ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಭಾರತವನ್ನು ಕ್ರೀಡೆಯಲ್ಲಿ ಟಾಪ್ 10 ರಾಷ್ಟ್ರಗಳಲ್ಲಿ ಸೇರಿಸುವ ಗುರಿಯನ್ನು ಹೊಂದಿದ್ದಾರೆ

ಕೇಂದ್ರ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಭಾರತವನ್ನು ಕ್ರೀಡೆಯಲ್ಲಿ ಟಾಪ್ 10 ರಾಷ್ಟ್ರಗಳಲ್ಲಿ ಸೇರಿಸುವ ಗುರಿಯನ್ನು ಹೊಂದಿದ್ದಾರೆ

ಕೇಂದ್ರ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಅವರು ಇಂದು ಕ್ರೀಡಾ ಕ್ಷೇತ್ರದಲ್ಲಿ ಭಾರತವನ್ನು ವಿಶ್ವದ ಅತ್ಯುತ್ತಮ ಪ್ರದರ್ಶನ ನೀಡುವ ಟಾಪ್ 10 ದೇಶಗಳಲ್ಲಿ ಸೇರಿಸುವ ಗುರಿಯನ್ನು ಕೇಂದ್ರ ಸರ್ಕಾರ ಹೊಂದಿದೆ ಎಂದು ಹೇಳಿದರು. ತಿರುವನಂತಪುರದ ಕೌಡಿಯಾರ್‌ನಲ್ಲಿ ನಡೆದ ಉನ್ನತೀಕರಿಸಿದ ಭಾರತೀಯ ಕ್ರೀಡಾ ಪ್ರಾಧಿಕಾರದ ಗಾಲ್ಫ್ ಕೋರ್ಸ್ ಉದ್ಘಾಟನಾ ಸಮಾರಂಭವನ್ನು ಉದ್ದೇಶಿಸಿ ಅವರು ಮಾತನಾಡಿದರು.

 

ಭಾರತವು ಗಾಲ್ಫ್‌ಗೆ ಅಪಾರ ಅವಕಾಶವನ್ನು ಹೊಂದಿದೆ ಎಂದು ಸಚಿವರು ಹೇಳಿದರು. 2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರವನ್ನಾಗಿ ಮಾಡಲು ಈ ದೇಶದ ಪ್ರತಿಯೊಬ್ಬ ಪ್ರಜೆಯೂ ಉತ್ತಮ ಆರೋಗ್ಯ ಹೊಂದಿರಬೇಕು ಎಂದು ಒತ್ತಿ ಹೇಳಿದರು. ಈ ಗುರಿಯನ್ನು ಸಾಧಿಸಲು ನಮ್ಮ ಸಮಾಜದ ಶಾರೀರಿಕ, ಮಾನಸಿಕ ಮತ್ತು ಸಾಂಸ್ಕೃತಿಕ ಸ್ವಾಸ್ಥ್ಯ ಅತ್ಯಂತ ಅವಶ್ಯವಾಗಿದೆ ಎಂದು ಡಾ.ಮಾಂಡವ್ಯ ಹೇಳಿದರು.

 

ಸಮಾರಂಭದಲ್ಲಿ ಕೇಂದ್ರ ರಾಜ್ಯ ಸಚಿವ ಸುರೇಶ್ ಗೋಪಿ, ರಾಜ್ಯ ಮುಖ್ಯ ಕಾರ್ಯದರ್ಶಿ ಶಾರದ ಮುರಳೀಧರನ್ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

 

Post a Comment

Previous Post Next Post