ಮಹಾಕುಂಭದಲ್ಲಿ ಬೆಂಕಿ ತಕ್ಷಣ ನಿಯಂತ್ರಣಕ್ಕೆ ಬಂದಿದೆ; ಘಟನೆಯ ಕುರಿತು ಪ್ರಧಾನಿ ಮೋದಿಗೆ ಸಿಎಂ ಮಾಹಿತಿ ನೀಡಿದ್ದಾರೆ

ಮಹಾಕುಂಭದಲ್ಲಿ ಬೆಂಕಿ ತಕ್ಷಣ ನಿಯಂತ್ರಣಕ್ಕೆ ಬಂದಿದೆ; ಘಟನೆಯ ಕುರಿತು ಪ್ರಧಾನಿ ಮೋದಿಗೆ ಸಿಎಂ ಮಾಹಿತಿ ನೀಡಿದ್ದಾರೆ

 
ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದ ಸೆಕ್ಟರ್ 19 ರಲ್ಲಿ ಇಂದು ಸಂಜೆ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣ ಅದನ್ನು ನಿಯಂತ್ರಣಕ್ಕೆ ತರಲಾಗಿದೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ಬಗ್ಗೆ ಮಾಹಿತಿ ಪಡೆದ ಅಗ್ನಿಶಾಮಕ ದಳ, ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡವು ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದೆ. 
ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಯೋಗಿ ಆದಿತ್ಯನಾಥ್ ಅವರಿಗೆ ಘಟನೆಯ ಎಲ್ಲಾ ಸಂಗತಿಗಳನ್ನು ತಿಳಿಸಿದರು.
ಮುಖ್ಯಮಂತ್ರಿಗಳು ಸ್ಥಳ ಪರಿಶೀಲನೆಯನ್ನೂ ನಡೆಸಿದ್ದು, ಪರಿಹಾರ ಕಾರ್ಯಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

Post a Comment

Previous Post Next Post