ಛತ್ತೀಸ್‌ಗಢ: ಸುಕ್ಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು 3 ಮಾವೋವಾದಿಗಳ ಹತ್ಯೆ: ಗುಂಡಿನ ಚಕಮಕಿ
ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಇಂದು ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ಎನ್‌ಕೌಂಟರ್ ನಡೆದಿದೆ. ಸುಕ್ಮಾ ಮತ್ತು ಬಿಜಾಪುರ ಜಿಲ್ಲೆಗಳ ಗಡಿಯಲ್ಲಿರುವ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲೀಯ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಗುಂಡಿನ ಚಕಮಕಿ ಪ್ರಾರಂಭವಾಯಿತು ಎಂದು ನಮ್ಮ ವರದಿಗಾರರು ವರದಿ ಮಾಡಿದ್ದಾರೆ. ಮೂಲಗಳ ಪ್ರಕಾರ ಎನ್‌ಕೌಂಟರ್‌ನಲ್ಲಿ ಮೂವರು ಮಾವೋವಾದಿಗಳು ಹತರಾಗಿದ್ದಾರೆ. ಡಿಸ್ಟ್ರಿಕ್ಟ್ ರಿಸರ್ವ್ ಗಾರ್ಡ್, ಸ್ಪೆಷಲ್ ಟಾಸ್ಕ್ ಫೋರ್ಸ್ ಮತ್ತು ಕೋಬ್ರಾ (ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್- CRPF ನ ಗಣ್ಯ ಘಟಕ) ಗೆ ಸೇರಿದ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಕೊನೆಯದಾಗಿ ವರದಿಗಳು ಬಂದಾಗ ಗುಂಡಿನ ಚಕಮಕಿ ಇನ್ನೂ ನಡೆಯುತ್ತಿತ್ತು.
Post a Comment