KPCC ಪ್ರತಿಕ್ರಿಯೆ, ಸರಣಿ tweet

[09/11, 2:18 PM] Kpcc official: *ಸದಾಶಿವನಗರ ನಿವಾಸದ ಬಳಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ನೀಡಿದ ಮಾಧ್ಯಮ ಪ್ರತಿಕ್ರಿಯೆ:*

ದೇಶದ ಪ್ರಧಾನಿಗಳು ರಾಜ್ಯಕ್ಕೆ ಆಗಮಿಸುತ್ತಿರುವುದರ ಬಗ್ಗೆ ನಮ್ಮದು ಯಾವುದೇ ಆಕ್ಷೇಪ ಇಲ್ಲ. ಆದರೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ಮಕ್ಕಳನ್ನು ಕರೆತರಬೇಕು ಎಂದು ಸುತ್ತೊಲೆ ಹೊರಡಿಸಿರುವುದು ಖಂಡನೀಯ. 

ಬಿಜೆಪಿಯವರಿಗೆ ಇಂತಹ ದುರ್ಗತಿ ಬಂದಿದೆಯೇ? ನಿಮ್ಮ ನಾಯಕರು, ನಿಮ್ಮ ಡಬಲ್ ಇಂಜಿನ್ ಸರ್ಕಾರ  ಮೂರು ವರ್ಷದಲ್ಲಿ ಮಾಡಿರುವ ಸಾಧನೆ ತೋರಿಸಿ, ಜನರನ್ನು ಕರೆತಂದು ಕಾರ್ಯಕ್ರಮ ಮಾಡಿ. ಯಾರೂ ಬೇಡ  ಎನ್ನುವುದಿಲ್ಲ. ಆದರೆ ಮಕ್ಕಳನ್ನು ಕರೆತಂದು ಕಾರ್ಯಕ್ರಮ ಮಾಡಲು ಇದೇನು ಶಿಕ್ಷಣಕ್ಕೆ ಸಂಬಂಧಿಸಿದ ಕಾರ್ಯಕ್ರಮವೇ? 

ಚುನಾವಣೆ ಸಮೀಪಿಸುತ್ತಿರುವ ಸಮಯದಲ್ಲಿ 17-18 ವರ್ಷದ ಮಕ್ಕಳನ್ನು ಕರೆತಂದು ರಾಜಕೀಯ ಮಾಡುತ್ತಿರುವುದು ನಾಚಿಕೆಗೇಡಿನ ವಿಚಾರ. ಪ್ರಜಾಪ್ರಭುತ್ವ ವ್ಯವಸ್ಥೆ ಹಾಗೂ ಪ್ರಧಾನಮಂತ್ರಿ ಸ್ಥಾನಕ್ಕೆ ದೊಡ್ಡ ಅಪಮಾನ. ಸರ್ಕಾರ ಕೂಡಲೇ ಈ ಆದೇಶ ಹಿಂಪಡೆಯಬೇಕು. 

ಜನಸಂಕಲ್ಪ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಮಾತನಾಡುವಾಗ ಕುರ್ಚಿಗಳು ಖಾಲಿ, ಖಾಲಿ ಇದ್ದವು. ಹೀಗಾಗಿ ಕುರ್ಚಿ ತುಂಬಿಸಲು ಈ ರೀತಿ ಮಾಡುತ್ತಿದ್ದಾರೆ. ಅವರ ಪಕ್ಷ ದಿವಾಳಿಯಾಗಿರುವುದಕ್ಕೆ ಇದೇ ಸಾಕ್ಷಿ. ಈ ಸುತ್ತೊಲೆ ಹೊರಡಿಸಿರುವ ಮಂತ್ರಿ ಕೂಡಲೇ ರಾಜೀನಾಮೆ ನೀಡಬೇಕು. ಇಡೀ ದೇಶಕ್ಕೆ ಇದು ಅಪಮಾನ. ಇದಕ್ಕೆ ಪ್ರಧಾನಮಂತ್ರಿಗಳು ಉತ್ತರ ನೀಡಬೇಕು.

ಸತೀಶ್ ಜಾರಕಿಹೊಳಿ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಸತೀಶ್ ಜಾರಕಿಹೊಳಿ ಅವರು ತಮ್ಮ ಹೇಳಿಕೆಯ ಅಂಶ ಪುಸ್ತಕದಲ್ಲಿ ಇದೆ ಎಂದು ಸಮರ್ಥನೆ ಮಾಡಿಕೊಂಡಿದ್ದು, ಆ ಬಗ್ಗೆ ನನಗೆ ಗೊತ್ತಿಲ್ಲ. ನನ್ನ ಧರ್ಮ, ಸಂಸ್ಕೃತಿ ಸೇರಿದಂತೆ ಯಾವುದಕ್ಕೂ ಧಕ್ಕೆ ಆಗಬಾರದು ಎಂದು ನಾನು, ಸಿದ್ದರಾಮಯ್ಯ ಹಾಗೂ ಸುರ್ಜೆವಾಲ ಅವರು ಸ್ಪಷ್ಟಪಡಿಸಿದ್ದೇವೆ. ನಮ್ಮ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಾವು ಆ ಹೇಳಿಕೆಯನ್ನು ಖಂಡಿಸುತ್ತೇವೆ. ಬಿಜೆಪಿಯವರು ಇದರಿಂದ ರಾಜಕೀಯ ಲಾಭ ಮಾಡಿಕೊಳ್ಳಲು ಏನು ಬೇಕಾದರೂ ಮಾಡಲಿ. ಪಕ್ಷದ ಅಧ್ಯಕ್ಷನಾಗಿ ಆ ಹೇಳಿಕೆ ತಪ್ಪು ಎಂದು ಹೇಳುತ್ತೇನೆ’ ಎಂದರು. 

ಕಾಂಗ್ರೆಸ್ ಪಕ್ಷದಲ್ಲಿ ನೀವು ಸಿಎಂ ಆಗುವುದಿಲ್ಲ, ಬಿಜೆಪಿಗೆ ಬನ್ನಿ ಎಂದು ಸಚಿವ ಮುನಿರತ್ನ ಅವರು ಆಹ್ವಾನ ನೀಡಿರುವ ಬಗ್ಗೆ ಕೇಳಿದಾಗ, ‘ಬಹಳ ಸಂತೋಷ. ಅಲ್ಲಿಗೆ, ಬಿಜೆಪಿಯಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಜನ ಇಲ್ಲ ಎಂಬುದು ಸಾಬೀತಾಗಿದೆ’ ಎಂದರು.

ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ನನ್ನ ಖಾಸಗಿ ಬದುಕು, ವ್ಯವಹಾರ ಬೇರೆ ಇದೆ. ನಾನು ಎಲ್ಲಿಯೂ ಓಡಾಡಬಾರದೇ? ಬಾಗಲಕೋಟೆ ಜಿಲ್ಲೆಗೆ ಹೋಗಿದ್ದು ನಿಜ. ಯಾವ ಕ್ಷೇತ್ರಕ್ಕೆ ಹೋಗಿದ್ದೆ ಎಂಬುದು ಬೇಡ. ನಾನು ನನ್ನ ಖಾಸಗಿ ಕೆಲಸದ ಮೇಲೆ ಹೋಗಿದ್ದೆ’ ಎಂದರು.

ಯುವಕರಿಗೆ ಹೆಚ್ಚಿನ ಆದ್ಯತೆ ಎಂದು ಉದಯಪುರ ಶಿಬಿರದಲ್ಲಿ ನಿರ್ಣಯ ತೆಗೆದುಕೊಳ್ಳಲಾಗಿರುವ ಹಿನ್ನೆಲೆಯಲ್ಲಿ ಯುವಕರು ಹೆಚ್ಚಿನ ಪ್ರಮಾಣದಲ್ಲಿ ಅರ್ಜಿ ಹಾಕುತ್ತಿದ್ದಾರೆಯೇ ಎಂದು ಕೇಳಿದಾಗ, ‘ನೀವು ಕೂಡ ಅರ್ಜಿ ಹಾಕಿ. ನಿಮಗೂ ಪ್ರೋತ್ಸಾಹಿಸೋಣ’ ಎಂದರು.
[09/11, 3:15 PM] Kpcc official: *ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ ಅವರ ಮಾಧ್ಯಮಗೋಷ್ಠಿ ಮುಖ್ಯಾಂಶಗಳು:*

ಮೊದಲಿಗೆ ಬೆಂಗಳೂರು ನಿರ್ಮಾತೃ ಕೆಂಪೇಗೌಡರ ಪ್ರತಿಮೆ ಅನಾವರಣ ಮಾಡುತ್ತಿರುವ ನಿಮಗೆ ಹೃತ್ಪೂರ್ವಕ ಅಭಿನಂದನೆಗಳು. 

ಆದರೆ ಚುನಾವಣೆ ಸಮೀಪಿಸುತ್ತಿದ್ದಂತೆ ದೇಶದಲ್ಲಿ ಕರ್ನಾಟಕ ಎಂಬ ರಾಜ್ಯವಿದೆ ಎಂದು ಜ್ಞಾನೋದಯವಾಗಿರುವ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಅವರು ಕಳೆದ ಮೂರ್ನಾಲ್ಕು ತಿಂಗಳಿಂದ ರಾಜ್ಯದ ಪ್ರದಕ್ಷಣೆ ಆರಂಭಿಸಿದ್ದಾರೆ.

ರಾಜ್ಯ ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ, ಅವರು ಚುನಾವಣೆಗೂ ಮುನ್ನ ಕೊಟ್ಟ ಭರವಸೆಗಳಲ್ಲಿ ಯಾವುದನ್ನು ಈಡೇರಿಸಿದ್ದೀರಿ ಎಂದು ದಿನ ನಿತ್ಯ ಪ್ರಶ್ನೆ ಕೇಳುತ್ತಲೇ ಇದ್ದೇವೆ. ಆದರೆ ಅದಕ್ಕೆ ಉತ್ತರ ನೀಡುವ ಧಮ್ಮು, ತಾಕತ್ತು ನಿಮ್ಮ ಪಕ್ಷದ ಯಾರಿಗೂ ಇಲ್ಲವಾಗಿದೆ. 

ಹೀಗಾಗಿ ಡಬಲ್ ಇಂಜಿನ್ ಸರ್ಕಾರ ಕರ್ನಾಟಕದಲ್ಲಿ ಏನು ಸಾಧನೆ ಮಾಡಿ ಗುಡ್ಡೆ ಹಾಕಿದೆ ಎಂದು ಉತ್ತರಿಸುವ ಧಮ್ಮು, ತಾಕತ್ತು 56 ಇಂಚಿನ ಎದೆಯ, ಮಾತಿನ ಮಲ್ಲರಾದ ಪ್ರಧಾನಿ ಮೋದಿ ಅವರಿಗೆ ಇದೆ ಎಂದು ಭಾವಿಸಿ ಈ 15 ಪ್ರಶ್ನೆಗಳನ್ನು ಕೇಳ ಬಯಸುತ್ತಿದ್ದೇನೆ.

1. ಕಳೆದ ನಾಲ್ಕು ವರ್ಷಗಳಿಂದ ರಾಜ್ಯ ನಿರಂತರವಾಗಿ ಪ್ರವಾಹಕ್ಕೆ ಸಿಲುಕಿದೆ. ಈ ಸಂದರ್ಭದಲ್ಲಿ ಕರ್ನಾಟಕದ ಕಡೆ ತಲೆ ಹಾಕದ ನಿಮಗೆ ಈಗ ಚುನಾವಣೆ ಬಂದ ತಕ್ಷಣ ರಾಜ್ಯ ನೆನಪಾಯಿತೆ? ಕಳೆದ ಐದು ವರ್ಷಗಳಲ್ಲಿ ರಾಜ್ಯದಲ್ಲಿ ನೆರೆಯಿಂದಾಗಿ 
2.62 ಲಕ್ಷ ಮನೆಗಳು
1.5 ಲಕ್ಷ ಕಿ.ಮೀ ರಸ್ತೆಗಳು
30 ಸಾವಿರ ಸೇತುವೆಗಳು
54.32 ಲಕ್ಷ ಹೆಕ್ಟೇರ್ ಕೃಷಿ ಹಾಗೂ ತೋಟಗಾರಿಕಾ ಬೆಳೆ ನಾಶವಾಗಿದೆ.
ಒಟ್ಟು 93,648 ಕೋಟಿ ರೂಪಾಯಿಯಷ್ಟು ನಷ್ಟವಾಗಿದ್ದು, ರಾಜ್ಯಕ್ಕೆ ಕೇಂದ್ರದಿಂದ ಬಂದಿರುವ ಪರಿಹಾರ ಎಷ್ಟು?

2. ಡಬಲ್ ಇಂಜಿನ್ ಸರ್ಕಾರ ಬಂದರೆ ರಾಜ್ಯವನ್ನು ಅಭಿವೃದ್ಧಿಯಲ್ಲಿ ತೇಲಿಸುತ್ತೇವೆ ಎಂದಿದ್ದಿರಿ ನೆನಪಿದೆಯೇ? ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ 
- ಸ್ಮಾರ್ಟ್ ಸಿಟಿ
- ಜಲ್ ಜೀವನ ಮಿಷನ್
- 2 ಕೋಟಿ ಉದ್ಯೋಗ 
- ರೈತರ ಆದಾಯ ಡಬಲ್ (2022 ಒಳಗೆ)
- ಎಲ್ಲರಿಗೂ ಸ್ವಂತ ಸೂರು (2022 ಒಳಗೆ)
ಯಾವ ಒಂದು ಯೋಜನೆ ಸಂಪೂರ್ಣವಾಗಿದೆ ಹೇಳಿ?

3. ಕೇಂದ್ರ ಸರ್ಕಾರಕ್ಕೆ ಅತಿಹೆಚ್ಚು  ಜಿಎಸ್ಟಿ ಕಟ್ಟುತ್ತಿರುವ ರಾಜ್ಯಗಳಲ್ಲಿ ಕರ್ನಾಟಕ 2ನೇ ರಾಜ್ಯ ಎಂದು ನಿಮ್ಮದೇ ಸರ್ಕಾರ ಟ್ವೀಟ್ ಮಾಡಿತ್ತು. ಇದು ನಿಮ್ಮ ಸಾಧನೆ ಅಲ್ಲ, ಅದು ಈ ರಾಜ್ಯದ ಜನರ ಬೆವರಿನ ಪರಿಶ್ರಮ. ಆದರೆ ನೀವು ಕಲೆಹಾಕಿದ ಜಿಎಸ್ಟಿ ಹಣದಲ್ಲಿ ರಾಜ್ಯಗಳಿಗೆ ಹಂಚಿಕೆ ಆಗುವ ಅನುದಾನದ ಪಟ್ಟಿಯಲ್ಲಿ ರಾಜ್ಯಕ್ಕೆ ಎಷ್ಟನೇ ಸ್ಥಾನ ಇದೆ ಎಂದು ಹೇಳುತ್ತೀರಾ? ಆ ಮೂಲಕ ನಿಮ್ಮ ಸಾಧನೆ ಏನು ಎಂದು ಹೇಳುತ್ತೀರಾ?

4. ಮೊನ್ನೆಯಷ್ಟೇ ರಾಜ್ಯ ಪ್ರವಾಸ ಮಾಡಿ ಕಾಂಗ್ರೆಸ್ ಸರ್ಕಾರ ಮಾಡಿದ್ದ ಯೋಜನೆಗಳನ್ನು ಅನಾವರಣ ಮಾಡಿ ಕ್ಯಾಮೆರಾಗೆ ಪೋಸ್ ಕೊಟ್ಟು ಹೋದಿರಿ. ಈ ಸಂದರ್ಭದಲ್ಲಿ ಸಬ್ ಅರ್ಬನ್ ರೈಲಿಗೆ 40 ತಿಂಗಳು ಗಡವು ನೀಡಿದ್ದೀರಿ. ಈ ಯೋಜನೆಗೆ ಕೇಂದ್ರ ಬಿಡುಗಡೆ ಮಾಡಬೇಕಾಗಿದ್ದ ಹಣ ಎಷ್ಟು? ಈವರೆಗೂ ಎಷ್ಟು ಬಿಡುಗಡೆ ಮಾಡಿದ್ದೀರಿ?

5. ನೀವು ಬಂದಾಗ ನಿಮ್ಮನ್ನು ಮೆಚ್ಚಿಸಲು ಬೆಂಗಳೂರು ನಗರಕ್ಕೆ ಸಿಂಗಾರ ಮಾಡಲು ರಾಜ್ಯ ಸರ್ಕಾರ 23 ಕೋಟಿ ವೆಚ್ಚದಲ್ಲಿ ರಸ್ತೆ ಹಾಕಿದರು. ನೀವು ರಾಜ್ಯ ಬಿಡುತ್ತಿದ್ದಂತೆ ರಸ್ತೆಯ ಡಾಂಬರು ಕೂಡ ಕಿತ್ತು ಬಂದವು. ಡಬಲ್ ಇಂಜಿನ್ ಸರ್ಕಾರದ ಈ ಮಹಾನ್ ಸಾಧನೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? 

6.ಭ್ರಷ್ಟಾಚಾರದ ವಿರುದ್ಧ ಉದ್ದುದ್ದ ಭಾಷಣ ಬಿಗಿದು ನಾ ಖಾವೂಂಗಾ ನಾ ಖಾನೆದೂಂಗಾ ಎಂದ ನೀವು ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರ 40% ಕಮಿಷನ್ ಕುರಿತ ದೂರು, RUPSA ಸಂಸ್ಥೆ ನೀಡಿರುವ ದೂರು, ಬೆಳಗಾವಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ,  ಹುಬ್ಬಳ್ಳಿ ಗುತ್ತಿಗೆದಾರ ಬಸವರಾಜ್ ಅವರ ದಯಾಮರಣ ಅರ್ಜಿ ಬಗ್ಗೆ ಬಾಯಿಗೆ ಬೀಗ ಜಡಿದು ಕೊಂಡಿರುವುದು ಏಕೆ?

7. ವರ್ಷಕ್ಕೆ 2 ಕೋಟಿ ಉದ್ಯೋಗ ಎಂದವರು, ಈಗ 70 ಸಾವಿರ ನೇಮಕಾತಿಯನ್ನೇ ದೊಡ್ಡ ಸಾಧನೆ ಎಂದು ಪ್ರಚಾರ ಪಡೆಯುತ್ತಿದ್ದೀರಿ. ಪಿಎಸ್ಐ, ಶಿಕ್ಷಕರು, ಅರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳ ನೇಮಕಾತಿಯಲ್ಲಿ ಅಕ್ರಮ ತಾಂಡವವಾಡುತ್ತಿದೆ. ಆದರೂ ಸಿಬಿಐ, ಇಡಿ, ಆದಾಯ ತೆರಿಗೆ ಇಲಾಖೆಗಳಿಂದ ತನಿಖೆ ಯಾಕಿಲ್ಲ? ಭ್ರಷ್ಟಾಚಾರ ವಿರುದ್ಧದ ಹೋರಾಟ ಎಂದರೆ, ಕಾಂಗ್ರೆಸ್ ನಾಯಕರ ವಿರುದ್ಧ ಸುಳ್ಳು ಪ್ರಕರಣ ದಾಖಲಿಸುವುದು ಮಾತ್ರವೇ?

8. ನಿಮ್ಮಲ್ಲಿ ಮುಖ್ಯಮಂತ್ರಿ ಕುರ್ಚಿಯನ್ನು 2500 ಕೋಟಿಗೆ, ಮಂತ್ರಿಸ್ಥಾನವನ್ನು 100 ಕೋಟಿಗೆ ಮಾರಾಟ ಮಾಡಲಾಗಿದೆ ಎಂದು ನಿಮ್ಮದೇ ಶಾಸಕರು ಹೇಳಿದ್ದಾರೆ. ನಿಮ್ಮ ಈ ಅಮೋಘ ಸಾಧನೆ ಬಗ್ಗೆ ಏನು ಹೇಳುತ್ತೀರಿ?

9. ಸಿಲಿಕಾನ್ ಸಿಟಿ, ಐಟಿ ರಾಜಧಾನಿ ಎಂದು ಮನ್ನಣೆ ಗಳಿಸಿದ್ದ ಬೆಂಗಳೂರು ನಗರ ನಿಮ್ಮ ಡಬಲ್ ಇಂಜಿನ್ ಆಡಳಿತದಲ್ಲಿ Sinking City, ಗಾರ್ಬೇಜ್ ಸಿಟಿ ಆಗಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯ ಏನು?

10. ಬೆಂಗಳೂರಿನಲ್ಲಿ ಕಳೆದ ಎರಡು ವರ್ಷಗಳಿಂದ ರಸ್ತೆ ಗುಂಡಿಗೆ 20ಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಸಾವಿರಾರು ಮಂದಿ ಗಾಯಗೊಂಡಿದ್ದಾರೆ. ಇದರ ಜವಾಬ್ದಾರಿಯನ್ನು ನಿಮ್ಮ ಡಬಲ್ ಇಂಜಿನ್ ಸರ್ಕಾರ ಹೊರಬೇಕಲ್ಲವೆ? 

11. ನಾವು ಮೇಕೆದಾಟು ಯೋಜನೆ ಆಗ್ರಹಿಸಿ ಪಾದಯಾತ್ರೆ ಮಾಡಿದ್ದೇವೆ. ಅದಕ್ಕೆ ಹೆದರಿದ ನಿಮ್ಮ ಸರ್ಕಾರ ಬಜೆಟ್ ನಲ್ಲಿ ಯೋಜನೆಗೆ 1 ಸಾವಿರ ಕೋಟಿ ಎಂದು ಘೋಷಣೆ ಮಾಡಿತು. ಮೇಕೆದಾಟು ಯೋಜನೆ ಜಾರಿ ವಿಚಾರ ಎಲ್ಲಿಯವರೆಗೂ ಬಂದಿತು?

12. ಅದೇ ರೀತಿ ಮಹದಾಯಿ ವಿಚಾರದಲ್ಲೂ ರಾಜ್ಯ ಸರ್ಕಾರ 1 ಸಾವಿರ ಕೋಟಿ ರು ಅನುದಾನ ಘೋಷಣೆ ಮಾಡಿದೆ. ಕರ್ನಾಟಕ, ಗೋವಾ, ಮಹಾರಾಷ್ಟ್ರ ಹಾಗೂ ಕೇಂದ್ರದಲ್ಲಿ ಒಟ್ಟು ನಾಲ್ಕು ಇಂಜಿನ್ ಸರ್ಕಾರ ನಿಮ್ಮದೇ ಇದೆ. ಮಹದಾಯಿ ಯೋಜನೆ ಜಾರಿ ಯಾವಾಗ?

13. ಕೋವಿಡ್ ನಿಂದ ಸತ್ತವರಲ್ಲಿ ಎಷ್ಟು ಕುಟುಂಬಕ್ಕೆ ಪರಿಹಾರ ನೀಡಿದ್ದೀರಿ? 

14. ನಿಮ್ಮ ಈ ರಾಜ್ಯ ಪ್ರವಾಸದಲ್ಲಿ ಹಿಂದಿನ ಕಾಂಗ್ರೆಸ್ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡದೇ, ನಿಮ್ಮ ಡಬಲ್ ಇಂಜಿನ್ ಸರ್ಕಾರದ ಯಾವುದಾದರೂ ಐದು ಕೊಡುಗೆಗಳನ್ನು ಹೇಳಿ ಜನರಿಂದ ಚಪ್ಪಾಳೆ ಗಿಟ್ಟಿಸಿಕೊಳ್ಳಲು ಸಾಧ್ಯವೇ?

15. ನಾಡಪ್ರಭು ಕೆಂಪೇಗೌಡರು ಈ ನಗರ ಕಟ್ಟುವಾಗ ಎಲ್ಲಾ ಸಮುದಾಯದವರಿಗೂ ಅನುಕೂಲ ಆಗಲೆಂದು 52 ಸಮುದಾಯಗಳ ಪೇಟೆಗಳನ್ನು ನಿರ್ಮಿಸಿದ್ದರು. ಅದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್. ಆದರೆ ನಿಮ್ಮ ಡಬಲ್ ಇಂಜಿನ್ ಸರ್ಕಾರ ಜಾತಿ, ಧರ್ಮಗಳ ಹೆಸರಲ್ಲಿ ದ್ವೇಷ ಬಿತ್ತಿ ಸಮಾಜ ಒಡೆಯುತ್ತಿರುವುದು ಎಷ್ಟರಮಟ್ಟಿಗೆ ಸರಿ?

*ಪ್ರಶ್ನೋತ್ತರ:*

ಪ್ರತಿಮೆ ಉದ್ಘಾಟನೆ ಕಾರ್ಯಕ್ರಮಕ್ಕೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳನ್ನು ಕರೆತರುವ ಆದೇಶದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಈ ಬಗ್ಗೆ ಅವರು ಆದೇಶ ಹೊರಡಿಸಿದ್ದು, ರಾತ್ರಿ ಈ ಆದೇಶ ಹಿಂಪಡೆದಿದ್ದಾರೆ. ನಾನು ಶಿಕ್ಷಣ ಸಚಿವನಾಗಿದ್ದ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರ ಕ್ಷೇತ್ರದಲ್ಲಿ ಜೆಸಿಬಿ ಅವಘಡ ಸಂಭವಿಸಿತ್ತು. ಆನಂತರ ನಾನು ಮಕ್ಕಳನ್ನು ಯಾವುದೇ ಸರ್ಕಾರಿ ಕಾರ್ಯಕ್ರಮಕ್ಕೆ ಕರೆತರಬಾರದು ಎಂದು ನೀತಿ ಮಾಡಿದ್ದೆ. ಈಗ ಅವರು ಆದೇಶ ಹಿಂಪಡೆದಿರುವ ಹಿನ್ನೆಲೆಯಲ್ಲಿ ನಾನು ಆ ವಿಚಾರವಾಗಿ ಮಾತನಾಡಲಿಲ್ಲ’ ಎಂದರು.

ರಸ್ತೆಗಳ ಗುಣಮಟ್ಟದ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ಸರ್ಕಾರ ಬಂದ ನಂತರ ಬೆಂಗಳೂರಿನ ರಸ್ತೆಗಳ ಸ್ಥಿತಿ ಹೀಗೆ ಹೀನಾಯವಾಗಿದೆ. 2013ರಲ್ಲಿ ಬಿಜೆಪಿ ಸರ್ಕಾರ ಹೋದ ನಂತರ ರಸ್ತೆಗಳ ಪರಿಸ್ಥಿತಿ ಹೀಗೆ ಹದಗೆಟ್ಟಿತ್ತು. ಆಗ ನಾನು ಮೂರ್ನಾಲ್ಕು ತಿಂಗಳಲ್ಲಿ ಎಲ್ಲ ರಸ್ತೆ ಪಡಿಸಿದೆ. ರಸ್ತೆ ಹಾಳಾಗಬಾರದು ಎಂಬ ಕಾರಣಕ್ಕೇ ಕಾಂಕ್ರೀಟ್ ರಸ್ತೆಗಳನ್ನು ಮಾಡಲು ಮುಂದಾದೆವು. ಆಗ ಇವರು ವಿರೋಧ ಪಕ್ಷದಲ್ಲಿದ್ದು, ಅದರ ಬಗ್ಗೆ ಟೀಕೆ ಮಾಡಿದ್ದರು. ರಾಜ್ಯದ ಪ್ರಮುಖ ರಸ್ತೆಗಳನ್ನು ಡಾಂಬರೀಕರಣ ಬದಲು ಕಾಂಕ್ರೀಟ್ ರಸ್ತೆ ಹಾಕಬೇಕು ಎಂದು ಸಲಹೆ ನೀಡುತ್ತೇನೆ. ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಬಾರದು’ ಎಂದರು.

ಸತೀಶ್ ಜಾರಕಿಹೊಳಿ ಅವರ ವಿವಾದಾತ್ಮಕ ಹೇಳಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಈ ಬಗ್ಗೆ ಈಗಾಗಲೇ ಸುರ್ಜೆವಾಲ ಅವರು ಎಲ್ಲ ಸ್ಪಷ್ಟನೆ ನೀಡಿದ್ದಾರೆ. ಸತೀಶ್ ಜಾರಕಿಹೊಳಿ ಅವರು ನಿಜವಾದ ಹಿಂದೂ ಧರ್ಮ ಪಾಲಿಸಿದರೆ, ಬಿಜೆಪಿ ಚುನಾವಣೆಗಾಗಿ ಹಿಂದೂ ಧರ್ಮ ಎಂದು ಮಾತನಾಡುತ್ತಾರೆ. ನಮ್ಮದು ಸನಾತನ ಧರ್ಮ. ನನಗೆ ಅದರ ಬಗ್ಗೆ ಹೆಮ್ಮೆ ಇದೆ. ಸತೀಶ್ ಜಾರಕಿಹೊಳಿ ಅವರು ಯಾವ ಅರ್ಥದಲ್ಲಿ ಹೇಳಿದ್ದಾರೆ ಗೊತ್ತಿಲ್ಲ. ಅವರು ಹಿಂದೂ ಧರ್ಮದ ಬಗ್ಗೆ ಮಾತನಾಡಿಲ್ಲ. ಕೆಲವು ಪುಸ್ತಕದಲ್ಲಿ ಆ ಪದದ ಅರ್ಥ ಹೀಗಿದೆ ಎಂದಿದ್ದಾರೆ. ಕಾಂಗ್ರೆಸ್ ನವರು ಕಟ್ಟಿದಷ್ಟು ದೇವಾಲಯಗಳು, ದೇವಾಲಯಗಳ ಅಭಿವೃದ್ಧಿ ಹಾಗೂ ಜೀರ್ಣೋದ್ದಾರ ಕಾರ್ಯಗಳಲ್ಲಿ   ಬಿಜೆಪಿಯವರು  ಶೇ.10ರಷ್ಟು ಮಾಡಿಲ್ಲ’ ಎಂದರು.
[09/11, 5:29 PM] Kpcc official: *ಕೆಪಿಸಿಸಿ ಸಂವಹನ ವಿಭಾಗದ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ಅವರ ಮಾಧ್ಯಮ ಪ್ರತಿಕ್ರಿಯೆ:*

ಸತೀಶ್ ಜಾರಕಿಹೊಳಿ ಅವರು ಬಹಳ ಸ್ಪಷ್ಟವಾಗಿ ಇದು ನನ್ನ ವೈಯಕ್ತಿಕ ಅಭಿಪ್ರಾಯ. ಹಿಂದೂ ಎಂಬ ಪದ ನಮ್ಮ ದೇಶದ ಪದವಲ್ಲ ಇದಕ್ಕೆ ಬಿಜೆಪಿಯವರು ಒಪ್ಪುತ್ತಾರಾ ಎಂದು ಕೇಳಿದ್ದಾರೆ. ಈ ಬಗ್ಗೆ ಅವರು ಚರ್ಚೆಗೆ ಸಿದ್ಧ ಎಂದು ಅವರು ತಿಳಿಸಿದ್ದಾರೆ. ನನ್ನ ಅಧ್ಯಯನದ ಈ ವಿಚಾರಕ್ಕೂ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಇದಕ್ಕೆ ಪೂರಕ ಅಂಶಗಳನ್ನು ತಿಳಿಸಿದ್ದಾರೆ. ಬಿಜೆಪಿಯವರು ಅದರ ಬಗ್ಗೆ ಅವರ ಬಳಿ ಚರ್ಚೆ ಮಾಡದೇ ಅದನ್ನು ಪಕ್ಷಕ್ಕೆ ತಂದು ಹಿಂದೂ ವಿರೋಧಿ ಎಂದರೆ ಅದರಲ್ಲಿ ಅರ್ಥವೇನಿದೆ?

ವೈಯಕ್ತಿಕ ಹೇಳಿಕೆ ಆದರೂ ಅವರು ಕಾಂಗ್ರೆಸ್ ಕಾರ್ಯಾಧ್ಯಕ್ಷರು ಎಂದು ಕೇಳಿದ ಪ್ರಶ್ನೆಗೆ, ‘ರಮೇಶ್ ಕತ್ತಿ ಅವರು ಇದೇ ಪ್ರತಿಪಾದನೆ ಮಾಡಿದ್ದರು. ಅವರು ಯಾವ ಪಕ್ಷದವರು? ಈಗ ಅದೇ ನಿಯಮ ಅಲ್ಲೂ ಅನ್ವಯಿಸಬೇಕಲ್ಲವೇ? ಕಾಂಗ್ರೆಸ್ ಪಕ್ಷದ ನಿಲುವನ್ನು ರಣದೀಪ್ ಸಿಂಗ್ ಸುರ್ಜೆವಾಲ ಹಾಗೂ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಬಿಜೆಪಿ ಅವರು ಚರ್ಚೆಗೆ ಸಿದ್ಧರಿದ್ದರೆ ವೇದಿಕೆ ಕಲ್ಪಿಸಲು ಸತೀಶ್ ಜಾರಕಿಹೊಳಿ ಅವರು ಸಿದ್ಧರಿದ್ದಾರೆ. ನಿಮ್ಮ 40% ಹಗರಣ, ಪಿಎಸ್ಐ ಹಗರಣಗಳನ್ನು ಮುಚ್ಚಿಕೊಳ್ಳಲು ಈ ವಿಚಾರವಾಗಿ ಪ್ರತಿಭಟನೆ ಮಾಡಿದರೆ ಜನರು ಇದನ್ನು ನಂಬುವುದಿಲ್ಲ’ ಎಂದರು.

ಜಾರಕಿಹೊಳಿ ಅವರನ್ನು ನಿಮ್ಮ ಪಕ್ಷ ವಿರೋಧಿಸುತ್ತಿರುವುದೇಕೆಎಂದು ಕೇಳಿದಾಗ, ‘ಸತೀಶ್ ಜಾರಕಿಹೊಳಿ ಅವರು ನಮ್ಮ ಪಕ್ಷದವರಲ್ಲ ಎಂದು ನಮ್ಮ ಯಾವ ನಾಯಕರೂ ಹೇಳುತ್ತಿಲ್ಲ. ಸತೀಶ್ ಜಾರಕಿಹೊಳಿ ಅವರ ಅಧ್ಯಯನದ ಬಗ್ಗೆ ನಮಗೆ ಗೊತ್ತಿಲ್ಲ. ಅವರಿಂದ ಸ್ಪಷ್ಟೀಕರಣ ಪಡೆಯುತ್ತೇವೆ ಎಂದು ಹೇಳಿದ್ದಾರೆ. ಆದರೆ ಬಿಜೆಪಿಯಲ್ಲಿ ಯತ್ನಾಳ್ ಅವರ ಹೇಳಿಕೆಗೆ ಅವರು ನಮ್ಮ ಪಕ್ಷದವರೇ ಅಲ್ಲ ಎಂದು ಅರುಣ್ ಸಿಂಗ್ ಅವರು ಹೇಳಿದಂತೆ ಹೇಳುತ್ತಿಲ್ಲ. ಪಿಎಸ್ಐ ಹಗರಣದಲ್ಲಿ ಬಿಜೆಪಿ ನಾಯಕರು ಸಿಕ್ಕಿಬಿದ್ದಾಗ ಅವರು ನಮ್ಮ ನಾಯಕರೇ ಅಲ್ಲ ಎಂದರು. ಈ ರೀತಿ ಸುತ್ತಿ ಬಳಸಿ ಮಾತನಾಡಿದರೆ ಅರ್ಥವಿಲ್ಲ. ಬಿಜೆಪಿಯವರು ಚರ್ಚೆಗೆ ಯಾಕೆ ಹೆದರುತ್ತಿದ್ದಾರೆ. ಅವರು ತಾವು ಮಾಡಿರುವ ಅಧ್ಯಯನದ ದಾಖಲೆಗಳನ್ನು ನಿಮ್ಮ ಮುಂದೆ ಇಡುತ್ತಿದ್ದಾರೆ. ಅವರು ಆ ಪದ ಎಲ್ಲಿಂದ ಹುಟ್ಟಿ ಬಂದಿದೆ. ಅದರ ಅರ್ಥ ಏನು ಎಂದಷ್ಟೇ ಹೇಳಿದ್ದಾರೆ. ಅದರ ಬಗ್ಗೆ ಚರ್ಚೆ ಆಗಬೇಕು ಎಂದು ಹೇಳಿದ್ದಾರೆ’ ಎಂದರು.

ನಾನು ಶೂದ್ರ ಹಾಗೂ ಕಾಂಗ್ರೆಸ್ ನಾಯಕ ಎಂದು ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ, ‘ಸತೀಶ್ ಜಾರಕಿಹೊಳಿ ಅವರು ಮೌಢ್ಯದಿಂದ ದೂರ ಉಳಿದು, ಸಂವಿಧಾನದ ಮೇಲೆ ನಂಬಿಕೆ ಇಟ್ಟಿರುವ, ವೈಜ್ಞಾನಿಕ ಚಿಂತನೆಗಳನ್ನು ನಂಬಿರುವ ನಾಯಕರು. ಇದೇ ಸತೀಶ್ ಜಾರಕಿಹೊಳಿ ಅವರು ಸ್ಮಾಶಾಣದಲ್ಲಿ ಹೋಗಿ ಮಲಗಿದಾಗ ಇಂತಹ ವೈಜ್ಞಾನಿಕ ಚಿಂತನೆ ವ್ಯಕ್ತಿಗಳು ಇರಬೇಕು ಎಂದು ಹೇಳುತ್ತೀರ. ಈಗ ಒಂದು ಪ್ರಶ್ನೆ ಕೇಳಿದ್ದು, ಅದರಲ್ಲಿ ಏನಿದೆ ಎಂದು ಚರ್ಚೆ ಆಗಲಿ. ಅದರಲ್ಲಿ ತಪ್ಪಿದ್ದರೆ ಕ್ಷಮೆ ಕೇಳುತ್ತಾರೆ’ ಎಂದರು.

ಆದರೆ ಬಿಜೆಪಿಯವರು ಇದು ಹಿಂದುಗಳಿಗೆ ಮಾಡಿರುವ ಅಪಮಾನ ಎಂದು ಹೇಳುತ್ತಿದ್ದಾರೆ ಎಂದು ಕೇಳಿದಾಗ, ‘ಬಿಜೆಪಿಯವರಿಗೆ ನಂಬಿಕೆ ಇರುವುದು ಮನುಸ್ಮೃತಿ ಮೇಲೆ. ಅವರಿಗೆ ಚತುರ್ವರ್ಣ ವ್ಯವಸ್ಥೆ ಮೇಲೆ ವಿಶ್ವಾಸ ಇದೆ. 2022ರಲ್ಲೂ ಅವರ ನೀತಿ ನೋಡಿದರೆ ಅದು ತಿಳಿಯುತ್ತದೆ. ನಾನು ಆರ್ ಎಸ್ಎಸ್ ನವನು. ಮುಂದೊಂದು ದಿನ ದಲಿತರು ಮುಸಲ್ಮಾನರು ಆರ್ ಎಸ್ಎಸ್ ತತ್ವವನ್ನು ಒಪ್ಪುತ್ತಾರೆ ಎಂದು ವಿಧಾನಸಭೆ ಸ್ಪೀಕರ್ ಅವರೇ ಹೇಳುತ್ತಾರೆ. ಯಾವ ತತ್ವ ಸಿದ್ಧಾಂತದಲ್ಲಿ ಸಮಾನತೆ ಇಲ್ಲದಾಗ ಆ ಸಿದ್ಧಾಂತ ನಮಗೇಕೆ ಬೇಕು? ನಮಗೆ ಸಂವಿಧಾನ ಇದೆಯಲ್ಲ. ಇಲ್ಲಿ ಚರ್ಚೆಗೆ ಆಹ್ವಾನ ಮಾಡಿದ್ದು, ಚರ್ಚೆ ಮಾಡಲಿ’ ಎಂದರು.

ಈ ಚರ್ಚೆಯಲ್ಲಿ ಸತೀಶ್ ಜಾರಕಿಹೊಳಿ ಅವರು ಒಬ್ಬರೇ ಎದುರಿಸಬೇಕೋ ಅಥವಾ ಕಾಂಗ್ರೆಸ್ ಪಕ್ಷ ಅವರ ಬೆನ್ನಿಗೆ ನಿಲ್ಲುವುದೋ ಎಂಬ ಪ್ರಶ್ನೆಗೆ, ‘ಇದು ನನ್ನ ವೈಯಕ್ತಿಕವಾದ ಹೇಳಿಕೆಯೇ ಹೊರತು ಪಕ್ಷದ ಹೇಳಿಕೆಯಲ್ಲ ಎಂದು ಸತೀಶ್ ಜಾರಕಿಹೊಳಿ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಬಿಜೆಪಿ ತನ್ನ ಭ್ರಷ್ಟಾಚಾರದ ಹುಳುಕು ಮುಚ್ಚಿಕೊಳ್ಳಲು ಈ ರೀತಿ ಮಾಡುತ್ತಿದ್ದಾರೆ’ ಎಂದರು.

ಚಿತ್ತಾಪುರದಲ್ಲಿ ತಾವು ಕಾಣೆಯಾಗಿದ್ದೀರಿ ಎಂದು ಪೋಸ್ಟರ್ ಅಂಟಿಸಿರುವ ಬಗ್ಗೆ ಕೇಳಿದಾಗ, ‘ಬಿಜೆಪಿಯವರು ಈ ಪೋಸ್ಟರ್ ಅಂಟಿಸಿದ್ದು, ಅವರಿಗೆ ನಾನು ಉತ್ತರ ಕೊಡಬೇಕಾ? ಅವರಿಗೆ ಪೇಸಿಎಂ ಅಭಿಯಾನದಿಂದ ಹೊರಬರಲು ಸಾಧ್ಯವಾಗುತ್ತಿಲ್ಲ. ನಾನು ಕಾಣೆಯಾಗಿದ್ದೇನೋ ಅಲ್ಲವೋ ಎಂದು ಮಾಧ್ಯಮದವರಿಗೆ ಗೊತ್ತಿದೆ. ಭಾರತ ಜೋಡೋ ಯಾತ್ರೆ, ಎಐಸಿಸಿ ಅಧ್ಯಕ್ಷ ಸ್ಥಾನದ ಚುನಾವಣೆ ವಿಚಾರವಾಗಿ ಕೆಲಸ ಮಾಡುತ್ತಿದ್ದೆ. ನಾನು ಬಿಜೆಪಿಯವರಿಗೆ ಉತ್ತರ ನೀಡುವ ಪರಿಸ್ಥಿತಿ ಬಂದಿಲ್ಲ. ನಾನು ಉತ್ತರ ನೀಡಬೇಕಿರುವುದು ಕೇವಲ ಚಿತ್ತಾಪುರ ಕ್ಷೇತ್ರದ ಮಹಾಜನತೆಗೆ ಮಾತ್ರ. ನನ್ನ ಕಾರ್ಯವೈಖರಿ ಸರಿಯಿಲ್ಲ ಎಂದರೆ ಅವರು ನನಗೆ ಗೇಟ್ ಪಾಸ್ ನೀಡುತ್ತಾರೆ. ಕಳೆದ ಒಂದು ತಿಂಗಳಿಂದ ಸಂವಿಧಾನ ಪರವಾಗಿ, ನಿರುದ್ಯೋಗ ವಿರುದ್ಧ ಕೋಮು ಸೌಹಾರ್ದತೆ ಪರವಾಗಿ, ರಾಜ್ಯ ಹಾಗೂ ಸಂವಿಧಾನದ ಪರವಾಗಿ 511 ಕಿ.ಮೀ ನಡೆಯುತ್ತಿದ್ದೆ. ಕೋಲಿ ಸಮಾಜವನ್ನು ಎಸ್ ಟಿ ವಿಭಾಗಕ್ಕೆ ಸೇರಿಸಬೇಕು ಎಂದು ದೆಹಲಿಯಲ್ಲಿ ನಾಲ್ಕು ದಿನ ಓಡಾದಿದ್ದೇನೆ. ಇವರು ಮಾಡಬೇಕಾದ ಕೆಲಸ ನಾನು ಮಾಡುತ್ತಿದ್ದೇನೆ. ಇವರು ಕೆಲಸ ಮಾಡಲಾಗದವರು ಮೈ ಪರೆಚಿಕೊಂಡರು ಎನ್ನುವಂತೆ ಮಾತನಾಡುತ್ತಿದ್ದಾರೆ. ಕಲಬುರ್ಗಿ ಅಭಿವೃದ್ಧಿಗೆ ಕಾಂಗ್ರೆಸ್ ಕೊಡುಗೆ ಹೆಚ್ಚಾಗಿದೆಯೋ ಅಥವಾ ಬಿಜೆಪಿ ಕೊಡುಗೆ ಹೆಚ್ಚಾಗಿದೆಯೋ ಎಂಬ ಚರ್ಚೆಗೆ ನಾವು ಸಿದ್ಧವಿದ್ದೇವೆ’ ಎಂದರು.
[09/11, 5:51 PM] Kpcc official: "ಯತ್ನಾಳ್ ನಮ್ಮ ಪಕ್ಷದ ನಾಯಕರಲ್ಲ" ಎಂದಿದ್ದ ಬಿಜೆಪಿ ಉಸ್ತುವಾರಿ @ArunSinghbjp ಯತ್ನಾಳ್‌ರ ಜೊತೆ ರಹಸ್ಯ ಮಾತುಕತೆ ಮಾಡಿದ್ದಾರೆ.
ಇಂತಹ ಸದಾರಮೆ ನಾಟಕ ಬಿಜೆಪಿಗೆ ಮಾತ್ರ ಸಾದ್ಯವೇನೋ!

BSY ಅವರಿಗೆ ಮಸಿ ಬಳಿಯಲು ಬಿಜೆಪಿಯೇ ಯತ್ನಳರನ್ನು ಮುಂದೆ ಬಿಟ್ಟಿದೆಯೇ?

ಇದು ತೊಟ್ಟಿಲನ್ನೂ ತೂಗುತ್ತಾ, ಮಗುವನ್ನೂ ಚಿವುಟುವ ಆಟವೇ @BJP4Karnataka?

ಯತ್ನಾಳರನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ, ಅವರು ನಮ್ಮ ಪಕ್ಷದ ನಾಯಕರಲ್ಲ ಎಂದಿದ್ದ @ArunSinghbjp ಈಗ ಅದೇ ಯತ್ನಳರೊಂದಿಗೆ ಗಂಭೀರವಾಗಿ ರಹಸ್ಯ ಮಾತುಕತೆ ನಡೆಸಿರುವುದೇಕೆ?

ಆ ರಹಸ್ಯ ಏನು @BJP4Karnataka?
BSY ಮೇಲೆ ಇನ್ನಷ್ಟು ದಾಳಿಯ ಸಂಚು ರೂಪಿಸುವುದೇ?

ಸಿಎಂ ಹುದ್ದೆಯ ಬಲವಾದ ಆಕಾಂಕ್ಷಿಯಾಗಿರುವ ಯತ್ನಾಳರ ಆಸೆ ಈಡೇರಿಸುವ ಭೇಟಿಯೇ?

ಯತ್ನಾಳರೊಂದಿಗೆ ಖಾಸಾ ಖಾಸಾ ಮಾತುಕತೆ ನಡೆಸಿರುವ @ArunSinghbjp ಅವರೇ,

◆ಬಿಜೆಪಿಗೆ ಯತ್ನಾಳ್ ನೀಡಿದ
'ಬ್ಲಾಕ್ಮೇಲ್ ಜನತಾ ಪಾರ್ಟಿ' ಎಂಬ ಹೆಸರನ್ನು ಒಪ್ಪುವಿರಾ?

◆ಸಿಎಂ ಹುದ್ದೆಗೆ ₹2,500 ಕೋಟಿ ಸಲ್ಲಿಸಬೇಕು ಎಂಬ ಹೇಳಿಕೆ ಅನುಮೋದಿಸುತ್ತೀರಾ?

◆ಹಣ ನೀಡಿ ಮಂತ್ರಿಯಾದವರಿದ್ದಾರೆ ಎಂಬ ಯತ್ನಾಳ್ ಆರೋಪ ಒಪ್ಪುವಿರಾ?
[09/11, 6:40 PM] Kpcc official: ಬಿಜೆಪಿ ನಡೆಸುತ್ತಿರುವುದು ಜನ ಸಂಕಲ್ಪ ಸಮವೇಶವಲ್ಲ, #ಜನಸಂಕಟ ಸಮಾವೇಶ!

◆ಸಂಕಷ್ಟದಲ್ಲಿರುವ ರೈತರ ಆತ್ಮಹತ್ಯೆ ಹೆಚ್ಚಿದೆ
◆ರಸ್ತೆ ಗುಂಡಿಗೆ ದಿನಕ್ಕೊಬ್ಬರ ಬಲಿಯಾಗುತ್ತಿದೆ
◆ವಿದ್ಯಾರ್ಥಿಗಳಿಗೆ ಇನ್ನೂ ಪಠ್ಯಪುಸ್ತಕ ಸಿಗ್ತಿಲ್ಲ
◆ಕೆಪಿಎಸ್‌ಸಿ ಅಭ್ಯರ್ಥಿಗಳಿಗೆ ಉದ್ಯೋಗ ಸಿಗ್ತಿಲ್ಲ
◆108 ಸಿಬ್ಬಂದಿಗಳಿಗೆ ಸಂಬಳವಿಲ್ಲ

#ಜನಸಂಕಟಸಮಾವೇಶ
[09/11, 6:40 PM] Kpcc official: ◆ಉತ್ತರ ಕರ್ನಾಟಕದಲ್ಲಿ ಅಪೌಷ್ಟಿಕತೆ ಹೆಚ್ಚಿದೆ
◆ಅಪೌಷ್ಟಿಕತೆಯಿಂದ ರಾಜ್ಯದಲ್ಲಿ ಬಾಣಂತಿಯರ, ಗರ್ಭಿಣಿಯರ ಸಾವು ಹೆಚ್ಚಿದೆ
◆ರಾಜ್ಯದಲ್ಲಿ ನಿರುದ್ಯೋಗಿಗಳ ಆತ್ಮಹತ್ಯೆ ಪ್ರಮಾಣ ಹೆಚ್ಚಿದೆ
◆ರೈತರ ಆತ್ಮಹತ್ಯೆ ಹೆಚ್ಚಿದೆ

@BSBommai ಅವರೇ, ಜನರಿಗೆ ಸಂಕಟ ನೀಡುತ್ತಿರುವ ತಮ್ಮ ಸರ್ಕಾರ ನಡೆಸುತ್ತಿರುವುದು
#ಜನಸಂಕಟಸಮಾವೇಶ ಅಲ್ಲದೆ ಇನ್ನೇನು?
[09/11, 7:11 PM] Kpcc official: ಬಿಜೆಪಿ ಸಮಾವೇಶ ಮಾಡ್ತಿರೋದು ಕರ್ನಾಟಕದಲ್ಲಿ.
ಮತ ಕೇಳುವುದು ಕನ್ನಡಿಗರದ್ದು.
ಆದರೆ @BJP4Karnataka ಪಕ್ಷದ ಪ್ರೀತಿ ಪ್ರೇಮ ಮಾತ್ರ ಹಿಂದಿ ಮೇಲೆ.

ಕನ್ನಡ ನಾಡಿನಲ್ಲಿ ಹಿಂದಿ ಹೇರಿಕೆ ನಡೆಸುವ ಗುತ್ತಿಗೆಯನ್ನು ನಗಪುರದಿಂದ ಪಡೆದಿದ್ದೀರಾ, ಹೈಕಮಂಡಿನಿಂದ ಪಡೆದಿದ್ದೀರಾ @BSBommai ಅವರೇ?

#ಜನಸಂಕಟಯಾತ್ರೆ

Post a Comment

Previous Post Next Post