ಡಿಸೆಂಬರ್ 28, 2022 | , | 8:17PM |
ಜಮ್ಮುವಿನಲ್ಲಿ ಎನ್‌ಕೌಂಟರ್‌ನಲ್ಲಿ ನಾಲ್ವರು ಉಗ್ರರ ಹತ್ಯೆ; ವೈಷ್ಣೋದೇವಿ ದೇಗುಲ, ಇತರೆ ಧಾರ್ಮಿಕ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ

ಸಿದ್ರಾದಲ್ಲಿ ಇಂದಿನ ಎನ್‌ಕೌಂಟರ್ ನಂತರ, ಜಮ್ಮು ವಿಭಾಗದ ಶ್ರೀ ಮಾತಾ ವೈಷ್ಣೋದೇವಿ ದೇಗುಲ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಎಐಆರ್ ನ್ಯೂಸ್ ಜೊತೆ ಮಾತನಾಡಿದ ಹೆಚ್ಚುವರಿ ಎಸ್ಪಿ ಕತ್ರಾ, ಅಮಿತ್ ಭಾಸಿನ್, ಶ್ರೀ ಮಾತಾ ವೈಷ್ಣೋ ದೇವಿ ದೇಗುಲ ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ. ವೈಷ್ಣೋದೇವಿ ದೇಗುಲದ ಮೂಲ ಶಿಬಿರವಾದ ಕತ್ರಾದಲ್ಲಿ ಹೆಚ್ಚುವರಿ ನಿಯೋಜನೆ ಮಾಡಲಾಗಿದ್ದು, ಕತ್ರಾಕ್ಕೆ ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ವಾಹನಗಳನ್ನು ಸಂಪೂರ್ಣ ತಪಾಸಣೆಗೆ ಒಳಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದರು.
Post a Comment