ಜೂನ್ 07, 2023 | , | 3:18PM |
ಪ್ರಧಾನಿ ಮೋದಿಯವರ ದೃಷ್ಟಿಯಲ್ಲಿ ಭಾರತವು ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಪ್ರಗತಿ ಸಾಧಿಸುತ್ತಿದೆ ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಹೇಳಿದ್ದಾರೆ.

ನವದೆಹಲಿಯಲ್ಲಿ ಇಂದು ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಶ್ರೀ ಶೇಖಾವತ್, 2014 ರ ಮೊದಲು ದೇಶವು ದೇಶದ ಬೆಳವಣಿಗೆಯ ವೇಗವನ್ನು ಅಡ್ಡಿಪಡಿಸಿದ ಭ್ರಷ್ಟಾಚಾರಗಳ ಸರಣಿಯನ್ನು ಕಂಡಿತ್ತು. 2014ರಿಂದ ಭಾರತ ಪ್ರತಿಯೊಂದು ಕ್ಷೇತ್ರದಲ್ಲೂ ಉತ್ತಮ ಸಾಧನೆ ಮಾಡುತ್ತಿದೆ ಎಂದರು. ಸರ್ವಾಂಗೀಣ ಅಭಿವೃದ್ಧಿಯನ್ನು ಖಾತ್ರಿಪಡಿಸುವ ಮೂಲಕ ಜನರ ಜೀವನವನ್ನು ಪರಿವರ್ತಿಸುವುದು ಪ್ರಧಾನಿ ನರೇಂದ್ರ ಮೋದಿಯವರ ದೂರದೃಷ್ಟಿಯಾಗಿದೆ ಎಂದು ಸಚಿವರು ಹೇಳಿದರು. ‘ರಾಷ್ಟ್ರ ಮೊದಲು’ ಎಂಬ ಧೋರಣೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರದ ನೀತಿಗಳನ್ನು ರೂಪಿಸಲಾಗುತ್ತಿದೆ ಎಂದರು.
Post a Comment