ಎಫ್‌ಐಆರ್‌ನಲ್ಲಿ ಟಿಪ್ಪುನಗರ ಮಸೀದಿ ಸಮಿತಿ ಅಧ್ಯಕ್ಷ ಮೆಹಬೂಬ್ ಖಾನ್, ಶಬ್ಬೀರ್, ಮಸೂದ್, ಸಿದ್ದಿಕ್ ಮತ್ತು ಇತರೆ 40 ಮಂದಿಯನ್ನು ಆರೋಪಿಗಳೆಂದು ಹೆಸರಿಸಲಾಗಿದೆ.ಜನವರಿ 14 ರಂದು ಐದು ಯುವಕರ ಗುಂಪೊಂದು 21 ವರ್ಷದ ಆಟೋರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಿ, ವಾಹನವನ್ನು ಹಾನಿಗೊಳಿಸಿತ್ತು. ಈ ಸಂಬಂಧ ನಯಮತ್ ಪಾಷಾ ಎಂಬುವವರು ದೂರು ದಾಖಲಿಸಿದ್ದರು. ಈ ಸಂಬಂಧ ಚಾಮರಾಜಪೇಟೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದ ಕುರಿತು ಸಬ್ ಇನ್‌ಸ್ಪೆಕ್ಟರ್ ತನಿಖೆ ನಡೆಸಿ, ಪಾಷಾ ಅವರನ್ನು ಟಿಪ್ಪುನಗರದ ಮಸೀದಿ ಬಳಿ ಕರೆದೊಯ್ದು ಪರಿಶೀಲನೆ ನಡೆಸಿದ್ದರು.
ಈ ವಿಚಾರ ತಿಳಿದ ಆರೋಪಿಗಳಾದ ಚಂದನ್, ಸಲೀಂ, ಮಸೂದ್, ಶಬ್ಬೀರ್ ಮಹಿಳೆಯರು ಸೇರಿದಂತೆ 40 ಮಂದಿಯನ್ನು ಠಾಣೆ ಮುಂದೆ ಜಮಾಯಿಸುವಂತೆ ಮಾಡಿ, ಪ್ರತಿಭಟೆ ನಡೆಸಿದರು.
ನಯಾಮತ್ ಅವರನ್ನು ಏಕೆ ಬಂಧಿಸಿಲ್ಲ? ಏಕೆ ಬಿಟ್ಟು ಕಳುಹಿಸಿದ್ದೀರಾ' ಎಂದು ಗಲಾಟೆ ಮಾಡಿದರು. ಪೊಲೀಸರಿಗೆ ಏರುದನಿಯಲ್ಲಿ ಪ್ರಶ್ನಿಸಿದರು. ಎಷ್ಟೇ ಸಮಾಧಾನ ಮಾಡಿದರೂ ಕೇಳದೇ, ಪೊಲೀಸ್ ಸಿಬ್ಬಂದಿಗಳನ್ನು ತಳ್ಳಾಡಿ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದಾರೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
Post a Comment