ಬಿಜೆಪಿ ರಾಜ್ಯಾಧ್ಯಕ್ಷರಾದ ಶ್ರೀ ವಿಜಯೇಂದ್ರ ಅವರ ಹುಟ್ಟುಹಬ್ಬದ ಪ್ರಯುಕ್ತ ಇಂದು ಪೂಜ್ಯ ತಂದೆಯವರಾದ ಸನ್ಮಾನ್ಯ ಶ್ರೀ ಮಾಜಿ ಮುಖ್ಯಮಂತ್ರಿ ಗಳಾದ ಯಡಿಯೂರಪ್ಪ ಅವರ ಬಳಿ ಆಶೀರ್ವಾದ ಪಡೆದರು
ವಕ್ಫ್ ಸಂಬಂಧ ವಿಧಾನಸಭೆ- ವಿಧಾನಪರಿಷತ್ತಿನ ಜಂಟಿ ಸದನ ಸಮಿತಿ ರಚಿಸಿ
ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ, ಜಮೀರ್ ಅಹಮದ್
ವಜಾ ಮಾಡಲು ರವಿಕುಮಾರ್ ಆಗ್ರಹ
ಬೆಂಗಳೂರು: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಕಾರ್ಯದರ್ಶಿ ಸೋಮು ತಮ್ಮ ಆತ್ಮಹತ್ಯೆಗೆ ಕಾರಣವೆಂದು ಪತ್ರ ಬರೆದಿಟ್ಟು ಎಸ್.ಡಿ.ಎ. ರುದ್ರಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರುದ್ರಣ್ಣ ಆತ್ಮಹತ್ಯೆಯ ಹೊಣೆ ಹೊತ್ತು ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕೆಂದು ಎಂದು ವಿಧಾನ ಪರಿಷತ್ ಸದಸ್ಯ ಎನ್. ರವಿಕುಮಾರ್ ಅವರು ಒತ್ತಾಯಿಸಿದರು.
ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಅನೇಕ ದಿನಗಳಿಂದ ನೊಂದಿದ್ದು, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ರುದ್ರಣ್ಣ ವಾಟ್ಸಪ್ ಸಂದೇಶ ಕಳಿಸಿದ್ದಾರೆ. ನನ್ನ ಸಾವಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಅವರ ಆಪ್ತ ಕಾರ್ಯದರ್ಶಿ ಕಾರಣ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಸಂದರ್ಭದಲ್ಲೂ ಇದೇಮಾದರಿ ಪತ್ರ ಬರೆದಿಡಲಾಗಿತ್ತು ಎಂದು ವಿವರಿಸಿದರು. ಹೇಗೆ ಈಶ್ವರಪ್ಪ ಅವರು ರಾಜೀನಾಮೆ ಕೊಟ್ಟಿದ್ದರೋ ಅದೇ ಮಾದರಿಯಲ್ಲಿ ಲಕ್ಷ್ಮಿ ಹೆಬ್ಬಾಳ್ಕರ್ ರಾಜೀನಾಮೆ ಕೊಡಬೇಕೆಂದು ತಿಳಿಸಿದರು.
ವಕ್ಫ್ ಮಂಡಳಿ ಏನು ಮಾಡಿದರೂ ಮಾಫಿ...
ಟಿಪ್ಪು ಸುಲ್ತಾನ್, ಔರಂಗಬೇಬ, ಚಂಗೇಶ್ ಖಾನ್, ಹುಮಾಯೂನ್ ಮೊದಲಾದವರು ನಮ್ಮ ದೇಶದ ಮೇಲೆ ದಾಳಿ ಮಾಡಿ ಆಸ್ತಿ ವಶಕ್ಕೆ ಪಡೆದ ಮಾದರಿಯಲ್ಲಿ ರಾಜ್ಯದಲ್ಲಿ ವಕ್ಫ್ ಮಂಡಳಿಯು ರೈತರ ಜಮೀನು, ಶಾಲೆ, ಮಠ ಮಂದಿರಗಳನ್ನು ವಕ್ಫ್ ಆಸ್ತಿಯನ್ನಾಗಿ ಮಾಡಿಕೊಳ್ಳುತ್ತಿದೆ. ವಕ್ಫ್ ಮಂಡಳಿ ಏನು ಮಾಡಿದರೂ ಮಾಫಿ, ಏನು ಮಾಡಿದರೂ ನಡೆಯುತ್ತದೆ ಎಂಬಂತೆ ವಕ್ಫ್ ಸಚಿವ ಜಮೀರ್ ಅಹಮದ್ ಅವರನ್ನು ಈ ಸರಕಾರ ಫ್ರೀಯಾಗಿ ಬಿಟ್ಟಿದೆ ಎಂದು ಟೀಕಿಸಿದರು.
ವಕ್ಫ್ ಅನ್ನು ಬರ್ಖಾಸ್ತು ಮಾಡಬೇಕು..
ಮುಖ್ಯಮಂತ್ರಿಗಳು ವಕ್ಫ್ ಅನ್ನು ಬರ್ಖಾಸ್ತು ಮಾಡಬೇಕು ಎಂದು ಎನ್.ರವಿಕುಮಾರ್ ಅವರು ಆಗ್ರಹವನ್ನು ಮುಂದಿಟ್ಟರು. ವಕ್ಫ್ ಸಚಿವ ಜಮೀರ್ ಅಹಮದ್ ಅವರ ಸಚಿವ ಸ್ಥಾನ, ಶಾಸಕ ಸ್ಥಾನಕ್ಕೂ ರಾಜೀನಾಮೆ ಪಡೆಯಬೇಕು. ರಾಜ್ಯದಲ್ಲಿ ಎಲ್ಲೂ ಅವರು ಪ್ರವಾಸ ಮಾಡಬಾರದು ಎಂದು ಆಗ್ರಹಿಸಿದರು.
ಬೀದರ್, ವಿಜಯಪುರ ಜಿಲ್ಲೆಗಳಲ್ಲಿ ಪ್ರವಾಸಿ ತಾಣಗಳನ್ನೂ ವಕ್ಫ್ ಆಸ್ತಿಯೆಂದು ಘೋಷಿಸುತ್ತಿದ್ದಾರೆ. ಯಾಕೆ ಸರಕಾರ ಕ್ರಮ ಕೈಗೊಳ್ಳುತ್ತಿಲ್ಲ. ನೋಟಿಸ್ ಹಿಂದೆಗೆತ ಸ್ವಾಗತಾರ್ಹ. ಆದರೆ, ನೋಟಿಸ್ ಹಿಂದಕ್ಕೆ ಪಡೆದ ತಕ್ಷಣ ಅವೆಲ್ಲ ಹಿಂದೂಗಳ ಆಸ್ತಿಗಳಾಗುತ್ತವೆಯೇ? ಎಂದು ಪ್ರಶ್ನಿಸಿದರು.
ನಿಜಾಮರು ಆಳ್ವಿಕೆ ಮಾಡಿದಲ್ಲೆಲ್ಲ ವಕ್ಫ್ ಸಮಸ್ಯೆ ಇದೆ. ವಕ್ಫ್ ಸಂಬಂಧ ವಿಧಾನಸಭೆ- ವಿಧಾನಪರಿಷತ್ತಿನ ಜಂಟಿ ಸದನ ಸಮಿತಿ ರಚಿಸಿ ತನಿಖೆ ಮಾಡಿ ಎಂದು ಒತ್ತಾಯಿಸಿದರು. 47 ಸಾವಿರ ಎಕರೆ ಜಮೀನುಗಳಿಗೆ ನೋಟಿಸ್ ಕೊಟ್ಟಿದ್ದಾರೆ ಎಂದ ಅವರು, ಅಧಿಕಾರಿಗಳು ತಪ್ಪು ಮಾಡಿದ್ದಾರೆಂದು ಹೇಳುತ್ತಾರೆ. ಮುಡಾ ಹಗರಣ, ವಾಲ್ಮೀಕಿ ನಿಗಮ ಹಗರಣದಲ್ಲೂ ಇದೇ ಮಾತು ಹೇಳುತ್ತಾರೆ. ವಕ್ಫ್ ವಿಚಾರದಲ್ಲೂ ಇದೇ ಮಾತು. ಸಚಿವರು, ಮುಖ್ಯಮಂತ್ರಿಗಳು ಬಹಳ ಸಾಚಾ. ನಿಮ್ಮ ನಿರ್ದೇಶನ ಇಲ್ಲದೆ ಅಧಿಕಾರಿಗಳು ಹೇಗೆ ತಪ್ಪು ಮಾಡಲು ಸಾಧ್ಯ ಎಂದು ಪ್ರಶ್ನಿಸಿದರು. ತಪ್ಪು ಮಾಡುವ ಅಧಿಕಾರಿಗಳನ್ನು ವಜಾ ಮಾಡಿ ಎಂದು ಒತ್ತಾಯವನ್ನು ಮುಂದಿಟ್ಟರು.
ವಕ್ಫ್ ದೊಡ್ಡದೇ? ಸುಪ್ರೀಂ ಕೋರ್ಟ್ ದೊಡ್ಡದೇ? ವಕ್ಫ್ ದೊಡ್ಡದೇ? ಹೈಕೋರ್ಟ್ ದೊಡ್ಡದೇ? ವಕ್ಫ್ ತೀರ್ಮಾನ ಅಂತಿಮವೇ? ಸುಪ್ರೀಂ ಕೋರ್ಟ್ ತೀರ್ಮಾನ ಅಂತಿಮವೇ? ವಕ್ಫ್ ತೀರ್ಮಾನ ಅಂತಿಮವೇ? ಹೈಕೋರ್ಟ್ ತೀರ್ಮಾನ ಅಂತಿಮವೇ? ಎಂದೂ ಅವರು ಕೇಳಿದರು. ವಕ್ಫ್ ಅಂಧಾ ದರ್ಬಾರ್, ಚೆಲ್ಲಾಟದ ವಿರುದ್ಧ ಮುಖ್ಯಮಂತ್ರಿಗಳು ಮಧ್ಯಪ್ರವೇಶ ಮಾಡಬೇಕೆಂದೂ ಅವರು ತಿಳಿಸಿದರು.
(
ಸಿದ್ದರಾಮಯ್ಯ ರಾಜೀನಾಮೆ ಮುಹೂರ್ತ ನಿಗದಿ: ವಿಜಯೇಂದ್ರ
ಬೆಂಗಳೂರು: ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿಯಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಪ್ರಕಟಿಸಿದರು.
ಮಾಧ್ಯಮ ಪ್ರತಿನಿಧಿಗಳೊಂದಿಗೆ ಇಂದು ಮಾತನಾಡಿದ ಅವರು ಪ್ರಶ್ನೆಗೆ ಉತ್ತರ ಕೊಟ್ಟರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ಚರ್ಚೆ ಮಾಡಿ ಈಗಾಗಲೇ ಸಿದ್ದರಾಮಯ್ಯನವರ ರಾಜೀನಾಮೆಯ ಮುಹೂರ್ತ ನಿಗದಿ ಮಾಡಿದ್ದಾರೆ. ಆ ಮುಹೂರ್ತ ಯಾವುದೆಂದು ಸಿದ್ದರಾಮಯ್ಯನವರೇ ಬಾಯಿ ಬಿಡಬೇಕಿದೆ. ಸಿದ್ದರಾಮಯ್ಯನವರ ರಾಜೀನಾಮೆ ನಿಶ್ಚಿತವಿದೆ ಎಂದು ತಿಳಿಸಿದರು.
ಸಿದ್ದರಾಮಯ್ಯನವರು ಪೂರ್ಣ ಅವಧಿ ಪೂರೈಸುವುದಿಲ್ಲ; ಅತಿ ಶೀಘ್ರವೇ ರಾಜೀನಾಮೆ ಕೊಡುತ್ತಾರೆ ಎಂದ ಅವರು, 5 ವರ್ಷ ಕಾಲ ಸಿಎಂ ಆಗಿರುವುದಾಗಿ ರಾಜ್ಯದ ಜನರಿಗೆ ಸಿದ್ದರಾಮಯ್ಯನವರು ಹೇಳಲಿ; ನೋಡೋಣ ಎಂದು ಸವಾಲು ಹಾಕಿದರು.
ಮುಖ್ಯಮಂತ್ರಿಗಳು ಮತ್ತವರ ಕುಟುಂಬ ಆರೋಪಿ ಸ್ಥಾನದಲ್ಲಿ ನಿಂತಿದೆ. ಭ್ರಷ್ಟಾಚಾರದ ಸಂಬಂಧ ರಾಜ್ಯದ ಜನತೆಗೆ ಅವರು ಉತ್ತರ ಕೊಡಬೇಕಿದೆ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲೋಕಾಯುಕ್ತ ನೋಟಿಸ್ ಕೊಟ್ಟು ತನಿಖೆಗೆ ಬರಲು ತಿಳಿಸಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ತನಿಖೆ ಎದುರಿಸುತ್ತೀರಾ? ಆರೋಪಿಯಾಗಿ ಹೋಗುವಿರಾ? ಎಂಬುದನ್ನು ಜನತೆಗೆ ತಿಳಿಸಿ ಎಂದು ಒತ್ತಾಯಿಸಿದರು.
ಕಾಂಗ್ರೆಸ್ ಮುಖ್ಯಮಂತ್ರಿ ಸೇರಿ ಕಾಂಗ್ರೆಸ್ಸಿನ ಎಲ್ಲರೂ ಭ್ರಷ್ಟಾಚಾರದ ಕುರಿತು ಉದ್ದುದ್ದ ಭಾಷಣ ಬಿಗಿಯುತ್ತಾರೆ. ರಾಜ್ಯದ ಹಣಕಾಸಿನ ದುಸ್ಥಿತಿಯಿಂದ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸರಕಾರವು ಗುತ್ತಿಗೆ ಕಾಮಗಾರಿಗೆ ಬಿಲ್ ಪಾವತಿಸದ ಕಾರಣ ಗುತ್ತಿಗೆದಾರರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಸ್ವತಃ ಮುಖ್ಯಮಂತ್ರಿಗಳು ಆರೋಪಿ ಸ್ಥಾನದಲ್ಲಿದ್ದಾರೆ. ಇದರ ನಡುವೆ ಉಪ ಚುನಾವಣೆಗಳೂ ನಡೆಯುತ್ತಿವೆ ಎಂದರು.
ವಕ್ಫ್ ವಿಷಯದಲ್ಲಿ ಸಿಎಂ ಕುಮ್ಮಕ್ಕು..
ಒಂದು ಕಡೆ ವಾಲ್ಮೀಕಿ ನಿಗಮದ ಹಗರಣ, ಇನ್ನೊಂದೆಡೆ ಮೈಸೂರಿನ ಮುಡಾ ಹಗರಣ, ಮತ್ತೊಂದೆಡೆ ಒಬ್ಬ ಬೇಜವಾಬ್ದಾರಿ ಸಚಿವ ಜಮೀರ್ ಅಹಮದ್ ಅವರನ್ನು ಹಿಡಿದುಕೊಂಡು ವಕ್ಫ್ ಬೋರ್ಡಿಗೆ ರೈತರ ಜಮೀನು ಹೊಡೆಯುತ್ತಿದ್ದಾರೆ. ಮಠ ಮಾನ್ಯಗಳ ಜಮೀನು ಕಸಿಯುವ ಪ್ರಯತ್ನ ನಡೆದಿದೆ. ಜಮೀರ್ ಅಹಮದ್ ಷಡ್ಯಂತ್ರದ ಹಿಂದೆ ಮುಖ್ಯಮಂತ್ರಿಗಳ ಕುಮ್ಮಕ್ಕು ಇದೆ ಎಂದು ವಿಜಯೇಂದ್ರ ಅವರು ಆರೋಪಿಸಿದರು.
ರಾಜ್ಯದಲ್ಲಿ ಇವತ್ತು ಅಶಾಂತಿ ಮೂಡಿಸುವ ಷಡ್ಯಂತ್ರ ನಡೆಯುತ್ತಿದೆ ಎಂಬ ಭಾವನೆ ಎಲ್ಲರಲ್ಲಿದೆ ಎಂದು ಅವರು ವಿಶ್ಲೇಷಿಸಿದರು.
(
ಅಭಿವೃದ್ಧಿಶೂನ್ಯ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷ, ಅಧಿಕಾರ ದಾಹದ ಅಭ್ಯರ್ಥಿಗೆ ತಕ್ಕ ಪಾಠ ಕಲಿಸಿ: ವಿಜಯೇಂದ್ರ
ಬೆಂಗಳೂರು: ಬಿಜೆಪಿ, ಎಂಎಲ್‍ಸಿ ಮಾಡಿದ್ದರೂ ಅಧಿಕಾರ ದಾಹದಿಂದ ಯೋಗೇಶ್ವರ್ ಅವರು ಕಾಂಗ್ರೆಸ್ಸಿಗೆ ಹೋಗಿದ್ದಾರೆ. ಇನ್ನೊಂದೆಡೆ ಅಭಿವೃದ್ಧಿಯನ್ನೇ ಮಾಡದ ಕಾಂಗ್ರೆಸ್ ಪಕ್ಷಕ್ಕೆ ಉಪ ಚುನಾವಣೆ ಬಂದಾಗ ಚನ್ನಪಟ್ಟಣ ಕ್ಷೇತ್ರ ನೆನಪಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಟೀಕಿಸಿದರು.
ಚನ್ನಪಟ್ಟಣ ಕ್ಷೇತ್ರದಲ್ಲಿ ಇಂದು ಕೇಂದ್ರದ ಸಚಿವ ಎಚ್.ಡಿ.ಕುಮಾರಸ್ವಾಮಿ, ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತಿತರ ಮುಖಂಡರ ಜೊತೆ ವಿಜಯೇಂದ್ರ ಅವರು ರೋಡ್ ಷೋ ಮತ್ತು ಪ್ರಚಾರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅಭಿವೃದ್ಧಿಶೂನ್ಯ ಆಡಳಿತ ನೀಡಿದ ಕಾಂಗ್ರೆಸ್ ಪಕ್ಷ ಹಾಗೂ ಅಧಿಕಾರ ದಾಹದ ಅಭ್ಯರ್ಥಿಗೆ ಚನ್ನಪಟ್ಟಣ ಕ್ಷೇತ್ರದ ಮತದಾರರು ಪಾಠ ಕಲಿಸಬೇಕೆಂದು ಮನವಿ ಮಾಡಿದರು.
ಕುಮಾರಸ್ವಾಮಿಯವರು ಮಂಡ್ಯದ ಜನರ ಆಶೀರ್ವಾದದಿಂದ ಸಂಸದರಾಗಿ, ಕೇಂದ್ರ ಸಚಿವರಾದರೋ ಮರುದಿನದಿಂದ ಕಾಂಗ್ರೆಸ್ ಮುಖಂಡರು ಇಲ್ಲಿ ಬಂದು ಅಂಗಡಿ ತೆರೆದಿದ್ದಾರೆ. ಆಡಳಿತಕ್ಕೆ ಬಂದು ಒಂದೂವರೆ ವರ್ಷವಾದರೂ ಇತ್ತ ಬಾರದ ಕಾಂಗ್ರೆಸ್ಸಿಗರು, ಡಿ.ಕೆ.ಶಿವಕುಮಾರ್ ಅವರು ಉಪ ಚುನಾವಣೆ ಮುನ್ಸೂಚನೆ ಸಿಕ್ಕಿದಾಗ ಚನ್ನಪಟ್ಟಣ ಅಭಿವೃದ್ಧಿ ಮಾಡುವುದಾಗಿ ತಿಳಿಸಿದರು ಎಂದು ಆರೋಪಿಸಿದರು.
ಚನ್ನಪಟ್ಟಣ ತಾಲ್ಲೂಕನ್ನು ತಾವು ಒಂದೂಮುಕ್ಕಾಲು ವರ್ಷದಲ್ಲಿ ನೋಡಲಿಲ್ಲ. ಉಪ ಚುನಾವಣೆ ಘೋಷಣೆ ಬಳಿಕ ಅವರಿಗೆ ಅಚಾನಕ್ಕಾಗಿ ಚನ್ನಪಟ್ಟಣದ ನೆನಪಾಗಿದೆ ಎಂದ ಅವರು, ಅನುದಾನ ಇಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳಬೇಕಾದ ಸ್ಥಿತಿ ಬಂದಿದೆ ಎಂದು ಅದೇ ಪಕ್ಷದ ಶಾಸಕ ರಾಜು ಕಾಗೆ ಹೇಳಿದ್ದಾರೆ. ಆರ್.ವಿ.ದೇಶಪಾಂಡೆಯವರೂ ಇದೇ ವಿಷಯವನ್ನು ತಿಳಿಸಿದ್ದಾರೆ ಎಂದು ವಿವರಿಸಿದರು.
ಬಿಜೆಪಿಯ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪನವರು ಹೆಣ್ಮಕ್ಕಳಿಗಾಗಿ ಜಾರಿಗೊಳಿಸಿದ ಭಾಗ್ಯಲಕ್ಷ್ಮಿ ಬಾಂಡನ್ನು ಸಿದ್ದರಾಮಯ್ಯರ ಸರಕಾರ ನಿಲ್ಲಿಸಿದೆ. ಭೀಕರ ಬರ, ನೆರೆ ಇದ್ದರೂ ರೈತರ ಸಮಸ್ಯೆಗೆ ಈ ಸರಕಾರ ಸ್ಪಂದಿಸುತ್ತಿಲ್ಲ. ಹಿಂದೆ ಬಿಜೆಪಿ ಸರಕಾರ ಇದ್ದಾಗ ರೈತರು ಹೊಲಕ್ಕೆ ಪಂಪ್‍ಸೆಟ್ ಹಾಕಲು 25 ಸಾವಿರ ಕಟ್ಟಿದರೆ ಸಾಕಿತ್ತು. ಈಗ ಕಾಂಗ್ರೆಸ್ ಸರಕಾರ ಬಂದ ಬಳಿಕ ರೈತರು ಹೊಲಕ್ಕೆ ಪಂಪ್‍ಸೆಟ್ ಹಾಕಲು 2.5 ಲಕ್ಷದಿಂದ 3 ಲಕ್ಷ ರೂ. ಕಟ್ಟಬೇಕಾಗಿದೆ. ಅಂಥ ಕೆಟ್ಟ ಸ್ಥಿತಿಯನ್ನು ಸಿದ್ದರಾಮಯ್ಯರ ಸರಕಾರ ತಂದೊಡ್ಡಿದೆ ಎಂದು ಆಕ್ಷೇಪಿಸಿದರು.
ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರದ ಮೂಲಕ ಹಣ ದೋಚಿದ ಸರಕಾರ ಇದು. ಮುಡಾ ಹಗರಣ ವಿರುದ್ಧ ಕುಮಾರಸ್ವಾಮಿಯವರು ಮತ್ತು ನಾವು ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆ ಮಾಡಿದ್ದೇವೆ. ಭ್ರಷ್ಟಾಚಾರರಹಿತ ಆಡಳಿತ ನೀಡುವುದಾಗಿ ಹೇಳಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರು ನಾಳೆ ರಾಜ್ಯದ ಮುಖ್ಯಮಂತ್ರಿಯಾಗಿ ಲೋಕಾಯುಕ್ತದ ತನಿಖೆ ಎದುರಿಸುತ್ತಾರಾ? ಆರೋಪಿಯಾಗಿ ಹೋಗುತ್ತಾರಾ? ಎಂಬುದಾಗಿ ರಾಜ್ಯದ ಜನರು ಪ್ರಶ್ನೆ ಮಾಡುತ್ತಿದ್ದಾರೆ ಎಂದು ಗಮನ ಸೆಳೆದರು. ಎನ್‍ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿಯವರನ್ನು ಬೆಂಬಲಿಸಿ ಗೆಲ್ಲಿಸುವಂತೆ ಅವರು ಮನವಿ ಮಾಡಿದರು.
ಛಲವಾದಿ ನಾರಾಯಣಸ್ವಾಮಿ ಅವರು ಮಾತನಾಡಿ, ಕಾಂಗ್ರೆಸ್ಸಿಗೆ ಇಲ್ಲಿ ಅಭ್ಯರ್ಥಿಯೇ ಇರಲಿಲ್ಲ. ತಮ್ಮ ವಿರೋಧಿಗಳ ವಿರೋಧಿಯೇ ಸ್ನೇಹಿತ ಎಂದು ತಿಳಿದುಕೊಂಡು ಅಭ್ಯರ್ಥಿಯನ್ನಾಗಿ ಯೋಗೇಶ್ವರರನ್ನು ಸೆಳೆದಿದ್ದಾರೆ. ಅವರದೇನಿದ್ದರೂ ಎರಡನೇ ಲೈನಿನಲ್ಲಿರುವ ಅವಕಾಶ ಅಷ್ಟೇ ಎಂದು ತಿಳಿಸಿದರು.
ಸೋಲಿನ ಮುನ್ಸೂಚನೆ ಇರುವ ಕಾರಣ ಯೋಗೇಶ್ವರ್ ಅವರು ಮತ್ತೆ ಎಂಎಲ್‍ಸಿ ಮಾಡುವಂತೆ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು. ಬಿಜೆಪಿ ಸರಕಾರ ಬಂದ ಬಳಿಕ ಯೋಗೇಶ್ವರ್ ಜನಹಿತದ ಕಾರ್ಯ ಮಾಡಿದ್ದಾರೆ. ಅದಕ್ಕೆ ಹಣ ಕೊಟ್ಟಿದ್ದು ಬಿಜೆಪಿ ಸರಕಾರ. ಬಿಜೆಪಿ ಸರಕಾರದ ಹಣದಿಂದ ಅಭಿವೃದ್ಧಿ ಆಗಿದೆ. ಯೋಗೇಶ್ವರರ ಮನೆಯ ಹಣದಿಂದ ಆದ ಅಭಿವೃದ್ಧಿ ಇದಲ್ಲ ಎಂದು ವ್ಯಂಗ್ಯವಾಗಿ ತಿಳಿಸಿದರು.
ಇಲ್ಲಿ ಕುಮಾರಸ್ವಾಮಿ ಮತ್ತು ವಿಜಯೇಂದ್ರರವರು ಚುನಾವಣಾ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಇಲ್ಲಿ ಎನ್‍ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಗೆಲುವು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
Post a Comment