[23/01, 11:07 AM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಸುದ್ದಿಮೂಲ ಪತ್ರಿಕೆಯ ಬೆಂಗಳೂರು ಆವೃತ್ತಿಯ ಪತ್ರಿಕೆ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಸುದ್ದಿಮೂಲ ಪತ್ರಿಕೆ ಸಂಪಾದಕರಾದ ಬಸವರಾಜ ಸ್ವಾಮಿ, ವಿಧಾನ ಪರಿಷತ್ ಮಾಜಿ ಸದಸ್ಯ ಪಿ ರಾಮಯ್ಯ ಮತ್ತಿತರರು ಹಾಜರಿದ್ದರು.
[23/01, 11:17 AM] Cm Ps: ಬೆಂಗಳೂರು, ಜನವರಿ 23: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದಿವಂಗತ ನೇತಾಜಿ ಸುಭಾಷ್‍ಚಂದ್ರ ಬೋಸ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದಲ್ಲಿರುವ ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಪುಷ್ಪನಮನ ಸಲ್ಲಿಸಿದರು.
ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[23/01, 11:45 AM] Cm Ps: *ಕರ್ನಾಟಕದ ವಿಚಾರದಲ್ಲಿ ಎಲ್ಲರೂ ಒಂದಾಗಬೇಕು: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
*ನಾರಿಶಕ್ತಿ ಸ್ತಬ್ದ ಚಿತ್ರ ಒಂದೇ ವಾರದಲ್ಲಿ ಸಿದ್ದವಾಗಿದೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜನವರಿ 23: ಸಣ್ಣ ಭಾವನೆಗಳನ್ನು ಬಿಟ್ಟು,ಕರ್ನಾಟಕದ ಬಗ್ಗೆ ಎಲ್ಲರೂ ಒಂದಾಗಬೇಕು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕರ್ನಾಟಕದ ಸ್ತಬ್ಧಚಿತ್ರ ಗಣರಾಜ್ಯೋತ್ಸವ ಬಗ್ಗೆ ಪಾಲ್ಗೊಳ್ಳುವ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದರು.
ಕೆಪಿಸಿಸಿ ಅಧ್ಯಕ್ಷರು ಈ ಕುರಿತು ನೀಡಿರುವ ಹೇಳಿಕೆಗೆ ಉತ್ತರಿಸಿ ನವದೆಹಲಿಯಲ್ಲಿ 2009 ರಲ್ಲಿ ಯು.ಪಿ.ಎ ಸರ್ಕಾರವಿತ್ತು. ರಾಜ್ಯದಿಂದ ಕಳುಹಿಸಿದ ಸ್ಥಬ್ಧಚಿತ್ರವನ್ನು ನಿರಾಕರಿಸಲಾಗಿತ್ತು. ಕರ್ನಾಟಕದ ಬಗ್ಗೆ ಅಷ್ಟು ಸ್ವಾಭಿಮಾನ ಇರುವವರು, ಆಗ ಯಾರ ಮೇಲಾದರೂ ಒತ್ತಡ ಹೇರಿ ಸ್ಥಬ್ಧಚಿತ್ರಕ್ಕೆ ಸ್ಥಾನಪಡೆದುಕೊಳ್ಳಬಹುದಿತ್ತು. ನಂತರ ಸತತ 14 ವರ್ಷ ಸ್ಥಬ್ಧಚಿತ್ರ ಗಣರಾಜ್ಯೋತ್ಸವ ಪರೇಡ್ ನಲ್ಲಿ ಭಾಗವಹಿಸಿದೆ. ಕಳೆದ ಬಾರಿ ಪ್ರಶಸ್ತಿ ಪಡೆದವರಿಗೆ ಬೇರೆಯದರಲ್ಲಿ ಅವಕಾಶ ನೀಡಬೇಕೆಂಬ ವಿಚಾರವಿತ್ತು.ಆದಾಗ್ಯೂ ನಾನು ರಕ್ಷಣಾ ಸಚಿವರೊಂದಿಗೆ ಮಾತನಾಡಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಯವರೂ ಮಾತನಾಡಿ ಸ್ತಬ್ಧ ಚಿತ್ರಕ್ಕೆ ಅನುಮತಿ ನೀಡಿದ್ದಾರೆ. ಕೇವಲ ಎಂಟು ಹತ್ತು ದಿನಗಳಲ್ಲಿ ನಾರಿ ಶಕ್ತಿ ಎಂಬ ವಿಷಯದ ಕುರಿತು ಸ್ಥಬ್ಧಚಿತ್ರ ತಯಾರಿಸಲಾಗಿದೆ. ಅತ್ಯಂತ ಅದ್ಭುತವಾಗಿ ಸ್ಥಬ್ಧಚಿತ್ರ ಮೂಡಿಬಂದಿದೆ ಎಂದರು.
[23/01, 1:04 PM] Cm Ps: .
*ವಿಧಾನಸೌಧದ ಮುಂಭಾಗದಲ್ಲಿ ಸುಭಾಸ್ ಚಂದ್ರ ಬೋಸ್ ಪ್ರತಿಮೆ ಮರುಸ್ಥಾಪನೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ*
ಬೆಂಗಳೂರು, ಜನವರಿ 23: ಮೆಟ್ರೋ ಕಾರಣಕ್ಕಾಗಿ ಸ್ಥಳಾಂತರವಾಗಿದ್ದ ಸುಭಾಷ್ ಚಂದ್ರ ಬೋಸ್ ಅವರ ಪ್ರತಿಮೆಯನ್ನು ಪುನಃ ವಿಧಾನಸೌಧದ ಮುಂಭಾಗದಲ್ಲಿ ಮರುಸ್ಥಾಪನೆ ಮಾಡಲು , ಕೂಡಲೇ ಸ್ಥಳಾಂತರ ಮಾಡಲು ಆದೇಶ ಹೊರಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನಾಚಾರಣೆಯ ಅಂಗವಾಗಿ ಇಂದು ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು.
*ಹೆಸರಿನಲ್ಲಿಯೇ ದೇಶಪ್ರೇಮ*
ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿನದಂದು ದೇಶ ನಿರ್ಮಿಸಲು ಸಂಕಲ್ಪಿತರಾಗಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕೆಂದು ಪ್ರತಿಜ್ಞೆ ಮಾಡಿದ್ದೇವೆ. ಸುಭಾಷ್ ಚಂದ್ರ ಬೋಸ್ ಅವರ ಹೆಸರಿನಲ್ಲಿಯೇ ದೇಶಪ್ರೇಮವಿದೆ. ದೇಶಪ್ರೇಮ, ದೇಶ ಉಳಿಸುವುದು ಹಾಗೂ ದೇಶ ಕಟ್ಟುವ ವಿಚಾರದಲ್ಲಿ ಯಾವುದೇ ದುರ್ಬಲ ವಿಚಾರವಿರಬಾರದು ಎಂದಿದ್ದರು. ಅವರಿಗೆ ದಿಟ್ಟ, ಸ್ಪಷ್ಟ, ನಿಲುವಿತ್ತು. ಅಂದಿನ ಬ್ರಿಟಿಷರ ವಿರುದ್ಧ ನೇರವಾಗಿ ಯುದ್ಧ ಮಾಡಬೇಕೆಂಬ ವಿಚಾರ, ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದ ಕಾಂಗ್ರೆಸ್ ನ ಹಲವು ದಿಗ್ಗಜರ ವಿರುದ್ಧ
ಅವರು ತಮ್ಮ ವಿಚಾರಧಾರೆಯನ್ನು ಮಂಡಿಸಿದರು. ಕಾಂಗ್ರೆಸ್ ಗಿಂತ ವಿಭಿನ್ನ ವಿಚಾರಗಳಿದ್ದರಿಂದ ಅವರು ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿಯೂ ಕೂಡ ಅಧಿಕೃತ ಅಭ್ಯರ್ಥಿ ವಿರುದ್ಧ ನಿಂತು ಜಯಶಾಲಿಯಾದರು ಎಂದರು.
*ಹೋರಾಟದ ಕಿಚ್ಚನ್ನು ಹಚ್ಚಿದವರು*
ಅಪ್ಪಟ ದೇಶಪ್ರೇಮಿಯಾಗಿದ್ದ ಅವರು ಅತ್ಯಂತ ಯಶಸ್ವಿಯಾಗಿ ಸಾಧಿಸಿದ್ದ ಐ.ಸಿ.ಎಸ್. ನ್ನು ಧಿಕ್ಕರಿಸಿ ಸ್ವಾತಂತ್ರ್ಯ ಹೋರಾಟಕ್ಕೆ ಧುಮುಕಿದರು. 'ನೀವು ರಕ್ತವನ್ನು ಕೊಡಿ, ನಿಮಗೆ ಸ್ವಾತಂತ್ರ್ಯ ವನ್ನು ನೀಡುತ್ತೇನೆ' ಎಂದು ಯುವಕರಿಗೆ ಕರೆ ನೀಡಿದ್ದರು. ತಮ್ಮದೇ ಆದ ಆಜಾದ್ ಫೌಜ್ ಸ್ಥಾಪಿಸಿ ಇಡೀ ದೇಶದಲ್ಲಿ ಹೋರಾಟದ ಕಿಚ್ಚನ್ನು ಹಚ್ಚಿದ್ದರು. ಅವರ ವ್ಯಕ್ತಿತ್ವದಿಂದ ವಿದೇಶದಲ್ಲಿಯೂ ಕೂಡ ಭಾರತ ದೇಶದ ಸ್ವಾತಂತ್ರ್ಯದ ಬಗ್ಗೆ ಬಹಳ ಸದಭಿಪ್ರಾಯ ಮೂಡಲು ಸಾಧ್ಯವಾಯಿತು ಎಂದರು.
*ಪ್ರೇರಣೆ*
ಸುಭಾಷ್ ಚಂದ್ರ ಬೋಸ್ ಅವರು ನಮಗೆ ಪ್ರೇರಣೆ. ಅಂದು ದೇಶಕ್ಕೆ ಸ್ವಾತಂತ್ರ್ಯ ಕೊಡಲು ಅವರು ಪ್ರೇರಣೆಯಾಗಿದ್ದರೆ, ಇಂದು ದೇಶ ಕಟ್ಟಲು ಪ್ರೇರಣೆಯಾಗಿದ್ದಾರೆ. ಅವರ ಸ್ಪಷ್ಟ, ಸಿದ್ಧಾಂತ ಹಾಗೂ ಆದರ್ಶಗಳನ್ನು ಮುಂದಿಟ್ಟುಕೊಂಡು ಸ್ವಾಭಿಮಾನಿ, ಸ್ವಾವಲಂಬಿ ದೇಶವನ್ನಾಗಿ ಮಾಡಲು ಸಾಧ್ಯವಿದೆ ಎಂದು ನಂಬಿದ್ದೇವೆ. ಆ ದಾರಿಯಲ್ಲಿ ನಾವೆಲ್ಲರೂ ಸೇರಿ ನಡೆಯಬೇಕಿದೆ ಎಂದರು.
*ಜಾಗೃತಿ ಮೂಡಿಸುವ ಕೆಲಸ*
ಸುಭಾಷ್ ಚಂದ್ರ ಬೋಸ್ ಅವರ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ರಾಜ್ಯದಲ್ಲಿ ಆಗುತ್ತಿದೆ. ಕಳೆದ ಬಾರಿ 75 ಎನ್.ಐ.ಸಿ ಪಡೆಗಳನ್ನು ಅವರ ಹೆಸರಿನಲ್ಲಿ ಹೆಚ್ಚು ಮಾಡಿದೆ. ಯುವಕರಿಗೆ ದೊಡ್ಡ ಪ್ರೇರಣೆ ನೀಡುವ ಕೆಲಸವಾಗುತ್ತಿದೆ ಎಂದರು.
[23/01, 1:48 PM] Cm Ps: *ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಮುಚ್ಚಿಹಾಕಲೆಂದೇ ಲೋಕಾಯುಕ್ತ ಮುಚ್ಚಿದರು: ಸಿಎಂ ಬೊಮ್ಮಾಯಿ*
ಬೆಂಗಳೂರು, ಜನವರಿ 23: ಕಾಂಗ್ರೆಸ್ ಮಾಡಿರುವ ಕರ್ಮಕಾಂಡ ಮುಚ್ಚಿಹಾಕಲೆಂದೇ ಲೋಕಾಯುಕ್ತ ಸಂಸ್ಥೆಯನ್ನು ಮುಚ್ಚಿಹಾಕಿದರು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಸುಭಾಷ್ ಚಂದ್ರ ಬೋಸ್ ಅವರ ಜನ್ಮದಿಂದ ಅಂಗವಾಗಿ ಅವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
*ಕಾಂಗ್ರೆಸ್ ಸೊಗಲಾಡಿತನ*
ಭ್ರಷ್ಟಾಚಾರ ನಿಲ್ಲಿಸಿ ಬೆಂಗಳೂರು ಉಳಿಸಿ ಎಂದು ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವ ಕಾಂಗ್ರೆಸ್ ಬಗ್ಗೆ ಪ್ರತಿಕ್ರಿಯೆ ನೀಡಿ ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ. ಶೇ 60 ರಷ್ಟು ಪ್ರೀಮಿಯಂ ಬೆಂಗಳೂರಿನಲ್ಲಿ ನೀಡಿರುವ ದಾಖಲೆ ಸಿದ್ದರಾಮಯ್ಯ ಅವರ ನೇತೃತ್ವದ ಸರ್ಕಾರ ದಾಖಲೆಗಳಲ್ಲಿದೆ. ಸುಮಾರು 800 ಕೋಟಿ ರೂ.ಗಳಲ್ಲಿ ಶೇ 60 ರಷ್ಟು ಪ್ರೀಮಿಯಮ್ ನ್ನು ದೇಶದಲ್ಲಿ ಎಲ್ಲಿಯಾದರೂ ಕೊಟ್ಟಿದ್ದಾರೆಯೇ? ಇವರು ಅಂತಹ ಶೂರರು. ಇಷ್ಟು ಮುಕ್ತವಾಗಿ 40-60 ಪ್ರೀಮಿಯಮ್ ಕೊಟ್ಟು ಭ್ರಷ್ಟಾಚಾರ ನಡೆಸಿ, ಭ್ರಷ್ಟಾಚಾರದ ಬಗ್ಗೆ ಮಾತನಾಡಿದರೆ ಅದು ಸೊಗಲಾಡಿತನ. ತಾವು ಮಾಡಿರುವುದನ್ನು ಮುಚ್ಚಿಕೊಳ್ಳುವ ಸಲುವಾಗಿ ಈ ರೀತಿ ಹೇಳುತ್ತಿದ್ದಾರೆ. ನಮ್ಮ ಸರ್ಕಾರ ಈಗಾಗಲೇ ಲೋಕಾಯುಕ್ತಕ್ಕೆ ದೂರು ನೀಡಿದೆ. ಆರೋಪ ಮಾಡುತ್ತಿರುವುದರ ಪ್ರಕರಣದ ಬಗ್ಗೆ ವಿವರಗಳನ್ನು ಲೋಕಾಯುಕ್ತಕ್ಕೆ ನೀಡಲಿ ಎಂದರು.
*ನೈತಿಕ ಹಕ್ಕಿಲ್ಲ*
ಲೋಕಾಯುಕ್ತ ಮುಚ್ಚಿದ ಪುಣ್ಯಾತ್ಮ ರು ಇವರು. 300 ಕಡೆ ಪ್ರತಿಭಟನೆ ಮಾಡುತ್ತಿರುವವರು ಲೋಕಾಯುಕ್ತ ಎಂಬ ಸ್ವತಂತ್ರ, ಸಂವಿಧಾನಬದ್ಧ ಸಂಸ್ಥೆಯನ್ನು ಮುಚ್ಚಿರುವ ಇವರು ನಮಗೆ ಪಾಠ ಹೇಳುತ್ತಾರೆ. ಲೋಕಾಯುಕ್ತ ಯಾಕೆ ಮುಚ್ಚಿದರು? ಇವರ ವಿರುದ್ಧ 59 ಪ್ರಕರಣಗಳು ಮುಖ್ಯಮಂತ್ರಿಗಳ ಸಮೇತವಾಗಿ ದಾಖಲಾಗಿತ್ತು. ಎ.ಸಿ.ಬಿ ಸೃಜಿಸಿ, ಪ್ರಕರಣ ಮುಚ್ಚಿಹಾಕಲು ಬಿ ವರದಿ ಹಾಕಿದರು. ಅವೆಲ್ಲವನ್ನೂ ಲೋಕಾಯುಕ್ತಕ್ಕೆ ಶಿಫಾರಸು ಮಾಡುತ್ತಿದ್ದೇವೆ. ಇವರಿಗೆ ಯಾವ ನೈತಿಕ ಹಕ್ಕಿದೆ. ಲೋಕಾಯುಕ್ತ ಮುಚ್ಚಿದ ಪ್ರಶಸ್ತಿ ಭ್ರಷ್ಟಾಚಾರ ಬೆಂಬಲಿಸಲು, ಅದರ ಪರವಾಗಿ, ಕುಮ್ಮಕ್ಕು ನೀಡಲು, ಭ್ರಷ್ಟಾಚಾರ ದೊಂದಿಗೆ ಕೈಜೋಡಿಸಿ ಸರ್ಕಾರ ನಡೆಸಿದವರು. ಭ್ರಷ್ಟಾಚಾರ ಇವರ ಸರ್ಕಾರದ ಆಡಳಿತದ ಒಂದು ಭಾಗವಾಗಿದೆ. ಅದಕ್ಕಾಗಿ ಅದನ್ನು ಮುಚ್ಚಿಹಾಕಿದರು. . ದಾಖಲೆ ಸಮೇತ ದೂರು ನೀಡಿದರೆ ವಿಚಾರಣೆಯನ್ನೂ ಮುಚ್ಚಿಹಾಕುವ ಕೆಲಸ ಮಾಡಿದ್ದಾರೆ. ತಾವು ಮಾಡಿರುವ ಕೆಲಸವನ್ನು ಮುಚ್ಚಿಕೊಳ್ಳಲು ಈ ಪ್ರತಿಭಟನೆ ಮಾಡುತ್ತಿದ್ದಾರೆ ಎಂದರು.
*ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ*
ಜನ ಇದನ್ನು ಒಪ್ಪುವುದಿಲ್ಲ. ಕಾಂಗ್ರೆಸ್ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಎಂದರೆ ನಿಜವಾಗಿಯೂ ಹಾಸ್ಯಾಸ್ಪದ ಎಂದರು. ಇದು ನ್ಯಾಯವೇ? ಎಂದು ಪ್ರಶ್ನಿಸಿದರು. ತಮ್ಮ ಕೈಗೆ ಹತ್ತಿರುವ ಮಸಿಯನ್ನು ಮೊದಲು ನೋಡಿಕೊಳ್ಳಲಿ. ತಮ್ಮ ಎಲೆಯಲ್ಲಿ ಕತ್ತೆ ಬಿದ್ದಿರುವುದನ್ನು ನೋಡಿಕೊಳ್ಳಲಿ ಎಂದರು.
*ಜನಬೆಂಬಲವಿದೆ*
ಪ್ರಧಾನಿಗಳನ್ನು ಹಿಟ್ಲರ್ ಎಂದು ಕರೆದಿರುವ ಬಗ್ಗೆ ಪ್ರತಿಕ್ರಿಯಿಸಿ ಟೀಕೆಗಳನ್ನು ನಾನು ಯಶಸ್ಸಿನ ಮೆಟ್ಟಿಲುಗಳನ್ನಾಗಿ ಮಾಡಿಕೊಳ್ಳುತ್ತೇನೆ ಎಂದರು. ಪ್ರಧಾನಿಗಳು ವಿಶ್ವವ್ಯಾಪಿ ನಾಯಕರು. ಇಡೀ ಭಾರತ ದೇಶದಲ್ಲಿ ಜನಮನ್ನಣೆ ಗಳಿಸಿದವರು. ಅವರ ಬಗ್ಗೆ ಇರುವ ಸದಭಿಪ್ರಾಯ ಬಹುತೇಕ ಯಾವುದೇ ಪ್ರಧಾನಿಗಳಿಗಿಲ್ಲ. ಅಂಥವರ ಬಗ್ಗೆ ಮಾತನಾಡಿದರೆ ಜನ ನಂಬುವುದಿಲ್ಲ. ಆಕಾಶಕ್ಕೆ ಉಗುಳಿದಂತೆ ಎಂದರು. ಗುಜರಾತ್ ನಲ್ಲಿ ಅವರು ಮುಖ್ಯಮಂತ್ರಿಗಳಾಗಿ ದ್ದಾಗ ಕಾಂಗ್ರೆಸ್ ನಾಯಕಿ ಮೋತ್ ಕಾ ಸೌದಾಗರ್ ಎಂದಿದ್ದರು. ಆಗ ಅವರಿಗೆ ಹೆಚ್ಚು ಮತ ದೊರೆತು ಜಾಸ್ತಿ ಸ್ಥಾನಗಳು ದೊರೆಯಿತು. ಅವರು ಏನು ಹೇಳುತ್ತಾರೋ ಹೇಳಲಿ ಜನಬೆಂಬಲ ನಮ್ಮ ಜೊತೆಗಿದೆ. ಇನ್ನಷ್ಟು ಬೆಂಬಲ ಹೆಚ್ಚಾಗುತ್ತದೆ ಎಂದರು.
ಕಾಂಗ್ರೆಸ್ ಪ್ರತಿಭಟನೆಗೆ ಸಂಬಂಧಿಸಿದಂತೆ ಪೊಲೀಸರು ಕಾನೂನಿನಂತೆ ಕ್ರಮ ವಹಿಸುವರು ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
[23/01, 2:31 PM] Cm Ps: *ಬೆಂಗಳೂರು ಹಾಳು ಮಾಡಿದವರು ಕಾಂಗ್ರೆಸ್ ನವರು*; *ಸಿಎಂ ಬೊಮ್ಮಾಯಿ*
ಬೆಳಗಾವಿ, ಜನವರಿ 23: ಬೆಂಗಳೂರನ್ನು ಹಾಳು ಮಾಡಿದವರು ಕಾಂಗ್ರೆಸ್ಸಿನವರು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದ್ವರೊಂದಿಗೆ ಮಾತನಾಡಿದರು.
*ಭ್ರಷ್ಟಾಚಾರ ಕಾಂಗ್ರೆಸ್ ನ ಅವಿಭಾಜ್ಯ ಅಂಗ*
ಹತ್ತು ಹದಿನೈದು ಜನ ಸೇರಿ 300 ಕಡೆ ಪ್ರತಿಭಟನೆ ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಒತ್ತುವರಿಯಾಗಲು, ರಾಜಕಾಲುವೆ ಮುಚ್ಚಲು, ಅದರ ಹೆಸರಿನಲ್ಲಿ ಭ್ರಷ್ಟಾಚಾರ ಮಾಡಲು ಹತ್ತು ಹಲವಾರು ಹಗರಣಗಳು ಅವರ ಕಾಲದಲ್ಲಿ ಆಗಿವೆ. ಅದನ್ನು ಮುಚ್ಚಿಹಾಕಲು ಈ ರೀತಿ ಮಾಡುತ್ತಿದ್ದಾರೆ. ಭ್ರಷ್ಟಾಚಾರ ಕಾಂಗ್ರೆಸ್ ನ ಅವಿಭಾಜ್ಯ ಅಂಗ. ಕಾಂಗ್ರೆಸ್ ನ ನಾಯಕರು ಭ್ರಷ್ಟಾಚಾರದಲ್ಲಿ ಪಿ.ಹೆಚ್.ಡಿ ಪಡೆದಿದ್ದಾರೆ. ಅವರು ಈ ರೀತಿಯ ನಾಟಕ ಮಾಡುತ್ತಾರೆ. ಜನ ಇದನ್ನು ಒಪ್ಪುವುದಿಲ್ಲ. ಮುನ್ನೂರು ಕಡೆ ಮಾಡುತ್ತಿರುವುದು ಒಂದು ಕಡೆ ಯಾರೂ ಬರೋಲ್ಲ ಎಂದು. ಅಲ್ಲಲ್ಲಿ ಅವರ ಕಾರ್ಯಕರ್ತರನ್ನು ನಿಲ್ಲಿಸಿ ಮಾಡುವುದು. ಲೋಕಾಯುಕ್ತ ಮುಚ್ಚಿದ ಇವರು ಭ್ರಷ್ಟಾಚಾರಕ್ಕೆ ಕೊಡುಗೆ ನೀಡಿದ್ದಾರೆ. ಅದಕ್ಕೆ ರಕ್ಷಣೆ ನೀಡಿದವರು. ಅವರ ವಿರುದ್ಧದ ಎಲ್ಲಾ ದೂರುಗಳನ್ನು ಎ ಸಿಬಿ ಗೆ ಕೊಟ್ಟು ಮುಚ್ಚಿಹಾಕಿದ್ದಾರೆ. ಅವೆಲ್ಲವೂ ಲೋಕಾಯುಕ್ತಕ್ಕೆ ಬಂದು ತನಿಖೆಯಾಗುವುದು ಎಂದರು.
*ಚರ್ಚೆ ಮಾಡದೇ ಓಡಿ ಹೋದರು*
ಬಹಿರಂಗ ಚರ್ಚೆ ಮಾಡಲಿ ಎಂದು ಕಾಂಗ್ರೆಸ್ ಆಹ್ವಾನಿಸಿರುವ ಬಗ್ಗೆ ಉತ್ತರಿಸಿ ಬಹಿರಂಗ ಚರ್ಚೆ ಎನ್ನುವುದು ಹಾಸ್ಯಾಸ್ಪದ. ವಿಧಾನಸಭೆಯಲ್ಲಿ ಚರ್ಚೆಗೆ ನೋಟೀಸು ನೀಡಿದಾಗ ಓಡಿ ಹೋದರು. ಬೆಳಗಾವಿಯಲ್ಲಿ ಒಂದು ವಾರದ ಮುನ್ನ ನೋಟೀಸು ಕೊಟ್ಟರು. ಕೊನೆ ಗಳಿಗೆವರೆಗೂ ಮಾತನಾಡಲಿಲ್ಲ. ಅದಕ್ಕಿಂತ ಬಹಿರಂಗ ಸಭೆ ಇನ್ಯಾವುದು ಬೇಕು. ಇಡೀ ರಾಜ್ಯವೇ ನೋಡುತ್ತಿರುತ್ತದೆ. ವೇದಿಕೆಯಾಗಿರುವುದೇ ಅದಕ್ಕೆ. ಅಲ್ಲಿ ಚರ್ಚಿಸದೆ ಇಲ್ಲಿ ಮಾತನಾಡುವುದು ಪ್ರಯೋಜನವಿಲ್ಲ. ನಾವು ವಿಧಾನಸಭೆಯಲ್ಲಿ ಎದುರಿಸಲು ಶಕ್ತಿಯಿದೆ. ಜನರ ಬಳಿಯೂ ತೆಗೆದುಕೊಂಡು ಹೋಗುವ ಶಕ್ತಿಯಿದೆ ಹತಾಶರಾಗಿ ಈ ರೀತಿ ಮಾಡುತ್ತಿದ್ದಾರೆ ಎಂದರು.
*ಜನವರಿ 28 ಕ್ಕೆ ರಾಜ್ಯಕ್ಕೆ ಅಮಿತ್ ಶಾ*
ಇದೆ ಮಾಹೆಯ 28ಕ್ಕೆ ಅಮಿತ್ ಶಾ ಹುಬ್ಬಳ್ಳಿ ಮತ್ತು ಬೆಳಗಾವಿಗೆ ಆಗಮಿಸುತ್ತಿದ್ದಾರೆ.
ಬೆಳಗಾವಿಯಲ್ಲಿ ಒಂದು ಸಾರ್ವಜನಿಕ ಸಭೆ ಹಾಗೂ ಮತ್ತೊಂದು ಪಕ್ಷದ ಪ್ರಮುಖರೊಂದಿಗೆ ಚರ್ಚೆ ನಡೆಯಲಿದೆ ಎಂದರು.
*ಕವಡೆ ಕಾಸಿನ ಕಿಮ್ಮತ್ತಿಲ್ಲ*
ಗೋವಾ ಸರ್ಕಾರ ಮಹದಾಯಿ ಡಿಪಿಆರ್ ರದ್ದುಗೊಳಿಸಬೇಕೆಂದು ನಿರ್ಣಯ ಅಂಗೀಕಾರ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದಕ್ಕೆ ಕವಡೆ ಕಾಸಿನ ಕಿಮ್ಮತ್ತಿಲ್ಲ ಎಂದರು. ನ್ಯಾಯಮಂಡಲಿ ರಚನೆಯಾಗಿ, ಆದೇಶ ನೀಡಿ, ಅಧಿಸೂಚನೆ ಹೊರಡಿಸಿದೆ. ನ್ಯಾಯಮಂಡಲಿ ಆದೇಶ ಸುಪ್ರೀಂಕೋರ್ಟ್ ಆದೇಶವಿದ್ದಂತೆ. ಅದರ ಆಧಾರದ ಮೇಲೆ. ಕಾನೂನು ಬದ್ಧವಾಗಿ ಕೆಲ್ಸ ಮಾಡುತ್ತಿದ್ದೇವೆ. ಈ ನಿರ್ಣಯ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು.
ಕಳಸಾ ಬಂಡೂರಿ ಯೋಜನೆಗೆ ಡಿಪಿಆರ್ ದೊರೆತಿದ್ದು, ಅರಣ್ಯ ಇಲಾಖೆಯ ಅನುಮೋದನೆ ದೊರೆತ ಕೂಡಲೇ ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದರು.
*ಕೀಳು ಮಾತುಗಳನ್ನಾಡುವ ಕಾಂಗ್ರೆಸ್*
ಆಕ್ರಮಣಕಾರಿಯಾಗಿ ಮಾತನಾಡಿವುದಿಲ್ಲ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಮೊದಲು ಅವರು ಮಾತನಾಡಲಿ ಎಂದರು. ಈಗಾಗಲೇ ಬಹಳಷ್ಟು ಜನ ಆಕ್ರಮಣಕಾರಿಯಾಗಿ ಮಾತನಾಡಲು ಆರಂಭಿಸಿದ್ದಾರೆ. ಸುಳ್ಳನ್ನು ಹೇಳುವ, ಕೀಳು ಮಾತುಗಳನ್ನಾಡುವ ಕಾಂಗ್ರೆಸ್ . ಇದು ನಮ್ಮ ರಾಜ್ಯದ ರಾಜಕಾರಣದ ಸಂಸ್ಕೃತಿಯಲ್ಲ. ಈ ಸಂಸ್ಕೃತಿಯಲ್ಲಿ ನಾವಿರಬೇಕು.
*ಹೊಸ ಬಸ್*
ಎನ್.ಡಬ್ಲ್ಯೂ ಕೆ.ಎಸ್.ಆರ್.ಟಿ. ಸಿ ಗೆ ಹೊಸ ಬಸ್ಸುಗಳ ಖರೀದಿಗೆ ಅನಿಮತಿ ನೀಡಲಾಗುವುದು ಎಂದರು.
[23/01, 5:46 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ಇಂದು ನಗರಾಭಿವೃದ್ದಿ ಇಲಾಖೆಗೆ ಸಂಬಂಧಿಸಿದಂತೆ ಸಭೆ ಜರುಗಿತು.
ಕರ್ನಾಟಕ ರಾಜ್ಯದ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವಡಗಿ, ಬಿ.ಡಿ.ಎ. ಅಧ್ಯಕ್ಷ ಎಸ್.ಆರ್. ವಿಶ್ವನಾಥ್, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಐ.ಎಸ್.ಎನ್ ಪ್ರಸಾದ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಹಾಗೂ ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್, ಆಯುಕ್ತ ತುಷಾರ್ ಗಿರಿನಾಥ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ. ಎ.ದಯಾನಂದ್ ಕರ್ನಾಟಕ ಸ್ಟಾರ್ಟ್ ಅಪ್ ವಿಷನ್ ಗ್ರೂಪ್ , ಅಧ್ಯಕ್ಷ ಪ್ರಶಾಂತ್ ಪ್ರಕಾಶ್ ಉಪಸ್ಥಿತರಿದ್ದರು.
[24/01, 11:49 AM] Cm Ps: ಫೆ. 13 ರಿಂದ 17 ರ ವರೆಗೆ ಬೆಂಗಳೂರಿನಲ್ಲಿ ನಡೆಯುವ ಏರೊ ಇಂಡಿಯಾ ಏರ್ ಶೊ ಪೂರ್ವ ಸಿದ್ದತೆ ಕುರಿತು ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ ಸಿಂಗ್ ಅವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ವಿಡಿಯೊ ಕಾನ್ಪರೆನ್ಸ್ ಮೂಲಕ ಪಾಲ್ಗೊಂಡರು.
[24/01, 1:04 PM] Cm Ps: *ತೊಗರಿ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ*
*ಇಂದು ಸಂಜೆ ಪರಿಹಾರ ಘೋಷಣೆ : ಸಿಎಂ ಬೊಮ್ಮಾಯಿ*
ಕಲಬುರಗಿ, ಜನವರಿ 23: ತೊಗರಿ ಬೆಳಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಇಂದು ಸಂಜೆ 4 ಗಂಟೆಗೆ ಸಭೆ ಕರೆದಿದ್ದು, ಕೃಷಿ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಗಳ ಸಭೆಯಲ್ಲಿ ಪರಿಹಾರ ಎಷ್ಟು ಕೊಡಬೇಕೆಂದು ತೀರ್ಮಾನಿಸಿ, ಇಂದು ಸಂಜೆ ಘೋಷಣೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ವಿಶೇಷವಾಗಿ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ತೊಗರಿ ನಾಶವಾಗಿದ್ದು, ಅದಕ್ಕೆ ಪರಿಹಾರ ನೀಡಲು ರೈತರು ಕೂಡ ಒತ್ತಾಯ ಮಾಡಿದ್ದಾರೆ ಎಂದರು.
*ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ 67 ಕೋಟಿ ರೂ.ಗಳ ಡಿಪಿಆರ್ ಸಿದ್ದ*
ವಿಠಲ ಹೇರೂರ ಅವರ ಮೂರ್ತಿಯ ಅನಾವರಣ ಹಾಗೂ ಗಾಣಗಾ ಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಜಿಲ್ಲಾಡಳಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದು, ಸುಮಾರು 60 ಕೋಟಿ ಗಿಂತ ಹೆಚ್ಚು ಅನುದಾನದ ಅಗತ್ಯವಿದೆ. ಕಾಶಿ ವಿಶ್ವನಾಥ, ಉಜ್ಜಯನಿಯ ಕಾಳಹಸ್ತಿಯಲ್ಲಿ ನಿರ್ಮಿಸಿರುವಂತೆ ಕಾರಿಡಾರ್ ನಿರ್ಮಿಸಬೇಕು ಎಂದು 67 ಕೋಟಿ ರೂ.ಗಳ ಡಿಪಿಆರ್ ಸಿದ್ದ ಮಾಡಿದ್ದಾರೆ.ಬರುವ ಬಜೆಟ್ ನಲ್ಲಿ ಸರ್ಕಾರ ಕಾರಿಡಾರ್ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.
*ಪ್ರಧಾನಿಗಳಿಂದ ಏರೋ ಇಂಡಿಯಾ ಷೋ ಉದ್ಘಾಟನೆ*
ಕಲಬುರಗಿಗೆ ಆಗಮಿಸಿದ ಕೂಡಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಕ್ಷಣಾ ಇಲಾಖೆಯ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಫೆ 13 ನೇ ತಾರೀಖಿನಿಂದ ಪ್ರಾರಂಭವಾಗುವ ಏರೋ ಇಂಡಿಯಾ ಷೋ ಪ್ರತಿಷ್ಠಿತ ಕಾರ್ಯಕ್ರಮವಾಗಿದ್ದು,1996 ರಿಂದ ಬೆಂಗಳೂರಿನ ಏರ್ ಫೋರ್ಸ್ ನಿಲ್ದಾಣದಲ್ಲಿ ನಿರಂತರವಾಗಿ ಕರ್ನಾಟಕ ಆತಿಥ್ಯ ವಹಿಸಿದೆ. ಈ ಬಾರಿ ಅತಿ ದೊಡ್ಡ ಏರ್ ಷೋ ನಡೆಯಲಿದ್ದು, ಅತಿ ಹೆಚ್ವು ಜನ ಭಾಗವಹಿಸುತ್ತಿದ್ದಾರೆ. ಗಣ್ಯರು, ಏರೋಸ್ಪೇಸ್ ಮುಖ್ಯಸ್ಥರು, ಕಂಪನಿಗಳ ಸಿಇಒಗಳು ದೊಡ್ಡ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ. ಭಾರತೀಯ, ಕರ್ನಾಟಕ ಸೇರಿದಂತೆ ದೊಡ್ಡ ಪ್ರಮಾಣದಲ್ಲಿ ಏರೋಸ್ಪೇಸ್ ಕಂಪನಿಗಳ ವಸ್ತುಪ್ರದರ್ಶನವಿದೆ. ಸಾರ್ವಜನಿಕರು ನೋಡಲು ಏರ್ ಷೋ ಕೂಡ ಇರಲಿದೆ. ಇಂಥ ಬೃಹತ್ ಷೋ ನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಅದರ ಪೂರ್ವಭಾವಿ ಸಿದ್ಧತೆಗಳ ವೀಡಿಯೋ ಸಂವಾದ ನಡೆಯಿತು ಎಂದರು.
*ತನಿಖೆಯಾಗುತ್ತದೆ*
ಪಿ.ಎಸ್.ಐ ನೇಮಕಾತಿಗೆ ಸಂಬಂಧಿಸಿದಂತೆ ಆರೋಪಿ ರುದ್ರೇಗೌಡ ತನಿಖಾಧಿಕಾರಿಗಳು ಡಿವೈಎಸ್ಪಿ ಶಂಕರಗೌಡರು 3 ಕೋಟಿ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರೋಪಿ ಹೇಳಿಕೆ ಬಗ್ಗೆ ಮಾಹಿತಿ ಅಲ್ಲಿಯ ತನಿಖಾಧಿಕಾರಿ ಬಳಿ ಇರುತ್ತದೆ. ಮೊದಲು ಅವರ ಮೇಲಿನ ಆರೋಪ, ಕೋರ್ಟಿನ ಆದೇಶ, ನ್ಯಾಯಾಂಗ ಬಂಧನ ಎಲ್ಲಾ ಕಾನೂನಿನ ಪ್ರಕಾರ ತನಿಖೆ ಯಾಗುತ್ತದೆ.ಅದೇ ರೀತಿ ಆತ ನೀಡಿರುವ ಸಾಕ್ಷ್ಯಾಧಾರಗಳ ಮೇಲೆ ಅಧಿಕಾರಿಯ ಮೇಲೂ ತನಿಖೆ ನಡೆಯಲಿದೆ ಎಂದರು.
*ವ್ಯಕ್ತಿಗತ ಹೇಳಿಕೆಗೆ ಉತ್ತರಿಸೊಲ್ಲ*
ಶೃಂಗೇರಿ ಶಾಸಕರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಯಾರಿಗೆ ನೋವಾಗುತ್ತದೆ ಅವರು ಪ್ರತಿಕ್ರಿಯೆ ನೀಡುತ್ತಾರೆ. ನಾನು ಪ್ರತಿಯೊಂದು ವ್ಯಕ್ತಿಗತ ಹೇಳಿಕೆಗೆ ಉತ್ತರಿಸಲು ಸಾಧ್ಯವಿಲ್ಲ ಎಂದರು.
[24/01, 1:39 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನ ಗಾಣಗಾಪುರದಲ್ಲಿರುವ ಶ್ರೀ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆಯಲ್ಲಿ ಭಾಗಿಯಾದರು.
[24/01, 3:15 PM] Cm Ps: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ದೇವಲ ಗಾಣಗಾಪುರದಲ್ಲಿರುವ ಹೇರೂರ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವದಲ್ಲಿ ಭಾಗಿಯಾಗಿ, ವಿಠ್ಠಲ ಹೇರೂರರ ಕಂಚಿನ ಮೂರ್ತಿ ಅನಾವರಣ ಹಾಗೂ ವಿಠ್ಠಲ ಹೇರೂರರ ಗೀತೆಗಳ ಸಿಡಿ ಬಿಡುಗಡೆ ಮಾಡಿದರು.
ಈ ಸಂದರ್ಭದಲ್ಲಿ ಹಾವೇರಿಯ ಅಂಬಿಗರ ಚೌಡಯ್ಯ ಪೀಠದ ಶಾಂತಭೀಷ್ಮ ಸ್ವಾಮೀಜಿ, ಅಲ್ಲಮ ಪ್ರಭು ಪೀಠದ ಮಲ್ಲಣ್ಣಪ್ಪ ಸ್ವಾಮೀಜಿ, ಶಾಸಕರಾದ ಎಂ.ವೈ ಪಾಟಿಲ್, ದತ್ತಾತ್ರೆಯ ಪಾಟೀಲ್ ರೇವೂರು, ವಿಧಾನ ಪರಿಷತ್ ಸದಸ್ಯರಾದ ಬಾಬುರಾವ್ ಚಿಂಚನಸೂರ್, ಮಾಜಿ ಸಚಿವ ಮಾಲಿಕಯ್ಯ ಗುತ್ತೆದಾರ, ಪ್ರಮೋದ್ ಮದ್ವರಾಜ್, ತಿಪ್ಪಣ್ಣ ಕಮಕನೂರು ಹಾಗೂ ಮತ್ತಿತರರು ಹಾಜರಿದ್ದರು.
[24/01, 6:41 PM] Cm Ps: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ರಾಜಭವನದ ಗಾಜಿನಮನೆಯಲ್ಲಿ ಉಚ್ಛ ನ್ಯಾಯಾಲಯದ ಹೆಚ್ಚುವರಿ ನ್ಯಾಯಮೂರ್ತಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
[24/01, 6:45 PM] Cm Ps: *ತೊಗರಿ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರದ ಸ್ಪಂದನೆ*
*ಇಂದು ಸಂಜೆ ಪರಿಹಾರ ಘೋಷಣೆ : ಸಿಎಂ ಬೊಮ್ಮಾಯಿ*
ಕಲಬುರಗಿ, ಜನವರಿ 23: ತೊಗರಿ ಬೆಳಗಾರರ ಸಂಕಷ್ಟಕ್ಕೆ ಸ್ಪಂದಿಸಿ ಪರಿಹಾರ ನೀಡಲು ತೀರ್ಮಾನಿಸಿದ್ದು, ಇಂದು ಸಂಜೆ 4 ಗಂಟೆಗೆ ಸಭೆ ಕರೆದಿದ್ದು, ಕೃಷಿ ಇಲಾಖೆ, ಆರ್ಥಿಕ ಇಲಾಖೆ ಹಾಗೂ ಸಂಬಂಧಪಟ್ಟ ಅಧಿಕಾರಗಳ ಸಭೆಯಲ್ಲಿ ಪರಿಹಾರ ಎಷ್ಟು ಕೊಡಬೇಕೆಂದು ತೀರ್ಮಾನಿಸಿ, ಇಂದು ಸಂಜೆ ಘೋಷಣೆ ಮಾಡಲಾಗುವುದು ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಇಂದು ಕಲಬುರಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಈ ಭಾಗದಲ್ಲಿ ತೊಗರಿ ಬೆಳೆಗಾರರು ಸಂಕಷ್ಟಕ್ಕೆ ಈಡಾಗಿದ್ದಾರೆ. ಸುಮಾರು 2 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ನಷ್ಟ ಉಂಟಾಗಿದೆ. ವಿಶೇಷವಾಗಿ ಕಲಬುರ್ಗಿ, ಬೀದರ್ ಜಿಲ್ಲೆಗಳಲ್ಲಿ ತೊಗರಿ ನಾಶವಾಗಿದ್ದು, ಅದಕ್ಕೆ ಪರಿಹಾರ ನೀಡಲು ರೈತರು ಕೂಡ ಒತ್ತಾಯ ಮಾಡಿದ್ದಾರೆ ಎಂದರು.
*ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ 67 ಕೋಟಿ ರೂ.ಗಳ ಡಿಪಿಆರ್ ಸಿದ್ದ*
ವಿಠಲ ಹೇರೂರ ಅವರ ಮೂರ್ತಿಯ ಅನಾವರಣ ಹಾಗೂ ಗಾಣಗಾ ಪುರದ ದತ್ತಾತ್ರೇಯ ದೇವಸ್ಥಾನಕ್ಕೆ ಭೇಟಿ ನೀಡುವ ಕಾರ್ಯಕ್ರಮವಿದೆ. ಗಾಣಗಾಪುರದ ಸಮಗ್ರ ಅಭಿವೃದ್ಧಿಗೆ ನಮ್ಮ ಸರ್ಕಾರ ಚಿಂತನೆ ನಡೆಸಿದೆ. ಈಗಾಗಲೇ 5 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಜಿಲ್ಲಾಡಳಿತ ಮಾಸ್ಟರ್ ಪ್ಲಾನ್ ಸಿದ್ಧಪಡಿಸಿದ್ದು, ಸುಮಾರು 60 ಕೋಟಿ ಗಿಂತ ಹೆಚ್ಚು ಅನುದಾನದ ಅಗತ್ಯವಿದೆ. ಕಾಶಿ ವಿಶ್ವನಾಥ, ಉಜ್ಜಯನಿಯ ಮಹಾಕಾಲೇಶ್ವರದಲ್ಲಿ ನಿರ್ಮಿಸಿರುವಂತೆ ಕಾರಿಡಾರ್ ನಿರ್ಮಿಸಬೇಕು ಎಂದು 67 ಕೋಟಿ ರೂ.ಗಳ ಡಿಪಿಆರ್ ಸಿದ್ದ ಮಾಡಿದ್ದಾರೆ.ಬರುವ ಬಜೆಟ್ ನಲ್ಲಿ ಸರ್ಕಾರ ಕಾರಿಡಾರ್ ನಿರ್ಮಾಣಕ್ಕೆ ಎಲ್ಲ ಕ್ರಮ ಕೈಗೊಳ್ಳಲಿದೆ ಎಂದರು.
*ಪ್ರಧಾನಿಗಳಿಂದ ಏರೋ ಇಂಡಿಯಾ ಷೋ ಉದ್ಘಾಟನೆ*
ಕಲಬುರಗಿಗೆ ಆಗಮಿಸಿದ ಕೂಡಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಕ್ಷಣಾ ಇಲಾಖೆಯ ಮುಖ್ಯಸ್ಥರು, ಮುಖ್ಯ ಕಾರ್ಯದರ್ಶಿ ಗಳೊಂದಿಗೆ ವೀಡಿಯೊ ಸಂವಾದ ನಡೆಸಿದರು. ಫೆ 13 ನೇ ತಾರೀಖಿನಿಂದ ಪ್ರಾರಂಭವಾಗುವ ಏರೋ ಇಂಡಿಯಾ ಷೋ ಪ್ರತಿಷ್ಠಿತ ಕಾರ್ಯಕ್ರಮವಾಗಿದ್ದು,1996 ರಿಂದ ಬೆಂಗಳೂರಿನ ಏರ್ ಫೋರ್ಸ್ ನಿಲ್ದಾಣದಲ್ಲಿ ನಿರಂತರವಾಗಿ ಕರ್ನಾಟಕ ಆತಿಥ್ಯ ವಹಿಸಿದೆ. ಈ ಬಾರಿ ಅತಿ ದೊಡ್ಡ ಏರ್ ಷೋ ನಡೆಯಲಿದ್ದು, ಅತಿ ಹೆಚ್ವು ಜನ ಭಾಗವಹಿಸುತ್ತಿದ್ದಾರೆ. ಗಣ್ಯರು, ಏರೋಸ್ಪೇಸ್ ಮುಖ್ಯಸ್ಥರು, ಕಂಪನಿಗಳ ಸಿಇಒಗಳು ದೊಡ್ಡ ಪ್ರಮಾಣದಲ್ಲಿ ಭಾಗವಹಿಸಲಿದ್ದಾರೆ. ಭಾರತೀಯ, ಕರ್ನಾಟಕ ಸೇರಿದಂತೆ ದೊಡ್ಡ ಪ್ರಮಾಣದಲ್ಲಿ ಏರೋಸ್ಪೇಸ್ ಕಂಪನಿಗಳ ವಸ್ತುಪ್ರದರ್ಶನವಿದೆ. ಸಾರ್ವಜನಿಕರು ನೋಡಲು ಏರ್ ಷೋ ಕೂಡ ಇರಲಿದೆ. ಇಂಥ ಬೃಹತ್ ಷೋ ನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಲಿದ್ದಾರೆ. ಅದರ ಪೂರ್ವಭಾವಿ ಸಿದ್ಧತೆಗಳ ವೀಡಿಯೋ ಸಂವಾದ ನಡೆಯಿತು ಎಂದರು.
*ತನಿಖೆಯಾಗುತ್ತದೆ*
ಪಿ.ಎಸ್.ಐ ನೇಮಕಾತಿಗೆ ಸಂಬಂಧಿಸಿದಂತೆ ಆರೋಪಿ ರುದ್ರೇಗೌಡ ತನಿಖಾಧಿಕಾರಿಗಳು ಡಿವೈಎಸ್ಪಿ ಶಂಕರಗೌಡರು 3 ಕೋಟಿ ಬೇಡಿಕೆ ಇಟ್ಟಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಆರೋಪಿ ಹೇಳಿಕೆ ಬಗ್ಗೆ ಮಾಹಿತಿ ಅಲ್ಲಿಯ ತನಿಖಾಧಿಕಾರಿ ಬಳಿ ಇರುತ್ತದೆ. ಮೊದಲು ಅವರ ಮೇಲಿನ ಆರೋಪ, ಕೋರ್ಟಿನ ಆದೇಶ, ನ್ಯಾಯಾಂಗ ಬಂಧನ ಎಲ್ಲಾ ಕಾನೂನಿನ ಪ್ರಕಾರ ತನಿಖೆ ಯಾಗುತ್ತದೆ.ಅದೇ ರೀತಿ ಆತ ನೀಡಿರುವ ಸಾಕ್ಷ್ಯಾಧಾರಗಳ ಮೇಲೆ ಅಧಿಕಾರಿಯ ಮೇಲೂ ತನಿಖೆ ನಡೆಯಲಿದೆ ಎಂದರು.
[24/01, 8:34 PM] Cm Ps: ಬೆಂಗಳೂರು, ಜನವರಿ 24- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರು ಜಿಲ್ಲೆಯಲ್ಲಿ ಮಾನವ – ವನ್ಯಪ್ರಾಣಿ ಸಂಘರ್ಷ ಕುರಿತಂತೆ ಅರಣ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಚರ್ಚಿಸಿದರು. ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
[24/01, 8:48 PM] Cm Ps: *ನೆಟೆ ರೋಗದಿಂದ ತೊಗರಿ ಬೆಳೆ ನಷ್ಟ: ಹೆಕ್ಟೇರ್ ಗೆ 10 ಸಾವಿರ ಪರಿಹಾರ*
ಬೆಂಗಳೂರು, ಜನವರಿ 24-
ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ನೆಟೆ ರೋಗದಿಂದ ತೊಗರಿ ಬೆಳೆಗೆ ಸಂಭವಿಸಿದ ಬೆಳೆಹಾನಿಯನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಸರ್ಕಾರವು ಪ್ರತಿ ಹೆಕ್ಟೇರ್ ಗೆ 10,000 ರೂ. ಗಳಂತೆ ಎನ್.ಡಿ.ಆರ್.ಎಫ್./ ಎಸ್.ಡಿ.ಆರ್.ಎಫ್. ಮಾರ್ಗಸೂಚಿಯಂತೆ ಗರಿಷ್ಟ 2 ಹೆಕ್ಟೇರ್ಗೆ ಸೀಮಿತಗೊಳಿಸಿ ಬಾಧಿತ ರೈತರಿಗೆ ಪರಿಹಾರ ಘೋಷಿಸಿದೆ.
ಒಟ್ಟು ಪರಿಹಾರ ಮೊತ್ತವು ರೂ. 223 ಕೋಟಿಯೆಂದು ಅಂದಾಜಿಸಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕಲಬುರಗಿ ಜಿಲ್ಲಾ ಪ್ರವಾಸದಿಂದ ಹಿಂತಿರುಗಿದ ನಂತರ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಈ ತೀರ್ಮಾನ ಕೈಗೊಳ್ಳಲಾಯಿತು.
ಬೀದರ, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಅಕಾಲಿಕ ಮಳೆ ಹಾಗೂ ತದನಂತರ ನವೆಂಬರ್ ತಿಂಗಳಿನಲ್ಲಿ ತಲೆದೋರಿದ ಒಣ/ ಶುಷ್ಕ ವಾತಾವರಣದಿಂದ ತೊಗರಿ ಬೆಳೆಯಲ್ಲಿ ಸಂಕೀರ್ಣ ನೆಟೆ ರೋಗ ಮೇಲಿನ ಮೂರು ಜಿಲ್ಲೆಗಳಲ್ಲಿ ಉಲ್ಬಣ ಗೊಂಡು ಬೆಳೆಹಾನಿಯಾಗಿದ್ದು, ಕಲಬುರಗಿ ಜಿಲ್ಲೆಯಲ್ಲಿ ಸುಮಾರು 1.98 ಲಕ್ಷ ಹೆಕ್ಟೇರ್, ಬೀದರ ಜಿಲೆಯಲ್ಲಿ ಸುಮಾರು 0.145 ಲಕ್ಷ ಹೆಕ್ಟೇರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಸುಮಾರು 0.1028 ಲಕ್ಷ ಹೆಕ್ಟೇರ್ ಒಟ್ಟಾರೆಯಾಗಿ 2.2278 ಲಕ್ಷ ಹೆಕ್ಟೇರ್ ವಿಸ್ತೀರ್ಣದಲ್ಲಿ ತೊಗರಿ ಬೆಳೆ ಸಂಕೀರ್ಣ ನೆಟೆ ರೋಗಕ್ಕೆ ಹಾನಿಯಾಗಿರುವುದು ವರದಿಯಾಗಿರುತ್ತದೆ. ಹಾನಿಗೊಳಗಾದ ರೈತರ ನೆರೆವಿಗೆ ಧಾವಿಸಿದ ಸರ್ಕಾರವು “ವಿಶೇಷ ಪ್ರಕರಣ”ವೆಂದು ರಾಜ್ಯ ಸರ್ಕಾರ ತೀರ್ಮಾನಿಸಿ ಪರಿಹಾರ ಘೋಷಿಸಿದೆ.
[24/01, 9:15 PM] Cm Ps: ತೊಗರಿ ಬೆಳೆ ಹಾನಿಗೆ ಪರಿಹಾರ ನೀಡುವ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಹಣಕಾಸು ಹಾಗೂ ಕೃಷಿ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿದರು.
ಹಣಕಾಸು ಇಲಾಖೆಯ ಎಸಿಎಸ್ ಐ ಎಸ್ ಎನ್ ಪ್ರಸಾದ್, ಮುಖ್ಯಮಂತ್ರಿ ಗಳ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.
[24/01, 9:15 PM] Cm Ps: *ತಿ. ನರಸೀಪುರ: ಚಿರತೆಯನ್ನು ಕೂಡಲೇ ಸೆರೆಹಿಡಿಯಲು ಟಾಸ್ಕ್ ಫೋರ್ಸ್ ರಚನೆ- ಮುಖ್ಯಮಂತ್ರಿ ಸೂಚನೆ*
ಬೆಂಗಳೂರು, ಜನವರಿ 24- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಮೈಸೂರು ಜಿಲ್ಲೆಯ ತಿ. ನರಸೀಪುರದಲ್ಲಿ ಚಿರತೆ ದಾಳೆ ಪ್ರಕರಣಗಳ ಕುರಿತಂತೆ ಅರಣ್ಯ ಇಲಾಖೆ ಹಾಗೂ ಮೈಸೂರು ಜಿಲ್ಲಾಡಳಿತದೊಂದಿಗೆ ಸಭೆ ನಡೆಸಿ ಚರ್ಚಿಸಿ, ಚಿರತೆ ಟಾಸ್ಕ್ ಫೋರ್ಸ್ ರಚಿಸಲು ಸೂಚಿಸಿದರು.
ತಿ. ನರಸೀಪುರ ತಾಲ್ಲೂಕಿನಲ್ಲಿ ಸಂಭವಿಸಿದ ಚಿರತೆ ದಾಳಿ ಪ್ರಕರಣಗಳ ಕುರಿತು ಕಳವಳ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಈ ಚಿರತೆಯನ್ನು ಕೂಡಲೇ ಸೆರೆ ಹಿಡಿಯಲು ಎಲ್ಲ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಪ್ರಸ್ತುತ ಚಿರತೆ ಸೆರೆ ಹಿಡಿಯಲು 158 ಮಂದಿ ಕೆಲಸ ಮಾಡುತ್ತಿದ್ದಾರೆ. ಕೋಂಬಿಂಗ್ ಆಪರೇಷನ್ ಪ್ರಾರಂಭವಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು. ಪ್ರಕರಣ ಸಂಭವಿಸಿದ 3-4 ಕಿ.ಮೀ. ಸುತ್ತಳತೆಯಲ್ಲಿ ಕೋಂಬಿಂಗ್ ಕಾರ್ಯಾಚರಣೆ ನಡೆಸಲು ಸೂಚಿಸಿದರು. ಚಿರತೆ ದಾಳಿಯಿಂದಾಗಿ ತಿ. ನರಸೀಪುರ ತಾಲ್ಲೂಕಿನ 21 ಹಳ್ಳಿಗಳು ಬಾಧಿತವಾಗಿದೆ. ಈ ಹಳ್ಳಿಗಳಲ್ಲಿ ಚಿರತೆ ಸೆರೆ ಹಿಡಿಯಲು ಸ್ಥಳೀಯರ ನೆರವು ಪಡೆಯುವಂತೆ ಸೂಚಿಸಿದರು. ಅಗತ್ಯವಿದ್ದಲ್ಲಿ ಸಶಸ್ತ್ರ ಮೀಸಲು ಪೊಲೀಸ್ ಪಡೆಗಳ ನೆರವು ಪಡೆಯಲು ಸೂಚಿಸಿದರು.
ಸಭೆಯಲ್ಲಿ ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಅರಣ್ಯ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್, ಮುಖ್ಯಮಂತ್ರಿಯವರ ಕಾರ್ಯದರ್ಶಿ ಎಂ.ಎಸ್. ಶ್ರೀಕರ್, ಮೈಸೂರು ಜಿಲ್ಲಾಧಿಕಾರಿ ಕೆ.ವಿ. ರಾಜೇಂದ್ರ ಮತ್ತು ಇತರ ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.
Post a Comment