ಜನವರಿ 11, 2023, 7:59PMರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ BHIM-UPI ವಹಿವಾಟುಗಳ ಪ್ರಚಾರಕ್ಕಾಗಿ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರ ಅನುಮೋದಿಸಿದೆ



ಜನವರಿ 11, 2023
7:59PM

ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ BHIM-UPI ವಹಿವಾಟುಗಳ ಪ್ರಚಾರಕ್ಕಾಗಿ ಪ್ರೋತ್ಸಾಹಕ ಯೋಜನೆಯನ್ನು ಸರ್ಕಾರ ಅನುಮೋದಿಸಿದೆ

PIB
ರುಪೇ ಡೆಬಿಟ್ ಕಾರ್ಡ್‌ಗಳು ಮತ್ತು ಕಡಿಮೆ ಮೌಲ್ಯದ BHIM-UPI ವಹಿವಾಟುಗಳ ಪ್ರಚಾರಕ್ಕಾಗಿ ಪ್ರೋತ್ಸಾಹಕ ಯೋಜನೆಗೆ ಕೇಂದ್ರ ಸಚಿವ ಸಂಪುಟ ಇಂದು ತನ್ನ ಒಪ್ಪಿಗೆ ನೀಡಿದೆ. ಯೋಜನೆಯು ಎರಡು ಸಾವಿರದ ಆರು ನೂರು ಕೋಟಿ ರೂಪಾಯಿಗಳ ಆರ್ಥಿಕ ವೆಚ್ಚವನ್ನು ಹೊಂದಿದೆ. ಈ ನಿರ್ಧಾರವು ದೃಢವಾದ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ನಿರ್ಮಿಸಲು ಸಹಾಯ ಮಾಡುತ್ತದೆ.

ಅಲ್ಲದೆ, ಕೊಲ್ಕತ್ತಾದ ಜೋಕಾದಲ್ಲಿರುವ ಕುಡಿಯುವ ನೀರು, ನೈರ್ಮಲ್ಯ ಮತ್ತು ಗುಣಮಟ್ಟಕ್ಕಾಗಿ ರಾಷ್ಟ್ರೀಯ ಕೇಂದ್ರವನ್ನು ಡಾ. ಶ್ಯಾಮ ಪ್ರಸಾದ್ ಮುಖರ್ಜಿ ರಾಷ್ಟ್ರೀಯ ನೀರು ಮತ್ತು ನೈರ್ಮಲ್ಯ ಸಂಸ್ಥೆ ಎಂದು ಮರುನಾಮಕರಣ ಮಾಡಲು ಕ್ಯಾಬಿನೆಟ್ ಎಕ್ಸ್-ಪೋಸ್ಟ್ ಫ್ಯಾಕ್ಟೋ ಅನುಮೋದನೆಯನ್ನು ನೀಡಿತು.

Post a Comment

Previous Post Next Post