[20/09, 6:09 PM] +91 99001 58601: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ವಿಧಾನಸಭೆ ಅಧಿವೇಶನದಲ್ಲಿ ಪಾಲ್ಗೊಂಡು ಮಾತನಾಡಿದರು
[20/09, 7:59 PM] +91 99001 58601: ಇಂದು ವಿಧಾನಸಭೆ ಕಲಾಪದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚರ್ಚೆಯಲ್ಲಿ ಪಾಲ್ಗೊಂಡ ವಿಡಿಯೊ
[20/09, 8:02 PM] +91 99001 58601: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಧಾನಸೌಧದ ಸಭಾಂಗಣದಲ್ಲಿ ಕಾರ್ಮಿಕ ಇಲಾಖೆಯ ನೂತನ ತಂತ್ರಾಂಶ ಉದ್ಘಾಟನೆ ಹಾಗೂ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಮತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತಿದ್ದರು.
[20/09, 8:05 PM] +91 99001 58601: ಬೆಂಗಳೂರು, ಸೆಪ್ಟಂಬರ್ 20: ಮಾನ್ಯ *ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರು* ಕಾರ್ಮಿಕ ಇಲಾಖೆಯ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್, ಆಯೋಜಿಸಿರುವ *‘ನೂತನ ತಂತ್ರಾಂಶ ಉದ್ಘಾಟನೆ’, ‘ಕಾರ್ಮಿಕರಿಗೆ ಉಚಿತ ಬಸ್‍ಪಾಸ್ ವಿತರಣೆ’ ಹಾಗೂ ‘ಹೆಚ್ಚು ಅಂಕಗಳಿಸಿರುವ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ ನಗದು ಬಹುಮಾನ’ ವಿತರಣಾ ಕಾರ್ಯಕ್ರಮ*ದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನುದ್ದೇಶಿಸಿ *ಮಾತನಾಡಿದರು*.
[20/09, 8:25 PM] +91 99001 58601: ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕಾರ್ಮಿಕ ಇಲಾಖೆಯ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆ ಕಾರ್ಯಕ್ರಮ ಉದ್ಘಾಟನೆ ಮಾಡಿರುವ ವಿಡಿಯೊ.
[20/09, 8:44 PM] +91 99001 58601: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೃಹತ್ ಬೆಂಗಳೂರು ಹೋಟೇಲಿಯರುಗಳ ಸಂಘದ ವತಿಯಿಂದ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಹೋಟೆಲ್ ಉದ್ಯಮದ ಸಾಧಕರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಕಾರ್ಮಿಕ ಸಚಿವ ಶಿವರಾಮ ಹೆಬ್ಬಾರ, ಸಂಘದ ಅಧ್ಯಕ್ಷ ಪಿ.ಸಿ ರಾವ್ ಮತ್ತು ಇತರರು ಉಪಸ್ಥಿತರಿದ್ದರು.
[20/09, 9:02 PM] +91 99001 58601: *ಕಾರ್ಮಿಕ ಇಲಾಖೆಯ ಹಲವು ಯೋಜನೆಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಗಿ*
*ಕಾರ್ಮಿಕರ ಕಲ್ಯಾಣ ನಮ್ಮ ಮೊದಲ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು: ಕಾರ್ಮಿಕರ ಕಲ್ಯಾಣ ನಮ್ಮ ಮೊದಲ ಆದ್ಯತೆ. ಕಾರ್ಮಿಕರ ಏಳಿಗೆಗೆ ಬೇಕಾಗುವ ಎಲ್ಲ ಯೊಜನೆಗಳನ್ನು ನಾವು ಜಾರಿಗೆ ತರುತ್ತೇವೆ. ಅವರ ಶ್ರಮಕ್ಕೆ ಬೆಲೆ ಕೊಡುವ ಕೆಲಸವನ್ನು ನಾವು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಕಾರ್ಮಿಕ ಇಲಾಖೆಯ ವತಿಯಿಂದ ವಿಧಾನಸೌಧದ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ನೂತನ ತಂತ್ರಾಂಶ ಉದ್ಘಾಟನೆ ಹಾಗೂ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆ ಮತ್ತು ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಾಲ್ಗೊಂಡು ಮಾತನಾಡಿದರು.
ಕಾರ್ಮಿಕರು ಈ ದೇಶದ ಪ್ರಗತಿಯ ಚಕ್ರದ ರೂವಾರಿಗಳು. ನಾವು ಹಣ ಹೂಡಿಕೆ ಮಾಡಿ ಲೆಕ್ಕ ಹಾಕುತ್ತೇವೆ. ಆದರೆ ಕಾರ್ಮಿಕರ ಶ್ರಮವನ್ನು ಲೆಕ್ಕ ಹಾಕಲು ಸಾಧ್ಯವಿಲ್ಲ. ನಿಜವಾದ ಬದಲಾವಣೆ, ಪರಿವರ್ತನೆ ತರುವವರು ಕಾರ್ಮಿಕರು. ಅಂತಹ ಕಾರ್ಮಿಕರಿಗೆ ಬದುಕಿನ ಭರವಸೆ ಕೊಡಬೇಕು. ಕಾರ್ಮಿಕನ ಬದುಕಿಗೆ ಒಂದು ಸ್ಪೂರ್ತಿಯನ್ನು ಕೊಟ್ಟಾಗ ಅವನು ಮತ್ತಷ್ಟು ಉತ್ಸಾಹದಿಂದ ಕೆಲಸ ಮಾಡುತ್ತಾನೆ. ಆತಂಕದಲ್ಲಿ ಯಾರು ನೂರಕ್ಕೆ ನೂರರಷ್ಟು ಶ್ರಮ ಕೊಡಲು ಸಾಧ್ಯವಿಲ್ಲ. ಹೀಗಾಗಿ ಅವನ ಶ್ರಮಕ್ಕೆ ಬೆಲೆ ಬರಬೇಕು ಎನ್ನುವ ದೃಷ್ಠಿಯಿಂದ ಕಾರ್ಮಿಕ ಕಟ್ಟಡ ನಿಧಿ ಕಾರ್ಯಕ್ರಮವನ್ನು ಕಾರ್ಮಿಕ ಇಲಾಖೆ ಸಚಿವರು ಮಾಡುತ್ತಿದ್ದಾರೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಕಾರ್ಮಿಕ ಇಲಾಖೆಯಿಂದ ನಿಧಿ ಇಡಲಾಗಿದೆ. ಆ ದುಡ್ಡು ನಮ್ಮ ಕಾರ್ಮಿಕರಿಗೆ ಅನುಕೂಲ ಆಗದಿದ್ದರೆ ಏನು ಪ್ರಯೋಜನ. ಇದನ್ನು ಮನಗಂಡು ನಮ್ಮ ಸಚಿವರಾದ ಶಿವರಾಮ್ ಹೆಬ್ಬಾರ ಅವರು ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಕಾರ್ಮಿಕರ ಮಕ್ಕಳಿಗೆ ವಿದ್ಯಾನಿಧಿ ಯೋಜನೆಯನ್ನು ತಂದಿದ್ದೇವೆ. ನಾನು ಮುಖ್ಯಮಂತ್ರಿಯಾದ ಬಳಿಕ ಮೊದಲಿಗೆ ರೈತರ ಮಕ್ಕಳಿಗೆ ಜಾರಿಗೆ ತಂದಿದ್ದೆ. ರೈತರ ಮಕ್ಕಳು ಮತ್ತು ಕಾರ್ಮಿಕರ ಮಕ್ಕಳು ಬೇರೆಯಲ್ಲ. ಈ ದೇಶಕ್ಕೆ ಮೂರು ಜನರು ಮುಖ್ಯ. ರೈತರು, ಕಾರ್ಮಿಕರು, ಸೈನಿಕರು ಸಂತೋಷವಾಗಿದ್ದರೆ ದೇಶ ಸಮೃದ್ದವಾಗಿರುತ್ತದೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಕಾರ್ಮಿಕ ಇಲಾಖೆಯಿಂದ ಮೊಬೈಲ್ ಕ್ಲಿನಿಕ್, ವಿದ್ಯಾರ್ಥಿ ವೇತನ, ಮನೆ ನಿರ್ಮಾಣ ಕೆಲಸ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದಾರೆ. ಇವತ್ತು ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ ಪಾಸ್ ವಿತರಣೆ ಮಾಡಲಾಗುತ್ತಿದೆ. ಇದರಿಂದ ನನಗೆ ಬಹಳ ಸಂತೋಷ ಆಗಿದೆ. ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಕಟ್ಟಡ ಕಾರ್ಮಿಕರಿಗೆ ಮನೆಯ ಹತ್ತಿರದಲ್ಲಿ ಕೆಲಸ ಸಿಗುವುದಿಲ್ಲ. ಒಂದು ಊರಿನಿಂದ ಇನ್ನೊಂದು ಊರಿಗೆ ಕೆಲಸಕ್ಕೆ ಹೋಗಬೇಕಾಗುತ್ತದೆ. ಹುಬ್ಬಳ್ಳಿಯಲ್ಲಿ ಬೆಳಿಗ್ಗೆ ಬಸ್ ಸ್ಟ್ಯಾಂಡ್ ಹತ್ತಿರ ಹೋದರೆ, ಕನಿಷ್ಟ 30-40 ಸಾವಿರ ಕಾರ್ಮಿಕರು ಬರುತ್ತಾರೆ. ಅವರು ದೂರದ ಊರುಗಳಿಂದ ಬರುತ್ತಾರೆ. ಅವರಿಗೆ ಉಚಿತವಾಗಿ ಬಸ್ ಪಾಸ್ ನೀಡಲಾಗುತ್ತಿದೆ. ಇದು ಅವರಿಗೆ ಸಾಕಷ್ಟು ಅನುಕೂಲವಾಗುತ್ತದೆ. ಈಗಾಗಲೇ 70 ಸಾವಿರ ಬಸ್ ಪಾಸ್ ನಿಡಿದ್ದಾರೆ. ಪ್ರತಿ ತಾಲ್ಲೂಕಿನಲ್ಲಿ 20-30 ಸಾವಿರ ಜನರಿರುತ್ತಾರೆ . ಎಲ್ಲ ಊರುಗಳಲ್ಲಿ ಕಟ್ಟಡ ಕಾರ್ಮಿಕರು ಎಷ್ಟು ಜನ ಇದ್ದಾರೆ. ಅವರಿಗೆ ಎಲ್ಲರಿಗೂ ಬಸ್ ಪಾಸ್ ಕೊಡಿಸುವ ಕೆಲಸ ಮಾಡಬೇಕು ಎಂದು ಸಿಎಂ ಬೊಮ್ಮಾಯಿ ತಿಳಿಸಿದರು.
ಕಾರ್ಮಿಕರ ಬಹಳ ದಿನಗಳ ವ್ಯಾಜ್ಯಗಳ ಬಗೆಹರಿಸುವ ನಿಟ್ಟಿನಲ್ಲಿ ಅದಾಲತ್ ನ್ನು ಮಾಡುತ್ತಿದ್ದೇವೆ. ಈಗಾಗಲೇ ಕಾರ್ಮಿಕ ಇಲಾಖೆಯಿಂದ 91 ಕೋಟಿ ರೂ. 2.90 ಲಕ್ಷ ಕಾರ್ಮಿಕರಿಗೆ ನೀಡಿದ್ದಾರೆ. ಪ್ರತಿಯೊಂದು ದೊಡ್ಡ ಗ್ರಾಮದಲ್ಲಿ ಕಾರ್ಮಿಕರಿಗಾಗಿ ವಿಶ್ರಾಂತಿ ಗೃಹಗಳನ್ನು ಮಾಡುತ್ತಿದ್ದು, ಅದು ಇದೇ ವರ್ಷ ಜಾರಿಗೆ ಬರುತ್ತದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಈ ಸಂದರ್ಭದಲ್ಲಿ ಕಾರ್ಮಿಕ ಸಚಿವ ಶಿವರಾಂ ಹೆಬ್ಬಾರ್, ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಸೇರಿದಂತೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಉಪಸ್ಥಿತಿದ್ದರು.
[20/09, 9:20 PM] +91 99001 58601: ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ವತಿಯಿಂದ ವೀರಶೈವ ಲಿಂಗಾಯತ ಸಮುದಾಯವನ್ನು ಕೇಂದ್ರದ ಒಬಿಸಿ ಪಟ್ಟಿಗೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಇಂದು ಮುಖ್ಯಮಂತ್ರಿಗಳ ರೇಸ್ ಕೋರ್ಸ್ ನಿವಾಸದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ, ರಾಷ್ಟ್ರೀಯ ಹಿರಿಯ ಉಪಾಧ್ಯಕ್ಷರಾದ ಎನ್ . ತಿಪ್ಪಣ್ಣ, ಮಹಾ ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ , ಶಾಸಕರಾದ ಪರಣ್ಣ ಮುನವಳ್ಳಿ, ಹಾಗೂ ನಿವೃತ್ತ ಡಿಜಿಪಿ ಶಂಕರ ಬಿದರಿ ಹಾಜರಿದ್ದರು.
[20/09, 9:43 PM] +91 99001 58601: ನ್ಯೂಸ್ ಫಸ್ಟ್ ಸುದ್ದಿವಾಹಿನಿಯ ದ್ವಿತೀಯ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೇಕ್ ಕತ್ತರಿಸಿ ಶುಭ ಕೋರಿದರು. ಈ ಸಂದರ್ಭದಲ್ಲಿ ಕೈಗಾರಿಕಾ ಸಚಿವರಾದ ಮುರುಗೇಶ ನಿರಾಣಿ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ನ್ಯೂಸ್ 1 ಚಾನೆಲ್ ಮುಖ್ಯಸ್ಥ ರವಿಕುಮಾರ್ ಹಾಜರಿದ್ದರು.
Post a Comment