[24/01, 1:04 PM] Cm Ps: *ತೊಗರಿ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ*
ಪರಿಹಾರ ಘೋಷಣೆ : ಸಿಎಂ ಬೊಮ್ಮಾಯಿ*
ಕಲಬುರಗಿ, ಜನವರಿ 23: ತೊಗರಿ ಬೆಳಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಇಂದು ಸಂಜೆ 4 ಗಂಟೆಗೆ ಸಭೆ ಕರೆದಿದ್ದು, ಕೃಷಿ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಗಳ ಸಭೆಯಲ್ಲಿ ಪರಿಹಾರ ಎಷ್ಟು ಕೊಡಬೇಕೆಂದು ತೀರ್ಮಾನಿಸಿ, ಇಂದು ಸಂಜೆ ಘೋಷಣೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ವಿಶೇಷವಾಗಿ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ತೊಗರಿ ನಾಶವಾಗಿದ್ದು, ಅದಕ್ಕೆ ಪರಿಹಾರ ನೀಡಲು ರೈತರು ಕೂಡ ಒತ್ತಾಯ ಮಾಡಿದ್ದಾರೆ ಎಂದರು.
*ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ 67 ಕೋಟಿ ರೂ.ಗಳ ಡಿಪಿಆರ್ ಸಿದ್ದ*
ವಿಠಲ ಹೇರೂರ ಅವರ ಮೂರ್ತಿಯ ಅನಾವರಣ ಹಾಗೂ ಗಾಣಗಾ ಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಜಿಲ್ಲಾಡಳಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದು, ಸುಮಾರು 60 ಕೋಟಿ ಗಿಂತ ಹೆಚ್ಚು ಅನುದಾನದ ಅಗತ್ಯವಿದೆ. ಕಾಶಿ ವಿಶ್ವನಾಥ, ಉಜ್ಜಯನಿಯ ಕಾಳಹಸ್ತಿಯಲ್ಲಿ ನಿರ್ಮಿಸಿರುವಂತೆ ಕಾರಿಡಾರ್ ನಿರ್ಮಿಸಬೇಕು ಎಂದು 67 ಕೋಟಿ ರೂ.ಗಳ ಡಿಪಿಆರ್ ಸಿದ್ದ ಮಾಡಿದ್ದಾರೆ.ಬರುವ ಬಜೆಟ್ ನಲ್ಲಿ ಸರ್ಕಾರ ಕಾರಿಡಾರ್ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.
*ಪ್ರಧಾನಿಗಳಿಂದ ಏರೋ ಇಂಡಿಯಾ ಷೋ ಉದ್ಘಾಟನೆ*
ಕಲಬುರಗಿಗೆ ಆಗಮಿಸಿದ ಕೂಡಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಕ್ಷಣಾ ಇಲಾಖೆಯ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಫೆ 13 ನೇ ತಾರೀಖಿನಿಂದ ಪ್ರಾರಂಭವಾಗುವ ಏರೋ ಇಂಡಿಯಾ ಷೋ ಪ್ರತಿಷ್ಠಿತ ಕಾರ್ಯಕ್ರಮವಾಗಿದ್ದು,1996 ರಿಂದ ಬೆಂಗಳೂರಿನ ಏರ್ ಫೋರ್ಸ್ ನಿಲ್ದಾಣದಲ್ಲಿ ನಿರಂತರವಾಗಿ ಕರ್ನಾಟಕ ಆತಿಥ್ಯ ವಹಿಸಿದೆ. ಈ ಬಾರಿ ಅತಿ ದೊಡ್ಡ ಏರ್ ಷೋ ನಡೆಯಲಿದ್ದು, ಅತಿ ಹೆಚ್ವು ಜನ ಭಾಗವಹಿಸುತ್ತಿದ್ದಾರೆ. ಗಣ್ಯರು, ಏರೋಸ್ಪೇಸ್ ಮುಖ್ಯಸ್ಥರು, ಕಂಪನಿಗಳ ಸಿಇಒಗಳು ದೊಡ್ಡ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ. ಭಾರತೀಯ, ಕರ್ನಾಟಕ ಸೇರಿದಂತೆ ದೊಡ್ಡ ಪ್ರಮಾಣದಲ್ಲಿ ಏರೋಸ್ಪೇಸ್ ಕಂಪನಿಗಳ ವಸ್ತುಪ್ರದರ್ಶನವಿದೆ. ಸಾರ್ವಜನಿಕರು ನೋಡಲು ಏರ್ ಷೋ ಕೂಡ ಇರಲಿದೆ. ಇಂಥ ಬೃಹತ್ ಷೋ ನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಅದರ ಪೂರ್ವಭಾವಿ ಸಿದ್ಧತೆಗಳ ವೀಡಿಯೋ ಸಂವಾದ ನಡೆಯಿತು ಎಂದರು.
*ತನಿಖೆಯಾಗುತ್ತದೆ*
ಪಿ.ಎಸ್.ಐ ನೇಮಕಾತಿಗೆ ಸಂಬಂಧಿಸಿದಂತೆ ಆರೋಪಿ ರುದ್ರೇಗೌಡ ತನಿಖಾಧಿಕಾರಿಗಳು ಡಿವೈಎಸ್ಪಿ ಶಂಕರಗೌಡರು 3 ಕೋಟಿ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರೋಪಿ ಹೇಳಿಕೆ ಬಗ್ಗೆ ಮಾಹಿತಿ ಅಲ್ಲಿಯ ತನಿಖಾಧಿಕಾರಿ ಬಳಿ ಇರುತ್ತದೆ. ಮೊದಲು ಅವರ ಮೇಲಿನ ಆರೋಪ, ಕೋರ್ಟಿನ ಆದೇಶ, ನ್ಯಾಯಾಂಗ ಬಂಧನ ಎಲ್ಲಾ ಕಾನೂನಿನ ಪ್ರಕಾರ ತನಿಖೆ ಯಾಗುತ್ತದೆ.ಅದೇ ರೀತಿ ಆತ ನೀಡಿರುವ ಸಾಕ್ಷ್ಯಾಧಾರಗಳ ಮೇಲೆ ಅಧಿಕಾರಿಯ ಮೇಲೂ ತನಿಖೆ ನಡೆಯಲಿದೆ ಎಂದರು.
*ವ್ಯಕ್ತಿಗತ ಹೇಳಿಕೆಗೆ ಉತ್ತರಿಸೊಲ್ಲ*
ಶೃಂಗೇರಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾರಿಗೆ ನೋವಾಗುತ್ತದೆ ಅವರು ಪ್ರತಿಕ್ರಿಯೆ ನೀಡುತ್ತಾರೆ. ನಾನು ಪ್ರತಿಯೊಂದು ವ್ಯಕ್ತಿಗತ ಹೇಳಿಕೆಗೆ ಉತ್ತರಿಸಲು ಸಾಧ್ಯವಿಲ್ಲ ಎಂದರು.
[24/01, 1:39 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿರುವ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗಿಯಾದರು.
[24/01, 3:15 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೇವಲ ಗಾಣಗಾಪುರದಲ್ಲಿರುವ ಹೇರೂರ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವದಲ್ಲಿ ಭಾಗಿಯಾಗಿ, ವಿಠ್ಠಲ ಹೇರೂರರ ಕಂಚಿನ ಮೂರ್ತಿ ಅನಾವರಣ ಹಾಗೂ ವಿಠ್ಠಲ ಹೇರೂರರ ಗೀತೆಗಳ ಸಿಡಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಹಾವೇರಿಯ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಸ್ವಾಮೀಜಿ, ಅಲ್ಲಮ ಪ್ರಭು ಪೀಠದ ಮಲ್ಲಣ್ಣಪ್ಪ ಸ್ವಾಮೀಜಿ, ಶಾಸಕರಾದ ಎಂ.ವೈ ಪಾಟಿಲ್, ದತ್ತಾತ್ರೆಯ ಪಾಟೀಲ್ ರೇವೂರು, ವಿಧಾನ ಪರಿಷತ್ ಸದಸ್ಯರಾದ ಬಾಬುರಾವ್ ಚಿಂಚನಸೂರ್, ಮಾಜಿ ಸಚಿವ ಮಾಲಿಕಯ್ಯ ಗುತ್ತೆದಾರ, ಪ್ರಮೋದ್ ಮದ್ವರಾಜ್, ತಿಪ್ಪಣ್ಣ ಕಮಕನೂರು ಹಾಗೂ ಮತ್ತಿತರರು ಹಾಜರಿದ್ದರು.
[24/01, 6:41 PM] Cm Ps: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದ ಗಾಜಿನಮನೆಯಲ್ಲಿ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[24/01, 6:45 PM] Cm Ps: *ತೊಗರಿ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ*
*ಇಂದು ಸಂಜೆ ಪರಿಹಾರ ಘೋಷಣೆ : ಸಿಎಂ ಬೊಮ್ಮಾಯಿ*
ಕಲಬುರಗಿ, ಜನವರಿ 23: ತೊಗರಿ ಬೆಳಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಇಂದು ಸಂಜೆ 4 ಗಂಟೆಗೆ ಸಭೆ ಕರೆದಿದ್ದು, ಕೃಷಿ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಗಳ ಸಭೆಯಲ್ಲಿ ಪರಿಹಾರ ಎಷ್ಟು ಕೊಡಬೇಕೆಂದು ತೀರ್ಮಾನಿಸಿ, ಇಂದು ಸಂಜೆ ಘೋಷಣೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ವಿಶೇಷವಾಗಿ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ತೊಗರಿ ನಾಶವಾಗಿದ್ದು, ಅದಕ್ಕೆ ಪರಿಹಾರ ನೀಡಲು ರೈತರು ಕೂಡ ಒತ್ತಾಯ ಮಾಡಿದ್ದಾರೆ ಎಂದರು.
*ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ 67 ಕೋಟಿ ರೂ.ಗಳ ಡಿಪಿಆರ್ ಸಿದ್ದ*
ವಿಠಲ ಹೇರೂರ ಅವರ ಮೂರ್ತಿಯ ಅನಾವರಣ ಹಾಗೂ ಗಾಣಗಾ ಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಜಿಲ್ಲಾಡಳಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದು, ಸುಮಾರು 60 ಕೋಟಿ ಗಿಂತ ಹೆಚ್ಚು ಅನುದಾನದ ಅಗತ್ಯವಿದೆ. ಕಾಶಿ ವಿಶ್ವನಾಥ, ಉಜ್ಜಯನಿಯ ಮಹಾಕಾಲೇಶ್ವರದಲ್ಲಿ ನಿರ್ಮಿಸಿರುವಂತೆ ಕಾರಿಡಾರ್ ನಿರ್ಮಿಸಬೇಕು ಎಂದು 67 ಕೋಟಿ ರೂ.ಗಳ ಡಿಪಿಆರ್ ಸಿದ್ದ ಮಾಡಿದ್ದಾರೆ.ಬರುವ ಬಜೆಟ್ ನಲ್ಲಿ ಸರ್ಕಾರ ಕಾರಿಡಾರ್ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.
*ಪ್ರಧಾನಿಗಳಿಂದ ಏರೋ ಇಂಡಿಯಾ ಷೋ ಉದ್ಘಾಟನೆ*
ಕಲಬುರಗಿಗೆ ಆಗಮಿಸಿದ ಕೂಡಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಕ್ಷಣಾ ಇಲಾಖೆಯ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಫೆ 13 ನೇ ತಾರೀಖಿನಿಂದ ಪ್ರಾರಂಭವಾಗುವ ಏರೋ ಇಂಡಿಯಾ ಷೋ ಪ್ರತಿಷ್ಠಿತ ಕಾರ್ಯಕ್ರಮವಾಗಿದ್ದು,1996 ರಿಂದ ಬೆಂಗಳೂರಿನ ಏರ್ ಫೋರ್ಸ್ ನಿಲ್ದಾಣದಲ್ಲಿ ನಿರಂತರವಾಗಿ ಕರ್ನಾಟಕ ಆತಿಥ್ಯ ವಹಿಸಿದೆ. ಈ ಬಾರಿ ಅತಿ ದೊಡ್ಡ ಏರ್ ಷೋ ನಡೆಯಲಿದ್ದು, ಅತಿ ಹೆಚ್ವು ಜನ ಭಾಗವಹಿಸುತ್ತಿದ್ದಾರೆ. ಗಣ್ಯರು, ಏರೋಸ್ಪೇಸ್ ಮುಖ್ಯಸ್ಥರು, ಕಂಪನಿಗಳ ಸಿಇಒಗಳು ದೊಡ್ಡ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ. ಭಾರತೀಯ, ಕರ್ನಾಟಕ ಸೇರಿದಂತೆ ದೊಡ್ಡ ಪ್ರಮಾಣದಲ್ಲಿ ಏರೋಸ್ಪೇಸ್ ಕಂಪನಿಗಳ ವಸ್ತುಪ್ರದರ್ಶನವಿದೆ. ಸಾರ್ವಜನಿಕರು ನೋಡಲು ಏರ್ ಷೋ ಕೂಡ ಇರಲಿದೆ. ಇಂಥ ಬೃಹತ್ ಷೋ ನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಅದರ ಪೂರ್ವಭಾವಿ ಸಿದ್ಧತೆಗಳ ವೀಡಿಯೋ ಸಂವಾದ ನಡೆಯಿತು ಎಂದರು.
*ತನಿಖೆಯಾಗುತ್ತದೆ*
ಪಿ.ಎಸ್.ಐ ನೇಮಕಾತಿಗೆ ಸಂಬಂಧಿಸಿದಂತೆ ಆರೋಪಿ ರುದ್ರೇಗೌಡ ತನಿಖಾಧಿಕಾರಿಗಳು ಡಿವೈಎಸ್ಪಿ ಶಂಕರಗೌಡರು 3 ಕೋಟಿ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರೋಪಿ ಹೇಳಿಕೆ ಬಗ್ಗೆ ಮಾಹಿತಿ ಅಲ್ಲಿಯ ತನಿಖಾಧಿಕಾರಿ ಬಳಿ ಇರುತ್ತದೆ. ಮೊದಲು ಅವರ ಮೇಲಿನ ಆರೋಪ, ಕೋರ್ಟಿನ ಆದೇಶ, ನ್ಯಾಯಾಂಗ ಬಂಧನ ಎಲ್ಲಾ ಕಾನೂನಿನ ಪ್ರಕಾರ ತನಿಖೆ ಯಾಗುತ್ತದೆ.ಅದೇ ರೀತಿ ಆತ ನೀಡಿರುವ ಸಾಕ್ಷ್ಯಾಧಾರಗಳ ಮೇಲೆ ಅಧಿಕಾರಿಯ ಮೇಲೂ ತನಿಖೆ ನಡೆಯಲಿದೆ ಎಂದರು.
[24/01, 8:34 PM] Cm Ps: ಬೆಂಗಳೂರು, ಜನವರಿ 24- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರು ಜಿಲ್ಲೆಯಲ್ಲಿ ಮಾನವ – ವನ್ಯಪ್ರಾಣಿ ಸಂಘರ್ಷ ಕುರಿತಂತೆ ಅರಣ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[24/01, 8:48 PM] Cm Ps: *ನೆಟೆ ರೋಗದಿಂದ ತೊಗರಿ ಬೆಳೆ ನಷ್ಟ: ಹೆಕ್ಟೇರ್ ಗೆ 10 ಸಾವಿರ ಪರಿಹಾರ*
ಬೆಂಗಳೂರು, ಜನವರಿ 24-
ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್ ಗೆ 10,000 ರೂ. ಗಳಂತೆ ಎನ್.ಡಿ.ಆರ್.ಎಫ್./ ಎಸ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಟ 2 ಹೆಕ್ಟೇರ್ಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸಿದೆ.
ಒಟ್ಟು ಪರಿಹಾರ ಮೊತ್ತವು ರೂ. 223 ಕೋಟಿಯೆಂದು ಅಂದಾಜಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂತಿರುಗಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ತೀರ್ಮಾನ ಕೈಗೊಳ್ಳಲಾಯಿತು.
ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಿನಲ್ಲಿ ತಲೆದೋರಿದ ಒಣ/ ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಮೇಲಿನ ಮೂರು ಜಿಲ್ಲೆಗಳಲ್ಲಿ ಉಲ್ಬಣ ಗೊಂಡು ಬೆಳೆಹಾನಿಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ ಜಿಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಒಟ್ಟಾರೆಯಾಗಿ 2.2278 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ತೊಗರಿ ಬೆಳೆ ಸಂಕೀರ್ಣ ನೆಟೆ ರೋಗಕ್ಕೆ ಹಾನಿಯಾಗಿರುವುದು ವರದಿಯಾಗಿರುತ್ತದೆ. ಹಾನಿಗೊಳಗಾದ ರೈತರ ನೆರೆವಿಗೆ ಧಾವಿಸಿದ ಸರ್ಕಾರವು “ವಿಶೇಷ ಪ್ರಕರಣ”ವೆಂದು ರಾಜ್ಯ ಸರ್ಕಾರ ತೀರ್ಮಾನಿಸಿ ಪರಿಹಾರ ಘೋಷಿಸಿದೆ.
[24/01, 9:15 PM] Cm Ps: ತೊಗರಿ ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಣಕಾಸು ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಹಣಕಾಸು ಇಲಾಖೆಯ ಎಸಿಎಸ್ ಐ ಎಸ್ ಎನ್ ಪ್ರಸಾದ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
[24/01, 9:15 PM] Cm Ps: *ತಿ. ನರಸೀಪುರ: ಚಿರತೆಯನ್ನು ಕೂಡಲೇ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ರಚನೆ- ಮುಖ್ಯಮಂತ್ರಿ ಸೂಚನೆ*
ಬೆಂಗಳೂರು, ಜನವರಿ 24- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆ ದಾಳೆ ಪ್ರಕರಣಗಳ ಕುರಿತಂತೆ ಅರಣ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಚರ್ಚಿಸಿ, ಚಿರತೆ ಟಾಸ್ಕ್ ಫೋರ್ಸ್ ರಚಿಸಲು ಸೂಚಿಸಿದರು.
ತಿ. ನರಸೀಪುರ ತಾಲ್ಲೂಕಿನಲ್ಲಿ ಸಂಭವಿಸಿದ ಚಿರತೆ ದಾಳಿ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಈ ಚಿರತೆಯನ್ನು ಕೂಡಲೇ ಸೆರೆ ಹಿಡಿಯಲು ಎಲ್ಲ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಸ್ತುತ ಚಿರತೆ ಸೆರೆ ಹಿಡಿಯಲು 158 ಮಂದಿ ಕೆಲಸ ಮಾಡುತ್ತಿದ್ದಾರೆ. ಕೋಂಬಿಂಗ್ ಆಪರೇಷನ್ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಪ್ರಕರಣ ಸಂಭವಿಸಿದ 3-4 ಕಿ.ಮೀ. ಸುತ್ತಳತೆಯಲ್ಲಿ ಕೋಂಬಿಂಗ್ ಕಾರ್ಯಾಚರಣೆ ನಡೆಸಲು ಸೂಚಿಸಿದರು. ಚಿರತೆ ದಾಳಿಯಿಂದಾಗಿ ತಿ. ನರಸೀಪುರ ತಾಲ್ಲೂಕಿನ 21 ಹಳ್ಳಿಗಳು ಬಾಧಿತವಾಗಿದೆ. ಈ ಹಳ್ಳಿಗಳಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳೀಯರ ನೆರವು ಪಡೆಯುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪಡೆಗಳ ನೆರವು ಪಡೆಯಲು ಸೂಚಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[25/01, 11:51 AM] Cm Ps: ಬೆಂಗಳೂರು, ಜನವರಿ 25: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜಾಲಹಳ್ಳಿ 2ನೇ ಹಂತದ ಹೆಚ್.ಎಂ.ಟಿ. ಮೈದಾನದಲ್ಲಿ ಕೈಮಗ್ಗ-ಜವಳಿ ಮಂತ್ರಾಲಯ, ನವದೆಹಲಿ, ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸಹಕಾರಿ ಕೈಮಗ್ಗ ನೇಕಾರರ ಮಹಾಮಂಡಳಿ ನಿಯಮಿತದ ವತಿಯಿಂದ ಆಯೋಜಿಸಿರುವ “ಹರ್ಷಕಲಾ - ರಾಷ್ಟ್ರೀಯ ಕೈಮಗ್ಗ ಮೇಳ 2023” ಉದ್ಘಾಟಿಸಿದರು.
ಸಕ್ಕರೆ, ಕೈಮಗ್ಗ ಮತ್ತು ಜವಳಿ ಇಲಾಖೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ಸಚಿವ ಮುನಿರತ್ನ, ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷ ಗೌಡ, ಕೈಗಾರಿಕಾ ಇಲಾಖೆಯ ಹಿರಿಯ ಅಧಿಕಾರಿಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[25/01, 12:52 PM] Cm Ps: *ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್* *ಸಿಎಂ ಬೊಮ್ಮಾಯಿ*
ಬೆಂಗಳೂರು, ಜನವರಿ 25: ಅಕ್ರಮ ಹಾಗೂ ಭ್ರಷ್ಟಾಚಾರಕ್ಕೆ ಜನ್ಮ ಕೊಟ್ಟಿದ್ದೇ ಕಾಂಗ್ರೆಸ್ ಎನ್ನುವುದು ಇಡೀ ರಾಷ್ಟ್ರಕ್ಕೆ ತಿಳಿದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹರ್ಷಕಲಾ - ರಾಷ್ಟ್ರೀಯ ಕೈಮಗ್ಗ ಮೇಳ 2023 ನ್ನು ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
ಮತದಾರರ ಓಲೈಕೆಗೆ ಅಕ್ರಮ ಎಸಗುತ್ತಿರುವ ಆರೋಪ ಮಾಡಿರುವ ಕಾಂಗ್ರೆಸ್ ನಾಯಕರು ಬಿಜೆಪಿ ಮುಖಂಡರ ವಿರುದ್ಧ ನಗರದ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ದೂರು ನೀಡಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ಎಷ್ಟು ತಳಮಟ್ಟಕ್ಕೆ ಹೋಗಿದೆ ಎನ್ನಲು ಇದು ಉದಾಹರಣೆ. ಯಾರು ಯಾರು ಹೇಳಿಕೆ ಕೊಡುತ್ತಾರೆ,ಅದಕ್ಕೆ ಸ್ಪಷ್ಟೀಕರಣ ಹಾಗೂ ಉತ್ತರವನ್ನೂ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದವರು ಮಹಿಳೆಯರಿಗೆ ಎರಡು ಸಾವಿರ ರೂ.ಗಳನ್ನು ನೀಡುವುದಾಗಿ ಘೋಷಣೆ ಮಾಡಿದೆ. ಉಚಿತ ವಿದ್ಯುತ್ ನೀಡುವುದಾಗಿಯೂ ಘೋಷಿಸಿದ್ದು, ಪ್ರತಿದಿನ ಒಂದೊಂದು ಘೋಷಣೆ ಮಾಡುತ್ತಿದ್ದಾರೆ. ಈ ಮಾನದಂಡ ಹಾಕಿದರೆ ಅವರೂ ಕೂಡ ಅಪರಾಧಿಗಳಾಗುವುದಿಲ್ಲವೇ? ಅವರೂ ಕೂಡ ಮತದಾರರಿಗಡ್ ಆಸೆ, ಆಮಿಷಗಳನ್ನು ನೀಡುತ್ತಿಲ್ಲವೇ? ಎಂದು ಪ್ರಶ್ನಿಸಿದರು.
*ಮತದಾರರಿಗೆ ಫೋಟೋವುಳ್ಳ ಕುಕ್ಕರ್: ಸಮಗ್ರ ತನಿಖೆ*
ಕಾಂಗ್ರೆಸ್ ನ ನಾಲ್ಕೈದು ಶಾಸಕರು ಅವರ ಚಿತ್ರವುಳ್ಳ ಕುಕ್ಕರ್ ಮತದಾರರಿಗೆ ಕೊಟ್ಟಿರುವುದು ಸಾಕ್ಷಿ ಸಮೇತ ದೊರೆತಿದೆ. ಕುಣಿಗಲ್ ನಲ್ಲಿ ಸಿಕ್ಕು ವಾಣಿಜ್ಯ ತೆರಿಗೆ ಇಲಾಖೆಯವರು ಹಿಡಿದು ನಾಲ್ಕು ಜನರಿಗೆ ದಂಡ ವಿಧಿಸಿದ್ದಾರೆ. ಈ ಬಗ್ಗೆ ಸಮಗ್ರವಾಗಿ ಮಾಹಿತಿ ಪಡೆದು ತನಿಖೆ ಮಾಡಿಸುತ್ತೇವೆ
ಅವರ ಎಲೆಯಲ್ಲಿ ಇಷ್ಟೆಲ್ಲಾ ಇಟ್ಟುಕೊಂಡು ಜನರಲ್ಲಿ ಗೊಂದಲ ಉಂಟು ಮಾಡುವಷ್ಟು ತಳಮಟ್ಟಕ್ಕೆ ಇಳಿದಿದ್ದಾರೆ. ಸೋಲುತ್ತೇವೆ ಎನ್ನುವುದು ಅವರಿಗೆ ಗ್ಯಾರಂಟಿ ಆಗಿದೆ. ಹೀಗಾಗಿ ಈ ರೀತಿ ದೂರು ನೀಡುವುದು ಮಾಡುತ್ತಿದ್ದಾರೆ. ಪೊಲೀಸ್ ಹಾಗೂ ಕಾನೂನು ಇದೆ. ಕಾನೂನಿನ ಪ್ರಕಾರ ಕ್ರಮವಾಗಲಿ. ಈ ರೀತಿಯ ನೂರು ದೂರುಗಳನ್ನು ನಾವು ಅವರ ಮೇಲೆ ನೀಡಬಹುದು. ಅಂತಿಮವಾಗಿ ಜನ ತೀರ್ಮಾನ ಮಾಡುತ್ತಾರೆ. ಜನರಿಗೂ ಗೊತ್ತಿದೆ. ಇವರಿಂಗ ನಾವು ಪಾಠ ಕಲಿಯಬೇಕಿಲ್ಲ. ಅವರು ಏನು ಮಾಡುತ್ತಾರೋ ಮಾಡಲಿ ಎಂದರು.
*ಜನತೆ ಕಾಂಗ್ರೆಸ್ ನ್ನು ಮನೆಗೆ ಕಳುಹಿಸಲಿದ್ದಾರೆ*
ಸುರ್ಜೆವಾಲ ಅವರು ಮಾಡಿರುವ ಆರೋಪದ ಬಗ್ಗೆ ಪ್ರತಿಕ್ರಿಯೆ ನೀಡಿ ಇದು ಬಹಳ ಹಳೆಯದು. ಕಾಂಗ್ರೆಸ್ ಸರ್ಕಾರ ಇದ್ದಾಗ ಶಿಕ್ಷಕರ ನೇಮಕಾತಿ ಯಲ್ಲಿ ಅಕ್ರಮವಾಗಿ ಪರೀಕ್ಷೆಗೆ ಕುಳಿತಿಲ್ಲದವರನ್ನು ಪಾಸ್ ಮಾಡಿರುವ ಬಗ್ಗೆ ತನಿಖೆ ನಡೆಯುತ್ತಿದೆ. ಮೊದಲು ಅದಕ್ಕೆ ಉತ್ತರ ನೀಡಲಿ. ಉದ್ಯೋಗ ಏನಾದರೂ ಮಾರಾಟವಾಗಿದ್ದರೆ ಅದು ಕಾಂಗ್ರೆಸ್ ಕಾಲದಲ್ಲಿ. ಆಗಿದೆಯೋ, ಇಲ್ಲವೋ ಎಂದು ತನಿಖೆಯಲ್ಲಿ ತಿಳಿಯಲಿದೆ. ಕಲಬುರಗಿಯಲ್ಲಿ ಪೊಲೀಸ್ ಪೇದೆಯೊಬ್ಬನನ್ನು ಡಿಐಜಿ ಮಾಡಿ ಆತನ ಮೇಲೆ ಎಫ್.ಐ.ಆರ್ ಮಾಡಿ ನಿವೃತ್ತಿ ಮಾಡಿಸಿದರು. ಇದು ಕಾಂಗ್ರೆಸ್ ನೀತಿ. ಉದ್ಯೋಗ ಮಾರಾಟ ಮಾಡುವುದು ಅಪರಾಧಿಗಳು ಸಿಕ್ಕಾಗ ಅವರನ್ನು ಬಿಡುವುದು ಕಾಂಗ್ರೆಸ್ ಮಾಡಿಕೊಂಡು ಬಂದಿದೆ. ಜನತೆಗೂ ಗೊತ್ತಿದೆ, ಅದಕ್ಕೆ ಅವರನ್ನು ಮನೆಗೆ ಕಳಿಸಿದ್ದಾರೆ. ಈ ಬಾರಿಯೂ ಮನೆಗೆ ಕಲಿಸಲಿದ್ದಾರೆ ಎಂದು ತಿಳಿಸಿದರು.
[25/01, 1:37 PM] Cm Ps: *ಹಾವೇರಿಯಲ್ಲಿ ಎಲ್ಲಾ ನೀರಾವರಿ ಯೋಜನೆಗೆ ಚಾಲನೆ ಕೊಟ್ಟಿದ್ದು ನಮ್ಮ ಸರ್ಕಾರ*:*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜನವರಿ 25:ಬ್ಯಾಡಗಿ, ಹಾನಗಲ್, ಹಾವೇರಿಯಲ್ಲಿ ಎಲ್ಲಾ ನೀರಾವರಿ ಯೋಜನೆಗೆ ಚಾಲನೆ ಕೊಟ್ಟಿದ್ದು ನಮ್ಮ ಸರ್ಕಾರ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಿರೇಕೆರೂರಿನ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಹಿರೇಕೆರೂರಿನಲ್ಲಿ ನೀರಾವರಿ ಸೇರಿದಂತೆ ಅನೇಕ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಚಾಲನೆ ನೀಡುತ್ತಿದ್ದೇವೆ. ಈ ಭಾಗದ ನೀರಾವರಿಗೆ ಬಹಳ ದಿನಗಳ ಬೇಡಿಕೆಯಿತ್ತು. ಸಚಿವ ಬಿ.ಸಿ ಪಾಟೀಲರ ಒತ್ತಾಸೆಯಂತೆ ನಿಕಟಪೂರ್ವ ಮುಖ್ಯಮಂತ್ರಿ ಬಿ ಎಸ್. ಯಡಿಯೂರಪ್ಪ ಅವರು ಅನುಮೋದನೆ ನೀಡಿದ್ದು, ನಾವು ಚಾಲನೆ ನೀಡುತ್ತಿದ್ದೇವೆ ಎಂದರು.
*ಜನಸಂಕಲ್ಪ ಯಾತ್ರೆ*
ಜನಸಂಕಲ್ಪ ಯಾತ್ರೆಯ ಮುಂದುವರೆದ ಭಾಗ ಪ್ರಾರಂಭಿಸಿದ್ದೇವೆ. ಬಿ ಎಸ್. ಯಡಿಯೂರಪ್ಪ ಅವರು ಕೂಡ ಆಗಮಿಸಿದ್ದಾರೆ. ಜನಸಂಕಲ್ಪ ಯಾತ್ರೆ ವಿಜಯಸಂಕಲ್ಪಯಾತ್ರೆಯಾಗಲಿದೆ.
*ಬಿಜೆಪಿ ಎ ಟೀಂ*
ಜೆಡಿಎಸ್ ಅವರು ಕಾಂಗ್ರೆಸ್ ಬಿಜೆಪಿ ಟೀಂ ಎನ್ನುತ್ತಾರೆ. ಕಾಂಗ್ರೆಸ್ ನವರು ಜೆಡಿಎಸ್ ಹಾಗೂ ಬಿಜೆಪಿ ಟೀಂ ಎನ್ನುತ್ತಾರೆ. ನಾವು ಎ ಟೀಂ ಎಂದು ಇಬ್ಬರೂ ಒಪ್ಪುತ್ತಾರೆ. ಯಾವಾಗ ಅವರು ಬಿ ಟೀಂ ಆಗುತ್ತಾರೆ ಎನ್ನುವುದು ಅವರಿಗೆ ಬಿಟ್ಟಿದ್ದು. ನಮಗೆ ಎ , ಬಿ ಎನ್ನುವುದಕ್ಕಿಂತ ಜನತೆಯ ಟೀಂ ಎಂದರು.
*ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ*
ಬಿಜೆಪಿ ಭ್ರಷ್ಟಾಚಾರದ ಬಗ್ಗೆ ಕಾಂಗ್ರೆಸ್ ದೂರು ದಾಖಲಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಇದು ಅತ್ಯಂತ ಕೀಳು ಮಟ್ಟದ್ದು. ಹೇಳಿಕೆ ಕೊಟ್ಟವರು ಅದಕ್ಕೆ ಸ್ಪಷ್ಟೀಕರಣ ಕೊಡುತ್ತಾರೆ. ಮೊನ್ನೆ ದಿಗ್ವಿಜಯ ಸಿಂಗ್ ಅವರು ಒಂದು ಹೇಳಿಕೆ ಕೊಟ್ಟಿದ್ದಾರೆ. ನಿನ್ನೆ ರಾಹುಲ್ ಗಾಂಧಿ ಅವರು ಹೇಳಿಕೆ ನೀಡಿದ್ದು, ಯಾರಾದರೂ ಹೇಳಿಕೆ ನೀಡಿದರೆ. ಅದಕ್ಕೆ ಸರ್ಕಾರ ಜವಾಬ್ದಾರಿಯಲ್ಲ. ವೈಯಕ್ತಿಕವಾಗಿ ಅವರೇ ಜವಾಬ್ದಾರರು ಎಂದು ಸುಪ್ರೀಂಕೋರ್ಟ್ ತೀರ್ಪು ಕೂಡ ಬಂದಿದೆ. ಇದೆಲ್ಲ ಗೊತ್ತಿದ್ದು, ಕೇವಲ ರಾಜಕೀಯ ಕಾರಣಕ್ಕೆ, ಸೋಲು ಗ್ಯಾರಂಟಿಯಾಗಿರವ ಕಾರಣ ಸುಳ್ಳು ಹಾಗೂ ರಾಜಕೀಯ ಪ್ರೇರಿತ ಆರೋಪಗಳನ್ನು ಮಾಡಿ ಜನರ ದಾರಿ ತಪಿಲಿಸುವ ಸಣ್ಣ ಪ್ರಯತ್ನ. ಆದ್ರೆ ಜನಕ್ಕೆ ಇದೆಲ್ಲಾ ಗೊತ್ತಿದೆ. ಮುಂದೆ ಇನ್ನೂ ಪ್ರಯತ್ನ ಮಾಡುತ್ತಾರೆ. ದೇಶದಲ್ಲಿ ಕಾನೂನಿದೆ. ಆ ಕಾನೂನಿನ ಪ್ರಕಾರ ಎಲ್ಲವೂ ನಡೆಯಲಿದೆ ಎಂದರು. ಕಾಂಗ್ರೆಸ್ ಶಾಸಕರು ಮತದಾರರಿಗೆ ಆಮಿಷ ಒಡ್ಡುವಾಗ ಸಿಕ್ಕಿಹಾಕಿಕೊಂಡಿದ್ದಾರೆ. ಅವರ ಬಗ್ಗೆ ಇವರು ಏನೂ ಮಾತನಾಡುವುದಿಲ್ಲ. ಕಾಂಗ್ರೆಸ್ ಎಂದರೆ ಪ್ರೆಶರ್ ಕುಕ್ಕರ್ ಪಕ್ಷ. ಅಲ್ಲಿ ಬಾಂಬ್ ಕುಕ್ಕರ್ ಇಲ್ಲಿ ಪ್ರೆಶರ್ ಕುಕ್ಕರ್. ಚುನಾವಣೆ ಸಮಯದಲ್ಲಿ ಪ್ರೆಶರ್ ಕುಕ್ಕರ್ ಕೊಟ್ಟು ಗೆಲ್ಲುವುದು. ಹೀಗಾಗಿ ಅವರಿಗೆ ಕುಕ್ಕರ್ ಮೇಲೆ ಬಹಳ ಪ್ರೀತಿ. ಅದರಲ್ಲಿ ಬಾಂಬ್ ಇಟ್ಟರೂ ಅಲ್ಲ ಪ್ರೆಶರ್ ಕುಕ್ಕರ್ ಎನ್ನುತ್ತಾರೆ. ಈ ರೀತಿಯ ದೊಂಬರಾಟದಿಂದ ಯಾವುದೇ ಸಹಾಯವಾಗುವುದಿಲ್ಲ. ಕಾಂಗ್ರೆಸ್ ರಾಜಕೀಯವಾಗಿ ದಿವಾಳಿಯಾಗಿದ್ದಾರೆ ಎಂದರು.
*ದೇಶದ ಮೊದಲ ಭ್ರಷ್ಟಾಚಾರದ ಹಗರಣ ಪ್ರಾರಂಭವಾಗಿದ್ದು ಕಾಂಗ್ರೆಸ್ ಪಕ್ಷದಿಂದ*
ಬೊಮ್ಮಾಯಿ ಭ್ರಷ್ಟಾಚಾರದ ಪಿತಾಮಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಉತ್ತರಿಸಿ ಈ ದೇಶದ ಮೊದಲ ಭ್ರಷ್ಟಾಚಾರದ ಜೀಪ್ ಹಗರಣ ಪ್ರಾರಂಭವಾಗಿದ್ದು ಕಾಂಗ್ರೆಸ್ ಪಕ್ಷದಿಂದ. ಅಂದಿನ ರಕ್ಷಣಾ ಸಚಿವರು ರಾಜೀನಾಮೆ ನೀಡಬೇಕಾಗಿ ಬಂತು. ಸ್ವಾತಂತ್ರ್ಯ ಬಂದ ನಂತರದಲ್ಲಿ ಭ್ರಷ್ಟಾಚಾರ ಅಲ್ಲಿಂದ ಪ್ರಾರಂಭವಾಯಿತು. ಭ್ರಷ್ಟಾಚಾರ ಕಾಂಗ್ರೆಸ್ ನ ಅವಿಭಾಜ್ಯ ಅಂಗ. ಡಿ.ಕೆ.ಶಿವಕುಮಾರ್ ಬಹಳ ಸ್ವಚ್ಛ ಮನುಷ್ಯ. ಅವರಷ್ಟು ಸ್ವಚ್ಛ ಮನುಷ್ಯ ರಾಜಕಾರಣದಲ್ಲಿ ಯಾರು ಇಲ್ಲ ಎಂದು ವ್ಯಂಗ್ಯವಾಡಿದರು.
[25/01, 2:29 PM] Cm Ps: ಹಾವೇರಿ ( *ಹಿರೇಕೆರೂರು* ), ಜನವರಿ 25: *ಮಾನ್ಯ* *ಮುಖ್ಯಮಂತ್ರಿ ಶ್ರೀ ಬಸವರಾಜ* *ಬೊಮ್ಮಾಯಿ* ಅವರು *ಜಿಲ್ಲಾಡಳಿತ ಹಾಗೂ ಜಿಲ್ಲಾ* *ಪಂಚಾಯತ್ ಹಾವೇರಿ,* *ಜಲ ಸಂಪನ್ಮೂಲ* ಇಲಾಖೆ, *ಗ್ರಾಮೀಣಾಭಿವೃದ್ಧಿ ಮತ್ತು* *ಪಂಚಾಯತ್ ರಾಜ್* ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದೊಂದಿಗೆ *ತಾಲ್ಲೂಕು ಕ್ರೀಡಾಂಗಣದಲ್ಲಿ* ಆಯೋಜಿಸಿರುವ *ಹಿರೇಕೆರೂರು* ಮತ್ತು *ಬ್ಯಾಡಗಿ ತಾಲ್ಲೂಕಿನ 56* ಕೆರೆಗಳಿಗೆ *ವರದಾ ನದಿಯಿಂದ* ನೀರನ್ನು ತುಂಬಿಸುವ ಮಡ್ಲೂರು ಏತ ನೀರಾವತಿ ಯೋಜನೆಯ ಲೋಕಾರ್ಪಣೆ, ರಟ್ಟಿಹಳ್ಳಿ *ತಾಲ್ಲೂಕಿನ 7 ಕೆರೆಗಳಿಗೆ* *ತುಂಗ್ರಭದ್ರಾ ನದಿಯಿಂದ ನೀರನ್ನು* ತುಂಬಿಸುವ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆ ಶಂಕುಸ್ಥಾಪನೆ, ಹಾಗೂ *ಹಿರೇಕೆರೂರು ಮತ್ತು ರಟ್ಟೀಹಳ್ಳಿಯ* ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನಾ *ಕಾರ್ಯವನ್ನು ನೆರವೇರಿಸಿ* ಮಾತನಾಡಿದರು.
[25/01, 2:36 PM] Cm Ps: ಹಾವೇರಿ ಜಿಲ್ಲೆಯ ಹಿರೆಕೆರೂರಿನಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಸಚಿವರಾದ ಬಿ.ಸಿ.ಪಾಟೀಲ್, ಬಿ.ಶ್ರೀರಾಮುಲು, ಸಂಸದ ಶಿವಕುಮಾರ ಉದಾಸಿ, ಶಾಸಕರಾದ ನೆಹರು ಓಲೆಕಾರ್, ವಿರೂಪಾಕ್ಷಪ್ಪ ಬಳ್ಳಾರಿ, ಅರುಣ್ ಕುಮಾರ್ ಪೂಜಾರಿ ಹಾಗೂ ಮತ್ತಿತರ ನಾಯಕರು ಹಾಜರಿದ್ದರು.
[25/01, 4:12 PM] Cm Ps: *ರಟ್ಟೀಹಳ್ಳಿ ಮತ್ತು ಹಿರೇಕೆರೂರು ತಾಲ್ಲೂಕಗಳ ಅಭಿವೃದ್ಧಿಗೆ ಸರ್ಕಾರ ಬದ್ಧ:*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹಾವೇರಿ, ಜನವರಿ 25: ರಟ್ಟೀಹಳ್ಳಿ ಮತ್ತು ಹಿರೇಕೆರೂರು ತಾಲ್ಲೂಕಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಿರೇಕೆರೂರು ಮತ್ತು ಬ್ಯಾಡಗಿ ತಾಲ್ಲೂಕಿನ 56 ಕೆರೆಗಳಿಗೆ ವರದಾ ನದಿಯಿಂದ ನೀರು ತುಂಬಿಸುವ ಮಡ್ಲೂರು ಏತ ನೀರಾವರಿ ಯೋಜನೆಯ ಲೋಕಾರ್ಪಣೆ, ರಟ್ಟಿಹಳ್ಲಿ ತಾಲ್ಲೂಕಿನ 7 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ, ಹಾಗೂ ಹಿರೇಕೆರೂರು ಮತ್ತು ರಟ್ಟೀಹಳ್ಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
*ಅಭಿವೃದ್ಧಿ ಚಿತ್ರಣವೇ ಬದಲಾಗಿದೆ*
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹಿರೇಕೆರೂರು ತಾಲ್ಲೂಕಿನ ಅಭಿವೃದ್ಧಿಗೆ ಭದ್ರ ಬುನಾದಿಯನ್ನು ಹಾಕಿದವರು. ಅವರ ಕಾಲದಲ್ಲಿ ಪ್ರಾರಂಭವಾದ ಸರ್ವಜ್ಞ ಏತನೀರಾವರಿ, ಕೆರೆ ತುಂಬಿಸುವ ಯೋಜನೆ ಹಾಗೂ ಜಲಜೀವನ್ ಮಿಷನ್ ಯೋಜನೆಗಳು, ಇವೆಲ್ಲಕ್ಕೂ ಇಂದು ಚಾಲನೆ ಹಾಗೂ ಉದ್ಘಾಟನೆಯನ್ನು ಮಾಡುತ್ತಿದ್ದೇವೆ. ಈ ಕಾರ್ಯಕ್ರಮದ ರೂವಾರಿ ಸಚಿವ ಬಿ.ಸಿ.ಪಾಟೀಲರು. ಅವರ ನೇತೃತ್ವದಲ್ಲಿ ಹಿರೇಕೆರೂರು ತಾಲ್ಲೂಕಿನ ಅಭಿವೃದ್ಧಿ ಚಿತ್ರಣವೇ ಬದಲಾಗಿದೆ. ಸುಮಾರು 25-30 ವರ್ಷಗಳ ಬೇಡಿಕೆಗಳನ್ನು ಈ ಅವಧಿಯಲ್ಲಿ ಪೂರ್ಣ ಮಾಡಿದ್ದಾರೆ. ರಾಜಿನಾಮೆ ನೀಡಿದಾಗ ಈ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡ ಪ್ರತಿಜ್ಞೆಯನ್ನು ಅವರು ನಡೆಸಿಕೊಟ್ಟಿದ್ದಾರೆ. ಮಾತಿನಂತೆ ನಡೆದುಕೊಂಡ ಧೀಮಂತ ನಾಯಕರು ಬಿ.ಸಿ.ಪಾಟೀಲರು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಬಿ.ಸಿ. ಪಾಟೀಲ್, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
.
[25/01, 4:29 PM] Cm Ps: *ರಟ್ಟೀಹಳ್ಳಿ ಮತ್ತು ಹಿರೇಕೆರೂರು ತಾಲ್ಲೂಕಗಳ ಅಭಿವೃದ್ಧಿಗೆ ಸರ್ಕಾರ ಬದ್ಧ:*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹಾವೇರಿ, ಜನವರಿ 25: ರಟ್ಟೀಹಳ್ಳಿ ಮತ್ತು ಹಿರೇಕೆರೂರು ತಾಲ್ಲೂಕಗಳ ಅಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಿರೇಕೆರೂರು ಮತ್ತು ಬ್ಯಾಡಗಿ ತಾಲ್ಲೂಕಿನ 56 ಕೆರೆಗಳಿಗೆ ವರದಾ ನದಿಯಿಂದ ನೀರು ತುಂಬಿಸುವ ಮಡ್ಲೂರು ಏತ ನೀರಾವರಿ ಯೋಜನೆಯ ಲೋಕಾರ್ಪಣೆ, ರಟ್ಟಿಹಳ್ಲಿ ತಾಲ್ಲೂಕಿನ 7 ಕೆರೆಗಳಿಗೆ ತುಂಗಭದ್ರಾ ನದಿಯಿಂದ ನೀರು ತುಂಬಿಸುವ ಯೋಜನೆ ಹಾಗೂ ಬಹುಗ್ರಾಮ ಕುಡಿಯುವ ನೀರು ಪೂರೈಕೆ ಯೋಜನೆಗೆ ಶಂಕುಸ್ಥಾಪನೆ, ಹಾಗೂ ಹಿರೇಕೆರೂರು ಮತ್ತು ರಟ್ಟೀಹಳ್ಳಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.
*ಅಭಿವೃದ್ಧಿ ಚಿತ್ರಣವೇ ಬದಲಾಗಿದೆ*
ನಿಕಟಪೂರ್ವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಹಿರೇಕೆರೂರು ತಾಲ್ಲೂಕಿನ ಅಭಿವೃದ್ಧಿಗೆ ಭದ್ರ ಬುನಾದಿಯನ್ನು ಹಾಕಿದವರು. ಅವರ ಕಾಲದಲ್ಲಿ ಪ್ರಾರಂಭವಾದ ಸರ್ವಜ್ಞ ಏತನೀರಾವರಿ, ಕೆರೆ ತುಂಬಿಸುವ ಯೋಜನೆ ಹಾಗೂ ಜಲಜೀವನ್ ಮಿಷನ್ ಯೋಜನೆಗಳು, ಇವೆಲ್ಲಕ್ಕೂ ಇಂದು ಚಾಲನೆ ಹಾಗೂ ಉದ್ಘಾಟನೆಯನ್ನು ಮಾಡುತ್ತಿದ್ದೇವೆ. ಈ ಕಾರ್ಯಕ್ರಮದ ರೂವಾರಿ ಸಚಿವ ಬಿ.ಸಿ.ಪಾಟೀಲರು. ಅವರ ನೇತೃತ್ವದಲ್ಲಿ ಹಿರೇಕೆರೂರು ತಾಲ್ಲೂಕಿನ ಅಭಿವೃದ್ಧಿ ಚಿತ್ರಣವೇ ಬದಲಾಗಿದೆ. ಸುಮಾರು 25-30 ವರ್ಷಗಳ ಬೇಡಿಕೆಗಳನ್ನು ಈ ಅವಧಿಯಲ್ಲಿ ಪೂರ್ಣ ಮಾಡಿದ್ದಾರೆ. ರಾಜಿನಾಮೆ ನೀಡಿದಾಗ ಈ ಕ್ಷೇತ್ರದ ಅಭಿವೃದ್ಧಿಗೆ ಕೈಗೊಂಡ ಪ್ರತಿಜ್ಞೆಯನ್ನು ಅವರು ನಡೆಸಿಕೊಟ್ಟಿದ್ದಾರೆ. ಮಾತಿನಂತೆ ನಡೆದುಕೊಂಡ ಧೀಮಂತ ನಾಯಕರು ಬಿ.ಸಿ.ಪಾಟೀಲರು ಎಂದರು.
ಈ ಸಂದರ್ಭದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಬಿ.ಸಿ. ಪಾಟೀಲ್, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.
.
[25/01, 6:30 PM] Cm Ps: *ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಭಾಜಪದ ಗಟ್ಟಿ ಬೇರುಗಳನ್ನು ಅಲುಗಾಡಿಸಲು ಸಾಧ್ಯವಿಲ್ಲ:*
*ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹಾವೇರಿ(ಹಿರೇಕೆರೂರು), ಜನವರಿ 25: ಭಾಜಪ ಇಡೀ ಕರ್ನಾಟಕದಲ್ಲಿ ಅತ್ಯಂತ ಆಳವಾಗಿ ಬೇರೂರಿರುವ ಪಕ್ಷ. ಕಾಂಗ್ರೆಸ್ ತಿಪ್ಪರಲಾಗ ಹಾಕಿದರೂ ಭಾಜಪದ ಸಣ್ಣ ಎಲೆಯನ್ನೂ, ನಮ್ಮ ಗಟ್ಟಿ ಬೇರುಗಳನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಿರೇಕೆರೂರು ತಾಲ್ಲೂಕಿನಲ್ಲಿ ಭಾಜಪ ವತಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ವಿಶ್ವದಲ್ಲಿಯೇ ಅತಿ ಹೆಚ್ಚು ಕಾರ್ಯಕರ್ತರನ್ನು ಹೊಂದಿರುವ ಪಕ್ಷ. ಬೂತಿನಿಂದ ಹಿಡಿದು ರಾಜ್ಯ ಮಟ್ಟದವರೆಗೂ ಸಂಘಟಿತವಾಗಿರುವ ಪಕ್ಷ. ಭಾಜಪಕ್ಕೆ ವಿಶ್ವಮಾನ್ಯ ನಾಯಕ ನರೇಂದ್ರ ಮೋದಿಯವರ ನಾಯಕತ್ವವಿದೆ. ಭಾಜಪದ ಡಬಲ್ ಇಂಜಿನ್ ಸರ್ಕಾರವಿದೆ. ಯು.ಬಿ.ಬಣಕಾರ್ ಕಾಂಗ್ರೆಸ್ ಸೇರಿದ್ದಾರೆ. ಅವರ ಸಮಯ ಸರಿಯಿಲ್ಲ. ಯಡಿಯೂರಪ್ಪ ನವರು ರಾಜಕೀಯ ಬೆಂಬಲ ನೀಡಿದವರು. ಅಧಿಕಾರವಿಲ್ಲದಾಗಲೂ ಉಗ್ರಾಣ ನಿಗಮದ ಅಧ್ಯಕ್ಷ ಸ್ಥಾನ ನೀಡಿ ಸಚಿವ ಸಂಪುಟದ ಸ್ಥಾನ ನೀಡಿ ಗೌರವ ನೀಡಿದ್ದರು. ಭಾಜಪದಿಂದ ಇದೆಲ್ಲವನ್ನೂ ಮಾಡಲು ಸಾಧ್ಯವಾಗಿದೆ. ಆದರೆ ಯಾವ ಪಕ್ಷ ಅವರಿಗೆ ಸ್ಥಾನಮಾನ ಕೊಟ್ಟಿತ್ತೋ, ಆ ಪಕ್ಷವನ್ನು ಬಿಟ್ಟು, ಯಾವ ಪಕ್ಷವನ್ನು ನಿರಂತರವಾಗಿ ವಿರೋಧ ಮಾಡಿಕೊಂಡು ಬಂದಿದ್ದರೋ ಅದೇ ಪಕ್ಷವನ್ನು ಸೇರಿದ್ದಾರೆ. ಅವರಿಗೆ ಒಳ್ಳೆಯದಾಗಲಿ. ಆದರೆ ಜನ ಈ ಬಗ್ಗೆ ತೀರ್ಮಾನ ಮಾಡಲಿ. ರಾಜಕಾರಣ ಎಂದರೆ ಅಭಿವೃದ್ಧಿ. ಬಿ.ಸಿ.ಪಾಟೀಲರು ಮೊದಲು ಬಾರಿಗೆ ಆಯ್ಕೆಯಾಗಿ ಬಂದಾಗ ಶಪಥ ತೊಟ್ಟಂತೆ ಅಭಿವೃದ್ಧಿ ಮಾಡಿದ್ದಾರೆ. ಅವರು ಶಾಸಕರು ಅಥವಾ ಮಂತ್ರಿಗಳಾದಾಗ ಈ ಕ್ಷೇತ್ರ ಅಭಿವೃದ್ಧಿಯಾಗುತ್ತದೆ ಎಂದರು.
ಹಿರೇಕೆರೂರು ಅಭಿವೃದ್ಧಿಯಲ್ಲಿ ಬಿ.ಸಿ.ಪಾಟೀಲರದ್ದು ಸಿಂಹಪಾಲು
ಈ ಸಂಕಲ್ಪ ಯಾತ್ರೆ 2023 ರ ಚುನಾವಣೆಯ ವಿಜಯ ಸಂಕಲ್ಪ ಯಾತ್ರೆ. ಸಚಿವ ಬಿ.ಸಿ.ಪಾಟೀಲರು ಶಾಸಕರಿದ್ದಾಗ ಈ ತಾಲ್ಲೂಕಿನ ಅಭಿವೃದ್ಧಿ ಹೇಗಿತ್ತು. ಅವರು ಇಲ್ಲದಿದ್ದಾಗ ಅಭಿವೃದ್ಧಿ ಹೇಗಿದೆ ಎಂದು ಯೋಚಿಸಿದರೆ ಈ ತಾಲ್ಲೂಕಿನ ಅಭಿವೃದ್ಧಿಯಲ್ಲಿ ಸಿಂಹಪಾಲು ಬಿ.ಸಿ.ಪಾಟೀಲರದ್ದು. ಅವರಿಗೆ ರೈತರ ಮೇಲೆ ಅಪಾರವಾದ ಪ್ರೀತಿ ವಿಶ್ವಾಸವಿದೆ. ಅವರು ವಿರೋಧಪಕ್ಷದಲ್ಲಿ ಇದ್ದಾಗ ರೈತರ ಪರವಾಗಿ ಹೋರಾಟ ಮಾಡಿ ರೈತರಿಗೆ ನ್ಯಾಯಸಮ್ಮತವಾದ ಪರಿಹಾರ ದೊರಕಿಸಲು ಒಂದು ತಿಂಗಳು ಬೆಳಗಾವಿ ಜೈಲಿನಲ್ಲಿದ್ದರು. ಅವರೊಂದಿಗೆ ಜೈಲಿಗೆ ಹೋದವರ ಮನೆ ಮನೆಗೆ ತೆರಳಿ ಆತ್ಮಸ್ಥೈರ್ಯ ತುಂಬಿ ರೈತಯೋಗ ಎಂದು ಹೆಸರಿಟ್ಟಿದ್ದರು ಎಂದರು.
*ಅಭಿವೃದ್ಧಿಯ ಪರ ಮತ್ತು ವಿರೋಧ ಶಕ್ತಿಗಳ ನಡವೆ ಸಂಘರ್ಷ*
ಈ ತಾಲ್ಲೂಕಿನಲ್ಲಿ ಯಾವುದೇ ಅಭಿವೃದ್ಧಿಗೆ ಕಲ್ಲುಹಾಕುವ ಕೆಲಸ ಮಾಡುವ ಇನ್ನೊಂದು ವರ್ಗವಿದೆ. ಸಕ್ಕರೆ ಕಾರ್ಖಾನೆ ಮಾಡಲು, ರಸ್ತÉಗಳ ಅಭಿವೃದ್ದಿಗೆ ಕ್ಯಾತೆ, ರೈತರಿಗೆ ನ್ಯಾಯ ಕೊಡಿಸಬೇಕೆಂದರೆ ಕ್ಯಾತೆ ತೆಗೆದು. ಅಭಿವೃದ್ಧಿಗೆ ವಿರೋಧವಾದ ಶಕ್ತಿ. ಅಭಿವೃದ್ಧಿಯ ಪರ ಮತ್ತು ವಿರೋಧ ಶಕ್ತಿಗಳ ನಡವೆ ಸಂಘರ್ಷ ಆಗುತ್ತದೆ. ತಾವೆಲ್ಲರೂ ನಿಮ್ಮ ಮಕ್ಕಳು ಹಾಗೂ ತಾಲ್ಲೂಕಿನ ಭವಿಷ್ಯಕ್ಕಾಗಿ ಅಭಿವೃದ್ಧಿ ಪರವಾಗಿ ಅಂದರೆ ಬಿಜೆಪಿಗೆ ಮತ ಹಾಕಬೇಕು ಎಂದರು.
*ಕಾಂಗ್ರೆಸ್ ತನ್ನ 10 ವರ್ಷಗಳ ಆಡಳಿತದಲ್ಲಿ ನೀರು ಕೊಡಲಿಲ್ಲ*
ಕಾಂಗ್ರೆಸ್‍ನವರು ಮೊದಲ ಬಾರಿಗೆ ಹಾವೇರಿಯಲ್ಲಿ ಸಭೆ ನಡೆಸಿ, ಬಿಜೆಪಿ ಈ ಜಿಲ್ಲೆಯ ಅಭಿವೃದ್ಧಿಯನ್ನೇ ಮಾಡಿಲ್ಲ ಎಂದಿದ್ದಾರೆ. ಸಿದ್ಧರಾಮಯ್ಯನವರು 5 ವರ್ಷ ಮುಖ್ಯಮಂತ್ರಿಗಳಾಗಿದ್ದರು. ಬಿ.ಎಸ್ ಯಡಿಯೂರಪ್ಪ ಅವರು ಹಾವೇರಿಗೆ ವೈದ್ಯಕೀಯ ಕಾಲೇಜುನ್ನು ಮಂಜೂರು ಮಾಡಿದರು. 2012 ರಲ್ಲಿ ಉದಾಸಿಯವರು ಹಾಗೂ ನಾನು ಸೇರಿ ಹಾವೇರಿಗೆ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿ ಅನುಮೋದನೆಯನ್ನೂ ಮಾಡಿಸಿದ್ದೆವು. ಸಿದ್ದರಾಮಯ್ಯ 2013 ರಲ್ಲಿ ಮುಖ್ಯಮಂತ್ರಿಗಳಾದÀ ಕೂಡಲೇ ಹಾವೇರಿಯ ವೈದ್ಯಕೀಯ ಕಾಲೇಜನ್ನು ಕಿತ್ತು ಗದಗ್ ಜಿಲ್ಲೆಗೆ ವರ್ಗಾವಣೆ ಮಾಡಿದರು. ಇದು ಅವರ ಕೊಡುಗೆ. ಭದ್ರಾ ಮೇಲ್ದಂಡೆ ಯೋಜನೆಯಡಿ ಈ ಭಾಗಕ್ಕೆ ನೀರು ಕೊಡಲು ಕಾಂಗ್ರೆಸ್ಸಿಗೆ 10 ವರ್ಷಗಳ ಆಡಳಿತದಲ್ಲಿ ಸಾಧ್ಯವಾಗಿರಲಿಲ್ಲ. ತುಂಗಾ ಮೇಲ್ದಂಡೆ ಯೋಜನಯೆಯಡಿ 1 ಲಕ್ಷ ಎಕರೆ ಪ್ರದೇಶಕ್ಕೆ ಹಾವೇರಿ ಜಿಲ್ಲೆಯ ಹಿರೇಕೆರೂರು, ರಾಣೆಬೆನ್ನೂರು, ಹಾವೇರಿ, ಹಾನಗಲ್ ತಾಲ್ಲೂಕುಗಳಿಗೆ ನೀರಾವರಿ ಯೋಜನೆ ನೀಡಲಾಗಿದೆ. ಸಿದ್ಧರಾಮಯ್ಯ ಅವರು ಇಲ್ಲಿಗೆ ಬಂದು ನೋಡಬೇಕು. ನಮ್ಮದೇ ಆದ ಡೈರಿ ಇರಬೇಕು ಎಂದು ಬಹಳ ದಿನಗಳ ಬೇಡಿಕೆಯಾಗಿತ್ತು. ಕಾಂಗ್ರೆಸ್ ಸರ್ಕಾರವಿದ್ದಾಗ ನಮ್ಮ ಹಾಲು ಉತ್ಪಾದಕರಿಗೆ ಸರಿಯಾದ ಬೆಲೆ ಸಿಗಬೇಕು ಎಂದು ಹೋರಾಟ ಮಾಡಿದ್ದೆವು. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಗಿದ್ದಾಗ ಡೈರಿಗೆ ಅನುಮೋದನೆ ದೊರೆತು. ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ 100 ಕೋಟಿ ರೂ.ಗಳನ್ನು ಒದಗಿಸಿ, ಹಾವೇರಿ ಮೆಗಾ ಡೈರಿಯನ್ನು ಉದ್ಘಾಟಿಸುತ್ತಿದ್ದೇವೆ. ಸಿದ್ಧರಾಮಯ್ಯ ಅವರು ಕೂಡ ಬರಬಹುದು ಎಂದು ವ್ಯಂಗವಾಡಿದರು.
*ಕಾಂಗ್ರೆಸ್ ಹತಾಶಗೊಂಡಿದೆ*
ಕಾಂಗ್ರೆಸ್ ಪಕ್ಷಕ್ಕೆ ಸೋಲು ಗ್ಯಾರಂಟಿಯಾಗಿ ಅವರು ಹತಾಶರಾಗಿದ್ದಾರೆ. ಸ್ವಜನಪಕ್ಷಪಾತದಿಂದ ಕೂಡಿ, ದೌರ್ಭಾಗ್ಯದ ಯೋಜನೆಗಳನ್ನು ನೀಡಿದ ಕಾರಣ ಅವರನ್ನು ಮನೆಗೆ ಕಳುಹಿಸಲಾಗಿತ್ತು. ಅನ್ನಭಾಗ್ಯ ಯೋಜನೆಯಲ್ಲಿ 30 ರೂ. ನರೇಂದ್ರ ಮೋದಿಯವರ ಅಕ್ಕಿ, 3 ರೂ.ಗಳ ಚೀಲದಲ್ಲಿ ಇವರ ಫೋಟೋ ಹಾಕಿದ್ದಾರೆ. ಇವರು ಮುನ್ನವೂ ಪ್ರತಿ ಕುಟುಂಬಕ್ಕೆ 30 ಕೆ,ಜಿ ಅಕ್ಕಿ ಸಿಗುತ್ತಿತ್ತು. ಅದನ್ನು 7 ಕೆ.ಜಿಗೆ ಇಳಿಸಿದರು. ಒಂದೇ ವರ್ಷ 7 ಕೆಜಿ ಕೊಟ್ಟು ಆಮೇಲೆ 4 ಕೆಜಿ ಅಕ್ಕಿ ನೀಡಿದರು. ಚುನಾವಣೆ ಹತ್ತಿರ ಬಂದಾಗ ಪುನ: 7 ಕೆ.ಜಿಗೆ ಏರಿಸಿದರು. ಈ ರೀತುಯ ಮೋಸ ಮಾಡುವ ಸರ್ಕಾರ ಎಮದೂ ನೋಡಿರಲಿಲ್ಲ. ಜನರಿಗೆ ಮೋಸ ಮಾಡಿ ದಾರಿ ತಪ್ಪಿಸುವ ಇವರಿಗೆ ನಾಚಿಕೆಯಾಗಬೇಕು.ಅನ್ನದಲ್ಲಿ ಕನ್ನ ಹಾಕಿದರು. ಇದನ್ನು ತನಿಖೆ ಮಾಡುತ್ತಿದ್ದ ಹಿರಿಯ ಅಧಿಕಾರಿಯೊಬ್ಬರು ಉತ್ತರ ಪ್ರದೇಶದಲ್ಲಿ ನಿಗೂಢ ರೀತಿಯಲ್ಲಿ ಸಾವನ್ನಪ್ಪಿದ್ಧರು ಎಂದರು.
*ಭ್ರಷ್ಟಾಚಾರದ ಹಗರಣಗಳು.*
ದೀನದಲಿತರ ಹಾಸಿಗೆ ದಿಂಬಿನಲ್ಲಿ ಭ್ರಷ್ಟಾಚಾರ ಮಾಡಿದರು. ಸಣ್ಣ ನೀರಾವರಿಯಲ್ಲಿ 40 ಕೋಟಿ ಗಿಂತ ಹೆಚ್ಚು ಹಣವನ್ನು ಒಂದೇ ತಾಲ್ಲೂಕಿನಲ್ಲಿ ಕೆಲಸ ಮಾಡದೇ ಬಿಲ್ಲು ತೆಗದರು. ಅಧಿಕಾರಿಗಳು ಇದಕ್ಕಾಗಿ ಅಮಾನತುಗೊಂಡರು. ಎಲ್ಲಿ ಕೈಹಾಕಿದರಲ್ಲಿ ಭ್ರಷ್ಟಾಚಾರದ ಹಗರಣಗಳು. ಸುಮಾರು 59 ಪ್ರಕರಣಗಳನ್ನು ಮುಚಗ್ಚಿಹಾಕಲು ಲೋಕಾಯುಕ್ತವನ್ನೇ ಮುಚ್ಚಿಹಾಕಿದರು. ಒಂದು ಸ್ವತಂತ್ರ ಸಂಸ್ಥೆಯನ್ನು ಮುಚ್ಚಿಹಾಕಿ ಕೈಗೊಂಬೆಯಾಗಿರುವ ಎಸಿಬಿ ಪ್ರಾರಂಭಿಸಿದರು. ನಾವು ಪುನ: ಲೋಕಾಯುಕ್ತವನ್ನು ಪ್ರಾರಂಭ ಮಾಡಿದ್ದು 59 ಪ್ರಕರಣಗಳನ್ನು ಲೋಕಾಯುಕ್ತಕ್ಕೆ ನೀಡುತ್ತಿದ್ದೇವೆ. ಕಾಂಗ್ರೆಸ್ ಬಣ್ಣ ಬಯಲಾಗಲಿದೆ. ನಿಮ್ಮ ಭ್ರಷಾಚಾರ ಜನರಿಗೆ ಗೊತ್ತಾಗಲಿದೆ. ತನಿಖೆ ಎದುರಿಸುವುದು ಬಿಟ್ಟು ಆಪಾದನೆಮಾಡಿದವರ ಮೇಲೆ ಮತ್ತೆ ಆಪಾದನೆ ಮಾಡುತ್ತಾರೆ. ಡಾ: ಸುಧಾಕರ್ ಅವರು 35 ಸಾವಿರ ಕೋಟಿ ರೂ.ಗಳ ಅವ್ಯವಹಾರವಾಗಿದೆ ಎಂದು ಸಿಜೆಐ ತಿಳಿಸಿದ್ದನ್ನು ಹೇಳಿದಾಗ ದಿಗಿಲಾಗ ವೈಯಕ್ತಿಕವಾಗಿ ಟೀಕೆ ಮಾಡುತ್ತಾರೆ. ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರನ್ನು ಬಾಯಿಗೆ ಬಂದಂತೆ ಬೈದು ಈಗ ಅವರ ಜೊತೆಗೇ ಸೇರಿದ್ದಾರೆ. ಆಪಾದನೆಗಳಿಗೆ ಉತ್ತರ ನೀಡಲು ಸಾಧ್ಯವಾಗಿಲ್ಲ ಅವರಿಗೆ. ದುರಾಡಳಿತ ಬೇರೆ, ಭ್ರಷ್ಟಾಚಾರ ಬೇರೆ ಯನ್ನುತ್ತಾರೆ. ದುರಾಡಳಿತದಿಮದ ಭ್ರಷ್ಟಾಚಾರವಾದರೆ ಅದು ಅಭ್ರಷ್ಟಾಚಾರವಲ್ಲವೇ? . ಕರ್ನಾಟಕ ಜನತೆ ಕಾಂಗ್ರೆಸ್ ಆಡಳಿತವನ್ನು ನೋಡಿ ಮನೆಗೆ ಕಳಿಸಿದ್ದಾರೆ. ಅವರಿಗೆ ಅದೇಖಾಯಂ ಜಾಗ. ಭಾಜಪ 2023 ರಲ್ಲಿ ತನ್ನದೇ ಸ್ಪಷ್ಟ ಬಹುಮತದಿಂದ ಮತ್ತೊಮ್ಮೆ ಅಧಿಕಾರಕ್ಕೆ ಬಂದು ಜನಪರ, ಜನೋಪಯೋಗಿ ಸರ್ಕಾರ ರಚಿಸಿ, ಕರ್ನಾಟಕವನ್ನು ದೇಶದಲ್ಲಿಯೇ ನಂ.1 ರಾಜ್ಯವನ್ನಾಗಿ ಮಾಡುವ ಸಂಕಲ್ಪ ತೊಟ್ಟಿದ್ದೇವೆ. . ಹಿರೇಕೆರೂರಿನ ಜನ ತೋರಿಸಿದ ದಿಕ್ಕಿನತ್ತ ಕರ್ನಾಟಕದ ರಾಜಕೀಯ ತಿರುಗುತ್ತದೆ. ಟೀಕೆ ಮಾಡುವವರಿಗೆ ಬೆಲೆ ಇಲ್ಲ. ನಮ್ಮ ಕೆಲಸಗಳನ್ನು ನೋಡಿ, ನವ ಕರ್ನಾಟಕದಿಂದ ನವ ಭಾರತವನ್ನು ನಿರ್ಮಾಣ ಮಾಡೋಣ ಎಂದು ತಿಳಿಸಿದರು.
--
[25/01, 6:31 PM] Cm Ps: *ನಮ್ಮ ಕೆಲಸಗಳೇ ನಮ್ಮ ಕೊಡುಗೆಗೆ ಸಾಕ್ಷಿ ಹೇಳುತ್ತವೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಹಾವೇರಿ (ಹಿರೇಕೆರೂರು), ಜನವರಿ 25: ಭಾರತೀಯ ಜನತಾ ಪಕ್ಷದ ಸರ್ಕಾರ ಏನು ಕೊಡುಗೆ ನೀಡಿದೆ ಎಂದು ನಮ್ಮ ಕೆಲಸಗಳೇ ಸಾಕ್ಷಿ ಹೇಳುತ್ತವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಹಿರೇಕೆರೂರು ತಾಲ್ಲೂಕಿನಲ್ಲಿ ಬಾಜಪ ವತಿಯಿಂದ ಏರ್ಪಡಿಸಿದ್ದ ಜನಸಂಕಲ್ಪ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
*ನೀರಾವರಿ ಯೋಜನೆಗಳು*
ಸರ್ವಜ್ಞ ಏತ ನೀರಾವರಿ ಯೋಜನೆಯಡಿ 184 ಕೋಟಿ ರೂ.ಗಳ ವೆಚ್ಚದಲ್ಲಿ 93 ಕೆರೆಗಳನ್ನು ತುಂಬಿಸಲಾಗಿದೆ. ಹಾನಗಲ್ ತಾಲ್ಲೂಕಿನಲ್ಲಿ ಬಾಳಂದೂರು ಏತ ನೀರಾವರಿ ಯೋಜನೆಗೆ 388 ಕೋಟಿ ರೂ.ಗಳ ವೆಚ್ಚದಲ್ಲಿ ಕೈಗೊಂಡಿದ್ದೇವೆ. ಹಾನಗಲ್ ತಾಲ್ಲೂಕಿನಲ್ಲಿ. 160 ಕೋಟಿ ರೂ.ಗಳ ಯೋಜನೆ ಬ್ಯಾಡಗಿ ತಾಲ್ಲೂಕಿನಲ್ಲಿ ಏತನೀರಾವರಿ ಯೋಜನೆಗೆ 157 ಕೋಟಿ ರೂ.ಗಳು, ಆನೂರು ಏತನೀರಾವರಿಗೆ 112 ಕೋಟಿ ರೂ.ಗಳು. ಮುಂದಿನ ತಿಂಗಳು ಈ ಯೋಜನೆಗೆ ಚಾಲನೆ ನೀಡಲಾಗುತ್ತಿದೆ. ರಾಣೆಬೆನ್ನೂರು ತಾಲ್ಲೂಕಿನ ಮೆಡ್ಲೇರಿ ಏತ ನೀರಾವರಿ 140 ಕೋಟಿ ರೂ.ಗಳ ವೆಚ್ಛದಲ್ಲಿ ಕೈಗೊಂಡು ಇಲ್ಲಿ ಅಭಿವೃದ್ಧಿಯ ಪರ್ವ ನಮ್ಮ ಕಾಲದಲ್ಲಿ ಆಗಿದೆ. ತುಂಗಾ ಮೇಲ್ದಂಡೆಯಿಂದ 8 ಏತ ನೀರಾವರಿ ಯೋಜನೆಗಳನ್ನು ನಮ್ಮ ಕಾಲದಲ್ಲಿ ಅನುಮೋದಿಸಿ, ನಮ್ಮ ಕಾಲದಲ್ಲಿಯೇ ಉದ್ಘಾಟಿಸುತ್ತಿದ್ದೇವೆ. ಇದೊಂದು ದಾಖಲೆ ಎಂದರು.
*ಹಿರೇಕೆರೂರು ತಾಲ್ಲೂಕಿನ 109 ಗ್ರಾಮಗಳಿಗೆ 335 ಕೋಟಿ ರೂ.ಗಳ ಯೋಜನೆಗೆ ಅಡಿಗಲ್ಲು*
ಮೆಗಾ ಎಪಿಎಂಸಿಗಾಗಿ 100 ಕೋಟಿ ರೂ.ಗಳನ್ನು ಒದಗಿಸಿದ್ದು ರಾಣೆಬೆನ್ನೂರಿನ ಹೊರವಲಯದಲ್ಲಿ ಆಗುತ್ತಿದೆ. ಜಲಜೀವನ್ ಮಿಷನ್ ಅಡಿ ಹಿರೇಕೆರೂರು ತಾಲ್ಲೂಕಿನ 109 ಗ್ರಾಮಗಳಿಗೆ 335 ಕೋಟಿ ರೂ.ಗಳ ಯೋಜನೆಗೆ ಅಡಿಗಲ್ಲು ಹಾಕಿದ್ದೇವೆ. 196 ಕೋಟಿ ರೂ.ಗಳ ವೆಚ್ಚದಲ್ಲಿ ಹಿರೇಕೆರೂರು- ರಟ್ಟಿಹಳ್ಳಿ ಭಾಗದಲ್ಲಿ ಪ್ರತಿ ಮನೆಗೆ ನೀರು ಒದಗಿಸಲು ಇಂದು ಶಂಕುಸ್ಥಾಪನೆ ನೆರವೇರಿದೆ. ಹಾವೇರಿ ಜಿಲ್ಲೆಯಲಿ ಸುಮಾರು 2500 ಕೋಟಿ ರೂ.ಗಳ ಜಲಜೀವನ್ ಮಿಷನ್ ಯೋಜನೆಗೆ ಅನುದಾನ ನೀಡಿ ಕೆಲಸ ಪ್ರಾರಂಭವಾಗಿದೆ.
ವೈದ್ಯಕೀಯ ಕಾಲೇಜು ಅಂತಿಮ ಹಂತದಲ್ಲಿದೆ
ವೈದ್ಯಕೀಯ ಕಾಲೇಜು ಈಗಾಗಲೇ ಅಂತಿಮ ಹಂತದಲ್ಲಿದ್ದು, ನಮ್ಮ ಕನಸು ನನಸಾಗುವ ಹಂತದಲ್ಲಿದೆ. ಅದು ಸಂಪೂರ್ಣವಾಗಿ ಬಿಜೆಪಿ ಆಡಳಿತದಲ್ಲಿ ಮಂಜೂರಾಗಿ, ಅನುದಾನ ಪಡೆದು ನಿರ್ಮಾಣವಾಗಿದೆ. ನಮ್ಮ ನಾಯಕ ನರೇಂದ್ರ ಮೋದಿವರು ಸಶಕ್ತ ಭಾರತದ ಕನಸನ್ನು ಕಂಡಿದ್ದಾರೆ. ದುಡಿಯುವ ರೈತನಿಗೆ ಶಕ್ತಿ ತುಂಬಲು ಕೃಷಿ ಸಮ್ಮಾನ್ ಯೋಜನೆಯಡಿ ರಾಜ್ಯದಲ್ಲಿ 53.43 ಲಕ್ಷ ರೈತರಿಗೆ 10.ಸಾವಿರ ರೂ.ಗಳನ್ನು ನೇರವಾಗಿ ಡಿಬಿಟಿ ಮೂಲಕ ಒದಗಿಸಲಾಗಿದೆ. ಪ್ರಧಾನಮಂತ್ರಿ ಆವಾಸ ಯೋಜನೆಯಡಿ ಸ್ವಚ್ಛ ಭಾರತಕ್ಕೆ ಅನುಕೂಲವಾಗಿದ್ದು, ಗ್ಯಾಸ್ ಸಿಲಿಂಡರ್, ಮಕ್ಕಳ ವಿದ್ಯಾಭ್ಯಾಸ, ಪ್ರತಿ ಮನೆಗೆ ವಿದ್ಯುಚ್ಛಕ್ತಿ ನೀಡಿರುವುದು ನರೇಂದ್ರ ಮೋದಿಯವರ ಕಾರ್ಯಕ್ರಮ ಎಂದರು.
*ದುಡಿಯುವ ವರ್ಗಕ್ಕೆ ಬೆಲೆ*
ರೈತ ಮಕ್ಕಳಿಗೆ ರೈತ ವಿದ್ಯಾ ನಿಧಿ ಯೋಜನೆಯನ್ನು ದೇಶದಲ್ಲಿಯೇ ಪ್ರಥಮ ಬಾರಿಗೆ ರೂಪಿಸಲಾಗಿದೆ. ಈ ವರ್ಷ 11 ಲಕ್ಷ ಮಕ್ಕಳಿಗೆ 483 ಕೋಟಿ ರೂ.ಗಳನ್ನು ಈ ಯೋಜನೆಯಡಿ ವಿತರಿಸಲಾಗಿದೆ. 6 ಲಕ್ಷ ರೈತ ಕೂಲಿಕಾರರ ಮಕ್ಕಳು, ಮೀನುಗಾರ, ನೇಕಾರರ ಮಕ್ಕಳಿಗೆ ನೀಡಲಾಗುತ್ತಿದೆ. ದುಡಿಯುವ ವರ್ಗಕ್ಕೆ ಸಹಾಯ ನೀಡಲಾಗಿದೆ. ಗ್ರಾಮೀಣ ಕುಶಲಕರ್ಮಿಗಳಿಗೆ 50 ಸಾವಿರ ರೂ. ಗಳ ಕಾಯಕ ಯೋಜನೆ, ಸ್ತ್ರೀ ಸಾಮಥ್ರ್ಯ ಯೋಜನೆ, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ ರೂಪಿಸಿದೆ. ದುಡಿಯುವ ವರ್ಗಕ್ಕೆ ಬೆಲೆ ನೀಡುವ ಕೆಲಸವಾಗುತ್ತಿದೆ ಎಂದರು.
--
Post a Comment