ಸರ್ಕಾರ ಇದುವರೆಗೆ 13.68 ಲಕ್ಷ ಕ್ವಿಂಟಲ್ ಸೋಯಾಬೀನ್ ಅನ್ನು ಎಂಎಸ್‌ಪಿ ದರದಲ್ಲಿ ಖರೀದಿಸಿದೆ ಎಂದು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಮಾತನಾಡಿ, ಸರ್ಕಾರ ಇದುವರೆಗೆ 13 ಲಕ್ಷ 68 ಸಾವಿರ ಕ್ವಿಂಟಲ್ ಸೋಯಾಬೀನ್ ಅನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಿದೆ. ಇಂದು ನವದೆಹಲಿಯಲ್ಲಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಸಚಿವರು, ಸೋಯಾಬೀನ್ ಖರೀದಿಯ ಗಡುವನ್ನು ಮಹಾರಾಷ್ಟ್ರದಲ್ಲಿ ಈ ತಿಂಗಳ 31 ರವರೆಗೆ ವಿಸ್ತರಿಸಲಾಗಿದ್ದು, ರಾಜಸ್ಥಾನಕ್ಕೆ ದಿನಾಂಕವನ್ನು ಫೆಬ್ರವರಿ 4 ರವರೆಗೆ ವಿಸ್ತರಿಸಲಾಗಿದೆ. ರಾಜ್ಯ ಸರ್ಕಾರಗಳ ಬೇಡಿಕೆಯ ಮೇರೆಗೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಅವರು ಹೇಳಿದರು.
ರೈತರ ಕಲ್ಯಾಣಕ್ಕಾಗಿ ಸರ್ಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ ಎಂದು ಸಚಿವರು ಪ್ರತಿಪಾದಿಸಿದರು. ರೈತರು ಕೈಗೆಟುಕುವ ದರದಲ್ಲಿ ಗುಣಮಟ್ಟದ ಕೀಟನಾಶಕಗಳನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಅವರು ರಾಜ್ಯಗಳನ್ನು ಒತ್ತಾಯಿಸಿದರು.
Post a Comment