ಬಜೆಟ್ ಅಧಿವೇಶನದ ಮೊದಲ ದಿನ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಡಲಿದ್ದಾರೆ. ಜುಲೈ 7ರಂದು ಶುಕ್ರವಾರ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡನೆ ಮಾಡಲಿದ್ದಾರೆ.ಈ ಕುರಿತು ದಾವಣಗೆರೆಯಲ್ಲಿ ಮಾತನಾಡಿರುವ ಸಿಎಂ ಸಿದ್ದರಾಮಯ್ಯ ಜುಲೈ ಮೊದಲ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ನಿರ್ಧರಿಸಲಾಗಿದೆ. ವಿವಿಧ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಚರ್ಚೆ ಕೈಗೊಳ್ಳಲಾಗುತ್ತಿದೆ ಎಂದರು.
ಜುಲೈ 7ರಂದು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.
Post a Comment