KPCC ಕಿಡಿ....ಅಭಿವೃದ್ಧಿಯನ್ನು ಕೇಳಬೇಡಿ, ದ್ವೇಷ ಬಿತ್ತುವುದನ್ನು ಬಿಡಬೇಡಿ"ಇದು ಚುನಾವಣೆಗೆ ಬಿಜೆಪಿಯ ಘೋಷವಾಕ್ಯ ಹಾಗೂ ಕಾರ್ಯಕರ್ತರಿಗೆ ಕಾರ್ಯಸೂಚಿ.

[04/01, 11:26 AM] Kpcc official: "ಅಭಿವೃದ್ಧಿಯನ್ನು ಕೇಳಬೇಡಿ, ದ್ವೇಷ ಬಿತ್ತುವುದನ್ನು ಬಿಡಬೇಡಿ"
ಇದು ಚುನಾವಣೆಗೆ ಬಿಜೆಪಿಯ ಘೋಷವಾಕ್ಯ ಹಾಗೂ ಕಾರ್ಯಕರ್ತರಿಗೆ ಕಾರ್ಯಸೂಚಿ.

ಧರ್ಮ, ದ್ವೇಷಗಳ ಮೊರೆ ಹೋಗಲು ತೀರ್ಮಾನಿಸಿದ @BJP4Karnataka ತಮ್ಮ ಸರ್ಕಾರ ಅಭಿವೃದ್ಧಿಯಲ್ಲಿ ವಿಫಲವಾಗಿದೆ, ಹೇಳಿಕೊಳ್ಳಲು ಯಾವ ಸಾಧನೆಯನ್ನೂ ಮಾಡಿಲ್ಲ ಎಂಬುದನ್ನು ಘಂಟಾಘೋಷವಾಗಿ ಒಪ್ಪಿಕೊಂಡಿದೆ.
[04/01, 11:50 AM] Kpcc official: ಲವ್ ಜಿಹಾದ್ ಬಿಡಿ, ಮೊದಲು ಡಾಲರ್ ಬಗ್ಗೆ ಮಾತಾಡಿ ಮಾನ್ಯ @nalinkateel ಅವರೇ.

"ಡಾಲರ್ & ರೂಪಾಯಿ" ಬಗ್ಗೆ ಮಾತಾಡಲು ಏಕೆ ಹಿಂಜರಿಕೆ ತಮಗೆ? ವೈಫಲ್ಯಗಳ ಪ್ರಶ್ನೆಗಳನ್ನು ಎದುರಿಸಲಾಗದೆ ಲವ್ ಜಿಹಾದ್ ಮೊರೆ ಹೋಗ್ತಿದೀರಾ?
[04/01, 1:46 PM] Kpcc official: ಅಭಿವೃದ್ಧಿ,
ನಿರುದ್ಯೋಗ,
ಆರ್ಥಿಕ ಸಂಕಷ್ಟ,
ಬೆಲೆ ಏರಿಕೆ,
ರಸ್ತೆ ಗುಂಡಿಯ ಸಾವುಗಳು,
ರೈತರ ಆತ್ಮಹತ್ಯೆ,
ಭ್ರಷ್ಟಾಚಾರ,
ನೇಮಕಾತಿ ಹಗರಣಗಳು,
ಇವೆಲ್ಲಾ ಬಿಜೆಪಿಗೆ ಸಣ್ಣ ವಿಷಯಗಳು!

ನಿರುದ್ಯೋಗ ದಾಖಲೆ ಮಟ್ಟಕ್ಕೆ ಏರಿದರೂ ಉದ್ಯೋಗ ಕೇಳಬೇಡಿ 'ಲವ್ ಜಿಹಾದ್' ಎಂಬ ಇಲ್ಲದ ವಿಷಯವನ್ನು ದೊಡ್ಡದಾಗಿಸಿ!
ಇದು ಬಿಜೆಪಿಯ ಲಜ್ಜೆಗೇಡಿತನದ ಪರಮಾವಧಿ.
[04/01, 4:19 PM] Kpcc official: *ಡಿ.ಕೆ ಶಿವಕುಮಾರ್ ಅವರು ಬೆಂಗಳೂರಿನಲ್ಲಿ ಬುಧವಾರ ನೀಡಿದ ಮಾಧ್ಯಮ ಪ್ರತಿಕ್ರಿಯೆ:*

ಬಿಜೆಪಿಗೆ ಭಾವನಾತ್ಮಕ ಅಜೆಂಡಾಗಳು ಬೇಕೇ ಹೊರತು ಅಭಿವೃದ್ಧಿಯ ಅಜೆಂಡಾ ಬೇಕಾಗಿಲ್ಲ. ಆದರೆ ಕಾಂಗ್ರೆಸ್ ಜನಸಾಮಾನ್ಯರ ಬದುಕಿನ ವಿಚಾರಕ್ಕೆ ಆದ್ಯತೆ ನೀಡುತ್ತದೆ. ಉದ್ಯೋಗವಿಲ್ಲದೆ, ಹಸಿವಿನಿಂದ ಬಳಲುತ್ತಿರುವವರ ಬದುಕು ಕಟ್ಟಿಕೊಡಲು ಪ್ರಯತ್ನಿಸುತ್ತದೆ.

ನಳೀನ್ ಕುಮಾರ್ ಕಟೀಲ್ ಅವರು ತಮ್ಮ ಪಕ್ಷದ ಅಜೆಂಡಾ ಹೇಳಿದ್ದಾರೆ. ಬಿಜೆಪಿ ಅಜೆಂಡಾ ಜನರ ಮನಸ್ಸು ಕೆಡಿಸಿ ಸಮಾಜದ ಶಾಂತಿ ಕದಡಲು ಬಯಸುತ್ತದೆ. ಇದೇ ಕಾರಣಕ್ಕೆ ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಪಾದಯಾತ್ರೆ ಮಾಡಿ ದೇಶದ ಜನರ ಮನಸ್ಸು ಒಗ್ಗೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿ ನಾಯಕರು ಜನಸಾಮಾನ್ಯರಲ್ಲಿ ಪರಸ್ಪರ ದ್ವೇಷ ಹುಟ್ಟು ಹಾಕುತ್ತಿದ್ದಾರೆ. ನಳೀನ್ ಕುಮಾರ್ ಹಾಗೂ ಬಿಜೆಪಿ ನಾಯಕರ ಹೇಳಿಕೆಯನ್ನು ಇಡೀ ದೇಶ ಖಂಡಿಸುತ್ತದೆ. ಪಕ್ಷದ ಅಧ್ಯಕ್ಷನಾಗಿ ನಾನು ಕೂಡ ಖಂಡಿಸುತ್ತೇನೆ. 

ಕಾಂಗ್ರೆಸ್ ಪಕ್ಷ ಸದಾ ಅಭಿವೃದ್ಧಿಯ ಕಾರ್ಯಸೂಚಿ ಮೇಲೆ ಕೆಲಸ ಮಾಡುತ್ತಿದೆ. ಜನಸಾಮಾನ್ಯರ ಆರ್ಥಿಕ ಪರಿಸ್ಥಿತಿ ಸುಧಾರಿಸಿ ಅವರ ಬದುಕು ಕಟ್ಟಿಕೊಡುವತ್ತ ಗಮನಹರಿಸುತ್ತಿದೆ. ಬಿಜೆಪಿಗೆ ಬಡವರು ಆರ್ಥಿಕ ಸಬಲತೆ ಸಾಧಿಸುವುದು ಬೇಕಾಗಿಲ್ಲ.

ಪ್ರಿಯಾಂಕಾ ಗಾಂಧಿ ಅವರು ರಾಜ್ಯಕ್ಕೆ ಆಗಮಿಸುವ ವಿಚಾರವಾಗಿ ಕೇಳಿದ ಪ್ರಶ್ನೆಗೆ, ‘ಕೆಲವು ಮಾಧ್ಯಮಗಳಲ್ಲಿ ಪ್ರಿಯಾಂಕಾ ಗಾಂಧಿ ಅವರ ಆಗಮನದ ವಿಚಾರವಾಗಿ ವರದಿ ಬಂದಿದೆ. ಪ್ರಿಯಾಂಕಾ ಗಾಂಧಿ ಅವರು ಸದ್ಯ ಉತ್ತರ ಪ್ರದೇಶದಲ್ಲಿ ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸುತ್ತಿದ್ದಾರೆ. ಅವರು ಯಾವಾಗ ರಾಜ್ಯಕ್ಕೆ ಬರುತ್ತಾರೆ ಎಂದು ಅಧಿಕೃತವಾಗಿ ದಿನಾಂಕ ತಿಳಿಸುತ್ತೇನೆ. ನಾನು ರಾಜ್ಯದ ಮಹಿಳೆಯರಿಗೆ ಈ ಮೂಲಕ ಒಂದು ಮನವಿ ಮಾಡುತ್ತೇನೆ. ಸಾಮಾಜಿಕ ಜಾಲತಾಣಗಳಲ್ಲಿ ದೂರವಾಣಿ ಸಂಖ್ಯೆ ಹಾಗೂ ಇ ಮೇಲ್ ಅನ್ನು ಪ್ರಕಟಿಸುತ್ತೇನೆ. ರಾಜ್ಯದ ಮಹಿಳೆಯರು ತಮ್ಮ ಬದುಕು, ದೇಶ ಹಾಗೂ ರಾಜ್ಯದಲ್ಲಿ ಯಾವ ರೀತಿ ಬದಲಾವಣೆ ತರಬೇಕು ಎಂಬುದರ ಬಗ್ಗೆ ಅಭಿಪ್ರಾಯ ಹಂಚಿಕೊಳ್ಳಲಿ. ಕಾಂಗ್ರೆಸ್ ಪಕ್ಷದಿಂದ ಮಹಿಳೆಯರು ಏನನ್ನು ನಿರೀಕ್ಷಿಸುತ್ತಿದ್ದಾರೆ ಎಂಬುದನ್ನು ತಿಳಿಯ ಬಯಸುತ್ತೇವೆ. ಯಾವುದೇ ಹೆಣ್ಣುಮಗಳು ಅವರ ಸಲಹೆ, ಅಭಿಪ್ರಾಯ ಹಾಗೂ ನೋವನ್ನು ಹೇಳಿಕೊಳ್ಳಬಹುದು. ನನ್ನ ಅಥವಾ ಪರಮೇಶ್ವರ್ ಅವರ ಹೆಸರಿಗೆ, ಕಾಂಗ್ರೆಸ್ ಕಚೇರಿ ವಿಳಾಸಕ್ಕೆ ಪತ್ರ ಬರೆಯಬಹುದು. ಅವರ ಸಲಹೆಗಳನ್ನು ಪರಿಶೀಲಿಸಿ ಪ್ರಣಾಳಿಕೆಯಲ್ಲಿ ಸೇರಿಸುತ್ತೇವೆ’ ಎಂದು ತಿಳಿಸಿದರು.

ಬಿಜೆಪಿ ನಾಯಕರ ದ್ವೇಷದ ಹೇಳಿಕೆಗಳು ಸಮಾಜದ ಸ್ವಾಸ್ಥ್ಯ ಹಾಳು ಮಾಡುವುದಿಲ್ಲವೇ ಎಂದು ಕೇಳಿದಾಗ, ‘ಇದೇ ಕಾರಣಕ್ಕೆ ರಾಜ್ಯದಲ್ಲಿ ಯಾವುದೇ ಉದ್ಯಮಿಗಳು ಬಂಡವಾಳ ಹೂಡಿಕೆ ಮಾಡಿ ಉದ್ಯೋಗ ಸೃಷ್ಟಿಸಲು ಮುಂದೆ ಬರುತ್ತಿಲ್ಲ. ಇದೊಂದು ನಾಚಿಕೆಗೇಡಿನ ವಿಚಾರ. ಇದೇ ಬಿಜೆಪಿಯ ನಿಜವಾದ ಮುಖ’ ಎಂದು ಹೇಳಿದರು.

ಬಿಜೆಪಿಯಲ್ಲಿ ನಾಯಕರಿಲ್ಲ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, ‘ನಾನು ಅಮಿತ್ ಶಾ ಅವರ ಹೇಳಿಕೆಯನ್ನು ಉಲ್ಲೇಖಿಸಿದ್ದೇನೆ. ಅಮಿತ್ ಶಾ ಅವರು ಮುಂಬರುವ ಚುನಾವಣೆಯನ್ನು ಮೋದಿ ಅವರ ನಾಯಕತ್ವದಲ್ಲಿ ಎದುರಿಸಲಾಗುವುದು ಎಂದು ಹೇಳಿದ್ದಾರೆ. ಅಂದರೆ ರಾಜ್ಯದಲ್ಲಿ ಯಾವುದೇ ನಾಯಕತ್ವ ಇಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ. ಕೆಲ ತಿಂಗಳ ಹಿಂದೆ ಇದೇ ಅಮಿತ್ ಶಾ ಅವರು ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಚುನಾವಣೆ ಮಾಡಲಾಗುವುದು ಎಂದು ಹೇಳಿದ್ದರು. ಈಗ ಅವರು ಮೋದಿ ಅವರು ಚುನಾವಣಾ ನೇತೃತ್ವ ವಹಿಸುತ್ತಾರೆ ಎಂದಿದ್ದಾರೆ. ಅಂದರೆ ಮೋದಿ ಅವರು ಬಂದು ಇಲ್ಲಿ ಬಿಜೆಪಿ ಪರವಾಗಿ ಚುನಾವಣೆ ಮಾಡುತ್ತಾರೆ. ರಾಜ್ಯದಲ್ಲಿ ನಮಗೆ ನಾಯಕರು ಬೇಕಾಗಿದ್ದಾರೆ. ಕಾಂಗ್ರೆಸ್ ಪಕ್ಷ ರಾಜ್ಯ ನಾಯಕರ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುತ್ತೇವೆ ಎಂದು ಹೇಳಿದೆ. ಅದಕ್ಕೆ ಈಗಲೂ ಬದ್ಧ’ ಎಂದು ತಿಳಿಸಿದರು.

ಬಸ್ ಯಾತ್ರೆಗೂ ಮುನ್ನ ಮೊದಲ ಪಟ್ಟಿ ಬಿಡುಗಡೆ ಆಗುವುದೇ ಎಂದು ಕೇಳಿದಾಗ, ‘ಪಕ್ಷದ ಅಭ್ಯರ್ಥಿ ಪಟ್ಟಿ ಪ್ರಕಟಿಸಲು ಒಳ್ಳೆಯ ಮುಹೂರ್ತ ಬೇಕು. ಎಲ್ಲರೂ ಪ್ರತಿ ಜಿಲ್ಲೆಗೆ ಹೋಗಿ ಚರ್ಚೆ ನಡೆಸಿದ್ದಾರೆ. ಒಂದೆರಡು ಜಿಲ್ಲೆಗಳು ಬಾಕಿ ಇವೆ. ನಾನು ಅವರ ಸಲಹೆಗೆ ಕಾಯುತ್ತಿದ್ದೇನೆ. ಅವರು ಸಲಹೆ ಸಲ್ಲಿಸಿದ ತಕ್ಷಣ ಸಭೆ ಮಾಡಿ, ಚರ್ಚಿಸಿ ಪ್ರಕಟಿಸಲಾಗುವುದು. ಕೇಂದ್ರ ಪರಿಶೀಲನಾ ಸಮಿತಿ ಸದ್ಯದಲ್ಲೇ ಪ್ರಕಟಿಸಲಿದೆ. ಅಭ್ಯರ್ಥಿ ಆಯ್ಕೆ ವಿಚಾರವಾಗಿ ಎಲ್ಲ ಪ್ರಕ್ರಿಯೆ ನಡೆಯುತ್ತಿದೆ. ಕಾರ್ಯಕರ್ತರು, ಬ್ಲಾಕ್ ಹಾಗೂ ಜಿಲ್ಲಾ ಕಾಂಗ್ರೆಸ್ ಅಭಿಪ್ರಾಯ ಪಡೆಯಲಾಗುತ್ತಿದೆ. ಅವರು ಎರಡು ಮೂರು ಹೆಸರು ನೀಡುತ್ತಿದ್ದಾರೆ. ಇದರ ಜತೆಗೆ ಪಕ್ಷದ ವತಿಯಿಂದ ಸಮೀಕ್ಷೆ ನಡೆಸಲಾಗುತ್ತಿದೆ. ಅದರಲ್ಲಿ ಜನರ ಅಭಿಪ್ರಾಯ ಪಡೆಯಲಾಗುವುದು. ಪಕ್ಷದಲ್ಲಿ 78 ಲಕ್ಷ ಸದಸ್ಯರಿದ್ದು ಅವರ ಅಭಿಪ್ರಾಯಗಳನ್ನು ಸಂಗ್ರಹಿಸಲಾಗುವುದು. ಆದಷ್ಟು ಬೇಗ ಈ ಎಲ್ಲ ಪ್ರಕ್ರಿಯೆ ಮುಗಿಸುತ್ತೇವೆ’ ಎಂದು ತಿಳಿಸಿದರು.

ದೆಹಲಿ ಪ್ರಯಾಣದ ಬಗ್ಗೆ ಕೇಳಿದಾಗ, ‘ನಾನು ಭಾರತ ಜೋಡೋ ಯಾತ್ರೆಯಲ್ಲಿ ಭಾಗವಹಿಸಲು ಅಲ್ಲಿಗೆ ಹೋಗಿ ಹೆಜ್ಜೆ ಹಾಕಬೇಕು ಎಂಬ ಆಸೆ ಇದೆ. ಕರ್ನಾಟಕದಲ್ಲಿ ಯಾತ್ರೆ ಮುಗಿದ ಬಳಿಕ ನಾವು ಎಲ್ಲಿಯೂ ಹೋಗಿ ಭಾಗವಹಿಸಿಲ್ಲ. ಹೀಗಾಗಿ ಅಲ್ಲಿ ಹೋಗಿ ಭಾಗವಹಿಸಬೇಕಿದೆ’ ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳನ್ನು ನಾಯಿ ಮರಿಗೆ ಹೋಲಿಕೆ ಮಾಡಿದ್ದಾರೆ ಎಂಬ ವಿಚಾರವಾಗಿ ಕೇಳಿದಾಗ, ‘ಸಿದ್ದರಾಮಯ್ಯ ಸಿಎಂರನ್ನ ನಾಯಿ ಮರಿಗೆ ಹೋಲಿಸಿ ಮಾತನಾಡಿದ್ದು ನನಗೆ ಗೊತ್ತಿಲ್ಲ. ನಮ್ಮ‌ ಮನೆಯಲ್ಲೂ ನಾಯಿ ಇದೆ. ನಾಯಿ ಬಗ್ಗೆ ನನಗೆ  ಗೌರವ ಇದೆ. ಕಳ್ಳರನ್ನ ಹಿಡಿಯೋಕೆ ರಕ್ಷಣೆಗೆ ನಾಯಿ‌ಬೇಕು. ಕಷ್ಟಕ್ಕೆ ಸುಖಕ್ಕೆ‌ ನಾಯಿ ಬೇಕು.
ನಾಯಿ ನಾರಾಯಣ ಅಂತಾರೆ. ನಾಯಿ ನನಗೆ ಬಹಳ ಪ್ರಿಯವಾದ ಪ್ರಾಣಿ. ಸಿದ್ದರಾಮಯ್ಯ ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ’ ಎಂದು ತಿಳಿಸಿದರು.
[04/01, 4:21 PM] Kpcc official: ತುರುವೇಕೆರೆಯಲ್ಲಿ ಬುಧವಾರ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರು ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ, ಕೆಪಿಸಿಸಿ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಮಧು ಬಂಗಾರಪ್ಪ, ಮಾಜಿ ಸಚಿವ ಟಿ ಬಿ ಜಯಚಂದ್ರ, ಮಾಜಿ ಶಾಸಕ ಕೆ ಎನ್ ರಾಜಣ್ಣ, ಶಾಸಕರಾದ ಭೈರತಿ ಸುರೇಶ್,  ಮಾಜಿ ಶಾಸಕ ಷಡಕ್ಷರಿ, ಎಂಎಲ್ಸಿ ನಾಗರಾಜ್ ಯಾದವ್, ಚಂದ್ರಶೇಖರ್ ಗೌಡ, ಮುಖಂಡ ಬೆಮೆಲ್ ಕಾಂತರಾಜು ಮತ್ತಿತರು ಭಾಗವಹಿಸಿದ್ದರು.
[04/01, 4:22 PM] Kpcc official: "ಬಿಜೆಪಿಯಲ್ಲಿ ಮಹಿಳೆಯರಿಗೆ ಸುರಕ್ಷತೆ ಇಲ್ಲ"
ತಮಿಳುನಾಡಿನ ಬಿಜೆಪಿ ತೊರೆದ ಮಹಿಳಾ ಕಾರ್ಯಕರ್ತೆ ಹೇಳಿದ ಮಾತಿದು.

ದೇಶದಲ್ಲಿ ಮಹಿಳೆಯರ ಮೇಲೆ ಅತಿ ಹೆಚ್ಚು ಅತ್ಯಾಚಾರ, ದೌರ್ಜನ್ಯ ಎಸಗಿದ ರಾಜಕಾರಿಣಿಗಳಲ್ಲಿ ಬಿಜೆಪಿಗರೇ ಹೆಚ್ಚು,

ಮಹಿಳೆಯರನ್ನು ಶೋಷಿಸುವ ಸಿದ್ದಾಂತದವರು ರಕ್ಷಿಸಲು ಸಾಧ್ಯವಿಲ್ಲ, ಅಲ್ಲವೇ @BJP4Karnataka?
[04/01, 4:22 PM] Kpcc official: ರಾಯಚೂರಿನ ಅಭಿವೃದ್ಧಿಯನ್ನು ಕಡೆಗಣಿಸಲಾಗಿದೆ, ತೆಲಂಗಾಣಕ್ಕೆ ಸೇರಿಸಿ ಎಂದು ಸ್ವತಃ ಬಿಜೆಪಿ ಶಾಸಕರೇ ಹೇಳಿದ್ದಾರೆ.

ಬೆಳಗಾವಿ ಅಭಿವೃದ್ಧಿ ಕಡೆಗಣಿಸಲಾಗಿದೆ ಎಂದು ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ.

ಆದರೆ @nalinkateel ಅವರ ಪ್ರಕಾರ ಅಭಿವೃದ್ಧಿ ಅಂದ್ರೆ 'ಸಣ್ಣ ವಿಷಯ'
ಲವ್ ಜಿಹಾದ್ ದೊಡ್ಡ ವಿಷಯವನ್ನಾಗಿಸಬೇಕು!
[04/01, 5:30 PM] Kpcc official: *ತುರುವೆಕೆರೆಯಲ್ಲಿ ನಡೆದ ಸಮಾವೇಶದಲ್ಲಿ ಡಿ.ಕೆ. ಶಿವಕುಮಾರ್ ಅವರ ಮಾತುಗಳು:*

ತುಮಕೂರಿನ ಈ ಕಾಂಗ್ರೆಸ್ ಸಮಾವೇಶದಲ್ಲಿ ಬಹಳ ದೊಡ್ಡ ಸಂಖ್ಯೆಯಲ್ಲಿ ಜನ ಸೇರುವ ಮೂಲಕ ಇಡೀ ರಾಜ್ಯ ಹಾಗೂ ದೇಶಕ್ಕೆ ಒಂದು ಸಂದೇಶ ರವಾನಿಸಲಾಗುತ್ತಿದೆ. 

ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ. ಹೊಸ ಆಶಾಕಿರಣ ಮೂಡುತ್ತಿದ್ದು, ಕಾಂಗ್ರೆಸ್ ಬೆಳಕು ಹರಿಯುತ್ತಿದ್ದು, ಬಿಜೆಪಿ ಸರ್ಕಾರ ಮುಳುಗುತ್ತಿದೆ.

ಕಾಂತರಾಜ್ ಅವರು ಜೆಡಿಎಸ್ ನಿಂದ ಹಾಲಿ ವಿಧಾನಪರಿಷತ್ ಸದಸ್ಯರಾಗಿದ್ದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಯಾವುದೇ ಷರತ್ತು ಇಲ್ಲದೇ ಕಾಂಗ್ರೆಸ್ ಸೇರಿದ್ದಾರೆ. ಇಲ್ಲಿ ಸಾಕಷ್ಟು ಮಂದಿ ಕಾಂಗ್ರೆಸ್ ನಾಯಕರು ಕಷ್ಟದ ಸಮಯದಲ್ಲಿ ಪಕ್ಷದ ಪರ ನಿಂತಿದ್ದಾರೆ. ಇಲ್ಲಿ ಬೇರೆಯವರಿಗೆ ಶಕ್ತಿ ಇಲ್ಲ ಎಂದು ಹೇಳುವುದಿಲ್ಲ. ಎಲ್ಲರೂ ಶಕ್ತಿವಂತರು. ಆದರೆ ರಾಜಕಾರಣದಲ್ಲಿ 49 ಶೂನ್ಯವಾದರೆ, 51 ನೂರಕ್ಕೆ ಸಮನಾಗುತ್ತದೆ. ಹಿಂದೆ ರುದ್ರಪ್ಪನವರನ್ನು ಕಾಂಗ್ರೆಸ್ ಪಕ್ಷದಿಂದ ಗೆಲ್ಲಿಸಿದ್ದಿರಿ. ನಂತರ ಜಗ್ಗೇಶ್ ಅವರನ್ನು ಗೆಲ್ಲಿಸಿದ್ದಿರಿ. ಆಪರೇಷನ್ ಕಮಲದಿಂದ ಜಗ್ಗೇಶ್ ಹೋಗಿದ್ದಾರೆ. ನಂತರ ಇಲ್ಲಿ ಕಾಂಗ್ರೆಸ್ ಗೆದ್ದಿಲ್ಲ. ಬಿಜೆಪಿ ಹಾಗೂ ದಳದವರು ಗೆದ್ದಿದ್ದಾರೆ. 

ಇಂದು ಇಲ್ಲಿ ಮಧು ಬಂಗಾರಪ್ಪನವರು ಇದ್ದಾರೆ. ಕಳೆದ ಚುನಾವಣೆಯಲ್ಲಿ ಮಧು ಬಂಗಾರಪ್ಪ ಅವರು ಜೆಡಿಎಸ್ ನಿಂದ ನಿಂತಿದ್ದರು. ಎಂಎಲ್ಸಿಯಾಗಿ ಕಾಂತರಾಜ್ ಅವರು ಇದ್ದರು. ನಾನು ಇಂದು ತುಮಕೂರಿನ ಮಹಾಜನತೆಗೆ ಒಂದು ವಿಚಾರ ಕೇಳಲು ಬಯಸುತ್ತೇನೆ. ಕಾಂತರಾಜ್ ಅವರು ರಾಜಕೀಯವಾಗಿ ದಡ್ಡರೇ? ಕಾಂತರಾಜ್ ಅವರಿಗೆ ರಾಜಕೀಯ ಪ್ರಜ್ಞೆ ಇದೆ ಅಲ್ಲವೇ? ವಾಸು, ಮಧು ಬಂಗಾರಪ್ಪನವರಿಗೂ ರಾಜಕೀಯ ಪ್ರಜ್ಞೆ ಇದೆ ಅಲ್ಲವೇ? ಕೋಲಾರದ ಮನೋಹರ್, ಕೋನರೆಡ್ಡಿ, ತೀರ್ಥಹಳ್ಳಿ ಮಂಜುನಾಥ್ ಗೌಡರು, ರಮೇಶ್, ಜೀವಿಜಯ ಸೇರಿದಂತೆ ಅನೇಕರು ಕಾಂಗ್ರೆಸ್ ಪಕ್ಷ ಸೇರಿದ್ದಾರೆ. ಇತ್ತೀಚೆಗೆ ದತ್ತಾ ಅವರು ಕಾಂಗ್ರೆಸ್ ಸೇರಲು ಬಯಸಿದ್ದಾರೆ. ಇವರೆಲ್ಲರೂ ರಾಜಕೀಯ ಅನುಭವ ಇರುವವರು. 

ಭವಿಷ್ಯದಲ್ಲಿ ರಾಜಕೀಯ ಬೆಳಕು ಎಲ್ಲಿದೆ ಎಂದು ಅರ್ಥ ಮಾಡಿಕೊಳ್ಳುವ ನಾಯಕರು ಇವರಾಗಿದ್ದು, ಇವರು ಕಾಂಗ್ರೆಸ್ ಪಕ್ಷಕ್ಕೆ ಸೇರಿ ನಮ್ಮ ಕೈ ಬಲಪಡಿಸುತ್ತಿದ್ದಾರೆ. ನೀವು ಬಿಜೆಪಿ ಶಾಸಕರನ್ನು ಗೆಲ್ಲಿಸಿದ್ದೀರಿ. ಕಳೆದ ಮೂರುವರೆ ವರ್ಷಗಳಿಂದ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಈ ಅವಧಿಯಲ್ಲಿ ಸರ್ಕಾರ ಬಡವರಿಗಾಗಿ ಯಾವುದಾದರೂ ಒಂದು ಯೋಜನೆ ನೀಡಿದೆಯೇ? ತಿಪಟೂರಿನ ಯೋಗೇಶ್ ಅವರು ಕೂಡ ಕಾಂಗ್ರೆಸ್ ಸೇರಿದ್ದಾರೆ. ಬಿಜೆಪಿ ಸಾಧನೆ ಎಂದರೆ ಯಡಿಯೂರಪ್ಪನವರ ಕಣ್ಣಲ್ಲಿ ನೀರು ಹಾಕಿಸಿ ರಾಜ್ಯಪಾಲರ ಬಳಿ ಕಳಿಸಿ ರಾಜೀನಾಮೆ ಕೊಡಿಸಿದ್ದು. ಬಿಜೆಪಿ ರಾಜ್ಯದಲ್ಲಿ ಉತ್ತಮ ಆಡಳಿತ ಕೊಟ್ಟಿದ್ದರೆ ಯಡಿಯೂರಪ್ಪನವರಿಂದ ರಾಜೀನಾಮೆ ಯಾಕೆ ಕೊಡಿಸುತ್ತಿದ್ದರು. 

ನಮ್ಮ ಪಕ್ಷದ ವತಿಯಿಂದ ನಾವು ಸಮೀಕ್ಷೆ ಮಾಡಿಸಿದ್ದೇವೆ. ಕಾಂಗ್ರೆಸ್ ಪಕ್ಷಕ್ಕೆ 136, ಬಿಜೆಪಿಗೆ 60 ಕ್ಷೇತ್ರಗಳು ಬರುತ್ತದೆ ಎಂದು ಸಮೀಕ್ಷೆ ವರದಿ ಬಂದಿದೆ. ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರಿಗೆ ನಾನು ಮನವಿ ಮಾಡಿಕೊಳ್ಳುವುದು, ಸುಮ್ಮನೆ ಸಮಯ ವ್ಯರ್ಥ ಮಾಡಿಕೊಳ್ಳಬೇಡಿ. ಇಲ್ಲಿ ಹೊಸಬರು, ಹಳಬರು ಎಂಬ ಪ್ರಶ್ನೆ ಇಲ್ಲ. ಎಲ್ಲರನ್ನು ಗೌರವದಿಂದ ಕಾಣುತ್ತೇವೆ. ಬಿಜೆಪಿ ಅಧಿಕಾರವನ್ನು ನೀವು ನೋಡಿದ್ದೀರಿ. ಜನತ ಸರ್ಕಾರ ಹಾಗೂ ಕಾಂಗ್ರೆಸ್ ಸರ್ಕಾರವನ್ನು ನೋಡಿದ್ದೀರಿ.

ಬಿಜೆಪಿಯವರು ಕೇವಲ ಭಾವನೆ ವಿಚಾರವಾಗಿ ಚರ್ಚೆ ಮಾಡುತ್ತಿದ್ದಾರೆ. ಮೊನ್ನೆ ನಳೀನ್ ಕುಮಾರ್ ಕಟೀಲ್ ಅವರು ಅಭಿವೃದ್ಧಿ ಬಗ್ಗೆ ಚರ್ಚೆ ಮಾಡಬೇಡಿ, ಲವ್ ಜಿಹಾದ್, ಧರ್ಮದ ಬಗ್ಗೆ ಚರ್ಚೆ ಮಾಡಿ ಎಂದಿದ್ದಾರೆ. ನಿಮ್ಮ ಭೂಮಿಯಲ್ಲಿ ಕೆರೆಗಳು ತುಂಬಬೇಕು, ಪಕ್ಕದ ಹೋಬಳಿ ಗಳಲ್ಲಿ ಅಂತರ್ಜಲ ಹೆಚ್ಚಬೇಕು. ಹೇಮಾವತಿ ನೀರು ಬರಬೇಕು. ಇದು ಕಾಂಗ್ರೆಸ್ ಸರ್ಕಾರದಿಂದ ಮಾತ್ರ ಸಾಧ್ಯ. ಇದು ನಮ್ಮ ಸಂಕಲ್ಪ.

ಸಿದ್ದರಾಮಯ್ಯ ಅವರ ಕಾಲದಲ್ಲಿ ಲಕ್ಷಾಂತರ ಎಕರೆ ನೀರಾವರಿ ಮಾಡಿದ್ದೇವೆ. ಎಲ್ಲೂ ವಿದ್ಯುತ್ ಶಕ್ತಿ ಕಟ್ ಮಾಡಿಲ್ಲ. ನಿಮ್ಮ ಜಿಲ್ಲೆಯಲ್ಲಿ 2400 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಮಾಡುವ ವಿಶ್ವದ ಅತಿದೊಡ್ಡ ಕೇಂದ್ರ ಸ್ಥಾಪಿಸಿದ್ದೇವೆ. ಪಾವಗಡದಲ್ಲಿನ ಸೋಲಾರ್ ಪಾರ್ಕ್ ಗೆ ನಿಮ್ಮ ಕಣ್ಣುಗಳೇ ಸಾಕ್ಷಿ.

ಉತ್ತಮ, ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ. ಬಿಜೆಪಿ ಸರಕಾರದಲ್ಲಿ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇಡೀ ದೇಶದಲ್ಲಿ ಇಂತಹ ಭ್ರಷ್ಟ ಸರ್ಕಾರ ಇಲ್ಲ. ಇವರು ರಾಜ್ಯಕ್ಕೆ ಕಳಂಕ ತಂದಿದ್ದಾರೆ. ಕರ್ನಾಟಕ ರಾಜ್ಯದ ಆಡಳಿತ ಎಂದರೆ ದೇಶಕ್ಕೆ ಮಾದರಿಯಾಗಿತ್ತು. ಆದರೆ ಇಂದು ಅದನ್ನು ನಾಶ ಮಾಡಿದ್ದಾರೆ. ಬಿಜೆಪಿ ಸಮಾಜವನ್ನು ಒಡೆಯುತ್ತಿದೆ. ಕಬ್ಬಿಣವನ್ನು ನಾವು ಎರಡು ರೀತಿಯಲ್ಲಿ ಬಳಸಬಹುದು. ಒಂದು ಕತ್ತರಿಗೆ ಹಾಗೂ ಮತ್ತೊಂದು ಸೂಜಿಗೆ. ಬಿಜೆಪಿ ಕತ್ತರಿಯಂತೆ ಭಾವನಾತ್ಮಕ ವಿಚಾರದಿಂದ ಸಮಾಜವನ್ನು ಕತ್ತರಿಸುತ್ತಿದ್ದರೆ, ಕಾಂಗ್ರೆಸ್ ಸೂಜಿಯಂತೆ ಸಮಾಜವನ್ನು ಒಂದುಗೂಡಿಸುತ್ತಿದೆ. ರಾಹುಲ್ ಗಾಂಧಿ ಅವರು ಎರಡು ದಿನಗಳ ಕಾಲ ನಿಮ್ಮ ಜಿಲ್ಲೆಯಲ್ಲಿ ಪಾದಯಾತ್ರೆ ಮಾಡಿದಾಗ ನೀವು ಭವ್ಯ ಸ್ವಾಗತ ನೀಡಿ ಶಕ್ತಿ ತುಂಬಿದ್ದಿರಿ.

ಕಾಂಗ್ರೆಸ್ ಪಕ್ಷ ಕಳೆದ ಬಾರಿ ಇಲ್ಲಿ ಸೋತಿದೆ. ಸೋಲಿನಲ್ಲಿ ಈಗ ಗೆಲುವನ್ನು ಹುಡುಕಬೇಕಿದೆ. ಇಂದು ರೈತರ ಆದಾಯ ಡಬಲ್ ಮಾಡುತ್ತೇವೆ ಎಂದು ಬಿಜೆಪಿ ಹೇಳಿತ್ತು. ಆದರೆ ಅದು ಅವರಿಂದ ಸಾಧ್ಯವಾಗಿಲ್ಲ. ಕೋವಿಡ್ ಸಮಯದಲ್ಲಿ ರೈತರನ್ನು, ಕಾರ್ಮಿಕರನ್ನು ಕೈಬಿಟ್ಟರು. ಬಿಜೆಪಿ ನುಡಿದಂತೆ ನಡೆಯಲು ಆಗಲಿಲ್ಲ. ಇಂತಹ ಬಿಜೆಪಿ ಸರ್ಕಾರಕ್ಕೆ ನೀವು ಅಂತ್ಯವಾಡಬೇಕು. 

ಕಾಂಗ್ರೆಸ್ ಪಕ್ಷಕ್ಕೆ ಒಂದು ಇತಿಹಾಸವಿದೆ. ಕಾಂಗ್ರೆಸ್ ಇತಿಹಾಸ ದಾಶದ ಇತಿಹಾಸ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾಜದ ಎಲ್ಲ ವರ್ಗಗಳು ಅಧಿಕಾರಕ್ಕೆ ಬಂದಂತೆ. ರಾಜ್ಯದ ಅನೇಕ ಯೋಜನೆಗಳನ್ನು ನಮ್ಮ ಸರ್ಕಾರ ನೀಡಿದೆ. ಹಾಲು ಉತ್ಪಾದಕರಿಂದ, ಯುವಕರು, ಮಹಿಳೆಯರು ಸೇರಿದಂತೆ ಅನೇಕ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ. ಬಿಜೆಪಿ ಕೊಟ್ಟ ಮಾತನ್ನು ಉಳಿಸಿಕೊಳ್ಳಲಿಲ್ಲ. ನಿಮ್ಮ ಖಾತೆಗೆ 15 ಲಕ್ಷ ಹಣ ಬರಲಿಲ್ಲ, ನಿಮ್ಮ ಆದಾಯ ಡಬಲ್ ಮಾಡಲಿಲ್ಲ. 400 ರೂ. ಇದ್ದ ಅಡುಗೆ ಅನಿಲದ ಬೆಲೆ 1100 ಆಗಿದೆ. 60 ರೂ ಇದ್ದ ಪೆಟ್ರೋಲ್ 110 ಆಗಿದೆ. ಸೀಮೆಂಟ್, ಕಬ್ಬಿಣ, ಗೊಬ್ಬರ ಎಲ್ಲವೂ ಹೆಚ್ಚಾಗಿದೆ. ಮತ್ತೆ ರಾಜ್ಯದಲ್ಲಿ ಬದಲಾವಣೆ ತರಬೇಕಾದರೆ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕು. 

ಇನ್ನು ಕೊಬ್ಬರಿಗೆ ಮತ್ತೆ ಬೆಲೆ ಬರಬೇಕು. ಈ ಭಾಗದ ಮುಖ್ಯ ಬೆಳೆ ತೆಂಗು. ರೈತರಿಗೆ ಸಂಬಳ, ಬಡ್ತಿ, ನಿವೃತ್ತಿ, ಲಂಚ ಯಾವೂದು ಇಲ್ಲ. ಹೀಗಾಗಿ ರೈತರ ರಕ್ಷಣೆ ನಾವು ಮಾಡುತ್ತೇವೆ. ತೆಂಗು, ಅಡಿಕೆ, ರಾಗಿ ಬೆಳೆಗಾರರ ರಕ್ಷಣೆ ಮಾಡಲು, ಯುವಕರಿಗೆ ಉದ್ಯೋಗ ನೀಡಲು ನಾವು ಬದ್ಧರಾಗಿದ್ದೇವೆ. ಇನ್ನು ಸರ್ಕಾರಿ ನೌಕರರು ಹಳೆ ಪಿಂಚಣಿ ಪದ್ಧತಿ ಜಾರಿಗೆ ಆಗ್ರಹಿಸುತ್ತಿದ್ದಾರೆ. ನಮ್ಮ ಸರ್ಕಾರ ಈಗಾಗಲೇ ರಾಜಸ್ಥಾನದಲ್ಲಿ, ಹಿಮಾಚಲ ಪ್ರದೇಶದಲ್ಲಿ ಈ ವಿಚಾರವಾಗಿ ತೀರ್ಮಾನ ಮಾಡಿದೆ. ನಮ್ಮ ರಾಜ್ಯದಲ್ಲಿ ಕಾಂಗ್ರೆಸ್ ನಾಯಕರೆಲ್ಲರೂ ಚರ್ಚೆ ಮಾಡಿ ತೀರ್ಮಾನ ಘೋಷಣೆ ಮಾಡುತ್ತೇವೆ. ಎಲ್ಲರಿಗೂ ನ್ಯಾಯ ಒದಗಿಸುತ್ತೇವೆ, ನಮಗೆ ಶಕ್ತಿ ನೀಡಿ. ನಾವು ನಿಮ್ಮ ಸೇವೆ ಮಾಡುತ್ತೇವೆ.
[04/01, 9:19 PM] Kpcc official: ಬಿಜೆಪಿಯ ಆದ್ಯತೆ ಅಭಿವೃದ್ಧಿಯಲ್ಲ, ಕೋಮುಕಲಹ.

ತನ್ನ ವೈಫಲ್ಯ, ಹಗರಣಗಳನ್ನು ಧರ್ಮ ದ್ವೇಷದ ಮರೆಯಲ್ಲಿ ಅಡಗಿಸಲು ರಾಜ್ಯದಲ್ಲಿ ಬೆಂಕಿ ಹಚ್ಚುವ ಎಲ್ಲಾ ಷಡ್ಯಂತ್ರಗಳನ್ನು ರೂಪಿಸಲಿದೆ.
ಇದು @nalinkateel ಅವರ ಬಾಯಲ್ಲೇ ಹೊರಬಂದಿದೆ.

ಚುನಾವಣೆ ಸಮೀಪಿಸುತ್ತಿರುವಾಗ ಜನತೆ ಎಚ್ಚರಿಕೆಯಿಂದ ಇರಬೇಕು, ಬಿಜೆಪಿ ಹಚ್ಚುವ ಬೆಂಕಿ ಆರಿಸಲು ಸಜ್ಜಾಗಬೇಕು.
[04/01, 9:19 PM] Kpcc official: ಯುವನೀತಿ ಅನುಷ್ಠಾನದಿಂದ ಯೂಟರ್ನ್ ಹೊಡೆದ ಬಿಜೆಪಿ ಸರ್ಕಾರ ಯುವಕರಿಗೆ ದ್ರೋಹವೆಸಗಿದೆ.

ಉದ್ಯೋಗ, ಶಿಕ್ಷಣಕ್ಕೆ ಒತ್ತು ನೀಡುವ ಬದಲು ಕೇಸರಿ ಶಾಲು, ತ್ರಿಶೂಲ ನೀಡಿ ದ್ವೇಷ ಬಿತ್ತುವ ಮೂಲಕ ಮತಗಳನ್ನು ಭದ್ರಪಡಿಸಿಕೊಳ್ಳುವ ಷಡ್ಯಂತ್ರ ಮಾಡುವ ಬಿಜೆಪಿಯಿಂದ ಯುವ ಸಮುದಾಯಕ್ಕೆ ನ್ಯಾಯ ಸಿಗಲು ಸಾಧ್ಯವೇ?

ಯುವಕರ ಭವಿಷ್ಯ ಬಿಜೆಪಿಗೆ "ಸಣ್ಣ ವಿಷಯ"!
[04/01, 9:20 PM] Kpcc official: ಕೆಪಿಟಿಸಿಎಲ್ ನೇಮಕಾತಿ ಅಕ್ರಮದಲ್ಲಿ ಮತ್ತೆ ನಾಲ್ವರ ಬಂಧನವಾಗುವ ಮೂಲಕ ಹಗರಣದ ಆಳ, ಅಗಲ ವಿಸ್ತರಿಸುತ್ತಲೇ ಇದೆ.

@nalinkateel ಅವರೇ, ರಾಜ್ಯದ ಸಾವಿರಾರು ಉದ್ಯೋಗಾಕಾಂಕ್ಷಿ ಯುವ ಸಮುದಾಯದ ಕನಸಿಗೆ ಕೊಳ್ಳಿ ಇಟ್ಟ ನಿಮ್ಮ ಸರ್ಕಾರದ ಭ್ರಷ್ಟತನ ಸಣ್ಣ ವಿಷಯವೇ?

ಇಂತಹ ಅಕ್ರಮಗಳನ್ನು ಮುಚ್ಚಿಕೊಳ್ಳಲೆಂದೇ ಲವ್ ಜಿಹಾದ್ ಕಾಯಿನ್ ಬಳಸುವುದೇ?
[04/01, 9:20 PM] Kpcc official: ಕಾಮಿಡಿ ಕಿಲಾಡಿ @nalinkateel ಅವರೇ,
8 ವರ್ಷದಿಂದ ಕೇಂದ್ರದಲ್ಲಿ ಬಿಜೆಪಿ ಆಡಳಿತ, ಮೂರುವರೆ ವರ್ಷದಿಂದ ರಾಜ್ಯದಲ್ಲಿ @BJP4Karnataka ಆಡಳಿತ, ದಕ್ಷಿಣ ಕನ್ನಡದ ಸಂಸದರೂ ತಾವೇ.

ಹೀಗಿದ್ದೂ ದ.ಕ ಜಿಲ್ಲೆ ಆತಂಕದಲ್ಲಿದೆ ಎಂದರೆ ಅದಕ್ಕೆ ಬಿಜೆಪಿಯೇ ಕಾರಣ ಅಲ್ಲವೇ?

ಜನವಿರೋಧದ ಆತಂಕವಿರುವುದರಿಂದ ತಾವು 'ಆತಂಕವಾದಿಗಳಾಗುತ್ತಿದ್ದೀರಿ ಅಲ್ಲವೇ?
[04/01, 9:20 PM] Kpcc official: ಕಾಂಗ್ರೆಸ್‌ನಲ್ಲಿ ಅಗ್ರಗಣ್ಯ ನಾಯಕರಾಗಿದ್ದ S M ಕೃಷ್ಣರನ್ನು ಬೀದಿಗೆ ತಂದು ಅವಮಾನಿಸಿದ ಕೀರ್ತಿ ಬಿಜೆಪಿಗೆ ಸಲ್ಲುತ್ತದೆ.

ಹಿರಿಯ ನಾಯಕ, ಮಾಜಿ ಸಿಎಂ ಬಳಿ ಆಡಳಿತಾತ್ಮಕ ಸಲಹೆ ಕೇಳುವ ಮನಸು ಬಿಜೆಪಿಗರಿಗೆ ಇಲ್ಲ. ಅವರ ಸಲಹೆ ಬಿಜೆಪಿಗೆ ಬೇಕಾಗಿಯೂ ಇಲ್ಲ.

ಬಿಜೆಪಿ ಸಿದ್ದಂತಗಳು ಕೃಷ್ಣರಿಗೆ ಅಪಥ್ಯವಾದವೇ ಅಥವಾ ಕೃಷ್ಣರೇ ಬಿಜೆಪಿಗೆ ಅಪಥ್ಯವಾದರೇ?

Post a Comment

Previous Post Next Post