[11/01, 12:34 PM] Kpcc official: ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಹಿರಿಯ ಮುಖಂಡ ಆರ್ ವಿ ದೇಶಪಾಂಡೆ ಅವರು ಪ್ರಜಾಧ್ವನಿ ಬಸ್ ಯಾತ್ರೆ ಆರಂಭಕ್ಕೆ ಮೊದಲು ಬೆಳಗಾವಿಯ ವೀರಸೌಧದಲ್ಲಿ ಮಹಾತ್ಮ ಗಾಂಧೀಜಿ ಅವರ ಪ್ರತಿಮೆಗೆ ಬುಧವಾರ ನಮನ ಸಲ್ಲಿಸಿದರು. ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್,
[11/01, 1:22 PM] Kpcc official: ಬೆಳಗಾವಿಯ ಚಿಕ್ಕೋಡಿಯಲ್ಲಿ ಬುಧವಾರ ಪ್ರಜಾಧ್ವನಿ ಬಸ್ ಯಾತ್ರೆ ನಿಮಿತ್ತ ನಡೆದ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಯು ಟಿ ಖಾದರ್, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್ ಮತ್ತಿತರರು ಭಾಗವಹಿಸಿದ್ದರು.
[11/01, 1:42 PM] Kpcc official: *ಬೆಳಗಾವಿಯಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾಧ್ಯಮ ಪ್ರತಿಕ್ರಿಯೆ*
ಕರ್ನಾಟಕ ರಾಜ್ಯದ ಬದಲಾವಣೆಗೆ ನಾಂದಿ ಹಾಡುವ ದಿನ ಇಂದು. ಮಹಾತ್ಮ ಗಾಂಧಿ ಅವರು ಬ್ರಿಟೀಷರನ್ನು ದೇಶದಿಂದ ಹೊರಗೊಡಿಸಲು ಈ ಭೂಮಿಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕತ್ವವನ್ನು ವಹಿಸಿಕೊಂಡರು. ನಾವು ಈ ಕೆಟ್ಟ ಸರ್ಕಾರದ ಕೊಳೆಯನ್ನು ಇಲ್ಲಿನ ಗಾಂಧಿ ಬಾವಿಯ ಜಲದಿಂದ ತೊಳೆಯಲು ಈ ಯಾತ್ರೆ ಆರಂಭಿಸಿದ್ದೇವೆ.
ಗಾಂಧೀಜಿ ಅವರು ಇಲ್ಲಿಂದ ಹೋರಾಟ ಆರಂಭಿಸಿದ ನಂತರ ನಮಗೆ ಪ್ರಜಾಪ್ರಭುತ್ವ ಸಿಕ್ಕಿ, ದೇಶ ಅಭಿವೃದ್ಧಿಶೀಲ ರಾಷ್ಟ್ರವಾಗಿದೆ. ಕಾಂಗ್ರೆಸ್ 60 ಕ್ಕೂ ಹೆಚ್ಚು ವರ್ಷಗಳ ಕಾಲ ಆಡಳಿತ ಮಾಡಿದೆ. ಪ್ರತಿ ಹಂತದಲ್ಲಿ ನಾವು ಜನರ ಬದುಕಿಗೆ ಕಾರ್ಯಕ್ರಮ ರೂಪಿಸಿದ್ದೇವೆ.
ಪ್ರಜಾಧ್ವನಿ ರಾಜ್ಯದ ಜನರ ಧ್ವನಿ. ರಾಜ್ಯದಲ್ಲಿ ಜನಸಾಮಾನ್ಯರ ಧ್ವನಿಯನ್ನು ಹತ್ತಿಕ್ಕಲಾಗಿದೆ. ಜನ ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಇವುಗಳಿಗೆ ಪರಿಹಾರ ನೀಡಬೇಕಿದೆ. ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಸಂಪೂರ್ಣ ವಿಫಲವಾಗಿವೆ. ನವಕರ್ನಾಟಕಕ್ಕೆ ಹೊಸ ಭರವಸೆಗಳನ್ನು ನೀಡುತ್ತಿದ್ದೇವೆ. ನಮ್ಮ ಕರ್ನಾಟಕಕ್ಕೆ ನಮ್ಮ ವಚನ. ನಾವು ಕೊಟ್ಟ ಮಾತಿನಂತೆ ನಡೆಯುತ್ತೇವೆ. ಇದುವರೆಗೂ ಏನಾಗಿದೆ, ನಾವು ಮುಂದೆ ಏನು ಮಾಡುತ್ತೇವೆ ಎಂಬುದುನ್ನು ತಿಳಿಸುವುದು ಈ ಯಾತ್ರೆಯ ಉದ್ದೇಶ.
ಕಳೆದ ಮೂರು ವರ್ಷಗಳಿಂದ ರಾಜ್ಯ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಕಳಂಕ ತಂದಿದೆ. ಈ ಕಳಂಕ ನಿರ್ಮೂಲನೆ ಮಾಡಬೇಕು. ಜನರ ಅಭಿಪ್ರಾಯಕ್ಕೆ ಸ್ಪಂದಿಸಿ, ಪ್ರಜೆಗಳ ಧ್ವನಿ ತಿಳಿಸಲು ನಾವು ಈ ಐತಿಹಾಸಿಕ ಸ್ಥಳದಿಂದ ನಮ್ಮ ಪ್ರಜಾಧ್ವನಿ ಯಾತ್ರೆ ಆರಂಭಿಸುತ್ತಿದ್ದೇವೆ.
ಇಂದು ಆರಂಭವಾಗಲಿರುವ ಯಾತ್ರೆ ಈ ತಿಂಗಳು ಜಿಲ್ಲಾ ಕೇಂದ್ರಗಳಲ್ಲಿ ಪ್ರವಾಸ ಮಾಡಲಿದೆ. ನಂತರ 224 ವಿಧಾನಸಭಾ ಕ್ಷೇತ್ರಗಳಲ್ಲೂ ಪ್ರವಾಸ ಮಾಡುತ್ತೇವೆ. ಪ್ರಮುಖ ನಾಯಕರು ಬಸ್ ನಲ್ಲಿ ತೆರಳುತ್ತೇವೆ. ಎಲ್ಲ ನಾಯಕರು ಬಸ್ ನಲ್ಲಿ ಸಾಗಲು ಸಾಧ್ಯವಿಲ್ಲ. ಆಯಾ ಸ್ಥಳಕ್ಕೆ ಹೋದಾಯ ಕೆಲ ನಾಯಕರು ನಮ್ಮನ್ನು ಸೇರಿಕೊಳ್ಳುತ್ತಾರೆ. 20 ಜಿಲ್ಲೆಗಳಲ್ಲಿ ನಾನು, ಸಿದ್ದರಾಮಯ್ಯ, ಬಿ.ಕೆ. ಹರಿಪ್ರಸಾದ್, ಹೆಚ್.ಕೆ ಪಾಟೀಲ್, ಆ ಭಾಗದ ಶಾಸಕರು ಇರುತ್ತಾರೆ. ಕೆಲವರು ಕಾರ್ಯಕ್ರಮ ಆಯೋಜನೆಯಲ್ಲಿ ನಿರತರಾಗಿರುತ್ತಾರೆ.
ಹೊಸಬರಿಗೆ ಟಿಕೆಟ್ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಹೊಸಬರ ಬಗ್ಗೆ ನಾವು ಆಲೋಚನೆ ಮಾಡುತ್ತೇವೆ. ಹೊಸ ನೀರು, ಹೊಸ ಚಿಗುರು ಬಗ್ಗೆ ಕಾಂಗ್ರೆಸ್ ಸದಾ ಆಲೋಚನೆ ಮಾಡುತ್ತಿರುತ್ತದೆ. ನಮ್ಮ ಯಾತ್ರೆ ಜನರ ಬದುಕಿನಲ್ಲಿ ಕಾಂಗ್ರೆಸ್ ಪಕ್ಷದ ಪಾತ್ರ ತಿಳಿಸಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲ ಹೇಗೆ ಸಂವಿಧಾನ, ಕಾನೂನು ರಕ್ಷಣೆ ಮಾಡಿದೆ. ಜನರಿಗೆ ಕಾರ್ಯಕ್ರಮ ನೀಡಿದೆ. ಅವರ ಬದುಕಿನಲ್ಲಿ ಹೇಗೆ ಬದಲಾವಣೆ ತಂದಿದೆ ಎಂಬುದನ್ನು ತಿಳಿಸಲಿದೆ. ಅನೇಕ ಸಂಸ್ಥೆಗಳನ್ನು ಕಟ್ಟಿ, ಉದ್ಯೋಗ ಸೃಷ್ಟಿ ಮಾಡಿದೆ. ಬಿಜೆಪಿ ಎಲ್ಲವನ್ನು ಖಾಸಗಿಗೆ ಮಾರುತ್ತಿವೆ. ಇದನ್ನು ನಾವು ಜನರಿಗೆ ತಿಳಿಸಬೇಕು. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮಾತು ಕೊಟ್ಟರು. ಎಲ್ಲ ಬೆಲೆಗಳು ಹೆಚ್ಚಾಗಿ ಯಾರ ಆದಾಯವೂ ಡಬಲ್ ಆಗಿಲ್ಲ. ಯುವಕರು, ಮಹಿಳೆಯರು ಯಾರಿಗೂ ನೆಮ್ಮದಿಯಿಂದ ಬದುಕಲು ಸಾಧ್ಯವಾಗಿಲ್ಲ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮೇಲೆ ವಿಶ್ವಾಸ ಇಡಿ, ನಾವು ಶಕ್ತಿ ಮೀರಿ ನವ ಕರ್ನಾಟಕ ನಿರ್ಮಾಣಕ್ಕೆ ವಚನ ನೀಡುತ್ತೇವೆ’ ಎಂದು ಭರವಸೆ ನೀಡುತ್ತೇವೆ ಎಂದರು.
ಪಕ್ಷದ ಸಮೀಕ್ಷೆಯಲ್ಲಿ ಕೆಲ ಹಾಲಿ ಶಾಸಕರಿಗೆ ಸೋಲುವ ಭೀತಿ ಇದೆಯೇ ಎಂಬ ಬಗ್ಗೆ ಕೇಳಿದಾಗ, ‘ಅದೆಲ್ಲವೂ ಸುಳ್ಳು’ ಎಂದರು.
ಮೆಟ್ರೋ ಪಿಲ್ಲರ್ ದುರಂತದ ವಿಚಾರವಾಗಿ ಮುಖ್ಯಮಂತ್ರಿಗಳು ಕಾಂಗ್ರೆಸ್ ಸರ್ಕಾರದ ದುರಂತ ನೋಡಿದರೆ ಅದು 100% ಕಮಿಷನ್ ಸರ್ಕಾರ, ಕಾಮಾಲೆ ಕಣ್ಣಿಗೆ ಕಾಣುವುದೆಲ್ಲ ಹಳದಿ ಎಂದು ಟೀಕೆ ಮಾಡಿರುವ ಬಗ್ಗೆ ಕೇಳಿದಾಗ, ‘ಅವರು ವಿರೋಧ ಪಕ್ಷದಲ್ಲಿದ್ದಾಗ ಈ ವಿಚಾರಗಳ ಬಗ್ಗೆ ಧ್ವನಿ ಎತ್ತಲಿಲ್ಲ ಯಾಕೆ? ಅವರು ಈಗ ನೀಡುತ್ತಿರುವ ಹೇಳಿಕೆ ರಾಜ್ಯಕ್ಕೆ ನಾಚಿಕೆ ತರುವಂತಿದೆ. ಅವರು ಜನರ ಭಾವನೆ ಅರ್ಥ ಮಾಡಿಕೊಂಡು ಹೊಣೆಗಾರಿಕೆ ಹೊತ್ತುಕೊಳ್ಳಬೇಕು. ಈ ರೀತಿಯ ಸಮರ್ಥನೆ ಸರಿಯಲ್ಲ. ಈ ಸರ್ಕಾರ ಬಿ ರಿಪೋರ್ಟ್ ಬರೆಯುವುದರಲ್ಲೇ ಕಳೆದು ಹೋಗಿದ್ದು, ಇದೊಂದು ಬಿ ರಿಪೋರ್ಟ್ ಸರ್ಕಾರ. ಕೆಲಸಕ್ಕಾಗಿ ಮಂಚಕ್ಕೆ ಕರೆದ ಹಗರಣದಿಂದ ನೇಮಕಾತಿ, ಗುತ್ತಿಗೆದಾರರ ಹಗರಣ ಸೇರಿದಂತೆ ಎಲ್ಲ ಪ್ರಕರಣದಲ್ಲಿ ಸರ್ಕಾರ ಬಿ ರಿಪೋರ್ಟ್ ಸಲ್ಲಿಕೆ ಮಾಡಿದೆ. ಈ ಪ್ರಕರಣದಲ್ಲೂ ತಾಂತ್ರಿಕ ವಿಚಾರ ಇಟ್ಟುಕೊಂಡು ಶಿಕ್ಷೆಗೆ ಒಳಗಾಗಬೇಕಾದವರನ್ನು ರಕ್ಷಣೆ ಮಾಡುತ್ತಾರೆ’ ಎಂದು ತಿಳಿಸಿದರು.
ಪಿಲ್ಲರ್ ದುರಂತ ವಿಚಾರವಾಗಿ ಐವರ ಮೇಲೆ ಎಫ್ಐಆರ್ ದಾಖಲಾಗಿದ್ದು, ಈ ಐವರು ಯಾರೆಂದೂ ಯಾರಿಗೂ ತಿಳಿದಿಲ್ಲ ಎಂಬ ಪ್ರಶ್ನೆಗೆ, ‘ಇದು ಈ ಸರ್ಕಾರಕ್ಕಿರುವ ಸ್ಪಷ್ಟತೆ. ಇದು ಬಿಜೆಪಿ ಸರ್ಕಾರದ ದೃಷ್ಟಿಕೋನ, ಇದೇ ಸರ್ಕಾರದ ಸಂದೇಶ’ ಎಂದರು.
ಮುಖ್ಯಮಂತ್ರಿಗಳ ರಾಜೀನಾಮೆ ಕೇಳುತ್ತೀರಾ ಎಂಬ ಪ್ರಶ್ನೆಗೆ, ‘ಅವರು ತನಿಖೆ ನಡೆಯುವ ಮುನ್ನವೇ ಕ್ಲೀನ್ ಚಿಟ್ ನೀಡುತ್ತಾರೆ’ ಎಂದು ಟೀಕಿಸಿದರು.
ಮುಸಲ್ಮಾನರ ವಿಚಾರವಾಗಿ ಆರ್ ಎಸ್ಎಸ್ ಮುಖಂಡ ಮೋಹನ್ ಭಾಗವತ್ ಅವರ ಹೇಳಿಕೆ ವಿಚಾರವಾಗಿ ಕೇಳಿದಾಗ, ‘ಅವರ ಅಜೆಂಡಾ ಸಮಾಜವನ್ನು ಒಡೆಯುವುದು. ನಮ್ಮ ಅಜೆಂಡಾ ದೇಶವನ್ನು ಒಗ್ಗೂಡಿಸುವುದು. ಈ ವಿಚಾರವಾಗಿ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ’ ಎಂದರು.
[11/01, 2:45 PM] Kpcc official: *ಪ್ರತಿ ಮನೆಗೂ 200 ಯುನಿಟ್ ವಿದ್ಯುತ್ ಉಚಿತ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಘೋಷಣೆ*
*ಚಿಕ್ಕೋಡಿ:*
ಬೆಲೆ ಏರಿಕೆಯಿಂದ ತತ್ತರಿಸಿರುವ ರಾಜ್ಯದ ಜನರ ಬದುಕಿನಲ್ಲಿ ಮತ್ತೆ ಬೆಳಕು ತರುವ ದೃಷ್ಟಿಯಿಂದ ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಇಂದು ಆರಂಭಿಸಿದ ಪ್ರಜಾಧ್ವನಿ ಯಾತ್ರೆ ನಿಮಿತ್ತ ಚಿಕ್ಕೋಡಿಯಲ್ಲಿ ಬುಧವಾರ ನಡೆದ ಸಮಾವೇಶದಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು ಹೇಳಿದ್ದಿಷ್ಟು:
‘ಇದೊಂದು ಐತಿಹಾಸಿಕ ದಿನ. ಕಾಂಗ್ರೆಸ್ ಪಕ್ಷ ರಾಜ್ಯದ ಜನರ ಸಮಸ್ಯೆ, ನೋವು, ಅಭಿಪ್ರಾಯವನ್ನು ಸಂಗ್ರಹಿಸಿ ಅದರ ಪ್ರತಿಧ್ವನಿಯಾಗಿ ನಿಮಗೆ ಶಕ್ತಿ ನೀಡಲು, ನಿಮ್ಮ ಬದುಕಿಗೆ ಬೆಳಕು ನೀಡಲು ನಾವು ಇಲ್ಲಿಗೆ ಬಂದಿದ್ದೇವೆ. ಜನರ ಸಂಕಷ್ಟ ಪರಿಹಾರ ಮಾಡುವುದೇ ಈ ಪ್ರಜಾಧ್ವನಿ ಯಾತ್ರೆಯ ಉದ್ದೇಶ.
ನಾವು ಈ ಯಾತ್ರೆಯನ್ನು ಬುದ್ಧ ಬಸವನು ಮನೆ ಬಿಟ್ಟ ಗಳಿಗೆಯಲ್ಲಿ, ಏಸು ಕ್ರಿಸ್ತನು ಶಿಲುಬೆಗೇರಿದ ಗಳಿಗೆಯಲ್ಲಿ, ಭೀಮಾಬಾಯಿ ಅವರು ಅಂಬೇಡ್ಕರ್ ಅವರಿಗೆ ಜನ್ಮ ಕೊಟ್ಟ ಗಳಿಗೆಯಲ್ಲಿ, ಮಹಾತ್ಮ ಗಾಂಧಿ ಅವರು ಕಾಂಗ್ರೆಸ್ ನಾಯಕತ್ವ ವಹಿಸಿದ ಗಳಿಗೆಯಲ್ಲಿ ಇಂತಹ ಪವಿತ್ರ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ.
1924 ರಂದು ಬೆಳಗಾವಿಯಲ್ಲಿ ಗಾಂಧಿಜೀ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿ, ಬ್ರಿಟೀಷರನ್ನು ದೇಶದಿಂದ ತೊಲಗಿಸಿ ಜನರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ನೀಡಲು ಸಂಕಲ್ಪ ಮಾಡಿದರು. ಇಂದು ಅದೇ ಸ್ಥಳದಿಂದ ನಾವು ಈ ಯಾತ್ರೆಗೆ ನಾಂದಿ ಹಾಡಿದ್ದೇವೆ. ನಾಂದಿ ಎಂದರೆ ಯುದ್ಧದ ಆರಂಭ. ಹೆಜ್ಜೆ ಹಾಕಿ, ಪ್ರತಿಜ್ಞೆ ಮಾಡುತ್ತಿರುವ ಗಳಿಗೆ.
ನಾವು ಗಾಂಧಿ ಅವರ ಬಾವಿಯ ನೀರಿನಿಂದ ಬೆಳಗಾವಿಯಲ್ಲಿ ಬಿಜೆಪಿಯ ಕೊಳಕನ್ನು ತೊಳೆದು ಇಲ್ಲಿಗೆ ಬಂದಿದ್ದೇವೆ. ನಿಮ್ಮ ಜೀವನದಲ್ಲಿ ಜ್ಯೋತಿ ಬೆಳಗಬೇಕು. ನೀವು ಬೆಲೆ ಏರಿಕೆಯಿಂದ ತತ್ತರಿಸುತ್ತಿದ್ದೀರಿ. ದಿನ ನಿತ್ಯ ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿದೆ. ಕಾಂಗ್ರೆಸ್ ಪಕ್ಷ ನಿಮಗೆ ಒಂದು ವಚನ ನೀಡಲು ಬದ್ಧವಾಗಿದೆ.
ತಮ್ಮೆಲ್ಲರಿಗೂ ಶುಭವಾಗಲಿ. ನಿಮ್ಮ ಮನೆಯಲ್ಲಿ ಕತ್ತಲು ಕಳೆದು ಬೆಳಕು ನೀಡಲು ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸೇರಿ ಚರ್ಚೆ ಮಾಡಿ ಈ ಯಾತ್ರೆಯಲ್ಲಿ ಐದು ಭರವಸೆ ನೀಡುತ್ತಿದ್ದೇವೆ. ಅದರ ಪೈಕಿ ಮೊದಲ ಖಚಿತ ಭರವಸೆ ಪ್ರತಿ ಮನೆಗೂ 200 ಯುನಿಟ್ ಉಚಿತ ವಿದ್ಯುತ್ ನೀಡುವುದು.
ಮಹಿಳೆಯರು, ಯುವಕರು, ರೈತರು 200 ಯುನಿಟ್ ವರೆಗೂ ವಿದ್ಯುತ್ ದರ ಕಟ್ಟುವಂತಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ನಡೆಯುತ್ತೇವೆ. ನಾಡಿನ ಜನರ ಭವಿಷ್ಯಕ್ಕಾಗಿ ನಾವು ಅನೇಕ ಯೋಜನೆ ಹಮ್ಮಿಕೊಂಡಿದ್ದೇವೆ.
ಅಡುಗೆ ಅನಿಲದ ಬೆಲೆ 400 ರಿಂದ 1100 ರು. ಆಗಿದೆ. ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಮೋದಿ ಸರ್ಕಾರ ವಚನ ನೀಡಿತ್ತು. ಯಾರಾದರೂ ರೈತನ ಆದಾಯ ಡಬಲ್ ಆಗಿದೆಯಾ? ಕಳೆದ ಚುನಾವಣೆ ಸಮಯದಲ್ಲಿ ನಿಮ್ಮ 1 ಲಕ್ಷದವರೆಗಿನ ಸಾಲ ಮನ್ನಾ ಮಾಡುತ್ತೇವೆ ಎಂದರು. ಸಾಲ ಮನ್ನಾ ಆಗಿದೆಯಾ? 10 ಹೆಚ್ ಪಿ 10 ಗಂಟೆ ವಿದ್ಯುತ್ ನೀಡುತ್ತೇವೆ ಎಂದರು. ನೀಡಿದರಾ? ಬಂಗಾರಪ್ಪ ಅವರ ಕಾಲದಲ್ಲಿ ಕಾಂಗ್ರೆಸ್ ಸರ್ಕಾರ ರೈತರಿಗೆ ಉಚಿತ ವಿದ್ಯುತ್ ನೀಡಲು ಆರಂಭಿಸಿತು. ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ, ನಾನು ಇಂಧಾನ ಸಚಿವನಾಗಿದ್ದಾಗ ರೈತರಿಗೆ ವಿದ್ಯುತ್ ನೀಡುವ ಸಮಯವನ್ನು 6 ರಿಂದ 7 ಗಂಟೆಗೆ ಹೆಚ್ಚಿಸಿದೆವು.
ರೈತರ ಬದುಕು ಯಶಸ್ವಿಯಾಗಬೇಕು ಎಂದು ಕಾಂಗ್ರೆಸ್ ನುಡಿದಂತೆ ನಡೆದಿದೆ. ಬಿಜೆಪಿ ಕಳೆದ ಮೂರುವರೆ ವರ್ಷಗಳಲ್ಲಿ ನುಡಿದಂತೆ ನಡೆಯಲಿಲ್ಲ. ಬದಲಿಗೆ ಬಿಜೆಪಿಯವರು ನಿಮ್ಮ ಬದುಕಿನಲ್ಲಿ ಚೆಲ್ಲಾಟವಾಡುತ್ತಾ ಬಂದರು.
ಮೂರು ವರ್ಷಗಳ ಹಿಂದೆ ಆಪರೇಷನ್ ಕಮಲದ ಮೂಲಕ ಹಿಂಬಾಗಿಲಿನಿಂದ ಅಧಿಕಾರ ಹಿಡಿದರು. ಈ ಸರ್ಕಾರದಲ್ಲಿ ಕೊಟ್ಟ ಮಾತು ಈಡೇರಿಸಿದರಾ? ನಿಮ್ಮ ಬದುಕಿನಲ್ಲಿ ಬೆಳಕು ಕೊಟ್ಟರಾ? ಹೀಗಾಗಿ ನಾವು ಬಿಜೆಪಿ ಪಾಪದ ಪುರಾಣ ಬಿಡುಗಡೆ ಮಾಡಿದ್ದೇವೆ. ಬಿಜೆಪಿಯ ಲಂಚಾವತಾರ, ಮಂಚಾವತಾರ ಬಿಡುಗಡೆ ಮಾಡಿದ್ದೇವೆ.
ಈ ಸರ್ಕಾರ ಬಿ ರಿಪೋರ್ಟ್ ಸರ್ಕಾರ. ಮಂತ್ರಿಗಳು ಯಾವುದೇ ಪ್ರಕರಣದಲ್ಲಿ ಸಿಕ್ಕಿಬಿದ್ದರೂ ಅವರಿಗೆ ಬಿ ರಿಪೋರ್ಟ್ ಕೊಟ್ಟು, ಅವರು ಯಾವುದೇ ತಪ್ಪು ಕೆಲಸ ಮಾಡಿಲ್ಲ, ನಿರ್ದೇಷಿಯಾಗುತ್ತಾರೆ ಎಂದು ಮುಖ್ಯಮಂತ್ರಿಗಳು, ಗೃಹ ಸಚಿವರು ಸಂದೇಶ ನೀಡುತ್ತಾರೆ. ಈ ಸರ್ಕಾರ ಬೇಕಾ ಎಂದು ನೀವು ಆಲೋಚಿಸಿ.
ಈ 40% ಕಮಿಷನ್ ಸರ್ಕಾರ ಈ ರಾಜ್ಯದಲ್ಲಿ ಕೋಮು ದ್ವೇಷದ ವಿಷ ಬೀಜವನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿದ್ದಾರೆ. ಈ ಸರ್ಕಾರ ಹೊಟೇಲಿನಲ್ಲಿ ಮೆನು ಕಾರ್ಡ್ ಮಾದರಿಯಲ್ಲಿ ಭ್ರಷ್ಟಾಚಾರದ ರೇಟ್ ಕಾರ್ಡ್ ಹಾಕಿದ್ದಾರೆ. ಇದನ್ನು ಪತ್ರಿಕೆಗಳಲ್ಲಿ ಮುಖ್ಯಮಂತ್ರಿ ಹುದ್ದೆಗೆ 2500 ಕೋಟಿ, ಮಂತ್ರಿ ಹುದ್ದೆಗೆ 100 ಕೋಟಿ, ಆಯುಕ್ತರಿಗೆ 15 ಕೋಟಿ, ಕೋವಿಡ್ ಪೂರೈಕೆಗೆ ಶೇ.75, ಪಿಡಬ್ಲ್ಯೂ ಕಾಮಗಾರಿಗೆ 40%, ಮಠಗಳ ಅನುದಾನಕ್ಕೆ 40%, ಮೊಟ್ಟೆ ಪೂರೈಕೆಗೆ 30% ಕಮಿಷನ್ ನಿಗದಿ ಮಾಡಿದ್ದಾರೆ. ಈ ಬಗ್ಗೆ 2 ಲಕ್ಷ ಸದಸ್ಯರಿರುವ ಗುತ್ತಿಗೆದಾರರ ಸಂಘದವರು ಪ್ರಧಾನಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಕಾಮಗಾರಿ ಮಾಡಿದ್ದು ನಿಜವಲ್ಲವೇ? ಆದರೂ ಸರ್ಕಾರ ದುಡ್ಡು ಕೊಡಲು ನಿರಾಕರಿಸಿದ್ದು ನಿಜವಲ್ಲವೇ? ಕಾಂಗ್ರೆಸ್ ನಾಯಕರು ಅವರ ಮನೆಗೆ ಹೋಗಿ ಕುಟುಂಬಕ್ಕೆ ಸಾಂತ್ವನ ಹೇಳಿದೆವು. ಈವರೆಗೂ ಆ ಕುಟುಂಬಕ್ಕೆ ಸರ್ಕಾರ ಬಿಲ್ ಪಾವತಿ ಮಾಡಿಲ್ಲ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿಯ ಪಾಪದ ಕೊಡ ತುಂಬಿದೆ. ಈಗ ತಮ್ಮ ವೈಫಲ್ಯ ಮುಚ್ಚಿಕೊಳ್ಳಲು ಹೊಸ ವಚನಗಳ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.
ಫೆಬ್ರವರಿ 17ರಂದು ಬಜೆಟ್ ಮಂಡಿಸಿ ಆಗ ಇನ್ನಷ್ಟು ಆಶ್ವಾಸನೆ ನೀಡಲು ಹೊರಟಿದ್ದಾರೆ. ಬಿಜೆಪಿ ಅಧಿಕಾರದಲ್ಲಿದ್ದಾಗ ಜನರಿಗೆ ಕೊಡುಗೆ ನೀಡಲು ಆಗಿಲ್ಲ.
ಮೀಸಲಾತಿ ವಿಚಾರದಲ್ಲಿ ನಾಟಕವಾಡುತ್ತಾ, ಸುಳ್ಳು ಹೇಳುತ್ತಿದ್ದಾರೆ. ಜನರನ್ನು ತಪ್ಪು ದಾರಿಗೆಳೆಯಲು ಪ್ರಯತ್ನಿಸುತ್ತಿದ್ದಾರೆ. ಬೆಲೆ ಏರಿಕೆ, ನಿರುದ್ಯೋಗ, ಆರ್ಥಿಕ ಸಮಸ್ಯೆಗೆ ಪರಿಹಾರ ನೀಡದೇ, ಜನರ ಬೆನ್ನಿಗೆ ಚೂರಿ ಹಾಕುತ್ತಿದ್ದಾರೆ. ಬಿಜೆಪಿ ಸರ್ಕಾರ ಕೊಟ್ಟ ಮಾತು ಉಳಿಸಿಕೊಳ್ಳಲು ಆಗಿಲ್ಲ. ನಾವು ನುಡಿದಂತೆ ನಡೆದಿದ್ದೇವೆ. ಸಿದ್ದರಾಮಯ್ಯ ಅವರ ಕಾಲದಲ್ಲಿ ನಾವು ಕೊಟ್ಟಿದ್ದ 165 ಭರವಸೆಗಳ ಪೈಕಿ 159 ಭರವಸೆ ಈಡೇರಿಸಿದ್ದೇವೆ.
ಬಸವಣ್ಣ, ಕುವೆಂಪು, ಕನಕದಾಸ, ಶಿಶುನಾಳ ಷರೀಫರ ಕರ್ನಾಟಕ ನಿರ್ಮಾಣವಾಗಬೇಕು. ಇದು ಕಾಂಗ್ರೆಸ್ ಪಕ್ಷದ ಸಂಕಲ್ಪ. ಇದನ್ನು ಗಮನದಲ್ಲಿಟ್ಟುಕೊಂಡು ಆಶೀರ್ವಾದ ಮಾಡಬೇಕು. ನಿಮಗಾಗಿ ನಾವು ಕೆಲವು ಸಂಕಲ್ಪ ಮಾಡಿದ್ದೇವೆ. ಅದರ ಪೈಕಿ ಮೊದಲನೇ ಗ್ಯಾರೆಂಟಿ ಘೋಷಣೆಯನ್ನು ಪ್ರಕಟಿಸಿದ್ದೇವೆ. ನಿಮ್ಮ ಸೇವೆ ಮಾಡಲು, ನಿಮಗೆ ಬಲಿಷ್ಠ ಸರ್ಕಾರ ನೀಡಲು ಅಭಿವೃದ್ಧಿ ಕರ್ನಾಟಕ ನಿರ್ಮಾಣಕ್ಕೆ, ರಾಜ್ಯದ ಕಳಂಕ ತೊಳೆಯಲು ನೀವೆಲ್ಲರೂ ನಮಗೆ ಸಹಕಾರ ನೀಡಬೇಕು.
ಈ ತಿಂಗಳು 16 ರಂದು ರಾಷ್ಟ್ರೀಯ ನಾಯಕಿ ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸಿ ರಾಜ್ಯದ ನಾಯಕಿಯರನ್ನು ಭೇಟಿ ಮಾಡುತ್ತಿದ್ದಾರೆ. ಹೆಣ್ಣು ಕುಟುಂಬದ ಕಣ್ಣು, ಹೆಣ್ಣು ದೇಶದ ಶಕ್ತಿ, ಆಸ್ತಿ ಎಂದು ನಾ ನಾಯಕಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಪ್ರತಿ ಪಂಚಾಯ್ತಿಯಿಂದಲೂ ಮಹಳೆಯರು ಸಮಾವಶದಲ್ಲಿ ಭಾಗವಹಿಸಬೇಕು. ನಾವು ಮಹಿಳೆಯರಿಗೆ ಪ್ರತ್ಯೇಕ ಪ್ರಣಾಳಿಕೆ ನೀಡಲು ಪ್ರಿಯಾಂಕ ಗಾಂಧಿ ಅವರು ಸೂಚಿಸಿದ್ದಾರೆ. ನೀವು ಅವರ ಕಾರ್ಯಕ್ರಮಕ್ಕೆ ಬಂದು ಕೈ ಜೋಡಿಸಬೇಕು ಎಂದು ಮನವಿ ಮಾಡುತ್ತೇನೆ.’
[11/01, 2:50 PM] Kpcc official: ಸ್ಯಾಂಟ್ರೋ ರವಿ ಸರ್ಕಾರದ ಚೀಫ್ ಬ್ರೋಕರ್ ಮಾತ್ರವಲ್ಲ ಬಿಜೆಪಿ ಕಾರ್ಯಕರ್ತ ಕೂಡ.
ಆತ ಬಿಜೆಪಿಯ ಸಕ್ರಿಯ ಕಾರ್ಯಕರ್ತ ಎಂದು ಪೊಲೀಸರೇ ಅಫಿಡವಿಟ್ ಸಲ್ಲಿಸಿದ್ದಾರೆ.
ರೌಡಿ ಮೋರ್ಚಾದೊಂದಿಗೆ ಸ್ಯಾಂಟ್ರೋ ರವಿ ನೇತೃತ್ವದಲ್ಲಿ ಬ್ರೋಕರ್ಸ್ ಮೋರ್ಚಾವನ್ನೂ ತೆರೆಯಲು ಹೊರಟಿದೆಯೇ @BJP4Karnataka?
ಸ್ತ್ರೀ ಪೀಡಕರೆಲ್ಲ ಬಿಜೆಪಿಯಲ್ಲೇ ಇರುವುದೇಕೆ?
[11/01, 2:53 PM] Kpcc official: ಸ್ಯಾಂಟ್ರೋ ರವಿಯನ್ನ ಇನ್ನೂ ಬಂಧಿಸಲಾಗಿಲ್ಲ ಎಂದರೆ ಏನರ್ಥ @JnanendraAraga ಅವರೇ?
◆ನಿಮ್ಮ ಇಲಾಖೆಯ ಅಸಮರ್ಥ್ಯವೇ?
◆ಸರ್ಕಾರದ ಕಣ್ಣಾಮುಚ್ಚಾಲೆ ಆಟವೇ?
◆ನಾಯಕರ ಒತ್ತಡವೆ?
◆ಎಲ್ಲರಿಗಿಂತ ಆತ ಪ್ರಭಾವಿಯೇ?
◆ನಿಮ್ಮ ಭ್ರಷ್ಟಾಚಾರದ ಬಂಡವಾಳ ಹೊರಬೀಳುವ ಭಯವೇ?
◆ಆತನ ಸಿಡಿ ಬ್ಲಾಕ್ಮೇಲ್‌ಗೆ ಭಯವೇ?
◆ಆತ ಬಿಜೆಪಿ ಕಾರ್ಯಕರ್ತ ಎಂಬ ಮಮಕಾರವೇ?
[11/01, 2:53 PM] Kpcc official: ಸರ್ಕಾರದ ಭ್ರಷ್ಟತನಕ್ಕೆ ರಾಜ್ಯದ 56 ಸಾವಿರ ಅಭ್ಯರ್ಥಿಗಳ ಭವಿಷ್ಯ ಛಿದ್ರವಾಗಿದೆ.
ವಯೋಮಿತಿ ಮೀರುವ ಆತಂಕದಲ್ಲಿರುವ ಅಭ್ಯರ್ಥಿಗಳು ಮರುಪರೀಕ್ಷೆ ನಡೆಸಿ ಎನ್ನುವ ಬೇಡಿಕೆ ಕೇಳುವ ಮನಸಿಲ್ಲವೇ @BSBommai ಅವರೇ?
ಮನವಿ ನೀಡಲು ಬಂದ ಅಭ್ಯರ್ಥಿಗಳಿಗೆ ಸರ್ಕಾರದ ಕೊಡುಗೆ - ಬಂಧನ
ಅಕ್ರಮ ನಡೆಸಿದ ಆರೋಪಿಗಳಿಗೆ - ಜಾಮೀನು, ಹಾರ ತುರಾಯಿ!
[11/01, 4:13 PM] Kpcc official: *ಪ್ರಜಾಧ್ವನಿ ಯಾತ್ರೆಯ ಚಿಕ್ಕೋಡಿ ಸಮಾವೇಶದಲ್ಲಿ ಕಾಂಗ್ರೆಸ್ ನಾಯಕರ ಮಾತುಗಳು:*
*ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್*
ಇದೊಂದು ಐತಿಹಾಸಿಕ ದಿನ. ನಿಮ್ಮ ಆಶೀರ್ವಾದದಿಂದ ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬರಲಿರುವ ಕಾಂಗ್ರೆಸ್ ಸರ್ಕಾರದ ಅಡಿಗಲ್ಲನ್ನು ಇಂದು ಈ ಚಿಕ್ಕೋಡಿಯಲ್ಲಿ ಹಾಕಲಾಗುತ್ತಿದೆ.
ಕರ್ನಾಟಕದ ಜನ, ರೈತರು, ಮಹಿಳೆಯರು, ಯುವಕರು, ಅಲ್ಪಸಂಖ್ಯಾತರು, ಪರಿಶಿಷ್ಟರು, ಹಿಂದುಳಿದ ವರ್ಗದವರು ಸರ್ಕಾರದ ದುರಾಡಳಿತದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮೂರುವರೆ ವರ್ಷಗಳ ಹಿಂದೆ ಆಪರೇಶನ್ ಕಮಲದ ಮೂಲಕ ಶಾಸಕರನ್ನು ಖರೀದಿ ಮಾಡಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ ರಾಜ್ಯದ ಜನರನ್ನು ಲೂಟಿ ಮಾಡಿದೆ. ದೇಶದಲ್ಲೇ ಅತ್ಯಂತ ಭ್ರಷ್ಟ ಸರ್ಕಾರ ಎಂದರೆ ಅದು ಬೊಮ್ಮಾಯಿ ಅವರ ಸರ್ಕಾರ. ಈ ಸರ್ಕಾರ 40% ಕಮಿಷನ್ ಸರ್ಕಾರ.
ಬಿಜೆಪಿಯ ಕಾರ್ಯಕರ್ತ ಸಂತೋಷ್ ಪಾಟೀಲ್ ಅವರ ಕುಟುಬದವರನ್ನು ಕೇಳಿ ಈ 40% ಸರ್ಕಾರದ ಬಗ್ಗೆ ಹೇಳುತ್ತಾರೆ. ಈ ಸರ್ಕಾರಕ್ಕೆ 40% ಕಮಿಷನ್ ನೀಡದಿದ್ದರೆ ಸಾಯಬೇಕಾಗುತ್ತದೆ. ಬೊಮ್ಮಾಯಿ ಅವರೇ ನಾವು ನಿಮಗೆ ಹಣ ನೀಡುತ್ತೇವೆ ಸಂತೋಷ್ ಪಾಟೀಲ್ ಅವರನ್ನು ಮತ್ತೆ ವಾಪಸ್ ಕರೆ ತರಲು ನಿಮ್ಮಿಂದ ಸಾಧ್ಯವೇ? ರಾಜ್ಯದ ಪ್ರತಿ ಹಂತದಲ್ಲೂ ಸಂತೋಷ್ ಪಾಟೀಲ್ ಅವರ ವಿಚಾರ ಇದೆ. ಬೆಂಗಳೂರಿನಲ್ಲಿ ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಾಗ ನಾವು ಕಾಂಗ್ರೆಸ್ ಪಕ್ಷದ ನಾಯಕರು ಅವರ ಮನೆಗೆ ಭೇಟಿ ನಿಡಿದ್ದೆವು. ಆತ ಬಿಜೆಪಿ ಸರ್ಕಾರಕ್ಕೆ ಹಣ ನೀಡದ ಕಾರಣ ಆತ ತನಗೆ ತಾನೇ ಗುಂಡು ಹಾರಿಸಿಕೊಂಡು ಸಾಯಬೇಕಾಯಿತು.
ಈ ಸರ್ಕಾರ ಎಷ್ಟು ನಾಚಿಕೆಗೇಡಿನ, ನಿರ್ದಯಿ ಸರ್ಕಾರ ಎಂದರೆ ಈ ಸರ್ಕಾರದ ಮುಂದೆ ದುರ್ಯೋಧನನೂ ಕೂಡ ಉತ್ತಮ ಎನ್ನುವಷ್ಟರ ಮಟ್ಟಿಗೆ ಈ ಸರ್ಕಾರ ಇವರ ಕುಟುಂಬಗಳಿಗೆ ಕಿರುಕುಳ ನೀಡುತ್ತಿದೆ. ಸರ್ಕಾರ ಆತನ ಪ್ರಾಣವನ್ನು ಮರಳಿ ತರಲಾಗುತ್ತಿದೆಯೇ, ಇದು ಪೇಸಿಎಂ ಸರ್ಕಾರ. ಇಂತಹ ಸರ್ಕಾರವನ್ನು ಕಿತ್ತು ಹಾಕುವ ಸಮಯ ಬಂದಿದೆ.
ಒಂದು ಕಾಲದಲ್ಲಿ ಕರ್ನಾಟಕ ಒಂದು ಬ್ರ್ಯಾಂಡ್ ಆಗಿತ್ತು. ದೇಶಕ್ಕೆ ಮಾದರಿಯಾಗಿ ದೇಶದ ಎಲ್ಲ ಮೂಲೆಯಿಂದ ಬೆಂಗಳೂರು, ಮೈಸೂರು, ಬೆಳಗಾವಿಗೆ ವ್ಯಾಪಾರ, ಉದ್ಯೋಗ ಹರಸಿ ಜನ ಬರುತ್ತಿದ್ದರು. ಆದರೆ ಈ ರಾಜ್ಯ ಸರ್ಕಾರ ದೆಹಲಿಯವರನ್ನು ಮೆಚ್ಚಿಸಲು ಎಲ್ಲ ಉದ್ಯಮಿಗಳನ್ನು ಗುಜರಾತಿಗೆ ಕಳಿಸುತ್ತಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ 1300 ಕಂಪನಿಗಳು, 1 ಲಕ್ಷ ಜನರ ಉದ್ಯೋಗ ನಾಶವಾಗಿದೆ. ಇದಕ್ಕೆ ಉತ್ತರ ನೀಡುವವರು ಯಾರು? ಸರ್ಕಾರಿ ಉದ್ದಿಮೆಗಳಿಗೆ ಬೀಗ ಹಾಕಲಾಗಿದೆ.
ಕಳೆದ ಮೂರು ವರ್ಷಗಳಿಂದ ಏಕ ಬೆಳೆ ಬೆಳೆಯುವ ರೈತರಿಗೆ 14 ಸಾವಿರ ಕೋಟಿ ನಷ್ಟವಾಗಿದೆ. ಕರ್ನಾಟಕದ ಗಡಿಯನ್ನು ಅತಿಕ್ರಮಣ ಮಾಡಲಾಗುತ್ತಿದೆ. ನಮ್ಮ ಹಳ್ಳಿಗಳ ಮೇಲೆ ದಾಳಿ ಮಾಡಲು ಮುಂದಾಗಿದ್ದರೂ ಮಹಾರಾಷ್ಟ್ರ ಮುಖ್ಯಮಂತ್ರಿಗಳಿಗೆ ತಕ್ಕ ಉತ್ತರ ನೀಡಲು ಮುಖ್ಯಮಂತ್ರಿ ಬೊಮ್ಮಾಯಿ ಅವರು ವಿಫಲರಾಗಿದ್ದಾರೆ. ಇವರು ರಾಜ್ಯದ ರಕ್ಷಣೆ ಮಾಡುವರೇ? ಇವರು ದೇಹಲಿಯ ಅನ್ಯಾಯದ ವಿರುದ್ಧ ನಿಲ್ಲುವುದಿಲ್ಲ. ಕಾರಣ, ಇವರಲ್ಲಿ ಕ್ಷಮತೆ ಇಲ್ಲ. ದೇಶದ ಅಸಮರ್ಥ ಮುಖ್ಯಮಂತ್ರಿ ಇದ್ದರೆ ಅದು ಬೊಮ್ಮಾಯಿ ಅವರು. ಇವರು ಕೇಂದ್ರದ ಮುಂದೆ ನಿಲ್ಲುವುದಿಲ್ಲ.
ಯುವಕರಿಗೆ ಸರ್ಕಾರಿ ಉದ್ಯೋಗ, ಖಾಸಗಿ ಉದ್ಯೋಗ ಸಿಕ್ಕಿದೆಯೇ? ಪಿಎಸ್ಐ ಹುದ್ದೆಗಳನ್ನು ಲಕ್ಷಾಂತರ ರೂಪಾಯಿಗೆ ಮಾರಾಟ ಮಾಡಿದ್ದಾರೆ. ನೀವುಗಳು ಓದಿ ವಿದ್ಯಾವಂತರಾಗುವುದು ಏಕೆ? ನೀವು ನಿಮ್ಮ ಮಕ್ಕಳನ್ನು ಓದಿಸುವುದು ಯಾಕೆ? ನಿಮ್ಮ ಮಕ್ಕಳು ಬೆಳೆದು, ಉದ್ಯೋಗ ಸಂಪಾದಿಸಿ, ಗೌರವದ ಬದುಕು ಸಾಧಿಸಲು ಅಳ್ಲವೇ? ಆದರೆ ಬಿಜೆಪಿ ಸರ್ಕಾರ ನೀವು ಓದದಿದ್ದರೂ ಪರವಾಗಿಲ್ಲ, ನೀವು ನಿಮ್ಮ ಆಸ್ತಿ ಮಾರಿ 80 ಲಕ್ಷ ಲಂಚ ನೀಡಿ ನಿಮಗೆ ಪಿಎಸ್ಐ ಹುದ್ದೆ ನೀಡುತ್ತೇವೆ ಎನ್ನುತ್ತಿದೆ. ಪಿಎಸ್ಐ, ಸಹಾಯಕ ಪ್ರಾಧ್ಯಾಪಕ ಹುದ್ದೆ, ಜಿಲ್ಲಾ ಸಹಕಾರಿ ಬ್ಯಾಂಕ್, ಜೆಇಇ ಹುದ್ದೆ ಮಾರಾಟ ವಾಗುತ್ತಿದೆ. ಹೀಗೆ ಮುಂದುವರಿದರೆ ನಮ್ಮ ಮಕ್ಕಳ ಭವಿಷ್ಯವೇನು? ಹೀಗಾಗಿ ಈ ಸರ್ಕಾರವನ್ನು ಕಿತ್ತೊಗೆಯಬೇಕಿದೆ.
ಕೆಲ ದಿನಗಳ ಹಿಂದೆ ನಾವು ಕೆಲವು ಮಾತು ನೀಡಿದ್ದೆವು. ಕೃಷ್ಣಾ ನದಿ, ಮಹದಾಯಿ ನದಿ ನೀರು ರೈತರ ಜಮೀನಿಗೆ ತಲುಪದಿದ್ದರೆ ಇಡೀ ಕಿತ್ತೂರು ಕರ್ನಾಟಕ ಪ್ರದೇಶದ ಅಭಿವೃದ್ಧಿ ಅಸಾಧ್ಯ. ನಾವು 6 ಲಕ್ಷ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿಯನ್ನು ಒದಗಿಸಬಹುದಾಗಿದೆ. ಹೀಗಾಗಿ ಐದು ವರ್ಷಗಳ ಕಾಲ ಪ್ರತಿ ವರ್ಷ 40 ಸಾವಿರ ಕೋಟಿಯಂತೆ ಒಟ್ಟು 2 ಲಕ್ಷ ಕೋಟಿ ಹಣ ಖರ್ಚು ಮಾಡಿ ಎಲ್ಲ ನೀರಾವರಿ ಯೋಜನೆ ನೀಡಲಿದೆ. ಆಲಮಟ್ಟಿ ಆಣೆಕಟ್ಟು ಎತ್ತರ ಮಾಡಲಾಗುವುದು.
ಹುಬ್ಬಳ್ಳಿ ಧಾರವಾಡ ಪ್ರದೇಶದ ಜನರಿಗೆ ಮಹದಾಯಿ ನದಿ ನೀರು ನೀಡಲಾಗುವುದು. ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ವಿಶೇಷ ಘೋಷಣೆ ಮಾಡಿದ್ದೇವೆ. ಇಂದಿನಿಂದ ಕಾಂಗ್ರೆಸ್ ಪಕ್ಷದಿಂದ ಮುಂದಿನ ದಿನಗಳಲ್ಲಿ ಮಾಡಲಾಗುವ ಐದು ಖಚಿತ ಭರವಸೆಗಳನ್ನು ಒಂದೊಂದಾಗಿ ನೀಡಲಾಗುವುದು.
ಇಂದು ಮೊದಲ ಖಚಿತ ಯೋಜನೆಯಾಗಿ ಎಲ್ಲ ವರ್ಗದವರಿಗೂ ಅನ್ವಯವಾಗುವ ಯೋಜನೆ ಘೋಷಿಸುತ್ತೇವೆ. ಈ ಪ್ರಜಾಧ್ವನಿ ಯಾತ್ರೆ ಜನರ ಧ್ವನಿಯಾಗಿದೆ. ಇದು ಸಿದ್ದರಾಮಯ್ಯ, ಶಿವಕುಮಾರ್, ಪ್ರಕಾಶ್ ಹುಕ್ಕೇರಿ ಸೇರಿದಂತೆ ಕಾಂಗ್ರೆಸ್ ನಾಯಕರ ಧ್ವನಿಯಲ್ಲ. ಇದು ನಿಮ್ಮ ಧ್ವನಿ. ಜನರ ಧ್ವನಿಯನ್ನು ಮುಂಬರುವ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಲಿದೆ. ನೀವು ಇಲ್ಲಿಂದ ಹೋಗುವಾಗ ಒಂದು ಸಂಕಲ್ಪ ಮಾಡಬೇಕು. ನೀವು ಕೇವಲ ಸರ್ಕಾರವನ್ನು ಮಾತ್ರ ಬದಲಿಸುವುದಿಲ್ಲ, ಇಡೀ ವ್ಯವಸ್ಥೆಯನ್ನೇ ಬದಲಿಸಬೇಕಿದೆ.
ಬಿಜೆಪಿ ಸರ್ಕಾರ ಭ್ರಷ್ಟಾಚಾರ, ಕಮಿಷನ್, ಕೋಮುವಾದದ ಮೇಲೆ ನಡೆಯುತ್ತಿದೆ. ಕಾಂಗ್ರೆಸ್ ಅಭಿವೃದ್ಧಿಯ ಮೇಲೆ ನಡೆಯುತ್ತದೆ.
*ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ*
ಇಂದಿನಿಂದ ಜನವರಿ 28ನೇ ತಾರೀಖಿನ ವರೆಗೆ 20 ರಿಂದ 22 ಜಿಲ್ಲಾ ಕೇಂದ್ರಗಳಿಗೆ ಪ್ರಜಾಧ್ವನಿ ರಥಯಾತ್ರೆ ಮೂಲಕ ಭೇಟಿ ನೀಡುತ್ತೇವೆ. ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ. ನಮ್ಮ ಪಕ್ಷ ಅಧಿಕಾರಕ್ಕೆ ಬಂದಾಗಲೆಲ್ಲ ಸಮಾಜದ ಎಲ್ಲಾ ವರ್ಗದ ಜನರ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಸಬಲೀಕರಣಕ್ಕಾಗಿ ಶ್ರಮಿಸಿದೆ. ನಾನು ಬಸವಣ್ಣನವರ ಜಯಂತಿ ದಿನದಂದು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ, ಅರ್ಧ ಗಂಟೆ ಒಳಗಾಗಿ 5 ಭರವಸೆಗಳನ್ನು ಈಡೇರಿಸಿದೆ. ನಾವು ಚುನಾವಣಾ ಪೂರ್ವದಲ್ಲಿ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸುವ ಜೊತೆಗೆ 30 ಹೊಸ ಕಾರ್ಯಕ್ರಮಗಳನ್ನು ನೀಡಿದ್ದೆ. ಬಿಜೆಪಿಯವರು ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಶಾಸಕರನ್ನು ಖರೀದಿಸಿ ಹಿಂಬಾಗಿಲ ಮೂಲಕ ಅಧಿಕಾರಕ್ಕೆ ಬಂದವರು. ಬೆಳಗಾವಿ ಜಿಲ್ಲೆಯಲ್ಲಿ ಕೂಡ ಶಾಸಕರೊಬ್ಬರು ಖರೀದಿ ಆದರು. ಕಾಂಗ್ರೆಸ್ ನ 14 ಜನ ಮತ್ತು ಜೆಡಿಎಸ್ ನ 3 ಜನ ಶಾಸಕರನ್ನು ಖರೀದಿಸಿ ಸರ್ಕಾರ ಮಾಡಿದ್ದಾರೆ. ಅಧಿಕಾರಕ್ಕೆ ಬಂದ ಮೇಲೆ ಜನ ಹಿತ ಮರೆತು ಲೂಟಿ ಮಾಡುವುದರಲ್ಲಿ ನಿರತರಾದದ್ದರಿಂದ ಭ್ರಷ್ಟಾಚಾರದ ಸಾಗರದಲ್ಲಿ ಮುಳುಗಿಹೋಗಿದ್ದಾರೆ.
ಬಿಜೆಪಿ ಪಕ್ಷ 2018ರಲ್ಲಿ 600 ಭರವಸೆಗಳನ್ನು ನೀಡಿ 10% ಭರವಸೆಗಳನ್ನು ಕೂಡ ಈಡೇರಿಸಿಲ್ಲ. ನಾವು ಅಧಿಕಾರಕ್ಕೆ ಬಂದರೆ ಸೊಸೈಟಿಗಳು, ಬ್ಯಾಂಕುಗಳಲ್ಲಿ 1 ಲಕ್ಷದವರೆಗಿನ ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಬಿಜೆಪಿ ಹೇಳಿತ್ತು. ಮಾಡಿದ್ದಾರ? ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ 78,000 ಕೋಟಿ ರೂ. ರೈತರ ಸಾಲ ಮನ್ನಾ ಮಾಡಿದರು. ನರೇಂದ್ರ ಮೋದಿ ಮತ್ತು ಬಸವರಾಜ ಬೊಮ್ಮಾಯಿ ಅವರು ಒಂದು ರೂಪಾಯಿಯಾದರೂ ಸಾಲ ಮನ್ನಾ ಮಾಡಿದ್ರಾ? ನಾವು ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿರಲಿಲ್ಲ ಆದರೂ ನಾಡಿನ ರೈತರ ಕಷ್ಟವನ್ನು ಅರ್ಥಮಾಡಿಕೊಂಡು ಸಹಕಾರಿ ಸಂಘಗಳಲ್ಲಿ 22 ಲಕ್ಷದ 27 ಸಾವಿರ ರೈತರು ಸಹಕಾರಿ ಸಂಘಗಳಿಂದ ಪಡೆದಿದ್ದ 50,000 ವರೆಗಿನ 8,165 ಕೋಟಿ ಸಾಲವನ್ನು ಮಾಡಿದ್ದು ನಾವು. ರೈತರಿಗೆ ಬಿಜೆಪಿ ಸಾಲಮನ್ನಾ ಮಾಡುತ್ತೇವೆ ಎಂದು ಹೇಳಿ ಟೋಪಿ ಹಾಕಿದೆ.
2022ರ ವೇಳೆಗೆ ರೈತರ ಆದಾಯವನ್ನು ದುಪ್ಪಟ್ಟು ಮಾಡುತ್ತೇವೆ ಎಂದು ಹೇಳಿದ್ದರು. ಮಾಡಿದ್ದಾರ? ನಾವು 2013ರಲ್ಲಿ ಅಧಿಕಾರಕ್ಕೆ ಬಂದಾಗ ರೈತರ ತಲಾ ಆದಾಯ 48,000 ರೂ. ನಾವು ಅಧಿಕಾರದಿಂದ ಕೆಳಗಿಳಿಯುವಾಗ ಅದು 1,13,000 ರೂ. ಗೆ ಹೆಚ್ಚಳವಾಗಿತ್ತು. ಈಗ ರೈತರ ತಲಾ ಆದಾಯ 1,16,000 ಆಗಿದೆ. ಅಂದರೆ ಕಳೆದ 4 ವರ್ಷದಲ್ಲಿ 3000 ರೂ. ಜಾಸ್ತಿ ಆಗಿದೆ. ಪಕ್ಕದ ಮಹಾರಾಷ್ಟ್ರದಲ್ಲಿ 1 ಟನ್ ಕಬ್ಬಿನ ಬೆಲೆ 3500 ರೂ. ಕೊಜೆನರೇಷನ್ ಮತ್ತು ಇಥೆನಾಲ್ ಇದ್ದರೆ 6000 ದಿಂದ 6500 ಕಾರ್ಖಾನೆ ಮಾಲೀಕರಿಗೆ ಸಿಗುತ್ತದೆ. ಗುಜರಾತ್ ನಲ್ಲಿ 4400 ಟನ್ ಬೆಲೆ ಇದೆ. ನಾನು ಮುಖ್ಯಮಂತ್ರಿಯಾಗಿದ್ದಾಗ ಸಕ್ಕರೆ ಕಾರ್ಖಾನೆ ಸಚಿವರಾಗಿದ್ದ ಪ್ರಕಾಶ್ ಹುಕ್ಕೇರಿ ಅವರು ನನ್ನ ಬಳಿ ಬಂದು ಕಬ್ಬು ಬೆಳೆಗಾರರ ಕಷ್ಟವನ್ನು ಹೇಳಿಕೊಂಡರು, ಆಗ ನಾವು ಪ್ರತೀ ಟನ್ ಗೆ 300 ರೂ. ಜಾಸ್ತಿ ಮಾಡಿ 1800 ಕೋಟಿ ಅನುದಾನ ನೀಡಿದ್ದೆವು. 1780 ಕೋಟಿ ಸಾಲಮನ್ನಾ ಮಾಡಿದ್ದೆವು. ಬಸವರಾಜ ಬೊಮ್ಮಾಯಿ ಸರ್ಕಾರ ರೈತರ ನೆರವಿಗೆ ಧಾವಿಸುತ್ತಿಲ್ಲ. ರೈತರ ಕಷ್ಟವನ್ನು ಸದನದಲ್ಲಿ ಎಳೆಎಳೆಯಾಗಿ ಬಿಡಿಸಿ ಹೇಳಿದೆ, ಕಬ್ಬಿಗೆ ನ್ಯಾಯಯುತವಾದ ಬೆಲೆ ಕೊಡಿ ಎಂದು ಹೇಳಿದೆ. ಆದರೂ ಬೊಮ್ಮಾಯಿ ಸರ್ಕಾರ ನ್ಯಾಯಯುತ ಬೆಲೆ ಕೊಡಿಸುವ ಕೆಲಸ ಮಾಡಿಲ್ಲ. ಇವರು ರೈತರ ಆದಾಯ ದುಪ್ಪಟ್ಟು ಮಾಡುತ್ತಾರ?
ದೇಶದ ಎಕಾನಮಿಯನ್ನು 5 ಟ್ರಿಲಿಯನ್ ಡಾಲರ್ ಎಕಾನಮಿ ಮಾಡುತ್ತೇವೆ ಎಂದು ನರೇಂದ್ರ ಮೋದಿ ಅವರು ಹೇಳಿದರು. ಮನಮೋಹನ್ ಸಿಂಗ್ ಅವರು ಇರುವಾಗ 2.2 ಟ್ರಿಲಿಯನ್ ಡಾಲರ್ ಜಿಡಿಪಿ ಇತ್ತು, ಇಂದು 3 ಟ್ರಿಲಿಯನ್ ಡಾಲರ್ ಅನ್ನು ಕೂಡ ದಾಟಿಲ್ಲ. ಬಿಜೆಪಿ ಅಂದರೆ ಸುಳ್ಳಿನ ಫ್ಯಾಕ್ಟರಿ. ರೈತರಿಗೆ, ದಲಿತರಿಗೆ, ಅಲ್ಪಸಂಖ್ಯಾತರಿಗೆ, ಮಹಿಳೆಯರಿಗೆ ಮೋಸ ಮಾಡಿದ್ದಾರೆ.
ರಾಷ್ಟ್ರ ಯುವಜನೋತ್ಸವದಲ್ಲಿ ಭಾಗಿಯಾಗಲು ನರೇಂದ್ರ ಮೋದಿ ಅವರು ಹುಬ್ಬಳ್ಳಿಗೆ ಬರುತ್ತಿದ್ದಾರೆ. ನಿಜವಾಗಿ ಇದು ಯುವ ಜನರಿಗೆ ಮಾರಕವಾದ ಉತ್ಸವ. ಪ್ರತೀ ವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುತ್ತೇವೆ ಎಂದು ಹೇಳಿ, ಉದ್ಯೋಗ ಕೇಳಿದ ಯುವಕರಿಗೆ ಪಕೋಡ ಮಾರಲು ಹೋಗಿ ಎಂದರು. ಮೋದಿ ಮೋದಿ ಎಂದು ಕೂಗುತ್ತಿದ್ದವರಿಗೆ ಬಿಜೆಪಿ ಪಕ್ಷ ಮಕ್ಮಲ್ ಟೋಪಿ ಹಾಕಿದೆ.
ನಮ್ಮ ಸರ್ಕಾರ ಇದ್ದಾಗ ಬಡಜನರಿಗೆ 7 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆವು, ಈಗ ಅದನ್ನು 4 ಕೆ.ಜಿ ಗೆ ಇಳಿಸಿದ್ದಾರೆ. ಅಕ್ಕಿ ಕೊಡುವುದು ರಾಜ್ಯದ ಜನರು ಕಟ್ಟುವ ತೆರಿಗೆ ಹಣದಿಂದ, ಯಾರಪ್ಪನ ಮನೆಯಿಂದ ತಂದು ಅಲ್ಲ.
2014ರಲ್ಲಿ ಪೆಟ್ರೋಲ್ ಬೆಲೆ 76 ರೂ, ಡೀಸೆಲ್ ಬೆಲೆ 54 ರೂ. ಮತ್ತು ಗ್ಯಾಸ್ ಬೆಲೆ 414 ರೂ. ಇತ್ತು. ಇವತ್ತು ಪೆಟ್ರೋಲ್ ಬೆಲೆ 101 ರೂ. ಡೀಸೆಲ್ ಬೆಲೆ 96 ಮತ್ತು ಗ್ಯಾಸ್ ಬೆಲೆ 1150 ರೂ. ಆಗಿದೆ. ಮೋದಿ ಅವರು ಅಚ್ಚೇದಿನ್ ಆಯೇಗಾ ಎಂದಿದ್ದರು, ಇದನ್ನು ಅಚ್ಚೇದಿನ್ ಎಂದು ಕರೆಯಲು ನೀವೆಲ್ಲ ಸಿದ್ಧರಿದ್ದೀರ? ಮೋದಿ ಅವರು ತಮ್ಮ ಮನ್ ಕಿ ಬಾತ್ ನಲ್ಲಿ ದೇಶದ ಸಮಸ್ಯೆಗಳನ್ನು ಪ್ರಸ್ತಾಪ ಮಾಡುವುದೇ ಇಲ್ಲ. ಬಸವರಾಜ ಬೊಮ್ಮಾಯಿ ಅವರು ಈ ರಾಜ್ಯ ಕಂಡ ಮೋಸ್ಟ್ ವೀಕೆಸ್ಟ್ ಮುಖ್ಯಮಂತ್ರಿ. ಆರ್,ಎಸ್,ಎಸ್ ನವರ ತಾಳಕ್ಕೆ ಅವರು ಕುಣಿಯಬೇಕು.
15ನೇ ಹಣಕಾಸು ಆಯೋಗದ ಮಧ್ಯಂತರ ವರದಿಯಲ್ಲಿ 5495 ಕೋಟಿ ವಿಶೇಷ ಅನುದಾನವನ್ನು ರಾಜ್ಯಕ್ಕೆ ನೀಡುವಂತೆ ಶಿಫಾರಸು ಮಾಡಿದ್ದರು. ನಮ್ಮ ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರ ವಿತ್ತ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಆಯೋಗಕ್ಕೆ ಪತ್ರ ಬರೆದು ಈ ಶಿಫಾರಸನ್ನು ಕೈಬಿಡಿ, ಹಣ ನೀಡಲು ಸಾಧ್ಯವಿಲ್ಲ ಎಂದರು. ರಾಜ್ಯದಿಂದ ಜನ 25 ಬಿಜೆಪಿ ಸಂಸದರನ್ನು ಜನ ಆಯ್ಕೆ ಮಾಡಿ ಕಳಿಸಿಕೊಟ್ಟಿದ್ದಾರೆ. ಈ ಜಿಲ್ಲೆಯ ಪ್ರಕಾಶ್ ಹುಕ್ಕೇರಿ ಅವರನ್ನು ಜನ ಸೋಲಿಸಿದ್ರು ಪಾಪ, ಇವರು ಒಳ್ಳೆ ಕೆಲಸ ಮಾಡಿದ್ದರು. ಗೆದ್ದ 25 ಜನ ಸಂಸದರು ನರೇಂದ್ರ ಮೋದಿ ಅವರ ಬಳಿ ಹೋಗಿ ಕರ್ನಾಟಕಕ್ಕೆ ಈ 5495 ಕೋಟಿ ಹಣ ಕೊಡಿ ಎಂದು ಕೇಳಲಿಲ್ಲ. ಹೀಗಾಗಿ ಶಿಫಾರಸು ರದ್ದಾಯಿತು, ಇದರಿಂದ ರಾಜ್ಯಕ್ಕೆ ಅನ್ಯಾಯ ಆಗಿದ್ದಲ್ಲವ?
ಬೆಳಗಾವಿಯಲ್ಲಿ ಪಶುಸಂಗೋಪನೆ ಕೂಡ ಒಂದು ಮುಖ್ಯ ಕಸುಬು. ಚರ್ಮಗಂಟು ರೋಗ ಬಂದಿದೆ, ಜಿಲ್ಲೆಯಲ್ಲಿ ವೈದ್ಯರಿಲ್ಲ, ಲಸಿಕೆ ಇಲ್ಲ ಇದರಿಂದ ಹೈನುಗಾರರ ಸಂಕಷ್ಟದಲ್ಲಿದ್ದಾರೆ. ಹಿಂಡಿ, ಬೂಸದ ಬೆಲೆ ಜಾಸ್ತಿಯಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿ ಕ್ಷೀರಧಾರೆ ಯೋಜನೆ ಜಾರಿಗೆ ತಂದು ಪ್ರತೀ ಲೀಟರ್ ಹಾಲಿಗೆ ರೂ.5 ಪ್ರೋತ್ಸಾಹ ಧನ ನೀಡಿದ್ದೆ. ಈ ಸರ್ಕಾರ ಒಂದು ರೂಪಾಯಿ ಏರಿಕೆ ಮಾಡಿಲ್ಲ. ಗಂಟು ರೋಗ ಹೀಗೆ ಹಲವಾರು ಕಾರಣದಿಂದ ಜೂನ್ ತಿಂಗಳಲ್ಲಿ ನಿತ್ಯ 94 ಲಕ್ಷ ಲೀಟರ್ ಹಾಲು ಉತ್ಪಾದನೆ ಆಗುತ್ತಿದ್ದುದ್ದು ಈಗ 76 ಲಕ್ಷ ಲೀಟರ್ ಹಾಲಿಗೆ ಇಳಿದಿದೆ. ಅಂದರೆ 18 ಲಕ್ಷ ಲೀಟರ್ ಹಾಲಿನ ಉತ್ಪಾದನೆ ನಿತ್ಯ ಕಡಿಮೆಯಾಗಿದೆ. ಇದರಿಂದ ನಿತ್ಯ 6 ಕೋಟಿ 66 ಲಕ್ಷ ರೂ. ರೈತರಿಗೆ ಬರಬೇಕಿದ್ದ ಹಣ ನಷ್ಟವಾಗುತ್ತಿದೆ. ಇದನ್ನು ಸದನದಲ್ಲಿ ಪ್ರಸ್ತಾಪಿಸಿದರೆ ಪಶುಸಂಗೋಪನಾ ಸಚಿವ ಪ್ರಭು ಚೌಹಾನ್ ಅವರು ಸದನಕ್ಕೆ ಮೌಖಿಕ ಉತ್ತರ ನೀಡಬೇಕಾಗುತ್ತದೆ ಎಂದು ನನಗೆ ಲಿಖಿತ ಉತ್ತರ ಕಳುಹಿಸಿ ತಪ್ಪಿಸಿಕೊಂಡು ಓಡಿಹೋದರು.
ಕೃಷಿ ಭಾಗ್ಯ ಯೋಜನೆ ಮಾಡಲು ನಮ್ಮ ಸರ್ಕಾರ 2 ಲಕ್ಷ ಕೃಷಿ ಹೊಂಡಗಳನ್ನು ನಿರ್ಮಾಣ ಮಾಡಿಕೊಟ್ಟಿದ್ದೆವು. ಈಗ ಈ ಕಾರ್ಯಕ್ರಮವನ್ನೇ ಬಿಟ್ಟಿದ್ದಾರೆ. ಹಸು, ಎಮ್ಮೆ, ಎತ್ತು ಸತ್ತರೆ 10,000 ಮತ್ತು ಕುರಿ, ಮೇಕೆ ಸತ್ತರೆ 5000 ರೂ. ಪರಿಹಾರ ನೀಡುತ್ತಿದ್ದ ಅನುಗ್ರಹ ಯೋಜನೆಯನ್ನು ನಿಲ್ಲಿಸಿದರು. ವಿದ್ಯಾಸಿರಿ, ಇಂದಿರಾ ಕ್ಯಾಂಟೀನ್ ಇವೆಲ್ಲವನ್ನು ನಿಲ್ಲಿಸಿದ್ರು. ಇಂದಿರಾ ಕ್ಯಾಂಟಿನ್ ಬಡವರಿಗೆ, ಆಟೋ ಚಾಲಕರಿಗೆ, ಆಸ್ಪತ್ರೆಗೆ ಬರುವ ರೋಗಿಗಳಿಗೆ, ಕಾರ್ಮಿಕರಿಗಾಗಿ ರೂಪಿಸಿದ್ದ ಕಾರ್ಯಕ್ರಮ. ಇದನ್ನು ನಿಲ್ಲಿಸಿ ಬಡವರ ಊಟ ಕಸಿದಿದ್ದಾರೆ. ಈಗ ಭ್ರಷ್ಟಾಚಾರ ಮಾತ್ರ ಇದೆ.
ರಾಜ್ಯದ ಇತಿಹಾಸದಲ್ಲಿ ಮೊಟ್ಟ ಮೊದಲ ಬಾರಿಗೆ ಪ್ರಧಾನಿ ಮತ್ತು ರಾಷ್ಷ್ರಪತಿಗಳಿಗೆ ಪತ್ರ ಬರೆದು ನಮ್ಮಿಂದ 40% ಕಮಿಷನ್ ಕೊಡಲು ಆಗಲ್ಲ, ರಾಜ್ಯ ಸರ್ಕಾರದ ಮೇಲೆ ಕ್ರಮ ಕೈಗೊಳ್ಳಿ ನಮ್ಮನ್ನು ಈ ಕಮಿಷನ್ ಕಿರುಕುಳದಿಂದ ತಪ್ಪಿಸಿ ಎಂದು ಗೋಗರೆದರು. 6-7-2021ರಲ್ಲಿ ಪತ್ರ ಬರೆದದ್ದು, ಇದಾಗಿ ಒಂದೂವರೆ ವರ್ಷ ಕಳೆದರು ನ ಖಾವೂಂಗಾ ನ ಖಾನೆದೂಂಗ ಎನ್ನುವ ನರೇಂದ್ರ ಮೋದಿ ಅವರು ಒಂದು ತನಿಖೆಯನ್ನು ಕೂಡ ಮಾಡಿಸಿಲ್ಲ. ಪಿಎಸ್‌ಐ ಆಯ್ಕೆ, ಟೀಚರ್, ಪ್ರೊಪ್ರೆಸರ್ ಆಯ್ಕೆಗಳಲ್ಲಿ ಲಂಚದಿಂದ ತುಂಬಿಹೋಗಿದೆ. ವರ್ಗಾವಣೆ, ನೇಮಕಾತಿ, ಬಡ್ತಿ ಹೀಗೆ ಎಲ್ಲ ಕಡೆ ಲಂಚ ಕೊಡಬೇಕಾಗಿರುವುದರಿಂದ ವಿಧಾನಸೌಧದ ಗೋಡೆಗಳು ಕೂಡ ಲಂಚ, ಲಂಚ ಎಂದು ಪಿಸುಗುಟ್ಟಲು ಆರಂಭ ಮಾಡಿದೆ.
ಮಹಾತ್ಮ ಗಾಂಧಿ ಅವರ ಅಧ್ಯಕ್ಷತೆಯಲ್ಲಿ 1924ರ ರಲ್ಲಿ ಕಾಂಗ್ರೆಸ್ ಅಧಿವೇಶನ ನಡೆದ ಜಾಗದಿಂದ ಇಂದು ನಾವು ಯಾತ್ರೆಯನ್ನು ಆರಂಭ ಮಾಡಿದ್ದೇವೆ. ನಾವು ಸೂಚಕವಾಗಿ ಕಸ ಗುಡಿಸಿದ್ದು ಯಾಕೆಂದರೆ ನಾವು ಅಧಿಕಾರಕ್ಕೆ ಬಂದರೆ ರಾಜ್ಯದ ಭ್ರಷ್ಟಾಚಾರವನ್ನು ಗುಡಿಸಿ ಬಿಸಾಕುತ್ತೇವೆ. ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರು ಈಶ್ವರಪ್ಪ ಅವರಿಗೆ ಲಂಚ ನೀಡಲು ಆಗದೆ ಆತ್ಮಹತ್ಯೆಗೆ ಶರಣಾದರು. ಅವರು ಸಾಯುವ ಮುನ್ನ ನನ್ನ ಸಾವಿಗೆ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಕೂಡ ಬರೆದಿದ್ದರು. ಆದರೂ ಅವರನ್ನು ಮೂರೇ ತಿಂಗಳಲ್ಲಿ ಖುಲಾಸೆ ಮಾಡಿದ್ದಾರೆ. ಮೃತರ ಮನೆಗೆ ಭೇಟಿನೀಡಿದಾಗ ಆತನ ಹೆಂಡತಿ ಕೂಡ ತನ್ನ ಗಂಡನ ಸಾವಿಗೆ ಈಶ್ವರಪ್ಪ ಕಾರಣ ಎಂದರು. ತುಮಕೂರಿನ ಗುತ್ತಿಗೆದಾರ ಪ್ರಸಾದ್ ಎಂಬುವವರು 40% ಕಮಿಷನ್ ಕೊಡಲಾಗದೆ ದೇವರಾಯನದುರ್ಗದಲ್ಲಿ ಆತ್ಮಹತ್ಯೆ ಮಾಡಿಕೊಂಡರು, ಕೆ.ಆರ್ ಪುರಂನ ಇನ್ಸ್ ಪೆಕ್ಟರ್ ಒಬ್ಬರು ಸಾವಿಗೀಡಾದಾಗ ಆತನ ಶವ ನೋಡಲು ಹೋಗಿದ್ದ ಸಚಿವ ಎಂಟಿಬಿ ನಾಗರಾಜ್ ಅವರು “ಪಾಪ 70 – 80 ಲಕ್ಷ ಸಾಲ ಮಾಡಿ ವರ್ಗಾವಣೆ ಮಾಡಿಸಿಕೊಂಡು ಬಂದರೆ ಸಾಯದೆ ಇನ್ನೇನು ಮಾಡ್ತಾರೆ” ಎಂದು ಹೇಳಿದ್ದರು.
ಬೊಮ್ಮಾಯಿ ಅವರೇ ನಿಮ್ಮ ಸರ್ಕಾರದಲ್ಲಿ 40% ಕಮಿಷನ್ ನಡೆಯುತ್ತಿದೆ ಎಂದರೆ ಸಾಕ್ಷ್ಯ ಕೊಡಿ ಎನ್ನುತ್ತಾರೆ. ಇವುಗಳಿಗಿಂತ ಬೇರೆ ಸಾಕ್ಷಿ ಬೇಕಾ? ಹಿಂದಿನ ಸರ್ಕಾರದಲ್ಲೂ ಭ್ರಷ್ಟಾಚಾರ ಇತ್ತು ಎನ್ನುತ್ತಾರೆ. ಅದಕ್ಕೆ ಸರಿನಪ್ಪ ನಮ್ಮ ಸರ್ಕಾರದ ಅವಧಿಯನ್ನೂ ಸೇರಿಸಿ ತನಿಖೆ ಮಾಡಿಸಿ ಎಂದು ಹೇಳಿದ್ದೆ. ಹಿಂದೆ ನಮ್ಮ ಸರ್ಕಾರ ಭ್ರಷ್ಟಾಚಾರ ಇದ್ದರೆ ಆಗ ಯಾಕೆ ಸುಮ್ಮನಿದ್ರಿ? ಈಗ ಅಧಿಕಾರಕ್ಕೆ ಬಂದು ಮೂರುವರೆ ವರ್ಷ ಆಗಿದೆ ತನಿಖೆ ಮಾಡಿಸಿದ್ರಾ?
ಪ್ರಜಾಧ್ವನಿ ಎಂದರೆ ಜನರ ಧ್ವನಿ ಎಂದರ್ಥ. ಜನರ ನಿರೀಕ್ಷೆಗಳು ಮತ್ತು ಸಲಹೆಗಳೇನು ಎಂಬುದನ್ನು ನಾವು ಈ ಯಾತ್ರೆಯ ಮೂಲಕ ತಿಳಿದುಕೊಂಡು, ಮುಂದೆ ನಾವು ಅಧಿಕಾರಕ್ಕೆ ಬಂದಾಗ ಸಮಾಜದ ಎಲ್ಲಾ ವರ್ಗದ ಜನರ ಆಡಳಿತ ನೀಡುವ ಪ್ರಯತ್ನ ಮಾಡುತ್ತೇವೆ. ಇದನ್ನು ಹಿಂದೆಯೂ ಮಾಡಿದ್ದೆವು, ಮುಂದೆಯೂ ಮಾಡುತ್ತೇವೆ. ಬಿಜೆಪಿ ಈ ಕೆಲಸವನ್ನು ಯಾವತ್ತೂ ಮಾಡಲ್ಲ ಅಲ್ವಾ? ಇಷ್ಟು ಸತ್ಯ ಗೊತ್ತಿದ್ದರೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಚಿಕ್ಕೋಡಿಯ 8ಕ್ಕೆ 8 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಕಿತ್ತೆಸೆದು ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಕೆಲಸ ಮಾಡಬೇಕು.
ನಾವು ಅಧಿಕಾರಕ್ಕೆ ಬಂದರೆ ಪ್ರತಿ ಮನೆ ಮನೆಗೆ ಪ್ರತೀ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ನೀಡುತ್ತೇವೆ. ನೀರಾವರಿ ಯೋಜನೆಗಳಿಗೆ ಸಂಬಂಧಿಸಿದಂತೆ ಹೈದ್ರಾಬಾದ್ ಕರ್ನಾಟಕದಲ್ಲಿ ಘೋಷಣೆ ಮಾಡಿದ್ದೇವೆ, ದಲಿತ ಸಮಾವೇಶದಲ್ಲಿ ಕೆಲವು ಘೋಷಣೆ ಮಾಡಿದ್ದೇವೆ. ಮಾತೆತ್ತಿದ್ದರೆ ನನ್ನನ್ನು ಹಿಂದೂ ವಿರೋಧಿ ಎನ್ನುತ್ತಾರೆ, ನಾನು ಹಿಂದೂ ಅಲ್ವಾ? ಆಪರೇಷನ್ ಆದಾಗ ಯಾರ ರಕ್ತವಾದರೂ ಕೊಡಿ ಎಂದು ಹೇಳುತ್ತೇವೆ, ಆಗಲೂ ನನ್ನದೇ ಜಾತಿ ಧರ್ಮದವನ ರಕ್ತ ಕೇಳುತ್ತೇವಾ ಇಲ್ಲ ಅಲ್ವಾ? ಹೀಗೆ ಎಲ್ಲರೂ ಮನುಷ್ಯರು ಎಂಬುದು ನಮ್ಮ ಸಿದ್ಧಾಂತ. ಇದನ್ನೇ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿರುವ ಸಂವಿಧಾನ ಹೇಳುತ್ತದೆ. ಸಂವಿಧಾನದಲ್ಲಿ ನಂಬಿಕೆಯಿಟ್ಟಿರುವ ನಾನು ಹಿಂದೂ ವಿರೋಧಿ ಆಗಲು ಹೇಗೆ ಸಾಧ್ಯ? ನಮ್ಮೂರಿನಲ್ಲಿ ನಾವು ರಾಮಮಂದಿರ ಕಟ್ಟಿಲ್ವಾ? ನಾವು ಎಲ್ಲಾ ಧರ್ಮಗಳನ್ನು ಗೌರವಿಸುವವರು. ಆದರೆ ಜಾತ್ರೆಗಳಲ್ಲಿ ಮುಸ್ಲಿಂಮರಿಗೆ ವ್ಯಾಪಾರ ಮಾಡಬೇಡಿ ಎಂದು ಹೇಳುವ, ಹಲಾಲ್, ಹಿಜಾಬ್ ವಿಚಾರದಲ್ಲಿ ರಾಜಕಾರಣ ಮಾಡುವ ಹಿಂದುತ್ವದ ವಿರೋಧಿಗಳು. ನಾವು ಮನುಷ್ಟ ದ್ವೇಷಿಗಳಲ್ಲ. ನಾವು ಮನುಷ್ಯಪ್ರೇಮಿಗಳು. ಇದೇ ಕಾರಣಕ್ಕೆ ರಾಹುಲ್ ಗಾಂಧಿ ಅವರು ಭಾರತ್ ಜೋಡೋ ಯಾತ್ರೆಯನ್ನು ಮಾಡುತ್ತಿರುವುದು. ದೇಶದ ಐಕ್ಯತೆಯನ್ನು ಗೌರವಿಸಬೇಕು, ಜನರನ್ನು ಪ್ರೀತಿಸಬೇಕು. ಇದನ್ನೇ ಬುದ್ಧ, ಬಸವ, ಕನಕದಾಸರು, ಅಂಬೇಡ್ಕರ್, ಮಹಮ್ಮದ್ ಪೈಗಂಬರ್, ಕ್ರಿಸ್ತ ಹೇಳಿದ್ದು. ಎಲ್ಲಾ ಜನರನ್ನು ಒಟ್ಟಾಗಿ ತೆಗೆದುಕೊಂಡು ಹೋಗುವ ಶಕ್ತಿ ಇರುವುದು ಕಾಂಗ್ರೆಸ್ ಗೆ ಮಾತ್ರ.
ಬಿಜೆಪಿಯ ಪಾಪದ ಕೊಡ ತುಂಬಿದೆ. ಅವರ ಭ್ರಷ್ಟಾಚಾರಗಳ ಕರ್ಮಕಾಂಡದ ಆರೋಪ ಪಟ್ಟಿಯನ್ನು ಜನರ ಮುಂದೆ ಇಡುತ್ತಿದ್ದೇವೆ. ಜನ ಇದರ ತೀರ್ಮಾನ ಕೊಡಬೇಕು. ದಯವಿಟ್ಟು ಬಿಜೆಪಿಯವರ ಹುಸಿ ಹಿಂದುತ್ವ, ಜಾತೀಯತೆಯನ್ನು ನಂಬದೆ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆಶೀರ್ವಾದ ಮಾಡಿ ಎಂದು ಮನವಿ ಮಾಡುತ್ತೇನೆ.
*ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ್*
ಕರ್ನಾಟಕ ರಾಜ್ಯದಲ್ಲಿ ಸ್ವಾತಂತ್ರ್ಯ ಹೋರಾಟ ಹಾಗೂ ಸಾಮಾಜಿಕ ನ್ಯಾಯದಲ್ಲಿ ಬೆಳಗಾವಿಯು ಪುಣ್ಯ ಭೂಮಿ ಎನಿಸಿಕೊಂಡಿದೆ. ಸಾಹು ಮಹರಾಜರು, ಅಂಬೇಡ್ಕರ್, ನಾಸು ಹರ್ಡಿಕರ್, ಸಂಗೋಳ್ಳಿ ರಾಯಣ್ಣ, ಕಿತ್ತೂರು ರಾಣಿ ಚೆನ್ನಮ್ಮ ಅವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗಿದ್ದರು. ಈಗ ಸ್ವಾತಂತ್ರ್ಯ ಹೋರಾಟಕ್ಕೆ ವಿರುದ್ಧವಾಗಿದ್ದವರ ವಿರುದ್ಧ ಇದೇ ಪುಣ್ಯ ಭೂಮಿಯಿಂದ ಪ್ರಜಾಧ್ವನಿ ಯಾತ್ರೆಗೆ ಚಾಲನೆ ನೀಡಲಾಗಿದೆ. ಈ ಸಮಯದಲ್ಲಿ ನಾವು ನಮ್ಮ ಪೂರ್ವಜರ ಇತಿಹಾಸ ನೆನೆಸಿಕೊಳ್ಳಬೇಕು.
ಸ್ವಾತಂತ್ರ್ಯ ಹೋರಾಟದ ತಿರುಳು ಸಾಮಾಜಿಕ ನ್ಯಾಯ. ಎಲ್ಲರನ್ನು ಸಮಾನವಾಗಿ ಕಾಣುವುದನ್ನು ಸ್ವಾತಂತ್ರ್ಯ ಹೋರಾಟದಲ್ಲಿ ನೋಡಿದ್ದೇವೆ. 75 ವರ್ಷಗಳ ಕಾಲ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನದ ಚೈಕಟ್ಟಿನಲ್ಲಿ ಎಳ್ಲರಿಗೂ ಸಮಾನವಾದ ಹಕ್ಕು, ಅವಕಾಶವನ್ನು ನೀಡುತ್ತಾ ಕಾಂಗ್ರೆಸ್ ಯಶಸ್ವಿಯಾಗಿ ದೇಶವನ್ನು ಮುನ್ನಡೆಸಿದೆ.
ಈ ಪ್ರಜಾಧ್ವನಿಯಲ್ಲಿ ರಾಜ್ಯದ ವಿಚಾರ ನೋಡುವುದಾದರೆ, ನಾಲ್ಕು ವರ್ಷಗಳ ಹಿಂದೆ ಅನೈತಿಕವಾಗಿ ಅಧಿಕಾರದ ಚುಕ್ಕಾಣಿ ಹಿಡಿದ ಸುಳ್ಳೇ ಮನೆ ದೇವರು ಎಂದು ನಂಬಿರುವ ಬಿಜೆಪಿ, ದುರಾಡಳಿತ, ದೌರ್ಜನ್ಯ ವಿರುದ್ಧ ಜನಸಾಮಾನ್ಯರಲ್ಲಿ ಜನಜಾಗೃತಿ ಮೂಡಿಸಲು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಮಹಿಳೆಯರ ಮೇಲೆ ಆಗುವ ದೌರ್ಜನ್ಯ, ಹಿಂದೆಂದಿಗಿಂತ ಹೆಚ್ಚಾಗಿದೆ. ಈ ಹಿಂದೆ ಮಹಿಳೆಯರು ಹೆಚ್ಚು ಕಾಣೆ ಆಗುತ್ತಿರಲಿಲ್ಲ. ಒಂದುವೇಳೆ ಕಾಣೆಯಾದರೂ ಪೊಲೀಸರು ಸಕಾಲಕ್ಕೆ ಹುಡುಕಿ ಕೊಡುತ್ತಿದ್ದರು. ಆದರೆ ಈಗ ಶೇ.48ರಷ್ಟು ಮಹಿಳೆಯರು ಕಾಣೆಯಾಗಿರುವುದು ಯಾರಿಗೂ ಗೊತ್ತಿಲ್ಲ. ಬಿಜೆಪಿ ಸರ್ಕಾರ ಯಾವುದೇ ಕ್ರಮ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಮಹಿಳೆಯರ ಮೇಲೆ ದೌರ್ಜನ್ಯ ಶೇ.40 ರಷ್ಟು ಹೆಚ್ಚಾಗಿದೆ. ಅದರಲ್ಲಿ ಬಹುತೇಕ ದೌರ್ಜನ್ಯ ಬಿಜೆಪಿ ನಾಯಕರು ಎಸಗಿದ್ದಾರೆ.
ಕರ್ನಾಟಕ ಬಹಳ ಪ್ರಗತಿಪರ ರಾಜ್ಯ ಎಂದು ಹೆಮ್ಮೆ ಪಡುತ್ತಿದ್ದೆವು. ಬಿಜೆಪಿ ಸರ್ಕಾರ ಬಂದ ನಂತರ ಈ ರಾಜ್ಯವನ್ನು ರೋಗಗ್ರಸ್ಥ ರಾಜ್ಯವನ್ನಾಗಿ ಮಾಡಿದ್ದಾರೆ. ಇದಕ್ಕೆ ಹಲವು ಕಾರಣಗಳಿವೆ. ಉದ್ಯೋಗದಿಂದ ಯಾವುದೇ ವಿಚಾರ ತೆಗೆದುಕೊಂಡರೂ ರಾಜ್ಯ ಹಿಂದುಳಿಯುತ್ತಿದೆ. ರಾಜ್ಯದ ಸಿಎಂ ಹಾಗೂ ಇತರೆ ನಾಯಕರು ಹೇಳುವಂತೆ ರಾಜ್ಯವನ್ನು ಉತ್ತರ ಪ್ರದೇಶವನ್ನಾಗಿ ಮಾಡಲು ಹೊರಟಿದ್ದಾರೆ. ಯುಪಿಯ ಬಿಜೆಪಿ ಶಾಸಕ ಕುಲ್ದಿಪ್ ಸೆಂಗರ್ ಎಂಬಾತ ಮಹಿಳೆಯು ಕೆಲಸ ಕೇಳಿಕೊಂಡು ಹೋದಾಗ, ಆಕೆ ಮೇಲೆ ಅತ್ಯಾಚಾರ ಮಾಡಿದ್ದ. ಪೊಲೀಸರಿಗೆ ದೂರು ಕೊಟ್ಟಾಗ ಅದನ್ನು ತೆಗೆದುಕೊಳ್ಳಲಿಲ್ಲ. ಆಕೆ ಆತ್ಮಹತ್ಯೆಗೆ ಯತ್ನಿಸಿದಾಗ ದೂರು ದಾಖಲಿಸಿಕೊಂಡರು. ನಂತರ ಕೋರ್ಟ್ ಹೋಗುವಾಗ ಅವರ ಮೇಲೆ ಲಾರಿ ಹತ್ತುತ್ತದೆ. ಆಗ ಚಾಲಕ ಹಾಗೂ ಆಕೆಯ ತಾಯಿ ಸಾಯುತ್ತಾರೆ.
ಸುಪ್ರೀಂ ಕೋರ್ಟ್ ಸುಮೋಟೋ ಪ್ರಕರಣ ದಾಖಲಿಸಿ, ದೆಹಲಿಗೆ ವರ್ಗಾಯಿತುತ್ತದೆ. 25 ಲಕ್ಷ ಪರಿಹಾರವನ್ನು ಆಕೆಗೆ ನೀಡುತ್ತಾರೆ. ಇನ್ನು ದಲಿತ ಮಗಳ ಮೇಲೆ ಅತ್ಯಾಚಾರ ಆದಾಗ ಅದನ್ನು ಮುಚ್ಚಿಹಾಕಲು ಅಪಘಾತ ಎಂದು ಹೇಳಿ ತಂದೆ ತಾಯಿಗೂ ಆಕೆಯ ಮುಖ ತೋರಿಸದೇ ಮಧ್ಯರಾತ್ರಿ ಅಂತ್ಯಕ್ರಿಯೆಗೆ ಮುಂದಾಗುತ್ತಾರೆ. ಇವೆಲ್ಲವೂ ಯುಪಿ ಮಾದರೆ ಕರ್ನಾಟಕಕ್ಕೆ ಬೇಕಾ?
ಸಾಹು ಮಹರಾಜ್, ಕಿತ್ತುರು ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣ ಎಲ್ಲರ ಹಕ್ಕಿಗಾಗಿ ಹೋರಾಟ ಮಾಡಿದ ಈ ನೆಲದಲ್ಲಿ ಬಿಜೆಪಿ ನಾಯಕರು ಸದನದಲ್ಲಿ ಬ್ಲೂಫಿಲಂ ನೋಡಿದ್ದರು. ಸದನವನ್ನು ಯಾವ ಮಟ್ಟಕ್ಕೆ ಇಳಿಸಿದ್ದಾರೆ. ಇವರು ದೇಶಭಕ್ತಿ ಬಗ್ಗೆ ನಮೆಗೆ ಪಾಠ ಹೇಳುತ್ತಾರೆ. ಸ್ವತಂತ್ರ್ಯ ಭಾರತದಲ್ಲಿ ಯಾವುದೇ ಬಿಜೆಪಿ ನಾಯಕರು ಭಾಗವಹಿಸಿರಲಿಲ್ಲ. ಯಾವುದೇ ಖಾಕಿ ಚಡ್ಡಿ ಕರಿ ಟೋಪಿ ಹಾಕಿದವರು, ಹಿಂದೂ ಮಹಾಸಭಾದವರು ಸ್ವಾತಂತ್ರ್ಯ ಹೋರಾಟದಲ್ಲಿ ಭಾಗವಹಿಸಿರಲಿಲ್ಲ. ಇಂದು ಧರ್ಮದ ಹೆಸರಲ್ಲಿ ನಮಗೆ ದೇಶಭಕ್ತಿ ಹೇಳಿಕೊಡಲು ಬರುತ್ತಿದ್ದಾರೆ. ಇವರಲ್ಲಿ ದೇಶಭಕ್ತಿ ಇಲ್ಲ, ಕೇವಲ ದ್ವೇಷಭಕ್ತಿ ಇದೆ. ಜನರಲ್ಲಿ ಭಯದ ವಾತಾವರಣ ನಿರ್ಮಿಸುತ್ತಿರುವ ಇವರಿಗೆ ಜನರು ತಕ್ಕ ಪಾಠ ಕಲಿಸಬೇಕಿದೆ. ಬಿಜೆಪಿಯನ್ನು ಬುಡ ಸಮೇತ ಕಿತ್ತುಹಾಕಿ.
*ಕೆಪಿಸಿಸಿ ಪ್ರಚರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್:*
ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಅಚ್ಛೇ ದಿನಗಳು ಬರುತ್ತವೆ, ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇವೆ. ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ. ನಿರುದ್ಯೋಗ ನಿರ್ಮೂಲನೆ ಆಗಲಿಲ್ಲ. ಇದ್ದ ಉದ್ಯೋಗ ಕಳೆದುಕೊಂಡು ಯುವಕರು ಬೀದಿಗೆ ಬಿದ್ದಿದ್ದಾರೆ. ರೈತರ ಆದಾಯ ದ್ವಿಗುಣ ಮಾಡುತ್ತೇವೆ ಎಂದರು. ಪ್ರತಿಯೊಬ್ಬರ ಖಾತೆಗೆ 15 ಲಕ್ಷ ಹಾಕುತ್ತೇವೆ ಎಂದರು. ಯಾವುದೂ ಆಗಿಲ್ಲ.
ರಾಜ್ಯ ಎಂದೂ ಕಾಣದ ಭ್ರಷ್ಟಾಚಾರವಾಗಿದೆ. ಇದು 40% ಕಮಿಷನ್ ಸರ್ಕಾರ. ಇದು ಅನ್ನು ಹೆಚ್ಚುತ್ತಿದೆ. ಈ ರಾಜ್ಯದಲ್ಲಿ ಬಿಜೆಪಿ ಕೊಟ್ಟಿದ್ದ 600 ಭರವಸೆಗಳ ಪೈಕಿ ಕೇವಲ 50 ಭರವಸೆ ಈಡೇರಿಸಿದ್ದಾರೆ. ಆದರೆ ಕಾಂಗ್ರೆಸ್ ಕೊಟ್ಟಿದ್ದ 165 ಭರವಸೆಗಳಲ್ಲಿ 159 ಭರವಸೆ ಈಡೇರಿಸಿದ್ದೇವೆ.
[11/01, 4:17 PM] Kpcc official: ಪತ್ರಿಕಾ ಪ್ರಕಟಣೆ
*ಕರ್ನಾಟಕ ಕಾಂಗ್ರೆಸ್ ನ ಐತಿಹಾಸಿಕ ಘೋಷಣೆ*
ಕಾಂಗ್ರೆಸ್ ಗ್ಯಾರಂಟಿ - 1 ✋🏼
ರಾಜ್ಯದ ಪ್ರತಿ ಮನೆಗೆ ಪ್ರತಿ ತಿಂಗಳು 200 ಯುನಿಟ್ ಉಚಿತ ವಿದ್ಯುತ್ ಯೋಜನೆ ಜಾರಿ
ರಾಜ್ಯದ ಜನರಿಗೆ ಕೊಟ್ಟ ಮಾತನ್ನು ಉಳಿಸಿಕೊಂಡು ನುಡಿದಂತೆ ನಡೆಯುತ್ತಾ ಬಂದಿರುವ, ಸುಭದ್ರ ಆಡಳಿತದ ಟ್ರ್ಯಾಕ್ ರೆಕಾರ್ಡ್ ಹೊಂದಿರುವ ಕಾಂಗ್ರೆಸ್ ಪಕ್ಷವೇ ಮತ್ತೆ ಅಧಿಕಾರಕ್ಕೆ ಬರಬೇಕೆಂದು ಒಮ್ಮನಸ್ಸಿನಿಂದ ನಮ್ಮ ಜನ ಬಯಸಿದ್ದಾರೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಜನ ಸಾಮಾನ್ಯರ ಬಳಿಗೆ ಹೋಗಿ, ಅವರ ಸಂಕಷ್ಟಗಳನ್ನು ಅವರಿಂದಲೇ ಅರಿತು ಅವುಗಳಿಗೆ ಪರಹಾರ ನೀಡುವ ಪ್ರಾಮಾಣಿಕ ಪ್ರಯತ್ನ ನಡೆಸುತ್ತಿದ್ದಾರೆ.
ಕಾಂಗ್ರೆಸ್ ಪಕ್ಷ ರಾಜ್ಯದ ಮನೆ ಮನೆಗಳಿಗೆ ಭೇಟಿ ನೀಡಿದಾಗ ಜನರು ಕೊರೋನಾ ನಂತರ ಜೀವನೋಪಾಯಕ್ಕೆ ಸಾಕಷ್ಟು ಕಷ್ಟ ಪಡ್ಡುತ್ತಿರುವುದು, ಪೆಟ್ರೋಲ್, ಡೀಸೆಲ್, LPG ಸಿಲೆಂಡರ್ ಸೇರಿದಂತೆ ಅಗತ್ಯ ವಸ್ತುಗಳ ನಿರಂತರ ಬೆಲೆಯೇರಿಕೆಯಿಂದಾಗಿ ತಮ್ಮ ಮಕ್ಕಳಿಗೆ ಒಳ್ಳೆಯ ವಿದ್ಯಾಭಾಸ ಒದಗಿಸಲು ಕಷ್ಟ ಪಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಇವೆಲ್ಲದರ ಜೊತೆ ಬಿಜೆಪಿ ಸರ್ಕಾರ ನಿರಂತರವಾಗಿ ವಿದ್ಯುತ್ ದರ ಏರಿಕೆ ಮಾಡುತ್ತಿರುವ ಹಾಗೂ ಅದರಿಂದ ತಮಗೆ ಆಗುತ್ತಿರುವ ತೊಂದರೆಗಳನ್ನು ಜನ ನಮ್ಮೊಂದಿಗೆ ಹಂಚಿಕೊಂಡಿದ್ದರು.
ಜನರ ಈ ಸಂಕಷ್ಟವನ್ನು ಅರಿತ ಕಾಂಗ್ರೆಸ್ ಪಕ್ಷ ಮತ್ತೆ ಅಧಿಕಾರಕ್ಕೆ ಬಂದರೆ ರಾಜ್ಯದಲ್ಲಿ ಪ್ರತಿ ಮನೆಗೂ ಪ್ರತಿ ತಿಂಗಳು 200 ಯುನಿಟ್ ವಿದ್ಯುತ್ ಅನ್ನು ಉಚಿತವಾಗಿ ನೀಡಲು ಗೃಹಜ್ಯೋತಿ ಯೋಜನೆಯನ್ನು ಜಾರಿಗೊಳಿಸಲು ತೀರ್ಮಾನಿಸಿದೆ.
ರಾಜಸ್ಥಾನದಲ್ಲಿ ಕಾಂಗ್ರೆಸ್ ಸರ್ಕಾರ ಈಗಾಗಲೇ ಈ ಮಾದರಿಯ ಯೋಜನೆಯನ್ನು ಜಾರಿಗೆ ತಂದಿದ್ದು, ಅದೇ ಮಾದರಿಯಲ್ಲಿ ರಾಜ್ಯದಲ್ಲೂ ಯೋಜನೆ ಜಾರಿ ತಂದು ವಿದ್ಯುತ್ ದರ ಏರಿಕೆಯಿಂದ ತತ್ತರಿಸಿರುವ ಜನರಿಗೆ ನೆರವಾಗುವ ತೀರ್ಮಾನವನ್ನು ಕಾಂಗ್ರೆಸ್ ಪಕ್ಷ ಕೈಗೊಂಡಿದೆ.
[11/01, 5:33 PM] Kpcc official: *ಕಾಂಗ್ರೆಸ್ ಪಕ್ಷದಿಂದ ಅಪಾರ್ಟ್ ಮೆಂಟ್ ನಿವಾಸಿಗಳ ಘಟಕ ಆರಂಭ*
*ಬೆಂಗಳೂರು:*
ಬೆಂಗಳೂರಿನ ಜನರು ಅದರಲ್ಲೂ ಅಪಾರ್ಟ್ ಮೆಂಟ್ ನಿವಾಸಿಗಳ ಮೂಲಸೌಕರ್ಯ ಸಮಸ್ಯೆಗಳಿಗೆ ಸ್ಪಂದಿಸುವ ಸಲುವಾಗಿ ಕಾಂಗ್ರೆಸ್ ಪಕ್ಷವು ಅಪಾರ್ಟ್ ಮೆಂಟ್ ನಿವಾಸಿಗಳ ನೂತನ ಘಟಕವನ್ನು ಆರಂಭಿಸಿದ್ದು, ಪ್ರೋ.ರಾಜೀವ್ ಗೌಡ ಅವರನ್ನು ಈ ಘಟಕದ ಅಧ್ಯಕ್ಷರನ್ನಾಗಿ ನೇಮಿಸಿದೆ.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಜಂಟಿ ಪತ್ರಿಕಾ ಗೋಷ್ಠಿ ನಡೆಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಅಭಿಶೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ರಾಮಲಿಂಗಾ ರೆಡ್ಡಿ, ರಾಜ್ಯಸಭೆ ಮಾಜಿ ಸದಸ್ಯ ರಾಜೀವ್ ಗೌಡ ಅವರು ಈ ವಿಚಾರ ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅಭಿಶೇಕ್ ದತ್ ಅವರು, ‘ಕಳೆದ ಮೂರ್ನಾಲ್ಕು ವರ್ಷಗಳಿಂದ ಅದರಲ್ಲೂ ಕೋವಿಡ್ ಹಾಗೂ ನಂತರದ ಸಮಯಗಳಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳು ಅತ್ಯಂತ ಸಂಕಷ್ಟಗಳನ್ನು ಅನುಭವಿಸಿದ್ದಾರೆ. ಅನಾರೋಗ್ಯ ಸಮಸ್ಯೆ ಇದ್ದವರು ಆಸ್ಪತ್ರೆಗೆ ತೆರಳಲಾಗುತ್ತಿರಲಿಲ್ಲ. ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುತ್ತಿರಲಿಲ್ಲ. ಐಟಿ ವಲಯ, ಸಣ್ಣ ಮತ್ತು ಮಧ್ಯಮ ವ್ಯಾಪಾರ ಕುಟುಂಬಗಳು, ಇತರ ವರ್ಗದವರು ಅಪಾರ್ಟ್ ಮೆಂಟ್ ಗಳಲ್ಲಿ ವಾಸಿಸುತ್ತಿದ್ದಾರೆ. ಬೆಂಗಳೂರಿನ ಭವಿಷ್ಯ ಅಪಾರ್ಟ್ ಮೆಂಟ್ ಗಳ ಮೇಲೆ ನಿಂತಿದೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಅಪಾರ್ಟ್ ಮೆಂಟ್ ನಿವಾಸಿಗಳ ಸಮಸ್ಯೆಯನ್ನು ತಿಳಿಯಲು ಹಾಗೂ ಅವುಗಳಿಗೆ ಸ್ಪಂದಿಸಲು ಪಕ್ಷ ಈ ಘಟಕವನ್ನು ಆರಂಭಿಸುತ್ತಿದೆ. ಈ ಘಟಕದ ಅಧ್ಯಕ್ಷರನ್ನಾಗಿ ರಾಜ್ಯಸಭೆ ಮಾಜಿ ಸದಸ್ಯರಾದ ರಾಜೀವ್ ಗೌಡ ಅವರನ್ನು ನೇಮಿಸಲಾಗಿದೆ’ ಎಂದು ತಿಳಿಸಿದರು.
ನಂತರ ಮಾತನಾಡಿದ ರಾಜೀವ್ ಗೌಡ ಅವರು, ‘ಕಳೆದ ಎರಡು ವರ್ಷಗಳಿಂದ ಬೆಂಗಳೂರಿನಲ್ಲಿ ಸಕಷ್ಟು ಸಮಸ್ಯೆಗಳು ಎದುರಾಗುತ್ತಿವೆ. ಅದರ ಜತೆಗೆ ಅಪಾರ್ಟ್ ಮೆಂಟ್ ನಿವಾಸಿಗಳು ಹೆಚ್ಚು ಸಮಸ್ಯೆ ಅನುಭವಿಸುತ್ತಿವೆ. ಈ ಸಮಸ್ಯೆಗಳನ್ನು ಅರಿತು ಅವುಗಳಿಗೆ ಪರಿಹಾರ ರೂಪಿಸಲು ಕಾಂಗ್ರೆಸ್ ಪಕ್ಷ ಅಪಾರ್ಟ್ ಮೆಂಟ್ ಘಟಕ ಆರಂಭಿಸಿದೆ. ಈ ಘಟಕ ಶಾಶ್ವತ ಘಟಕವಾಗಿ ಉಳಿಯಲಿದೆ. ಈ ಘಟಕದಲ್ಲಿ ಪ್ರವೀಣ್ ಪೀಟರ್ ಅವರು ಸಂಚಾಲಕರಾಗಿ, ಮಾಜಿ ಮೇಯರ್ ಗಂಗಾಬಿಕೆ ಅವರು ಸಹ ಸಂಚಾಲಕರಾಗಿದ್ದಾರೆ.
ಮೊದಲು ದೊಡ್ಡ ಕಾರ್ಯಕ್ರಮ ಹಮ್ಮಿಕೊಂಡು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್ ಅವರು ಅಪಾರ್ಟ್ ಮೆಂಟ್ ಮಾಲೀಕರ ಸಂಘ, ಅಪಾರ್ಟ್ ಮೆಂಟ್ ನಿವಾಸಿಗಳ ಸಂಘದವರನ್ನು ಒಂದೆಡೆಗೆ ಸೇರಿಸಿ ಅವರನ್ನು ತಲುಪುವ ಪ್ರಯತ್ನ ಮಾಡುತ್ತೇವೆ. ನಂತರ ಪ್ರತಿ ಕ್ಷೇತ್ರಗಳಲ್ಲಿ ಸಭೆ ಮಾಡುತ್ತೇವೆ. ಈ ಸಭೆಯಲ್ಲಿ ಅವರ ಸಭೆಗಳು, ಅವರಿಗೆ ಅಗತ್ಯವಿರುವುದೇನು ಎಂದು ಮಾಹಿತಿ ಪಡೆಯುತ್ತೇವೆ. ನಾನು ಬಿಬಿಎಂಪಿ ಪ್ರಣಾಳಿಕೆ ಸಮಿತಿ ಅಧ್ಯಕ್ಷನಾಗಿದ್ದು, ರಾಮಲಿಂಗಾ ರೆಡ್ಡಿ ಅವರು ಬೆಟರ್ ಬೆಂಗಳೂರು ಸಮಿತಿ ಅಧ್ಯಕ್ಷರಾಗಿದ್ದಾರೆ. ನಾವು ಮುಂಬರುವ ಚುನಾವಣೆಯಲ್ಲಿ ಬೆಂಗಳೂರಿಗಾಗಿ ಪ್ರತ್ಯೇಕ ಪ್ರಣಾಳಿಕೆಯನ್ನು ಸಿದ್ಧಪಡಿಸುತ್ತಿದ್ದು, ಇದರಲ್ಲೂ ನಾವು ಅಪಾರ್ಟ್ ಮೆಂಟ್ ಗಳಿಗೆ ಹೆಚ್ಚಿನ ಗಮನ ಹರಿಸುತ್ತೇವೆ’ ಎಂದು ತಿಳಿಸಿದರು.
‘ಬೆಂಗಳೂರಿನಲ್ಲಿ ಅಪಾರ್ಟ್ ಮೆಂಟ್ ನಿವಾಸಿಗಳಲ್ಲಿ ತಬ್ಬಲಿಯ ಭಾವನೆ ಬರಬಾರದು. ರಾಜಕೀಯ ನಾಯಕರು ತಮ್ಮತ್ತ ಗಮನಹರಿಸುತ್ತಿಲ್ಲ ಎಂದುಕೊಳ್ಳಬಾರದು. ಹಾಲಿ ಸರ್ಕಾರ ಅವರ ಬಗ್ಗೆ ಗಮನಹರಿಸುತ್ತಿಲ್ಲ. ನಾವು ಬೆಂಗಳೂರಿನ ಸಮಸ್ಯೆಗಳನ್ನು ಬಗೆಹರಿಸುತ್ತೇವೆ. ನಾವು ಮೂಲ ಸೌಕರ್ಯ, ನೀರು, ತ್ಯಾಜ್ಯ ನಿರ್ವಹಣೆ, ಸಾರ್ವಜನಿಕ ಭದ್ರತೆ ವಿಚಾರವಾಗಿ ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುತ್ತೇವೆ. ಬೆಂಗಳೂರು ವಿಶ್ವದಲ್ಲೇ ಅತ್ಯಂತ ವಾಸ ಯೋಗ್ಯ ನಗರವನ್ನಾಗಿ ಮಾಡಬೇಕು ಎಂಬುದು ನಮ್ಮ ಗುರಿ. ಈ ಸಮಿತಿಯಲ್ಲಿ ನಾಗರೀಕ ಸಮಾಜದಿಂದ ಪ್ರತಿನಿಧಿಗಳು ಸಲಹೆಗಾರರಾಗಿ ಕೆಲಸ ಮಾಡಲಿದ್ದಾರೆ. ಎನ್.ಎಸ್ ಮುಕುಂದ, ತಾರಾ ಕೃಷ್ಣಸ್ವಾಮಿ, ಕಿರಣ್ ಹೆಬ್ಬಾರ್, ಗೀತಾ ಶಿವರಾಂ, ಡಿ.ವಿ. ಲಕ್ಷ್ಮಿ, ಕೆ.ವಿ ಗೌತಮ್, ದಿಪಿಕಾ ರೆಡ್ಡಿ, ಕರ್ನಲ್ ದಿನೇಶ್ ಕುಮಾರ್, ಕರ್ನಲ್ ರಾಜ್, ಜಗದೀಶ್ ರೆಡ್ಡಿ, ಮಕ್ಕಳ ಹೋರಾಟಗಾರ್ತಿ ಸರಿತಾ ವಾಸು, ರಾಜೇಂದ್ರ ಬಾಬು ಅವರು ಇದ್ದಾರೆ’ ಎಂದು ತಿಳಿಸಿದರು.
[11/01, 5:51 PM] Kpcc official: *ಜಂಟಿ ಪತ್ರಿಕಾಗೋಷ್ಠಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾ ರೆಡ್ಡಿ ಅವರ ಮಾತುಗಳು*
ಬೆಂಗಳೂರಿನಲ್ಲಿ ಕಳೆದ 20-30 ವರ್ಷಗಳಿಂದ ಅಪಾರ್ಟ್ ಮೆಂಟ್ ಸಂಸ್ಕೃತಿ ಆರಂಭವಾಗಿದೆ. ಇತ್ತೀಚಿನ ದಿನಗಳಲ್ಲಿ ಅಪಾರ್ಟ್ ಮೆಂಟ್ ಗಳು ಹೆಚ್ಚಾಗಿದ್ದು, ದೊಡ್ಡ ಅಪಾರ್ಟ್ ಮೆಂಟ್ ಗಳ ಜತೆಗೆ ಸಣ್ಣ ಅಪಾರ್ಟ್ ಮೆಂಟಗಳು ಇವೆ. ಕಳೆದ 10 ವರ್ಷಗಳಿಂದ ಬೆಂಗಳೂರಿನ ಹೊರವಲಯಗಳಲ್ಲಿ ಅಪಾರ್ಟ್ ಮೆಂಟ್ ಗಳು ಹೆಚ್ಚಾಗುತ್ತಿವೆ.
ಹೆಚ್ಚುವರಿ ಸೌಕರ್ಯ, ಭದ್ರತೆ ಕಾರಣಗಳಿಂದ ಅಪಾರ್ಟ್ ಮೆಂಟ್ ಗಳಲ್ಲಿ ವಾಸ ಹೆಚ್ಚಾಗುತ್ತಿದ್ದು, ಬೆಂಗಳೂರಿನ ಜನಸಂಖ್ಯೆ ಶೇ.10ರಷ್ಟು ಜನ ಈಗ ಅಪಾರ್ಟ್ ಮೆಂಟ್ ಗಳಲ್ಲಿ ವಾಸ ಮಾಡುತ್ತಿದ್ದಾರೆ. ಅಪಾರ್ಟ್ ಮೆಂಟ್ ನಿವಾಸಿಗಳ ಸಮಸ್ಯೆ ನಿವಾರಿಸಲು ಕಾಂಗ್ರೆಸ್ ಸರ್ಕಾರ ಬಗೆಹರಿಸುವ ಪ್ರಯತ್ನ ಮಾಡಿದೆ. ಕಳೆದ ನಾಲ್ಕು ವರ್ಷಗಳಿಂದ ಅಪಾರ್ಟ್ ಮೆಂಟ್ ನಿವಾಸಿಗಳ ಸಮಸ್ಯೆ ಸರ್ಕಾರ ಕೇಳುತ್ತಿಲ್ಲ.
ಹೀಗಾಗಿ ನಾವು ಅಪಾರ್ಟ್ ಮೆಂಟ್ ನಿವಾಸಿಗಳ ಶಾಶ್ವತ ಘಟಕವನ್ನು ಆರಂಭಿಸಲು ತೀರ್ಮಾನಿಸಿದೆ. ಅಪಾರ್ಟ್ ಮೆಂಟ್ ನಿವಾಸಿಯಾಗಿರುವ ಪ್ರೋ. ರಾಜೀವ್ ಗೌಡ ಅವರನ್ನು ಈ ಘಟಕದ ಅಧ್ಯಕ್ಷರನ್ನಾಗಿ ಮಾಡಲಾಗಿದೆ. ಅಪಾರ್ಟ್ ಮೆಂಟ್ ಸಮಸ್ಯೆಗಳನ್ನು ಅರಿತಿರುವವರೇ ಈಗ ಘಟಕದಲ್ಲಿ ಅವಕಾಶ ನೀಡಲಾಗಿದೆ.
ಅಪಾರ್ಟ್ ಮೆಂಟ್ ಗಳ ಮಾಹಿತಿ, ಅವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಲೆಹಾಕುತ್ತೇವೆ. ನಂತರ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಅವುಗಳಿಗೆ ಪರಿಹಾರ ನೀಡುವ ಪ್ರಯತ್ನ ಮಾಡುತ್ತೇವೆ.
ಇನ್ನು ಬಿಜೆಪಿ ಸರ್ಕಾರ ಜನರ ರಕ್ಷಣೆಗೆ ಕೆಲಸ ಮಾಡುತ್ತಿಲ್ಲ. ಜನರ ರಕ್ತ ಹೀರುವ ಸರ್ಕಾರ ಇದು. ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲ ಒಂದು ರೀತಿ ಜನರ ಜೀವನ ಹಾಗೂ ಪ್ರಾಣವನ್ನು ಬಲಿ ಪಡೆಯುತ್ತಿದೆ.
ಬೆಲೆ ಏರಿಕೆ, ನಿರುದ್ಯೋಗ, ನೋಟ್ ಬ್ಯಾನ್, ಅಗತ್ಯ ವಸ್ತುಗಳ ಮೇಲೆ ಜಿಎಸ್ ಟಿ ಏರಿಕೆ, ಆರ್ಥಿಕ ಸಮಸ್ಯೆ ಮೂಲಕ ಜೀವನವನ್ನು ನರಕ ಮಾಡಿದರೆ. ಕೋವಿಡ್ ನಿರ್ವಹಣೆ ವೈಫಲ್ಯ, ಆಕ್ಸಿಜನ್ ಕೊರತೆ, ರಸ್ತೆ ಗುಂಡಿಗಳು, ಸರ್ಕಾರದ ಕಳಪೆ ಕಾಮಗಾರಿ ಮೂಲಕ ಜನರ ಪ್ರಾಣ ತೆಗೆದುಕೊಳ್ಳುತ್ತಿದೆ.
ಬಿಜೆಪಿ ರಾಜ್ಯಾಧ್ಯಕ್ಷ ಕಟೀಲ್ ಅವರು ರಸ್ತೆ ಗುಂಡಿ, ಚರಂಡಿ ವಿಚಾರ ಬಿಟ್ಟು ಲವ್ ಜಿಹಾದ್ ಬಗ್ಗೆ ಮಾತಾಡಿ ಎಂಬ ಹೇಳಿಕೆಯಲ್ಲಿ ಅವರ ಮನಸ್ಥಿತಿ ಹೇಗಿದೆ ಎಂಬುದು ತಿಳಿಯುತ್ತದೆ.
ನಿನ್ನೆ ಮೆಟ್ರೋ ಕಾಮಗಾರಿಯ ಪಿಲ್ಲರ್ ಬಿದ್ದು ಎರಡು ಅಮಾಯಕ ಜೀವ ಬಲಿಯಾಗಿವೆ. ಮಗು ಹಾಗೂ ತಾಯಿಯ ಬಲಿ ಆಗಿದೆ. ಇದೇ ರೀತಿ ರಸ್ತೆ ಗುಂಡಿಗಳಿಂದ ಇದು ವರಗೆ ಸುಮಾರು 17 ಜನ ಪ್ರಾಣ ಕಳೆದು ಕೊಂಡಿದ್ದಾರೆ. ಮೇಟ್ರೋ ಕಾಮಗಾರಿ ಪ್ರಾರಂಭದಿಂದ ಇಲ್ಲಿಯವರೆಗೆ ಸುಮಾರು 16 ಜನ ಪ್ರಾಣ ಕಳೆದು ಕೊಂಡಿದ್ದಾರೆ. ಕಳೆದ ಎರಡು ದಿನಗಳಿಂದ ಈ ಪಿಲ್ಲರ್ ವಾಲಿದ್ದರೂ ಅಧಿಕಾರಿಗಳು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಪತ್ರಿಕೆಯಲ್ಲಿ ವರದಿಯಾಗಿದೆ. ಅಂದರೆ ರಾಜ್ಯದಲ್ಲಿ ಸರ್ಕಾರ ಹಾಗೂ ಅಧಿಕಾರಿಗಳ ಬೇಜವಾಬ್ದಾರಿ ಪರಮಾವಧಿ ತಲುಪಿದೆ. ಮೆಟ್ರೋ ಮುಖ್ಯಮಂತ್ರಿಗಳ ವ್ಯಾಪ್ತಿಗೆ ಬರುತ್ತದೆ? ಅಲ್ಲದೆ ಬೆಂಗಳೂರಿನ 8 ಶಾಸಕರು ಅಷ್ಟದಿಗ್ಪಾಲಕರಂತೆ ಮಂತ್ರಿಗಳಾಗಿದ್ದಾರೆ.
ಮೃತರಿಗೆ ಸರ್ಕಾರ ಪರಿಹಾರ ನೀಡುತ್ತದೆ ಎಂದು ತಿಳಿಸಿದ್ದಾರೆ. ಆದರೆ ಮೃತರ ತಂದೆ ನಾವೇ ನಿಮಗೆ ಕೋಟಿ ಹಣ ನೀಡುತ್ತೇವೆ ನಮ್ಮ ಮಗಳನ್ನು ವಾಪಸ್ ಕರೆ ತನ್ನಿ ಎಂದು ಕೇಳಿದ್ದಾರೆ. ಇಂತಹ ಘಟನೆ ಪದೇ ಪದೆ ಆಗುತ್ತಿದ್ದರೂ ಸರ್ಕಾರ ಎಚ್ಛೆತ್ತುಕೊಳ್ಳುತ್ತಿಲ್ಲ. ಎಲ್ಲವನ್ನು ವ್ಯವಸ್ಥಾಪಕ ನಿರ್ದೇಶಕರೇ ನೋಡಲು ಸಾಧ್ಯವಿಲ್ಲ. ಸಾವಿರಾರು ಕೆಲಸಗಾರರು, ನೂರಾರು ಇಂಜಿನಿಯರ್ ಗಳು ಇರುತ್ತಾರೆ. ಇಲ್ಲಿನ ಕೆಲವು ಇಂಜಿನಿಯರ್ ಗಳ ನಿರ್ಲಕ್ಷ್ಯದಿಂದ ಈ ಅನಾವುತ ಸಂಭವಿಸಿದೆ.
ಈ ಸರ್ಕಾರದ ದುರಾಡಳಿತಕ್ಕೆ ಇನ್ನು ಎಷ್ಟು ಬಲಿ ಬೇಕು? ಈ ಭ್ರಷ್ಟ ಸರ್ಕಾರಕ್ಕೆ ಹಣ ಬಿಟ್ಟು ಬೇರೇನೂ ಕಾಣುವುದಿಲ್ಲ. ಮೆಟ್ರೋ ಅಧಿಕಾರಿಗಳು ಈಗಲಾದರೂ ಸುರಕ್ಷತೆ ಬಗ್ಗೆ ಗಮನ ಹರಿಸಬೇಕು. ಮುಖ್ಯಮಂತ್ರಿಗಳು ಮೆಟ್ರೋ ಅಧಿಕಾರಿಗಳ ಜತೆ ಸಭೆ ಮಾಡುತ್ತಿರಬೇಕು. ಮುಖ್ಯಮಂತ್ರಿಗಳಿಗೆ ಸಮಯ ಇಲ್ಲದಿದ್ದರೆ, ಮಂತ್ರಿಗಳಿಗಾದರೂ ಜವಾಬ್ದಾರಿ ನೀಡಬೇಕು.
ಮೆಟ್ರೋ ಪಿಲ್ಲರ್ ಕುಸಿತದ ಅವಾಂತರವಾಗಲಿ, ರಸ್ತೆ ಗುಂಡಿ ಅನಾಹುತಗಳಾಗಲಿ, ಇಂತಹ ದುರಂತ ತಪ್ಪಿಸಬೇಕು ಎಂದರೆ ಗುಣಮಟ್ಟದ ಕಾಮಗಾರಿ ಆಗಬೇಕು.
ಗುಣಮಟ್ಟದ ಕಾಮಗಾರಿ ಆಗಬೇಕು ಎಂದರೆ ಸರ್ಕಾರ ತನ್ನ ಭ್ರಷ್ಟಾಚಾರಕ್ಕೆ ಅಂಕುಶ ಹಾಕಬೇಕು. ಗುತ್ತಿಗೆದಾರರು ಈ ಸರ್ಕಾರ 40% ಕಮಿಷನ್ ಪಡೆಯುತ್ತಿದ್ದು, ಉಳಿದ 60% ನಲ್ಲಿ ಗುಣಮಟ್ಟದ ಕಾಮಗಾರಿ ಸಾಧ್ಯವಿಲ್ಲ ಎಂದು ಹೇಳಿದ್ದರು. ಭ್ರಷ್ಟಾಚಾರ ಹೆಚ್ಚಾದಷ್ಟು ಕಳಪೆ ಕಾಮಗಾರಿಗಳು ಹೆಚ್ಚಾಗುತ್ತವೆ.
ಮುಖ್ಯಮಂತ್ರಿಗಳು ಮಾತೆತ್ತಿದರೆ ಧಮ್ಮು ತಾಕತ್ತಿನ ಬಗ್ಗೆ ಮಾತನಾಡುತ್ತಾರೆ. ಅವರಿಗೆ ಧಮ್ಮು ತಾಕತ್ತು ಇದ್ದರೆ ಗುಣಮಟ್ಟದ ಕಾಮಗಾರಿ ಮಾಡಲಿ. ಆಗ ಅಣಾಯಕ ಜೀವಗಳು ಉಳಿಯುತ್ತವೆ.
ಇನ್ನು ಕಳೆದ 25 ತಿಂಗಳ ಬಾಕಿ ಬಿಲ್ ಪಾವತಿ ಆಗದೆ ಕಾಮಗಾರಿ ಸ್ಥಗಿತ ಮಾಡಿ ಪ್ರತಿಭಟನೆ ಮಾಡುತ್ತಿದ್ದಾರೆ. ಕಳೆದ ಎರಡು ವರ್ಷಗಳ ಬಿಲ್ ಪಾವತಿ ಮಾಡದಿದ್ದರೆ ಅವರು ಕೆಲಸ ಮಾಡುವುದಾದರು ಹೇಗೆ? ಸರ್ಕಾರ ಹಣ ಮಾಡುವ ಕೆಲಸಕ್ಕೆ ವಿರಾಮ ಕೊಟ್ಟು, ಮತ ಹಾಕಿದ ಜನರ ಹಿತ ಕಾಯುವ ಬಗ್ಗೆ ಗಮನಹರಿಸಬೇಕು. ಇಲ್ಲದಿದ್ದರೆ ಇದೇ ರೀತಿ ಅಮಾಯಕರ ಬಲಿ ಮುಂದುವರಿಯಲಿದೆ.
ಇಷ್ಟೆಲ್ಲಾ ಸಮಸ್ಯೆ ಅನಾಹುತಗಳಿಗೆ, ಬಿಜೆಪಿಯ ಹಣದಾಹ ಹಾಗೂ ದುರಾಡಳಿತವೇ ಕಾರಣ. ಈ ದುರಾಡಳಿತ ಕೊನೆಗಾಣಿಸುವ ಕಾಲ ಸನ್ನಿಹಿತವಾಗಿದೆ. ಡಬ್ಬಲ್ ಎಂಜಿನ್ ಸರ್ಕಾರ ಕೇವಲ ಜನರ ಜೀವ ತೆಗೆಯುತ್ತಿದೆ ಹೊರತು ಅಭಿವೃದ್ದಿ ಬಗ್ಗೆ ಯಾವುದೇ ವಿಷಯ ಪ್ರಸ್ತಾಪ ಮಾಡುತ್ತಿಲ್ಲ. ಜನ ಈ ಅನಿಷ್ಟ ಸರ್ಕಾರದಿಂದ ಬೇಸತ್ತಿದ್ದು, ಈ ಸರ್ಕಾರದಿಂದ ಮುಕ್ತಿ ಪಡೆಯುವ ಸಂಕಲ್ಪ ಮಾಡಿದ್ದಾರೆ.
*ಪ್ರಶ್ನೋತ್ತರ:*
ಬಹುತೇಕ ಅಪಾರ್ಟ್ ಮೆಂಟ್ ಕಟ್ಟಡ ನಿರ್ಮಾಣ ನ್ಯಾಯಾಲಯದಲ್ಲಿ ಇತ್ಯರ್ಥವಾಗಬೇಕಿದೆ ಎಂಬ ವಿಚಾರವಾಗಿ ಕೇಳಿದಾಗ, ‘ಕಟ್ಟಡ ನಿರ್ಮಾಣ ವಿಚಾರಕ್ಕೂ ನಮಗೂ ಸಂಬಂಧ ಇರುವುದಿಲ್ಲ. ಆದರೆ ಅಲ್ಲಿನ ನಿವಾಸಿ ಮೂಲಸೌಕರ್ಯಗಳ ಸಮಸ್ಯೆ ಬಗೆಹರಿಸಲು ಈ ಘಟಕ ಸ್ಥಾಪಿಸಲಾಗಿದೆ. ಕೋರ್ಟ್ ಪ್ರಕರಣಗಳಿಗೆ ನಮಗೆ ಸಂಬಂಧವಿಲ್ಲ. ಅದನ್ನು ಕಾನೂನು ನೋಡಿಕೊಳ್ಳಲಿದೆ. ಇದಕ್ಕಾಗಿಯೇ ಬೇರೆ ಸಂಸ್ಥೆಗಳು ನ್ಯಾಯಾಲಯಗಳು ಇವೆ. ಎಲ್ಲ ಅಪಾರ್ಟ್ ಮೆಂಟ್ ಗಳು ನಿಯಮ ಉಲ್ಲಂಘನೆ ಮಾಡಿ ಅಪಾರ್ಟ್ ಮೆಂಟ್ ಕಟ್ಟಿಲ್ಲ. ನೂರರಲ್ಲಿ ಶೇ.10ರಷ್ಟು ಮಂದಿ ಅಕ್ರಮವಾಗಿ ಕಟ್ಟಿರಬಹುದು. ಆದರೆ ಉಳಿದ 90ರಷ್ಟು ಜನರಿಗೆ ಮೂಲ ಸೌಕರ್ಯ ಕಲ್ಪಿಸಬೇಕಲ್ಲವೇ? ಒತ್ತುವರೆ ತೆರವಿಗೆ ನಮ್ಮ ಅಡ್ಡಿ ಇಲ್ಲ. ನಾವು ಅದಕ್ಕೆ ಬೆಂಬಲ ನೀಡುತ್ತೇವೆ. ಈ ವಿಚಾರವಾಗಿ ಬಿಡಿಎ ಬಿಬಿಎಂಪಿ ಹಾಗೂ ನ್ಯಾಯಾಲಯ ತೀರ್ಮಾನ ಕೈಗೊಳ್ಳುತ್ತವೆ. ಕಾನೂನು ಪ್ರಕಾರವಾಗಿ ಕಟ್ಟಿರುವ ಅಪಾರ್ಟ್ ಮೆಂಟ್ ಕಟ್ಟಿರುವವರ ಪರವಾಗಿ ಇರುತ್ತೇವೆ. ಅವರಿಗೆ ನೆರವಾಗಲು ಈ ಘಟಕ ಆರಂಭಿಸಿದ್ದೇವೆ’ ಎಂದು ತಿಳಿಸಿದರು.
[11/01, 9:15 PM] Kpcc official: ಬೆಳಗಾವಿಯಲ್ಲಿ ಬುಧವಾರ ಸಂಜೆ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಬಿ ಕೆ ಹರಿಪ್ರಸಾದ್, ಪ್ರಚಾರ ಸಮಿತಿ ಅಧ್ಯಕ್ಷ ಎಂ ಬಿ ಪಾಟೀಲ್, ಕಾರ್ಯಾಧ್ಯಕ್ಷ ಸಲೀಮ್ ಅಹ್ಮದ್, ಸತೀಶ್ ಜಾರಕಿಹೊಳಿ, ಮಾಜಿ ಸಚಿವರಾದ ಆರ್ ವಿ ದೇಶಪಾಂಡೆ, ಯು ಟಿ ಖಾದರ್, ಶಾಸಕಿಯರಾದ ಲಕ್ಷ್ಮೀ ಹೆಬ್ಬಾಳ್ಕರ್, ಅಂಜಲಿ ನಿಂಬಾಳ್ಕರ್, ಎಂಎಲ್ಸಿ ಗಳಾದ ಚನ್ನರಾಜ್ ಹಟ್ಟಿಹೊಳಿ, ನಾಗರಾಜ್ ಯಾದವ್, ಮುಖಂಡರಾದ ಫಿರೋಜ್ ಸೇಠ್, ರಾಜು ಸೇಠ್, ವಿನಯ್ ನವಲಗಟ್ಟಿ ಮತ್ತಿತರರು ಭಾಗವಹಿಸಿದ್ದರು.
[11/01, 10:05 PM] Kpcc official: ಕರ್ನಾಟಕ ಕಾಂಗ್ರೆಸ್ ಪಕ್ಷದಅಧ್ಯಕ್ಷ ರಾದ ಶ್ರೀ ಡಿಕೆ ಶಿವಕುಮಾರ್ ರವರು ಅಪಾರ್ಟ್ಮೆಂಟ್ ಸೆಲ್ ಎಂಬ ಹೊಸ ವಿಭಾಗವನ್ನು ಘೋಷಿಸಿದ್ದಾರೆ
ಈ ವಿಭಾಗದ ಮುಖ್ಯಸ್ಥ ರನ್ನಾಗಿ ಪ್ರೊ ಎಂವಿ ರಾಜೀವ್ ಗೌಡ, ಮಾಜಿ ಸಂಸದರು ನೇಮಿಸಿದ್ದು ಈ ಸೇಲ್ ನ ಸಂಚಾಲಕ ರನ್ನಾಗಿ ಮಾಜಿ ಮೇಯರ್ ಶ್ರೀಮತಿ ಗಂಗಾಂಬಿಕೆ ಮಲ್ಲಿಕಾರ್ಜುನ ಹಾಗೂ ಪ್ರವೀಣ್ ಪೀಟರ್ ರವರನ್ನು ನಿರ್ಮಿಸಿದ್ದಾರೆ. ಈ ಸಮಿತಿಗೆ ಸಮಾಜದ ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆಸಲ್ಲಿಸಿರುವವರನ್ನು ಸಲಹೆಗಾರರನ್ನಾಗಿ ನಿರ್ಮಿಸಿದ್ದಾರೆ
ಈ ಸಮಿತಿಯ ಅಪಾರ್ಟ್ಮೆಂಟ್ ಗಳಲ್ಲಿ ವಾಸಿಸುವ ಜನರ ಬಳಿ ತೆರಳಿ ಅವರ ಪ್ರಮುಖ ಸಮಸ್ಯೆಗಳಾದ ನೀರು ವಿದ್ಯುತ್ ಹಾಗೂ ಇನ್ನಿತರ ಸಮಸ್ಯೆಗಳಿಗೆ
ಮುಕ್ತಿ ನೀಡುವ ಕೆಲಸ ಮಾಡಲಿದ್ದಾರೆ
ಈ ಸಮಿತಿಯ ನೇಮಕಾತಿಯನ್ನು ತಮ್ಮ ಮಾಧ್ಯಮ ಗಳಲ್ಲಿ ಪ್ರಕಟಿಸಬೇಕಾಗಿ ವಿನಂತಿ
Post a Comment