂದ ಹೆಚ್ಚಿನ ಅನುಕೂಲಗಳಿಲ್ಲ. ಅಲ್ಲದೆ ಪಶ್ಚಿಮ ಘಟ್ಟದ ಜೀವ ವೈವಿಧ್ಯ ಸೂಕ್ಷ್ಮ ಪ್ರದೇಶದಲ್ಲಿ ಹಾದು ಹೋಗುವ ಕಾರಣ ಸಹಮತಿ ನೀಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದು ತಿಳಿಸಿದರು.
ಇದರೊಂದಿಗೆ ಹಳೆಯ ಯೋಜನೆಯಾದ ತಲಚೇರಿ- ಮೈಸೂರು ರೈಲು ಯೋಜನೆಯನ್ನೂ ಪ್ರಸ್ತಾಪಿಸಿದರು. ಆದರೆ ಈ ಯೋಜನೆಯ ರೈಲು ಮಾರ್ಗವು ಬಂಡಿಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಮಧ್ಯಭಾಗದಲ್ಲಿ ಹಾದುಹೋಗುವುದರಿಂದ ಅಲ್ಲಿನ ವನ್ಯ ಜೀವಿ ಸಂಪತ್ತು ಹಾಗೂ ಅರಣ್ಯ ಸಂಪತ್ತಿಗೆ ಹಾನಿಯಾಗುವುದು. ಆದ್ದರಿಂದ ಇದಕ್ಕೆ ಸಮ್ಮತಿಸಲು ಸಾಧ್ಯವಿಲ್ಲ ಎಂದು ತಿಳಿಸಲಾಯಿತು. ಆಗ ಭೂಗತ ರೈಲು ಮಾರ್ಗ ನಿರ್ಮಿಸುವ ಕುರಿತು ಕೇರಳ ಸರ್ಕಾರವು ಪ್ರಸ್ತಾಪಿಸಿತು. ಆದರೆ ಇದರಿಂದಲೂ ನಿರ್ಮಾಣ ಚಟುವಟಿಕೆ ಸಂದರ್ಭದಲ್ಲಿ ಪರಿಸರ ಹಾನಿಯಾಗುವುದು . ಆದ್ದರಿಂದ ಈ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಯಿತು. 
ಇದೀಗ ಕೇರಳಕ್ಕೆ ಬಂಡಿಪುರ ರಾಷ್ಟ್ರೀಯ ಉದ್ಯಾನದ ಮೂಲಕ ರಾತ್ರಿವೇಳೆ ಎರಡು ಬಸ್ಗಳು ಸಂಚರಿಸುತ್ತಿದ್ದು, 4 ಬಸ್ಗಳಿಗೆ ಅನುಮತಿ ನೀಡುವಂತೆ ಕೋರಿದರು. ಇದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
[18/09, 1:47 PM] +91 99001 58601: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಆಯೋಜಿಸಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಜಸ್ಮಾದೇವಿ ಪುರಸ್ಕಾರ ಹಾಗೂ 53 ನೆ ವರ್ಷದ ಪ್ರತಿಭಾ ಪುರಸ್ಕಾರ ಪ್ರದಾನ ಮಾಡಿದರು. ಕಂದಾಯ ಸಚಿವ ಆರ್. ಅಶೋಕ್, ಕರ್ನಾಟಕ ಭೋವಿ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷರೂ ಆದ ಶಾಸಕ ಎಸ್. ರಘು, ಶಾಸಕರಾದ ಅಖಂಡ ಶ್ರೀನಿವಾಸ ಮೂರ್ತಿ, ಚಿತ್ರದುರ್ಗ ಭೋವಿ ಗುರುಪೀಠದ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
[18/09, 2:11 PM] +91 99001 58601: *ಬೆಂಗಳೂರು* , ಸೆಪ್ಟಂಬರ್ 18: *ಮಾನ್ಯ ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ ಅವರು* *ಕರ್ನಾಟಕ ಭೋವಿ* *ಕ್ಷೇಮಾಭಿವೃದ್ಧಿ* ಸಂಘದ ವತಿಯಿಂದ *ಜಸ್ಮಾ ದೇವಿ ಮಂದಿರ* *ಕಲ್ಯಾಣ ಮಂಟಪದಲ್ಲಿ* ಆಯೋಜಿಸಿರುವ *ಸುವರ್ಣ ಮಹೋತ್ಸವ* ಉದ್ಘಾಟನೆ ಹಾಗೂ ಜಸ್ಮಾ ದೇವಿ ಮತ್ತು *43ನೇ ಪ್ರತಿಭಾ ಪುರಸ್ಕಾರ* *ಸಮಾರಂಭ –* *2022ರಲ್ಲಿ ಪಾಲ್ಗೊಂಡು* ಮಾತನಾಡಿದರು.
[18/09, 2:28 PM] +91 99001 58601: *ಪ್ರಿಯಾಂಕ್ ಖರ್ಗೆ ಅವರಿಗೆ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ: ಮುಖ್ಯಮಂತ್ರಿ ಬೊಮ್ಮಾಯಿ ಟೀಕೆ*
ಬೆಂಗಳೂರು, ಸೆಪ್ಟೆಂಬರ್ 18-
ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5,000 ಕೋಟಿ ರೂ. ಅನುದಾನ ಘೋಷಣೆ ಮಾಡಿರುವುದನ್ನು ಸ್ವಾಗತಿಸುವುದು ಬಿಟ್ಟು ವಿರೋಧಿಸುತ್ತಿರುವುದು ಏಕೆಂದು ನನಗೆ ಅರ್ಥವಾಗುತ್ತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನುಡಿದರು.
ಅವರು ಇಂದು ಕೃಷ್ಣಾದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದರು. ನಿನ್ನೆ ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ 5,000 ಕೋಟಿ ರೂ. ಅನುದಾನವನ್ನು ಮುಂದಿನ ಆಯವ್ಯಯದಲ್ಲಿ ಒದಗಿಸುವುದಾಗಿ ಅತ್ಯಂತ ಬದ್ಧತೆಯಿಂದಲೇ ಘೋಷಿಸಿದ್ದೇನೆ. ಕಳೆದ ವರ್ಷ 3,000 ಕೋಟಿ ರೂ. ಅನುದಾನ ಘೋಷಿಸಿದ್ದೆನು. ಅದನ್ನು ಆಯವ್ಯಯದಲ್ಲಿ ಒದಗಿಸಲಾಗಿದೆ. ಪ್ರಿಯಾಂಕ್ ಖರ್ಗೆ ಅವರು ಇದನ್ನು ಸ್ವಾಗತಿಸಬೇಕಾಗಿತ್ತು. ಆದರೆ ಅವರು ವಿರೋಧಿಸಿರುವುದನ್ನು ನೋಡಿದರೆ, ಈ ಪ್ರದೇಶ ಸದಾ ಹಿಂದುಳಿದಿರಲಿ ಎಂಬುದೇ ಅವರ ಇಚ್ಛೆಯಾ ಎಂದು ಮುಖ್ಯಮಂತ್ರಿಗಳು ಪ್ರಶ್ನಿಸಿದರು. 
ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ಮುಂದಾದಾಗ ಎಲ್ಲರೂ ಅದಕ್ಕೆ ತಕ್ಕಂತೆ ಕೆಲಸ ಮಾಡಬೇಕು. ಇದರಲ್ಲಿ ರಾಜಕಾರಣದ ಮಾತಾಡುವುದು ಸರಿಯಲ್ಲ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
*ಎಲ್ಲದಕ್ಕೂ ರಾಜಕಾರಣ ಸಲ್ಲದು*
ಬಳ್ಳಾರಿಯ ವಿಮ್ಸ್ ಘಟನೆಗೆ ಸಚಿವ ಡಾ. ಸುಧಾಕರ್ ಹೊಣೆ ಹೊರಬೇಕು ಎಂದು ಕಾಂಗ್ರೆಸ್ ಹೇಳಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಹಿಂದೆ ಕಾಂಗ್ರೆಸ್ ಅಧಿಕಾರಾವಧಿಯಲ್ಲಿ ಕರ್ನಾಟಕ ಖಾಸಗಿ ವೈದ್ಯರ ಮಸೂದೆಯನ್ನು ಮಂಡಿಸಿತ್ತು. ಇದನ್ನು ವಿರೋಧಿಸಿ, ರಾಜ್ಯದಾದ್ಯಂತ ಖಾಸಗಿ ವೈದ್ಯರು 5 ದಿನಗಳ ಕಾಲ ಮುಷ್ಕರ ನಡೆಸಿದ್ದರಿಂದ ಸುಮಾರು 80 ಜನರು ಮೃತಪಟ್ಟರು. ಆಗ ಅಂದಿನ ಆರೋಗ್ಯ ಸಚಿವರು ರಾಜೀನಾಮೆ ನೀಡಿದ್ದಾರಾ? ಎಂದು ತಿರುಗೇಟು ನೀಡಿದರು.
ಎಲ್ಲದಕ್ಕೂ ರಾಜಕಾರಣ ಮಾಡುವ ಪ್ರವೃತ್ತಿ ಕಾಂಗ್ರೆಸ್ನದ್ದು ಎಂದು ನುಡಿದರು.
*ವ್ಯವಸ್ಥಿತ ಷಡ್ಯಂತ್ರ*:
ತೆಲಂಗಾಣದಲ್ಲಿಯೂ 40 ಶೇ. ಸರ್ಕಾರ ಎಂಬ ಫ್ಲೆಕ್ಸ್ಗಳನ್ನು ಅಳವಡಿಸಿರುವ ಕುರಿತು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು ಈ ಬಗ್ಗೆ ನನಗೆ ಗೊತ್ತಿಲ್ಲ. ಇದೊಂದು ವ್ಯವಸ್ಥಿತ ಷಡ್ಯಂತ್ರ. ನಮ್ಮ ರಾಜ್ಯದ ಬಗ್ಗೆ ತೆಲಂಗಾಣದಲ್ಲಿ ಹಾಕುವುದು ಎಷ್ಟು ಸಮಂಜಸ? ಇದನ್ನು ಖಾಸಗಿಯವರು ಮಾಡಿದ್ದಾರೋ ಅಥವಾ ಸರ್ಕಾರ ಹಾಕಿರುವುದೋ ನನಗೆ ಗೊತ್ತಿಲ್ಲ. ಇಂತಹ ಬೆಳವಣಿಗೆಗಳು ಉಭಯರಾಜ್ಯಗಳ ಸೌಹಾರ್ದತೆಗೆ ಧಕ್ಕೆ ತರುವುದು ಎಂದು ಮುಖ್ಯಮಂತ್ರಿಗಳೂ ತಿಳಿಸಿದರು.

Post a Comment

Previous Post Next Post