ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಸೇರಿದಂತೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ PM।CM

[11/11, 9:36 AM] Cm Ps: ನಾಡಪ್ರಭು ಕೆಂಪೇಗೌಡರ  ಪ್ರತಿಮೆ ಅನಾವರಣ ಸೇರಿದಂತೆ ನಗರದಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು  ಹೆಚ್. ಎ. ಎಲ್ ವಿಮಾನನಿಲ್ದಾಣಕ್ಕೆ ಆಗಮಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು  ರಾಜ್ಯಪಾಲ ಥಾವರ್ ಚಂದ್ ಗೆ ಹ್ಲೋಟ್ ಅವರೊಂದಿಗೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ವಾಗತಿಸಿದರು. 

ಈ ಸಂದರ್ಭದಲ್ಲಿ  ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸಂಸದ ತೇಜಸ್ವಿ ಸೂರ್ಯ, ಶಾಸಕ ಅರವಿಂದ ಲಿಂಬಾವಳಿ ಹಾಜರಿದ್ದರು.
[11/11, 11:01 AM] Cm Ps: ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬೆಂಗಳೂರಿಗೆ ಆಗಮಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸಂತಶ್ರೇಷ್ಠ ಕನಕದಾಸ ಜಯಂತಿ ಹಿನ್ನೆಲೆಯಲ್ಲಿ ಶಾಸಕರ ಭವನ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ್ ಸಭಾಪತಿ ರಘುನಾಥರಾವ್ ಮಲ್ಕಾಪೂರೆ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
[11/11, 11:29 AM] Cm Ps: *ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್  ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ*

ಬೆಂಗಳೂರು ನವೆಂಬರ್ 11 :
ರಾಜ್ಯದ ಬಹುನಿರೀಕ್ಷಿತ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ್  ವಿಶೇಷ ರೈಲಿಗೆ ಹಸಿರು ನಿಶಾನೆ ತೋರುವುದರ ಮೂಲಕ  ಪ್ರಧಾನಿ ನರೇಂದ್ರ ಮೋದಿ ಇಂದು ನಗರದ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದಲ್ಲಿ ಚಾಲನೆ ನೀಡಿದರು.
ಎಂಟು ದಿನಗಳ ಕಾಶಿ ದರ್ಶನದ ಈ ರೈಲು ವಾರಣಾಸಿ, ಪ್ರಯಾಗ್ ರಾಜ್, ಅಯೋಧ್ಯಾ ಮುಂತಾದ ಪವಿತ್ರ ಸ್ಥಳಗಳಿಗೆ ಯಾತ್ರಿಕರನ್ನು ಕರೆದೊಯ್ಯುತ್ತದೆ. ಮುಜರಾಯಿ ಇಲಾಖೆ ಭಾರತ ಸರ್ಕಾರದ ಸಹಯೋಗದಲ್ಲಿ ಈ ಕಾಶಿ ದರ್ಶನ ಯಾತ್ರೆ ಆಯೋಜಿಸಲಾಗಿದೆ. ಈ ಯಾತ್ರೆಗೆ ಒಟ್ಟು ವೆಚ್ಚ 20,000 ರೂ ಇದ್ದು, ಇದರಲ್ಲಿ ಸರ್ಕಾರ 5000ರೂ ಸಹಾಯಧನ ನೀಡುತ್ತಿದೆ. ಪ್ರವಾಸದಲ್ಲಿ ಆಹಾರ, ವಸತಿ ಹಾಗೂ ಇನ್ನಿತರ ಸೌಕರ್ಯಗಳನ್ನು ಯಾತ್ರಿಕರಿಗೆ ಕಲ್ಪಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಕಾನೂನು‌ ಮತ್ತು ಸಂಸದೀಯ, ಗಣಿ ಮತ್ತು ಕಲ್ಲಿದ್ದಿಲು ಸಚಿವ ಪ್ರಹ್ಲಾದ್ ಜೋಷಿ,  ರಾಜ್ಯದ ಮುಜರಾಯಿ, ಹಜ್  ಮತ್ತು ವಕ್ಫ ಸಚಿವೆ ಶಶಿಕಲಾ ಜೊಲ್ಲೆ, ಸಂಸದರಾದ ಪಿ‌.ಸಿ.ಮೋಹನ್, ತೇಜಸ್ವಿ ಸೂರ್ಯ ಹಾಗೂ ಇತರ ಗಣ್ಯರು ಹಾಜರಿದ್ದರು
[11/11, 1:43 PM] Cm Ps: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಉದ್ಘಾಟಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಸಚಿವರಾದ ಆರ್. ಅಶೋಕ, ಡಾ.ಸಿ ಎನ್. ಅಶ್ವತ್ಥ ನಾರಾಯಣ, ಡಾ.ಕೆ. ಸುಧಾಕರ್, , ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು.
[11/11, 1:56 PM] Cm Ps: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿನಲ್ಲಿ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಹಸಿರು ನಿಶಾನೆ ತೋರಿದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ,  ರೈಲ್ವೆ ಸಚಿವ ಅಶ್ವಿನಿ ವೈಷ್ಣವ್, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಷಿ, ರಾಜ್ಯದ ಧಾರ್ಮಿಕ ದತ್ತಿ ಖಾತೆ ಸಚಿವೆ ಶಶಿಕಲಾ ಅಣ್ಣಾಸಾಹೇಬ ಜೊಲ್ಲೆ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
[11/11, 2:09 PM] Cm Ps: *ನಾಡಪ್ರಭು ಕೆಂಪೇಗೌಡರ ವಿಚಾರಧಾರೆಗಳ ಹಾದಿಯಲ್ಲಿ ನಡೆಯುವ ಸಂಕಲ್ಪ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*

ಬೆಂಗಳೂರು, ನವೆಂಬರ್ 11 : 

 ಕೆಂಪೇಗೌಡರ ಚಿಂತನೆ ಹಾಗೂ ವಿಚಾರಧಾರೆಗಳ ಹಾದಿಯಲ್ಲಿ ನಡೆದು  ಕರ್ನಾಟಕವನ್ನು  ಅಭಿವೃದ್ಧಿಗೊಳಿಸುವ ಸಂಕಲ್ಪವನ್ನು ಮಾಡಲಾಗಿದೆ ಎಂದು  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

 ಅವರು ಇಂದು ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಪ್ರಗತಿ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರೊಂದಿಗೆ ಭಾಗವಹಿಸಿ ಮಾತನಾಡಿದರು.

ಪ್ರಧಾನಮಂತ್ರಿಗಳು ರಾಜ್ಯಕ್ಕೆ ಎರಡು ಕೊಡುಗೆಗಳನ್ನು ಕೊಟ್ಟಿದ್ದಾರೆ. ವಂದೇಭಾರತ ರೈಲು ಮತ್ತು ವಿಮಾಣನಿಲ್ದಾಣದ 2ನೇ ಟರ್ಮಿನಲ್, ಸಬ್ಅರ್ಬನ್ ರೈಲು.  ಕರಾವಳಿಯಲ್ಲಿ ಬಂದರು ನಿರ್ಮಾಣ ಸೇರಿದಂತೆ ಕರ್ನಾಟಕದ ಅಭಿವೃದ್ಧಿಗೆ ದೊಡ್ಡ ಕೊಡುಗೆಯನ್ನು ನೀಡುತ್ತಿರುವ ಪ್ರಧಾನಮಂತ್ರಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ. ಕೆಂಪೇಗೌಡರ ವಿಚಾರಧಾರೆಯ ಹಾದಿಯಲ್ಲಿ ನಡೆಯುವ ಸಂಕಲ್ಪ ಮಾಡಲಾಗಿದೆ ಎಂದರು.

*ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿರುವ ದಿನ :*
ಇಂದು ಕರ್ನಾಟಕದ ಅಭಿವೃದ್ಧಿ ಪಥದಲ್ಲಿ ಸುವರ್ಣಾಕ್ಷರದಲ್ಲಿ ಬರೆದಿರುವ ದಿನವಾಗಿದೆ.  ನಾಡಿಗೆ ಶ್ರೇಷ್ಟ ಸಂತರಾದ ಕನಕದಾಸರ ಜಯಂತಿ , ಮಹರ್ಷಿ ವಾಲ್ಮೀಕಿಯವರಿಗೆ ಹಾಗೂ  ನಾಡಿನ ಸಂರಕ್ಷಣೆಗೆ ಜೀವತೆತ್ತ  ವೀರ ವನಿತೆ ಒನಕೆ ಓಬವ್ವ ಪುಷ್ಪಾರ್ಚನೆ ಮಾಡುವ ಮೂಲಕ ನಾಡಿನ ಜನರ ಭಾವನೆಗಳಿಗೆ ಗೌರವ ಸಲ್ಲಿಸಿದ್ದಾರೆ. ಬೆಂಗಳೂರು, ಮೈಸೂರು ಚೆನ್ನೈಯನ್ನು ಸಂಪರ್ಕಿಸುವ ವಂದೇ ಭಾರತ ರೈಲಿಗೆ  ಹಸಿರು ನಿಶಾನೆ ತೋರಿಸಲಾಗಿದೆ. ಬೆಂಗಳೂರು ಅಂತರರಾಷ್ಟ್ರೀಯ ವಿಮಾಣ ನಿಲ್ದಾಣದ ಟರ್ಮಿನಲ್ 2 ಕ್ಕೆ ಚಾಲನೆ ನೀಡಲಾಗಿದ್ದು, ಇದು ದೇಶದ ಎರಡನೇ ಅತಿ ದೊಡ್ಡ ವಿಮಾನ ನಿಲ್ದಾಣವಾಗಿದೆ. ಇದಕ್ಕಾಗಿ ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ  ಪ್ರಧಾನಿ ಮಮತ್ರಿ ನರೇಂದ್ರ ಮೋದಿಯವರಿಗೆ ವಂದನೆಗಳನ್ನು ಸಲ್ಲಿಸುತ್ತೇನೆ ಎಂದರು.

*ಬೆಂಗಳೂರು ಇಂದು ಅಂತರರಾಷ್ಟ್ರೀಯ ನಗರವಾಗಿ ಬೆಳೆದಿದೆ :*

ನಾಡಪ್ರಭು ಕೆಂಪೇಗೌಡರು, ವಿಜಯನಗರ ಸಾಮ್ರಾಜ್ಯದ ಸುವರ್ಣ ಯುಗದ ದರ್ಶನವನ್ನು ಬೆಂಗಳೂರಿನ ಸುತ್ತಮುತ್ತಲಿನ ಗ್ರಾಮಗಳಿಗೆ ಮಾಡಿಸಿದ್ದಾರೆ. ಕೆಂಪೇಗೌಡರ ದೂರದೃಷ್ಟಿಯಿಂದ ಬೆಂಗಳೂರು ಇಂದು ಅಂತರರಾಷ್ಟ್ರೀಯ ನಗರವಾಗಿ ಬೆಳೆದಿದೆ. ಯೋಜನಾಬದ್ಧ ನಗರ ನಿರ್ಮಿಸಿ,  ಹಲವು ಕೆರೆಕಟ್ಟೆಗಳು, ಪೇಟೆಗಳನ್ನು ನಿರ್ಮಿಸುವ ಮೂಲಕ ಜನ ನೆಮ್ಮದಿಯ ಜೀವನ ಬದುಕುವಂತೆ ಮಾಡಿದ್ದಾರೆ. ನಾಡಪ್ರಭು. ಕೆಂಪೇಗೌಡರಿಗೆ ಗೌರವ ಸಲ್ಲಿಸುವ ಮುಖಾಂತರ ನಾಡಿನ ಸಂಸ್ಕೃತಿ, ಇತಿಹಾಸ ಪರಂಪರೆ, ಪ್ರಗತಿಪರ ಚಿಂತನೆಗೆ ಗೌರವ ಸಲ್ಲಿಸಿದಂತಾಗಿದೆ. ಗುಜರಾತಿನಲ್ಲಿ  ಏಕತೆಯ ಪ್ರತಿಮೆಯಿದ್ದರೆ, ರಾಜ್ಯದ ಸರದಾರ ಕೆಂಪೇಗೌಡರ ಪ್ರಗತಿಯ ಪ್ರತಿಮೆಯನ್ನು ಉದ್ಘಾಟಿಸಲಾಗಿದೆ ಎಂದರು.

*ಪ್ರಧಾನಿ ಮೋದಿ ಆಧುನಿಕ ಭಾರತದ ವಿಕಾಸ ಪುರುಷ :*
ನಮ್ಮ ಪ್ರಧಾನಿ ನರೇಂದ್ರ ಮೋದಿಯವರು ಆಧುನಿಕ ಭಾರತದ ವಿಕಾಸ ಪುರುಷರು. ದೇಶದ ಹತ್ತುಹಲವಾರು ಸವಾಲುಗಳನ್ನು ಬಗೆಹರಿಸಿ ಬಲಿಷ್ಟ ಭಾರತವನ್ನು ಕಟ್ಟಿ, ಆತ್ಮನಿರ್ಭರ  ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ಅಭಿವೃದ್ಧಿಯಲ್ಲಿ ಎಲ್ಲರಿಗೂ ಅವಕಾಶ ಕೊಟ್ಟು, ಅಂತರರಾಷವಟ್ರೀಯ ಮಟ್ಟದಲ್ಲಿ ಭಾರತವನ್ನು ಬಹಳ ಎತ್ತರಕ್ಕೆ ಕೊಂಡೊಯ್ದಿದ್ದದಾರೆ.  ಇಡೀ ವಿಶ್ವದಲ್ಲಿ ಆರ್ಥಿಕ ಹಿಂಜರಿತವಿದ್ದ ಸಂದರ್ಭದಲ್ಲಿ  ಭಾರತ ಆರ್ಥಿಕವಾಗಿ ಬಲಿಷ್ಟಗೊಳ್ಳುತ್ತಿದ್ದರೆ, ಅದಕ್ಕೆ ಪ್ರಧಾನಿ ಮೋದಿಯವರ ಯೋಜನೆಗಳೇ ಕಾರಣ.ಒಬ್ಬ ವಿಕಾಸಪುರುಷ ದಾರಿಯಲ್ಲಿ ನವಭಾರತ ನಿರ್ಮಾಣ ಮಾಡುತ್ತಿರುವವರ ಕೈಯಿಂದ ಕೇಂಪೇಗೌಡರ ಮೂರ್ತಿ ಅನಾವರಣ ಮಾಡಿರುವುದು ದೈವೇಚ್ಛೆಯಾಗಿದೆ ಎಂದರು.

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ, ಸಚಿವರಾದ ಆರ್. ಅಶೋಕ, ಡಾ.ಸಿ ಎನ್. ಅಶ್ವತ್ಥ ನಾರಾಯಣ, ಡಾ.ಕೆ. ಸುಧಾಕರ್, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉಪಸ್ಥಿತರಿದ್ದರು.

Post a Comment

Previous Post Next Post