lಎಸ್‍ಟಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ: ಚುನಾವಣೆ ಅವಲೋಕನಬೆಂಗಳೂರು:

5-6-2023

ಗೆ, 
ಸಂಪಾದಕರು / ವರದಿಗಾರರು.
ಪ್ರಕಟಣೆಯ ಕೃಪೆಗಾಗಿ

ಎಸ್‍ಟಿ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆ: ಚುನಾವಣೆ ಅವಲೋಕನ
ಬೆಂಗಳೂರು: ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸಭೆಯು ಇಂದು ಮಲ್ಲೇಶ್ವರದ ಪಕ್ಷದ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ನಡೆಯಿತು. ಈ ಸಭೆಯ ಅಧ್ಯಕ್ಷತೆಯನ್ನು ಎಸ್‍ಟಿ ಮೋರ್ಚಾ ರಾಜ್ಯ ಅಧ್ಯಕ್ಷ ತಿಪ್ಪರಾಜು ಹವಲ್ದಾರ್ ಅವರು ವಹಿಸಿದ್ದರು. ವಿಧಾನಸಭಾ ಚುನಾವಣೆ ಕುರಿತು ಅವಲೋಕನ ಮಾಡಲಾಯಿತು.
 ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಎಸ್‍ಟಿ ಮೋರ್ಚಾ ಪ್ರಭಾರಿ ಸಿದ್ದರಾಜು ಅವರು ಭಾಗವಹಿಸಿದ್ದರು. ವಿಧಾನಸಭಾ ಚುನಾವಣೆಯ ಬಗ್ಗೆ ಅವಲೋಕನ ಮತ್ತು ಪರಿಶಿಷ್ಟ ಪಂಗಡಗಳ ಮತದಾರರಿಗೆ ಆದ ಲಾಭ ನಷ್ಟಗಳ ಬಗ್ಗೆ ಚರ್ಚೆ ನಡೆಸಲಾಯಿತು.
ಮಾನ್ಯ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರ ನೇತೃತ್ವದ ಕೇಂದ್ರ ಸರಕಾರದ 9 ವರ್ಷಗಳ ಸಾಧನೆಗಳು ಮತ್ತು ಅಭಿವೃದ್ಧಿ ಕಾರ್ಯಗಳನ್ನು ಪರಿಶಿಷ್ಟ ಸಮುದಾಯಗಳ ಮುಖಂಡರು, ಜನರಿಗೆ ತಿಳಿಸಬೇಕು ಮತ್ತು ಮಂಡಲ ಮಟ್ಟದಲ್ಲಿ ಮೋರ್ಚಾಗಳ ಸಮಾವೇಶವನ್ನು ಮಾಡಬೇಕು ಎಂದು ನಿರ್ಣಯಿಸಲಾಯಿತು. ಎಸ್‍ಟಿ ಮೋರ್ಚಾ ರಾಜ್ಯ ಪದಾಧಿಕಾರಿಗಳು ಮತ್ತು ಜಿಲ್ಲಾಧ್ಯಕ್ಷರ ಸಭೆ ನಡೆಸಲು ನಿರ್ಧರಿಸಲಾಯಿತು.

 (ಕರುಣಾಕರ ಖಾಸಲೆ)
  ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ

Post a Comment

Previous Post Next Post