[30/12, 10:08 AM] Cm Ps: ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ನಿಧನಕ್ಕೆ ಮುಖ್ಯಮಂತ್ರಿಗಳ ಸಂತಾಪ-
*ಆದರ್ಶಮಯವಾದ ತಾಯಿ ಮಗನ ಸಂಬಂಧ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 30 :
ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ನಿಧನಕ್ಕೆ ಮುಖ್ಯಮಂತ್ರಿಗಳು ಸಂತಾಪ ಸೂಚಿಸಿ, ಪ್ರಧಾನಿ ಮೋದಿಯವರು ಹಾಗೂ ಪೂಜ್ಯ ತಾಯಿ ಹೀರಾಬೇನ್ ಅವರದು ಆದರ್ಶಮಯವಾದ ತಾಯಿ ಮಗನ ಸಂಬಂಧವಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ಆರ್.ಟಿ.ನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿಯವರು ತಾಯಿಯವರು ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ರಾತ್ರಿ ಕೊನೆಯುಸಿರೆಳೆದಿದ್ದಾರೆ. ನಮಗೆಲ್ಲರಿಗೂ ದು:ಖದ ಸಂಗತಿಯಾಗಿದೆ. ಪ್ರಧಾನಿ ಮೋದಿಯವರು ತೋರಿಸಿರುವ ಗೌರವ, ಪ್ರೀತಿ ಅನನ್ಯವಾದುದು. ಹೀರಾಬೇನ್ ತಾಯಿ ಮಗನಿಗೆ ತೋರಿಸಿರುವ ಪ್ರೀತಿ ವಾತ್ಸಲ್ಯವನ್ನು ನಾವೆಲ್ಲ ನೋಡಿದ್ದೇವೆ. ತಾಯಿ ಬಹಳ ಸರಳ, ಆದರೆ ಅಷ್ಟೇ ವಿಶೇಷ ಎಂದು ನರೇಂದ್ರ ಮೋದಿಯವರು ಹಲವು ಬಾರಿ ಹೇಳಿದ್ದಾರೆ. ಇಡೀ ದೇಶಕ್ಕೆ ಆದರ್ಶಮಯವಾದ ತಾಯಿ ಮತ್ತು ಮಗನ ಸಂಬಂಧವಾಗಿತ್ತು. ಆ ತಾಯಿ ಎಂದೂ ಕೂಡ ಮಗ ಯಾವುದೇ ಹುದ್ದೆಯಲ್ಲಿದ್ದರೂ, ಮಗನಾಗಿಯೇ ನೋಡಿದ್ದಾರೆಯೇ ಹೊರತು , ಪ್ರಧಾನಿಯಾಗಿ, ಮುಖ್ಯಮಂತ್ರಿಯಾಗಿ ನೋಡಿರಲಿಲ್ಲ. ಇದು ಆ ತಾಯಿಯ ತಾಯ್ತನ ತೋರಿಸುತ್ತದೆ. ಅವರು ತನ್ನ ಕರ್ತವ್ಯವನ್ನು ಮಾಡಿ ನರೇಂದ್ರ ಮೋದಿಯವರಿಗೆ ಆದರ್ಶ, ತತ್ವನಿಷ್ಠೆ, ದೇಶಭಕ್ತಿಯನ್ನು ತುಂಬಿದ್ದಾರೆ. ಅವೆಲ್ಲ ಗುಣಗಳು ಮೋದಿಯವರಲ್ಲಿ ನೋಡುತ್ತಿದ್ದೇವೆ ಎಂದರು.
*ಇಳಿವಯಸ್ಸಿನಲ್ಲಿಯೂ ಕರ್ತವ್ಯ ಪಾಲನೆ :*
ಅವರು ನರೇಂದ್ರ ಮೋದಿಯವರನ್ನು ಭೇಟಿಯಾದಾಗ ಊಟ ಮಾಡಿಸಿದ್ದಾರೆ. ಹಣವನ್ನೂ ನೀಡಿದ್ದಾರೆ. ತಾಯಿಯಾಗಿ ತನ್ನ ಕರ್ತವ್ಯವನ್ನು ಇಳಿ ವಯಸ್ಸಿನಲ್ಲಿಯೂ ಕೂಡ ಅವರು ಮರೆತಿರಲಿಲ್ಲ. ನರೇಂದ್ರ ಮೋದಿಯವರು ಅಷ್ಟೇ ಪ್ರೀತಿ ಪ್ರೇಮ ತೋರಿಸಿದದು, ತಾಯಿಯ ಭಾವನೆಗಳನ್ನು ಅರಿತು ನಡೆದುಕೊಂಡ ರೀತಿ ಆದರ್ಶವಾಗಿದೆ. ಅವರು ಎಲ್ಲ ಪ್ರಮುಖ ಸಂದರ್ಭದಲ್ಲಿ ತಾಯಿಯನ್ನು ಭೇಟಿಯಾಗಿ ಆಶೀರ್ವಾದ ಪಡೆದಿರುವುದನ್ನು ನಾವೆಲ್ಲರೂ ನೋಡಿದ್ದೇವೆ. ದೇಶಕ್ಕೆ ಇದು ಮಾದರಿ. ತಾಯಿ ಮಕ್ಕಳ ಸಂಬಂಧ,ಅಣ್ಣ ತಮ್ಮಂದಿರ ಸಂಬಂಧ, ಅಕ್ಕತಂಗಿಯರ ಸಂಬಂಧ ಈ ದೇಶದ ಪರಂಪರೆ ಹಾಗೂ ಸಂಸ್ಕೃತಿ. ಈ ಸಂಬಂಧಗಳಲ್ಲಿ ನಮ್ಮ ದೇಶದ ಐಕ್ಯತೆ ಇದೆ. ಹೀರಾಬೇನ್ ಅವರು ಆದರ್ಶ ತಾಯಿಯಾಗಿ ತಮ್ಮ ಕರ್ತವ್ಯವನ್ನು ಮಾಡಿದ್ದಾರೆ. ಅಂತೆಯೇ ಒಬ್ಬ ಆದರ್ಶ ಮಗನಾಗಿ ನರೇಂದ್ರ ಮೋದಿಯವರು ದೇಶದ ಕರ್ತವ್ಯವನ್ನು ನಿರ್ವಹಿಸುತ್ತಿದ್ದಾರೆ ಎಂದರು.
*ಕರ್ಮಯೋಗಿ :*
ಮೋದಿಯವರು ಸಂತಾಪ ಸಂದೇಶದಲ್ಲಿ ತಾಯಿಯನ್ನು ಕರ್ಮಯೋಗಿ ಎಂದು ಬಣ್ಣಿಸಿದ್ದರು. ನರೇಂದ್ರ ಮೋದಿಯವರೂ ಕರ್ಮಯೋಗಿಯಾಗಿದ್ದಾರೆ. ತಾಯಿಯವರ ಕೊನೆಯ ಕರ್ಮಗಳನ್ನು ಮಗನಾಗಿ ಮಾಡುತ್ತಿದ್ದಾರೆ. ಅದರ ನಂತರ ಯಥಾಪ್ರಕಾರ ತಮ್ಮೆಲ್ಲ ಕಾರ್ಯಕ್ರಮಗಳಲ್ಲಿ ಭಗವಹಿಸಲಿದ್ದಾರೆ. ಇದು ನರೇಂದ್ರ ಮೋದಿಯವರ ಕರ್ತವ್ಯ ಪ್ರಜ್ಞೆಯನ್ನು ಬಿಂಬಿಸುತ್ತದೆ. ತಾಯಿ ಆತ್ಮಕ್ಕೆ ಭಗವಂತ ಶಾಂತಿ ದೊರಕಲಿ. ಈ ದು:ಖವನ್ನು ಭರಿಸುವ ಶಕ್ತಿಯನ್ನು ಪ್ರಧಾನಿ ಮೋದಿ ಹಾಗೂ ಅವರ ಕುಟುಂಬಕ್ಕೆ ಭಗವಂತ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.
[30/12, 10:21 AM] Cm Ps: ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯ ಪ್ರವಾಸ-
*ನಿಗದಿಯಾದ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇಲ್ಲ – ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಡಿಸೆಂಬರ್ 30 :
ಕೇಂದ್ರ ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಆಗಮಿಸಿದ್ದಾರೆ. ನಿಗದಿಯಾಗಿರುವಂತೆ ಎಲ್ಲ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದು, ಯಾವುದೇ ಬದಲಾವಣೆ ಇರುವುದಿಲ್ಲವೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ತಮ್ಮ ಆರ್.ಟಿ.ನಗರ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು.
ನಿನ್ನೆ ಸಚಿವ ಸಂಪುಟದಲ್ಲಿ ಮೀಸಲಾತಿ ಬಗ್ಗೆ ಮಾಡಿರುವ ತೀರ್ಮಾನಗಳ ಬಗ್ಗೆ ಸ್ಥೂಲವಾದ ವಿವರಣಗಳನ್ನು ಇಂದು ಮಧ್ಯಾಹ್ನದೊಳಗೆ ಬಿಡುಗಡೆ ಮಾಡಲಾಗುವುದು . ಕೇಂದ್ರ ಸಚಿವರ ಪ್ರವಾಸದ ನಂತರ ಈ ನಿರ್ಣಯಗಳನ್ನು ಹಂಚಿಕೊಳ್ಳಲಾಗುವುದು. ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಹಾಗೂ ಅದರ ಅನುಷ್ಠಾನದ ರೀತಿಯನ್ನು ವಿವರಿಸಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
*ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು*
ಗೋವಾ ಮುಖ್ಯಮಂತ್ರಿಗಳಿಂದ ಏನನ್ನೂ ನಿರೀಕ್ಷೆ ಮಾಡಲು ಸಾಧ್ಯವಿಲ್ಲ. ಈ ದೇಶ ಕಾನೂನಿನಿಂದ ನಡೆಯುತ್ತಿದೆ. ಅಂತರ ರಾಜ್ಯ ಜಲ ವಿವಾದ ಕಾಯ್ದೆ ಇದೆ. ಸುಪ್ರೀಂಕೋರ್ಟ್ ಇದೆ, ನ್ಯಾಯ ಮಂಡಳಿಯಿದೆ. ಈ ಪ್ರಕರಣದಲ್ಲಿ ನ್ಯಾಯ ಮಂಡಳಿ ನಿರ್ಧಾರವನ್ನು ತಿಳಿಸಿದೆ. ನರೇಂದ್ರ ಮೋದಿಯವರ ಸರ್ಕಾರ 2018 ರಲ್ಲಿಯೇ ಅಧಿಸೂಚನೆ ಹೊರಡಿಸಿದೆ. ಈಗ ಡಿಪಿಆರ್ ಅನುಮೋಡಿಸಿದ್ದಾರೆ. ಇದೆಲ್ಲವೂ ಕಾನೂನು ಬದ್ಧವಾಗಿದೆ. ಕರ್ನಾಟಕ ಏನೇ ಮಾಡಿದರೂ ಕಾನೂನು ಬದ್ಧವಾಗಿ ಮಾಡುತ್ತೇವೆ. ಡಿಪಿಆರ್ ಅನುಮೋದನೆಯ ಮೂಲಕ ಮುಂದಿನ ಕೆಲಸಕ್ಕೆ ಹಸಿರು ನಿಶಾನೆ ತೋರಿದ್ದಾರೆ. ಕಾನೂನು ಬದ್ಧವಾಗಿ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು. ನ್ಯಾಯಮಂಡಲಿಯು ನಮ್ಮ ಹಾಗೂ ಗೋವಾ ಬೇಡಿಕೆಯನ್ನು ಆಲಿಸಿದೆ. ಯಾರಿಗೂ ಧಕ್ಕೆಯಾಗದಂತೆ ನ್ಯಾಯಮಂಡಲಿ ತೀರ್ಪು ನೀಡಿದೆ. ಈ ದೇಶದ ಕಾನೂನನ್ನು ಎಲ್ಲರೂ ಗೌರವಿಸಬೇಕು ಎಂದರು.
[30/12, 12:39 PM] Cm Ps: ಕೇಂದ್ರ ಗೃಹ ಹಾಗೂ ಸಹಕಾರ ಸಚಿವರಾದ ಅಮಿತ್ ಶಾ ಅವರು
ಮಂಡ್ಯದ ಗೆಜ್ಜಲಗೆರೆಯಲ್ಲಿ ಮೆಗಾ ಡೈರಿ ವೀಕ್ಷಣೆ ಮಾಡಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಆದಿ ಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಸಚಿವ ಎಸ್.ಟಿ ಸೋಮಶೇಖರ್ ಹಾಜರಿದ್ದರು.
[30/12, 1:13 PM] Cm Ps: ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ ಅವರು ಇಂದು ಗೆಜ್ಜಲಗೆರೆ ಡೈರಿ ಆವರಣದಲ್ಲಿ ಮೆಗಾ ಡೈರಿ ಉದ್ಘಾಟಿಸಿದರು.
ಆದಿ ಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಸಚಿವ ಕೆ.ಗೋಪಾಲಯ್ಯ, ಶಾಸಕರಾದ ಸಿ.ಎಸ್.ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಮನ್ಮೂಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರ ಮೊದಲಾದವರು ಉಪಸ್ಥಿತರಿದ್ದರು.
ಇದೆ ಸಂದರ್ಭದಲ್ಲಿ ಮನ್ ಮೂಲ್ ಪ್ರಗತಿ ಪ್ರಥ ಪುಸ್ತಕವನ್ನು ಕೇಂದ್ರ ಸಹಕಾರ ಸಚಿವರು ಬಿಡುಗಡೆ ಮಾಡಿದರು.
[30/12, 2:16 PM] Cm Ps: *ಮೈ ಶುಗರ್ ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಮಂಡ್ಯ( ಮದ್ದೂರು) ಡಿಸೆಂಬರ್ 30: ಮೈ ಶುಗರ್ ನಲ್ಲಿ ಬರುವ ವರ್ಷ ಎಥನಾಲ್ ಘಟಕ ಸ್ಥಾಪನೆ ಮಾಡಿ ರೈತರಿಗೆ ವರದಾನವಾಗುವ ರೀತಿಯಲ್ಲಿ ಪರಿವರ್ತಿಸಲಾಗುವುದೆಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಮಂಡ್ಯ ಜಿಲ್ಲೆ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಇಂದು
ಗೆಜ್ಜಲಗೆರೆ ಆವರಣದಲ್ಲಿ ಆಯೋಜಿಸಿದ್ದ ಮೆಗಾ ಡೈರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಕರ್ನಾಟಕ ಹಾಲು ಉತ್ಪಾದನೆ ಡೈರಿ ಅಭಿವೃದ್ಧಿ ಮೂಲಕ ಹಸಿರು ಕ್ರಾಂತಿಯ ನಂತರ ಕ್ಷೀರ ಕ್ರಾಂತಿಯಾಗುತ್ತಿದೆ. ಕರ್ನಾಟಕ ಕ್ಷೀರ ಕ್ರಾಂತಿಯಲ್ಲಿ ತನ್ನದೇ ಕೊಡುಗೆ ನೀಡಿದೆ. ಹಗಲಿರುಳು ರೈತ ಬಂಧುಗಳು ಶ್ರಮಿಸುತ್ತಿದ್ದಾರೆ. ಹಾಲು ಉತ್ಪಾದನೆ ಮಾಡುವ ರೈತ ಮಹಿಳೆಯರಿಗೆ ವಿಶೇಷವಾಗಿ ಮುಖ್ಯ ಮಂತ್ರಿಗಳು ಅಭಿನಂದನೆಗಳನ್ನು ಸಲ್ಲಿಸಿದರು.
*1 ಲಕ್ಷ ಲೀ. ಹಾಲು ಸಂಸ್ಕರಿಸುವ ಸಾಮರ್ಥ್ಯ*
ಸಮಗ್ರ ಕೃಷಿ ಯಲ್ಲಿ ಹೈನುಗಾರಿಕೆ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ ಅದಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಕರ್ನಾಟಕದಲ್ಲಿ ಮಾಜಿ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕಾಲದಲ್ಲಿ ಪ್ರೋತ್ಸಾಹ ಧನ ನೀಡುವುದು ಪ್ರಾರಂಭವಾಗಿ ಇಂದು 5.00 ರೂ.ಗಳನ್ನು ಪ್ರತಿ ಹಾಲು ಉತ್ಪಾದಕನಿಗೆ ನೀಡಲಾಗುತ್ತಿದೆ. ಈ ಕ್ಷೇತ್ರದಲ್ಲಿ ತನ್ನದೇ ಆದ ಸವಾಲು ಗಳಿದ್ದರೂ ಇಂದು ಅದನ್ನು ಸರಿದೂಗಿಸಿ ಮುನ್ನುಗ್ಗುತ್ತಿದೆ. ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ 1 ಲಕ್ಷ ಲೀ. ಹಾಲು ಸಂಸ್ಕರಣೆ ಮಾಡುವ ಸಾಮರ್ಥ್ಯ ವಿದೆ ಎಂದರು.
*ಮೆಗಾ ಡೈರಿಯಲ್ಲಿ ಸ್ವಾವಲಂಬಿ ವ್ಯವಸ್ಥೆ*
ರೈತನ ಬದುಕು ಅನಿಶ್ಚಿತತೆಯಿಂದ ಕೂಡಿರುವ ಈ ಸಂದರ್ಭದಲ್ಲಿ ಅವನ ಬದುಕಿಗೆ ನಿಶ್ಚಿತತೆ ತಂದುಕೊಡುವ ನಿಟ್ಟಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೃಷಿ ಇಲಾಖೆಯಿಂದ ಸಹಕಾರವನ್ನು ಬೇರ್ಪಡಿಸಿ, ಸಹಕಾರ ಇಲಾಖೆ ಸೃಜಿಸಿ ಭಾರತ ದೇಶದಲ್ಲಿ ಸಹಕಾರ ರಂಗಕ್ಕೆ ಶಕ್ತಿ ತುಂಬಿದ್ದು, ಇದರಿಂದ ಒಂದು ಕ್ರಾಂತಿಯಾಗಲಿದೆ. ಹಲವಾರು ಸುಧಾರಣೆಗಳನ್ನು ತರುವ ಪ್ರಯತ್ನ ಗಳನ್ನು ಮಾಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರದ್ದು ಬೆಂಗಳೂರಿನ ಪ್ರಥಮ ಮೆಗಾ ಡೈರಿ ಸ್ಥಾಪನೆಯಲ್ಲಿ ಮಹತ್ವದ ಪಾತ್ರವಿದೆ. ಅದನ್ನು ನಾವು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಲ್ಲಿಂದ ಪ್ರಾರಂಭವಾದ ಮೆಗಾ ಡೈರಿ ಇಂದು ಎಲ್ಲೆಡೆ ಸ್ಥಾಪನೆಯಾಗುತ್ತಿದೆ. ಸ್ವತಂತ್ರವಾಗಿ ಹಾಲು ಉತ್ಪಾದಿಸಿ, ಸಂಸ್ಕರಿಸಿ, ಪ್ಯಾಕ್ ಮಾಡಿ, ವಿವಿಧ ಪದಾರ್ಥಗಳನ್ನು ತಯಾರಿಸಿ ಸ್ವಾವಲಂಬನೆಯ ವ್ಯವಸ್ಥೆ ಮೆಗಾ ಡೈರಿಯಲ್ಲಿ ಆಗುತ್ತಿದೆ. ನಮ್ಮ ಪ್ರಧಾನಮಂತ್ರಿಗಳ ಆತ್ಮ ನಿರ್ಭರ್ ಭಾರತ್ ಕನಸಿಗೆ ಕರ್ನಾಟಕದ ಹಾಲು ಒಕ್ಕೂಟಗಳು ದೊಡ್ಡ ಕೊಡುಗೆಯನ್ನು ಕೊಡುತ್ತಿವೆ ಎಂದರು.
*ರೈತರ ಯೋಜನೆಗಳಿಗೆ ಒಂದು ವಾರದೊಳಗೆ ಅನುಮೋದನೆ*
ಮಂಡ್ಯ ಜಿಲ್ಲೆ ಒಕ್ಕಲುತನದಿಂದ ಕೂಡಿದೆ. ಸಕ್ಕರೆ ನಾಡು, ಭತ್ತದ ಖನಿಜ. ಮಂಡ್ಯದ ಅಭಿವೃದ್ಧಿಗೆ ಇನ್ನಷ್ಟು ನೀರಾವರಿ ಮತ್ತು ಕೈಗಾರಿಕೆ ಅಗತ್ಯ ವಿದೆ. ಈ ನಿಟ್ಟಿನಲ್ಲಿ ಮೈ ಶುಗರ್ ಸಂಸ್ಥೆಯನ್ನು ಸರ್ಕಾರಿ ವಲಯದ ಮೂಲಕ ಪ್ರಾರಂಭಿಸಿದೆ. ವಿಶ್ವೇಶ್ವರ ನಾಲೆಯ ನೀರಾವರಿಯ ಕೊನೆ ಭಾಗದಲ್ಲಿರುವ ರೈತರಿಗೆ ಯೋಜನೆಗಳನ್ನು ರೂಪಿಸುತ್ತಿದ್ದು, ಒಂದು ವಾರದಲ್ಲಿ ಅವೆಲ್ಲಕ್ಕೂ ಅನುಮೋದನೆ ನೀಡಲಾಗುವುದು ಎಂದರು.
[30/12, 4:50 PM] Cm Ps: *ಮೊಲಾಸಸ್ ತಯಾರಿಸುವವರಿಗೆ ಪ್ರತಿ ಟನ್ ಗೆ 100 ರೂ ಹೆಚ್ಚಸಿ ಆದೇಶ* *ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಮಂಡ್ಯ, ಡಿಸೆಂಬರ್ 30: ಮೊಲಾಸಸ್ ತಯಾರಿಸುವವರಿಗೆ ಪ್ರತಿ ಟನ್ ಗೆ 100 ರೂ ಹೆಚ್ಚಸಿ ಆದೇಶ ಹೊರಡಿ ಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಭಾರತೀಯ ಜನತಾ ಪಕ್ಷದ ವತಿಯಿಂದ ಮಂಡ್ಯದಲ್ಲಿ ಆಯೋಜಿಸಿದ್ದ ಜನಸಂಕಲ್ಪ ಯಾತ್ರೆ ಯಲ್ಲಿ ಕೇಂದ್ರದ ಗೃಹ ಹಾಗೂ ಸಹಕಾರಿ ಸಚಿವ ಅಮಿತ್ ಶಾ ಅವರೊಂದಿಗೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಮೈಶುಗರ್ ಕಾರ್ಖಾನೆ ನೂರಾರು ವರ್ಷಗಳಿಂದ ಮುಚ್ಚಿದ್ದರೂ ಯಾವುದೇ ಸರ್ಕಾರ ಈ ಬಗ್ಗೆ ಚಿಂತನೆ ಮಾಡಿರಲಿಲ್ಲ. ಅಧಿಕಾರಿಗಳು ಈ ಕಾರ್ಖಾನೆಯನ್ನು ಮಾರಾಟ ಮಾಡಿ ಖಾಸಗಿಯವರಿಗೆ ವಹಿಸಲು ಒತ್ತಡ ತಂದಿದ್ದರು. ಈ ಭಾಗದ ಜನಪ್ರತಿನಿಧಿಗಳು ಹಾಗೂ ರೈತ ಮುಖಂಡರ ಸಭೆ ಕರೆದು ಕಾರ್ಖಾನೆಗೆ ಕಾಯಕಲ್ಪವನ್ನು ಸರ್ಕಾರಿ ವಲಯದಿಂದಲೇ ನೀಡುವುದಾಗಿ ಪಣ ತೊಟ್ಟು ಈ ವರ್ಷ ಕಬ್ಬು ಅರೆಸಲು ಪ್ರಾರಂಭಿಸಲಾಗಿದೆ ಈ ಭಾಗದ ರೈತರಿಗೆ ಆತ್ಮವಿಶ್ವಾಸವನ್ನು ತುಂಬುವ ಕೆಲಸ ಮಾಡಲಾಗಿದೆ.
ಬರುವ ವರ್ಷದಲ್ಲಿ ಎಥನಾಲ್ ಘಟಕ ಪ್ರಾರಂಭಿಸಲು ವ್ಯವಸ್ಥೆ ಕಲ್ಪಿಸಲಾಗುವುದು. ಇದನ್ನು ಲಾಭದಾಯಕವಾಗಿಸಲು, ರೈತರ ಸಕ್ಕರೆ ಕಾರ್ಖಾನೆಯಾಗಿ ಪರಿವರ್ತನೆ ಮಾಡಲಾಗುವುದು ಎಂದರು. ಕಬ್ಬು ಬೆಳೆಗಾರರು, ಕಬ್ಬಿಗೆ ಹೆಚ್ಚಿನ ಬೆಲೆ ನಿಗದಿಗೆ ಒತ್ತಾಯ ಮಾಡುತ್ತಿದ್ದರು. ಎಥನಾಲ್ ಉಳ್ಳವರು 50 ರೂ.ಗಳನ್ನು ಹೆಚ್ಚಿಸಲಾಗಿದೆ. ಮಾತು ಕೊಟ್ಟಂತೆ ನಡೆಯುವ ಸರ್ಕಾರ ನಮ್ಮದು ಎಂದರು.
*ಡಬಲ್ ಇಂಜಿನ್ ಸರ್ಕಾರ*
ಇಡೀ ಕರ್ನಾಟಕದ ಅಭಿವೃದ್ಧಿ ನಮ್ಮ ಸಂಕಲ್ಪ. ಮಂಡ್ಯ ಇಸ್ ಇಂಡಿಯಾ ಆಗಲು ಭಾಗದ ರೈತರಿಗೆ ಶಕ್ತಿ ತುಂಬಬೇಕು. ಕೈಗಾರಿಕೆಗಳೂ ಬರಬೇಕು. ಡಬಲ್ ಇಂಜಿನ್ ಸರ್ಕಾರದ ಮಹಿಮೆ ಏನೆಂದರೆ ಬೆಂಗಳೂರು- ಮೈಸೂರು ಸೂಪರ್ ಫಾಸ್ಟ್ ಹೈವೇ ಆಗಿರುವುದು ನರೇಂದ್ರ ಮೋದಿಯವರು ಪ್ರಧಾನ ಮಂತ್ರಿ ಆದ ಮೇಲೆ. ಅವರೇ ಮುಂದಿನ ತಿಂಗಳು ಇದರ ಉದ್ಘಾಟನೆ ಅವರೇ ನೆರವೇರಿಸಲಿದ್ದಾರೆ. ಕೇವಲ ಒಂದೂವರೆ ಗಂಟೆಗಳಲ್ಲಿ ಬೆಂಗಳೂರು- ಮೈಸೂರು ಪ್ರಯಾಣಿಸಬಹುದು. ವಂದೇ ಭಾರತ್ ರೈಲು ಕೂಡ ಉದ್ಘಾಟನೆಯಾಗಿದೆ. ಇದು ಡಬಲ್ ಇಂಜಿನ್ ಸರ್ಕಾರ. ವಂದೇ ಭಾರತ್ ರೈಲು, ಹೈವೇ ರಸ್ತೆ ನೀಡಿರುವುದು ಕಾಂಗ್ರೆಸ್ ಅಲ್ಲ ಡಬಲ್ ಇಂಜಿನ್ ಸರ್ಕಾರ ಎಂದು ತಿಳಿಯುತ್ತದೆ ಎಂದರು.
*ಕಾಂಗ್ರೆಸ್ ಅನಿಷ್ಟ ಸರ್ಕಾರ*
ಸಿದ್ದರಾಮಯ್ಯ ಅವರು ಮುಖ್ಯ ಮಂತ್ರಿ ಮಾಡಲು ಮತ ಹಾಕಿ ಎಂದು ಯಾಚಿಸುತ್ತಾರೆ. ಜನರು ಅವರ 5 ವರ್ಷಗಳ ಆಡಳಿತ ನೋಡಿದ್ದಾರೆ. ಕಾಂಗ್ರೆಸ್ ಅನಿಷ್ಟ ಸರ್ಕಾರ. ಭ್ರಷ್ಟಾಚಾರದಿಂದ ಕೂಡಿದ ಸರ್ಕಾರ. ಯಾವುದೇ ಇಲಾಖೆ ತೆಗೆದುಕೊಂಡರೂ ಭ್ರಷ್ಟಾಚಾರ ಮಾಡಿದ್ದಾರೆ. ಅನ್ನಭಾಗ್ಯದಲ್ಲಿ ಕನ್ನಭಾಗ್ಯಮಾಡಿದ್ದಾರೆ. 30 ರೂ. ನರೇಂದ್ರ ಮೋದಿಯವರು ಕೊಟ್ಟಿದ್ದಾರೆ. 3 ರೂ.ಗಳ ಚೀಲದ ಮೇಲೆ ಸಿದ್ದರಾಮಯ್ಯ ಫೋಟೋ ಹಾಕಿದ್ದಾರೆ. ನಿಜವಾದ ಅನ್ನದಾತ ನರೇಂದ್ರ ಮೋದಿಯವರು. ಕರೊನಾ ಬಂದಾಗ ಗರೀಬ್ ಕಲ್ಯಾಣ ಯೋಜನೆ ಜಾರಿ ಮಾಡಿ ಮುಂದಿನ ವರ್ಷಕ್ಕೂ ಯೋಜನೆ ವಿಸ್ತರಣೆ ಆಗಿದೆ. ಪ್ರತಿ ಬಡವನಿಗೆ 5 ಕೆಜಿ ಅಕ್ಕಿ ನೀಡುವ ನಿರ್ಣಯವನ್ನು ನರೇಂದ್ರ ಮೋದಿ ಹಾಗೂ ಅಮಿತ್ ಶಾ ಅವರು ಮಾಡಿದ್ದಾರೆ ಎಂದರು.
*ಎಲ್ಲಾ ವರ್ಗಗಳಿಗೂ ನ್ಯಾಯ ನೀಡಲು ಪ್ರಾಮಾಣಿಕ ಪ್ರಯತ್ನ*
ನಮ್ಮ ಸರ್ಕಾರ ರೈತ ವಿದ್ಯಾ ನಿಧಿ ಯೋಜನೆಯಡಿ 10.ಲಕ್ಷಕ್ಕಿಂತ ಹೆಚ್ಚಿನ ವಿದ್ಯಾರ್ಥಿಗಳಿಗೆ ಯೋಜನೆಯಿಂದ ಲಾಭ ದೊರೆತಿದೆ. ಕುಶಲಕರ್ಮಿಗಳಿಗೆ 50 ಸಾವಿರ ರೂ.ಗಳ ಸಹಾಯಧನ ನೀಡುವ ಕಾಯಕ ಯೋಜನೆ, ಸ್ತ್ರೀ ಸಾಮರ್ಥ್ಯ, ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ರೂಪಿಸಿದೆ. ಸಾಮಾಜಿಕ ನ್ಯಾಯ ನೀಡುತ್ತಿರುವುದು ಭಾಜಪ . ಎಸ್.ಸಿ.ಎಸ್.ಟಿ ಮೀಸಲಾತಿ ಹೆಚ್ಚಿಸಿದೆ. ಹಿಂದುಳಿದ ವರ್ಗಗಳಿಗೂ ಸಾಮಾಜಿಕ ನ್ಯಾಯ ಒದಗಿಸುತ್ತಿದೆ. ಎಲ್ಲಾ ವರ್ಗಗಳಿಗೂ ನ್ಯಾಯ ನೀಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತಿದೆ. ಈ ಬಾರಿ ಕಾಂಗ್ರೆಸ್ ಹಾಗೂ ಜೆಡಿಎಸ್ ನ ಕಪ್ಳು ಬಿಳುಪು ಸಿನಿಮಾ ನೋಡಿಯಾಗಿದೆ. ಈ ಭಾಗದ ಅಭಿವೃದ್ಧಿಗೆ ಏನಾದರೂ ಕೊಡುಗೆ ಕೊಟ್ಟಿದ್ದಾರೆ ಅದು ನಮ್ಮ ಯಡಿಯೂರಪ್ಪನವರು. ಅವರ ಜನ್ಮಭೂಮಿಯ ಸಮಗ್ರ ಅಭಿವೃದ್ಧಿಗೆ ದೊಡ್ಡ ಕೊಡುಗೆ ನೀಡಿದ್ದಾರೆ. ಬಿಜೆಪಿ ಈ ಭಾಗವನ್ನು ಸುವರ್ಣ ಕರ್ನಾಟಕವನ್ನಾಗಿಸುವ ಸಂಕಲ್ಪ ಮಾಡಿದೆ. ಈ ಭಾಗದ ಕಾವೇರಿಯ ಮಕ್ಕಳ ಬಾಳನ್ನು ಬಂಗಾರ ಮಾಡಲು ಸಂಕಲ್ಪವನ್ನು ಮಾಡಿದ್ದೇವೆ. ವಿಶ್ವಾಸಕ್ಕೆ ಚ್ಯುತಿ ಬಾರದಂತೆ ಕೆಲಸ ಮಾಡುವುದಾಗಿ ಭರವಸೆ ನೀಡಿದರು. ನವ ಕರ್ನಾಟಕ ದಿಂದ ನವ ಭಾರತ ಕಟ್ಟೋಣ ಎಂದು ಕರೆ ನೀಡಿದರು.
ಕರ್ನಾಟಕದಲ್ಲಿ ಭಾಜಪ ಗಾಳಿ ಬೀಸುತ್ತಿದೆ. ಅಮಿತ್ ಶಾ ಅವರು ಕಾಲಿಟ್ಟ ಮೇಲೆ ಸುನಾಮಿಯಾಗಿ 2023 ರ ಚುನಾವಣೆಯಲ್ಲಿ ಜಯಭೇರಿ ಬಾರಿಸುವುದು ಶತಸಿದ್ದ ಎಂದರು.
*ವಿಶ್ವಮಾನ್ಯತೆ*
ಭಾರತದ ಚುಕ್ಕಾಣಿ ಹಿಡಿದಿರುವ ಪ್ರಧಾನಿ ನರೇಂದ್ರ ಮೋದಿಯವರ ಆಡಳಿತ ಭಾರತವನ್ನು ಅತ್ಯಂತ ಶಕ್ತಿ ಶಾಲಿ ರಾಷ್ಟವನ್ನಾಗಿಸಿದೆ. ಪ್ರಗತಿಪರ ರಾಷ್ಟವಾಗಿಸಿ, ಆಂತರಿಕ ಭದ್ರತೆ ಒದಗಿಸಿ ಅಮಿತ್ ಶಾ ಅವರ ಪರಿಶ್ರಮದಿಂದ ಅಖಂಡತೆ, ಏಕತೆಯಲ್ಲಿ ವಿಶ್ವಮಾನ್ಯತೆ ಪಡೆದಿದೆ. ನರೇಂದ್ರ ಮೋದಿಯವರು ವಿಶ್ವಮಾನ್ಯ ನಾಯಕರು. ಭಾರತದ ಕಾಶ್ಮೀರ, ನಕ್ಸಲರು ಸೇರಿದಂತೆ ಹಾಗೂ ಹಲವಾರು ಸಮಸ್ಯೆಗಳನ್ನು ಅತ್ಯಂತ ದಕ್ಷತೆಯಿಂದ ಬಗೆಹರಿಸಿ ದೇಶಕ್ಕೆ ಅಖಂಡತೆ ಹಾಗೂ ಏಕತೆಯನ್ನು ತಂದುಕೊಟ್ಟು ದೇಶದ ನೆಚ್ಚಿನ ಗೃಹ ಸಚಿವರಾಗಿ ಕೆಲಸ ಮಾಡುತ್ತಿದ್ದಾರೆ. ಅಮಿತ್ ಶಾ ಅವರು ಚುನಾವಣೆ ತಂತ್ರವನ್ನು ಹೆಣೆದಲ್ಲಿ ಯಶಸ್ಸು ದೊರೆತಿದೆ. ಗುಜರಾತಿನಲ್ಲಿ ಅಭೂತಪೂರ್ವ ವಿಜಯ ಭಾಜಪ ಗೆದ್ದಿರುವುದು ಅಮಿತ್ ಶಾ ಮತ್ತು ನರೇಂದ್ರ ಮೋದಿಯವರ ಕಾರಣದಿಂದಾಗಿ. ಕರ್ನಾಟಕದ ಚುನಾವಣೆಯಲ್ಲಿಯೂ ಭಾಜಪ ಗೆಲ್ಲುವುದು ಸೂರ್ಯ ಹುಟ್ಟುವಷ್ಟೇ ಸತ್ಯ ಎಂದರು.
*ಜನ ಬೇಸತ್ತಿದ್ದಾರೆ*
ದಕ್ಷಿಣ ಕರ್ನಾಟಕದಲ್ಲಿ ಜನರ ನಾಡಿ ಮಿಡಿತ ನಮಗೆ ತಿಳಿದಿದೆ. ಕಳೆದ 30 ವರ್ಷಗಳಿಂದ ಕಾಂಗ್ರೆಸ್ ಮತ್ತು ಜೆಡಿಎಸ್ ಆಡಳಿತದಿಂದ ಜನ ಬೇಸತ್ತಿದ್ದಾರೆ. ಮತಗಳನ್ನು ಪಡೆದು ಮಂತ್ರಿ , ಮುಖ್ಯಮಂತ್ರಿಗಳಾಗಿ ಈ ಭಾಗಕ್ಕೆ ನ್ಯಾಯ ಕೊಡಲು ವಿಫಲರಾಗಿದ್ದಾರೆ. ಈ ಭಾಗದ ನೀರಾವರಿ ಬಗ್ಗೆ ದಿಟ್ಟ ಕ್ರಮಗಳನ್ನು ತೆಗೆದುಕೊಂಡಿಲ್ಲ. ಸಕ್ಕರೆ ಕಾರ್ಖಾನೆ ಬಗ್ಗೆ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಹೀಗಾಗಿ ರೈತಾಪಿ ವರ್ಗ, ಯುವಕರು ಮತ್ತು ಮಹಿಳೆಯರು ಭಾಜಪ ಕಡೆ ನೋಡುತ್ತಿದ್ದಾರೆ. ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯದಲ್ಲಿ ಅತ್ಯಧಿಕ ಸ್ಥಾನ ಪಡೆಯುವುದು ಭಾಜಪ ಎಂದರು.
*ಕಾಯಕಲ್ಪ*
ಕೆ.ಆರ್. ಎಸ್ ನಿಂದ ಹಿಡಿದು ಈ ಭಾಗದ ಕೊನೆಯ ಹಂತದವರೆಗೆ ನೀರಾವರಿಗೆ ಅತಿ ಹೆಚ್ಚು ಪ್ರಾಮುಖ್ಯತೆ ನೀಡುತ್ತಿದ್ದೇವೆ. ಈ ವಾರದಲ್ಲಿ ನಡೆಯುವ ಕಾವೇರಿ ನೀರಾವರಿ ನಿಗಮದ ಸಭೆಯಲ್ಲಿ ಎಲ್ಲಾ ಭಾಗದ ನೀರಾವರಿಗೆ ಸರ್ಕಾರ ಕಾಯಕಲ್ಪ ನೀಡುತ್ತಿದೆ ಎಂದರು
ಈ ಸಂದರ್ಭದಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಚಿವರಾದ ಕೆ.ಗೋಪಾಲಯ್ಯ, ನಾರಾಯಣ ಗೌಡ, ಶಾಸಕರು ಮೊದಲಾದವರು ಉಪಸ್ಥಿತರಿದ್ದರು.
Post a Comment