[27/12, 7:49 PM] Cm Ps: *ಗಡಿ ವಿವಾದ: ಮಹಾರಾಷ್ಟ್ರ ನಿರ್ಣಯಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ ಖಂಡನೆ*
ಬೆಳಗಾವಿ , ಡಿಸೆಂಬರ್ 27:ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರ ವಿಧಾನಸಭೆಯಲ್ಲಿ ಮಂಡಿಸಿರುವ ನಿರ್ಣಯವನ್ನು ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸುವರ್ಣಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಪುನರ್ ರಚನಾ ಕಾಯ್ದೆ 1956 ರಲ್ಲಿ ರೂಪಿಸಿ ಇಷ್ಟು ವರ್ಷಗಳಾಗಿವೆ. ಎರಡೂ ಕಡೆ ಜನ ನೆಮ್ಮದಿಯಿಂದಿದ್ದಾರೆ. ಅವರ ರಾಜಕಾರಣಕ್ಕಾಗಿ ಈ ರೀತಿ ಯ ಹೇಳಿಕೆಗಳನ್ನು ಹಾಗೂ ನಿರ್ಣಯಗಳನ್ನು ನೀಡುತ್ತಿದ್ದಾರೆ. ನಮ್ಮ ನಿಲುವಿನಲ್ಲಿ ಸ್ಪಷ್ಟತೆ ಇದೆ. ಕರ್ನಾಟಕದ ಒಂದಿಂಚೂ ಜಾಗವನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ಗಡಿಯಿಂದಾಚೆಯಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಬದ್ಧವಾಗಿದೆ ಎಂದರು.
*ವ್ಯತಿರಿಕ್ತ ನಿರ್ಣಯ*
ಸುಪ್ರೀಂ ಕೋರ್ಟಿನಲ್ಲಿ ವಿಚಾರ
ವಿದೆ. ನಾವು ನಮ್ಮ ಭೂಮಿಯನ್ನು ಬಿಟ್ಟು ಕೊಡುವುದಿಲ್ಲ ಎಂದರೆ ಅವರು ನಮ್ಮ ಜಾಗವನ್ನು ಪರೆಯುವುದಾಗಿ ನಿರ್ಣಯ ಮಂಡಿಸಿದ್ದಾರೆ. ಇದು ನಮಗೂ ಅವರಿಗಿರುವ ವ್ಯತ್ಯಾಸ. ಪ್ರಕರಣ ಸರ್ವೋಚ್ಚ ನ್ಯಾಯಾಲಯದ ಲ್ಲಿರುವ ಸಂದರ್ಭದಲ್ಲಿ ಇದಕ್ಕೆ ಬೆಲೆ ಇಲ್ಲ. ರಾಜ್ಯಕ್ಕೆ ಸರ್ವೋಚ್ಚ ನ್ಯಾಯಾಲಯದಲ್ಲಿ ನ್ಯಾಯ ದೊರೆಯುವ ವಿಶ್ವಾಸವಿದೆ. ನಮ್ಮ ನಿಲುವು ಸಂವಿಧಾನಬದ್ದ ಹಾಗೂ ನ್ಯಾಯಸಮ್ಮತವಾಗಿದೆ. ಕಾನೂನಿನ ವ್ಯಾಪ್ತಿಯಲ್ಲಿ ನಮ್ಮ ನಿರ್ಣಯವೂ ಇದೆ. ವ್ಯತಿರಿಕ್ತವಾದ ಮಹಾರಾಷ್ಟ್ರದ ನಿರ್ಣಯ ಜವಾಬ್ದಾರಿಯುತವಲ್ಲ. ಇಡೀ ದೇಶ ಇದನ್ನು ನೋಡುತ್ತಿದ್ದು, ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂತಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದರು.
[27/12, 8:31 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ವಾಯವ್ಯ ರಸ್ತೆ ಸಾರಿಗೆ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣವನ್ನು ಉದ್ಘಾಟಿಸಿದರು.
ಸಚಿವರಾದ ಗೋವಿಂದ ಕಾರಜೋಳ,ಬಿ.ಎ. ಬಸವರಾಜ, ಶಾಸಕ ಅನಿಲ್ ಬೆನಕೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[27/12, 10:05 PM] Cm Ps: *ಸಾರಿಗೆ ಸೇವೆಯನ್ನು ಲಾಭದಾಯಕವಾಗಿಸಲು ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಳಗಾವಿ, ಡಿಸೆಂಬರ್ 27 :
ಸಾರಿಗೆ ಸೇವೆಯನ್ನು ಲಾಭದಾಯಕವಾಗಿ ಮಾಡಲು ಕ್ರಮ ವಹಿಸಲಾಗುವುದು. ಖಾಸಗಿ ಸಾರಿಗೆಗೆ ಪೈಪೋಟಿ ನೀಡುವಂತೆ ಸಾರಿಗೆ ಸಂಸ್ಥೆಗಳಲ್ಲಿ ಸುಧಾರಣೆ ತರಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಂದರು.
ಅವರು ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಬೆಳಗಾವಿ ವಿಭಾಗ ಬೆಳಗಾವಿ ಇವರ ವತಿಯಿಂದ *"ಕೇಂದ್ರ ಬಸ್ ನಿಲ್ದಾಣ ಆವರಣದಲ್ಲಿ ಆಯೋಜಿಸಿರುವ ಬೆಳಗಾವಿ ನೂತನ ಕೇಂದ್ರ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದರು.*
ಕೆ ಎಸ್ ಆರ್ ಟಿ ಸಿ ಸುಧಾರಣೆಗಾಗಿ ನಿವೃತ್ತ ಅಧಿಕಾರಿ ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ವರದಿ ಕೊಟ್ಡಿದೆ. ವರದಿಯ ಅನುಷ್ಠಾನದ ಜವಾಬ್ದಾರಿಯನ್ನು ಸಹ ಅವರಿಗೆ ನೀಡಲಾಗಿದೆ. ಸಾರಿಗೆ ಸೇವೆಯಲ್ಲಿನ ನ್ಯೂನ್ಯತೆಗಳನ್ನು ಸರಿಪಡಿಸಿ, ಅನಾವಶ್ಯಕ ವೆಚ್ಚಗಳಿಗೆ ಕಡಿವಾಣ ಹಾಕಲಾಗುವುದು. ರಾಜ್ಯದ ರಸ್ತೆ ಸಾರಿಗೆಯ ವಿವಿಧ ಸಂಸ್ಥೆ, ಬಿಎಂಟಿಸಿ ಸೇರಿದಂತೆ ಸರ್ಕಾರಿ ಸಾರಿಗೆ ಸೇವೆಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆಗಳನ್ನು ಕಾಣಲಿದೆ. ಶಾಲೆಗೆ ಹೋಗುವ ಮಕ್ಕಳಿಗೆ ಹೊಸ ಯೋಜನೆ ಘೊಷಣೆ ಮಾಡಲು ಚರ್ಚಿಸಲಾಗುವುದು. ವಾಯುವ್ಯ ಸಾರಿಗೆ ಬೆಳ್ಳಿ ಹಬ್ಬ ಆಚರಿಸಲಿದ್ದು, ಬರುವ ಬಜೆಟ್‌ನಲ್ಲಿ 500 ಬಸ್ ಖರೀದಿಗೆ ಹಾಗೂ 500 ಸಿಬ್ಬಂದಿ ನೇಮಕ ಮಾಡಲು ಅನುಮತಿ ನೀಡುವ ಬಗ್ಗೆ ಚರ್ಚಿಸಲಾಗುವುದು ಎಂದರು.
*2 ವರ್ಷದಲ್ಲಿ 2000 ಕೋಟಿ ರೂ. ಆರ್ಥಿಕ ನೆರವು :*
ಕರ್ನಾಟಕ ಸಾರಿಗೆ ಸೇವೆ ಒಳ್ಳೆಯ ಸೇವೆ ಕೊಡುತ್ತಾ ಬಂದಿದೆ. ಕೋವಿಡ್ ಸಂದರ್ಭದಲ್ಲಿ ಸಂಸ್ಥೆಗೆ ಆರ್ಥಿಕ ನಷ್ಟವುಂಟಾಗಿದೆ. ಸರ್ಕಾರ 2 ವರ್ಷದಲ್ಲಿ ಸಾರಿಗೆ ಸಂಸ್ಥೆಗೆ 2000 ಕೋಟಿಯ ಆರ್ಥಿಕ ನೆರವು ನೀಡಿದೆ. ಸಾರಿಗೆಯ ವಿವಿಧ ಸಂಸ್ಥೆಗಳಿಗೆ ಬಸ್ ಖರೀದಿಗೆ ಅನುದಾನ ಮತ್ತು ಸಾಲ ಪಡೆಯಲು ಅನುಮತಿ ನೀಡಲಾಗಿದೆ. ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳು ಗ್ರಾಮೀಣ ಪ್ರದೇಶದ ಜನರಿಗೆ , ಬಡ ಮಕ್ಕಳಿಗೆ ಸೇವೆ ಸಲ್ಲಿಸುತ್ತಿದೆ. ಕಾಲಕಾಲಕ್ಕೆ ಸರ್ಕಾರ ಈ ಸಂಸ್ಥೆಗಳಿಗೆ ಸಹಾಯ ಒದಗಿಸುತ್ತಿದೆ ಎಂದರು.
*ನವೀಕೃತ ಬಸ್ ನಿಲ್ದಾಣಕ್ಕೆ 30 ಕೋಟಿ ವೆಚ್ಚ :*
ಬೆಳಗಾವಿ ಬಸ್ ನಿಲ್ದಾಣ ಉತ್ತಮ ರೀತಿಯಲ್ಲಿ ನಿರ್ವಹಿಸಬೇಕು.
ಪ್ರಧಾನಿ ನರೇಂದ್ರ ಮೋದಿಯವರ ಕಾಲದಲ್ಲಿ ಅತ್ಯಂತ ಸುಧಾರಣೆಯಾಗುತ್ತಿದೆ. ಬೆಳಗಾವಿ ಬಸ್ ನಿಲ್ದಾಣ ಎಲ್ಲ ಕಡೆ ಸಂಪರ್ಕ ಕಲ್ಪಿಸುವ ಕೇಂದ್ರ. ಬೆಳಗಾವಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ವಾಣಿಜ್ಯ ನಗರ. ಸುತ್ತಲಿನ ನಗರಗಳು ಇದಕ್ಕೆ ಸಂಪರ್ಕ ಕಲ್ಪಿಸಲಾಗಿದೆ.ನವೀಕೃತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದ್ದು,ಸುಮಾರು 30 ಕೊಟಿ ರೂ. ವೆಚ್ಚದಲ್ಲಿ ನಿರ್ಮಿಸಲಾಗಿದೆ. ಈ ಬಸ್ ನಿಲ್ದಾಣದಿಂದ ಪ್ರಯಾಣಕರಿಗೆ ಅನುಕೂಲವಾಗಬೇಕು.ಇದರ ಸೇವೆ ಸದುಪಯೋಗವಾಗಲಿ ಎಂದರು.
ಬೆಂಗಳೂರಿನ ರೈಲು ನಿಲ್ದಾಣಗಳ ಅಭಿವೃದ್ಧಿ ಮಾಡಲಾಗುತ್ತಿದೆ. ಬೈಯಪ್ಪನಹಳ್ಳಿ ರೈಲು ನಿಲ್ದಾಣ ಅತಿ ದೊಡ್ಡ ರೈಲು ನಿಲ್ದಾಣವಾಗಿದೆ. ವಂದೇ ಭಾರತ ಎಂಬ ಹೈಸ್ಪೀಡ್ ರೈಲನ್ನು ಪ್ರಾರಂಭಿಸಲಾಗಿದ್ದು,ಬೆಂಗಳೂರಿನಿಂದ ಹುಬ್ಬಳ್ಳಿ ಬೆಳಗಾವಿಗೆ ಮಾರ್ಗವನ್ನು ವಿಸ್ತರಿಸುವ ಯೋಜನೆ ಇದೆ ಎಂದರು.
ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ನಗರಾಭಿವೃ ದ್ಧಿ ಸಚಿವ ಭೈರತಿ ಬಸವರಾಜ, ಸಂಸದರಾದ ಮಂಗಳಾ ಅಂಗಡಿ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
[27/12, 10:21 PM] Cm Ps: *ರಾಜಕೀಯಕ್ಕಾಗಿ ಗಡಿಯಾಚೆ ಸಮಸ್ಯೆ ಸೃಷ್ಟಿ*- *ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
*ಶೀಘ್ರವೇ ವಿಶ್ವ ಕನ್ನಡ ಸಮ್ಮೇಳನ :ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಳಗಾವಿ, ಡಿಸೆಂಬರ್ 27:
ರಾಜಕೀಯ ಕಾರಣಕ್ಕಾಗಿ ಮಹಾರಾಷ್ಟ್ರದಲ್ಲಿ ಗಡಿ ಸಮಸ್ಯೆ ಸೃಷ್ಟಿ ಮಾಡಲಾಗುತ್ತಿದೆ. ಕರ್ನಾಟಕ ಎಂದೂ ಗಡಿ ಸಮಸ್ಯೆ ಸೃಷ್ಟಿಸಿಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗಾವಿ ಕನ್ನಡ ಭವನ ಕ್ಷೇಮಾಭಿವೃದ್ಧಿ ಸಂಘದ ಕನ್ನಡ ಭವನ ರಂಗಮಂದಿರವನ್ನು ಉದ್ಘಾಟಿಸಿ ಮಾತನಾಡಿದರು.
ಕನ್ನಡದಲ್ಲಿ ಪ್ರಾಮಾಣಿಕತೆ, ಒಳ್ಳೆಯತನ ಇದೆ. , ಕನ್ನಡದ ಸಾಕ್ಷಿ ಪ್ರಜ್ಞೆ ಮಾನವೀಯತೆಯಿಂದ ಕೂಡಿರುವಂಥದ್ದು. ಕನ್ನಡದ ಪುರಂದರದಾಸರು, ಅಲ್ಲಮಪ್ರಭು, ಬಸವಣ್ಣ, ಅವರಿಂದ ಹರಿದುಬರುವ ಜ್ಞಾನದ ಭಂಡಾರ ಕನ್ನಡಿಗರನ್ನು ಬೆಳೆದಿದೆ. ಹಿಂದಿನವರು ಇದನ್ನು ನಮಗೆ ಕೊಟ್ಟಿದ್ದಾರೆ. ನಮ್ಮ ಕರ್ತವ್ಯ ಇದನ್ನು ಇನ್ನಷ್ಟು ಉತ್ಕೃಷ್ಟಗೊಳಿಸಿ ಬಿಟ್ಟುಕೊಡಬೇಕು. ಅದ್ಭುತ ರಂಗಮಂದಿರವನ್ನು ನಿರ್ಮಿಸಲಾಗಿದೆ.
*ಗಡಿ ಭಾಗದ ಅಭಿವೃದ್ಧಿ*
ಗಡಿ ಭಾಗದ ಶಾಲೆಗಳ ಅಭಿವೃದ್ಧಿ ಬಗ್ಗೆ ಎಲ್ಲ ವ್ಯವಸ್ಥೆ ಕಲ್ಪಿಸಲಾಗುವುದು. ಗಡಿಯಾಚೆಗಿನ ಕನ್ನಡ ಶಾಲೆಗಳ ಬಗ್ಗೆಯೂ ಸಂಪೂರ್ಣ ಕಾಳಜಿ ವಹಿಸಲಾಗುವುದು. ಈಗಾಗಲೇ 100 ಕೋಟಿ ರೂ.ಗಳನ್ನು ಗಡಿ ಭಾಗದ ಅಭಿವೃದ್ಧಿಗೆ ನೀಡಲಾಗಿದೆ. ಕೆಲವೇ ದಿನಗಲ್ಲಿ ಗಡಿ ಭಾಗದಲ್ಲಿ ಏನಾಗಬೇಕೆಂದು ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರು, ಸೂಚಿಸಿದರೆ ಅದನ್ನು ಅನುಷ್ಠಾನಕ್ಕೆ ತರಲಾಗುವುದು ಎಂದರು.
*ಸ್ವರ್ಗದ ದರ್ಶನ*
ಗಡಿಯಾಚೆ ಇತ್ಯರ್ಥವಾದ ವಿಚಾರದಲ್ಲಿ ಸಮಸ್ಯೆ ಉಂಟಾಗಿದೆ. ರಾಜಕೀಯವಾಗಿ ಗಡಿಯಾಚೆ ಸಮಸ್ಯೆ ಪ್ರಾರಂಭಿಸಿದ್ದಾರೆ. ಕರ್ನಾಟಕದಲ್ಲಿ ಯಾವತ್ತೂ ಹಾಗೆ ಮಾಡಿಲ್ಲ. ಕನ್ನಡಕ್ಕೆ ಗಟ್ಟಿಯಾಗಿ ಎದ್ದು ನಿಲುವುದು ಕನ್ನಡಿಗರಿಗೆ ರಕ್ಷಣೆ ಸದಾ ಕಾಲ ಮಾಡಿಕೊಂಡು ಬಂದಿದ್ದೇವೆ. ಯಾರೂ ಅರ್ಜಿ ಕೊಟ್ಟು ಹುಟ್ಟಲು ಸಾಧ್ಯವಿಲ್ಲ. ಕನ್ನಡ ನಾಡಿನಲ್ಲಿ ಹುಟ್ಟಿದವರು ಕನ್ನಡಿಗರೇ. ಇವು ಕಟು ಸತ್ಯ. ಸತ್ಯದ ಮಾರ್ಗ ಅನುಸರಿಸಿದಾಗ ಸ್ವರ್ಗದ ದರ್ಶನವಾಗುತ್ತದೆ. ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಎನ್ನುವುದನ್ನು ಅಕ್ಷರಶಃ ಪಾಲನೆ ಮಾಡಬೇಕು ಎಂದರು.
*ಕನ್ನಡಕ್ಕೆ ಅಂತರ್ಗತ ಶಕ್ತಿ*
ಕನ್ನಡ ದಿನನಿತ್ಯ ಬಳಕೆ ಮಾಡಿದರೆ ಉಳಿಯುತ್ತದೆ. ಕನ್ನಡಕ್ಕೆ ಅಂತರ್ಗತ ಶಕ್ತಿ ಇದೆ. ಕನ್ನಡವನ್ನು ಅಳಿ ಸಲು ಈ ಭೂಮಿಯ ಮೇಲಿನ ಯಾವುದೇ ಶಕ್ತಿಗೂ ಇಲ್ಲ. ಶಕ್ತಿ ಶಾಲಿ ಭಾಷೆ. ಹಿನ್ನಡೆಯಾದರೆ ಅದು ನಮ್ಮಿಂದಾಗಬೇಕು, ಕನ್ನಡ ಭಾಷೆಯ ಶಕ್ತಿ ಬಳಕೆ ಮಾಡಿದರೆ ಕನ್ನಡವೂ ಬೆಳೆದು ನಾವೂ ಬೆಳೆಯುತ್ತೇವೆ. ಕನ್ನಡ ಭಾಷೆ ಗೆ ಆತಂಕವಿಲ್ಲ. ಕನ್ನಡ ಶ್ರೀಮಂತ ಭಾಷೆಯಾಗಿದ್ದು ಬಳಸಿದಷ್ಟೂ ನಮ್ಮನ್ನು ಶಕ್ತಿ ಶಾಲಿಯಾಗಿಸುತ್ತದೆ. ಸಕಾರಾತ್ಮಕ ವಾಗಿ ಮುಂದುವರೆದಾಗ ನಮಗೆ, ಕನ್ನಡಕ್ಕೆ ಉತ್ತಮ ಭವಿಷ್ಯವಿದೆ. ಸಾಧನೆ ಕನ್ನಡದಿಂದ ಇದೆ ಎಂದು ಮರೆಯಬೇಡಿ ಎಂದರು.
ಈ ಹಿಂದೆ ಬೆಳಗಾವಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಹಾಗೂ ವಿಶ್ವ ಕನ್ನಡ ಸಾಹಿತ್ಯ ಸಮ್ಮೇಳನ ಅತ್ಯಂತ ಯಶಸ್ವಿಯಾಗಿ ನಡೆಸಲಾಗಿದೆ. ಶೀಘ್ರದಲ್ಲಿ ವಿಶ್ವ ಕನ್ನಡ ಸಮ್ಮೇಳನ ಆಯೋಜಿಸಲಾಗುವುದು. ರಂಗಮಂದಿರದ ಬಾಕಿಯಿರುವ ಕೆಲಸಗಳಿಗೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಎಂದರು.
*ಸಂಸ್ಕೃತಿ ಮತ್ತು ಭಾಷೆಗೆ ನಿಕಟ ಸಂಬಂಧವಿದೆ :*
ಬೆಳಗಾವಿಯಲ್ಲಿ ಇಷ್ಟು ಸುಸಜ್ಜಿತ ಕನ್ನಡ ಭವನ ನಿರ್ಮಾಣ ಮಾಡಿರುವುದು ಈ ಭಾಗದಲ್ಲಿ ಕನ್ನಡಕ್ಕೆ ಮತ್ತಷ್ಟು ಮಹತ್ವ ಬಂದಂತಾಗಿದೆ. ಸಂಸ್ಕೃತಿ ಮತ್ತು ಭಾಷೆಗೆ ಬಹಳ ನಿಕಟ ಸಂಬಂಧ ಇದೆ. ನಾವು ಕನ್ನಡಿಗರು ಅತಿಥಿಗಳನ್ನು ಸ್ವಾಗತಿಸುವ, ಉಪಚರಿಸುವ ರೀತಿ ಎಲ್ಲವೂ ನಮ್ಮ ಸಂಸ್ಕೃತಿಯನ್ನು ಬಿಂಬಿಸುತ್ತದೆ.ಭಗವಂತ ಮನುಷ್ಯನಿಗೆ ಬುದ್ದಿ ಕೊಟ್ಟಿದ್ದಾನೆ. ಬಾಷೆ ಇಡೀ ಮನುಕುಲದಲ್ಲಿ ಮಹತ್ವದ ಪಾತ್ರ ವಹಿಸಿದೆ. ಮನುಷ್ಯನಿಗೆ ಅಭಿವ್ಯಕ್ತಪಡಿಸಲು ಭಾಷೆ ಮುಖ್ಯವಾಗಿದೆ. ಮನಸ್ಸುಗಳನ್ನು ಒಗ್ಗೂಡಿಸುವ , ತತ್ವಾದರ್ಶಗಳನ್ನು, ದೇಶಭಕ್ತಿಯನ್ನು ಜೋಡಿಸಲು ಭಾಷೆ ಮುಖ್ಯವಾಗುತ್ತದೆ ಎಂದರು.
*ಕನ್ನಡ ಶ್ರೀಮಂತ ಭಾಷೆ :*
ರಾಷ್ಟ್ರಕವಿ ಕುವೆಂಪು ಬರೆದ ನಾಡಗೀತೆ ಕೇಳಿದರೆ ಸಾಕಷ್ಟು ಅರ್ಥಗರ್ಭಿತವಾಗಿದೆ. ಕನ್ನಡ ಶ್ರೀಮಂತವಾದ ಭಾಷೆಯಾಗಿಸಲು ಸಾಹಿತಿಗಳು ಮಹತ್ತರ ಕೊಡುಗೆ ನೀಡಿದ್ದಾರೆ. ಕನ್ನಡ ಅತ್ಯಂತ ಪ್ರಾಚೀನ ಭಾಷೆ ಕನ್ನಡ. ಅತಿಹೆಚ್ಚು ಜ್ಞಾನಪೀಠ ಪ್ರಶಸ್ತಿಗಳು ಕನ್ಬಡಕ್ಕೆ ಬಂದಿವೆ. ಹಳೆಕನ್ನಡ,ನುಡಿಗನ್ನಡ, ಜಾನಪದ ಕನ್ನಡವಿರುವಂತೆ ಕನ್ನಡ ಸಾಹಿತ್ಯದಲ್ಲಿಯೂ ಅನೇಕ ವಿಧಗಳಿವೆ. ವಚನ ಸಾಹಿತ್ಯ ತತ್ವ, ತಾತ್ವಿಕತೆಯನ್ನು ನೀಡಿದೆ. ವಚನ ಸಾಹಿತ್ಯ, ದಾಸ ಸಾಹಿತ್ಯ ಕನ್ನಡ ಭಾಷೆಯನ್ನು ಶ್ರೀಮಂತಗೊಳಿಸಿದೆ. ಈ ಸಾಹಿತ್ಯಗಳನ್ನು ಇಡೀ ದೇಶದ ಜನರಿಗೆ ತಿಳಿಸಬೇಕಿದೆ. ಸಂಕುಚಿತ ಮನೋಭಾವದಿಂದ ಹೊರ ಬರಬೇಕು. ಸ್ವಾತಂತ್ರ್ಯ ಬಂದಾಗ ಇಂಗ್ಲಿಷ್ ವ್ಯಾಮೋಹ ಹೆಚ್ಚಾಗಿತ್ತು ಆದರೆ ಬೇರೆ ಭಾಷೆ ಕಲಿಯಬೇಕು. ಆದರೆ, ನಮ್ಮತನ ಬಿಟ್ಡು ಕೊಡಬಾರದು. ಕನ್ನಡ ನಮ್ಮ ಅಸ್ಮಿತೆ. ಕನ್ನಡ ಭಾಷೆಯಿಂದ ನಾವು ಗುರುತಿಸಲ್ಪಡುತ್ತೇವೆ ಎಂದರು.
ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿ, ಸಚಿವ ಗೋವಿಂದ ಕಾರಜೋಳ, ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಶಿ, ಹಿರಿಯ ಕಲಾವಿದೆ ಗಿರಿಜಾ ಲೋಕೇಶ್, ಸಂಸದೆ ಮಂಗಳಾ ಅಂಗಡಿ, ಮಾಜಿ ಸಂಸದರು ಹಾಗೂ ಕೆಎಲ್ ಇ ಸಂಸ್ಥೆ ಅಧ್ಯಕ್ಷ ಪ್ರಭಾಕರ ಕೋರೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[28/12, 11:30 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜಿಲ್ಲಾ ಬೆಳಗಾವಿ ನಗರ ಪೊಲೀಸ್ ಆಯುಕ್ತರ ನೂತನ ಕಚೇರಿ ಕಟ್ಟಡವನ್ನು ಉದ್ಘಾಟಿಸಿದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[28/12, 11:38 AM] Cm Ps: *ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳ ನಿರ್ಮಾಣ* *ಸಿಎಂ ಬೊಮ್ಮಾಯಿ*
ಬೆಳಗಾವಿ, ಡಿಸೆಂಬರ್ 28: ರಾಜ್ಯದಲ್ಲಿ ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗಾವಿ ಪೊಲೀಸ್ ಆಯುಕ್ತರ ನೂತನ ಕಚೇರಿ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
*ವಾಹನ ಖರೀದಿ*
ಪೊಲೀಸ್ ಗೃಹ ಮಂಡಳಿಯಿಂದ ರಾಜ್ಯಾದ್ಯಂತ ಒಳ್ಳೆಯ ಕೆಲಸ ಆಗುತ್ತಿದೆ.ರಾಜ್ಯದಲ್ಲಿ 2500 ಪೊಲೀಸ್ ಮನೆಗಳನ್ನು ನಿರ್ಮಾಣ ಮಾಡುತ್ತಿದ್ದು, ಈಗಾಗಲೇ 16 ಪೊಲೀಸ್ ಠಾಣೆ ನಿರ್ಮಾಣದ ಹಂತದಲ್ಲಿವೆ. ಒಂದೇ ವರ್ಷದಲ್ಲಿ ನೂರಕ್ಕೂ ಹೆಚ್ಚು ಪೊಲೀಸ್ ಠಾಣೆಗಳನ್ನು ನಿರ್ಮಾಣ ಮಾಡಲಾಗುತ್ತಿದೆ. ಸುಮಾರು 80 ಕೋಟಿ ರೂ.ಗಳ ವೆಚ್ಚದಲ್ಲಿ 300 ಜೀಪ್ ಹಾಗೂ ಸ್ಕಾರ್ಪಿಯೊ ಖರೀದಿ ಮಾಡಲಾಗುತ್ತಿದೆ.ಡಿವೈ ಎಸ್ಪಿಗಳಿಗೆ ಸ್ಕಾರ್ಪಿಯೊ ವಾಹನಗಳನ್ನು ನೀಡಲಾಗುತ್ತಿದೆ ಎಂದರು.
*ಜನರೊಂದಿಗೆ ನಿಕಟ ಸಂಪರ್ಕ*
ಗೃಹ ಇಲಾಖೆ ಅತ್ಯಂತ ದಕ್ಷತೆಯಿಂದ ಕೆಲಸ ಮಾಡುತ್ತಿದೆ. ಕರ್ನಾಟಕ ಪೊಲೀಸ್ ಪಡೆಗೆ ಅಭಿನಂದನೆ ಸಲ್ಲಿಸಿದ ಅವರು, ಗಡಿ ಭಾಗದಲ್ಲಿ ಕೇವಲ ಶಕ್ತಿ ಪ್ರದರ್ಶನ ಮಾಡುವುದಲ್ಲ. ಜನರ ಜೊತೆ ನಿರಂತರ ಸಂಪರ್ಕ ಇಟ್ಟುಕೊಂಡು ಅವರ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು. ಗಡಿ ಭಾಗದ ಸಮಸ್ಯೆ ಪರಿಹರಿಸಿದರೆ ಹೆಚ್ಚು ಅನುಕೂಲ . ಇತ್ತೀಚೆಗೆ ವಿದ್ವಂಸಕ ಕೃತ್ಯಗಳು ನಡೆಯುತ್ತಿವೆ ಅವುಗಳನ್ನು ಅತ್ಯಂತ ವೇಗವಾಗಿ ಪತ್ತೆ ಹಚ್ಚುವ ಕೆಲಸ ಆಗುತ್ತಿದೆ. ದಕ್ಷತೆಯಿಂದ ನಮ್ಮ ಪೊಲಿಸರು ಕೆಲಸ ಮಾಡುತ್ತಿದ್ದಾರೆ. ನಾನು ಗೃಹ ಸಚಿವನಾಗಿದ್ದಾಗ ಅಡಿಗಲ್ಲು ಹಾಕಿದ ಕಟ್ಟಡಗಳು ಈಗ ಉದ್ಘಾಟನೆಯಾಗುತ್ತಿವೆ .ಎಫ್ ಎಸ್ ಎಲ್ ರಿಪೋರ್ಟ್ 15 ದಿನದಲ್ಲಿ ಬಂದರೆ ಅಪರಾಧ ನಿಯಂತ್ರಣಕ್ಕೆ ಹೆಚ್ಚು ಅನುಕೂಲ ಆಗುತ್ತದೆ ಎಂದರು.
ಗೃಹ ಸಚಿವ ಆರಗ ಜ್ಞಾನೇಂದ್ರ, ಸಚಿವ ಗೋವಿಂದ ಕಾರಜೋಳ, ಸಂಸದೆ ಮಂಗಳಾ ಅಂಗಡಿ, ಶಾಸಕ ಅನಿಲ್ ಬೆನಕೆ, ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[28/12, 12:07 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಬೆಳಗಾವಿಯಲ್ಲಿ ಜಿಲ್ಲಾ ಪಂಚಾಯತಿ ನೂತನ ಕಟ್ಟಡ ಉದ್ಘಾಟನೆ ಮಾಡಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆರಗ ಜ್ಞಾನೇಂದ್ರ, ಶಾಸಕ ಅನಿಲ್ ಬೆಣಕೆ ಹಾಗೂ ಮತ್ತಿತರರು ಹಾಜರಿದ್ದರು.
[28/12, 12:08 PM] Cm Ps: ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಲಾಯಿತು. ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
[28/12, 1:13 PM] Cm Ps: 2022ರ ಅತ್ಯುತ್ತಮ ಶಾಸಕರಾಗಿ ಆರ್.ವಿ.ದೇಶಪಾಂಡೆ ಆಯ್ಕೆ
*ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿೃವೃದ್ಧಿಗೆ ಅಮೂಲ್ಯ ಕೊಡುಗೆ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಳಗಾವಿ, ಡಿಸೆಂಬರ್ 28 :
ಕೈಗಾರಿಕಾ ಸಚಿವರಾಗಿ ಸುದೀರ್ಘ 10 ವರ್ಷ ಸೇವೆ ಸಲ್ಲಿಸಿದ ಕೀರ್ತಿ ಶ್ರೀ ಆರ್.ವಿ.ದೇಶಪಾಂಡೆಯವರಿಗೆ ಸಲ್ಲುತ್ತಿದ್ದು, ರಾಜ್ಯದಲ್ಲಿ ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗಾವಿ ವಿಧಾನಮಂಡಲ ಅಧಿವೇಶನದ ಸಂದರ್ಭದಲ್ಲಿ ಹಿರಿಯ ಶಾಸಕ ಆರ್. ವಿ. ದೇಶಪಾಂಡೆ ಅವರಿಗೆ 2022ರ ಅತ್ಯುತ್ತಮ ಶಾಸಕ ಪ್ರಶಸ್ತಿ ಪ್ರದಾನ ಮಾಡಿದ ನಂತರ ಮಾತನಾಡಿದರು.
ಕರ್ನಾಟಕದಲ್ಲಿ ಕೈಗಾರೀಕರಣ ಹಾಗೂ ಕೈಗಾರಿಕಾ ನೀತಿ ರೂಪಿಸುವುದರಲ್ಲಿ ಮಹತ್ವದ ಪಾತ್ರವನ್ನು ವಹಿಸಿದ್ದಾರೆ. ಪ್ರಗತಿಪರವಾದ ಚಿಂತನೆಯುಳ್ಳವರು. ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಆರ್ಥಿಕತೆ ಬದಲಾವಣೆ, ಉದಾರೀಕರಣ ಹಾಗೂ ಜಾಗತೀಕರಣದ ಲಾಭವನ್ನು ರಾಜ್ಯಕ್ಕೆ ಲಭಿಸುವಂತೆ ಪ್ರಾಮಾಣಿಕ ಪರಿಶ್ರಮ ವಹಿಸಿದರು. ರಾಜ್ಯದಲ್ಲಿ ಟೊಯೊಟಾ ಕಾರ್ಖಾನೆಗೆ ರಿಯಾಯ್ತಿಗಳನ್ನು ನೀಡುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ರಾಜ್ಯದಲ್ಲಿ ದೊಡ್ಡ ಬದಲಾವಣೆಗಳನ್ನು ತರಲು ಶ್ರಮಿಸಿದ್ದಾರೆ ಎಂದರು.
*ಪ್ರಶಸ್ತಿಯ ಗೌರವ ಹೆಚ್ಚಿದೆ :*
ಅತ್ಯುತ್ತಮ ಶಾಸಕ ಪ್ರಶಸ್ತಿ ಹಿರಿಯರು ಹಾಗೂ ಮಾರ್ಗದರ್ಶಕರೂ ಆಗಿರುವಂತಹ ಆರ್.ವಿ.ದೇಶಪಾಂಡೆಯವರಿಗೆ ಸಂದಿರುವುದು ಪ್ರಶಸ್ತಿಯ ಗೌರವವನ್ನು ಹೆಚ್ಚಿಸಿದೆ. ಸರ್ವಸಮ್ಮತದ ಆಯ್ಕೆಯಲ್ಲಿ ವಿಧಾನಮಂಡಲದ ವಿಧಾನಸಭೆಯ ನಡೆವಳಿಕೆಗಳನ್ನು ಎತ್ತರದ ಮಟ್ಟದಲ್ಲಿ ನಿಭಾಯಿಸುವುದನ್ನು ತಮ್ಮ ನಡತೆಯಿಂದ ಕಳೆದ 8 ಬಾರಿ ಆಯ್ಕೆಯಲ್ಲಿ ತೋರಿಸಿಕೊಟ್ಟಿದ್ದಾರೆ. ಅತ್ಯುತ್ತಮ ಆಯ್ಕೆ ಮಾಡಿರುವುದಕ್ಕೆ ಸದಸ್ಯರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.
*ಸರಳ ಸಜ್ಜನ ವ್ಯಕ್ತಿತ್ವ :*
ಆರ್.ವಿ.ದೇಶಪಾಂಡೆಯವರೊಂದಿಗೆ ಹಳೆಯ ನೆನಪುಗಳಿವೆ. ಸರಳ, ಸಜ್ಜನ ವ್ಯಕ್ತಿತ್ವ, ರಾಜ್ಯ ಹಾಗೂ ದೇಶದ ಹಿತಕ್ಕೆ ಚಿಂತನೆ ಮಾಡುವವರು. ರಾಜ್ಯದ ರಾಜಕಾರಣದಲ್ಲಿ ಗುರುತಿಸಲ್ಪಟ್ಟವರು. 1980 ರಲ್ಲಿ ಎಪಿಎಂಸಿ ನಿರ್ದೇಶಕರಾಗಿದ್ದ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಬಳಿಗೆ ಒಂದು ತಂಡವನ್ನು ಕರೆತಂದಿದ್ದರು. ಕೆಲವೇ ದಿನಗಳಲ್ಲಿ ಎಪಿಎಂಸಿ ಅಧ್ಯಕ್ಷರಾದರು. ಜನತಾ ಪಕ್ಷದ ಅಧ್ಯಕ್ಷರು, ಜಿಲ್ಲಾಧ್ಯಕ್ಷರಾಗಿ ಸೇವೆ ಸಲ್ಲಿಸಿದ ನಂತರ 1983 ರ ಚುನಾವಣೆಯಲ್ಲಿ ಹಳಿಯಾಳ ಕ್ಷೇತ್ರಕ್ಕೆ ಆಯ್ಕೆಯಾದರು. ಆ ಕ್ಷೇತ್ರ ಕಾಡಿಗೆ ಹೊಂದಿಕೊಂಡಿರುವ ಕ್ಷೇತ್ರ. ಕುಡಿಯುವ ನೀರಿಗೆ ಸಮಸ್ಯೆ ಹಾಗೂ ಅಭಿವೃದ್ಧಿಯಲ್ಲಿ ಹಿನ್ನಡೆಯಾಗಿದಂಥ ಕ್ಷೇತ್ರವಾಗಿತ್ತು. ಆ ಕ್ಷೇತ್ರವನ್ನು ದೊಡ್ಡ ಪ್ರಮಾಣದಲ್ಲಿ ಅಭಿವೃದ್ಧಿ ಮಾಡಿ ಜನಮಾನಸವನ್ನು ಗೆದ್ದಿದ್ದಾರೆ ಎಂದರು. ಬಹಳ ಕಾಳಜಿಯಿಂದ ಜನರ ಕೆಲಸವನ್ನು ಮಾಡುತ್ತಾರೆ. ಜನರು ಅರ್ಜಿ ಕೊಟ್ಟರೆ ಅದರ ಬಗ್ಗೆ ಆಸ್ಥೆಯಿಂದ ಕ್ರಮ ಕೈಗೊಳ್ಳುವ ಪದ್ಧತಿ ರೂಢಿಸಿಕೊಂಡಿದ್ದಾರೆ ಎಂದರು.
*ವಿವಿಧ ಖಾತೆಗಳಲ್ಲಿ ಸಚಿವರಾಗಿ ಸೇವೆ :*
ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ, ಸಿದ್ದರಾಮಯ್ಯ, ದೇಶಪಾಂಡೆಯವರು, ಎಂಪಿಪ್ರಕಾಶ್ ಅವರನ್ನೂ ಸೇರಿದಂತೆ ತಮ್ಮ ತಮ್ಮ ಕ್ಷೇತ್ರದಲ್ಲಿ ಕೆಲಸಗಳನ್ನು ಮಾಡಿದ ದೊಡ್ಡ ತಂಡ 1983 ರಲ್ಲಿ ಬೆಳಕಿಗೆ ಬಂತು. ಇಡೀ ರಾಜಕಾರಣ ಬದಲಿಸಿದ ಸಮಯವಾಗಿತ್ತು. ಆ ತಂಡದಲ್ಲಿ ಆರ್.ವಿ.ದೇಶಪಾಂಡೆಯವರೂ ಒಬ್ಬರು. ರಾಮಕೃಷ್ಣ ಹೆಗಡೆಯವರು ಮುಖ್ಯಮಂತ್ರಿಯಾದ 2ನೇ ಮಂತ್ರಿಮಂಡಲ ವಿಸ್ತರಣೆಯಲ್ಲಿ ದೇಶಪಾಂಡೆಯವರನ್ನು ಸಚಿವರನ್ನಾಗಿ ಮಾಡಲಾಯಿತು. ಅಂದಿನಿಂದ ವಿವಿಧ ಖಾತೆಗಳಲ್ಲಿ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ. ದಕ್ಷತೆ, ಪ್ರಾಮಾಣಿಕತೆಯಿಂದ ಕರ್ತವ್ಯ ನಿರ್ವಹಿಸಿದ್ದಾರೆ ಎಂದರು.
*ಅವರು ನಡೆದು ಬಂದ ದಾರಿ ಎಲ್ಲರಿಗೂ ಮಾದರಿ :*
ಉತ್ತಮ ರಾಜಕೀಯ ಅನುಭವ ಹೊಂದಿರುವ ಆರ್.ವಿ.ದೇಶಪಾಂಡೆಯವರು ಎಲ್ಲ ಮುಖ್ಯಮಂತ್ರಿಗಳೊಂದಿಗೂ ಉತ್ತಮ ಬಾಂಧವ್ಯ ಹೊಂದಿದ್ದು, ಸ್ನೇಹಪರವಾಗಿದ್ದಾರೆ. ವಿರೋಧಪಕ್ಷದಲ್ಲಿ, ಕೇಂದ್ರ ಸರ್ಕಾರದಲ್ಲಿ ಹಲವು ಸಚಿವರೊಂದಿಗೆ ಆತ್ಮೀಯರಾಗಿದ್ದಾರೆ. ಅವರು ನಡೆದು ಬಂದ ದಾರಿ ನಮಗೆಲ್ಲರಿಗೂ ಮಾದರಿಯಾಗಿದ್ದು, ಅನುಕರಣೀಯವಾಗಿದೆ. ಹೊಸದಾಗಿ ಬಂದ ಶಾಸಕರು, ದೇಶಪಾಂಡೆಯವರ ಕೊಡುಗೆ, ನಡೆಸಿದ ಚರ್ಚೆಗಳ ಬಗ್ಗೆ ತಿಳಿದುಕೊಳ್ಳುವ ಅವಶ್ಯಕತೆ ಇದೆಯೆಂದು ತಿಳಿಸಿದರು.
ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧುಸ್ವಾಮಿ ಅವರು ಪ್ರಶಸ್ತಿ ಪ್ರದಾನ ಮಾಡಿದರು.
[28/12, 5:25 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಇಂಚಲದ ಶ್ರೀ ಶಿವಯೋಗೇಶ್ವರ ಗ್ರಾಮೀಣ ಆಯುರ್ವೇದಿಕ್ ವೈದ್ಯಕೀಯ ಮಹಾವಿದ್ಯಾಲಯದ ರಜತ ಮಹೋತ್ಸವ ಹಾಗೂ ಯಾತ್ರಿ ನಿವಾಸ ಕಟ್ಟಡವನ್ನು ಉದ್ಘಾಟಿಸಿದರು.
ಇಂಚಲದ ಶ್ರೀ ಶಿವಯೋಗೀಶ್ವರ ಸಾಧು ಸಂಸ್ಥಾನ ಮಠದ ಡಾ.ಶ್ರೀ ಶಿವಾನಂದ ಭಾರತಿ ಸ್ವಾಮೀಜಿ , ಸಚಿವರಾದ ಗೋವಿಂದ ಕಾರಜೋಳ,ಶಶಿಕಲಾ ಜೊಲ್ಲೆ, ಶಾಸಕರಾದ ಮಹಾಂತೇಶ್ ದೊಡ್ಡ ಗೌಡರ್, ದುರ್ಯೋಧನ ಐಹೊಳೆ, ಮಾಜಿ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಂಸದೆ ಮಂಗಳಾ ಅಂಗಡಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[28/12, 6:19 PM] Cm Ps: ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣೆ -
*ರಾಜ್ಯದ 42000 ಪೌರಕಾರ್ಮಿಕರನ್ನು ಖಾಯಂಗೊಳಿಸಲು ಕ್ರಮ : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಳಗಾವಿ, ಡಿಸೆಂಬರ್ 28 :
ರಾಜ್ಯದಲ್ಲಿ 11133 ಪೌರ ಕಾರ್ಮಿಕರ ನೌಕರಿಯನ್ನು ಖಾಯಂಗೊಳಿಸಲಾಗಿದೆ. ಕರ್ನಾಟಕದಲ್ಲಿ ಸುಮಾರು 42 ಸಾವಿರ ಪೌರಕಾರ್ಮಿಕರಿದ್ದು, ಮುಂದಿನ ದಿನಗಳಲ್ಲಿ ಇವರೆಲ್ಲರಿಗೂ ಖಾಯಂ ನೇಮಕಾತಿ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗಾವಿಯ ವಿವಿಧ ನಗರ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕವಾದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಿಸಿ ಮಾತನಾಡಿದರು.
*ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆ :*
ಆಯವ್ಯಯದಲ್ಲಿ ಪೌರಕಾರ್ಮಿಕರಿಗೆ 2000 ರೂ. ಸಂಕಷ್ಟ ಭತ್ಯೆಯನ್ನು ಅವರ ಆರೋಗ್ಯ ಹಿತರಕ್ಷಣೆಗೆ ನೀಡಲಾಯಿತು. ಪೌರಕಾರ್ಮಿಕರ ಹಿತರಕ್ಷಣೆಗಾಗಿ ಕಾನೂನನ್ನು ಬದಲಾಯಿಸಿ, ಈ ತೀರ್ಮಾನವನ್ನು ಕೈಗೊಳ್ಳುವ ಮೂಲಕ ಪೌರಕಾರ್ಮಿಕರಿಗೆ ನ್ಯಾಯ ಒದಗಿಸಲಾಗಿದೆ. ಅವರ ಗೌರವಯುತ ಜೀವನ ನಡೆಸುವ ಸಲುವಾಗಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ.. ಈ ಜಿಲ್ಲೆಯಲ್ಲಿ 309 ಕ್ಲೀನರ್ ಗಳನ್ನು, 1437 ಲೋಡರ್ಸ್ ಗಳನ್ನು ಖಾಯಂಗೊಳಿಸಲಾಗಿದೆ. ಇದೇ ರೀತಿ ಉಳಿದವರನ್ನು ನೇಮಕಾತಿ ಪ್ರಕ್ರಿಯೆ ಕೈಕೊಳ್ಳಲಾಗುವುದು. ಅಲ್ಲಿಯವರೆಗೆ ಅವರ ಸೇವಾದರವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮಾ ಮಾಡುವ ತೀರ್ಮಾನ ಸರ್ಕಾರ ಮಾಡಿದೆ ಎಂದರು.
*ಪೌರ ಕಾರ್ಮಿಕರಲ್ಲ, ಪೌರ ನೌಕರರು*
ಇಂತಹ ವಿಷಯದಲ್ಲಿಯೂ ರಾಜಕಾರಣ ಮಾಡಲಾಗುತ್ತದೆ. ನ್ಯಾಯ ಕೊಡುತ್ತಿರುವವರ ಮೇಲೆ ನಂಬಿಕೆಯಿಟ್ಟು ನಡೆದರೆ ಒಳ್ಳೆಯದಾಗುತ್ತದೆ.ಇನ್ನು ಮುಂದೆ ಪೌರ ಕಾರ್ಮಿಕರು ಎನ್ನದೇ , ಸರ್ಕಾರಿ ಪೌರ ನೌಕರರು ಎಂದು ಕರೆಯಲು ತೀರ್ಮಾನಿಸಲಾಗಿದೆ. ಈ ಹೆಸರು ನಿಮಗೆ ಸ್ವಾಭಿಮಾನ, ಅಸ್ಮಿತೆಯನ್ನು ನೀಡುತ್ತದೆ ಎಂದರು.
*ಪೌರನೌಕಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ :*
ಯಾವುದೇ ಕಾರಣಕ್ಕೂ ಪೌರನೌಕಕರ ಮಕ್ಕಳ ಶಿಕ್ಷಣಕ್ಕೆ ತಡೆಯುಂಟಾಗಬಾರದು. ಪೌರನೌಕರರ ಮಕ್ಕಳ ಶಿಕ್ಷಣಕ್ಕೆ ಯಾವುದೇ ಸಮಸ್ಯೆ ಬಂದರೂ ಸರ್ಕಾರ ಪರಿಹಾರ ಒದಗಿಸುತ್ತದೆ. ಅವರೂ ವಿದ್ಯಾವಂತರಾಗಿ ಎಲ್ಲರಂತೆಯೇ ಉನ್ನತ ಹುದ್ದೆಗಳಿಗೆ ಹೋಗಬೇಕು. ಈ ರೀತಿ ಸಾಮಾಜಿಕ ಬದಲಾವಣೆಯನ್ನು ತರಲಾಗುತ್ತದೆ. ಎಸ್ ಸಿ ಎಸ್ ಟಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈ ನಿರ್ಣಯಕ್ಕೆ ಗಟ್ಟಿಯಾಗಿ ನಿಲ್ಲಲು ಸರ್ಕಾರ ಎಲ್ಲ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ಪೌರನೌಕಕರ ಸೇವೆಯನ್ನು ಸರ್ಕಾರ ಗುರುತಿಸಿದೆ. ಬರುವ ದಿನಗಳಲ್ಲಿ ಪೌರನೌಕರರ ಮಕ್ಕಳಿಗೆ ಉತ್ತಮ ವಿದ್ಯೆ ನೀಡಿ, ಅವರ ಭವಿಷ್ಯವನ್ನು ಉಜ್ವಲಗೊಳಿಸಬೇಕು. ಇದಕ್ಕೆ ಸರ್ಕಾರ ಎಲ್ಲ ಸಹಕಾರ ನೀಡುತ್ತದೆ ಎಂದರು.
*ಪೌರನೌಕರರ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ವಿಶೇಷ ತರಬೇತಿ :*
ಈ ವರ್ಷ ಮಾರ್ಚ್ ನಲ್ಲಿ ಪದವಿ ಪರೀಕ್ಷೆ ಬರೆಯುವ ಪೌರನೌಕರರ ಮಕ್ಕಳ ಸವಿವರ ಪಟ್ಟಿಯನ್ನು ನೀಡಲು ಸಂಬಂಧಪಟ್ಟ ಸಚಿವರಿಗೆ ಮುಖ್ಯಮಂತ್ರಿಗಳು ಸೂಚಿಸಿದರು. ಎಸ್ ಸಿ ಎಸ್ ಟಿ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿಶೇಷ ತರಬೇತಿಯನ್ನು ನೀಡುವಂತೆ, ಪೌರನೌಕರರ ಮಕ್ಕಳು ಸಿಇಟಿ ಸೇರಿದಂತೆ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ವಿಶೇಷ ತರಬೇತಿಯನ್ನು ನೀಡಲು ಸರ್ಕಾರ ಸಿದ್ಧವಿದೆ ಎಂದರು.
*ಪೌರಕಾರ್ಮಿಕರ ನೋವನ್ನು ನಾನು ಬಲ್ಲೆ :*
ಪೌರ ಕಾರ್ಮಿಕರಿಗೆ ನೇಮಕಾತಿ ಆದೇಶ ನೀಡುವ ಬೇಡಿಕೆ ಹಲವು ವರ್ಷಗಳಿಂದ ಇತ್ತು. ಇದರ ಬಗ್ಗೆ ಹಲವು ವರದಿಗಳು ಬಂದಿದ್ದರೂ, ಬೇಡಿಕೆ ಈಡೇರಿರಲಿಲ್ಲ. ನಗರ ಸ್ವಚ್ಛತೆ ಮಾಡುವುದರ ಕಷ್ಟವನ್ನು ನಾನು ಅರಿತಿದ್ದೇನೆ. ಯಾವ ವ್ಯಕ್ತಿ ಇನ್ನೊಬ್ಬರ ಸ್ವಚ್ಛತೆಯನ್ನೇ ನಿರ್ವಹಿಸುವ ಕೆಲಸವನ್ನು ಸತತವಾಗಿ ಮಾಡಿದಾಗ ಮಾನಸಿಕವಾಗಿ ಅನುಭವಿಸುವ ನೋವನ್ನು ನಾನು ಅರ್ಥ ಮಾಡಿಕೊಳ್ಳಬಲ್ಲೆ. ಈ ಮಾನಸಿಕ ಹಿಂಸೆಯಿಂದ ಪಾರಾಗಲು ನಿಮ್ಮದೇ ಆದ ರೀತಿಗಳನ್ನು ಕಂಡುಕೊಂಡಿದ್ದೀರಿ. ನಿಮ್ಮ ಜಾಗದಲ್ಲಿ ನಿಂತು ಯೋಚಿಸಿದಾಗ, ಬದುಕಿಗಾಗಿ ನಾನು ಏಕೆ ಇನ್ನೊಬ್ಬರ ಹೊಲಸನ್ನು ಸ್ವಚ್ಛಗೊಳಿಸಬೇಕು ಎಂಬ ಮೂಲಭೂತ ಪ್ರಶ್ನೆ ಏಳುತ್ತದೆ. ಇಂತಹ ಬದುಕನ್ನು ಬದುಕುವ ಅನಿವಾರ್ಯತೆ ಏಕೆ ಬಂದಿದೆ. ರಾಜ್ಯದ ದಲಿತ ನಾಯಕ ಬಸವಲಿಂಗಪ್ಪ, ಮಲ ಹೊರುವ ಪದ್ಧತಿಯನ್ನು ನಿಷೇದಿಸುವ ಕಾನೂನನ್ನು ತಂದ ಧೀಮಂತ ನಾಯಕ ಎಂದರು.
*ಸರ್ಕಾರದ ದಿಟ್ಟ ನಿರ್ಧಾರಗಳು ಸಮಾಜದಲ್ಲಿ ಬದಲಾವಣೆ ತರುತ್ತದೆ :*
ನಾವು ಅಧಿಕಾರದಲ್ಲಿದ್ದಾಗ ಅತ್ಯಂತ ತಳಹಂತದಲ್ಲಿರುವವರಿಗೆ ನ್ಯಾಯವನ್ನು ಕೊಡಬೇಕು. ಕಾನೂನಿನ ಅಡಚಣೆಯನ್ನು ಮುಂದಿಟ್ಟುಕೊಂಡು ಪೌರಕಾರ್ಮಿಕರಿಗೆ 40-50 ವರ್ಷಗಳಿಂದ ನ್ಯಾಯವನ್ನು ನೀಡಲಾಗಿರಲಿಲ್ಲ. ಸರ್ಕಾರದ ವ್ಯವಸ್ಥೆಯಲ್ಲಿ ಕೆಲಸ ಮಾಡಬಾರದೆಂದರೆ ನೂರಾರು ಕಾರಣಗಳನ್ನು ಹುಡುಕಬಹುದು. ಆದರೆ ಬಡವರಿಗೆ, ದೀನದಲಿತರಿಗೆ,ದುಡಿಯುವ ವರ್ಗದ ಏಳಿಗೆಗೆ ದಿಟ್ಟತನದ ನಿರ್ಧಾರಗಳನ್ನು ತೆಗೆದುಕೊಂಡಾಗ ಸಮಾಜದಲ್ಲಿ ದೊಡ್ಡ ಬದಲಾವಣೆಗಳನ್ನು ತರಬಹುದಾಗಿದೆ. ಸರ್ಕಾರದ ಈ ಆಶಯಕ್ಕೆ ಈ ನಿರ್ಣಯವೇ ಸಾಕ್ಷಿ. ಪೌರಕಾರ್ಮಿಕರ ಆರೋಗ್ಯ ರಕ್ಷಣೆ, ಮಕ್ಕಳ ಶಿಕ್ಷಣ, ಮನೆ ನಿರ್ಮಾಣಗಳಿಗೆ ವಿಶೇಷ ಕಾರ್ಯಕ್ರಮವನ್ನು ರೂಪಿಸಲಾಗಿದ್ದು, ಪೌರಕಾರ್ಮಿಕರ ಇವುಗಳ ಲಾಭವನ್ನು ಪಡೆಯಬೇಕು ಎಂದರು.
ಸಚಿವರಾದ ಗೋವಿಂದ ಕಾರಜೋಳ, ಎಂ.ಟಿ. ಬಿ.ನಾಗ ರಾಜ್, ಶಶಿಕಲಾ ಜೊಲ್ಲೆ, ಶಾಸಕ ದುರ್ಯೋಧನ ಐಹೊಳೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[28/12, 7:03 PM] Cm Ps: ಬೆಳಗಾವಿ ( *ಬೈಲಹೊಂಗಲ* ) ಡಿಸೆಂಬರ್ 28: *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು ಶ್ರೀ ಶಿವಾನಂದ ಭಾರತಿ ಶಿಕ್ಷಣ ಸಂಸ್ಥೆಯ ಶ್ರೀ *ಶಿವಯೋಗೀಶ್ವರ ಗ್ರಾಮೀಣ* *ಆಯುರ್ವೇದಿಕ್ ವೈದ್ಯಕೀಯ* ಮಹಾವಿಶ್ವವಿದ್ಯಾಲಯ, ಆಸ್ಪತ್ರೆ ಮತ್ತು ಸ್ನಾತಕೋತ್ತರ ಸಂಶೋಧನಾ ಕೇಂದ್ರದ ವತಿಯಿಂದ ಶ್ರೀ *ಶಿವಯೋಗೀಶ್ವರ ಸಾಧು ಸಂಸ್ಥಾನ* *ಮಠ ಇಂಚಲ* ಇಲ್ಲಿ ಆಯೋಜಿಸಿರುವ ಶ್ರೀ *ಶಿವಯೋಗೀಶ್ವರ ಗ್ರಾಮೀಣ* ಆಯುರ್ವೇದಿಕ್ ವೈದ್ಯಕೀಯ ಮಹಾವಿದ್ಯಾಲಯದ ರಜತ ಮಹೋತ್ಸವ ( *ಬೆಳ್ಳಿಹಬ್ಬ)* ಹಾಗೂ *ಯಾತ್ರಿನಿವಾಸ* *ಉದ್ಘಾಟನಾ ಕಾರ್ಯಕ್ರಮದಲ್ಲಿ* ಪಾಲ್ಗೊಂಡು ಮಾತನಾಡಿದರು.
Post a Comment