ಮಾನ್ಯರೇ,
ಈಗ ಮಧ್ಯರಾತ್ರಿ ಎರಡು ಗಂಟೆ....
ಕೆಪಿಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮಾಜಿ ಅಧ್ಯಕ್ಷರಾದ ಶ್ರೀ ಬಿ. ಆರ್. ನಾಯ್ಡು ಅವರನ್ನು ಪೇಸಿಎಂ ಪೋಸ್ಟರ್ ಹಚ್ಚಿದ ಬಗ್ಗೆ ವಿಚಾರಣೆ ಮಾಡಲು ಹೈಗ್ರೌಂಡ್ಸ ಪೋಲಿಸ್ ಠಾಣೆಗೆ ನಾಲ್ಕು ಜನ ಪೋಲಿಸ್ ನವರು ಮಧ್ಯರಾತ್ರಿ ಕರೆದುಕೊಂಡು ಹೋಗಿದ್ದಾರೆ.
ದಯವಿಟ್ಟು ಮಾಧ್ಯಮ ಪ್ರತಿನಿಧಿಗಳು ಹೈಗ್ರೌಂಡ್ಸ ಹತ್ತಿರ ಬರಬೇಕಾಗಿ ಕೆಪಿಸಿಸಿ ವತಿಯಿಂದ ಕೋರಿದೆ.
ಅವರ ಕುಟುಂಬದವರು ಆತಂಕಕ್ಕೆ ಒಳಗಾಗಿದ್ದಾರೆ. ಮಾಧ್ಯಮ ಪ್ರತಿನಿಧಿಗಳ ದಯಮಾಡಿ ಸಹಕರಿಸಬೇಕಾಗಿ ಕೋರಿದೆ.
[22/09, 3:10 AM] +91 96322 45499: ಹಾಗೇಯೇ KPCC ಸಾಮಾಜಿಕ ಜಾಲತಾಣದ ಗಗನ್ ಯಾದವ್ ರನ್ನ KR ಪುರದ ಅವರ ನಿವಾಸ ದೇವಸಂದ್ರ ದಿಂದ ಸದಾಶಿವ ನಗರ ಪೊಲೀಸ್ ನವರು ಅರೆಸ್ಟ್ ಮಾಡಿದ್ದರೆಂದು ಗಗನ್ ತಂದೆ DA ಗೋಪಾಲ್ ತಿಳಿಸಿದ್ದಾರೆ.
DA GOPAL
9035628899
[22/09, 10:39 AM] Kpcc official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪಕ್ಷದ ಸಂವಹನ ಮತ್ತು ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ, ಮಾಜಿ ಸಚಿವ ಪ್ರಿಯಾಂಕ್ ಖರ್ಗೆ, ಶಾಸಕ ವಿ ಮುನಿಯಪ್ಪ, ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ, ಪ್ರಧಾನ ಕಾರ್ಯದರ್ಶಿ ಸೂರ್ಯ ಮುಕುಂದರಾಜ್ ಅವರ ಜತೆ ಸದಾಶಿವನಗರ ನಿವಾಸದಲ್ಲಿ ಗುರುವಾರ ಸಮಾಲೋಚನೆ ನಡೆಸಿದರು.
[22/09, 12:14 PM] Kpcc official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆ ಎದಿರು ಮಾಧ್ಯಮದವರಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಕಾನೂನು ಘಟಕದ ಅಧ್ಯಕ್ಷ ಪೊನ್ನಣ್ಣ ಜತೆಗಿದ್ದರು.
[22/09, 12:17 PM] Kpcc official: *ಡಿ.ಕೆ. ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಗುರುವಾರ ನೀಡಿದ ಮಾಧ್ಯಮ ಪ್ರತಿಕ್ರಿಯೆ:*
ಮುಖ್ಯಮಂತ್ರಿಗಳು ಪೋಸ್ಟರ್ ವಿಚಾರಕ್ಕೆ ಇಷ್ಟು ತಲೆ ಕೆಡಿಸಿಕೊಂಡು ಗಾಬರಿಯಾಗಿರುವುದು ಏಕೆ? ಈ ಪೋಸ್ಟರ್ ಅಂಟಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿರುವುದು ಏಕೆ?
ನಾಳೆ ನಮ್ಮ ಎಲ್ಲಾ ಶಾಸಕರು ಸೇರಿ ಪೇ ಸಿಎಂ ಪೋಸ್ಟರ್ ಅನ್ನು ಸರ್ಕಾರಿ ಕಚೇರಿಗಳಲ್ಲಿ ಅಂಟಿಸುತ್ತೇವೆ. ಎಲ್ಲಿ ಅಂಟಿಸುತ್ತೇವೆ ಎಂದು ಮುಂದೆ ತಿಳಿಸುತ್ತೇವೆ.
ಬಿಜೆಪಿ ಅವರು ನಮ್ಮ ಬಗ್ಗೆಯೂ ಕ್ಯೂಆರ್ ಕೋಡ್ ಹಾಕಿದ್ದಾರೆ. ನಾನು ವಿಚಾರಣೆಗೆ ಹೋದ ಸಮಯದಲ್ಲಿ ನಾನು ಕಂಬಿ ಹಿಂದೆ ಇರುವಂತೆ ಮಾಧ್ಯಮಗಳು ಫೋಟೋ ಹಾಕಿದ್ದರು. ಹಾಗೆಂದು ನಾನು ಅವರ ವಿರುದ್ಧ ದೂರು ನೀಡಲು ಸಾಧ್ಯವೇ?
ರಾಜಕೀಯದಲ್ಲಿ ಇರುವವರನ್ನು ಜನ ಪ್ರಶ್ನಿಸುವುದು, ಟೀಕಿಸುವುದು ಸಹಜ. ಅಧಿಕಾರದಲ್ಲಿ ಇರುವವರು ಇದನ್ನು ಜೀರ್ಣಿಸಿಕೊಳ್ಳಬೇಕು.
ಸರ್ಕಾರದ ಭ್ರಷ್ಟಾಚಾರದ ಬಗ್ಗೆ ಮಾಧ್ಯಮಗಳು ವರದಿ ಮಾಡಿವೆ. ಗುತ್ತಿಗೆದಾರರು ಆರೋಪ ಮಾಡಿದ್ದಾರೆ. ನಮ್ಮ ಅಭಿಯಾನದಲ್ಲಿ 8 ಸಾವಿರಕ್ಕೂ ಹೆಚ್ಚು ಮಂದಿ, ನಾವು ಭ್ರಷ್ಟಾಚಾರಕ್ಕೆ ಬಲಿಯಾಗಿದ್ದೇವೆ ಎಂದು ತಿಳಿಸಿದ್ದಾರೆ. ಹೀಗಾಗಿ ಪಕ್ಷದ ವತಿಯಿಂದ ನಾವೇ ಟೋಲ್ ಸಂಖ್ಯೆ ನೀಡಿ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆವು.
ನಾವು ಸರ್ಕಾರದ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದು, ಬಿಜೆಪಿ ಅವರು ನಮ್ಮ ಬಗ್ಗೆಯೂ ಹಾಕಿದ್ದಾರೆ. ಇದು ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರವಾಗಿದ್ದು, ರಾಜ್ಯವನ್ನು ದೇಶದ ಭ್ರಷ್ಟಾಚಾರದ ರಾಜಧಾನಿಯನ್ನಾಗಿ ಮಾಡಿದ್ದಾರೆ. ಈ ಸರ್ಕಾರದ ಭ್ರಷ್ಟಾಚಾರ ಬಯಲು ಮಾಡುವುದು ನಮ್ಮ ಕರ್ತವ್ಯ ಅದನ್ನು ಮಾಡುತ್ತೇವೆ.
ಬಿಜೆಪಿ ಅವರು ನಮ್ಮ ವಿರುದ್ಧ ಇಂತಹ ನೂರಾರು ಪೋಸ್ಟರ್ ಮಾಡಿದ್ದು, ಅವರ ವಿರುದ್ಧ ಕ್ರಮ ಕೈಗೊಂಡಿಲ್ಲ.
ಇದು ಅಧಿಕಾರ ದುರ್ಬಳಕೆಯೇ ಎಂದು ಕೇಳಿದ ಪ್ರಶ್ನೆಗೆ, ' ಇದು ಅಧಿಕಾರ ದುರ್ಬಳಕೆ, ಭಯ, ದ್ವೇಷದ ರಾಜಕಾರಣವಾಗಿದೆ. 40% ಕಮಿಷನ್ ಆರೋಪ ನಾವು ಮಾಡಿದ್ದೇವಾ? ಸಿಎಂ ಹುದ್ದೆಗೆ 2500 ಕೋಟಿ ನೀಡಬೇಕು ಎಂದು ನಾವು ಹೇಳಿದ್ದೇವಾ? ನಿಮ್ಮ ಶಾಸಕ ಯತ್ನಾಳ್ ಅವರೇ ಹೇಳಿದ್ದಾರೆ. ಹಗರಣದ ಬಗ್ಗೆ ಮಾತನಾಡಿದ ನಮ್ಮ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಸಮನ್ಸ್ ನೀಡುವ ಸರ್ಕಾರ ಯತ್ನಾಳ್, ವಿಶ್ವನಾಥ್, ಮಠದ ಸ್ವಾಮೀಜಿಗಳಿಗೆ ಸಮನ್ಸ್ ನೀಡಿಲ್ಲ ಯಾಕೆ? ವಿಧಾನಸೌಧದ ಮುಂದೆ ಗುತ್ತಿಗೆದಾರರ ಸಂಘದವರು ಆರೋಪ ಮಾಡಿದಾಗ ಯಾಕೆ ಕೇಸ್ ಹಾಕಲಿಲ್ಲ. ಈ ವಿಚಾರ ಜನರ ಬಾಯಲ್ಲಿ ಹರಿದಾಡುತ್ತಿದೆ. ನೀವು ನಮ್ಮ ಮೇಲೂ ಆರೋಪ ಮಾಡಿದ್ದೀರಿ. ತನಿಖೆ ಮಾಡಿ, ನಾವು ಅದನ್ನು ಸ್ವಾಗತಿಸುತ್ತೇವೆ' ಎಂದು ತಿಳಿಸಿದರು.
ಕಾಂಗ್ರೆಸ್ ಬಟಾಬಯಲು ಆಗುತ್ತದೆ ಎಂಬ ಬಿಜೆಪಿ ಹೇಳಿಕೆ ಬಗ್ಗೆ ಕೇಳಿದ ಪ್ರಶ್ನೆಗೆ, ' ಅವರು ಏನು ಬೇಕಾದರೂ ಮಾಡಲಿ. ಬೇಡ ಎಂದವರು ಯಾರು?' ಎಂದರು.
ಈ ಬಗ್ಗೆ ಅಧಿವೇಶನದಲ್ಲಿ ಹೋರಾಟ ಮಾಡುತ್ತೀರಾ ಎಂದು ಕೇಳಿದಾಗ, '40% ಕಮಿಷನ್ ವಿಚಾರದ ಚರ್ಚೆಗೆ ಗೊತ್ತುವಳಿ ನಿರ್ಣಯ ಮಂಡಿಸಿದ್ದು ಅಲ್ಲಿಯೂ ನಮ್ಮ ಶಾಸಕಾಂಗ ಪಕ್ಷದ ನಾಯಕರು ಹೋರಾಟ ಮಾಡಲಿದ್ದಾರೆ ' ಎಂದರು.
ಕಾಂಗ್ರೆಸ್ ಕಾರ್ಯಕರ್ತರ ಬಂಧನದ ಬಗ್ಗೆ ಕೇಳಿದಾಗ, ' 7-8 ಕಾಂಗ್ರೆಸ್ ಕಾರ್ಯಕರ್ತರನ್ನು ಬಂಧಿಸಿದ್ದು, ಅವರನ್ನು ನೋಡಿ ಮಾತನಾಡಿಸಿಕೊಂಡು ಹೋಗಲು ಬಂದಿದ್ದೇನೆ. ನಮ್ಮ ವಿರುದ್ಧ ಪ್ರಕರಣ ದಾಖಲಿಸಲು ಹೇಳಿದ್ದೇವೆ. 100 ಕೇಸ್ ಗಳ ನಂತರ ಇದು 101ನೆ ಕೇಸ್ ಆಗಲಿ. ಸಂಬಂಧ ಇಲ್ಲದವರನ್ನು ಬಂಧಿಸಿ ಕರೆ ತಂದು ಅವರನ್ನು ನಾಯಕರನ್ನಾಗಿ ಮಾಡುತ್ತಿದ್ದಾರ, ಮಾಡಲಿ ' ಎಂದು ತಿಳಿಸಿದರು.
[22/09, 2:18 PM] Kpcc official: 40% ಕಮಿಷನ್‌ಗೆ ಕಿರುಕುಳ ನೀಡಿ ಒಂದು ಜೀವ ಬಲಿ ಪಡೆದ ಆರೋಪಿಯಾಗಿದ್ದ ಈಶ್ವರಪ್ಪರನ್ನು ಒಂದು ದಿನವೂ ಬಂಧಿಸಿ ವಿಚಾರಣೆ ನಡೆಸಲಿಲ್ಲ.
ಆದರೆ #PayCM ಪೋಸ್ಟರ್ ಅಂಟಿಸಿದವರ ವಿರುದ್ಧ 7,8 ಕೇಸ್‌ಗಳು, ಬಂಧನಕ್ಕೆ ವಿಶೇಷ ಪೊಲೀಸ್ ತಂಡ. ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ.
@BSBommai ಅವರೇ, ಇದು ಹೇಡಿತನದ, ಲಜ್ಜೆಗೇಡಿತನದ ಪರಮಾವಧಿಯಲ್ಲವೇ?
[22/09, 10:05 PM] Kpcc official: ರಾಷ್ಟ್ರೀಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ರೀಮತಿ ನೆಟ್ಟಾ ಡಿಸೋಜ ಅವರು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಗುರುವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಜತೆಗಿದ್ದರು.
Post a Comment