[11/01, 11:56 AM] Cm Ps: *ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ: ಸಿಎಂ ಬೊಮ್ಮಾಯಿ*
ಬೆಂಗಳೂರು, ಜನವರಿ 12: ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಮೇರು ವ್ಯಕ್ತಿತ್ವ ನಮ್ಮೆಲ್ಲರಿಗೂ ಪ್ರೇರಣೆಯಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ದೇಶದ ಮಾಜಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 57 ನೇ ಪುಣ್ಯ ತಿಥಿಯ ಅಂಗವಾಗಿ ಅವಾರ ಪ್ರತಿಮೆಗೆ ಮಾಲಾರ್ಪಣೆ. ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.
*ದುರಂತ ಸಾವು*
ದೇಶ ಕಂಡ ಅತ್ಯಂತ ಪ್ರಭಾವಶಾಲಿ ಪ್ರಧಾನಮಂತ್ರಿ ಲಾಲ್ ಬಹದ್ದೂರ್ ಶಾಸ್ತ್ರಿ ಯವರ 57 ನೇ ಪುಣ್ಯ ತಿಥಿ ಆಚರಣೆ ಮಾಡಲಾಗುತ್ತಿದೆ. ಅವರ ಸಾವು ಒಂದು ದುರಂತ. ಅವರು ಪಾಕಿಸ್ತಾನದ ಮೇಲೆ ಗೆದ್ದ ಯುದ್ಧದ ಶಾಂತಿಯ ಸಲುವಾಗಿ ರಷ್ಯಾದ ತಾಷ್ಕೆಂಟ್ ಗೆ ತೆರಳಿದಾಗ ಅವರ ಸಾವೇಗೀಡಾದರು. ಅವರ ಸಾವಿನ ಬಗ್ಗೆ ಸಾಕಷ್ಟು ಸಂಶಯಗಳು ವ್ಯಕ್ತವಾಗಿವೆ. ಆದರೆ ವಿದೇಶಕ್ಕೆ ದೇಶದ ಕೆಲಸಕ್ಕಾಗಿ, ಶಾಂತಿಗಾಗಿ ತೆರಳಿದ ಸಂದರ್ಭದಲ್ಲಿ ಮರಣ ಹೊಂದಿದ್ದು, ಭಾರತಕ್ಕೆ ದೊಡ್ಡ ಆಘಾತವುಂಟು ಮಾಡಿತ್ತು ಎಂದರು.
*ನ್ಯಾಯನಿಷ್ಠುರ ಆಡಳಿತ*
ಅತ್ಯಂತ ಬಡ ಕುಟುಂಬದಿಂದ ಬಂದು, ಸರಳವಾಗಿ ಬದುಕು ನಡೆಸಿದವರು. ಬಡತನದ ಬಗ್ಗೆ ಎಂದೂ ಕೀಳರಿಮೆ ಹೊಂದಿರಲಿಲ್ಲ. ಶ್ರೀಮಂತರಾಗಬೇಕೆಂಬ ಹಂಬಲವೂ ಇರಲಿಲ್ಲ. ನ್ಯಾಯನಿಷ್ಠುರರಾಗಿ, ಸತ್ಯದಿಂದ ಆಡಳಿತ ಮಾಡಿ , ನಮ್ಮೆಲ್ಲರಿಗೂ ಆದರ್ಶಪ್ರಾಯರು. ಅವರಿನ್ನೂ ಹೆಚ್ಚಿನ ಕಾಲ ಬದುಕಬೇಕಿತ್ತು. ಈ ದೇಶವನ್ನು ಆಳಿ, ಒಳ್ಳೆಯ ಸತ್ಸಂಪ್ರದಾಯವನ್ನು ಹಾಕಿಕೊಡುತ್ತಿದ್ದರು ಎನ್ನುವ ವಿಶ್ವಾಸವಿತ್ತು. ಅವರ ಜೀವನ ಇಂದಿಗೂ ಆದರ್ಶ ಪ್ರೇರಣೆ ನೀಡುವಂಥದ್ದು. ಅವರನ್ನು ಸ್ಮರಿಸುವ ಮೂಲಕ, ಅವರು ಹಾಕಿಕೊಟ್ಟ ಮಾರ್ಗದಲ್ಲಿ ನಡೆಯುವ ಮೂಲಕ ಅವರಿಗೆ ನಿಜವಾದ ಶ್ರದ್ಧಾಂಜಲಿ ಸಲ್ಲಿಸಬೇಕು. ಜೈ ಜವಾನ್, ಜೈ ಕಿಸಾನ್, ಅವರ ಅತ್ಯಂತ ಮಹತ್ವದ ಕೊಡುಗೆ. ಒಂದು ದೇಶದ ಸುರಕ್ಷತೆ, ಅಭಿವೃದ್ಧಿ, ಸ್ವಾವಲಂಬನೆ ಮತ್ತು ಸ್ವಾಭಿಮಾನ ಎಲ್ಲವೂ ಅವರು ನೀಡಿದ ಘೋಷವಾಕ್ಯದಲ್ಲಿದೆ. ಇಂದಿಗೂ ಈ ಘೋಷವಾಕ್ಯ ದೇಶದ ಅಭಿವೃದ್ಧಿಗೆ ಅಗತ್ಯ ಎಂದರು.
*ಮೆಟ್ರೋ ದುರಂತ*
ಮೆಟ್ರೋ ಪಿಲ್ಲರ್ ದುರಂತಕ್ಕೆ ಸಂಬಂಧಿಸಿದಂತೆ ಉತ್ತರಿಸಿ ನಿನ್ನೆ ಮರಣೋತ್ತರ ಪರೀಕ್ಷೆ, ಯಥಾಸ್ಥಿತಿಗೆ ತರುವ ಕಾರ್ಯಗಳಾಗಿದ್ದು, ಇಂದು ಪ್ರಕರಣ ಸಂಬಂಧಿಸಿದಂತೆ ಹೆಸರುಗಳನ್ನು ಇಂದು ಬಿಡುಗಡೆ ಮಾಡಲಾಗುವುದು ಎಂದರು.
*ಆರೋಪಪಟ್ಟಿ ಆಧಾರವಿಲ್ಲದ್ದು*
ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಡುಗಡೆ ಮಾಡಿರುವ ಚಾರ್ಚ್ ಶೀಟ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಆರೋಪಪಟ್ಟಿಯ ವಿಷಯಗಳನ್ನು ನೋಡಿದರೆ ಯಾವುದೇ ಆಧಾರವಿಲ್ಲದ್ದು. ನಾವು ಈ ಹಿಂದೆ ಆರೋಪಪಟ್ಟಿ ಅವರ ಮೇಲೆ ಬಿಡುಗಡೆ ಮಾಡಿದ್ದೆವು. ಅದಕ್ಕಿನ್ನೂ ಉತ್ತರ ನೀಡಿಲ್ಲ. ಮೊದಲು ಅವರ ಕಾಲದ ಕರ್ಮಕಾಂಡಗಳ ಬಗ್ಗೆ ಉತ್ತರ ಹೇಳಲಿ. ಬರುವ ದಿನಗಲ್ಲಿ ಇನ್ನಷ್ಟು ಚಾರ್ಜ್ ಶೀಟ್ ಗಳು ಬರಲಿವೆ ಎಂದರು.
[11/01, 12:03 PM] Cm Ps: *ಜನವರಿ 21,22 ರಂದು ಉತ್ತರ ಕರ್ನಾಟಕ ಉತ್ಸವ*
*ಲೋಗೊ ಬಿಡುಗಡೆ ಮಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು: ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ವತಿಯಿಂದ ಇದೇ ಜನವರಿ 21, 22 ರಂದು ಆಯೋಜಿಸಿರುವ ಉತ್ತರ ಕರ್ನಾಟಕ ಉತ್ಸವ 2023 ಕಾರ್ಯಕ್ರಮದ ಲೋಗೊವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಬಿಡುಗಡೆ ಮಾಡಿದರು
ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆಯು ಉತ್ತರ ಕರ್ನಾಟಕ ಉತ್ಸವ 2023" ಯನ್ನು ಬೆಂಗಳೂರಿನ ಅರಮನೆ ಮೈದಾನದ ಶೀಶ್ ಮಹಾಲ್ ಪ್ಯಾಲೇಸ್ ಗೇಟ್ ನಂಬರ್ 7 ನಲ್ಲಿ ಕಾರ್ಯಕ್ರಮ ಹಮ್ಮಿಕೊಂಡಿದೆ.
ಉತ್ತರ ಕರ್ನಾಟಕ ಬಾಗದಿಂದ ವಿವಿಧ ಉದ್ಯೋಗ ಅರಸಿ ಬಂದು ಬೆಂಗಳೂರು ಮಹಾ ನಗರದಲ್ಲಿ ನೆಲೆಸಿ ನಮ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸಿ ಬೆಳೆಸಿ ಕೊಂಡು ಹೋಗಲು ವಿವಿಧ ಬಡಾವಣೆಯಲ್ಲಿ ಸಂಘಗಳನ್ನು ಕಟ್ಟಿಕೊಂಡಿದ್ದು,
ಈ ಎಲ್ಲಾ ಸಂಸ್ಥೆಗಳು ಸೇರಿ "ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾ ಸಂಸ್ಥೆ " ಯನ್ನು ಕಟ್ಟಿಕೊಂಡು ಮತ್ತಷ್ಟು ಸಂಘಟಿತರಾಗಿದ್ದೇವೆ. ನಾವು ನಮ್ಮವರಿಗಾಗಿ ಕೈ ಜೋಡಿಸುತ್ತಾ ಎಲ್ಲರನ್ನು ಒಂದೆಡೆ ಸೇರಲು ಮತ್ತು ಬೆಳೆಯಲು ಒಬ್ಬರಿಗೊಬ್ಬರು ಮೆಟ್ಟಿಲಾಗಲು ಹಾಗೂ ನಮ್ಮ ಸಂಸ್ಕೃತಿ ಪರಂಪರೆಯನ್ನು ಮುಂದುವರೆಸಲು "ಉತ್ತರ ಕರ್ನಾಟಕ ಉತ್ಸವ 23" ರನ್ನು ಬೆಂಗಳೂರು ಅರಮನೆ ಮೈದಾನದ ಶೀಶ್ ಮಹಾಲ್ ಪ್ಯಾಲೇಸ್ ಬೃಹತ್ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ ಎಂದು ಉತ್ತರ ಕರ್ನಾಟಕ ಸಂಘ ಸಂಸ್ಥೆಗಳ ಮಹಾಸಂಸ್ಥೆ ಅಧ್ಯಕ್ಷ ಶಿವಕುಮಾರ ಮೇಟಿ ತಿಳಿಸಿದ್ದಾರೆ.
ಈ ಕಾರ್ಯಕ್ರಮದಲ್ಲಿ ಉತ್ತರ ಕರ್ನಾಟಕ ಭಾಗದ ಸಂಸ್ಕೃತಿ ಪರಂಪರೆ, ಉಡುಗೆ ತೊಡಿಗೆ ಆಹಾರ ಪದ್ಧತಿ ಎಲ್ಲವನ್ನು ಅನಾವರಣ ಗೊಳಿಸಲು 2023 ಜನೆವರಿ 21 ಮತ್ತು 22 ಶನಿವಾರ ಭಾನುವಾರ ಎರಡು ದಿನಾ ಕಾರ್ಯಕ್ರಮ ಗಳನ್ನು ಹಮ್ಮಿಕೊಳ್ಳಲಾಗಿದೆ.
ಇದೇ ಸಂದರ್ಭದಲ್ಲಿ ಬೆಂಗಳೂರಿನಲ್ಲಿರುವ ಉತ್ತರ ಕರ್ನಾಟಕ ಭಾಗದ ಜನರ ಸಾಂಸ್ಕೃತಿಕ ಕಾರ್ಯಕ್ರಗಳು ಹಾಗೂ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ರಾಜ್ಯ ಸರ್ಕಾರ 3.24 ಗುಂಟೆ ಜಮೀನು ಮಂಜೂರು ಮಾಡಿದ್ದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹಾಗೂ ಅವರ ಸಚಿವ ಸಂಪುಟದ ಸದಸ್ಯರಿಗೆ ಅಭಿನಂದನೆ ಸಲ್ಲಿಸಲು ಗೌರವ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.
[11/01, 2:15 PM] Cm Ps: ಬೆಂಗಳೂರು, ಜನವರಿ 11: *ಮಾನ್ಯ* *ಮುಖ್ಯಮಂತ್ರಿ ಶ್ರೀ* *ಬಸವರಾಜ ಬೊಮ್ಮಾಯಿ* ಅವರು *ಕೈಮಗ್ಗ ಮತ್ತು ಜವಳಿ* ಇಲಾಖೆಯ ವತಿಯಿಂದ *ಮುಖ್ಯಮಂತ್ರಿಯವರ ಗೃಹ ಕಛೇರಿ* *ಕೃಷ್ಣಾದಲ್ಲಿ* ಆಯೋಜಿಸಿರುವ “ *ನೇಕಾರ* *ಸಮ್ಮಾನ್ ಯೋಜನೆ”ಯಡಿ* *ವಿದ್ಯುತ್ ಮಗ್ಗ ನೇಕಾರರಿಗೆ /* *ಕಾರ್ಮಿಕರಿಗೆ ಡಿ.ಬಿ.ಟಿ.* ಮುಖಾಂತರ ಸಹಾಯಧನ *ವರ್ಗಾವಣೆಗೆ ಚಾಲನೆಗೆ ನೀಡಿ* ಮಾತನಾಡಿದರು.
[11/01, 2:33 PM] Cm Ps: *25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸಲು ಮುಖ್ಯಮಂತ್ರಿ ಸೂಚನೆ*
ಬೆಂಗಳೂರು, ಜನವರಿ 11-
ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲ್ಲೂಕುಗಳಲ್ಲಿ ಮಿನಿ ಟೆಕ್ಸ್ ಟೈಲ್ ಪಾರ್ಕ್ ಸ್ಥಾಪಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಅವರು ಇಂದು ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ಡಿಬಿಟಿ ಮೂಲಕ ನೇಕಾರ್ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದರು.
ಹತ್ತಿಯ ಸಂಸ್ಕರಣೆಯಿಂದ, ವಸ್ತ್ರ ತಯಾರಿಕೆ, ಸಿದ್ಧ ಉಡುಪು ತಯಾರಿಕೆ ವರೆಗಿನ ಎಲ್ಲ ಹಂತಗಳ ಸೌಲಭ್ಯಗಳನ್ನು ಒಳಗೊಂಡ ಮಿನಿ ಟೆಕ್ಸ್ಟೈಲ್ ಪಾರ್ಕ್ ಸ್ಥಾಪಿಸುವ ಮೂಲಕ ನೇಕಾರರಿಗೆ ಅನುಕೂಲ ಮಾಡಿಕೊಡುವಂತೆ ಅವರು ತಿಳಿಸಿದರು.
*ಆನ್ಲೈನ್ ಮಾರುಕಟ್ಟೆ*
ನೇಕಾರರೊಂದಿಗೆ ವೈಯಕ್ತಿಕವಾಗಿ ಹೆಚ್ಚಿನ ಒಡನಾಟವನ್ನು ತಾವು ಹೊಂದಿದ್ದು, ಅವರ ಸಂಕಷ್ಟಗಳನ್ನು ಸಹ ಹತ್ತಿರದಿಂದ ಕಂಡಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು, ನೇಕಾರರು ತಮ್ಮ ಉತ್ಪನ್ನಗಳ ಗುಣಮಟ್ಟ ವೃದ್ಧಿಸುವ ಮೂಲಕ ರಫ್ತು ಮಾಡಲು ಸಹ ಮುಂದಾಗಬೇಕು. ಡಿಜಿಟಲ್ ವೇದಿಕೆಯ ಮೂಲಕ ಮಾರುಕಟ್ಟೆ ವಿಸ್ತರಿಸಬೇಕು. ಇದಕ್ಕೆ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಕಾರ ನೀಡಲಿದ್ದು, ಅಮೇಜಾನ್, ಫ್ಲಿಪ್ ಕಾರ್ಟ್ ಮತ್ತಿತರ ಆನ್ಲೈನ್ ವ್ಯಾಪಾರಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕ್ರಮ ವಹಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
*ಸಂಕ್ರಾಂತಿಯ ಕೊಡುಗೆ*
ಈ ವರೆಗೆ ಕೈಮಗ್ಗ ನೇಕಾರರಿಗೆ ಮಾತ್ರ ನೆರವು ನೀಡುವ ಯೋಜನೆ ಜಾರಿಯಲ್ಲಿತ್ತು. ಆದರೆ ವಿದ್ಯುತ್ ಮಗ್ಗದ ನೇಕಾರರು ಹಾಗೂ ಕಾರ್ಮಿಕರು ಸಹ ಸಂಕಷ್ಟದಲ್ಲಿರುವುದನ್ನು ಅರಿತು ಸರ್ಕಾರವು ಸಂಕ್ರಾಂತಿಯ ಕೊಡುಗೆಯಾಗಿ ಮಗ್ಗಪೂರ್ವ ಚಟುವಟಿಕೆಗಳಲ್ಲಿ ತೊಡಗುವ ಕಾರ್ಮಿಕರು ಹಾಗೂ ವಿದ್ಯುತ್ ಮಗ್ಗ ನೇಕಾರರಿಗೆ ಈ ಸೌಲಭ್ಯ ವಿಸ್ತರಿಸಿದೆ ಎಂದು ಅವರು ವಿವರಿಸಿದರು.
ಭಾರತದ ಸ್ವಾತಂತ್ರ್ಯ ಹೋರಾಟದಲ್ಲಿ ಅದರಲ್ಲೂ ಸ್ವದೇಶಿ ಆಂದೋಲನದಲ್ಲಿ ನೇಕಾರರ ಪಾತ್ರ ಅತ್ಯಂತ ಮಹತ್ವಪೂರ್ಣವಾದುದು. ವಿದೇಶಿ ಉಡುಪುಗಳನ್ನು ತೊರೆದು, ಸ್ವದೇಶಿ ಬಳಕೆ ಮಾಡುವಂತೆ ಗಾಂಧೀಜಿಯವರು ನೀಡಿದ ಕರೆಗೆ ಸ್ಪಂದಿಸಿದ ನೇಕಾರರು ಹಗಲು ರಾತ್ರಿ ಶ್ರಮಿಸಿ, ಇಡೀ ದೇಶದ ಜನರಿಗೆ ಬಟ್ಟೆ ಒದಗಿಸಿದರು. ಆ ಮೂಲಕ ಸ್ವದೇಶಿ ಆಂದೋಲನ ಯಶಸ್ವಿಗೊಳಿಸಿದ್ದಲ್ಲದೆ, ದೇಶ ಸ್ವಾತಂತ್ರ್ಯ ಕಂಡುಕೊಳ್ಳಲು ನೆರವಾದರು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ನಂತರದ ದಿನಗಳಲ್ಲಿ ಸಂಕಷ್ಟದಲ್ಲಿದ್ದ ನೇಕಾರರ ನೆರವಿಗೆ ಅಂದಿನ ರಾಮಕೃಷ್ಣ ಹೆಗಡೆ ಸರ್ಕಾರ ಧಾವಿಸಿತು. ಶಾಲಾ ಮಕ್ಕಳಿಗೆ ಸಮವಸ್ತ್ರ ಹಾಗೂ ಬಡವರಿಗೆ ಸೀರೆ, ಧೋತರ ಹಂಚುವ ಮೂಲಕ ಬಡವರಿಗೆ ವಸ್ತ್ರ ನೀಡುವ ಹಾಗೂ ನೇಕಾರರಿಗೆ ಅನುಕೂಲ ಕಲ್ಪಿಸಲು ಈ ಯೋಜನೆಗಳು ಸಹಕಾರಿಯಾದವು.
ನಂತರ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಿದರು. ಕೋವಿಡ್ 19 ರ ಸಂದರ್ಭದಲ್ಲಿ ನೇಕಾರ ಸಮ್ಮಾನ್ ಯೋಜನೆ, ನೇಕಾರರ ಸಾಲ ಮನ್ನಾ ಮೊದಲಾದ ಕ್ರಮಗಳ ಮೂಲಕ ನೇಕಾರರ ನೆರವಿಗೆ ಧಾವಿಸಿದರು. ಪ್ರಸಕ್ತ ನಮ್ಮ ಸರ್ಕಾರ ನೇಕಾರರು ಆರ್ಥಿಕವಾಗಿ, ಸಾಮಾಜಿಕವಾಗಿ ಅಭಿವೃದ್ಧಿ ಹೊಂದಲು ಹಲವಾರು ಪೂರಕ ಕ್ರಮಗಳನ್ನು ಕೈಗೊಂಡಿದೆ. ನೇಕಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳ ಶಾಸಕರು ಸಲ್ಲಿಸಿದ ಬೇಡಿಕೆಗಳನ್ನು ಈಡೇರಿಸುವ ಮೂಲಕ ನೇಕಾರರಿಗೆ ಹೆಚ್ಚಿನ ಬೆಂಬಲ ನೀಡಲಾಗಿದೆ ಎಂದರು.
ನೇಕಾರರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣ ವಿದ್ಯಾಭ್ಯಾಸ ಮೊಟಕುಗೊಳಿಸಿ, ನೇಕಾರಿಕೆಯಲ್ಲಿ ತೊಡಗುವುದನ್ನು ತಮ್ಮ ವಿದ್ಯಾರ್ಥಿ ದೆಸೆಯಿಂದ ನೋಡುತ್ತ ಬಂದಿದ್ದು, ಈ ಹಿನ್ನೆಲೆಯಲ್ಲಿಯೇ ರೈತ ವಿದ್ಯಾನಿಧಿಯನ್ನು ನೇಕಾರರಿಗೆ ವಿಸ್ತರಿಸಲು ನಿರ್ಧರಿಸಲಾಯಿತು ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಇದಲ್ಲದೆ, ವೃತ್ತಿಪರ ನೇಕಾರ ಸಮುದಾಯಕ್ಕೆ ತಮ್ಮ ಘಟಕದ ವಿಸ್ತರಣೆಗೆ ನೀಡಲಾಗುತ್ತಿದ್ದ ಶೇಕಡಾ 30ರ ಸಹಾಯಧನವನ್ನು ಶೇಕಡಾ 50 ಕ್ಕೆ ಹೆಚ್ಚಿಸಲಾಗಿದೆ. ನೇಕಾರರ ಕಾಲೋನಿಗಳಲ್ಲಿ ವಾಸಿಸುವವರಿಗೆ ರಹವಾಸಿ ಪತ್ರಗಳನ್ನು ನೀಡಲು ತೀರ್ಮಾನಿಸಲಾಗಿದೆ.
ನೇಕಾರರಿಗೆ 2 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲಾಗುವುದು. ತಮಿಳುನಾಡು ಮಾದರಿಯಲ್ಲಿ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ 5 ಎಚ್.ಪಿ. ವರೆಗೆ ಉಚಿತ ವಿದ್ಯುತ್ ಹಾಗೂ ಫಿಕ್ಸೆಡ್ ಚಾರ್ಜಸ್ ನಲ್ಲಿ ಶೇ.50 ರಷ್ಟು ರಿಯಾಯ್ತಿ ನೀಡಲಾಗುತ್ತಿದೆ. ನೇಕಾರರ ಸಂಕಷ್ಟಗಳಿಗೆ ಸರ್ಕಾರ ಸದಾ ಸ್ಪಂದಿಸಿದೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ಮುಖ್ಯಮಂತ್ರಿಯವರು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ನೇಕಾರರೊಂದಿಗೆ ಸಂವಾದ ನಡೆಸಿದರು.
ಜವಳಿ ಹಾಗೂ ಸಕ್ಕರೆ ಶಂಕರ ಪಾಟೀಲ ಮುನೇನಕೊಪ್ಪ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಶಾಸಕರಾದ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ, ಎಂ.ಡಿ. ಲಕ್ಷ್ಮೀನಾರಾಯಣ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂಪಾಕ್ಷ ಗೌಡ, ಕಾವೇರಿ ಹ್ಯಾಂಡ್ಲೂಮ್ಸ್ ಅಧ್ಯಕ್ಷ ಬಿ.ಜೆ. ಗಣೇಶ್, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಟಿ.ಎಚ್.ಎಂ. ಕುಮಾರ್ ಮತ್ತು ಇತರ ಗಣ್ಯರು ಉಪಸ್ಥಿತರಿದ್ದರು.
[11/01, 4:33 PM] Cm Ps: *ಸ್ಮಶಾನ ಕಾರ್ಮಿಕರ ಸೇವೆ ಖಾಯಂ ಗೆ ಕ್ರಮ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
*ಸ್ಮಶಾನ ಕಾರ್ಮಿಕರು ಇನ್ನು ಸತ್ಯ ಹರಿಶ್ಚಂದ್ರ ಬಳಗ : ಸಿಎಂ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜನವರಿ 11-
ಪೌರಕಾರ್ಮಿಕರ ಮಾದರಿಯಲ್ಲಿ 130 ಸ್ಮಶಾನ ಕಾರ್ಮಿಕರಿಗೆ ನೇಮಕ ಮಾಡಿಕೊಂಡಿದ್ದು, ರಾಜ್ಯದ ಇತರ ಜಿಲ್ಲೆಗಳಲ್ಲಿರುವ 300 ಜನರ ಸ್ಮಶಾನ ಕಾರ್ಮಿಕರ ಸೇವೆಯನ್ನು ಕಾಯಂ ಮಾಡಲು ಸಹ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ತಮ್ಮ ರೇಸ್ ಕೋರ್ಸ್ ರಸ್ತೆಯ ಅಧಿಕೃತ ನಿವಾಸದಲ್ಲಿ ಸ್ಮಶಾನ ಕಾರ್ಮಿಕರೊಂದಿಗೆ ಬೆಳಗಿನ ಉಪಾಹಾರ ಸ್ವೀಕರಿಸಿದರು.
ತಮ್ಮ ಈ ಕ್ರಮದ ಹಿನ್ನೆಲೆಯನ್ನು ಕುರಿತು ವಿವರಿಸಿದ ಮುಖ್ಯಮಂತ್ರಿಯವರು, ‘ನಾನು ಒಂದು ಕಾರ್ಯಕ್ರಮಕ್ಕೆ ಹೋದಾಗ ಭೇಟಿಯಾದ ಸ್ಮಶಾನ ಕಾರ್ಮಿಕನ ಪರಿಸ್ಥಿತಿಯನ್ನು ತಿಳಿದುಕೊಂಡೆ. ಆಗಲೇ ಸ್ಮಶಾನ ಕಾರ್ಮಿಕರಿಗೆ ಏನಾದರೂ ಮಾಡಬೇಕೆಂದು ಅಧಿಕಾರಿಗಳ ಜೊತೆ ಚರ್ಚಿಸಿ, 130 ಜನರಿಗೆ ಪೌರ ಕಾರ್ಮಿಕರ ರೀತಿಯಲ್ಲಿ ನೇಮಕ ಮಾಡಲಾಗಿದೆ. ರಾಜ್ಯದ ಇತರ ಜಿಲ್ಲೆಗಳಲ್ಲಿ ಇನ್ನೂ 300 ಜನ ಇದ್ದಾರೆ. ಅವರನ್ನೂ ಖಾಯಂ ಮಾಡುವ ಕೆಲಸ ಮಾಡಲು ಕ್ರಮ ಕೈಗೊಳ್ಳಲಾಗುವುದು’ ಎಂದು ತಿಳಿಸಿದರು.
*ಸ್ಪಂದನಾಶೀಲ ಸರ್ಕಾರ*
ಇದುವರೆಗೂ ಇವರನ್ನು ಯಾರೂ ಗಮನಿಸಿಲ್ಲ. ವ್ಯವಸ್ಥೆಯೇ ಇವರನ್ನು ತಿರುಗಿ ನೋಡಿಲ್ಲ. ರಾಜ್ಯ ಆಳುವವರಾಗಲಿ, ಅಧಿಕಾರಿಗಳಾಗಲಿ ಇವರನ್ನು ಗಮನಿಸಿಯೂ ಇಲ್ಲ. ಇವರೂ ನಮ್ಮ ಬದುಕು ಇಷ್ಟೆ ಎಂದು ನಂಬಿಕೊಂಡು ಬಂದಿದ್ದಾರೆ. ಈ ಸಮಾಜದ ಕಟ್ಟಕಡೆಯ ವ್ಯಕ್ತಿಯ ಕಣ್ಣೀರನ್ನು ಒರೆಸುವ ನಿರ್ಣಯ ಮಾಡಲಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವ ಜನರಿಂದ ಆಯ್ಕೆಯಾಗುತ್ತೇವೆಯೋ ಅವರಿಗೆ ಸಂವೇದನಾಶೀಲವಾಗಿರಬೇಕೆಂಬ ಸರ್ಕಾರ ಬಂದರೆ, ಜನಪರ ಸರ್ಕಾರ ಇದ್ದಾಗ ಮಾತ್ರ ಈ ರೀತಿಯ ಆಲೋಚನೆ ಮಾಡಲು ಸಾಧ್ಯವಾಗುತ್ತದೆ.
ರಾಜ್ಯದಲ್ಲಿ 30 ಸಾವಿರ ಪೌರ ಕಾರ್ಮಿಕರನ್ನು ಖಾಯಂಗೊಳಿಸಲಾಗುವುದು. ಈಗಾಗಲೇ ಪ್ರಕ್ರಿಯೆ ಪ್ರಾರಂಭಿಸಲಾಗಿದೆ. 40 ಸಾವಿರಕ್ಕಿಂತ ಹೆಚ್ಚು ಪೌರ ಕಾರ್ಮಿಕರ ಖಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು. ಈಗಾಗಲೇ ಹನ್ನೊಂದು ಸಾವಿರ ಜನ ಮೊದಲ ಹಂತದಲ್ಲಿ ಖಾಯಂ ಮಾಡಲಾಗಿದೆ. ಇನ್ನೂ 2 ಹಂತಗಳಲ್ಲಿ ಎಲ್ಲರನ್ನೂ ಖಾಯಂ ಗೊಳಿಸಲಾಗುವುದು.ಈ ಕ್ರಮ ಕೈಗೊಂಡಾಗ ಅನೇಕ ಕಾನೂನು ತೊಡಕುಗಳು ಬಂದವು.ಬಹಳ ಚರ್ಚೆಯೂ ಆಯಿತು. ಇಂಥ ನಿರ್ಣಯ ಮಾಡಿದಾಗ ಪರ, ವಿರೋಧ ಟೀಕೆ ಟಿಪ್ಪಣಿ ಇರುತ್ತದೆ. ಹೊಸ ಕಾನೂನು ರೂಪಿಸಿ ನೇಮಕ ಮಾಡಿಕೊಳ್ಳಲಾಗಿದೆ. ನಮ್ಮ ನಗರದ ಹೊಲಸು ತೆಗೆದು ನಾಗರೀಕ ಬದುಕು ಬದುಕಲು ಅವರೇ ಕಾರಣ. ನಮ್ಮ ನಿರ್ಧಾರಗಳು ಮಾನವೀಯತೆಯಿಂದ ಇದ್ದಾಗ ಅಂತಿಮವಾಗಿ ಜಯ ಸಿಗುತ್ತದೆ ಎಂದರು.
*ಸಮಸ್ಯೆಗೆ ಪರಿಹಾರ ನೀಡುವ ಸರ್ಕಾರ*
ಬದ್ಧತೆ, ಬಡವರ ಬಗ್ಗೆ ಕಳಕಳಿ, ಅವರ ಸಮಸ್ಯೆಗೆ ಪರಿಹಾರ ನೀಡುವ ಸರ್ಕಾರ ನಮ್ಮದು.
ತಳಸಮುದಾಯಗಳ ವಿಚಾರದಲ್ಲಿ ಹತ್ತು ಹಲವು ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
*ಸತ್ತ ಮೇಲೆ ನಾವು ಭೂಮಿಗೆ ಸೇರಿದವರು*
ಸ್ಮಶಾನ ಕಾರ್ಮಿಕರು ನಮಗೆ ಮುಕ್ತಿ ನೀಡುವ ಕೆಲಸ ಮಾಡುತ್ತಾರೆ. ಬದುಕುವುದು ಎಷ್ಟು ಮುಖ್ಯವೋ. ನಮ್ಮ ಸಾವು ಹೇಗೆ ಅಂತಿಮಗೊಳ್ಳುತ್ತದೆ ಎನ್ನುವುದೂ ಅಷ್ಟೇ ಮುಖ್ಯ. ಬದುಕಿದ್ದಾಗ ಅಷ್ಟೇ ನಮ್ಮ ಭೂಮಿ ಎನ್ನುತ್ತೇವೆ. ಸತ್ತ ಮೇಲೇ ನಾವು ಭೂಮಿಗೆ ಸೇರಿದವರು ಎಂದರು.
*ಗೌರವ ನೀಡಬೇಕು*
ಇವರನ್ನು ಸತ್ಯ ಹರಿಶ್ಚಂದ್ರನ ಬಳಗ
ಎಂದು ಕರೆಯಬೇಕು. ಪೌರಕಾರ್ಮಿಕರನ್ನು ಪೌರ ನೌಕರರು ಎನ್ನಬೇಕು. ಅವರಿಗೆ ಗೌರವವನ್ನು ಸೂಚಿಸಬೇಕು. ಇನ್ನಷ್ಟು ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಆರೋಗ್ಯ, ಶಿಕ್ಷಣಕ್ಕೆ ಸೌಲಭ್ಯಗಳು ದೊರೆಯಲಿದೆ ಎಂದರು.
*ಚಿತಾಗಾರಗಳ ಹೆಚ್ಚಳಕ್ಕೆ ಕ್ರಮ*
ಕೋವಿಡ್ ಸಂದರ್ಭದಲ್ಲಿ ಚಿತಾಗಾರಗಳ ಮುಂದೆ ಸರತಿ ಸಾಲು ನಿಂತದ್ದು ಕಂಡು ಅಂದಿನ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಬೆಂಗಳೂರಿಗೆ ವಿದ್ಯುತ್ ಚಿತಾಗಾರವನ್ನು ಹೆಚ್ಚಿಸುವುದಾಗಿ ತಿಳಿಸಿದ್ದರು. ಈ ವರ್ಷದ ಬಜೆಟ್ ನಲ್ಲಿ ಚಿತಾಗಾರ ವ್ಯವಸ್ಥೆಯನ್ನು ಹೆಚ್ವಿಸಲು ಕ್ರಮ ಜರುಗಿಸಲಾಗುವುದು ಎಂದರು.
*ಸತ್ಯ ಹರಿಶ್ಚಂದ್ರನ ಪ್ರತಿಮೆಯ ಉಡುಗೊರೆ*
ಸ್ಮಶಾನ ಕಾರ್ಮಿಕರು ನೀಡಿದ ಸತ್ಯ ಹರಿಶ್ಚಂದ್ರನ ಪ್ರತಿಮೆಯನ್ನು ನೋಡಿ ಭಾವುಕರಾದ ಮುಖ್ಯಮಂತ್ರಿಗಳು, ನನಗೆ ಇದುವರೆಗೆ ಸಾಕಷ್ಟು ಫಲಕಗಳು ಬಂದಿವೆ.ಇದುವರೆಗೂ ಯಾರೂ ಸತ್ಯ ಹರಿಶ್ಚಂದ್ರ ನ ಪ್ರತಿಮೆ ನೀಡಿರಲಿಲ್ಲ. ಇದು ಮನಸಿಗೆ ಅತ್ಯಂತ ಹತ್ತಿರವಾದ ಸ್ಮರಣಿಕೆ. ನಾನು ಇದನ್ನು ನಾನು ಪ್ರತಿ ದಿನ ಪೂಜಿಸುವ ಸ್ಥಳದಲ್ಲಿ ಇಟ್ಟುಕೊಳ್ಳುತ್ತೇನೆ ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಲ ಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಮತ್ತಿತರರು ಹಾಜರಿದ್ದರು.
Post a Comment