ಸಚಿವ ನಿತಿನ್ ಗಡಕರಿ, vk ಸಿಂಘ್, ಅಧಿಕಾರಿಗಳ ಜೊತೆ cm ಚರ್ಚೆ

ಬೆಂಗಳೂರು, ಸೆಪ್ಟೆಂಬರ್ 9-
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ  ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಯೋಜನೆಗಳು ಹಾಗೂ ಬೆಂಗಳೂರು ನಗರ ಸುಗಮ ಸಂಚಾರದ ಕುರಿತು ಚರ್ಚಿಸಿದರು. ಕೇಂದ್ರ ಹೆದ್ದಾರಿ ಖಾತೆ ರಾಜ್ಯ ಸಚಿವ ಜನರಲ್ ವಿ.ಕೆ. ಸಿಂಗ್, ರಾಜ್ಯದ ಸಾರಿಗೆ ಸಚಿವ ವಿ.ಶ್ರೀರಾಮುಲು, ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.


ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ರೇಸ್ ಕೋರ್ಸ್ ರಸ್ತೆ ನಿವಾಸದಲ್ಲಿ ನಗರಾಭಿವೃದ್ಧಿ ಹಾಗೂ ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್. ಪ್ರಸಾದ್, ನಗರಾಭಿವೃದ್ಧಿ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್, ಲೋಕೋಪಯೋಗಿ ಇಲಾಖೆ ಪ್ರಧಾನ ಕಾರ್ಯದರ್ಶಿ ಎಸ್. ಸೆಲ್ವಕುಮಾರ್ ಭಾಗವಹಿಸಿದ್ದರು.

Post a Comment

Previous Post Next Post