ಸೂರು: ಮುಡಾ ಸೈಟ್ (MUDA Case) ಹಂಚಿಕೆ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ (CM Siddaramaiah) ಲೋಕಾಯುಕ್ತ (Karnataka Lokayukta) ನೋಟಿಸ್ ನೀಡಿದ್ದರಿಂದ ನಿನ್ನೆ ವಿಚಾರಣೆಗೆ ಹಾಜರಾಗಿದ್ದರು. ವಿಚಾರಣೆ ವೇಳೆ ಸುಮಾರು 2 ಗಂಟೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ಕೇಳಿದ 72 ಪ್ರಶ್ನೆಗೆ ಸಿಎಂ ಉತ್ತರಿಸಿದ್ದಾರೆ.ಇದೀಗ ಮುಡಾ ಸಭೆ ಕರೆಯಲಾಗಿದ್ದು, ಈ ಸಂಬಂಧ ಮೈಸೂರು ಜಿಲ್ಲಾಧಿಕಾರಿ ಸಿಎಂ ಸಿದ್ದರಾಮಯ್ಯ ಅವರಿಗೆ ನೋಟಿಸ್ ನೀಡಿದ್ದಾರೆ. ಲೋಕಾಯುಕ್ತ ವಿಚಾರಣೆ ಎದುರಿಸಿದ ಮರುದಿನವೇ ಈ ಸಭೆ ಕರೆದಿರುವುದು ತೀವ್ರ ಕುತೂಹಲ ಮೂಡಿಸಿದೆ.
ಮುಡಾ ಸಭೆ ಕರೆದ ಡಿಸಿ
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿನ ನಡೆದ ಹಗರಣವಾದ ಬಳಿಕ ಮುಡಾದಲ್ಲಿ ಸಭೆಗಳು ನಡೆದಿರಲಿಲ್ಲ. ಇಂದು ಮುಡಾದಲ್ಲಿ ಜಿಲ್ಲಾಧಿಕಾರಿ ಮಹತ್ವದ ಸಭೆ ಕರೆದಿದ್ದಾರೆ. ಜೆ ಎಲ್‌ಬಿ ರಸ್ತೆಯಲ್ಲಿರುವ ಮುಡಾ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯುತ್ತಿದ್ದು, ಸಿಎಂ ಸಿದ್ದರಾಮಯ್ಯ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೂ ನೋಟಿಸ್ ನೀಡಲಾಗಿದೆ.
ತನಿಖೆಯ ಸುಳಿಯಲ್ಲಿ ಸಿದ್ದರಾಮಯ್ಯ!
ಮುಡಾ ಹಗರಣದಲ್ಲಿ ಆರೋಪಿಗಳಾದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಇನ್ನೂ ಅನೇಕರ ವಿರುದ್ಧ ಲೋಕಾಯುಕ್ತ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯ (ಇಡಿ)ಯಿಂದ ಪ್ರತ್ಯೇಕ ತನಿಖೆ ನಡೆಸಲಾಗುತ್ತಿದೆ. ಮತ್ತೊಂಡೆದೆ ನಿವೃತ್ತ ನ್ಯಾ. ಪಿ.ಎನ್.ದೇಸಾಯಿ ನೇತೃತ್ವದಲ್ಲಿಯೂ ಕೂಡ ತನಿಖೆ ನಡೆಸುತ್ತಿದ್ದಾರೆ.
ಸಿದ್ದರಾಮಯ್ಯ ಸೇರಿದಂತೆ ಅನೇಕರಿಗೆ ನೋಟಿಸ್
ಮುಡಾ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಈ ಸಭೆ ನಡೆಯಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಮುಡಾ ವ್ಯಾಪ್ತಿಗೆ ಒಳಪಡುವ ಕ್ಷೇತ್ರದ ಎಲ್ಲ ಶಾಸಕರು ಮತ್ತು ಎಂಎಲ್‌ಸಿಗಳಿಗೆ ಸಭೆಯ ನೋಟಿಸ್ ನೀಡಲಾಗಿದೆ.
ಮರೀಗೌಡ ರಾಜೀನಾಮೆ ಬಳಿಕ ಡಿಸಿ ಅಧ್ಯಕ್ಷ
ಕಳೆದ ಕೆಲ ತಿಂಗಳಿಂದ ಮುಡಾ ಸಭೆ ನಡೆದಿಲ್ಲ. ಇಂದು ಮುಡಾ ಸಾಮಾನ್ಯ ಸಭೆ ಕರೆಯಲಾಗಿದೆ. ಈ ಹಿಂದಿನ ಅಧ್ಯಕ್ಷರಾಗಿದ್ದ ಮರೀಗೌಡರು ರಾಜೀನಾಮೆ ನೀಡಿದ್ದರು. ಅವರ ರಾಜೀನಾಮೆ ಬಳಿಕ ಸರ್ಕಾರ ಡಿಸಿಯವರನ್ನೇ ಅಧ್ಯಕ್ಷರಾಗಿ ನೇಮಕ ಮಾಡಿತ್ತು. ಇದರಿಂದ ದೈನಂದಿನ ಕಾರ್ಯಗಳಿಗೆ ಅಡ್ಡಿಯಾಗುತ್ತಿದೆ ಎಂದು ಡಿಸಿ ಸಭೆ ಕರೆದಿದ್ದಾರೆ ಎಂದು ಹೇಳಲಾಗುತ್ತಿದೆ.
ಲೋಕಾಯುಕ್ತ ವಿಚಾರಣೆಯ ಮರುದಿನವೇ ಮುಡಾ ಸಭೆ!
ಸಿಎಂ ಲೋಕಾಯುಕ್ತ ವಿಚಾರಣೆ ಎದುರಿಸಿದ ಮರುದಿನವೇ ಮುಡಾ ಸಭೆ ಕರೆದಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ನಿನ್ನೆ ಲೋಕಾಯುಕ್ತ ವಿಚಾರಣೆಗೆ ಹಾಜರಾಗಿದ್ದ ಸಿದ್ದರಾಮಯ್ಯ ಅವರಿಗೆ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ ಎಂದು ಹೇಳಲಾಗುತ್ತಿದೆ. ಸುಮಾರು 2 ಗಂಟೆಗಳ ಕಾಲ ನಡೆದ ವಿಚಾರಣೆಯಲ್ಲಿ 72 ಪ್ರಶ್ನೆಗೆ ಸಿಎಂ ಉತ್ತರಿಸಿದ್ದಾರೆ.
(ವರದಿ: ಆನಂದ್, ನ್ಯೂಸ್ 18 ಕನ್ನಡ, ಮೈಸೂರು)
Post a Comment