[27/12, 1:56 PM] Kpcc official: ತಮ್ಮ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ವಕೀಲರ ಪರಿಷತ್ ಸೇರಿದಂತೆ ವಕೀಲರ ನಾನಾ ಸಂಘಟನೆಗಳು ಬೆಳಗಾವಿಯ ಸುವರ್ಣಸೌಧದ ಬಳಿ ಮಂಗಳವಾರ ನಡೆಸಿದ ಪ್ರತಿಭಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಪಾಲ್ಗೊಂಡು, ಅವರ ಹೋರಾಟ ಬೆಂಬಲಿಸಿ ಮಾತನಾಡಿದರು.
[27/12, 3:05 PM] Kpcc official: *ಬೆಳಗಾವಿಯಲ್ಲಿ ವಕೀಲರ ಪ್ರತಿಭಟನೆಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು*
ಸಮಾಜದ ಪ್ರಮುಖ ಅಂಗವಾಗಿರುವ, ನ್ಯಾಯ ಎತ್ತಿ ಹಿಡಿಯುವ ತಾವು ಈಗ ನಿಮ್ಮ ರಕ್ಷಣೆಗೆ ಹೋರಾಟ ಮಾಡಬೇಕಾದ ಪರಿಸ್ಥಿತಿ ಬಂದಿದೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹಾಗೂ ವೈಯಕ್ತಿಕವಾಗಿ ನಿಮ್ಮೆಲ್ಲರ ಹೋರಾಟದ ಜತೆ ಇದ್ದೇನೆ ಎಂದು ಹೇಳಲು ಇಲ್ಲಿಗೆ ಆಗಮಿಸಿದ್ದೇನೆ.
ತಾವು ರಾಜ್ಯದ ವಿವಿಧ ಮೂಲೆಗಳಿಂದ ಬಂದು ಸರ್ಕಾರದ ಗಮನ ಸೆಳೆಯಲು ಇಲ್ಲಿ ಪ್ರಯತ್ನಿಸುತ್ತಿದ್ದೀರಿ. ವಕೀಲರ ಸಂರಕ್ಷಣಾ ಕಾಯ್ದೆ ಜಾರಿಗೊಳಿಸಬೇಕು ಎಂಬ ನಿಮ್ಮ ಆಗ್ರಹ ನ್ಯಾಯಬದ್ಧವಾಗಿದ್ದು, ಬೆಳಗಾವಿ ಅಧಿವೇಶನದಲ್ಲಿ ನಿಮ್ಮ ರಕ್ಷಣೆ ಕುರಿತ ಕರಡನ್ನು ಮಂಡಿಸಿ, ಅಗೀಕಾರ ಮಾಡಬೇಕಾದದ್ದು ನಮ್ಮೆಲ್ಲರ ಕರ್ತವ್ಯ. ನಾನು ಕೂಡ ಸರ್ಕಾರಕ್ಕೆ ಈ ವಿಚಾರವಾಗಿ ಒತ್ತಾಯ ಮಾಡುತ್ತೇನೆ. ಖಾಸಗಿ ನಿರ್ಣಯ ಮಂಡಿಸಲು ನಾವು ಬದ್ಧರಾಗಿದ್ದೇವೆ. ನೀವು ಖಾಸಗಿ ನಿರ್ಣಯ ಸಿದ್ಧ ಮಾಡಿ ಕೊಡಿ. ನಮ್ಮ ಪಕ್ಷದ ವತಿಯಿಂದ ನಿಮಗೆ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ನಿಮ್ಮೆಲ್ಲರಿಗೂ ಶುಭವಾಗಲಿ, ನಿಮ್ಮ ಹೋರಾಟಕ್ಕೆ ಜಯ ಸಿಗಲಿ.
[27/12, 3:05 PM] Kpcc official: ಕಳಪೆ ಕಾಮಗಾರಿಯ ಸ್ಮಾರ್ಟ್ ಸಿಟಿ ಎಂಬ ಲೂಟಿ ಯೋಜನೆಯಿಂದ ಜನಸಾಮಾನ್ಯರಿಗೆ ಅನುಕೂಲಕ್ಕಿಂತ ನಷ್ಟವೇ ಹೆಚ್ಚು.
ಬೆಂಗಳೂರಿನ ಗಾಂಧಿ ಬಜಾರಿನಲ್ಲಿ ನಡೆಯುತ್ತಿರುವ ಕಾಮಗಾರಿ ಪೂರ್ಣಗೊಳ್ಳಲು 2 ವರ್ಷ ಬೇಕಂತೆ!
ಅಲ್ಲಿವರೆಗೂ ಅಲ್ಲಿನ ವ್ಯಾಪಾರಿಗಳ ನಷ್ಟ ಭರಿಸಿಕೊಡುವವರು ಯಾರು? ಸಂಚಾರ ಅವ್ಯವಸ್ಥೆಗೆ ಪರಿಹಾರವೇನು?
ಸ್ಥಳೀಯರ ಸಮಸ್ಯೆ ಕೇಳುವವರು ಯಾರು?
[27/12, 3:05 PM] Kpcc official: ರಾಜಕೀಯ ಜೀವನ ರೂಪಿಸಿಕೊಟ್ಟ ಜ.ರೆಡ್ಡಿಯವರನ್ನು ಕೈಬಿಟ್ಟು ಪಕ್ಷ ತಾಯಿ ಇದ್ದಂಗೆ ಎನ್ನುತ್ತಿರುವ @sriramulubjp ಅವರೇ,
'ಬಿಎಸ್‌ಆರ್ ಕಾಂಗ್ರೆಸ್' ಕಟ್ಟಿ ಬಿಜೆಪಿ ವಿರುದ್ಧ ಮುಗಿಬಿದ್ದಿದ್ದಕ್ಕೆ 'ತಾಯಿದ್ರೋಹ' ಎನ್ನೋಣವೇ?
ಅವಕಾಶವಾದಿತನ, ಅಧಿಕಾರದಾಹಕ್ಕೆ ಸ್ನೇಹವನ್ನೇ ಕಡೆಗಣಿಸಿದ ತಮ್ಮಿಂದ ಜನತೆಗೆ ದ್ರೋಹವಲ್ಲದೆ ಇನ್ನೇನು ಸಿಗಬಹುದು!
[27/12, 3:07 PM] Kpcc official: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಬೆಳಗಾವಿ ಸುವರ್ಣಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಮಂಗಳವಾರ ನೀಡಿದ ಪ್ರತಿಕ್ರಿಯೆ...
[27/12, 4:04 PM] Kpcc official: *ಅಶಾಂತಿ ಮೂಡಿಸಲು ಬಿಜೆಪಿ ಆಡುತ್ತಿರುವ ನಾಟಕ: ಡಿ ಕೆ ಶಿವಕುಮಾರ್*
ನಮ್ಮ ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಮಹಾರಾಷ್ಟ್ರದ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಹಾಗೂ ಇಡೀ ಕರ್ನಾಟಕ ತೀವ್ರವಾಗಿ ಖಂಡಿಸಿ ವಿರೋಧಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.
ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದ ಅವರು ಹೇಳಿದ್ದಿಷ್ಟು:
ನಮ್ಮ ರಾಜ್ಯದ ಒಂದೂ ಹಳ್ಳಿಯನ್ನು ಮಹಾರಾಷ್ಟ್ರಕ್ಕೆ ನೀಡಲು ನಾವು ತಯಾರಿಲ್ಲ. ಅವರ ಒಂದು ಹಳ್ಳಿಯೂ ನಮಗೆ ಬೇಡ. ಎರಡೂ ರಾಜ್ಯಗಳ ಗಡಿ ಅಂತಿಮವಾಗಿದ್ದು, ನಮ್ಮ ಜನ ಅದರಂತೆ ಬದುಕುತ್ತಿದ್ದಾರೆ.
ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಕುತಂತ್ರದಿಂದ ಅಲ್ಲಿನ ಸಚಿವರು ಇದನ್ನು ಆರಂಭಿಸಿದ್ದು, ಈಗ ಎಲ್ಲಾ ಪಕ್ಷದವರು ಇದಕ್ಕೆ ಸೇರಿಕೊಂಡಿದ್ದಾರೆ. ನಾವೆಲ್ಲರೂ ಒಗ್ಗಟ್ಟಿನಿಂದ ನಮ್ಮ ರಾಜ್ಯವನ್ನು ಕಾಪಾಡಬೇಕು. ನಮ್ಮ ಪಕ್ಷ ಮುಂದಾಳತ್ವ ತೆಗೆದುಕೊಳ್ಳಲಿದೆ. ನಮ್ಮ ಭಾಷೆ, ನೆಲ, ಜಲ ಕಾಪಾಡುವುದು ನಮ್ಮ ಕರ್ತವ್ಯ. ಇದಕ್ಕೆ ಅಗತ್ಯ ಸಹಕಾರ ನೀಡಲು ನಾವು ಸಿದ್ಧ.
ಮಹಾರಾಷ್ಟ್ರದ ತೀರ್ಮಾನಕ್ಕೆ ನಮ್ಮ ವಿರೋಧವಿದೆ. ಸದನದಲ್ಲಿ ನಾವು ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ.
ಇದು ಅಶಾಂತಿ ಮೂಡಿಸಲು ಬಿಜೆಪಿ ಉದ್ದೇಶಪೂರ್ವಕವಾಗಿ ಆಡುತ್ತಿರುವ ನಾಟಕ. ಇಲ್ಲಿನ ಜನರ ಭಾವನೆ ಕೆದಕಿ, ಅವರ ಬದುಕಿನಲ್ಲಿ ದ್ವೇಷ ಹಾಗೂ ಅಸೂಯೆ ಮೂಡಿಸುವ ಪ್ರಯತ್ನ ಇದಾಗಿದೆ. ಎಲ್ಲ ಕನ್ನಡಪರ ಸಂಘಟನೆಗಳು ಒಟ್ಟಾಗಿ ಯಾವುದೇ ಅಳುಕಿಲ್ಲದೆ ಇದನ್ನು ಪ್ರತಿಭಟಿಸೋಣ, ರಾಜ್ಯದ ಗೌರವ ಉಳಿಸಿಕೊಳ್ಳೋಣ.
ಕೇಂದ್ರದಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ. ಚುನಾವಣೆ ಸಮಯದಲ್ಲಿ ಇವರ ರಾಜಕೀಯ ಹಿತಾಸಕ್ತಿಗಾಗಿ ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ರಾಜ್ಯದಲ್ಲಿರುವ ಮರಾಠಿ ಭಾಷಿಗರೂ ನಮ್ಮವರೇ. ಎಲ್ಲರೂ ಶಾಂತಿಯುತವಾಗಿ ಬದುಕಲು ಬಯಸುತ್ತಾರೆ. ಈ ಭಾಗದ ಜನರ ಹಕ್ಕು, ಹಿತಾಸಕ್ತಿ ಕಾಪಾಡಲು ಇಲ್ಲಿ ಸುವರ್ಣಸೌಧ ನಿರ್ಮಾಣ ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರದ ಇಂತಹ ನಿರ್ಣಯ ನಾಚಿಕೆಗೇಡಿನ ವಿಚಾರವಾಗಿದ್ದು, ನಾವು ಇದನ್ನು ಖಂಡಿಸುತ್ತೇವೆ.
[27/12, 5:10 PM] Kpcc official: ವೈದ್ಯಕೀಯ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತ ಡಿ.ಕೆ ಶಿವಕುಮಾರ್; ರಾಜ್ಯದ ವಿದ್ಯಾರ್ಥಿಗಳ ಹಿತಕಾಯಲು ಕಾಂಗ್ರೆಸ್ ಬದ್ಧ
ಉಕ್ರೇನ್ - ರಷ್ಯಾ ಯುದ್ಧದ ಪರಿಣಾಮದಿಂದಾಗಿ ಭಾರತಕ್ಕೆ ಮರಳಿದ ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಅವರು, ವೈದ್ಯಕೀಯ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿರುವ ಸರ್ಕಾರದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
"ರಷ್ಯಾ-ಉಕ್ರೇನ್ ನಡುವಿನ ಯುದ್ಧದ ಸಂದರ್ಭದಲ್ಲಿ ರಾಜ್ಯಕ್ಕೆ ಮರಳಿದ್ದ ಸಂತ್ರಸ್ತ ವೈದ್ಯಕೀಯ ವಿದ್ಯಾರ್ಥಿಗಳು ತಾಯ್ನಾಡಿನಲ್ಲಿ ಶಿಕ್ಷಣ ಮುಂದುವರಿಸಲು ಸರ್ಕಾರ ನೆರವಾಗದೇ ಇರುವುದು ದುಃಖಕರ ವಿಚಾರ." ಎಂದು ತಮ್ಮ ಟ್ವೀಟ್‌ನಲ್ಲಿ ಬೇಸರ ಹೊರಹಾಕಿರುವ ಡಿ.ಕೆ ಶಿವಕುಮಾರ್, "ಅತಂತ್ರಗೊಂಡಿರುವ ರಾಜ್ಯದ 700ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಕಾಪಾಡಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ." ಎಂದು ಹೇಳಿದ್ದಾರೆ.
ಉಕ್ರೇನ್-ರಷ್ಯಾ ಯುದ್ಧದ ವೇಳೆ ರಾಜ್ಯದ ಸುಮಾರು 700 ವೈದ್ಯಕೀಯ ವಿದ್ಯಾರ್ಥಿಗಳು ಉಕ್ರೇನಿನಿಂದ ಮರಳಿ ಬಂದಿದ್ದರು. ಇವರನ್ನೂ ಸೇರಿದಂತೆ ಭಾರತದ ಸಾವಿರಾರು ವಿದ್ಯಾರ್ಥಿಗಳು ಭಾರತದಲ್ಲೇ ಶಿಕ್ಷಣ ಮುಂದುವರಿಸಲು ರಾಷ್ಟ್ರೀಯ ವೈದ್ಯಕೀಯ ಆಯೋಗ (ಎನ್.ಎಂ.ಸಿ) ನಿರಾಕರಿಸಿದೆ. ಇದರಿಂದಾಗಿ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾದಂತಾಗಿದೆ.
"ಯುದ್ಧ ಸಂತ್ರಸ್ತ ವಿದ್ಯಾರ್ಥಿಗಳು ರಾಜ್ಯದಲ್ಲೇ ಶಿಕ್ಷಣ ಮುಂದುವರಿಸಲು ಪರಿಹಾರವೇನು? ನನ್ನಿಂದ ಹಾಗೂ ಪಕ್ಷದಿಂದ ಏನೇ ಸಹಾಯ ಕೇಳಿದರೂ ಮಾಡಲು ಖಂಡಿತ ಸಿದ್ಧ." ಎಂದು ಡಿ.ಕೆ ಶಿವಕುಮಾರ್ ವಿದ್ಯಾರ್ಥಿಗಳ ಬೆಂಬಲಕ್ಕೆ ನಿಂತಿದ್ದಾರೆ.
"ವಿದ್ಯಾರ್ಥಿಗಳು ಈಕೂಡಲೇ ನನ್ನ ಸಾಮಾಜಿಕ ಜಾಲತಾಣಗಳ ಖಾತೆಯಲ್ಲಿ ನೇರ ಸಂದೇಶ (DM) ಕಳಿಸುವ ಮೂಲಕ ಸಂಪರ್ಕಿಸಬಹುದು. ವಿದ್ಯಾರ್ಥಿಗಳ ಬೆನ್ನಿಗೆ ಖಂಡಿತ ನಾವು ನಿಲ್ಲುತ್ತೇವೆ." ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದ್ದಾರೆ.
[27/12, 6:10 PM] Kpcc official: ಇದುವರೆಗೂ 20 ಬಾರಿ ದೆಹಲಿ ವಿಮಾನ ಹತ್ತಿದರೂ ಸಚಿವ ಸಂಪುಟ ವಿಸ್ತರಣೆಗೆ ಅನುಮತಿ ತರಲಾಗದ @BSBommai ಅವರು ಮೈಕಿನ ಮುಂದೆ ನಿಂತು 'ದಮ್ಮು ತಾಕತ್ತು' ಎಂದು ಗಂಟಲು ಶೋಷಣೆ ಮಾಡಿಕೊಳ್ಳುವುದು ಹಾಸ್ಯನಟನೊಬ್ಬ ಖಳನಾಯಕನ ಪಾತ್ರಕ್ಕೆ ಮೀಸೆ ಅಂಟಿಸಿಕೊಂಡಂತೆಯೇ ಸರಿ!
#PuppetCM ಅವರನ್ನು ಹೈಕಮಾಂಡ್ ಕೀಲಿ ಕೊಟ್ಟು ಕುಣಿಸುತ್ತಿದೆ.!
[27/12, 6:17 PM] Kpcc official: '@BSBommai ಅವರ ದೆಹಲಿ ಪ್ರವಾಸ ಅವರ ಪಕ್ಷದ ಸಮಸ್ಯೆ ಬಗೆಹರಿಸಲು ಹೊರತು ರಾಜ್ಯದ ಏಳಿಗೆಗಲ್ಲ..
ಬರಿಗೈಲಿ ವಾಪಾಸಾಗಲು ಅಧಿವೇಶನವನ್ನು ಕಡೆಗಣಿಸಿ ತುರಾತುರಿಯಲ್ಲಿ ಓಡುವಂತದ್ದೇನಿತ್ತು?
ಸಿಎಂಗೆ ರಾಜ್ಯದ ಸಮಸ್ಯೆಗಿಂತ ಪಕ್ಷದ ಸಮಸ್ಯೆಯೇ ಮುಖ್ಯವಾಯ್ತೆ?
ದೆಹಲಿ ಪ್ರವಾಸದಿಂದಾದ ಪ್ರಯೋಜನವನ್ನು ರಾಜ್ಯದ ಜನತೆಗೆ ತಿಳಿಸುವ ದಮ್ಮು ತಾಕತ್ತಿದೆಯೇ?
[27/12, 6:53 PM] Kpcc official: #PuppetCM @BSBommai ಅವರ ದೆಹಲಿ ಮಾಲೀಕರು ಮತ್ತೆ ಸಂಪುಟ ವಿಸ್ತರಣೆಗೆ ಸಹಕರಿಸಿಲ್ಲ.
ತಯಾರಾಗಿ ಕುಳಿತಿದ್ದ ಮದುವೆ ಗಂಡು @ikseshwarappa ಅವರ ಮದುವೆ ಆಸೆಗೆ ಮತ್ತೆ ತಣ್ಣೀರು ಬಿದ್ದಿದೆ!
ರಮೇಶ್ ಜಾರಕಿಹೊಳಿಯವರ ಕನಸು ಜಾರಿ ಹೋಗಿದೆ!
ರೇಣುಕಾಚಾರ್ಯ ನಿರಾಸೆಯಲ್ಲಿ ವನವಾಸಕ್ಕೆ ಹೋಗುವುದು ಬಾಕಿ ಇದೆ!
Post a Comment