3 ಉಪ ಚುನಾವಣೆಗಳಲ್ಲೂ ಗೆಲುವು ಖಚಿತ: ವಿಜಯೇಂದ್ರ । ಸಹೋದರಿ ನಿವೇದಿತಾ ಅವರ ನಿಸ್ವಾರ್ಥ ಸೇವೆ: ವಿಜಯೇಂದ್ರ । ಸದಸ್ಯತ್ವ ಅಭಿಯಾನದಲ್ಲಿ ಸಾಧನೆ-2 ಲಕ್ಷದ 15 ಸಾವಿರ ಬಿಜೆಪಿ ಸದಸ್ಯರ ನೋಂದಣಿ। ಎಸ್.ಆರ್.ವಿಶ್ವನಾಥ್ ಸನ್ಮಾನ।



ಸಹೋದರಿ ನಿವೇದಿತಾ ಅವರ ನಿಸ್ವಾರ್ಥ ಸೇವೆ: ವಿಜಯೇಂದ್ರ 

ಬೆಂಗಳೂರು: ಹೊರದೇಶದಿಂದ ಇಲ್ಲಿ ಬಂದು ನಮ್ಮ ಪರಂಪರೆಯನ್ನು ಅಳವಡಿಸಿಕೊಂಡು ಇಲ್ಲಿ ತಾಯಂದಿರಿಗೆ ಶಿಕ್ಷಣ ಸೇವೆ ನೀಡಿದ ಸಹೋದರಿ ನಿವೇದಿತಾ ಅವರ ಸೇವೆ ಸದಾ ಸ್ಮರಣೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸಹೋದರಿ ನಿವೇದಿತಾ ಅವರ 157ನೇ ಜನ್ಮದಿನದ ಪ್ರಯುಕ್ತ ಅವರ ಭಾವಚಿತ್ರಕ್ಕೆ ಪುμÁ್ಪರ್ಚನೆ ನೆರವೇರಿಸಿದ ಬಳಿಕ ಅವರು ಮಾತನಾಡಿದರು. ಅಕ್ಟೋಬರ್ 28ರಂದು 1867ರಲ್ಲಿ ಜನಿಸಿದ ಮಾರ್ಗರೆಟ್ ಎಲಿಜಬೆತ್ ಅವರು ಸ್ವಾಮಿ ವಿವೇಕಾನಂದರ ಪ್ರಭಾವಕ್ಕೆ ಒಳಗಾಗಿ, ಅವರ ತತ್ವ, ಸಿದ್ಧಾಂತಕ್ಕೆ ಮಾರು ಹೋದವರು ಎಂದು ವಿವರಿಸಿದರು.
1898ರಲ್ಲಿ ಅವರು ಭಾರತಕ್ಕೆ ಬಂದಿದ್ದು, ವಿವೇಕಾನಂದರ ಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಿದರು. ಪಶ್ಚಿಮ ಬಂಗಾಲದಲ್ಲಿ ಮಹಿಳೆಯರಿಗೆ ಶಿಕ್ಷಣ ಕೊಡುವ ಕಾರ್ಯದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು ಎಂದು ತಿಳಿಸಿದರು. ಭಾರತದ ಸಂಸ್ಕøತಿ, ಪರಂಪರೆಯನ್ನು ಮೈಗೂಡಿಸಿಕೊಂಡು ಸ್ವಾಮಿ ವಿವೇಕಾನಂದರ ಮಾರ್ಗದರ್ಶನದಲ್ಲಿ ಶಿಕ್ಷಣ ವಂಚಿತ ತಾಯಂದಿರಿಗೆ ಶಿಕ್ಷಣ ನೀಡುವ ಕೆಲಸವನ್ನು ಅವರು ನಿಸ್ವಾರ್ಥ ಸೇವೆಯ ರೂಪದಲ್ಲಿ ಮಾಡಿದ್ದರು ಎಂದು ತಿಳಿಸಿದರು.
ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ಮಾಜಿ ಉಪ ಮುಖ್ಯಮಂತ್ರಿ ಮತ್ತು ಸಂಸದ ಗೋವಿಂದ ಕಾರಜೋಳ, ಮಾಜಿ ಸಚಿವರಾದ ಪ್ರಭು ಚವ್ಹಾಣ್, ಎನ್.ಮಹೇಶ್, ವಿಧಾನಪರಿಷತ್ ಮಾಜಿ ಮುಖ್ಯ ಸಚೇತಕ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ರಾಜ್ಯ ಕಾರ್ಯದರ್ಶಿಗಳಾದ ಡಾ.ಲಕ್ಷ್ಮಿ ಅಶ್ವಿನ್‍ಗೌಡ, ಕು. ಲಲಿತಾ ಅನಪೂರ, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು, ಪಕ್ಷದ ಮುಖಂಡರು ಉಪಸ್ಥಿತರಿದ್ದರು.





3 ಉಪ ಚುನಾವಣೆಗಳಲ್ಲೂ ಗೆಲುವು ಖಚಿತ: ವಿಜಯೇಂದ್ರ 

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರು ಸೆ.2ರಂದು ಸದಸ್ಯತ್ವ ಅಭಿಯಾನಕ್ಕೆ ಚಾಲನೆ ಕೊಟ್ಟಿದ್ದಾರೆ. 40-45 ದಿನಗಳಲ್ಲಿ ದೇಶದಲ್ಲಿ 10 ಕೋಟಿ ಸದಸ್ಯರನ್ನು ನೋಂದಾಯಿಸಲಾಗಿದೆ. ಕರ್ನಾಟಕದಲ್ಲಿ 65 ಲಕ್ಷಕ್ಕೂ ಹೆಚ್ಚು ಸದಸ್ಯರನ್ನು ನೋಂದಾಯಿಸಲಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ತಿಳಿಸಿದರು.
ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು “ಸಂಘಟನಾ ಪರ್ವ” ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರಾಜ್ಯದ 58 ಸಾವಿರ ಬೂತ್‍ಗಳಲ್ಲಿ ಸದಸ್ಯತ್ವ ನೋಂದಣಿ ಆಗಿದೆ. ಮುಂದಿನ ಹಂತದಲ್ಲಿ ಪಕ್ಷದ ಸಮಿತಿಗಳ ರಚನೆ ಮೊದಲಾದ ಸಂಘಟನಾ ಕಾರ್ಯ ನಡೆಯಲಿದೆ ಎಂದು ವಿವರಿಸಿದರು. ಬೇರೆ ಯಾವುದೇ ರಾಜಕೀಯ ಪಕ್ಷಗಳಲ್ಲಿ ಇಷ್ಟೊಂದು ವ್ಯವಸ್ಥಿತ, ಕ್ರಮಬದ್ಧವಾದ ಸಂಘಟನಾತ್ಮಕ ಚಿಂತನೆ ಇಲ್ಲ ಎಂದು ತಿಳಿಸಿದರು.
ಕರ್ನಾಟಕದಲ್ಲಿ ಹಿಂದೆಂದೂ ಕಂಡು ಕೇಳರಿಯದ ಕೆಟ್ಟ ಸರಕಾರ ಸಿದ್ದರಾಮಯ್ಯನವರ ನೇತೃತ್ವದಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಸರಕಾರ ಬಂದ ಬಳಿಕ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಯುತ್ತಿಲ್ಲ. ಇದರ ಪರಿಣಾಮವಾಗಿ ಆಡಳಿತ ಪಕ್ಷದ ಶಾಸಕರೇ ತಮ್ಮ ಆಡಳಿತವನ್ನು ಟೀಕಿಸುತ್ತಿದ್ದಾರೆ ಎಂದು ತಿಳಿಸಿದರು.
ಸರಕಾರಕ್ಕೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಬರ- ಭೀಕರ ನೆರೆ ಸಂಕಷ್ಟವಿದ್ದರೂ ಸರಕಾರದ ಸ್ಪಂದನೆ ಶೂನ್ಯವಾಗಿದೆ ಎಂದು ಆಕ್ಷೇಪಿಸಿದರು. ಮುಖ್ಯಮಂತ್ರಿ ಮತ್ತು ಸಚಿವ ಸಂಪುಟವು 3 ಉಪ ಚುನಾವಣೆಯತ್ತ ಮುಖ ಮಾಡಿದೆ. 10- 10 ಸಚಿವರನ್ನು ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಜವಾಬ್ದಾರಿ ನೀಡಿದ್ದಾರೆ; ಶಾಸಕರನ್ನೂ ನಿಯೋಜಿಸಿದ್ದಾರೆ ಎಂದರು.
ಹಣ, ಹೆಂಡ ಹಂಚಿ ಹೇಗಾದರೂ ಮಾಡಿ ಉಪ ಚುನಾವಣೆ ಗೆಲ್ಲಲು ಸೂಚಿಸಲಾಗಿದೆ. ರೈತ ವಿರೋಧಿ, ಅಭಿವೃದ್ಧಿ ವಿರೋಧಿ, ಜನವಿರೋಧಿ, ಪರಿಶಿಷ್ಟ ಸಮುದಾಯಗಳ ವಿರೋಧಿ ಸರಕಾರ ಇದು. ಈ ದುಷ್ಟ ಸರಕಾರ, ಭ್ರಷ್ಟ ಸಿಎಂ ವಿರುದ್ಧ ಜನಾಕ್ರೋಶ ತೀವ್ರವಾಗಿದೆ. 3 ಉಪ ಚುನಾವಣೆಗಳಲ್ಲಿ ಶಿಗ್ಗಾವಿ, ಸಂಡೂರಿನಲ್ಲಿ ಬಿಜೆಪಿ ಗೆದ್ದೇ ಗೆಲ್ಲಲಿದೆ. ಚನ್ನಪಟ್ಟಣದಲ್ಲಿ ಪಕ್ಷದ ಸ್ಥಾನಮಾನ ಪಡೆದಿದ್ದ ಮುಖಂಡ ಬೇರೆ ಪಕ್ಷಕ್ಕೆ ಹೋಗಿದ್ದು, ಅಲ್ಲಿನ ಜನತೆ, ಪ್ರಜ್ಞಾವಂತ ಮತದಾರರು ಅವರಿಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ನುಡಿದರು.
ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ವಿಧಾನಪರಿಷತ್ ಮಾಜಿ ಸದಸ್ಯ ಮತ್ತು ಸಂಘಟನಾ ಪರ್ವದ ಚುನಾವಣಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ನಂದೀಶ್ ರೆಡ್ಡಿ, ಶಾಸಕ ಸತೀಶ್ ರೆಡ್ಡಿ, ಪಕ್ಷದ ಮುಖಂಡರು ಉಪಸ್ಥಿತರಿದ್ದರು.



ಸದಸ್ಯತ್ವ ಅಭಿಯಾನದಲ್ಲಿ ಸಾಧನೆ-2 ಲಕ್ಷದ 15 ಸಾವಿರ ಬಿಜೆಪಿ ಸದಸ್ಯರ ನೋಂದಣಿ।  ಎಸ್.ಆರ್.ವಿಶ್ವನಾಥ್ ಸನ್ಮಾನ
ಬೆಂಗಳೂರು: ನÀಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು “ಸಂಘಟನಾ ಪರ್ವ” ರಾಜ್ಯ ಮಟ್ಟದ ಕಾರ್ಯಾಗಾರದ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ವಿಧಾನಸಭಾ ಕ್ಷೇತ್ರದಲ್ಲಿ ಗರಿಷ್ಠ ಸಂಖ್ಯೆಯ ಸದಸ್ಯತ್ವ ಮಾಡಿ ದೇಶದಲ್ಲೇ ನಂಬರ್ 1 ಸದಸ್ಯತ್ವ ಸಾಧನೆಗಾಗಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಅವರನ್ನು ಗೌರವಿಸಲಾಯಿತು.
ಎಸ್.ಆರ್.ವಿಶ್ವನಾಥ್ ಅವರು 2 ಲಕ್ಷದ 15 ಸಾವಿರ ಬಿಜೆಪಿ ಸದಸ್ಯರನ್ನು ನೋಂದಣಿ ಮಾಡಿದ್ದರು. ಇದೇವೇಳೆ ಮಾತನಾಡಿದ ಎಸ್.ಆರ್.ವಿಶ್ವನಾಥ್ ಅವರು ಈ ಕೆಲಸ ಮಾಡಲು ಸ್ಫೂರ್ತಿ ನೀಡಿದವರು ಕಾರ್ಯಕರ್ತರು ಎಂದು ತಿಳಿಸಿದರು. ಕಾರ್ಯಕರ್ತರು ನಿಸ್ವಾರ್ಥ ಸೇವೆ ಮಾಡಿ ಮನೆ ಮನೆ ಸಂಪರ್ಕ ಮಾಡಿದ ಅಭಿಯಾನ ಇದು; ಅದರಿಂದ ಈ ಸಾಧನೆ ಮಾಡಲು ಸಾಧ್ಯವಾಯಿತು ಎಂದು ವಿವರಿಸಿದರು.
ರಾಜ್ಯ ಸಹ ಪ್ರಭಾರಿ ಸುಧಾಕರ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪಿ.ರಾಜೀವ್, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ಮಾಜಿ ಸದಸ್ಯ ಮತ್ತು ಸಂಘಟನಾ ಪರ್ವದ ಚುನಾವಣಾ ಅಧಿಕಾರಿ ಕ್ಯಾಪ್ಟನ್ ಗಣೇಶ್ ಕಾರ್ಣಿಕ್, ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್, ಪಕ್ಷದ ಪ್ರಮುಖರು ಇದ್ದರು.


 (ಕರುಣಾಕರ ಖಾಸಲೆ)
ಮಾಧ್ಯಮ ಸಂಚಾಲಕರು
 ಬಿಜೆಪಿ ಕರ್ನಾಟಕ

Post a Comment

Previous Post Next Post