ತ್ತರ ಪ್ರದೇಶ : ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಸಾವಿನ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಪೋಸ್ಟ್ ಮಾಡಿದ ಆರೋಪದ ಮೇಲೆ ಗಾಜಿಯಾಬಾದ್‌ನ ಇಂದಿರಾಪುರಂ ಪ್ರದೇಶದಲ್ಲಿ ಪೊಲೀಸರು ವ್ಯಕ್ತಿಯನ್ನು ಬಂಧಿಸಿದ್ದಾರೆ.


ಆರೋಪಿಯನ್ನು ಉತ್ತರ ಪ್ರದೇಶದ ಮೊರಾದಾಬಾದ್ ಜಿಲ್ಲೆಯ ನಿವಾಸಿ ರೋಹಿತ್ (34) ಎಂದು ಗುರುತಿಸಲಾಗಿದ್ದು, ಬಿಜೆಪಿ ಪದಾಧಿಕಾರಿ ಅನಿಲ್ ಶರ್ಮಾ ಅವರು ನೀಡಿದ ದೂರಿನ ಮೇರೆಗೆ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಡಿ.24 ರಂದು ರೋಹಿತ್ ತಮ್ಮ ಫೇಸ್‌ಬುಕ್ ನಲ್ಲಿ ಅಮಿತ್ ಶಾ ನಿಧನರಾಗಿದ್ದಾರೆ ಎಂದು ಬರೆದು ಪೋಸ್ಟ್ ಮಾಡಿಕೊಂಡಿದ್ದ, ಇದನ್ನು ಗಮನಿಸಿದ ಅನಿಲ್ ಶರ್ಮಾ ಪೊಲೀಸರಿಗೆ ದೂರು ನೀಡಿದ್ದರು, ಅದರಂತೆ ಇದೀಗ ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ರೋಹಿತ್ ತನ್ನ ಫೇಸ್‌ಬುಕ್ ಪೇಜ್‌ನ ಹಿಂಬಾಲಕರನ್ನು ಹೆಚ್ಚಿಸುವ ಸಲುವಾಗಿ ಸುಳ್ಳು ಸುದ್ದಿಯನ್ನು ಪೋಸ್ಟ್ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದು, ಆರೋಪಿಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.

Post a Comment

Previous Post Next Post