ಮಾನ್ಶ @siddaramaiah ನವರೇ,
“ಇದ್ದಿದ್ದು ಇದ್ದಂಗೆ ಹೇಳಿದರೆ ಎದ್ ಬಂದು ಎದೆಗೆ ಒದ್ದರಂತೆ”ಎಂಬಂತೆ ನಾನು ಎತ್ತಿರುವ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಏನೇನೋ ಬಡಪಡಿಸಿದ್ದೀರಿ,
ಪ್ರಧಾನಿ @narendramodi ಅವರ ಕೊಡುಗೆಯ ಕುರಿತು ಪದ ಸಂಸ್ಕೃತಿ ಇಲ್ಲದವರಂತೆ ನೀವು ನೀಡಿದ ಹೇಳಿಕೆಗೆ ಪ್ರತಿಯಾಗಿ ನಾನು ಎತ್ತಿದ್ದು ಈವರೆಗಿನ ನಿಮ್ಮ ಆಡಳಿತದ ವೈಫಲ್ಯಗಳ ಪ್ರಶ್ನೆಗಳನ್ನು, ಈ ಪ್ರಶ್ನೆಗಳನ್ನು ಕೇಳಿದ್ದು ನಾನು ಈ ನಾಡಿನ ರೈತರು,ಮಹಿಳೆಯರು,ಬಡವರು, ಶೋಷಿತರು,ಆದಿವಾಸಿಗಳು,ಹಿಂದುಳಿದವರ ಪರವಾಗಿ, ಇದ್ಯಾವುದಕ್ಕೂ ಉತ್ತರಿಸಲಾಗದ ನೀವು ವಿಷಯಾಂತರ ಮಾಡಿ ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಬಹುವಾಗಿ ತಲೆಕೆಡಿಸಿಕೊಂಡಿರುವ ನಿಮ್ಮ ಬಗ್ಗೆ ಮರುಕ ವೆನಿಸುತ್ತಿದೆ.
“ಶಿಸ್ತಿನ ಚೌಕಟ್ಟು ಬಿಜೆಪಿಯ ತಾಕತ್ತು -ಬಿಜೆಪಿಯ ಒಗ್ಗಟ್ಟು ಭಾರತದ ಗಮ್ಮತ್ತು “ಇದು ಕರ್ನಾಟಕಕ್ಕೂ ಹೊರತಲ್ಲ ಎಂಬುದನ್ನು ನಿಮಗೆ ತಿಳಿಸ ಬಯಸುವೆ.
ನಾನೊಬ್ಬ ಪ್ರಧಾನ ಸೇವಕ ಎಂದ ಕರೆದು ಕೊಂಡ ಮಾನ್ಯ ನರೇಂದ್ರ ಮೋದಿಯವರು ನನಗೆ ಆದರ್ಶ, ಸದ್ಯ ಪಕ್ಷಾಧ್ಯಕ್ಷ ಸ್ಥಾನ ನನಗೆ ವರಿಷ್ಠರು ವಹಿಸಿಕೊಟ್ಟಿರುವ ಮಹತ್ವದ ಜವಾಬ್ದಾರಿಯೇ ಹೊರತು ಅದು ನಿಮ್ಮಂತೆ ಸರ್ವಾಧಿಕಾರ ಪ್ರದರ್ಶಿಸಲು ದೊರಕಿರುವ ಅಧಿಕಾರ ಸ್ಥಾನವಲ್ಲ,
ನಾನೇನಿದ್ದರೂ ಒಬ್ಬ ಸಾಮಾನ್ಯ ಕಾರ್ಯಕರ್ತ
ಎಂಬ ಭಾವನೆ ಹೊಂದಿರುವವನೇ ಹೊರತು
ವ್ಯಕ್ತಿತ್ವಕ್ಕೆ ಕಳಂಕ ಮೆತ್ತಿಕೊಂಡರೂ ಅಧಿಕಾರಕ್ಕೆ ಅಂಟಿಕೂರುವ ಜಯಮಾನದವನಲ್ಲ. 1/6
.........
ಮಾನ್ಯ @BYVijayendra ಅವರೇ, ಪ್ರಧಾನಿ @narendramodi ಅವರ ಬದಲಿಗೆ ತಾವೇ ಬಹಿರಂಗ ಚರ್ಚೆಗೆ ಸಿದ್ಧ ಎಂದು ನೀವು ಹಾಕಿರುವ ಸವಾಲನ್ನು ಗಮನಿಸಿದೆ. ನನ್ನ ಜೊತೆ ಚರ್ಚೆ ನಡೆಸುವ ಮೊದಲು ನಿಮ್ಮದೇ ಪಕ್ಷದ ನಾಯಕರಾಗಿರುವ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಅವರ ಜೊತೆ ಒಂದು ಸುತ್ತು ಚರ್ಚೆ ಮಾಡಿಕೊಂಡು ಬನ್ನಿ.
ನಿಮ್ಮ ಪೂಜ್ಯ ತಂದೆಯವರನ್ನು ಮುಖ್ಯಮಂತ್ರಿ ಮಾಡಲು ನೀವು @BJP4India ಹೈಕಮಾಂಡ್ ಗೆ ಎರಡು ಸಾವಿರ ಕೋಟಿ ರೂಪಾಯಿ ನೀಡಿದ್ದೀರಿ..!! ನಿಮ್ಮನ್ನು ಪಕ್ಷದ ಅಧ್ಯಕ್ಷರನ್ನಾಗಿ ಮಾಡಲು ಇನ್ನೂ ಒಂದಷ್ಟು ಕೋಟಿ ರೂಪಾಯಿ ನೀಡಿದ್ದೀರಿ..!! ಎಂದು ನಿಮ್ಮ ನಾಯಕರೇ ಆರೋಪಿಸಿದ್ದಾರೆ. ಮೊದಲು ಅವರ ಜೊತೆ ಚರ್ಚೆ ಮಾಡಿ ಮುಗಿಸಿ ಬನ್ನಿ. 1/6
#ಪೇಮೆಂಟ್_ಸೀಟ್_ಅಧ್ಯಕ್ಷ
ಮಾನ್ಯ @siddaramaiah ನವರೇ,
ನಿಮ್ಮ ಒಂದೂವರೆ ವರ್ಷದ ಆಡಳಿತದಲ್ಲಿ ನಿಮ್ಮ ಕೊಡುಗೆಗಳು ಏನೇನೂ ಇಲ್ಲ, ಅಭಿವೃದ್ಧಿಯ ಹಾದಿಯಲ್ಲಿ ಬರೀ ಶೂನ್ಯ, ಭ್ರಷ್ಟತೆಯ ಸಾಲು, ಸಾಲು ಹಗರಣಗಳು, ಸಾಮಾಜಿಕ ಶೋಷಣೆಗಳು, ಸ್ತ್ರೀ ಕುಲದ ಮೇಲಿನ ದೌರ್ಜನ್ಯಗಳು ಹತ್ತು ಹಲವು.
•ಇಂದಿಗೂ ಕರ್ನಾಟಕದ ಲಕ್ಷಾಂತರ ಜನ ಗುಡಿಸಲು ವಾಸಿಗಳಾಗಿದ್ದಾರೆ, ಸ್ವಂತ ಸೂರಿಲ್ಲದೇ ವಸತಿ ಹೀನರಾಗಿದ್ದಾರೆ. ಇವರಿಗಾಗಿ ನೀವು ಒಂದೇ ಒಂದು ನಿವೇಶವನ್ನು ವಿತರಿಸಲಾಗಿಲ್ಲ. ಆದರೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ 5 ಸಾವಿರಕ್ಕೂ ಹೆಚ್ಚು ನಿವೇಶನಗಳ ದರೋಡೆ ನಿಮ್ಮ ಬಲಗೈ ಬಂಟ ಸಚಿವ ಭೈರತಿ ಸುರೇಶ್ ರವರ ನೇತೃತ್ವದಲ್ಲಿ ಹಾಗೂ ನಿಮ್ಮ ಮಾರ್ಗದರ್ಶನದಲ್ಲಿ ನಡೆದಿದೆ ಎಂಬುದಕ್ಕೆ ನೀವೊಬ್ಬರೇ ಉಚಿತವಾಗಿ ಪಡೆದ 14 ನಿವೇಶನಗಳು ಸಾಕ್ಷಿ ಹೇಳುತ್ತಿವೆ. ಈ ನಿಟ್ಟಿನಲ್ಲಿ ನ್ಯಾಯಾಲಯಗಳು ನಿಮ್ಮ ವಿರುದ್ಧ ತೀರ್ಪಿತ್ತಿವೆ.
ನೀವು ಪ್ರಾಮಾಣಿಕರೇ ಆಗಿದ್ದರೆ ಈಗಲೂ ಇಡಿ, ಸಿಬಿಐ ತನಿಖೆಗೆ ಏಕೆ ಹೆದರುತ್ತಿದ್ದೀರಿ? ನಿಮ್ಮ ಕೈ ಕೆಳಗಿನ ಅಧಿಕಾರಿಗಳಿರುವ ಲೋಕಾಯುಕ್ತದಿಂದಲೇ ತನಿಖೆ ಆಗುವಂತೆ ನೋಡಿಕೊಳ್ಳುತ್ತಿದ್ದೀರಿ. ನನ್ನ ನಿವೇಶನದ ಬೆಲೆ 62 ಕೋಟಿ ಎಂದು ಘೋಷಿಸಿದ ನೀವು ಬೇಷರತ್ತಾಗಿ ಮುಡಾಗೆ ನಿವೇಶನಗಳನ್ನು ಹಿಂದಿರುಗಿಸಿದ್ದು ಏಕೆ ? ಎಂಬುದನ್ನು ಕರ್ನಾಟಕದ ಜನತೆ ಅರಿಯದಿರುವಷ್ಟು ಮುಗ್ಧರಲ್ಲ.
‘ಕಳ್ಳ ಬೆಕ್ಕು ಕಣ್ಣುಮುಚ್ಚಿಕೊಂಡು ಹಾಲು ಕುಡಿಯುತ್ತಿದ್ದರೆ’ ಅದನ್ನು ನೋಡಿಕೊಂಡು ಸ್ವಾಭಿಮಾನಿ ಕನ್ನಡಿಗರು ಸುಮ್ಮನಾಗಿಬಿಡುತ್ತಾರೆಂದು ನೀವು ಭಾವಿಸಿದ್ದರೆ ಅದು ನಿಮ್ಮ ಮೂರ್ಖತನವಷ್ಟೇ'.
• ಅಹಿಂದ ಹೆಸರೇಳಿಕೊಂಡು ಬಂದ ನೀವು ಮಾತುಮಾತಿಗೂ ಅಹಿಂದ, ಅಹಿಂದ ಎಂದು ಪಠನೆ ಮಾಡುವ ನೀವು ‘ಹಿಂದ’ವರ್ಗಗಳಿಗೆ ನೀಡಿದ ಕಲ್ಯಾಣ ಕಾರ್ಯಕ್ರಮಗಳೇನು? ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ, ವಾಲ್ಮೀಕಿ ಅಭಿವೃದ್ಧಿ ನಿಗಮ, ದೇವರಾಜ ಅರಸು ಅಭಿವೃದ್ಧಿ ನಿಗಮ ಹಾಗೂ ಇತರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿ ನಿಗಮಗಳಿಗೆ ನೀವು ಅಧಿಕಾರಕ್ಕೆ ಬಂದ ನಂತರ ಎಷ್ಟು ಅನುದಾನ ನೀಡಿದ್ದೀರೆನ್ನುವ ದಾಖಲೆಗಳನ್ನು ಬಿಡುಗಡೆ ಮಾಡಿ ?
ಶೋಷಿತ ವರ್ಗಗಳಿಗೆ ಅನುದಾನ ಬಿಡುಗಡೆ ಮಾಡುವ ಮಾತು ಹಾಗಿರಲಿ, ವಿಶ್ವಕವಿ ಎಂದು ಮಾನ್ಯತೆ ಪಡೆದ ಪೂಜ್ಯ ವಾಲ್ಮೀಕಿ ಅವರ ಹೆಸರಿರುವ ನಿಗಮದಲ್ಲಿ ಪರಿಶಿಷ್ಟ ಪಂಗಡದ, ಆದಿವಾಸಿ ಜನರ ಕಲ್ಯಾಣದ ಕಾರ್ಯಗಳಿಗೆ ಮೀಸಲಾಗಿ ಠೇವಣಿ ಇರಿಸಿದ್ದ ಬ್ಯಾಂಕ್ ಖಾತೆಗೆ ನಿಮ್ಮ ಸಚಿವರ ಮೂಲಕ ಕನ್ನ ಹಾಕಿಸಿದವರು ನೀವಲ್ಲ ಎಂಬುದನ್ನು ನೀವು ಸಾಬೀತು ಮಾಡಲು ಸಾಧ್ಯವೇ?
•ಕೆಐಡಿಬಿ ಮೂಲಕ ನಿಮ್ಮ ರಾಷ್ಟ್ರೀಯ ಅಧ್ಯಕ್ಷರ ಕುಟುಂಬ ಹಾಗೂ ಇತರ ಸ್ವಜನರಿಗೆ ಕೆಐಡಿಬಿಯಲ್ಲಿ ಮಂಜೂರಾಗಿರುವ ಸಿ.ಎ ನಿವೇಶನ ಹಗರಣವು ಸ್ವತಃ ನಿಮ್ಮ ರಾಷ್ಟ್ರೀಯ ಅಧ್ಯಕ್ಷರ ಕುಟುಂಬಕ್ಕೆ ಅಕ್ರಮವಾಗಿ ಮಂಜೂರಾತಿ ಮಾಡಿರುವ ಕಾರಣ ಅವರೂ ತಮ್ಮ ನಿವೇಶನ ಹಿಂದಿರುಗಿಸುವ ಘೋಷಣೆ ಮಾಡಿದ್ದಾರೆ. ಅಂದ ಮೇಲೆ ಕೆಐಡಿಬಿಯಿಂದ ಮಂಜೂರಾದ ನಿವೇಶನಗಳೂ ಅಕ್ರಮ ಎಂಬುದು ಸಾಬೀತಾದಂತಾಗಿದೆ.
•ಕರ್ನಾಟಕ ರಾಜ್ಯೋತ್ಸವದ ಈ ಸಂದರ್ಭದಲ್ಲಿ ಪ್ರಧಾನಿಯವರನ್ನು ಉಲ್ಲೇಖಿಸಿ ಕುವೆಂಪುರವರ 'ಜಯ ಭಾರತ ಜನನಿಯ ತನುಜಾತೆ ಜಯ ಹೇ ಕರ್ನಾಟಕ ಮಾತೆʼ ಎಂಬ ನಾಡಗೀತೆಯನ್ನು ನೆನಪಿಸಿದ್ದೀರಿ, ಆದರೆ ಕುವೆಂಪು ಅವರು ಬಣ್ಣಿಸಿದʼ ಸರ್ವಜನಾಂಗದ ಶಾಂತಿಯ ತೋಟ…ಕದಡಿ ವಕ್ಫ್ ಹೆಸರಿನಲ್ಲಿ ಈ ನೆಲದ ಮಣ್ಣಿನ ಮಕ್ಕಳ ಹಾಗೂ ಶರಣ ಪರಂಪರೆಯ ಮಠ,ದೇವಸ್ಥಾನಗಳ ಭೂಮಿಯನ್ನು ಕಬಳಿಸಲು ಮೊಘಲ್ ಆಕ್ರಮಣಕಾರರ ರೀತಿಯಲ್ಲಿ ಭೂದಾಖಲೆಗಳಿಗೆ ಕನ್ನ ಹಾಕಿ ವಕ್ಫ್ ಹೆಸರಿನ ಕಪ್ಪು ಚುಕ್ಕೆಗಳನ್ನು ಅಚ್ಚೊತ್ತಿಸುತ್ತಿದ್ದೀರಿ, ಕುವೆಂಪು ಅವರ ಶಾಂತಿಯ ತೋಟ ಕರುನಾಡಿನಲ್ಲಿ ಅಶಾಂತಿ ಹಾಗೂ ಅರಾಜಕತೆಯ ಬೀಜಗಳನ್ನು ಬಿತ್ತಿ, ಅರಾಜಕತೆ ಸೃಷ್ಟಿಸಲು ಹೊರಟಿದ್ದೀರಿ. ಆ ಮೂಲಕ ನಿಮ್ಮ ಭ್ರಷ್ಟ ಮುಖವಾಡ ಮುಚ್ಚಿಕೊಳ್ಳುವ ಷಡ್ಯಂತ್ರ ರೂಪಿಸಿದ್ದೀರಿ. ಇದು ನೀವು ಕರ್ನಾಟಕಕ್ಕೆ ಕೊಡುತ್ತಿರುವ ಕೊಡುಗೆಯೇ?
•ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್ ಹೆಸರಿನಲ್ಲಿ ವ್ಯವಸ್ಥಿತ ಅಪಪ್ರಚಾರ ನಡೆಸಿದಿರಿ. ಆದರೆ 80% ಕಮಿಷನ್ ವಸೂಲಾತಿಯ ಕುಖ್ಯಾತಿಯ ಮಾಲೆ ನಿಮಗೆ ತೊಡಿಸಿದವರು 80% ಕಮಿಷನ್ ನೀಡಿದ ಗುತ್ತಿಗೆದಾರರೇ ಅಲ್ಲವೇ? ಪ್ರಧಾನಿಗಳನ್ನು ಟೀಕಿಸುವ ಭರದಲ್ಲಿ ಈ ಅಂಶವನ್ನು ನೀವು ಮರೆತಿರೇನೋ?
•ನಿಮ್ಮ ಕಾಂಗ್ರೆಸ್ ಗೆ ರಾಷ್ಟ್ರ ಮಟ್ಟದ ಅಸ್ತಿತ್ವವನ್ನು ಗಟ್ಟಿಗೊಳಿಸಲು ‘ಇಂಡಿ ಒಕ್ಕೂಟದ’ ಡಿ.ಎಂ.ಕೆ ತೃಪ್ತಿಪಡಿಸಲು ಕಾವೇರಿ ನೀರನ್ನು ತಮಿಳುನಾಡಿಗೆ ಹರಿಯಬಿಟ್ಟು ರೈತರ ಬೆಳೆಯನ್ನು ಒಣಗಿಸಿ ಬರಡು ಮಾಡಿದ್ದು ನೀವೇ ಅಲ್ಲವೇ? ಈ ನಿಟ್ಟಿನ ರೈತ ಹೋರಾಟಗಳನ್ನು ಹತ್ತಿಕ್ಕಲು ಅಮಾಯಕ ರೈತರ ಮೇಲೆ ಸುಳ್ಳು ಕೇಸುಗಳನ್ನು ದಾಖಲಿಸಿ ಜೈಲಿಗೆ ದಬ್ಬಿದ್ದು ನೀವೇ ಅಲ್ಲವೇ?
•ಬೆಳಗಾವಿಯಲ್ಲಿ ಹಾಡು ಹಗಲಲ್ಲೇ ನೀವಿದ್ದ ಕೂಗಳತೆಯ ದೂರದಲ್ಲೇ ಅಮಾಯಕ ಹೆಣ್ಣುಮಗಳನ್ನು ವಿವಸ್ತ್ರಗೊಳಿಸಿ ದೌರ್ಜನ್ಯ ನಡೆಸಿದಾಗ ನಿಮ್ಮ ಸರ್ಕಾರ ಕನಿಷ್ಟ ಸ್ಪಂದನೆಯನ್ನೂ ಮಾಡದೇ ದುಶ್ಯಾಸನ ಸರ್ಕಾರದಂತೆ ವರ್ತಿಸಿದ್ದನ್ನು ಕರ್ನಾಟಕದ ಹೆಣ್ಣುಮಕ್ಕಳು ಹೇಗೆ ಮರೆಯಲು ಸಾಧ್ಯ? ಹುಬ್ಬಳ್ಳಿಯಲ್ಲಿ ನಿಮ್ಮ ಪಕ್ಷದ ಮುಖಂಡರ ಪುತ್ರಿಯನ್ನು ಹಾಡು ಹಗಲಲ್ಲೇ ಕಾಲೇಜು ಆವರಣದಲ್ಲಿ ಇರಿದು ಕೊಂದ ಘಟನೆ ಜನತೆ ಇನ್ನೂ ಮರೆತಿಲ್ಲ. ನಾಡಿನಲ್ಲಿ ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ಶೋಷಣೆ ಹಾಗೂ ಅತ್ಯಾಚಾರ ಪ್ರಕರಣಗಳು ಈ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ನೆಲಕಚ್ಚಿರುವುದನ್ನು ಪ್ರತಿಬಿಂಬಿಸುತ್ತಿವೆ. ಶಕ್ತಿ ಯೋಜನೆ ರೂಪಿಸಿರುವುದಾಗಿ ಬೊಬ್ಬೆಹೊಡೆಯುವ ನೀವು ಮಹಿಳೆಯರ ಆತ್ಮವಿಶ್ವಾಸದ ಶಕ್ತಿಯನ್ನೇ ಹುದುಗಿಸಿಬಿಟ್ಟಿದ್ದೀರಿ. ಈಗಾಗಲೇ ಅಸ್ತವ್ಯಸ್ತಗೊಂಡಿರುವ ಭಾಗ್ಯ ಯೋಜನೆಗಳು ಹಳ್ಳಹಿಡಿಯುವುದು ಖಚಿತ ಎಂದು ನಿಮ್ಮ ಉಪಮುಖ್ಯಮಂತ್ರಿಗಳೇ ಹೇಳಿರುವಾಗ ಈ ನಿಟ್ಟಿನಲ್ಲಿ ನಿಮ್ಮ ಪಕ್ಷದಲ್ಲೇ ಗೊಂದಲಗಳ ಗೂಡು ಸೃಷ್ಟಿಯಾಗಿರುವದನ್ನು ಕಂಡು ನಿಮ್ಮ ಪಕ್ಷದ ವರಿಷ್ಠ ಖರ್ಗೆಯವರು ಸಿಡಿಮಿಡಿಗೊಂಡಿರುವುದನ್ನು ರಾಜ್ಯದ ಜನತೆ ಗಮನಿತ್ತಿದ್ದಾರೆ.1/2
.......
ಸರ್ ಆದರೆ ಬಿಜೆಪಿ ಕಾಲದಲ್ಲಿ ಏನು ಸುವರ್ಣ ಯುಗ ಇತ್ತೆ?? ಎಷ್ಟೋ ಬಾರಿ ನಮಗೆ ಅನಿಸಿದೆ ಅಯ್ಯೋ ಬೊಮ್ಮಾಯಿ ಬದಲು ಯಡಿಯೂರಪ್ಪ ಇದ್ದಿದ್ದರೆನೆ ಚೆನ್ನಾಗಿಯಿರುತ್ತಿತ್ತು ಎಂದು. ಕೇಂದ್ರಕ್ಕೆ ನೇರ ನೇರ ಚಾಟಿ ಬೀಸುವ ತಾಕತ್ತು ಅವರಿಗಿತ್ತು. ಈಗ ಕರ್ನಾಟಕ ಬಿಜೆಪಿ ಕೇಂದ್ರದ ಕೈಗೊಂಬೆಯಾಗಿದೆ. V miss both BSY in action & Ananth Kumar as ಎಂಪಿ.....
ಒಳ್ಳೇಯವ್ರ ಹೆಸರೇ ಹೇಳಿದ್ರೀ ತಮ್ಮ ಕೊನೆಯ ಬಜೆಟ್ನಲ್ಲಿ #ಶಿವಮೊಗ್ಗ ಜಿಲ್ಲೆಗೆ ಮಾತ್ರ ಬರಪೂರ ಅನುದಾನ ಮೀಸಲಿಡಿಸಿ ಮಿಮಾನ ನಿಲ್ದಾಣನೂ ಕಟ್ಟಿಸಿದರು ಆದರೆ ಇದರ ಬಳಕೆ ಅಷ್ಟಕಷ್ಟೇ. ವಾರಕ್ಕೊಂದು ವಿಮಾನ. ಬೆಂಗಳೂರಿನಿಂದ ೩೦೦೦-೪೦೦೦ ರೂ ಟಿಕೆಟ್ ದರ. ನೆರೆಯ ಕೋಲಾರ ಜಿಲ್ಲೆಗೆ ಸತತವಾಗಿ ೨೦೨೧-೨೨ & ೨೦೨೨-೨೩ ಬಜೆಟ್ ನಲ್ಲಿ ಸಂಪೂರ್ಣ ಶೂನ್ಯ
Post a Comment